Author: main-admin

ಕಾರ್ಕಳ : ಫೇಸ್‌ಬುಕ್‌ನಲ್ಲಿ ಬಂದ ಲಿಂಕ್ ಒಂದನ್ನು ನಂಬಿ ನಿವೃತ್ತ ಪೆನ್ಷನ್ ಕಾರ್ಡ್‌ಗಾಗಿ ಅರ್ಜಿ ಸಲ್ಲಿಸಿದ ಕಾರ್ಕಳದ ಹಿರಿಯ ನಾಗರಿಕರೊಬ್ಬರು ₹3,73,000 ಹಣ ಕಳೆದುಕೊಂಡು ಸೈಬರ್ ವಂಚನೆಗೊಳಗಾಗಿದ್ದಾರೆ. ದಿನಾಂಕ 13-07-2026 ರಂದು ಸಂಜೆ 5:30 ರ ಸುಮಾರಿಗೆ ದೂರುದಾರರ ಫೇಸ್‌ಬುಕ್ ಖಾತೆಗೆ ‘ಕೆನರಾ ರಿಟೈರ್ಡ್ ಪೆನ್ಸನ್ ಕಾರ್ಡ್’ ಹೆಸರಿನ ಖಾತೆಯಿಂದ ಲಿಂಕ್ ಬಂದಿತ್ತು. ಅದನ್ನು ತೆರೆದ ಅವರು ಕಾರ್ಡ್‌ಗಾಗಿ ಅಪ್ಲೈ ಮಾಡಿದ್ದರು. ತಕ್ಷಣವೇ +91 6744250286, 8655389531 ಸಂಖ್ಯೆಗಳಿಂದ ಕರೆ ಮಾಡಿದ ವ್ಯಕ್ತಿ, ತಾನು ‘ಬ್ಯಾಂಕಿನ ಅಸಿಸ್ಟೆಂಟ್ ಜನರಲ್ ಮ್ಯಾನೇಜರ್ (AGM)’ ಎಂದು ಪರಿಚಯಿಸಿಕೊಂಡು ಪೆನ್ಷನ್ ಕಾರ್ಡ್‌ನ ಲಾಭಗಳ ಬಗ್ಗೆ ಮಾಹಿತಿ ನೀಡಿದ್ದ. ನಂತರ ಮೊಬೈಲ್‌ಗೆ ಆ್ಯಪ್ ಕಳುಹಿಸಿ, ಪಿರ್ಯಾದುದಾರರ ಡೆಬಿಟ್ ಕಾರ್ಡ್ ನಂಬರ್, ಪಿನ್ ಹಾಗೂ ವೈಯಕ್ತಿಕ ವಿವರಗಳನ್ನು ಪಡೆದುಕೊಂಡಿದ್ದ ಸೈಬರ್ ವಂಚಕ, ಅವರ ಬ್ಯಾಂಕ್ ಖಾತೆಯಿಂದ ₹1,24,000 ಹಾಗೂ ಕ್ರೆಡಿಟ್ ಕಾರ್ಡ್‌ನಿಂದ ₹2,49,000 ಸೇರಿ ಒಟ್ಟು ₹3,73,000 ಹಣವನ್ನು ವಿವಿಧ ಖಾತೆಗಳಿಗೆ ವರ್ಗಾಯಿಸಿಕೊಂಡು ಮೋಸ ಮಾಡಿದ್ದಾನೆ.ವಂಚನೆಗೊಳಗಾಗಿರುವುದು ಗೊತ್ತಾಗುತ್ತಿದ್ದಂತೆ ಸಂತ್ರಸ್ತರು…

