ಬೆಳ್ತಂಗಡಿ: ನಾಪತ್ತೆಯಾಗಿದ್ದ ವ್ಯಕ್ತಿಯೊಬ್ಬರ ಶವ ನೇತ್ರಾವತಿ ನದಿಯಲ್ಲಿ ಪತ್ತೆಯಾಗಿದೆ. ಮಾಲಾಡಿ ಶಕ್ತಿನಗರ ಕೋಲ್ಪೆದಬೈಲ್ ನಿವಾಸಿ ನಾಗೇಶ್ ಕುಲಾಲ್( 33) ಜ.13 ರಂದು ಬೆಳಗ್ಗೆ ಮನೆಯಲ್ಲಿ ಸಂಜೆ ಬರುತ್ತೇನೆ ಎಂದು ಹೇಳಿ ಮನೆಗೆ ಹಿಂತಿರುಗದೆ ನಾಪತ್ತೆಯಾಗಿದ್ದು,ಈ ಬಗ್ಗೆ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಜ.14 ರಂದು ಧರ್ಮಸ್ಥಳ ಪೋಲಿಸ್ ಠಾಣೆ ವ್ಯಾಪ್ತಿಯ ನೇತ್ರಾವತಿ ನದಿಯಲ್ಲಿ ಅವರ ಮೃತದೇಹ ಪತ್ತೆಯಾಗಿದೆ.ಧರ್ಮಸ್ಥಳ ಪೋಲಿಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
Author: main-admin
ಮಂಗಳೂರು: ನಗರದ ಜೈಲಿನಲ್ಲಿ ಕೈದಿಗಳು ಜೈಲು ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿ ಪಡಿಸಿ ಹಲ್ಲೆಗೆ ಯತ್ನಿಸಿದ ಘಟನೆ ನಡೆದಿದ್ದು, ಬರ್ಕೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಂಗಳೂರಿನ ಜಿಲ್ಲಾ ಕಾರಾಗೃಹದ ‘ಎ’ ಬ್ಲಾಕ್‌ನ ಸೆಲ್‌ಗಳಲ್ಲಿ ನಿಷೇಧಿತ ವಸ್ತುಗಳಿರುವ ಶಂಕೆಯ ಹಿನ್ನೆಲೆಯಲ್ಲಿ ಸೋಮವಾರ ರಾತ್ರಿ ಜೈಲು ಸಿಬ್ಬಂದಿ ತಪಾಸಣೆಗೆ ತೆರಳಿದ್ದರು. ಈ ವೇಳೆ ವಿಚಾರಣಾಧೀನ ಕೈದಿಗಳು ಬೆದರಿಕೆಯೊಡ್ಡಿ ಕರ್ತವ್ಯಕ್ಕೆ ಅಡ್ಡಿ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಜೈಲಿನಲ್ಲಿ ಮೊಬೈಲ್, ಗಾಂಜಾ ಮೊದಲಾದ ನಿಷೇಧಿತ ವಸ್ತುಗಳಿರುವ ಶಂಕೆಯಿಂದ ಜೈಲು ಅಧೀಕ್ಷಕ ಎಂ.ಎಚ್.ಆಶೇಖಾನ್ ನೇತೃತ್ವದಲ್ಲಿ ತಪಾಸಣೆಗೆ ಮುಂದಾಗಿದ್ದರು. ಆಗ ಪಾತ್ರೆ ಮತ್ತಿತರ ವಸ್ತುಗಳಿಂದ ವಿಚಾರಣಾ ಕೈದಿಗಳು ಹಲ್ಲೆಗೆ ಮುಂದಾಗಿದ್ದಾರೆ. ಅಲ್ಲದೆ ಅವಾಚ್ಯ ಶಬ್ದಗಳಿಂದ ಬೈದು ಬೆದರಿಕೆ ಒಡ್ಡಿ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆ ಎಂದು ಬರ್ಕೆ ಪೊಲೀಸ್ ಠಾಣೆಗೆ ನೀಡಿದ ದೂರಿನಲ್ಲಿ ತಿಳಿಸಲಾಗಿದೆ.
