Author: main-admin

ಹಾಸನ: ಜಿಲ್ಲೆ ಸಕಲೇಶಪುರ ತಾಲೂಕಿನಲ್ಲಿ ಮಳೆಯ ಅಬ್ಬರ ಜೋರಾಗಿದ್ದು, ನಿರಂತರ ಮಳೆಯಿಂದಾಗಿ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಭೂ ಕುಸಿತ ಸಂಭವಿಸಿದೆ. ಸಕಲೇಶಪುರ ತಾಲೂಕಿನ ಹೆಗ್ಗದ್ದೆ ಮಾರನಹಳ್ಳಿ ಬಳಿ ಭೂ ಕುಸಿತ ಸಂಭವಿಸಿದ ಕಾರಣ ಶಿರಾಡಿ ಘಾಟ್ ಮಾರ್ಗದಲ್ಲಿ ವಾಹನ ಸಂಚಾರ ಬಂದ್​​ ಆಗಿದೆ. ಬೆಂಗಳೂರು ಹಾಗೂ ಮಂಗಳೂರು ನಡುವೆ ಪ್ರಯಾಣಕ್ಕೆ ಬದಲಿ ಮಾರ್ಗ ಬಳಕೆಗೆ ಸೂಚನೆ ನೀಡಲಾಗಿದೆ. ಬೆಂಗಳೂರು ಕಡೆಯಿಂದ ಮಂಗಳೂರು ಕಡೆಗೆ ತೆರಳುವ ವಾಹನಗಳಿಗೆ ಬೇಲೂರು ಮೂಲಕ ಚಾರ್ಮಾಡಿ ಘಾಟ್ ರಸ್ತೆ​​​​ ಬಳಸುವಂತೆ ಸೂಚನೆ ನೀಡಲಾಗಿದೆ. ಮಂಗಳೂರು ಕಡೆಯಿಂದ ಬರುವ ವಾಹನ ಸವಾರರು ಕೊಡಗಿನ ಸಂಪಾಜೆ ಮಾರ್ಗದಲ್ಲಿ ಸಂಚರಿಸಲು ಸೂಚನೆ ನೀಡಿ ಹಾಸನ ಡಿಸಿ ಲತಾಕುಮಾರಿ ಆದೇಶ ಹೊರಡಿಸಿದ್ದಾರೆ. ಭೂಕುಸಿತ ಸಂಭವಿಸಿದ ಕಾರಣ ಶಿರಾಡಿ ಘಾಟ್ ಮಾರ್ಗದಲ್ಲಿ ಟ್ರಾಫಿಕ್ ಉಂಟಾಗಿ ವಾಹನ ಸವಾರರು ಪರದಾಡುವಂತಾಯಿತು. ಸಕಲೇಶಪುರ ಬಳಿಯೇ ನೂರಾರು ವಾಹನಗಳು ನಿಂತಿವೆ. ಮಾರ್ಗಮಧ್ಯೆ ಪ್ರಯಾಣಿಕರು ಸಂಕಷ್ಟಕ್ಕೆ ಸಿಲುಕಿದ್ದಾರೆ. ನಡು ರಾತ್ರಿಯಿಂದ‌ ಶಿರಾಡಿ ಘಾಟ್ ರಸ್ತೆಯಲ್ಲಿ‌ ಸಿಲುಕಿ ಕುಡಿಯುವ ನೀರು, ಊಟ…

