Author: main-admin

ಪುತ್ತೂರು: ಕಳ್ಳತನ ಪ್ರಕರಣದಲ್ಲಿ ಆರೋಪಿಯಾಗಿದ್ದು ನ್ಯಾಯಾಲಯಕ್ಕೆ ಹಾಜರಾಗದೇ, ವಾರೆಂಟ್ ಜಾರಿಯಾಗಿದ್ದ ಆರೋಪಿಯೋರ್ವನನ್ನು ಬೆಳ್ಳಾರೆ ಠಾಣಾ ಪೊಲೀಸರು ಕೇರಳದಲ್ಲಿ ಬಂಧಿಸಿದ್ದಾರೆ. ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಉದ್ದೇಶ ಎಂದು ಗುರುತಿಸಲಾಗಿದೆ. ಆರೋಪಿಯನ್ನು ಆ.17ರಂದು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

Read More

ಮಂಗಳೂರು: ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮೂರು ಪ್ರತ್ಯೇಕ ಪ್ರಕರಣ ಗಳಲ್ಲಿ ಮಾದಕ ವಸ್ತುವನ್ನು ಸೇವನೆ ಆರೋಪದಲ್ಲಿ ಐದು ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬೊಂಡಂತಿಲ ಗ್ರಾಮದ ಬಿತ್ತುಪಾದೆ ಬಳಿ ಸಾರ್ವಜನಿಕ ಸ್ಥಳದಲ್ಲಿ ಮಾದಕ ವಸ್ತುವನ್ನು ಸೇವನೆ ಆರೋಪದಲ್ಲಿ ಅಡ್ಯಾರ್ ಪದವಿನ ರಕ್ಷಿತ್ (32 ) ಮತ್ತು ಮುಹಮ್ಮದ್ ಸಫ್ವಾನ್ (21 )ಎಂಬವರನ್ನು ಪೊಲೀಸರು ಬಂಧಿಸಿದ್ದಾರೆ. ನೀರುಮಾರ್ಗ ಗ್ರಾಮದ ಮಾಣೂರಿನ ಕೊಳ್ಚಾರ್ ರೋಡ್ ಬಳಿ ಸಾರ್ವಜನಿಕ ಸ್ಥಳದಲ್ಲಿ ಮಾದಕ ವಸ್ತುವನ್ನು ಸೇವನೆ ಮಾಡಿದ ಆರೋಪದಲ್ಲಿ ಅಡ್ಯಾರ್‌ನ ಹಿತೇಶ್ (23 ) ಮತ್ತು ಕವೀಶ್ ( 29) ಇನ್ನೊಂದು ಪ್ರಕರಣದಲ್ಲಿ ನೀರುಮಾರ್ಗ ಜಂಕ್ಷನ್ ಬಳಿ ಅಡ್ಯಾರ್ ಪದವಿನ ಮುಹಮ್ಮದ್ ಇರ್ಷಾದ್ (23) ಎಂಬವರನ್ನು ಪೊಲೀಸರು ಬಂಧಿಸಿದ್ದಾರೆ. ಪೊಲೀಸರು ಆ.15ರಂದು ನಡೆಸಿದ ಕಾರ್ಯಾಚರಣೆಯಲ್ಲಿ ಪಂಪ್‌ವೆಲ್ ಫ್ಲೈ ಓವರ್ ಬ್ರಿಡ್ಜ್ ಕೆಳಗೆ ನಿಷೇದಿತ ಮಾದಕ ವಸ್ತುಗಳನ್ನು ಸೇವನೆ ಮಾಡಿ ಸಾರ್ವಜನಿಕರಿಗೆ ತೊಂದರೆ ನೀಡುತ್ತಿದ್ದ ಆರೋಪದಲ್ಲಿ ಹೃತಿಕ್( 21) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಯ ವಿರುದ್ದ ಪೊಲೀಸರು…

Read More

ಮಂಗಳೂರು, ಆಗಸ್ಟ್ 8, 2025: ಶೈಕ್ಷಣಿಕ ಸಹಯೋಗ ಮತ್ತು ಅಂತರಶಿಸ್ತೀಯ ಸಂಶೋಧನೆಯನ್ನು ಮುನ್ನಡೆಸುವ ದಿಶೆಯಲ್ಲಿ ಮಹತ್ವದ ಹೆಜ್ಜೆಯನ್ನಿಟ್ಟುಕೊಂಡು, ಸೈಂಟ್ ಅಲೋಶಿಯಸ್ ಘೋಷಿತ ವಿಶ್ವವಿದ್ಯಾಲಯ, ಮಂಗಳೂರು ಮತ್ತು ಫಾದರ್ ಮುಲ್ಲರ್ ವೈದ್ಯಕೀಯ ಕಾಲೇಜು, ಮಂಗಳೂರು ಇವರು ಆಗಸ್ಟ್ 8, 2025 ರಂದು ಒಪ್ಪಂದಕ್ಕೆ (MoU) ಅಧಿಕೃತವಾಗಿ ಸಹಿ ಹಾಕಿವೆ. ಈ ಒಪ್ಪಂದಕ್ಕೆ ಫಾದರ್ ಮುಲ್ಲರ್ ಸಂಸ್ಥೆಗಳ ನಿರ್ದೇಶಕ ರೆ। ಫಾ। ಫಾವೊಸ್ತಿನ್ ಲುಕಾಸ್ ಲೋಬೊ ಮತ್ತು ಸೈಂಟ್ ಅಲೋಶಿಯಸ್ ಘೋಷಿತ ವಿಶ್ವವಿದ್ಯಾಲಯದ ಎಐಎಮ್ಐಟಿ ಕೇಂದ್ರದ ನಿರ್ದೇಶಕ ಡಾ. (ಫಾ।) ಕಿರಣ್ ಕೋತಾ ಎಸ್.ಜೆ. ಅವರು ಸಹಿ ಹಾಕಿದ್ದಾರೆ. ಹೊಸತನವನ್ನು ಉತ್ತೇಜಿಸುವುದು, ಸಹಯೋಗಿ ಸಂಶೋಧನೆಯನ್ನು ಉತ್ತೇಜಿಸುವುದು ಮತ್ತು ವಿವಿಧ ಶಿಸ್ತುಗಳಲ್ಲಿ ಶೈಕ್ಷಣಿಕ ತೊಡಗಿಸಿಕೊಳ್ಳುವಿಕೆಯನ್ನು ಹೆಚ್ಚಿಸುವುದು ಎಂಬ ಎರಡೂ ಸಂಸ್ಥೆಗಳ ಸಾಮಾನ್ಯ ದೃಷ್ಟಿಕೋನವನ್ನು ಈ ಪಾಲುದಾರಿಕೆ ಪ್ರತಿಬಿಂಬಿಸುತ್ತದೆ. ಈ ಒಪ್ಪಂದದ ಸಂಘಟನೆಯನ್ನು ಫಾದರ್ ಮುಲ್ಲರ್ ವೈದ್ಯಕೀಯ ಕಾಲೇಜಿನ ಸಂಶೋಧನಾ ಮುಖ್ಯಸ್ಥ ಡಾ. ರಮೇಶ್ ಭಟ್ ಮತ್ತು ಸೈಂಟ್ ಅಲೋಶಿಯಸ್ ಘೋಷಿತ ವಿಶ್ವವಿದ್ಯಾಲಯದ ಇಂಜಿನಿಯರಿಂಗ್ ಶಾಲೆಯ ಡೀನ್…

Read More

ಮುಂಬೈ: ಇಲ್ಲಿನ 71 ವರ್ಷದ ಮಹಿಳೆಯೊಬ್ಬರು ಆನ್‌ಲೈನ್‌ನಲ್ಲಿ ಒಂದು ಲೀಟರ್ ಹಾಲನ್ನು ಆರ್ಡರ್ ಮಾಡಲು ಪ್ರಯತ್ನಿಸುವಾಗ ತಮ್ಮ ಬ್ಯಾಂಕ್ ಖಾತೆಗಳಿಂದ 18.5 ಲಕ್ಷ ರೂ.ಗಳನ್ನು ಕಳೆದುಕೊಂಡಿದ್ದಾರೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ. ವಡಾಲಾ ನಿವಾಸಿಯಾಗಿರುವ ಮಹಿಳೆ ಈ ತಿಂಗಳ ಆರಂಭದಲ್ಲಿ ಆನ್‌ಲೈನ್ ವಿತರಣಾ ಅಪ್ಲಿಕೇಶನ್‌ನಿಂದ ಹಾಲನ್ನು ಆರ್ಡರ್ ಮಾಡಲು ಪ್ರಯತ್ನಿಸಿದಾಗ ಎರಡು ದಿನಗಳಲ್ಲಿ ಅವರ ಬ್ಯಾಂಕ್‌ ಖಾತೆಯಲ್ಲಿದ್ದ ಹಣವನ್ನು ದೋಚಿ ವಂಚಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಆಗಸ್ಟ್ 4 ರಂದು, ಹಾಲು ಕಂಪನಿಯ ಕಾರ್ಯನಿರ್ವಾಹಕ ದೀಪಕ್ ಎಂದು ಗುರುತಿಸಿಕೊಂಡ ವ್ಯಕ್ತಿಯಿಂದ ಮಹಿಳೆಗೆ ಕರೆ ಬಂದಿದ್ದು, ಹಾಲನ್ನು ಆರ್ಡರ್ ಮಾಡಲು ವಿವರಗಳನ್ನು ನೀಡುವಂತೆ ಅವರ ಮೊಬೈಲ್‌ಗೆ ಲಿಂಕ್ ಕಳುಹಿಸಿದ್ದಾರೆ. ಕರೆಯನ್ನು ಕಡಿತಗೊಳಿಸದೆ ಲಿಂಕ್ ಅನ್ನು ಕ್ಲಿಕ್ ಮಾಡುವಂತೆ ಮತ್ತು ಮುಂದಿನ ಸೂಚನೆಗಳನ್ನು ಅನುಸರಿಸಲು ಮಹಿಳೆಗೆ ಸೂಚಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ. ಕರೆ ಒಂದು ಗಂಟೆಗೂ ಹೆಚ್ಚು ಕಾಲ ಮುಂದುವರಿದಿದ್ದರಿಂದ, ಬೇಸರಗೊಂಡ ಮಹಿಳೆ ಫೋನ್ ಅನ್ನು ಸ್ಥಗಿತಗೊಳಿಸಿದ್ದಾರೆ. ಮರುದಿನ, ಅದೇ ಆರೋಪಿಯಿಂದ ಮಹಿಳೆಗೆ ಫೋನ್…

