ಮಂಗಳೂರು: ಕಂಬಳ ಕ್ರೀಡೆ ಮತ್ತು ಕಲೆಗೆ ಜಾತಿ-ಧರ್ಮದ ಬೇಲಿ ಇಲ್ಲ. ಇದು ಸರ್ವರ ಸಂಭ್ರಮ. ನಮ್ಮ ದೇಶ ಬಹುತ್ವದ ದೇಶ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಣ್ಣಿಸಿದರು. ಉಳ್ಳಾಲ ನರಿಂಗಾನದ ಮೂರನೇ ವರ್ಷದ ಲವ-ಕುಶ ಜೋಡುಕೆರೆ ಕಂಬಳೋತ್ಸವವನ್ನು ಉದ್ಘಾಟಿಸಿ ಮಾತನಾಡಿದ ಅವರು, ಜನಪದ ಕ್ರೀಡೆ ಕಂಬಳ ಸರ್ವ ಜಾತಿ ಧರ್ಮದ ಜನಸಮುದಾಯವನ್ನು ಬೆಸೆಯುವಂತೆ ಮಾಡುತ್ತಿದೆ ಎಂದರು. ವಿವಿಧತೆಯಲ್ಲಿ ಏಕತೆಯನ್ನು ಕಾಣುವ ಭಾರತ ಸಂಸ್ಕೃತಿಯ ಒಂದು ಭಾಗ ಕರಾವಳಿ ಜಿಲ್ಲೆಗಳ ಸಂಸ್ಕೃತಿಯಾಗಿದೆ. ನಮ್ಮ ಸರ್ಕಾರ ಕೂಡ ಎಲ್ಲಾ ಜಾತಿ, ಎಲ್ಲಾ ಧರ್ಮದ ಪರವಾಗಿ ಕಾರ್ಯಕ್ರಮಗಳನ್ನು ರೂಪಿಸುತ್ತಿದೆ. ಮಹಿಳೆಯರಿಗೆ ಆರ್ಥಿಕ ಶಕ್ತಿ ಕೊಡುವ ಮೂಲಕ ಕುಟುಂಬಗಳ ಮತ್ತು ಮಹಿಳಾ ಸಮಾಜದ ಆರ್ಥಿಕ ಶಕ್ತಿಯನ್ನು ಹೆಚ್ಚಿಸುವ ಕಾರ್ಯಕ್ರಮಗಳನ್ನು ಇಡೀ ದೇಶದಲ್ಲಿ ಮೊದಲಿಗೆ ಕೊಟ್ಟಿದ್ದು ನಮ್ಮ ಸರ್ಕಾರ. ಆಶಾ ಕಾರ್ಯಕರ್ತೆಯರ ಬೇಡಿಕೆ ಈಡೇರಿಸಿ ಅವರು ಪ್ರತಿಭಟನೆ ಹಿಂತೆಗೆದುಕೊಳ್ಳುವಂತೆ ಮಾಡಿದ್ದು ನಮ್ಮ ಸರ್ಕಾರ. ಆಶಾ ಕಾರ್ಯಕರ್ತೆಯರಿಗೆ ತಿಂಗಳಿಗೆ 10 ಸಾವಿರ ಸಿಗುವಂತೆ ಮಾಡುವ ಜವಾಬ್ದಾರಿಯನ್ನು ನಮ್ಮ ಸರ್ಕಾರ ವಹಿಸಿಕೊಂಡಿದೆ ಎಂದು…
Author: main-admin
ಮಂಗಳೂರು: ಪಾರ್ಟಿಗೆ ಆಗಮಿಸಿದ್ದ ಯುವತಿಗೆ ಪ್ರಜ್ಞೆ ತಪ್ಪುವ ಪದಾರ್ಥ ಬೆರೆಸಿದ್ದ ವೈನ್ ನೀಡಿ ಅತ್ಯಾಚಾರ ಎಸಗಿರುವ ಅಪರಾಧಿಗೆ ಮಂಗಳೂರಿನ ಆರನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ 10 ವರ್ಷ ಕಠಿನ ಶಿಕ್ಷೆ ಮತ್ತು 5ಸಾವಿರ ರೂ. ದಂಡ ವಿಧಿಸಿ ಆದೇಶಿಸಿದೆ. ಹಂಪನಕಟ್ಟೆ ಲೈಟ್‌ಹೌಸ್‌ಹಿಲ್ ರೋಡ್ ನಿವಾಸಿ ಬ್ರಯಾನ್ ರಿಚರ್ಡ್ ಅಮನ್ನಾ (34) ಶಿಕ್ಷೆಗೊಳಗಾದ ಅಪರಾಧಿ ಸಂತ್ರಸ್ತ ಯುವತಿ ಬ್ಯಾಂಕ್ ಉದ್ಯೋಗಿಯಾಗಿದ್ದು, ಆಕೆಗೆ ನೌಕಾಪಡೆಯಲ್ಲಿ ಕೆಲಸ ಮಾಡುತ್ತಿದ್ದ ಜಾಯ್‌ಲಿನ್ ಗ್ಲಾನೆಲ್ ಪಿಂಟೋ ಎಂಬಾತ ಪರಿಚಿತನಾಗಿದ್ದ. ಆತನಿಗೆ ಅಂಡಮಾನ್‌ಗೆ ವರ್ಗಾವಣೆಯಾದ ಹಿನ್ನೆಲೆಯಲ್ಲಿ 2021ರ ಫೆ.5ರಂದು ಸ್ನೇಹಿತರಿಗಾಗಿ ಪುತ್ತೂರಿನ ಕೊಡಿಪ್ಪಾಡಿ ಗ್ರಾಮದ ಕೊಡಿಕಾಡು ಎಂಬಲ್ಲಿನ ಮನೆಯೊಂದರಲ್ಲಿ ಪಾರ್ಟಿ ಆಯೋಜಿಸಲಾಗಿತ್ತು. ಈ ಪಾರ್ಟಿಯಲ್ಲಿ ಯುವತಿಯೂ ಭಾಗವಹಿಸಿದ್ದರು. ಈ ಪಾರ್ಟಿಗೆ ಕ್ಯಾಟರಿಂಗ್ ಸರಬರಾಜಿನ ವ್ಯವಸ್ಥೆ ಮಾಡಿದ್ದ ಬ್ರಯಾನ್ ಅಮನ್ನಾ ಯುವತಿಗೆ ತನ್ನನ್ನು ಜಾಯಿಲಿನ್ ಸ್ನೇಹಿತ ಎಂದು ಪರಿಚಯಿಸಿಕೊಂಡಿದ್ದ. ಬಳಿಕ ವೈನ್‌ಗೆ ಪ್ರಜ್ಞೆ ತಪ್ಪುವ ಅಮಲು ಪದಾರ್ಥವನ್ನು ಬೆರೆಸಿ ಅದನ್ನು ಯುವತಿಗೆ ಒತ್ತಾಯಪಡಿಸಿ ನೀಡಿದ್ದ. ಬಳಿಕ ಯುವತಿ ಕೊಠಡಿಗೆ…
ಪುತ್ತೂರು: ಹಾಡುಹಗಲೇ ಮನೆಯೊಳಗೆ ನುಗ್ಗಿ ಚಿನ್ನಾಭರಣ ಕಳವುಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳ್ಳತನಕ್ಕೆ ಬಳಸಿದ ಕಾರು ಸಮೇತ ಪ್ರಮುಖ ಆರೋಪಿ ಯನ್ನು ಪೊಲೀಸರು ಬಂಧಿಸಿ, ಚಿನ್ನಾಭರಣ ಸಮೇತ ರೂ. 21 ಲಕ್ಷ ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಂಡ ಘಟನೆ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಪ್ರಕರಣದ ಪ್ರಮುಖ ಆರೋಪಿಯನ್ನು ಅಂತರಾಜ್ಯ ಮನೆ ಕಳ್ಳತನದ ಪ್ರಮುಖ ಆರೋಪಿ ಕೇರಳ ಮೂಲದ ಸೂರಜ್ ಕೆ ಎಂದು ಗುರುತಿಸಲಾಗಿದೆ. ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಸರ್ವೆ ಭಕ್ತಕೋಡಿ ಎಂಬಲ್ಲಿ ಡಿಸೆಂಬರ್ 20 ರಂದು ಹಾಡುಹಗಲೇ ಮನೆಯೊಂದರಲ್ಲಿ ಕಳ್ಳತನ ನಡೆದಿದ್ದು, ಮನೆಯಲ್ಲಿ ಯಾರು ಇಲ್ಲದ ವೇಳೆ ಮನೆಯ ಹಿಂಬಾಗಿಲನ್ನು ಕಾಲಿನಿಂದ ಒದ್ದು ಬಾಗಿಲು ಮುರಿದು ಮನೆಯ ಒಳಗಿದ್ದ ಗೋಡ್ರೆಜನ್ನು ಮೀಟಿ ಚಿನ್ನಾಭರಣವನ್ನು ಕಳವು ಗೈದ ಬಗ್ಗೆ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿತ್ತು. ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಹಲವು ಕಡೆ ಕಳ್ಳತನ ಆಗುತ್ತಿದ್ದು, ಜಿಲ್ಲಾ ಪೊಲೀಸ್ ಅಧೀಕ್ಷಕರ ಸೂಚನೆಯಂತೆ ಜಂಟಿ ಕಾರ್ಯಾಚರಣೆ ನಡೆಸಿ…
ಉಡುಪಿ: ಟ್ರಕ್ ಒಂದು ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸಾವನಪ್ಪಿ, ಬಳಿಕ ಟ್ರಕ್ ಬೆಂಕಿಗಾಹುತಿಯಾದ ಘಟನೆ ಉದ್ಯಾವರ ಗುಡ್ಡೆಅಂಗಡಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಇಂದು ನಸುಕಿನ ವೇಳೆ ಸಂಭವಿಸಿದೆ. ಮೃತರನ್ನು ಬೈಕ್ ಸವಾರ ಕೊರಂಗ್ರಪಾಡಿ ನಿವಾಸಿ ಅವಿನಾಶ್ ಆಚಾರ್ಯ( 19) ಎಂದು ಗುರುತಿಸಲಾಗಿದೆ. ಗುಜರಾತ್ ಕಡೆಯಿಂದ ಕೇರಳ ಕಡೆಗೆ ಬರುತ್ತಿದ್ದ ಈಚರ್ ಲಾರಿ ಎದುರಿನಲ್ಲಿ ಹೋಗುತ್ತಿದ್ದ ಬೈಕಿಗೆ ಡಿಕ್ಕಿ ಹೊಡೆಯಿತ್ತೆನ್ನಲಾಗಿದೆ. ಇದರಿಂದ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ಸವಾರ ಅವಿನಾಶ್ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟರು ಎಂದು ತಿಳಿದುಬಂದಿದೆ. ಅಪಘಾತದ ವೇಳೆ ಬೈಕ್ ನ್ನು ಲಾರಿ ಎಳೆದುಕೊಂಡ ಹೋದ ಪರಿಣಾಮ ಬೆಂಕಿ ಕಾಣಿಸಿಕೊಂಡಿದ್ದು, ಬೆಂಕಿ ಲಾರಿಗೆ ಹಬ್ಬಿ ಲಾರಿ ಹಾಗೂ ಬೈಕ್ ಎರಡೂ ಸುಟ್ಟು ಕರಕಲಾಗಿವೆ.ಸ್ಥಳಕ್ಕೆ ಉಡುಪಿ ಸಂಚಾರ ಪೋಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.