Read More

ನವದೆಹಲಿ: ತನಿಖಾ ಸಂಸ್ಥೆಗಳು ತಮ್ಮ ಕಕ್ಷಿದಾರರನ್ನು ಒಳಗೊಂಡ ವಿಷಯಗಳ ಬಗ್ಗೆ ವಕೀಲರನ್ನು ನೇರವಾಗಿ ಕರೆಸಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಬುಧವಾರ ಹೇಳಿದೆ, ಅಂತಹ ಕ್ರಮಗಳು ನ್ಯಾಯದ ಆಡಳಿತಕ್ಕೆ ನೇರ ಬೆದರಿಕೆಯಾಗಿದೆ ಎಂದು ಹೇಳಿದೆ. ನ್ಯಾಯಮೂರ್ತಿಗಳಾದ ಕೆ.ವಿ.ವಿಶ್ವನಾಥನ್ ಮತ್ತು ಎನ್.ಕೋಟಿಶ್ವರ್ ಸಿಂಗ್ ಅವರನ್ನೊಳಗೊಂಡ ನ್ಯಾಯಪೀಠವು ತಮ್ಮ ಕಕ್ಷಿದಾರರಿಗೆ ಸಂಬಂಧಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಗುಜರಾತ್ ಪೊಲೀಸರು ಸಮನ್ಸ್ ನೀಡಿದ್ದ ವಕೀಲರು ಸಲ್ಲಿಸಿದ್ದ ಮನವಿಯನ್ನು ಆಲಿಸುವಾಗ ಈ ವಿಷಯವನ್ನು ಸ್ವಯಂಪ್ರೇರಿತವಾಗಿ ಪರಿಗಣಿಸಿತು. “ನಿರ್ದಿಷ್ಟ ಪ್ರಕರಣದಲ್ಲಿ ಪಕ್ಷಗಳಿಗೆ ಸಲಹೆ ನೀಡಿದ ಪ್ರತಿವಾದಿ ವಕೀಲರು ಅಥವಾ ವಕೀಲರನ್ನು ನೇರವಾಗಿ ಕರೆಸಲು ತನಿಖಾ ಸಂಸ್ಥೆಗಳು / ಪೊಲೀಸರಿಗೆ ಅನುಮತಿ ನೀಡುವುದು ಕಾನೂನು ವೃತ್ತಿಯ ಸ್ವಾಯತ್ತತೆಯನ್ನು ಗಂಭೀರವಾಗಿ ದುರ್ಬಲಗೊಳಿಸುತ್ತದೆ ಮತ್ತು ನ್ಯಾಯದ ಆಡಳಿತದ ಸ್ವಾತಂತ್ರ್ಯಕ್ಕೆ ನೇರ ಬೆದರಿಕೆಯಾಗುತ್ತದೆ” ಎಂದು ನ್ಯಾಯಾಲಯ ಹೇಳಿದೆ. ಒಬ್ಬ ವ್ಯಕ್ತಿಯು ಕಕ್ಷಿದಾರರಿಗೆ ಸಲಹೆ ನೀಡುವ ವಕೀಲರಾಗಿ ಮಾತ್ರ ಪ್ರಕರಣದಲ್ಲಿ ಭಾಗಿಯಾಗಿರುವಾಗ, ತನಿಖಾ ಸಂಸ್ಥೆ, ಪ್ರಾಸಿಕ್ಯೂಷನ್ ಅಥವಾ ಪೊಲೀಸರು ನೇರವಾಗಿ ವಕೀಲರನ್ನು ಕರೆಸಬಹುದೇ? ಎಂದು ನ್ಯಾಯಾಲಯ ಕೇಳಿತು.