Read More

ಮೂಡುಬಿದಿರೆ: ಖಾಸಗಿ ಬಸ್ಸಿನಲ್ಲಿ ಯುವತಿಯೊಂದಿಗೆ ಅಸಭ್ಯವಾಗಿ ವರ್ತಿಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ಆರೋಪಿಯನ್ನು ಕುಕ್ಕಡೇಲು, ಕರಿಯನಂಗಡಿ, ಬೆಳವಾಯಿ ಗ್ರಾಮ ಮತ್ತು ಅಂಚೆ ಮೂಡಬಿದರೆ ರೆಹ್ಮಾನ( 60) ಎಂದು ಗುರುತಿಸಲಾಗಿದೆ. ಖಾಸಗಿ ಬಸ್ಸಿನಲ್ಲಿ ಪ್ರಯಾಣಿಸುತ್ತಿರುವ ಓರ್ವ ಯುವತಿಯೊಂದಿಗೆ ಅಸಭ್ಯವಾಗಿ ವರ್ತಿಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿರುತ್ತದೆ. ವಿಡಿಯೋದಲ್ಲಿ ಯುವತಿಯ ಮುಖ ಚಹರೆ ಸರಿಯಾಗಿ ಕಂಡು ಬರದ ಕಾರಣ ಗುರುತಿಸಲು ಅಸಾಧ್ಯವಾಗಿರುತ್ತದೆ. ಈ ಬಗ್ಗೆ ಆರೋಪಿಯನ್ನು ಠಾಣೆಗೆ ಕರೆಯಿಸಿ ವಿಚಾರಿಸಲಾಗಿದ್ದು ಆತನಿಗೂ ಸಹ ಸಂತ್ರಸ್ತ ಯುವತಿಯ ಬಗ್ಗೆ ಮಾಹಿತಿ ಇರುವುದಿಲ್ಲ. ಆದುದರಿಂದ ಸಂತ್ರಸ್ತ ಯುವತಿ ಅಥವಾ ಘಟನೆಯ ಕುರಿತು ವಿಡಿಯೋ ಚಿತ್ರೀಕರಣ ಮಾಡಿರುವ ವ್ಯಕ್ತಿಗಳು ನೇರವಾಗಿ ಪೊಲೀಸ್ ಠಾಣೆಗೆ ಅಗಮಿಸಿ ದೂರು ನೀಡಬಹುದಾಗಿದೆ. ದೂರನ್ನು ನೀಡಬಹುದಾಗಿದೆ. ಈ ಬಗ್ಗೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಮೂಡಬಿದಿರೆ ಪೊಲೀಸ್ ನೀರಿಕ್ಷಕ ಸಂದೇಶ್ ಪಿ.ಜಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಮಂಗಳೂರು : ನಗರದಲ್ಲಿ  ವ್ಯಕ್ತಿಯೊಬ್ಬರ ಬಳಿ ಕಸ್ಟಮ್ ಅಧಿಕಾರಿಗಳು ಎಂದು‌ ಹೇಳಿ ಅವರ ಹತ್ತಿರ ಇದ್ದ ಚಿನ್ನವನ್ನು ದರೋಡೆ ಮಾಡಿದ ಪ್ರಕರಣ ಸಂಭವಿಸಿದೆ. ಚಿನ್ನ ಕಳೆದುಕೊಂಡ ವ್ಯಕ್ತಿ ಶ್ರೀ ಹರ ಎಂದು ತಿಳಿದು ಬಂದಿದೆ. ದರೋಡೆಕೋರರು ಇನ್ನೋವಾ ಕಾರಿನಲ್ಲಿ ಬಂದು ದರೋಡೆ ಮಾಡಿ‌ ಹೋಗಿದ್ದಾರೆ ಎಂದು ಮಾಹಿತಿ ತಿಳಿಯಲಾಗಿದೆ. ಪ್ರಕರಣದ ಸಾರಾಂಶ : ಫಿರ್ಯಾದುದಾರರಾದ ಶ್ರೀ ಹರಿ, ವೃತ್ತಿ; ಜ್ಯುವೆಲ್ಲರಿ ಶಾಪ್, ಇವರನ್ನು ಯಾರೋ ಆರು ಜನ ಆಪಾದಿತರು ಫಿರ್ಯಾದುದಾರರ ಬಳಿ ಇರುವ 350 ಗ್ರಾಂ ತೂಕದ ಬಂಗಾರದ ಗಟ್ಟಿಯನ್ನು ದರೋಡೆ ಮಾಡುವ ಉದ್ದೇಶದಿಂದ ದಿನಾಂಕ; 13-08-2025 ರಂದು ಬೆಳಿಗ್ಗೆ 07-00 ಗಂಟೆಯ ಸುಮಾರಿಗೆ ಮಂಗಳೂರು ಸೆಂಟ್ರಲ ರೇಲ್ವೆ ನಿಲ್ದಾಣದ ಹತ್ತಿರದ ಕೈರಾಲಿ ಹೊಟೆಲ್ ಬಳಿ ಆಟೋ ಕಾಯುತ್ತಿದ್ದ ಫಿರ್ಯಾದುದಾರರಿಗೆ, ತಾವು ಕಸ್ಟಮ್ ಅಧಿಕಾರಿಗಳು, ನಿಮ್ಮನ್ನು ಪರಿಶೀಲನೆ ಮಾಡಬೇಕು ತಮ್ಮೊಂದಿಗೆ ಬನ್ನಿ ಅಂತಾ ಗದರಿಸಿ, ಫಿರ್ಯಾದುದಾರರನ್ನು ಹಿಡಿದುಕೊಂಡು ಬಲವಂತವಾಗಿ 24ಬಿಹೆಚ್8102ಜಿ ಎಂಬ ನಂಬರ್ ಬರೆದುಕೊಂಡಿರುವ ಬಿಳೆ ಬಣ್ಣದ ಇನ್ನೋವಾ ಕಾರಿನ ಮೇಲೆ…

Read More

ದೇಗುಲದ ವಾತಾವರಣವನ್ನು ಸ್ವಚ್ಛವಾಗಿಡುವ ನಿಟ್ಟಿನಲ್ಲಿ ಮುಜರಾಯಿ ಇಲಾಖೆಯ ಅಡಿಯಲ್ಲಿ ಬರುವ ಕರ್ನಾಟಕದ ಎಲ್ಲಾ ದೇವಸ್ಥಾನಗಳ ಒಳಾಂಗಣದಲ್ಲಿ ಪ್ಲಾಸ್ಟಿಕ್ ಬಳಕೆ ಬ್ಯಾನ್‌ ಮಾಡಲಾಗಿದೆ ಈ ಬಗ್ಗೆ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ ರಾಮನಗರದಲ್ಲಿ ಹೇಳಿದ್ದಾರೆ. ದೇವಸ್ಥಾನದ ಒಳಗೆ ಪ್ಲಾಸ್ಟಿಕ್ ನಿಷೇಧವಿದ್ದು, ಹೊರಭಾಗದಲ್ಲಿ ನಿಷೇಧ ಹೇರುವ ಬಗ್ಗೆ ಸರ್ಕಾರ ಮತ್ತು ಜಿಲ್ಲಾಡಳಿತಗಳು ನಿರ್ಧರಿಸಲಿವೆ. ಇದರ ಜೊತೆಗೆ, ದೇವಸ್ಥಾನಗಳಲ್ಲಿ ಪೂಜೆ ಮಾಡುವಾಗ ಸಂಸ್ಕೃತದ ಬದಲಿಗೆ ಕನ್ನಡದಲ್ಲಿ ಶ್ಲೋಕಗಳನ್ನು ಹೇಳುವಂತೆ ಸೂಚನೆ ನೀಡುವ ಬಗ್ಗೆ ಸರ್ಕಾರವು ಚಿಂತನೆ ನಡೆಸಲಾಗುತ್ತಿದೆ ಎನ್ನಲಾಗುತ್ತಿದೆ. ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ ಅವರು ರಾಮನಗರದಲ್ಲಿ ಈ ವಿಷಯ ತಿಳಿಸಿದರು. ದೇವಸ್ಥಾನದ ಒಳಾಂಗಣದಲ್ಲಿ ಪ್ಲಾಸ್ಟಿಕ್ ಬಳಸುವುದನ್ನು ನಿಷೇಧಿಸಲಾಗಿದೆ. ದೇವಸ್ಥಾನದ ಹೊರಭಾಗದಲ್ಲಿ ಪ್ಲಾಸ್ಟಿಕ್ ನಿಷೇಧಿಸುವ ಬಗ್ಗೆ ಸರ್ಕಾರ ಮತ್ತು ಜಿಲ್ಲಾಡಳಿತಗಳು ನಿರ್ಧಾರ ಮಾಡುತ್ತವೆ. ಈ ನಿರ್ಧಾರವನ್ನು ಪರಿಸರದ ಸ್ವಚ್ಛತೆಯನ್ನು ಗಮನದಲ್ಲಿಟ್ಟುಕೊಂಡು ತೆಗೆದುಕೊಳ್ಳಲಾಗಿದೆ ಎಂದು ಸಚಿವ ರಾಮಲಿಂಗಾ ರೆಡ್ಡಿ ವಿವರಿಸಿದರು. ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ದೇವಸ್ಥಾನಗಳಲ್ಲಿ ಪ್ಲಾಸ್ಟಿಕ್ ನಿಷೇಧವನ್ನು ಜಾರಿಗೊಳಿಸಲಾಗುತ್ತಿದೆ. ಇದನ್ನು…

