ಕಾಪು (ಉಚ್ಚಿಲ): ದಸರಾ ಗೌಜಿನ ನಡುವೆ ಕಾರಿನ ಗಾಜು ಒಡೆದು ಲ್ಯಾಪ್ಟಾಪ್ ಕಳವು ಮಾಡಲಾಗಿದೆ. ಉಡುಪಿಯ ಉಚ್ಚಿಲ ದೇವಸ್ಥಾನದ ಹೊರಬಾಗದಲ್ಲಿ ನಿಲ್ಲಿಸಿದ್ದ ಕಾರಿನ ಎಡಬದಿಯ ಗಾಜು ಒಡೆದು ಲ್ಯಾಪ್ಟಾಪ್ ಅನ್ನು ಕಳವು ಮಾಡಲಾಗಿದೆ. ಉಡುಪಿ ನಿವಾಸಿ ವಸಂತ್ ಅವರು ಕುಟುಂಬ ಸಮೇತ ನವರಾತ್ರಿಯ ಪ್ರಯುಕ್ತ ಉಚ್ಚಿಲ ದೇವಸ್ಥಾನಕ್ಕೆ ಭೇಟಿ ನೀಡಿ ವಾಪಾಸು ಕಾರಿನ ಬಳಿ ಬಂದಾಗ ವಿಷಯ ಬೆಳಕಿಗೆ ಬಂದಿದೆ. ದೇವಸ್ಥಾನದ ಬಳಿ ಸರ್ವಿಸ್ ರಸ್ತೆಯಲ್ಲಿ ನಿಲ್ಲಿಸಿದ್ದ ಕಾರಿನ ಗಾಜನ್ನು ಒಡೆದು ಖದೀಮರು ಸುಮಾರು 45,000 ಬೆಲೆಬಾಳುವ ಲ್ಯಾಪ್ಟಾಪ್ ಅನ್ನು ಕದ್ದಿದ್ದಾರೆ.ಪೊಲೀಸರಿಗೆ ವಿಷಯ ತಿಳಿಸಿದಾಗ ಲ್ಯಾಪ್ಟಾಪ್ ನ ಸೀರಿಯಲ್ ನಂಬರ್ ಇದ್ದರೆ ಮಾತ್ರ ಕೇಸ್ ಮಾಡಲು ಸಾಧ್ಯ ಎಂದು ತಿಳಿಸಿದ್ದಾರೆ.
Author: main-admin
ಬೆಳ್ತಂಗಡಿ : ಡಿವೈಡರ್‌ಗೆ ಬೈಕ್ ಢಿಕ್ಕಿಯಾದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಗುರುವಾಯನಕೆರೆ ಶಕ್ತಿನಗರದ ಬಳಿ ಅ. 10 ರಂದು ಸಂಭವಿಸಿದೆ. ಬೆಳ್ತಂಗಡಿ ತಾಲೂಕು ತೆಂಕಕಾರಂದೂರು ಗ್ರಾಮದ ಕಟ್ಟೆ ನಿವಾಸಿ ಸುಧೀಶ್ (30) ಮೃತ ದುರ್ದೈವಿ.ಸುಧೀಶ್ ಅವರು ಯಾವುದೋ ಕಾರ್ಯನಿಮಿತ್ತ ಉಪ್ಪಿನಂಗಡಿಯಿಂದ ಮನೆಗೆ ತೆರಳುತ್ತಿದ್ದ ಸಂದರ್ಭದಲ್ಲಿ ಅಪಘಾತ ನಡೆದಿದೆ. ಈ ಅವಘಡದಲ್ಲಿ ಸುಧೀಶ್ ಅವರ ತಲೆಗೆ ಪೆಟ್ಟಾದ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆ ಬಳಿಕ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ. ಇನ್ನು ಮೃತದೇಹವನ್ನು ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಅಪಘಾತದಲ್ಲಿ ಡಿವೈಡರ್‌ನ ಎರಡು ವಿದ್ಯುದ್ದೀಪಕ್ಕೆ ಹಾನಿಯುಂಟಾಗಿದೆ ಎಂದು ತಿಳಿದು ಬಂದಿದೆ.ಸುಧೀಶ್ ಅವರು ಪೈಂಟಿಂಗ್ ವೃತ್ತಿ ನಡೆಸುತ್ತಿದ್ದರು. ಸುಧೀಶ್ ಅವರು ತಂದೆ, ಇಬ್ಬರು ಸಹೋದರಿಯರು, ಇಬ್ಬರು ಸಹೋದರರನ್ನು ಅಗಲಿದ್ದಾರೆ.