Read More

ಮಂಗಳೂರು ನಗರ ಕಮಿಷನರೇಟ್ ವ್ಯಾಪ್ತಿಯಲ್ಲಿ ಸಂಚಾರ ನಿಯಮ ಉಲ್ಲಂಘನೆ ಮಾಡಿರುವಂತಹ ವಾಹನಗಳ ಮೇಲೆ ಸ್ಥಳದಲ್ಲಿ ಕರ್ತವ್ಯದಲ್ಲಿದ್ದ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳು ತೆಗೆದಿರುವ ಭಾವಚಿತ್ರಗಳನ್ನು ಮತ್ತು ಟ್ರಾಫಿಕ್ ಕಂಟ್ರೋಲ್ & ಕಮಾಂಡ್ ಸೆಂಟರ್‌ನಲ್ಲಿ ಸಿಸಿಟಿವಿಯಲ್ಲಿ ಸೆರೆಯಾಗಿರುವ ವಾಹನ ಚಾಲಕ/ಸವಾರರ ಸಂಚಾರ ನಿಯಮ ಉಲ್ಲಂಘನೆಯ ಐಎಂವಿ ಪ್ರಕರಣಗಳನ್ನು ದಾಖಲು ಮಾಡಲಾಗಿರುತ್ತದೆ. ವಾಹನ ಚಾಲಕರು/ಸವಾರರು ಸಂಚಾರ ನಿಯಮ ಉಲ್ಲಂಘನೆ ಮಾಡಿರುವ ಕುರಿತು ಅಂಚೆ ಮೂಲಕ ನೋಟಿಸುಗಳನ್ನು ನೋಂದಣಿ ಸಂಖ್ಯೆಯ ಮಾಲಕರಿಗೆ ಈಗಾಗಲೇ ಕಳುಹಿಸಲಾಗಿದ್ದು, ದಂಡವನ್ನು ಕಟ್ಟದೇ ಹಲವಾರು ಪ್ರಕರಣಗಳು ಬಾಕಿ ಇರುತ್ತದೆ. ಸಂಚಾರ ನಿಯಮ ಉಲ್ಲಂಘನೆಯ ಕುರಿತು ದಂಡ ಪಾವತಿಸದೇ ಇರುವವರ ವಿರುದ್ದ ಕಾನೂನು ಅಡಿಯಲ್ಲಿ ಸೂಕ್ತ ಕ್ರಮಗಳನ್ನು ಕೈಗೊಳ್ಳಲಿದ್ದು, ಪ್ರಥಮ ಹಂತವಾಗಿ ದಂಡ ಪಾವತಿ ಮಾಡಲು ವಾಹನ ನೋಂದಣಿ ಮಾಲಿಕರಿಗೆ ನೋಟಿಸ್ ಈಗಾಗಲೇ ಅಂಚೆ ಮೂಲಕ ನೋಟಿಸ್ ಕಳುಹಿಸಲಾಗಿದ್ದು, ದಿನಾಂಕ 15-07-2025 ರ ಒಳಗಾಗಿ ದಂಡ ಪಾವತಿಸಲು ವಿಫಲರಾದ್ದಲ್ಲಿ, ಸಂಚಾರ ನಿಯಮ ಉಲ್ಲಂಘನೆಯ ಕುರಿತು ನೋಂದಣಿ ಮಾಲಕರ ವಿರುದ್ದ ಮಾನ್ಯ ನ್ಯಾಯಾಲಯಕ್ಕೆ ದೋಷಾರೋಪಣಾ…

Read More

ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದು, ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ. ಬೆಂಗಳೂರಿನ ಇಂಜಿನಿಯರಿಂಗ್ ಸೀಟ್ ಬ್ಲಾಕಿಂಗ್ ದಂಧೆ ಕೇಸ್ ಗೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ಇಡಿ ( E.D) ಅಧಿಕಾರಿಗಳು ನಗರದ ಹಲವು ಕಡೆ ದಾಳಿ ನಡೆಸಿದ್ದಾರೆ. ನಗರದ 18 ಕಡೆ ಇಡಿ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಬಿಎಂಎಸ್ ಇಂಜಿನಿಯರಿಂಗ್ ಕಾಲೇಜು ಸೇರಿ ಹಲವು ಕಡೆ ದಾಳಿ ನಡೆಸಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Read More