Read More

ಬಂಟ್ವಾಳ: ಧೈರ್ಯವಂತ ಮತ್ತು ಪ್ರಾಮಾಣಿಕ ಹಾಗೂ ದಕ್ಷ ಪೊಲೀಸ್ ಅಧಿಕಾರಿಯಾಗಿರುವ ಬಂಟ್ವಾಳದ ವಗ್ಗ ನಿವಾಸಿ ಪೊಲೀಸ್ ಇನ್ಸ್ಪೆಕ್ಟರ್ ಶಾಂತಾರಾಮ್ ಕುಂದರ್ ಅವರಿಗೆ ರಾಷ್ಟ್ರಪತಿ ಪ್ರಶಸ್ತಿ ಲಭಿಸಿದೆ. ವೃತ್ತಿ ಜೀವನದಲ್ಲಿ ಸಾರ್ವಜನಿಕ ಸೇವೆಯಲ್ಲಿ ಇವರ ಅಪಾರವಾದ ಸಮರ್ಪಣೆ, ಶಿಸ್ತು, ನಿಷ್ಠೆ ಹಾಗೂ ಸೇವಾ ಮನೋಭಾವವನ್ನು ಗುರುತಿಸಿ ನೀಡಲ್ಪಟ್ಟ ರಾಷ್ಟ್ರಪತಿಯವರ ಮೆರಿಟೋರಿಯಸ್ ಸರ್ವೀಸ್ ಅವಾರ್ಡ್ ಗೌರವ ಪಡೆದಿರುವುದು ಕರ್ನಾಟಕಕ್ಕೆ ಸಂದ ಗೌರವ.   ಕಾನೂನು ಸುವ್ಯವಸ್ಥೆಯನ್ನು ಕಾಪಾಡುವಲ್ಲಿ, ಅಪರಾಧ ತಡೆಗಟ್ಟುವಲ್ಲಿ, ಸಮುದಾಯದೊಂದಿಗೆ ಸಕ್ರಿಯವಾಗಿ ಬೆರೆತು ಇವರು ಕಾರ್ಯ ನಿರ್ವಹಿಸಿದ್ದಾರೆ. 2016 ರಲ್ಲಿ ಅತ್ಯುತ್ತಮ ಸೇವೆಗಾಗಿ ಮುಖ್ಯಮಂತ್ರಿಗಳಿಂದ ಚಿನ್ನದ ಪದಕವೂ ಅವರಿಗೆ ಲಭಿಸಿತ್ತು. ಇಂತಹ ನಿಸ್ವಾರ್ಥ ಸೇವಾ ಮನೋಭಾವದ ಶಾಂತಾರಾಮ್ ಕುಂದರ್ ರವರಿಗೆ ರಾಷ್ಟ್ರಪತಿಗಳಿಂದ ಅತ್ಯುನ್ನತ ಗೌರವ ಪ್ರಶಸ್ತಿ ಲಭಿಸಿರುವುದು ನಿಜಕ್ಕೂ ಹೆಮ್ಮೆಯ ವಿಚಾರ. ಶಾಂತಾರಾಮ್ ಕುಂದರ್ ಅವರು ತಮ್ಮ ವೃತ್ತಿ ಜೀವನದಲ್ಲಿ ನೈತಿಕತೆ, ವೃತ್ತಿಪರತೆ, ಪ್ರಾಮಾಣಿಕತೆ, ಧೈರ್ಯ ಮತ್ತು ಜನ ಸ್ನೇಹಿ ಕಾರ್ಯಶೈಲಿಗಾಗಿ ಈಗಾಗಲೇ ಹಲವು ಕಡೆ ಗೌರವಿಸಲ್ಪಟ್ಟಿದ್ದಾರೆ.