ವಿಟ್ಲ-ಮಂಗಳೂರು ಮಧ್ಯೆ ಸಂಚರಿಸುವ ಸೆಲಿನಾ ಬಸ್ ಮತ್ತು ಪುತ್ತೂರು-ಮಂಗಳೂರು ಮಧ್ಯೆ ಸಂಚರಿಸುವ ಧರಿತ್ರಿ ಬಸ್ ಸಿಬ್ಬಂದಿಗಳು ಪ್ರಯಾಣಿಕರ ಕಣ್ಮುಂದೆಯೇ ಪರಸ್ಪರ ಬಡಿದಾಡುತ್ತಾ ಭೀತಿಯ ವಾತಾವರಣ ಸೃಷ್ಟಿಸಿದ್ದಾರೆ. ಒಂದು ಬಸ್ ಚಾಲಕ ಉಗುಳುವಾಗ ಇನ್ನೊಂದು ಬಸ್ ಚಾಲಕನ ಮೈಗೆ ಬಿತ್ತೆಂಬ ನೆಪದಲ್ಲಿ ಪರಸ್ಪರ ಬಡಿದಾಡಿ ಕೊಂಡಿದ್ದಾರೆ ಎಂದು ಪ್ರಯಾಣಿಕರು ತಿಳಿಸಿದ್ದಾರೆ. ಇತ್ತೀಚಿನ ದಿನಗಳಲ್ಲಿ ಪ್ರತಿನಿತ್ಯ ಖಾಸಗಿ ಬಸ್ ಸಿಬ್ಬಂದಿಗಳ ಅಟ್ಟಹಾಸ ಮಿತಿಮೀರಿದ್ದು ಸಭ್ಯ ಪ್ರಯಾಣಿಕರು ಓಡಾಡಲು ಹಿಂಜರಿಯುತ್ತಿದ್ದಾರೆ. ಪೊಲೀಸರು, ಆರ್ ಟಿ ಒ ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿಯೇ ಖಾಸಗಿ ಬಸ್ ಸಿಬ್ಬಂದಿಗಳು ಅನಾಗರಿಕರಾಗಿದ್ದಾರೆಂಬ ಆರೋಪ ಸಾರ್ವಜನಿಕರಿಂದ ವ್ಯಕ್ತವಾಗಿದೆ. ಬಸ್ ವ್ಯವಸ್ಥೆ ಎಂಬುದು ಸೇವೆಯೆಂಬುದು ಇಂದಿನ ಸಿಬ್ಬಂದಿಗಳಿಗೆ ತಿಳಿದಿಲ್ಲವಾಗಿದೆ. ತಮ್ಮದೇ ಸಾಮ್ರಾಜ್ಯ, ತಾವು ಮಾಡಿದ್ದೇ ಆಟ, ನಾವು ನಡೆದಿದ್ದೇ ದಾರಿ ಎಂಬುದನ್ನು ತಿಳಿದಿರುವ ಇಂತಹ ಸಿಬ್ಬಂದಿಗಳ ಸಮಾಜ ಕಂಟಕ ವರ್ತನೆ ಸಾರ್ವಜನಿಕರ ಆತಂಕಕ್ಕೆ ಕಾರಣವಾಗಿದೆ. ಅಧಿಕಾರಿಗಳು ಕೇವಲ ಬಸ್ಸನ್ನು ವಶಕ್ಕೆ ಪಡೆದು ಪಿಟ್ಟಿ ಕೇಸು ಜಡಿದು ಜುಜುಬಿ ದಂಡ ವಸೂಲಿ ಮಾಡುವ ಬದಲು ಖಾಸಗಿ ಬಸ್…