ಉಳ್ಳಾಲ: ದ್ವಿತೀಯ ವರ್ಷದ ಬಿಎ ಸೈಕಾಲಜಿ ವಿದ್ಯಾರ್ಥಿನಿಯೊಬ್ಬಳು ನೇಣಿಗೆ ಶರಣಾಗಿರುವ ಘಟನೆ ತಲಪಾಡಿಯ ಕಿನ್ಯದಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿಯನ್ನು ಶ್ರೇಯಾ (19) ಎಂದು ಗುರುತಿಸಲಾಗಿದೆ. ಶ್ರೇಯಾ ಓದಿನ ಒತ್ತಡ ಹಾಗೂ ತಲೆನೋವಿನಿಂದ ಬಳಲುತ್ತಿದ್ದಳು ಎಂದು ತಿಳಿದುಬಂದಿದೆ. ಶ್ರೇಯಾ ಬರೆದಿರುವ ಡೆತ್ ನೋಟ್ ಸಿಕ್ಕಿದ್ದು, ಅದರಲ್ಲಿ ಆಕೆಯನ್ನು ಕಪ್ಪು ಎಂದು ಅವಮಾನಿಸುತ್ತಿದ್ದ ಬಗ್ಗೆ ಬರೆದಿದ್ದಾಳೆ. ಅಲ್ಲದೇ, ಮೇ ತಿಂಗಳಿನಲ್ಲಿ ಶ್ರೇಯಾ ಬರೆದಿರುವ ಡೆತ್ ನೋಟೊಂದು ಸಿಕ್ಕಿದೆ. ನನ್ನನ್ನು ಯಾರೂ ಪ್ರೀತಿಸುವುದಿಲ್ಲ. ನಾನು ಬದುಕಬಾರದು, ಮನೆಯವರಿಗೆ ಕಷ್ಟವಾಗುತ್ತದೆ ಎಂದು ಬರೆದಿದ್ದಾಳೆ ಎಂದು ತಿಳಿದುಬಂದಿದೆ. ಮನೆಯ ಕಪಾಟಿನ ಮೇಲೆ, ಐ ಡೋಂಟ್ ಲೈಕ್ ದಿಸ್ ಜನರೇಷನ್. ಸೋ, ಐ ಡಿಸೈಡೆಡ್ ಟು ಸೂಸೈಡ್ ಎಂದು ಬರೆದಿದ್ದಾಳೆ. ಇನ್ನು ಶ್ರೇಯಾ, ಫಸ್ಟ್ ಸೆಮ್ ನಲ್ಲಿ ಎರಡು ಸಭೆಕ್ಟ್ ನಲ್ಲಿ ಫೇಲಾಗಿದ್ದಳಂತೆ. ಮೌನಿಯಾಗಿದ್ದ ಶ್ರೇಯಾ ಯಾರೊಂದಿಗೂ ಹೆಚ್ಚಾಗಿ ಬೆರೆಯುತ್ತಿರಲಿಲ್ಲವೆಂದು ಆಕೆಯ ಕುಟುಂಬ ಮೂಲಗಳು ತಿಳಿಸಿವೆ. ಈಗಾಗಲೇ ಪೋಸ್ಟ್ ಮಾರ್ಟಂ ನಡೆಸಲಾಗಿದ್ದು, ಹೊಟ್ಟೆಯಲ್ಲಿ ಗೆಡ್ಡೆ ಪತ್ತೆಯಾಗಿದೆ ಎಂದು ತಿಳಿದುಬಂದಿದೆ.…

Read More

ಮಂಗಳೂರು: ನಗರದಲ್ಲಿ ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಕೋಡಿಕಲ್‌ನಲ್ಲಿ ಸಂಭವಿಸಿದೆ. ಮೃತಪಟ್ಟ ಯುವಕ ಕೋಡಿಕಲ್ ನಿವಾಸಿ ನಿಖಿಲ್ ಪೂಜಾರಿ (30) ಎಂದು ತಿಳಿಯಲಾಗಿದೆ. ಬೆಳಗ್ಗೆ ಯುವಕ ಮನೆಯಲ್ಲಿ ಉಪಹಾರ ಸೇವಿಸಿ ಕೋಣೆಗೆ ಹೋಗಿದ್ದ. ಈತ ಸಂಜೆ ಮಲಗುವ ಅಭ್ಯಾಸ ಹೊಂದಿದ್ದ. ಈ ಹಿನ್ನೆಲೆ‌ ಮನೆಯವರು ಆತನ ಬಗ್ಗೆ ಹೆಚ್ಚಿನ ಗಮನ ಹರಿಸಿರಲಿಲ್ಲ. ಸಂಜೆಯಾದರೂ ಬಾರದ ಹಿನ್ನೆಲೆ ಮನೆಯವರು ಬಾಗಿಲು ಬಡಿದರೂ, ಕರೆದರೂ ಪ್ರತಿಕ್ರಿಯೆ ಬಂದಿರಲಿಲ್ಲ. ನಂತರ ರಾತ್ರಿ 8.15ರ ವೇಳೆಗೆ ಬಾಗಿಲಿನ ಎಡೆಯಿಂದ ನೋಡಿದಾಗ ಆತ್ಮಹತ್ಯೆ ಮಾಡಿಕೊಂಡಿರುವುದು ತಿಳಿದು ಬಂದಿದೆ. ಪ್ರಾಥಮಿಕ ತನಿಖೆಯಿಂದ ಅರ್ಥಿಕ ಹೊರೆಯಿಂದ‌ ಮೃತಪಟ್ಟಿರುವ ಬಗ್ಗೆ ತಿಳಿದು ಬಂದಿದೆ. ಈತ ವಿವಿಧ ಅ್ಯಪ್ ಗಳಲ್ಲಿ ಸಾಲ‌ ಪಡೆದಿದ್ದು, ಹಿಂತಿರುಗಿಸಲು ಸಾಧ್ಯವಾಗಿರಲಿಲ್ಲ ಎನ್ನಲಾಗಿದೆ. ಈ ಬಗ್ಗೆ ಉರ್ವ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Read More