Read More

ಪುತ್ತೂರು: ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣದ ಎರಡನೇ ಆರೋಪಿ ಮನೀಶ್ ಗೆ ಹೈ ಕೋರ್ಟ್‌ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ ಎಂದು ತಿಳಿದು ಬಂದಿದೆ. ಹೈಕೋರ್ಟ್ ನ್ಯಾಯದೀಶರಾದ ಜಸ್ಟೀಸ್ ವಿಶ್ವಜಿತ್‌ ಶೆಟ್ಟಿ ಜಾಮೀನು ಮಂಜೂರು ಮಾಡಿದರು. ನ್ಯಾಯಾಲಯವು ತನಿಖೆಗೆ ಸಹಕರಿಸುವುದು, ಸಾಕ್ಷಿಗಳ ಮೇಲೆ ಯಾವುದೇ ಪ್ರಭಾವ ಬೀರುವಂತಿಲ್ಲ, ನ್ಯಾಯಾಲಯದ ಅನುಮತಿ ಇಲ್ಲದೆ ವ್ಯಾಪ್ತಿಯನ್ನು ತೊರೆಯಬಾರದು ಸೇರಿದಂತೆ ಹಲವು ಷರತ್ತುಗಳನ್ನು ವಿಧಿಸಿ ಜಾಮೀನು ನೀಡಿದೆ. ಪ್ರಕರಣದ ವಿಚಾರಣೆ ಮುಂದುವರಿದಿದ್ದು, ಉಳಿದ ಆರೋಪಿಗಳ ವಿರುದ್ಧದ ಕಾನೂನು ಪ್ರಕ್ರಿಯೆಯೂ ಮುಂದುವರಿಯಲಿದೆ.

Read More

ಬಂಟ್ವಾಳ : ಬರಿಮಾರ್ ಎಂಬಲ್ಲಿ ಶಾಲಾ ವಾಹನದ ಮೇಲೆ ಮರ ಬಿದ್ದು ವಿದ್ಯಾರ್ಥಿ ಮೃತಪಟ್ಟು, ಹಲವು ಮಕ್ಕಳು ಗಾಯಗೊಂಡ ಘಟನೆಗೆ ಸಂಬಂಧಿಸಿದಂತೆ ಕಲ್ಲಡ್ಕದ ‘ಶ್ರೀರಾಮ ವಿದ್ಯಾಕೇಂದ್ರ’ದ ಆಡಳಿತ ಮಂಡಳಿ ಮುಖ್ಯಸ್ಥರು ಹಾಗೂ ಇತರರ ವಿರುದ್ಧ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದಿನಾಂಕ 22 ಜುಲೈ 2026 ರಂದು ಸಂಭವಿಸಿದ ಈ ಭೀಕರ ದುರಂತಕ್ಕೆ ಸಂಬಂಧಿಸಿದಂತೆ ಆರಂಭದಲ್ಲಿ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಯು.ಡಿ.ಆರ್ (UDR) ಸಂಖ್ಯೆ 35/2026 ಕಲಂ 194 ಬಿಎನ್‌ಎಸ್‌ (BNS) ಪ್ರಕಾರ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೆತ್ತಿಕೊಳ್ಳಲಾಗಿತ್ತುಪ್ರಕರಣದ ತನಿಖೆಯನ್ನು ಮುಂದುವರಿಸಿದ ಪೊಲೀಸರು, ಪ್ರಾದೇಶಿಕ ಸಾರಿಗೆ ಅಧಿಕಾರಿಗಳಿಂದ (RTO) ಸದರಿ ಶಾಲಾ ವಾಹನದ ದಾಖಲೆ ಪತ್ರಗಳ ಮಾನ್ಯತೆಯ ಕುರಿತು ಅಧಿಕೃತ ವರದಿ ಪಡೆದಿದ್ದಾರೆ. ಈ ವೇಳೆ, ಘಟನೆ ಸಂಭವಿಸಿದ ಸಮಯದಲ್ಲಿ ವಾಹನದ ವಿಮಾ ಪತ್ರ (Insurance) ಹಾಗೂ ಅರ್ಹತಾ ಪತ್ರ (Fitness Certificate – FC) ಎರಡೂ ಚಾಲ್ತಿಯಲ್ಲಿರಲಿಲ್ಲ ಎಂಬ ಆಘಾತಕಾರಿ ಸತ್ಯ ಬೆಳಕಿಗೆ ಬಂದಿದೆ. ಅಷ್ಟೇ ಅಲ್ಲದೆ,…