ಮಂಗಳೂರು : ನಗರದ ಹೊರವಲಯದ ತಲಪಾಡಿ ಬಳಿ ಎಂಡಿಎಂಎ ಮಾದಕದ್ರವ್ಯ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ. ಉಳ್ಳಾಲ ತಾಲೂಕಿನ ತಲಪಾಡಿ ಗ್ರಾಮದ ನಾರ್ಲ ಪಡೀಲ್ ಕಿರಣ್ ಡಿಸೋಜ (25) ಬಂಧಿತ ಆರೋಪಿ. ಕಿರಣ್ ಡಿಸೋಜ ಉಳ್ಳಾಲ ಠಾಣಾ ವ್ಯಾಪ್ತಿಯ ತಲಪಾಡಿಯ ಅತಿಥಿ ಬಾರ್ ಬಳಿ ಮಾದಕದ್ರವ್ಯ ಎಂಡಿಎಂಎಯನ್ನು ಮಾರಾಟ ಮಾಡುತ್ತಿದ್ದ. ಅಲ್ಲಿಗೆ ದಾಳಿ ನಡೆಸಿದ ಪೊಲೀಸರು ಆತನನ್ನು ಬಂಧಿಸಿ, 10 ಗ್ರಾಂ ತೂಕದ 30,000 ರೂ. ಮೌಲ್ಯದ ಎಂಡಿಎಂಎ, ಸ್ಕೂಟರ್ ಮತ್ತು ಮೊಬೈಲ್ ಫೋನ್‌ಅನ್ನು ವಶಪಡಿಸಿಕೊಂಡಿದ್ದಾರೆ. ವಶಪಡಿಸಿಕೊಂಡ ಸೊತ್ತಿನ ಒಟ್ಟು ಮೌಲ್ಯ 65,500 ರೂ. ಎಂದು ಅಂದಾಜಿಸಲಾಗಿದೆ. ಈ ಬಗ್ಗೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಎನ್‌ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.
ಮಂಗಳೂರು: ನಗರದ ಲೋಟಸ್ ಪ್ರಾಪರ್ಟೀಸ್ ಪಾಲುದಾರ ಜಿತೇಂದ್ರ ಕೊಟ್ಟಾರಿಯವರ ಮನೆಗೆ ನುಗ್ಗಿ ಹಲ್ಲೆಗೆತ್ನಿಸಿದ ಆರೋಪದಲ್ಲಿ ಬರ್ಕೆ ಠಾಣಾ ಪೊಲೀಸರು ಯುವಕರಿಬ್ಬರನ್ನು ಬಂಧಿಸಿದ್ದಾರೆ. ಎನ್ಎಸ್‌ಯುಐ ಕಾರ್ಯಕರ್ತ ತನುಷ್ ಶೆಟ್ಟಿ ಹಾಗೂ ಕದ್ರಿ ನಿವಾಸಿ ಅಂಕಿತ್ ಶೆಟ್ಟಿ ಬಂಧಿತ ಆರೋಪಿಗಳು. ಬಂಧಿತ ತನುಷ್ ಶೆಟ್ಟಿ ಈ ಬಾರಿ ಎಂಪಿ ಚುನಾವಣೆ ವೇಳೆ ನೋಟಾ ಕ್ಯಾಂಪೇನ್ ನಡೆಸಿದ್ದನು. ಜಿತೇಂದ್ರ ಕೊಟ್ಟಾರಿ ಬುಧವಾರ ಸಂಜೆ ಮಂಗಳೂರು ವಿಮಾನ ನಿಲ್ದಾಣ ಕಡೆಯಿಂದ ಯುವಕರಿದ್ದ ಕಾರನ್ನು ಓವರ್ ಟೇಕ್ ತಮ್ಮ ಆಡಿ ಕಾರನ್ನು ಚಲಾಯಿಸಿಕೊಂಡು ಬಂದಿದ್ದರು ಎನ್ನಲಾಗಿದೆ. ಇದೇ ಕಾರಣಕ್ಕೆ ಅವರನ್ನು ಹಿಂಬಾಲಿಸಿಕೊಂಡು ಬಂದಿದ್ದ ಯುವಕರು, ಜಿತೇಂದ್ರ ಕೊಟ್ಟಾರಿಯವರು ತಮ್ಮ ಕೊಡಿಯಾಲಬೈಲ್‌ನ ಮನೆಗೆ ತಲುಪಿದಾಗ, ಅಲ್ಲಿ ಅವರನ್ನು ಅವಾಚ್ಯವಾಗಿ ನಿಂದಿಸಿ ಮನೆಯೊಳಗೆ ನುಗ್ಗಲು ಯತ್ನಿಸಿದ್ದಾರೆ. ಅಲ್ಲದೆ, ಕಾರನ್ನು ಕಾಂಪೌಂಡ್ ಒಳಗಡೆ ತಂದು ಜಿತೇಂದ್ರ ಕೊಟ್ಟಾರಿ ಮತ್ತು ಅವರ ಪತ್ನಿಗೆ ಹಲ್ಲೆಮಾಡಲು ಯತ್ನಿಸಿದ್ದಾರೆ. ತಕ್ಷಣ ಜಿತೇಂದ್ರ ಕೊಟ್ಟಾರಿ ಬರ್ಕೆ ಠಾಣೆಗೆ ಮಾಹಿತಿ ನೀಡಿದ್ದು ಪೊಲೀಸರು ಬಂದು ಸ್ಥಳದಿಂದಲೇ ಇಬ್ಬರನ್ನು ಅರೆಸ್ಟ್ ಮಾಡಿದ್ದಾರೆ.…
ಮಂಗಳೂರು: ಚೆಕ್ ಅಮಾನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಪುದು ಗ್ರಾಮದ ಹಸನಬ್ಬ ಎಂಬಾತನಿಗೆ ಬಂಟ್ವಾಳದ ಹಿರಿಯ ಸಿವಿಲ್ ಮತ್ತು ಜೆಎಂಎಫ್‌ಸಿ ನ್ಯಾಯಾಲಯದ ನ್ಯಾಯಾಧೀಶೆ ಭಾಗ್ಯಮ್ಮ ದಂಡ ಪಾವತಿಸುವಂತೆ ತೀರ್ಪು ನೀಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ಫರಂಗಿಪೇಟೆ ಶಾಖೆಯಿಂದ ಹಸನಬ್ಬ 2012ರಲ್ಲಿ ಅಡವು ಸಾಲ ಪಡೆದುಕೊಂಡಿದ್ದರು. ಆರೋಪಿ ಸರಿಯಾದ ಸಮಯಕ್ಕೆ ಮರುಪಾವತಿಸದೆ ಸಾಲವನ್ನು ಸುಸ್ತಿ ಮಾಡಿದ್ದರು. ಹಾಗಾಗಿ ಆರೋಪಿ ವಿರುದ್ಧ ಸಹಕಾರಿ ಕಾಯ್ದೆಯನ್ವಯ ಕಾನೂನು ಪ್ರಕ್ರಿಯೆ ಆರಂಭಿಸಿತ್ತು. 