ಮಂಗಳೂರು: ನಿಜಕ್ಕೂ ಇಂದು ಸ್ಫೂರ್ತಿದಾಯಕ ಸ್ಟೋರಿ. ಇವತ್ತಿನ ಸಮಾಜದಲ್ಲಿ ಮಂಗಳಮುಖಿಯರು ಅಂದ್ರೆ ಸಾಕು ಅವರನ್ನು ನೋಡುವ ದೃಷ್ಟಿಕೋನವೇ ಬೇರೆ. ಆದರೆ ಅವರಲ್ಲೂ ಒಳ್ಳೆಯ ರೀತಿಯಲ್ಲಿ ಬದುಕು ಕಟ್ಟಿಕೊಂಡವರು ಇದ್ದಾರೆ ಎಂಬುವುದಕ್ಕೆ ಈ ಸ್ಟೋರಿ ಬೆಸ್ಟ್ ಎಕ್ಸಾಂಪಲ್…ಅಲ್ಲದೇ ಪ್ರತಿಯೊಬ್ಬರಿಗೂ ಈ ಸ್ಟೋರಿ ಇನ್ಸ್ಪಿರೇಷನ್… ಅಂದ್ಹಾಗೆ ಈಕೆಯ ಹೆಸರು ಅನಿ ಅಂತ, ಮೂಲತಃ ರಾಯಚೂರಿನವರು. ಮಂಗಳೂರಿಗೆ ವಿದ್ಯಾಭ್ಯಾಸಕ್ಕೆಂದು ಬಂದ ಇವರು ಇದೀಗ ಇಲ್ಲೇ ನೆಲೆ ನಿಂತಿದ್ದಾರೆ. ಬಿಎ ಬಳಿಕ ಬಿಎಡ್ ಎರಡು ಸೆಮಿಸ್ಟರ್ ಬರೆದ ಇವರು ಮಂಗಳಮುಖಿಯರಿಗೆ ಶಿಕ್ಷಣ ಕ್ಷೇತ್ರದಲ್ಲಿ ಕೆಲಸ ನಿರ್ವಹಿಸಲು ಕಷ್ಟ ಎಂದು ಅರಿತು ಶಿಕ್ಷಣ ಮೊಟಕುಗೊಳಿಸಿದ್ದರು. ಇನ್ನು ಮಂಗಳೂರಿನಲ್ಲಿ ಓಡಾಡುವ ವೇಳೆ ಅವರನ್ನು ಆಟೋ ಚಾಲಕರು ತಮ್ಮ ಆಟೋಗಳಿಗೆ ಹತ್ತಿಸಿಕೊಳ್ಳದೇ ಅವಮಾನ ಮಾಡುತ್ತಿದ್ದರಂತೆ. ಇದೇ ರೀತಿಯ ಪದೇ ಪದೇ ಅವಮಾನ ಅನುಭವಿಸಿದ ಅನಿ ಗಟ್ಟಿ ನಿರ್ಧಾರವೊಂದು ಮಾಡುತ್ತಾರೆ. ತಾವೇ ಆಟೋರಿಕ್ಷಾ ಖರೀದಿಸಿ ಬಾಡಿಗೆ ನೀಡಲು ಪ್ಲ್ಯಾನ್ ಮಾಡುತ್ತಾರೆ. ಅದರಂತೆ, ಅವರು ಬ್ಯಾಂಕ್​ನಲ್ಲಿ ಸಾಲ ಮಾಡಿ ನಾಲ್ಕು ರಿಕ್ಷಾಗಳನ್ನು ಖರೀದಿಸಿದ್ದಾರೆ. ನಾಲ್ಕು…