ಕಟಪಾಡಿ: ದ್ವಿ ಚಕ್ರ ವಾಹನ ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಗಂಭೀರ ಗಾಯಗೊಂಡಿರುವ ಘಟನೆ ಜ.10ರ ಶುಕ್ರವಾರ ತಡರಾತ್ರಿ ಉದ್ಯಾವರ ಬಲೈ ಪಾದೆ ಬಳಿಯ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸಂಭವಿಸಿದೆ. ಉಡುಪಿಯ ಪ್ಯಾರಾ ಮೆಡಿಕಲ್ ವಿದ್ಯಾರ್ಥಿ, ಬೈಕ್ ಸವಾರ ಪಣಿಯೂರು ನಿವಾಸಿ, ಆನಂದ ಆಚಾರ್ಯ ಅವರ ಪುತ್ರ ಅವಿನಾಶ್ ಆಚಾರ್ಯ (18) ಗಂಭೀರ ಗಾಯಗೊಂಡ ಯುವಕ. ಅಪಘಾತದ ಸಂದರ್ಭ ಲಾರಿಯ ಅಡಿಭಾಗದಲ್ಲಿ ಬೈಕ್ ಸಿಲುಕಿಕೊಂಡಿದ್ದು ಈ ವೇಳೆ ಬೈಕಿಗೆ ಬೆಂಕಿ ಹೊತ್ತಿಕೊಂಡ ಪರಿಣಾಮ ಬೈಕ್ ಹಾಗೂ ಲಾರಿ ಬೆಂಕಿಗಾಹುತಿಯಾಗಿದೆ.
ಪಶ್ಚಿಮ ಘಟ್ಟಗಳಲ್ಲಿ ಎರಡು ದಶಕದಿಂದ ಬೇರೂರಿದ್ದ 6 ನಕ್ಸಲರು ಸರ್ಕಾರದ ಮುಂದೆ ಶರಣಾಗಿದ್ದಾರೆ. ಶರಣಾದ ಎಲ್ಲರು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಗಾಗಿದ್ದಾರೆ. ಶರಣಾದ ಒಂದೇ ದಿನದಲ್ಲಿ ಮೂರು ಲಕ್ಷ ಪ್ಯಾಕೇಜ್ ಜಿಲ್ಲಾಧಿಕಾರಿ ಖಾತೆಗೆ ವರ್ಗಾವಣೆ ಆಗಿದೆ. ಮತ್ತೊಂದು ಕಡೆ ಎನ್ಐಎ ತನಿಖೆಗೆ ಆಗ್ರಹಿಸಿ ಕೇಂದ್ರ ಗೃಹ ಇಲಾಖೆಗೆ ಬಿಜೆಪಿ ಮೊರೆ ಹೋಗುತ್ತಿದೆ. ಶರಣಾಗತಿ ನಂತರ ನ್ಯಾಯದ ಪ್ರಕ್ರಿಯೆ ಶುರುವಾಗಿದೆ. 6 ಜನ ನಕ್ಸಲರನ್ನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆ ನಡೆಸಿ ನಂತರ ಎನ್‌ಐಎ ವಿಶೇಷ ಕೋರ್ಟ್ಗೆ ಹಾಜರುಪಡಿಸಿದರು. ವಿಚಾರಣೆ ನಡೆಸಿದ ನ್ಯಾಯಾಧೀಶರು 6 ನಕ್ಸಲರಿಗೆ ನ್ಯಾಯಾಂಗ ಬಂಧನಕ್ಕೆ ಆದೇಶಿಸಿದರು. ಒಟ್ಟು 14 ದಿನಗಳ ಕಾಲ ಅಂದ್ರೆ ಜನವರಿ 30ರ ವರೆಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ನ್ಯಾಯಾಂಗ ಬಂಧನ ಬೆನ್ನಲ್ಲೆ ನಕ್ಸಲರನ್ನು ಪರಪ್ಪನ ಅಗ್ರಹಾರ ಜೈಲಿಗೆ ಶಿಫ್ಟ್ ಮಾಡಲಾಗಿದೆ. ಇದೆಲ್ಲದರ ನಡುವೆ ಈಗ ನಕ್ಸಲರ ಗನ್ ಗಳು ಪತ್ತೆಯಾಗಿವೆ. ಕಿತ್ತಲೇಗಂಡಿ ಕಾಡಿನಲ್ಲಿ 5 ಗನ್ಗಳು ಪತ್ತೆಯಾಗಿವೆ. ಎಕೆ 47, 303ಕೋವಿ, ಒಂದು…