Read More

ಬಳ್ಳಾರಿಯಲ್ಲಿ ಘೋರವಾದ ದುರಂತವೊಂದು ಆಭವಿಸಿದ್ದು, ಪಿಎಸ್ಐ ಪತ್ನಿ ಒಬ್ಬರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಮೊಕ ಪಿಎಸ್ಐ ಕೆ. ಕಾಳಿಂಗ ಪತ್ನಿ ಚೈತ್ರ ಎನ್ನುವವರು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ತಿಳಿದುಬಂದಿದೆ. ಹೌದು ಮೊಕ ಠಾಣೆಯಲ್ಲಿ PSI ಆಗಿರುವ ಕೆ.ಕಾಳಿಂಗ ಅವರ ಪತ್ನಿ ಚೈತ್ರ ನೇಣಿಗೆ ಶರಣಾಗಿದ್ದಾರೆ. ಇಂದು ಆಗಸ್ಟ್ 15 ಹಿಂನ್ನೇಲೇ ಮಕ್ಕಳು ಪತಿಯನ್ನು ಧ್ವಜಾರೋಹಣಕ್ಕೆ ಕಳುಹಿಸಿದ್ದಾರೆ. ಮಕ್ಕಳು ಮತ್ತು ಪತಿ ಧ್ವಜಾರೋಹಣಕ್ಕೆ ಹೋದ ಬಳಿಕ ಚೈತ್ರ ನೇಣು ಬಗೆದುಕೊಂಡು ಆತ್ಮಹತ್ಯೆ ಶರಣಾಗಿದ್ದಾರೆ.ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Read More

ಬೆಳ್ತಂಗಡಿ: ಅಕ್ರಮ ಗಾಂಜಾ ದಾಸ್ತಾನು ಮತ್ತು ಮಾರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳ್ತಂಗಡಿ ಪೊಲೀಸರಿಂದ ತುಂಬಾ ಸಮಯದಿಂದ ತಲೆಮರಿಸಿಕೊಂಡಿದ್ದ ಆರೋಪಿಯನ್ನು ಆ.14 ರಂದು ಕಾರ್ಕಳದಲ್ಲಿ ಬಂಧಿಸಿ, ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಹೊರಡಿಸಿದೆ. ಬಂಧಿತ ಆರೋಪಿಯನ್ನು ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದ ನಿವಾಸಿ ಮಹಮ್ಮದ್ ರಫೀಕ್ ಅಲಿಯಾಸ್ ಮದ್ದಡ್ಕ ರಫೀಕ್ (39) ಎಂದು ಗುರುತಿಸಲಾಗಿದೆ. ಬೆಳ್ತಂಗಡಿ ಪೊಲೀಸ್‌ ಠಾಣೆಯ ಇನ್ಸ್ ಪೆಕ್ಟರ್ ಸುಬ್ಬಾಪುರ್ ಮರ್ ನೇತೃತ್ವದ ಪೊಲೀಸರ ತಂಡ ಆರೋಪಿಯನ್ನು ಬಂಧಿಸುವ ಕಾರ್ಯಾಚರಣೆಯಲ್ಲಿ ಯಶಸ್ವಿಯಾಗಿದೆ. ಆರೋಪಿಯ ವಿರುದ್ಧ ಈಗಾಗಲೇ ಬೆಳ್ತಂಗಡಿ ಪೊಲೀಸ್ ಠಾಣೆ, ವೇಣೂರು ಪೊಲೀಸ್ ಠಾಣೆ, ಚಿಕ್ಕಮಗಳೂರು ಸೆನ್ ಪೊಲೀಸ್ ಠಾಣೆ, ಬಣಕಲ್ ಪೊಲೀಸ್ ಠಾಣೆ, ದ.ಕ ಜಿಲ್ಲಾ ಸೆನ್ ಪೊಲೀಸ್ ಠಾಣೆ, ಹಾಗೂ ಬಂಟ್ವಾಳ ಅಬಕಾರಿ ಠಾಣೆ, ಬೆಳ್ತಂಗಡಿ ಅಬಕಾರಿ ಠಾಣೆಯಲ್ಲಿ ಗಾಂಜಾ ಪ್ರಕರಣಗಳು ದಾಖಲಾಗಿರುತ್ತದೆ.

Read More