Read More

ಮಂಗಳೂರು : ಮಂಗಳೂರಿನ ಯೂನಿಸೆಕ್ಸ್ ಸಲೂನಿನ ಮೇಲೆ ಪೊಲೀಸರು ದಾಳಿ ಮಾಡಿದ್ದಾರೆ. ಅನೈತಿಕ ಚಟುವಟಿಕೆ ನಡೆಸುತ್ತಿರುವ ಕುರಿತು ಖಚಿತ ಮಾಹಿತಿಯ ಮೇರೆಗೆ ಉರ್ವ ಠಾಣೆ ಪೋಲೀಸರು ದಾಳಿ ಮಾಡಿದ್ದಾರೆ.ಮಂಗಳೂರಿನ ಬಿಜೈ ನಲ್ಲಿರುವ ಸಿಕ್ಸ್ತ್ ಸೆನ್ಸ್ ಮಸಾಜ್ ಪಾರ್ಲರ್ ಮೇಲೆ ದಾಳಿ ಮಾಡಿದ್ದಾರೆ. ಈ ಒಂದು ಪಾರ್ಲರ್ ಉಡುಪಿಯ ಬ್ರಹ್ಮಗಿರಿ ಮೂಲದ ಸುದರ್ಶನ್ ಗೆ ಸೇರಿದ್ದು, ಈ ಒಂದು ಮಸಾಜ್ ಪಾರ್ಲರ್ ನ ಟ್ರೇಡ್ ಲೈಸೆನ್ಸ್ ಅನ್ನು ರದ್ದುಗೊಳಿಸುವಂತೆ ಪೊಲೀಸರು ಪತ್ರ ಬರೆದಿದ್ದಾರೆ. ಉರ್ವ ಠಾಣೆ ಪೊಲೀಸರ ಪತ್ರದ ಆಧಾರದಲ್ಲಿ ಟ್ರೇಡ್ ಲೈಸೆನ್ಸ್ ಅನ್ನು ಮಂಗಳೂರು ನಗರ ಪಾಲಿಕೆ ಆಯುಕ್ತರು ಇದೀಗ ರದ್ದುಗೊಳಿಸಿದ್ದಾರೆ. ಉರ್ವ ಠಾಣೆಯಲ್ಲಿ ಪೊಲೀಸರು ಪ್ರಕರಣವನ್ನು ದಾಖಲಿಸಿ ತನಿಖೆ ಮುಂದುವರಿಸಿದ್ದಾರೆ.