Read More

ಬೆಂಗಳೂರಿನ ಲಾಲ್‌ಬಾಗ್ ರಸ್ತೆಯಲ್ಲಿರುವ ಪ್ರತಿಷ್ಠಿತ ಸಂತ ಜೋಸೆಫರ ವಿಶ್ವವಿದ್ಯಾಲಯವು ತನ್ನ ವಾರ್ಷಿಕ ಶೈಕ್ಷಣಿಕ ಪ್ರದರ್ಶನವಾದ ‘ಓಪನ್ ಡೇ 2026’ ((Open Day-2026) ಅನ್ನು ಜುಲೈ 27, ಸೋಮವಾರ 2026 ರಂದು ಬೆಳಿಗ್ಗೆ 8:00 ರಿಂದ ಸಂಜೆ 4:00 ರವರೆಗೆ ಆಯೋಜಿಸಿದೆ. ಮುಂಬರುವ ವರ್ಷಗಳಲ್ಲ್ಲಿ ಈ ವಿಶ್ವವಿದ್ಯಾಲಯವನ್ನು ಪ್ರವೇಶಿಸಲು ಬಯಸುವ ವಿದ್ಯಾರ್ಥಿಗಳು, ಅವರ ಪೋಷಕರು ಹಾಗೂ ಸಾರ್ವಜನಿಕರಿಗೆ ವಿಶ್ವವಿದ್ಯಾಲಯದ ಶೈಕ್ಷಣಿಕ ಕೊಡುಗೆಗಳು, ಸಂಶೋಧನೆ ಮತ್ತು ಕ್ಯಾಂಪಸ್ ಜೀವನವನ್ನು ಪರಿಚಯಿಸುವ ಉದ್ದೇಶದಿಂದ ಈ ಬೃಹತ್ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಇದಲ್ಲದೆ, ಶಾಲೆಗಳು, ಕಾಲೇಜುಗಳು, ಶಿಕ್ಷಣ ತಜ್ಞರು ಮತ್ತು ಕೈಗಾರಿಕಾ ವಲಯದ ನಾಯಕರನ್ನು ಒಂದೇ ವೇದಿಕೆಯಡಿ ತರುವ ಮೂಲಕ ಶೈಕ್ಷಣಿಕ ಹಾಗೂ ಉದ್ಯಮ ವಲಯದ ನಡುವೆ ಮಹತ್ವದ ಸಂವಾದವನ್ನು ಬೆಳೆಸುವ ವಿಶಿಷ್ಟ ಸಹಯೋಗದ ವೇದಿಕೆಯಾಗಿ ಈ ಕಾರ್ಯಕ್ರಮ ರೂಪುಗೊಳ್ಳಲಿದೆ. ಈ ಬಾರಿಯ ’ಓಪನ್ ಡೇ 2026’ ಕಾರ್ಯಕ್ರಮದಲ್ಲಿ ಪ್ರಾಂಶುಪಾಲರ ಸಮಾವೇಶ (Principal conclave), ಟೆಡ್‌ಎಕ್ಸ್ (TEDx) ವಿದ್ಯಾರ್ಥಿ ಭಾಷಣಗಳು, ಪ್ರೌಢಶಾಲಾ ವಿದ್ಯಾರ್ಥಿಗಳ ವಸ್ತುಪ್ರದರ್ಶನ ಮತ್ತು ಮೌಲ್ಯಮಾಪನ, ವಿದ್ಯಾರ್ಥಿ…

Read More

ನವದೆಹಲಿ: ದೇಶಾದ್ಯಂತ ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿದ್ಯಾರ್ಥಿಗಳ ಪ್ರತಿಭಟನೆ ತೀವ್ರಗೊಂಡಿರುವ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಬೆಳವಣಿಗೆ ರಾಷ್ಟ್ರ ರಾಜಕಾರಣದಲ್ಲಿ ಮಹತ್ವದ ಚರ್ಚೆಗೆ ಕಾರಣವಾಗಿದೆ. ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ನೈತಿಕ ಹೊಣೆ ಹೊತ್ತು ಅವರು ರಾಜೀನಾಮೆ ಸಲ್ಲಿಸಿದ್ದಾರೆ ಎಂದು ವರದಿಯಾಗಿದೆ. ವಿದ್ಯಾರ್ಥಿ ಸಂಘಟನೆಗಳು ಮತ್ತು ವಿವಿಧ ರಾಜಕೀಯ ಪಕ್ಷಗಳು ಈ ಕ್ರಮವನ್ನು ಸ್ವಾಗತಿಸಿದ್ದು, ಪ್ರಕರಣದ ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿವೆ.