ಮಂಗಳೂರು : ಸರ್ಕಾರಿ ಆಸ್ಪತ್ರೆ ವೆನ್ಲಾಕ್ನಲ್ಲಿ 176 ವರ್ಷಗಳ ಇತಿಹಾಸದಲ್ಲಿ ಇಂದು ಮೊದಲ ಬಾರಿಗೆ ಅಂಗಾಂಗ ದಾನ ನಡೆದಿದ್ದು, ಮೆದುಳು ನಿಷ್ಕ್ರಿಯವಾದ ಮಹಿಳೆಯ ಎರಡು ಕಣ್ಣು ಮತ್ತು ಲಿವರ್ ದಾನ ಪ್ರಕ್ರಿಯೆ ನಡೆಯಿತು. ಶಿವಮೊಗ್ಗ ರಾಗಿಗುಡ್ಡೆಯ ರೇಖಾ (41) ಮನೆಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಅಸ್ವಸ್ಥಗೊಂಡಿದ್ದ ಅವರನ್ನು ಶಿವಮೊಗ್ಗ ಆಸ್ಪತ್ರೆಗೆ ದಾಖಲಿಸಿ, ನಂತರ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ವೆನ್ಸಾಕ್ ಆಸ್ಪತ್ರೆಗೆ ಜನವರಿ 6 ರಂದು ಕರೆತರಲಾಗಿತ್ತು. ಆದರೆ ಆಸ್ಪತ್ರೆಗೆ ದಾಖಲಾದ ರೇಖಾ ಅವರ ಮೆದುಳು ನಿಷ್ಕ್ರಿಯವಾಗಿದ್ದರಿಂದ ಆಸ್ಪತ್ರೆಯ ವೈದ್ಯರು ಅಂಗಾಂಗ ದಾನದ ಸಲಹೆ ನೀಡಿದ್ದು, ಅದಕ್ಕೆ ಕುಟುಂಬಸ್ಥರು ಒಪ್ಪಿಗೆ ಸೂಚಿಸಿದ್ದರು. ರೇಖಾ ಅವರ ಕಣ್ಣು ಮತ್ತು ಲಿವರ್ ತೆಗೆದು ದಾನ ಪ್ರಕ್ರಿಯೆ ನಡೆಸಲಾಯಿತು. ಎರಡು ಕಣ್ಣನ್ನು ಮಂಗಳೂರಿನ ಕೆಎಂಸಿ ಆಸ್ಪತ್ರೆಗೆ ಕಳುಹಿಸಲಾಗಿದ್ದು, ಲಿವರ್ ಅನ್ನು ಮೈಸೂರಿನ ಬಿಜಿಎಸ್ ಅಪೋಲೋ ಆಸ್ಪತ್ರೆಗೆ ಕಳುಹಿಸಲಾಯಿತು. ಈ ಮೂಲಕ ಮೃತ ಮಹಿಳೆ ರೇಖಾ ಮೂರು ಮಂದಿಯ ಬಾಳಿಗೆ ಬೆಳಕಾದರು. ಈ ಬಗ್ಗೆ ಮಾತನಾಡಿದ ವೆನ್ಲಾಕ್ ಆಸ್ಪತ್ರೆಯ…
ಕಾಪು: ಕಾರು ಢಿಕ್ಕಿ ಹೊಡೆದು ಪಾದಚಾರಿಗೆ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಉಚ್ಚಿಲ ರಿಕ್ಷಾ ನಿಲ್ದಾಣದ ಬಳಿ ಜ.10ರಂದು ನಡೆದಿದೆ. ಮೃತರನ್ನು ಕುಂಜೂರು ನಿವಾಸಿ ಶ್ರೀನಿವಾಸ ತೋಣಿತ್ತಾಯ (72) ಎಂದು ಗುರುತಿಸಲಾಗಿದೆ.ಶ್ರೀನಿವಾಸ ತೋಣಿತ್ತಾಯ ಅವರು ಶುಕ್ರವಾರ (ಜ.10ರ) ಬೆಳಿಗ್ಗೆ ಮನೆಯಿಂದ ಉಚ್ಚಿಲಕ್ಕೆ ಬಂದು ರಸ್ತೆ ದಾಟುತ್ತಿದ್ದ ವೇಳೆ ಉಡುಪಿಯಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಕಾರು ಢಿಕ್ಕಿ ಹೊಡೆದ ಪರಿಣಾಮ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಪುತ್ತೂರು