Read More

ಕಾರ್ಕಳ : ಎರಡು ಗುಂಪುಗಳ ನಡುವಿನ ವೈಷಮ್ಯದ ಕಾರಣದಿಂದ ಮಾತಿಗೆ ಮಾತು ಬೆಳೆದು ಯುವಕನಿಗೆ ತಲವಾರಿನಿಂದ ಹಲ್ಲೆಗೆ ಯತ್ನಿಸಿ ಜಾತಿ ನಿಂದನೆಗೈದ ಆರೋಪದ ಮೇಲೆ ಕಾರ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬೈಲೂರು ಸಮೀಪದ ಕೌಡೂರು ಗ್ರಾಮದ ಚರಣ್(22) ಹಾಗೂ ಆರೋಪಿಗಳಾದ ವಿಷ್ಣು ಮತ್ತು ಅಶ್ವಿನ್ ಎಂಬವರ ನಡುವೆ ಜೂ 21 ರಂದು ಬೈಲೂರಿನ ಪಳ್ಳಿ ಕ್ರಾಸ್ ಬಳಿ ರಾತ್ರಿ 8.30ರ ಸುಮಾರಿಗೆ ಜಗಳವಾಗಿತ್ತು. ಈ ಜಗಳದ ನಂತರ ವೈಯುಕ್ತಿಕ ದ್ವೇಷದಿಂದ ಅಶ್ವಿನ್ ಎಂಬಾತ ಚರಣ್ ಮೊಬೈಲ್ ಗೆ ಕರೆ ಮಾಡಿ ಅವಾಚ್ಯವಾಗಿ ಬೈದು ಬಳಿಕ ಜಾತಿ ನಿಂದನೆ ಮಾಡಿ ಜೀವ ಬೆದರಿಕೆ ಒಡ್ಡಿದ್ದ. ಬಳಿಕ ಮತ್ತೆ ಮತ್ತೆ ಚರಣ್ ಗೆ ಕಾಲ್ ಮಾಡಿ ಜೋಡುರಸ್ತೆಗೆ ಬರುವಂತೆ ಒತ್ತಡ ಹಾಕಿ ನಿನ್ನನ್ನು ನೋಡಿಕೊಳ್ಳುತ್ತೇನೆ ಎಂದು ಬೆದರಿಕೆಯೊಡ್ಡಿದ್ದ. ಕೊನೆಗೂ ಚರಣ್ ಜೂ 22 ರಂದು ಭಾನುವಾರ ರಾತ್ರಿ 7.45ರ ವೇಳೆಗೆ ತನ್ನ ಚಿಕ್ಕಪ್ಪ ಜಗನ್ನಾಥ್, ಸುಂದರ್, ಕಿರಣ್, ರವಿ ಮತ್ತು ಕಿರಣ್ ಎಂಬವರೊoದಿಗೆ…

Read More

ಕಾರ್ಕಳ: ಮಕ್ಕಳಾಗಿಲ್ಲ ಎಂದು ಮನನೊಂದು ಮಹಿಳೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಾರ್ಕಳ ತಾಲೂಕಿನ ಮರ್ಣೆ ಗ್ರಾಮದ ಅಜೆಕಾರಿನ ಬೊಳ್ಳ ಎಂಬಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಮಹಿಳೆಯನ್ನು ಕಾರ್ಕಳ ತಾಲೂಕಿನ ಮರ್ಣೆ ಗ್ರಾಮದ ಅಜೆಕಾರಿನ ಬೊಳ್ಳ ನಿವಾಸಿ ಗೀತಾ(52) ಎಂದು ಗುರುತಿಸಲಾಗಿದೆ. ಗೀತಾ ಅವರಿಗೆ ಕಳೆದ 20 ವರ್ಷಗಳ ಹಿಂದೆ ಕುರಿಯಕೋಸ್ ಎಂಬವರ ಜತೆ ಮದುವೆಯಾಗಿತ್ತು. ಆದರೆ ಮಕ್ಕಳಾಗಿರಲಿಲ್ಲ. ಕಳೆದ ಎರಡು ವರ್ಷದ ಹಿಂದೆ ಗಂಡ ಮೃತಪಟ್ಟ ಹಿನ್ನೆಲೆಯಲ್ಲಿ ಗೀತಾ ಅವರು ಕೆ.ಪಿ ಅಬ್ರಹಾಂ ಅವರನ್ನು ಎರಡನೇ ಮದುವೆಯಾಗಿದ್ದರು. ಇವರಿಬ್ಬರ ನಡುವೆ ದಾಂಪತ್ಯದಲ್ಲಿ ಹೊಂದಾಣಿಕೆಯಾಗದ ಹಿನ್ನೆಲೆಯಲ್ಲಿ ಹಾಗೂ ಮಕ್ಕಳಿಲ್ಲದ ಕೊರಗಿನಿಂದ ಜೀವನದಲ್ಲಿ ಜಿಗುಪ್ಪೆಗೊಂಡು ಶುಕ್ರವಾರ ರಾತ್ರಿ ಕೀಟನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು. ತಕ್ಷಣವೇ ಕಾರ್ಕಳ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೇ ಅವರು ಮೃತಪಟ್ಟಿದ್ದಾರೆ. ಈ ಕುರಿತು ಅಜೆಕಾರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More