Read More

ಮಂಗಳೂರು: ದ್ವಿಚಕ್ರ ವಾಹನದಲ್ಲಿ ಬಂದು ಏಕಾಏಕಿ ಯುವಕನ ಮೇಲೆ ಮಾರಕಾಸ್ತ್ರಗಳಿಂದ ದಾಳಿ ನಡೆಸಿರುವ ಘಟನೆ ಮಂಗಳೂರು ನಗರದ ಲಾಲ್ ಭಾಗ್ ಬಳಿ ನಡೆದಿದೆ. ವಿಖ್ಯಾತ್ ಯಾನೆ ವಿಕ್ಕಿ ಬಪ್ಪಲ್ ಕೊಲೆ ಯತ್ನಕ್ಕೆ ಒಳಗಾದ ಯವಕ. ಬೆನ್ನಿನ ಹಿಂಭಾಗಕ್ಕೆ ದಾಳಿ ನಡೆಸಿ ಬೈಕ್ ನಲ್ಲಿ ಬಂದಿದ್ದ ಯುವಕ ಪರಾರಿಯಾಗಿದ್ದಾನೆ. ಸದ್ಯ ಗಾಯಾಳುವಿಗೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಜನನಿಬಿಡ ಜಾಗದಲ್ಲೇ ಒಬ್ಬಂಟಿಯಾಗಿ ಬಂದು ಅಪರಿಚಿತ ದಾಳಿ ನಡೆಸಿದ್ದಾನೆ. ಬರ್ಕೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ

Read More

ಕರ್ನಾಟಕದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ನಕಲಿ ಹಾಗೂ ಅಮಾನ್ಯ ಪಿಎಚ್‌ಡಿ (PhD) ಪ್ರಮಾಣಪತ್ರಗಳನ್ನು ನೀಡಿ ಉದ್ಯೋಗ ಗಿಟ್ಟಿಸಿಕೊಂಡಿದ್ದ ಬೃಹತ್ ನೇಮಕಾತಿ ಅಕ್ರಮವನ್ನು ಕಾಲೇಜು ಶಿಕ್ಷಣ ಇಲಾಖೆ ಬಯಲಿಗೆಳೆದಿದೆ. ವಿಶ್ವವಿದ್ಯಾಲಯಗಳ ತನಿಖೆಯಿಂದ ಈ ಅಕ್ರಮ ದೃಢಪಟ್ಟಿದ್ದು, ಅಕ್ರಮ ಎಸಗಿದ ಒಟ್ಟು 249 ಅತಿಥಿ ಉಪನ್ಯಾಸಕರನ್ನು ತಕ್ಷಣವೇ ಸೇವೆಯಿಂದ ವಜಾಗೊಳಿಸಲು, ಭವಿಷ್ಯದ ನೇಮಕಾತಿಗಳಿಂದ ಖಾಯಂ ಆಗಿ ಬ್ಲ್ಯಾಕ್‌ಲಿಸ್ಟ್ (ಕಪ್ಪುಪಟ್ಟಿ) ಮಾಡಲು ಹಾಗೂ ಅವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲು ಸರ್ಕಾರ ಆದೇಶಿಸಿದೆ. ವಿಶ್ವವಿದ್ಯಾಲಯಗಳ ಪರಿಶೀಲನೆಯಲ್ಲಿ ಅಕ್ರಮ ಬಯಲು: 2025-26ನೇ ಶೈಕ್ಷಣಿಕ ಸಾಲಿನ ನೇಮಕಾತಿ ಪ್ರಕ್ರಿಯೆಯಲ್ಲಿ ರಾಜ್ಯದ ಸರ್ಕಾರಿ ಪದವಿ ಕಾಲೇಜುಗಳ ಸುಮಾರು 10,000 ಅತಿಥಿ ಉಪನ್ಯಾಸಕರ ಹುದ್ದೆಗಳಿಗೆ ಆನ್‌ಲೈನ್ ಕೌನ್ಸಿಲಿಂಗ್ ಮೂಲಕ ಈ ಉಪನ್ಯಾಸಕರನ್ನು ನೇಮಕ ಮಾಡಿಕೊಳ್ಳಲಾಗಿತ್ತು. ಸರ್ಕಾರ ಜಾರಿಗೆ ತಂದ ಪರಿಶೀಲನಾ ಪ್ರಕ್ರಿಯೆಯ ಭಾಗವಾಗಿ, ಆಯ್ಕೆಯಾದ ಅಭ್ಯರ್ಥಿಗಳ ಸ್ನಾತಕೋತ್ತರ ಪದವಿ, ನೆಟ್ (NET), ಕೆ-ಸೆಟ್ (K-SET), ಎಂ.ಫಿಲ್ ಹಾಗೂ ಪಿಎಚ್‌ಡಿ ಪ್ರಮಾಣಪತ್ರಗಳನ್ನು ಸತ್ಯಾಸತ್ಯತೆ ತನಿಖೆಗಾಗಿ ಆಯಾ ವಿಶ್ವವಿದ್ಯಾಲಯಗಳಿಗೆ ಕಳುಹಿಸುವಂತೆ ಕಾಲೇಜು ಪ್ರಾಂಶುಪಾಲರಿಗೆ…