2019ರಲ್ಲಿ ಆಸ್ತಿಯನ್ನು ಹರಾಜಿಗಿಡುವ ಸಂದರ್ಭ ಆರೋಪಿಯು ಶಾಖೆಗೆ ಆಗಮಿಸಿ ಸಾಲದ ಭಾಗಶಃ ಬಾಕಿಗೆ ಚೆಕ್ ನೀಡಿದ್ದರು. ಇದು ಅಮಾನ್ಯಗೊಂಡ ಕಾರಣ ಎಸ್‌ಸಿಡಿಸಿಸಿ ಬ್ಯಾಂಕ್ ನ್ಯಾಯಾಲಯದ ಮೆಟ್ಟಿಲೇರಿತ್ತು. ವಾದ ಪ್ರತಿವಾದ ಆಲಿಸಿದ ನ್ಯಾಯಾಧೀಶರು ಆರೋಪಿ ಹಸನಬ್ಬ ಬ್ಯಾಂಕಿಗೆ 2.50 ಲಕ್ಷ ರೂ. ಪರಿಹಾರ ನೀಡಬೇಕು, 10,000 ರೂ. ದಂಡ ಪಾವತಿಸಬೇಕು. ತಪ್ಪಿದ್ದಲ್ಲಿ 1 ವರ್ಷದ ಜೈಲು ಶಿಕ್ಷೆ ಅನುಭವಿಸಬೇಕು ಎಂದು ತೀರ್ಪು ನೀಡಿದರು. ಎಸ್‌ಸಿಡಿಸಿಸಿ ಬ್ಯಾಂಕ್ ಪರ ವಕೀಲ ಸುಕೇಶ್ ಕುಮಾರ್…
ಮಣಿಪಾಲ: ಕಾರು ಡಿಕ್ಕಿ ಹೊಡೆದು ದ್ವಿಚಕ್ರ ವಾಹನ ಸವಾರನೊಬ್ಬ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಇಂದ್ರಾಳಿಯಲ್ಲಿ ಬುಧವಾರ ಸಂಭವಿಸಿದೆ. ಮೃತ ದುರ್ದೈವಿ ಮಣಿಪಾಲದ ಉದ್ಯೋಗಿ ದೀಪೇಶ್ ದೇವಾಡಿಗ ಎಂದು ಗುರುತಿಸಲಾಗಿದೆ. ಇಂದ್ರಾಳಿ ದೇವಸ್ಥಾನದಿಂದ ಕಾರು ಕೆಳಗೆ ಬರುತ್ತಿದ್ದ ವೇಳೆ ಬ್ರೇಕ್ ಫೇಲ್ ಆಗಿದ್ದು, ಎರಡೂ ಬದಿಯಲ್ಲಿದ್ದ ವಾಹನಗಳು ಸಹಿತ ಜನರಿಗೆ ಕಾರು ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.ಘಟನೆಯಲ್ಲಿ ಕೆಲವು ಮಂದಿ ಅಲ್ಪ ಸ್ವಲ್ಪ ಗಾಯಗಳೊಂದಿಗೆ ಪಾರಾಗಿದ್ದಾರೆ. ಮಣಿಪಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹೆಚ್ಚಿನ ವಿವರ ನಿರೀಕ್ಷಿಸಲಾಗುತ್ತಿದೆ.