ಮಂಗಳೂರು: ಎರಡು ಬೈಕ್‌ಗಳ ನಡುವೆ ಸಂಭವಿಸಿದ ಅಪಘಾತದಲ್ಲಿ ಬಾಲಕಿಯೊಬ್ಬಳು ಮೃತಪಟ್ಟ ಘಟನೆ ರಾತ್ರಿ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ರಾಮಲ್‌ಕಟ್ಟೆ ಎಂಬಲ್ಲಿ ನಡೆದಿದೆ. ಕುಕ್ಕಿಪಾಡಿ ಗ್ರಾಮದ ಕೊಡಂಬೆಟ್ಟು ನಿವಾಸಿ ಇಸ್ಮತ್ ಆಯಿಶ(13) ಮೃತಪಟ್ಟ ಬಾಲಕಿ. ಬೈಕ್ ಚಲಾಯಿಸುತ್ತಿದ್ದ ಬಾಲಕಿಯ ತಂದೆ ಅಬ್ದುರ್ರಹ್ಮಾನ್ ಗಾಯಗೊಂಡಿದ್ದು ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ರಾಮಲ್‌ಕಟ್ಟೆಯಿಂದ ಹೆದ್ದಾರಿಯಲ್ಲಿ ರಾಂಗ್ ಸೈಡ್ ನಲ್ಲಿ ಬಂದ ನೆತ್ತರಕೆರೆ ನಿವಾಸಿ ರಂಜಿತ್ ಎಂಬವರ ಬೈಕ್ ಬಿ.ಸಿ.ರೋಡ್ ಕಡೆಯಿಂದ ತುಂಬೆ ಕಡೆಗೆ ಬರುತ್ತಿದ್ದ ಅಬ್ದುರ್ರಹ್ಮಾನ್ರ ಬೈಕಿಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಘಟನೆಯಲ್ಲಿ ರಂಜಿತ್ ಕೂಡ ಗಾಯ ಗೊಂಡಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತ ತೀವ್ರತೆಗೆ ಬೈಕ್ ಸಂಪೂರ್ಣ ಜಖಂಗೊಂಡಿದೆ.ಘಟನಾ ಸ್ಥಳಕ್ಕೆ ಪಾಣೆಮಂಗಳೂರು ಟ್ರಾಫಿಕ್ ಎಸ್ಸೆ ಸುತೇಶ್ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಕಾರ್ಕಳ: ಕುಕ್ಕುಂದೂರು ಸರ್ವಜ್ಞ ಸರ್ಕಲ್ ಬಳಿ ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದ ಲಾರಿ ತಪ್ಪಿಸಿಕೊಳ್ಳಲು ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪಿಯನ್ನು ಕಾರು ಸಹಿತ ವಶಪಡಿಸಿಕೊಂಡಿದ್ದಾರೆ. ಕುಕ್ಕುಂದೂರು ನಿವಾಸಿ ಸೈಯದ್ ಸೈಫ್ (22) ಬಂಧಿತ ಆರೋಪಿ. ಕಾರ್ಕಳ ನಗರ ಠಾಣೆ ಪೊಲೀಸ್ ಉಪ ನಿರೀಕ್ಷಕ ಸಂದೀಪ್ ಕುಮಾರ್ ಶೆಟ್ಟಿ ವಾಹನ ತಪಾಸಣೆ ನಡೆಸುತ್ತಿದ್ದಾಗ ಟಿಪ್ಪರ್ ಲಾರಿಯಲ್ಲಿ ಮರಳನ್ನು ಕಳವು ಮಾಡಿಕೊಂಡು ಸಾಗಾಟ ಮಾಡುತ್ತಿದ್ದು, ಕಳವು ಮಾಡಿದ ಮರಳನ್ನು ತಪ್ಪಿಸಿಕೊಂಡು ಹೋಗಲು ಅನುಕೂಲವಾಗುವಂತೆ ಇಲಾಖಾ ವಾಹನಕ್ಕೆ ಪ್ರತಿಬಂಧ ಉಂಟು ಮಾಡಿದ್ದನು.