Read More

ದೇಶಾದ್ಯಂತ ತೀವ್ರ ಸಂಚಲನ ಮೂಡಿಸಿರುವ ನೀಟ್ (NEET) ಪರೀಕ್ಷೆಯ ಅಕ್ರಮವನ್ನು ಖಂಡಿಸಿ ದೆಹಲಿಯ ಐತಿಹಾಸಿಕ ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಬೃಹತ್ ಪ್ರತಿಭಟನೆಯಲ್ಲಿ ಶಾಕಿಂಗ್ ವಿಚಾರವೊಂದು ಹೊರಬಿದ್ದಿದೆ. ವಿದ್ಯಾರ್ಥಿಗಳು ಮತ್ತು ಸಂಘಟನೆಗಳು ನಡೆಸುತ್ತಿರುವ ಈ ಸುದೀರ್ಘ ಪ್ರತಿಭಟನಾ ಸ್ಥಳದಲ್ಲಿ ಬರೋಬ್ಬರಿ 2,500ಕ್ಕೂ ಹೆಚ್ಚು ಅಪರಾಧ ಹಿನ್ನೆಲೆ ಉಳ್ಳ ವ್ಯಕ್ತಿಗಳು ಭಾಗಿಯಾಗಿರುವುದು ಪತ್ತೆಯಾಗಿದೆ. ಪ್ರತಿಭಟನಾಕಾರರ ಸಾಲಿನಲ್ಲಿ ನುಸುಳಿರುವ ಈ ಕಿಡಿಗೇಡಿಗಳು ಸಾರ್ವಜನಿಕ ಶಾಂತಿ ಕದಡಲು ಯತ್ನಿಸುತ್ತಿದ್ದು, ಸ್ಥಳದಲ್ಲಿದ್ದ ಪೊಲೀಸರನ್ನೇ ಪ್ರಮುಖ ಗುರಿಯಾಗಿಸಿಕೊಂಡು ದಾಳಿ ನಡೆಸಿದ್ದಾರೆ. ಪ್ರತಿಭಟನೆಯ ಮರೆಯಲ್ಲಿ ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆ ತರಲು ಯತ್ನಿಸಿದ ಕಿಡಿಗೇಡಿಗಳ ವಿರುದ್ಧ ದೆಹಲಿ ಪೊಲೀಸರು ಕಠಿಣ ಕ್ರಮಕ್ಕೆ ಮುಂದಾಗಿದ್ದಾರೆ. ಪೊಲೀಸರ ಮೇಲೆ ಹಲ್ಲೆ ಹಾಗೂ ಸಾರ್ವಜನಿಕ ಆಸ್ತಿಗೆ ಹಾನಿ ಮಾಡಲು ಯತ್ನಿಸಿದ ಪ್ರಕರಣಗಳಿಗೆ ಸಂಬಂಧಿಸಿದಂತೆ ಇದುವರೆಗೆ ಒಟ್ಟು 15 ಎಫ್‌ಐಆರ್ (FIR) ರಸ್ತೆಗಳನ್ನು ದಾಖಲಿಸಲಾಗಿದೆ. ಸ್ಥಳದಲ್ಲಿದ್ದ ಕೆಲ ಆಂಟಿ-ಸೋಷಿಯಲ್ ಎಲಿಮೆಂಟ್‌ಗಳು ಸಮಾಜಘಾತುಕ ಕೃತ್ಯಗಳಿಗೆ ಪ್ರಚೋದನೆ ನೀಡುತ್ತಿರುವುದು ದೃಢಪಟ್ಟ ಹಿನ್ನೆಲೆಯಲ್ಲಿ, ಪರಿಸ್ಥಿತಿಯನ್ನು ಹತೋಟಿಗೆ ತರಲು ಭದ್ರತೆಯನ್ನು ತೀವ್ರಗೊಳಿಸಲಾಗಿದೆ. ಪ್ರತಿಭಟನಾ…

Read More

ಚಿಕ್ಕಮಗಳೂರು : ಜಿಲ್ಲೆಯ ಮೂಡಿಗೆರೆ ತಾಲೂಕಿನ ನೂತನ ಲೇಔಟ್ ಪ್ರದೇಶದಲ್ಲಿ ನಕಲಿ ನೋಟುಗಳನ್ನು ಚಲಾವಣೆ ಮಾಡಲು ಯತ್ನಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಮೂಡಿಗೆರೆ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಬಂಧಿತರಿಂದ 200 ರೂಪಾಯಿ ಮುಖಬೆಲೆಯ ಒಟ್ಟು 18,000 ರೂಪಾಯಿ ಮೌಲ್ಯದ ಖೋಟಾ ನೋಟುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಬಂಧಿತ ಆರೋಪಿಗಳನ್ನು ಮಂಗಳೂರು ಮೂಲದ ಮಹಮದ್ ಅಲಿ ಹಾಗೂ ಮೂಡಿಗೆರೆಯ ಸ್ಥಳೀಯ ನಿವಾಸಿ ಮಹೇಶ್ ಎಂದು ಗುರುತಿಸಲಾಗಿದೆ. ಮಂಗಳೂರಿನಿಂದ ನಕಲಿ ನೋಟುಗಳನ್ನು ತರುತ್ತಿದ್ದ ಮಹಮದ್ ಅಲಿ, ಇಲ್ಲಿನ ಮಹೇಶ್ ಜೊತೆಗೂಡಿ ಮೂಡಿಗೆರೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮಾರಾಟ ಹಾಗೂ ಚಲಾವಣೆಗೆ ಪ್ಲಾನ್ ಮಾಡಿದ್ದ. ಈ ಕುರಿತು ಖಚಿತ ಮಾಹಿತಿ ಪಡೆದ ಮೂಡಿಗೆರೆ ಪೊಲೀಸರು ತಕ್ಷಣ ದಾಳಿ ನಡೆಸಿ ಇಬ್ಬರನ್ನೂ ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ವಶಪಡಿಸಿಕೊಂಡ ನೋಟುಗಳನ್ನು ಪರಿಶೀಲಿಸಿದಾಗ ಆರೋಪಿಗಳ ಬಳಿ 200 ರೂಪಾಯಿ ಮುಖಬೆಲೆಯ ಒಟ್ಟು 45 ನಕಲಿ ನೋಟುಗಳು ಪತ್ತೆಯಾಗಿವೆ. ಈ ನಕಲಿ ನೋಟುಗಳ ಮೇಲೆ “ಭಾರತೀಯ ರಿಸರ್ವ್ ಬ್ಯಾಂಕ್” (Reserve Bank of India) ಎಂದು ಮುದ್ರಿಸುವ ಬದಲಾಗಿ “ಬಿಸರ್ವ್…