ಬೆಳ್ತಂಗಡಿ: ಎ.ಟಿ.ಎಂ ಕೇಂದ್ರದಲ್ಲಿ ಹಣ ತೆಗೆಯುತ್ತಿದ್ದ ವೃದ್ಧನ ಕೈಯಿಂದ ಎ.ಟಿ.ಎಂ ಕಾರ್ಡ್ ಕಸಿದುಕೊಂಡ ಅಪರಿಚಿತರು ಹಣ ಡ್ರಾ ಮಾಡಿಕೊಂಡ ಘಟನೆ ಗೇರುಕಟ್ಟೆ ಎ.ಟಿ.ಎಂ ಕೇಂದ್ರದಲ್ಲಿ ನಡೆದಿದೆ. ಗೇರುಕಟ್ಟೆ ನಿವಾಸಿ ಅಬೂಬಕ್ಕರ್ (71) ಎಂಬವರು ಗೇರುಕಟ್ಟೆ ಕೆನರಾ ಬ್ಯಾಂಕಿನ ಎ.ಟಿ.ಎಂ ನಲ್ಲಿ ಹಣ ತೆಗೆಯಲೆಂದು ಹೋಗಿದ್ದ ವೇಳೆ ಇಬ್ಬರು ಅಪರಿಚಿತ ವ್ಯಕ್ತಿಗಳು ಎ.ಟಿ.ಎಂ ಒಳಗೆ ಬಂದು ಅಬೂಬಕ್ಕರ್ ಅವರಿಗೆ ಸಹಾಯ ಮಾಡಲು ಮುಂದಾಗುತ್ತಾರೆ. ಅಬೂಬಕ್ಕರ್ ಅವರು ಸಹಾಯ ಅಗತ್ಯವಿಲ್ಲ ಎಂದು ಹೇಳಿದರೂ ಅಪರಿಚಿತರು ಅಲ್ಲಿ ಅವರೊಂದಿಗೆ ಇದ್ದರು ಎನ್ನಲಾಗಿದೆ. ಇದಾದ ಎರಡು ದಿನಗಳ ಬಳಿಕ ಅಬೂಬಕ್ಕರ್ ಮತ್ತೆ ಎ.ಟಿ.ಎಂ ಗೆ ಹೋದಾಗ ಎಟಿಎಂ ಕಾರ್ಡ್ ವರ್ಕ್ ಆಗುತ್ತಿರಲಿಲ್ಲ. ಬ್ಯಾಂಕಿನಲ್ಲಿ ವಿಚಾರಿಸಿದಾಗ ಖಾತೆಯಲ್ಲಿದ್ದ 49,200 ರೂ. ಎ.ಟಿ.ಎಂ ಕಾರ್ಡ್ ಬಳಸಿ ತೆಗೆದಿರುವುದು ಕಂಡು ಬಂದಿದೆ. ಅಪರಿಚಿತ ವ್ಯಕ್ತಿಗಳು ಎಟಿಎಂ ಕೇಂದ್ರದಲ್ಲಿ ಅಬೂಬಕ್ಕರ್ ಅವರಿಂದ ಎಟಿಎಂ ಕಾರ್ಡ್ ಅಪಹರಿಸಿ ಯಾವುದೋ ಹಳೆಯ ಕಾರ್ಡನ್ನು ಅವರಿಗೆ ನೀಡಿದ್ದರು. ಬಳಿಕ ಕಾರ್ಡನ್ನು ಉಪಯೋಗಿಸಿ ಹಣ ಕಬಳಿಸಿದ್ದರು. ಇದೀಗ ಬೆಳ್ತಂಗಡಿ…
ಮುಂಬೈ : ಇಂದು ಮುಂಜಾನೆ ನಿಧನರಾದ ಟಾಟಾ ಸನ್ಸ್‌ನ ಮಾಜಿ ಅಧ್ಯಕ್ಷ ರತನ್ ಟಾಟಾ ಅವರಿಗೆ ಅಂತಿಮ ನಮನ ಸಲ್ಲಿಸಲು ಸಾರ್ವಜನಿಕರಿಗೆ ವ್ಯವಸ್ಥೆ ಮಾಡುವುದಾಗಿ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಘೋಷಿಸಿದ್ದಾರೆ. ದಿವಂಗತ ರತನ್ ಟಾಟಾ ಅವರ ಪಾರ್ಥಿವ ಶರೀರವನ್ನು ಮುಂಬೈನಲ್ಲಿರುವ ನ್ಯಾಷನಲ್ ಸೆಂಟರ್ ಫಾರ್ ಪರ್ಫಾರ್ಮಿಂಗ್ ಆರ್ಟ್ಸ್ (ಎನ್‌ಸಿಪಿಎ) ಗೆ ಕೊಂಡೊಯ್ಯಲಾಗುವುದು, ಅಲ್ಲಿ ಸಾರ್ವಜನಿಕರು ನಾಳೆ ಬೆಳಿಗ್ಗೆ 10 ರಿಂದ ಸಂಜೆ 4 ರವರೆಗೆ ಶ್ರದ್ಧಾಂಜಲಿ ಸಲ್ಲಿಸಬಹುದು. ಸಾರ್ವಜನಿಕ ದರ್ಶನದ ನಂತರ ಅವರ ಪಾರ್ಥಿವ ಶರೀರವನ್ನು ಅಂತಿಮ ವಿಧಿವಿಧಾನಗಳಿಗಾಗಿ ವರ್ಲಿ ಚಿತಾಗಾರಕ್ಕೆ ಕೊಂಡೊಯ್ಯಲಾಗುವುದು. ಇಂದು ಮುಂಜಾನೆ, ರಿಲಯನ್ಸ್ ಇಂಡಸ್ಟ್ರೀಸ್ ಅಧ್ಯಕ್ಷ ಮುಖೇಶ್ ಅಂಬಾನಿ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ಭೇಟಿ ನೀಡಿ ಗೌರವ ಸಲ್ಲಿಸಿದರು. ಅಂಬಾನಿ ಅವರು ಆಳವಾದ ದುಃಖವನ್ನು ವ್ಯಕ್ತಪಡಿಸಿದ್ದಾರೆ, ಟಾಟಾ ಅವರ ವೈಯಕ್ತಿಕ ನಷ್ಟವನ್ನು ಕರೆದರು ಮತ್ತು ಅವರ ಹಲವಾರು ಸಂವಹನಗಳನ್ನು ಸ್ಫೂರ್ತಿಯ ಮೂಲವಾಗಿ ನೆನಪಿಸಿಕೊಂಡರು. ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಕೂಡ ಆಸ್ಪತ್ರೆಗೆ ಆಗಮಿಸಿ, ನಿಧನರಾದ ಕೈಗಾರಿಕೋದ್ಯಮಿಗೆ…
ಮಂಗಳೂರು: ಮಾಜಿ ಶಾಸಕ ಮೊಯಿದ್ದಿನ್ ಬಾವಾ ಸಹೋದರ, ಉದ್ಯಮಿ ಮಮ್ತಾಜ್ ಅಲಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಸಿಸಿಬಿ ಪೊಲೀಸರು ಬುಧವಾರ(ಅ9) ಮತ್ತೆ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರು ಪ್ರಕರಣ ಪ್ರಮುಖ ಮಾಸ್ಟರ್ ಮೈಂಡ್ ಎ2 ಆರೋಪಿ ಅಬ್ದುಲ್ ಸತ್ತಾರ್, ಮುಸ್ತಫಾ ಮತ್ತು ಶಾಫಿ ಎನ್ನುವವರಾಗಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಆರು ಜನರ ಮೇಲೆ ಕಾವೂರು ಠಾಣೆಯಲ್ಲಿ ಎಪ್‌ಐಆರ್ ದಾಖಲಾಗಿತ್ತು. ಪ್ರಕರಣದ ಎ1 ಆರೋಪಿಯಾಗಿರುವ ಆಯಿಷಾ ಅಲಿಯಾಸ್ ರೆಹಮತ್, ಆಕೆಯ ಪತಿ ಪ್ರಕರಣ ಎ5 ಆರೋಪಿ ಶೊಯೆಬ್ ಮತ್ತು ಸಿರಾಜ್ ನನ್ನು ಸಿಸಿಬಿ ಪೊಲೀಸರು ಈಗಾಗಲೇ ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಹಣಕ್ಕಾಗಿ ಬ್ಲ್ಯಾಕ್ ಮೇಲ್ ಮಾಡಿ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದ ಅಡಿಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.