ಕಾರಿನಲ್ಲಿ ಮರಳು ಸಾಗಾಟದ ಲಾರಿಗೆ ಬೆಂಗಾವಲಿನಂತೆ ಚಲಾಯಿಸಿದ್ದು, ಟಿಪ್ಪರ್ ನ್ನು ಪೊಲೀಸರು ಬೆನ್ನಟ್ಟುವಾಗ ಒಮ್ಮೆಲೇ ಮುಂದೆ ಚಲಾಯಿಸಿಕೊಂಡು ಹೋಗಿ ಇಲಾಖಾ ವಾಹನ ಮುಂದೆ ಹೋಗದಂತೆ ತಡೆಯುಂಟು ಮಾಡಿದ್ದಾನೆ. ಪ್ರಕರಣಕ್ಕೆ ಸಂಬಂಧಿಸಿ ಪ್ರಕರಣ ದಾಖಲಿಸಿದ ಪೊಲೀಸರು ಆರೋಪಿ, ಕಾರು ಚಾಲಕ ಸೈಯದ್ ಸೈಫ್ ನನ್ನು ಕಾರು ಸಹಿತ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಅಮಲು ಪದಾರ್ಥ ಗಾಂಜಾ ಸೇವನೆ ಮಾಡಿರುವ ಬಗ್ಗೆ ಅನುಮಾನ ವ್ಯಕ್ತವಾಗಿ ವೈದ್ಯಕೀಯ ಪರೀಕ್ಷೆಗೆ…
ಕಡಬ: ಅಕ್ರಮ ದನ ಸಾಗಾಟದ ಲಾರಿಯನ್ನು ಕಡಬ ಠಾಣಾ ಪೊಲೀಸರು ತಡೆಹಿಡಿದ ಘಟನೆ ಕಡಬ ಠಾಣಾ ವ್ಯಾಪ್ತಿಯ ಕೊಯಿಲ ಬಳಿ ನಡೆದಿದೆ. ಲಾರಿ ತಡೆಹಿಡಿದ ಸಂದರ್ಭ ಲಾರಿ ಚಾಲಕ ಪರಾರಿಯಾಗಿರುವುದಾಗಿ ತಿಳಿದು ಬಂದಿದೆ. ಇಂದು ಮುಂಜಾನೆ ಘಟನೆ ನಡೆದಿದ್ದು, ಸ್ಥಳದಲ್ಲಿ ಹಿಂದೂಪರ ಸಂಘಟನೆಯ ಕಾರ್ಯಕರ್ತರು ಜಮಾಯಿಸಿದ್ದಾರೆ. ಪಿಕಪ್ ವಾಹನದಲ್ಲಿ ಸುಮಾರು ಎಂಟು ಜಾನುವಾರುಗಳಿದ್ದು, ಒಂದು ದನ ಮೃತಪಟ್ಟಿರುವುದಾಗಿ ಮಾಹಿತಿ ಲಭಿಸಿದೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದಲ್ಲದೆ ಅಕ್ರಮ ಜಾನುವಾರು ಸಾಗಾಟಕ್ಕೆ ಬಳಸಿದ ವಾಹನವನ್ನು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ.
ಬಂಟ್ವಾಳ: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಕಲ್ಲಡ್ಕ ಸಮೀಪದ ಕುದ್ರೆಬೆಟ್ಟು ಎಂಬಲ್ಲಿ ಡೀಸೆಲ್ ಲೋಡ್ ಟ್ಯಾಂಕರ್ ವೊಂದು ಪಲ್ಟಿಯಾಗಿ ಡೀಸೆಲ್ ಸೋರಿಕೆಯಾದ ಘಟನೆ ಜ.14ರ ಮಂಗಳವಾರ ನಡೆದಿದೆ. ಘಟನೆಯಲ್ಲಿ ಚಾಲಕ ಯಾವುದೇ ಗಾಯವಿಲ್ಲದೆ ಪಾರಾಗಿದ್ದಾರೆ. ಈ ಘಟನೆಯ ಪರಿಣಾಮ ಗಂಟೆಗಳಿಗೂ ಅಧಿಕ ಹೊತ್ತು ರಸ್ತೆ ಸಂಚಾರಕ್ಕೆ ಅಡಚಣೆಯಾಗಿತ್ತು. ಬಂಟ್ವಾಳ ಸಂಚಾರ ಪೊಲೀಸರು ಸ್ಥಳಕ್ಕಾಗಮಿಸಿ, ಕ್ರೇನ್ ಬಳಸಿ ಟ್ಯಾಂಕರ್ ಅನ್ನು ಬದಿಗೆ ಸರಿಸಿ ಸುಗಮ ವಾಹನ ಸಂಚಾರಕ್ಕೆ ಅನುವು ಮಾಡಿಕೊಟ್ಟರು. ಮಂಗಳೂರಿನಿಂದ ಚೆನ್ನೈಗೆ ಡೀಸೆಲ್ ತುಂಬಿಸಿಕೊಂಡು ಹೋಗುತ್ತಿದ್ದ ಚಾಲಕ ಕಲ್ಲಡ್ಕ ಸರ್ವೀಸ್ ರೋಡ್ ನಲ್ಲಿ ವಿರುದ್ದ ದಿಕ್ಕಿನಲ್ಲಿ ಸಂಚರಿಸಿ ಎಡವಟ್ಟು ಮಾಡಿಕೊಂಡು ಕೊನೆಗೆ ಚರಂಡಿಗೆ ಪಲ್ಟಿಯಾಗಿದೆ. ಪಲ್ಟಿಯಾದ ಕೂಡಲೇ ಟ್ಯಾಂಕರ್ ನಲ್ಲಿ ಸಣ್ಣ ತೂತಾಗಿದ್ದು, ಅ ಮೂಲಕ ಡಿಸೇಲ್ ಸೋರಿಕೆ ಕಂಡುಬಂದಿದೆ. ಹಾಗಾಗಿ ಕೆಲಹೊತ್ತು ಕಲ್ಲಡ್ಕ ಪರಿಸರದಲ್ಲಿ ಆತಂಕದ ವಾತವರಣ ನಿರ್ಮಾಣವಾಗಿತ್ತು. ಜೊತೆಗೆ ಕಾಮಗಾರಿ ನಡೆಯುತ್ತಿದ್ದ ಹಿನ್ನೆಲೆ ಈ ಪ್ರದೇಶದಲ್ಲಿ ಮೊದಲೇ ವಾಹನಗಳು ಸಂಚಾರ ಮಾಡುವುದು ಸಂಕಷ್ಟದ ಸ್ಥಿತಿಯಲ್ಲಿ. ಇದೀಗ ಲಾರಿ ಪಲ್ಟಿಯಾದ ಕಾರಣ…
ಮಂಗಳೂರು: ಟ್ಯಾಂಕರ್‌ಗಳಿಂದ ಡೀಸೆಲ್ ಕಳವು ಮಾಡುತ್ತಿದ್ದ ನಾಲ್ವರು ಖದೀಮರನ್ನು ಸುರತ್ಕಲ್ ಠಾಣಾ ಪೊಲೀಸರು ಬಂಧಿಸಿದ್ದಾರೆ. ಕುಳಾಯಿಗುಡ್ಡೆ ನಿವಾಸಿ ಸಂತೋಷ್(42), ಕಾಟಿಪಳ್ಳ ನಿವಾಸಿ ಐರನ್ ರಿತೇಶ್ ಮಿನೇಜ್(36), ಬೆಳ್ತಂಗಡಿ ನಿವಾಸಿ ನಾರಾಯಣ್(23), ಉಡುಪಿಯ ಹೆಜಮಾಡಿ ನಿವಾಸಿ ರವಿ ಜನಾರ್ದನ ಪುತ್ರನ್ (59) ಬಂಧಿತ ಖದೀಮರು. ಮಂಗಳೂರಿನ ಹೊರವಲಯದ ಬಾಳ ಗ್ರಾಮದ ಬಳಿ ಇರುವ ಟ್ಯಾಂಕರ್‌ಯಾರ್ಡ್‌ನಲ್ಲಿ ನಿಲ್ಲಿಸಿರುವ ಟ್ಯಾಂಕರ್‌ಗಳಿಂದ ಈ ಗ್ಯಾಂಗ್ ಡೀಸೆಲ್ ಕಳವು ಮಾಡುತ್ತಿತ್ತು. ಖಚಿತ ಮಾಹಿತಿಯ ಮೇರೆಗೆ ಪೊಲೀಸರು ಡೀಸೆಲ್ ಕಳವುಗೈದು ದಾಸ್ತಾನು ಇರಿಸಿದ್ದ ಶೆಡ್ಡ್ ಮೇಲೆ ದಾಳಿ ನಡೆಸಿದ್ದಾರೆ. ಈ ವೇಳೆ ಆರೋಪಿಗಳು ದಾಸ್ತಾನು ಇರಿಸಿಟ್ಟಿದ್ದ 1685 ಲೀಟರ್ ಡಿಸೇಲ್ ಮತ್ತು 20 ಲೀಟರ್ ಪೆಟ್ರೋಲ್ ಅನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಉಡುಪಿ: ಮಹಿಳೆಯೊಬ್ಬರು “ಆರ್‌ಪಿಸಿ” ಎಂಬ ಮೊಬೈಲ್ ಅಪ್ಲಿಕೇಶನ್ ಮೂಲಕ ನೀಡಲಾದ ಸುಳ್ಳು ಭರವಸೆಗಳಿಂದಾಗಿ 1.12 ಲಕ್ಷ ರೂಪಾಯಿ ವಂಚನೆಗೊಳಗಾದ ಘಟನೆಗೆ ಸಂಬಂಧಿಸಿದಂತೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬ್ರಹ್ಮಾವರ ತಾಲೂಕಿನ ಯಾಡ್ತಾಡಿ ಗ್ರಾಮದ ಪಲ್ಲವಿ ಬಿ (30) ಎಂಬುವವರು 2024ರ ಡಿಸೆಂಬರ್ 3 ರಂದು ವಾಟ್ಸಾಪ್ ಗ್ರೂಪ್‌ನಲ್ಲಿ “ಆರ್‌ಪಿಸಿ” ಎಂಬ ಅಪ್ಲಿಕೇಶನ್ ಬಗ್ಗೆ ಮಾಹಿತಿ ಪಡೆದಿದ್ದರು. ಅಪ್ಲಿಕೇಶನ್ ಬಗ್ಗೆ ನೀಡಲಾದ ಮಾಹಿತಿಯನ್ನು ನಂಬಿದ ಅವರು, 2024 ರ ಡಿಸೆಂಬರ್ 4ರಂದು ಗೂಗಲ್ ಪೇ ಮೂಲಕ ಆರೋಪಿಗೆ ಎರಡು ಬಾರಿ 56,000 ರೂಪಾಯಿಯಂತೆ ಒಟ್ಟು 1.12 ಲಕ್ಷ ರೂಪಾಯಿಗಳನ್ನು ವರ್ಗಾಯಿಸಿದರು. ಆದಾಗ್ಯೂ, ಆರೋಪಿ ಈವರೆಗೆ ಹಣವನ್ನು ಹಿಂದಿರುಗಿಸಲು ಅಥವಾ ಆರೋಪಿ ನೀಡಿದ ಯಾವುದೇ ಭರವಸೆಗಳನ್ನು ಈಡೇರಿಸಿಲ್ಲ ಎಂದು ಪಲ್ಲವಿ ಅವರು ದೂರಿನಲ್ಲಿ ತಿಳಿಸಿದ್ದಾರೆ. ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಳಗಾವಿ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹಾಗೂ ಸಹೋದರ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ತೆರಳುತ್ತಿದ್ದ ಕಾರು ಅಪಘಾತಕ್ಕೀಡಾಗಿರುವ ಘಟನೆ ಮಂಗಳವಾರ (ಜ.14ರಂದು) ಮುಂಜಾನೆ 6 ಗಂಟೆಯ ಸುಮಾರಿಗೆ ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಅಂಬಡಗಟ್ಟಿ ಗ್ರಾಮದ ಬಳಿ ನಡೆದಿದೆ. ಶಾಸಕಾಂಗ ಪಕ್ಷದ ಸಭೆ ಮುಗಿಸಿ ನಿನ್ನೆ(ಸೋಮವಾರ) ತಡರಾತ್ರಿ ಬೆಂಗಳೂರಿನಿಂದ ಬೆಳಗಾವಿಗೆ ಲಕ್ಷ್ಮೀ ಹೆಬ್ಬಾಳಕರ್ ಹಾಗೂ ಅವರ ಸಹೋದರ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಕಾರಿನಲ್ಲಿ ಬರುತ್ತಿದ್ದರು. ಈ ವೇಳೆ ರಸ್ತೆಯಲ್ಲಿ ಅಡ್ಡಬಂದ ನಾಯಿ ತಪ್ಪಿಸಲು ಹೋಗಿ ಕಾರು ನಿಯಂತ್ರಣ ತಪ್ಪಿ ಮರಕ್ಕೆ ಢಿಕ್ಕಿ ಹೊಡೆದಿದೆ. ಪರಿಣಾಮ ಲಕ್ಷ್ಮೀ ಹೆಬ್ಬಾಳಕರ್ ಅವರ ಬೆನ್ನು, ಮುಖಕ್ಕೆ ಸಣ್ಣಪುಟ್ಟ ಗಾಯಗಳಾಗಿದ್ದು. ಚನ್ನರಾಜ ಹಟ್ಟಿಹೊಳಿ ಅವರ ತಲೆಗೆ ಗಾಯವಾಗಿದೆ. ಇಬ್ಬರಿಗೂ ಬೆಳಗಾವಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಮೂಡುಬಿದಿರೆ ಪೊಲೀಸ್ ಠಾಣಾ ವ್ಯಾಪ್ತಿಯ ಪುತ್ತಿಗೆ ಗ್ರಾಮದ ಮುಲ್ಕಿ ಅಂಗಡಿಯಲ್ಲಿ ನಗದು ಹಾಗೂ ಸೊತ್ತುಗಳನ್ನು ಕದ್ದೊಯ್ದು ತಿಂದು ತೇಗಿದ್ದ ಕಳ್ಳರನ್ನು ಬಂಧಿಸುವಲ್ಲಿ ಮೂಡುಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಪಿ.ಜಿ.ನೇತೃತ್ವದ ಪೊಲೀಸರ ತಂಡವು ಯಶಸ್ವಿಯಾಗಿದೆ. ನೀರುಡೆಯ ರೋಹಿತ್ ಮಸ್ಕರೇನಸ್, ಕೊಂಪದವು ನೆಲ್ಲಿತೀರ್ಥದ ನಿಶಾಂಕ್ ಪೂಜಾರಿ ಹಾಗೂ ನೀರುಡೆಯ ರೋಶನ್ ವಿಲ್ಸನ್ ಕ್ವಾಡ್ರಸ್ ಬಂಧಿತ ಆರೋಪಿಗಳು.ಕಳೆದ 9 ನೇ ತಾರೀಕಿನಂದು ರಾತ್ರಿ ಪುತ್ತಿಗೆಯ ಜಯಶ್ರೀ ಸ್ಟೋರ್ ನಿಂದ ರೂ.20 ಸಾವಿರ ನಗದು ಹಾಗೂ ಸುಮಾರು 48 ಸಾವಿರ ರೂ.ಮೌಲ್ಯದ ಸಿಗರೇಟು, ತಿಂಡಿ. ನೀರಿನ ಬಾಟಲ್, ಕೋಲ್ಡ್ ಡ್ರಿಂಕ್ಸ್, ಚಾಕೊಲೆಟ್, ಬಿಸ್ಕೆಟ್, ಮಿಕ್ಸರ್ ಇತ್ಯಾದಿ ತಿಂಡಿಗಳನ್ನು ಯಾರೋ ಕಳ್ಳರು ದೋಚಿದ್ದ ಬಗ್ಗೆ ಮೂಡುಬಿದಿರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆರೋಪಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದು ಕೋಲ್ಡ್ ಡ್ರಿಂಕ್ಸ್ ನೊಂದಿಗೆ ಬಿಸ್ಕೆಟ್ ತಿಂದಿದ್ದ ಮೂವರು ಸಿಕ್ಕಿಬಿದ್ದಿದ್ದಾರೆ.ಈ ಮೂವರ ತಂಡ ವೇಣೂರು,ಮುಲ್ಕಿ,ಬಜ್ಪೆ ಹಾಗೂ ಕಾರ್ಕಳ ಠಾಣಾ ವ್ಯಾಪ್ತಿಯಲ್ಲಿ ಕಳೆದ ಮೂರು ವರ್ಷಗಳಿಂದ ಸುಮಾರು 25 ಕ್ಕೂ ಹೆಚ್ಚು ಗೂಡಂಗಡಿಗಳಿಂದ ಕಳವುಗೈದಿರುವ…