ನರಿಮೊಗರು ಕೂಡುರಸ್ತೆಯಲ್ಲಿ ಕಾಲೇಜು ವಿದ್ಯಾರ್ಥಿನಿಯೊಬ್ಬಳು ಮನೆಯೊಳಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಜನವರಿ 9ರಂದು ನಡೆದಿದೆ. ನರಿಮೊಗರು ಕೇಶವ ಎಂಬುವವರ ಪುತ್ರಿ ಸಂತ ಫಿಲೋಮಿನಾ ಕಾಲೇಜಿನ ಪ್ರಥಮ ಪಿಯುಸಿ ವ್ಯಾಸಂಗ ಮಾಡುತ್ತಿರುವ ದೀಕ್ಷಿತಾ(17) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ ಕಾಲೇಜಿನಿಂದ ಮನೆಗೆ ನೇರವಾಗಿ ಬಂದು ಬಳಿಕ ಮನೆಯ ಕೊಠಡಿಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಘಟನೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ ಮೃತರು ತಂದೆ, ತಾಯಿ, ಸಹೋದರನನ್ನು ಅಗಲಿದ್ದಾರೆ.
ಮಂಗಳೂರು: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿದರೆ ಹೆಚ್ಚಿನ ಲಾಭ ಸಿಗುತ್ತದೆ ಎಂದು ಮೋಸಗೊಳಿಸಿ ಹಣ ವಸೂಲಿ ಮಾಡಿದ ಪ್ರಕರಣದಲ್ಲಿ ಮಂಗಳೂರು ನಗರ ಪೊಲೀಸರು ಓರ್ವ ಆರೋಪಿಯನ್ನು ಬಂಧಿಸಿದ್ದಾರೆ. ಸೆನ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ದೂರಿನ ಪ್ರಕಾರ, ಅಪರಿಚಿತ ವ್ಯಕ್ತಿಯೊಬ್ಬ ವಾಟ್ಸಾಪ್ ಮೂಲಕ ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡುವಂತೆ ಪ್ರೇರೇಪಿಸಿ, ಪಿರ್ಯಾದಿದಾರರಿಂದ 10,32,000 ರೂಪಾಯಿ ಹಣವನ್ನು ವಂಚಿಸಿದ್ದರು. ಪೊಲೀಸರು ನಡೆಸಿದ ತನಿಖೆಯಲ್ಲಿ, ಪಿರ್ಯಾದಿದಾರರಿಂದ ವರ್ಗಾವಣೆಯಾದ ಹಣವು ವಿವಿಧ ಬ್ಯಾಂಕ್ ಖಾತೆಗಳಿಗೆ ವರ್ಗಾವಣೆಯಾಗಿದ್ದು ಕಂಡುಬಂದಿದೆ. ಈ ಸಂಬಂಧ ಕೇರಳದ ತ್ರಿಶೂರ್ ಜಿಲ್ಲೆಯ ನಿಧಿನ್ ಕುಮಾರ್ ಕೆ.ಎಸ್ ಎಂಬಾತನನ್ನು ಬಂಧಿಸಲಾಗಿದೆ. ಆರೋಪಿಯು ವಿವಿಧ ಬ್ಯಾಂಕ್ ಖಾತೆಗಳಿಗೆ ಕಮಿಷನ್ ಪಡೆದುಕೊಂಡು ಹಣವನ್ನು ವರ್ಗಾಯಿಸುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇತರೆ ಆರೋಪಿಗಳನ್ನು ಪತ್ತೆಹಚ್ಚಲು ಪೊಲೀಸರು ಬಲೆ ಬೀಸಿದ್ದಾರೆ.