Read More

ಮಂಗಳೂರು : ಅತ್ಯಾಧುನಿಕ ಹಾಗೂ ಕೈಗೆಟುಕುವ ಆರೋಗ್ಯ ಸೇವೆಯನ್ನು ಜನಸಾಮಾನ್ಯರಿಗೆ ತಲುಪಿಸುವ ಉದ್ದೇಶದೊಂದಿಗೆ ಮಂಗಳೂರಿನಲ್ಲಿ ಕಾರ್ಯನಿರ್ವಹಿಸುತ್ತಿರುವ ಆರ್‌ವಿಆರ್ ಹೆಲ್ತ್‌ಕೇರ್ ಸಂಸ್ಥೆಯು ನೆರೆ ರಾಜ್ಯವಾದ ಕೇರಳದ ಕಾಸರಗೋಡಿನಲ್ಲಿ ಆರ್‌ವಿಆರ್ ನ್ಯೂರೋ-ಆಂಕಾಲಜಿ ಕೇಂದ್ರವನ್ನು ಆರಂಭಿಸುವುದಲ್ಲದೆ ಮತ್ತು ತನ್ನ ಪ್ರಮುಖ ಸಮುದಾಯ ಆರೋಗ್ಯ ಕಾರ್ಯಕ್ರಮವಾದ ‘ಆರೋಗ್ಯ ಬೈ ಆರ್‌ವಿಆರ್’ ಅನ್ನು ದೇಶದಾದ್ಯಂತ ವಿಸ್ತರಿಸುವುದಾಗಿ ಘೋಷಿಸಿದೆ. ಮಂಗಳೂರು ನಗರದ ದಿ ಓಶನ್ ಪರ್ಲ್ ಹೋಟೆಲ್‌ನಲ್ಲಿ ಶುಕ್ರವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಈ ಮಹತ್ವದ ಘೋಷಣೆ ಮಾಡಲಾಯಿತು. ಸಮಾಜಮುಖಿ ಆರೋಗ್ಯ ಸೇವೆಯ ಧ್ಯೇಯ2026ರ ಏಪ್ರಿಲ್ 24ರಂದು ಮಂಗಳೂರಿನಲ್ಲಿ ಕಾರ್ಯಾರಂಭ ಮಾಡಿದ ಆರ್‌ವಿಆರ್ ಹೆಲ್ತ್‌ಕೇರ್, ಅತ್ಯಾಧುನಿಕ ವೈದ್ಯಕೀಯ ಸೌಲಭ್ಯಗಳನ್ನು ಒಳಗೊಂಡ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಾಗಿ ಆರೋಗ್ಯ ಕ್ಷೇತ್ರದಲ್ಲಿ ಹೊಸ ಅಧ್ಯಾಯ ಆರಂಭಿಸಿದೆ. ರೋಗಿಯ ಆರ್ಥಿಕ ಸ್ಥಿತಿಯನ್ನು ಲೆಕ್ಕಿಸದೆ, ಪ್ರತಿಯೊಬ್ಬರಿಗೂ ವಿಶ್ವಮಟ್ಟದ,ಉತ್ತಮ ಗುಣಮಟ್ಟದ ಹಾಗೂ ಕೈಗೆಟುಕುವ ಆರೋಗ್ಯ ಸೇವೆಯನ್ನು ಒದಗಿಸಬೇಕು ಎಂಬ ಉದ್ದೇಶದೊಂದಿಗೆ ಆಸ್ಪತ್ರೆ ತನ್ನ ಸೇವೆಯನ್ನು ಸಮರ್ಪಿಸಿಕೊಂಡಿದೆ. ಅತ್ಯುತ್ತಮ ವೈದ್ಯರು, ನವೀಕೃತ ತಂತ್ರಜ್ಞಾನ ಮತ್ತು ರೋಗಿಕೇಂದ್ರಿತ ಚಿಕಿತ್ಸಾ ವ್ಯವಸ್ಥೆಯ ಮೂಲಕ ಸಮಗ್ರ…

Read More