ಮಂಗಳೂರು: ಗೋವಾದಿಂದ ಮಂಗಳೂರು ಹಾಗೂ ಕೇರಳಕ್ಕೆ ರಾಜ್ಯಕ್ಕೆ ಮಾದಕವಸ್ತುಗಳನ್ನು ಪೂರೈಕೆ ಮಾಡುತ್ತಿದ್ದ ಆರೋಪಿಯೋರ್ವನನ್ನು ಬಂಧಿಸಿರುವ ಸಿಸಿಬಿ ಪೊಲೀಸರು 73 ಲಕ್ಷ ರೂ. ಮೌಲ್ಯದ ಹೈಡ್ರೋವಿಡ್ ಗಾಂಜಾ ಹಾಗೂ ಇತರ ಸೊತ್ತುಗಳನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಕೇರಳ ರಾಜ್ಯದ ಕೋಝಿಕ್ಕೋಡ್ ಜಿಲ್ಲೆಯ ಉನ್ನಿಕೂಲಂ ತಲಯಾಡ್ ಪೋಸ್ಟ್‌ನ ಕಂದಲಾಡ್ ಗ್ರಾಮದ ನಿವಾಸಿ ಶಮೀರ್ ಪಿ.ಕೆ.(42) ಬಂಧಿತ ಆರೋಪಿ. ಈತ ನಿಷೇಧಿತ ಮಾದಕದ್ರವ್ಯ ಹೈಡ್ರೋವಿಡ್ ಗಾಂಜಾವನ್ನು ಕಾರಿನಲ್ಲಿ ಸಾಗಾಟ ಮಾಡುತ್ತಿದ್ದ. ಈ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಪೊಲೀಸರು ಮಂಗಳೂರಿನ ಬಪ್ಪನಾಡು ರಾಷ್ಟ್ರೀಯ ಹೆದ್ದಾರಿ ಬಳಿ ಕಾರನ್ನು ಪತ್ತೆ ಹಚ್ಚಿ ಆರೋಪಿಯನ್ನು ಬಂಧಿಸಿದ್ದಾರೆ. ಬಂಧಿತನಿಂದ 73 ಲಕ್ಷ ರೂ. ಮೌಲ್ಯದ 738 ಗ್ರಾಂ ಹೈಡ್ರೋವಿಡ್ ಗಾಂಜಾ, ಸಾಗಾಟಕ್ಕೆ ಉಪಯೋಗಿಸಿದ ಕಾರು, ಮೊಬೈಲ್ ಫೋನ್ ಅನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿಯಿಂದ ವಶಪಡಿಸಿಕೊಂಡ ಸೊತ್ತಿನ ಮೌಲ್ಯ 80,10,000 ರೂ. ಆಗಬಹುದು ಎಂದು ಅಂದಾಜಿಸಲಾಗಿದೆ. ಈ ಬಗ್ಗೆ ಮುಲ್ಕಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ. ಈ ಹೈಡ್ರೋವಿಡ್ ಗಾಂಜಾವನ್ನು ವಿದೇಶದಿಂದ…
Author: main-admin
ಮಂಗಳೂರು: ರಾಜ್ಯ ಆಂತರಿಕ ಭದ್ರತಾ ವಿಭಾಗ ಮತ್ತು ಮಂಗಳೂರು ಪೊಲೀಸರು ಕಾರ್ಯಾಚರಣೆ ನಡೆಸಿ ಮುಕ್ಕ ಗ್ರಾಮದಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾದೇಶದ ಪ್ರಜೆಯನ್ನು ಬಂಧಿಸಿದ್ದಾರೆ. ಬಾಂಗ್ಲಾದೇಶದ ರಾಜಶಾಹಿ ಜಿಲ್ಲೆಯ ನಿವಾಸಿ ಅನರುಲ್ ಶೇಖ್ (25)ನನ್ನು ಬಂಧಿಸಲಾಗಿದೆ. ಅನರುಲ್ ಶೇಖ್ ಮೂರು ವರ್ಷಗಳ ಹಿಂದೆ ಅಂತಾರಾಷ್ಟ್ರಿಯ ಗಡಿರೇಖೆ ಲಾಲ್ಗೋಲ್ ಮೂಲಕ ಅಕ್ರಮವಾಗಿ ಭಾರತದೊಳಗೆ ಪ್ರವೇಶಿಸಿದ್ದನು. ಬಳಿಕ, ಪಶ್ಚಿಮ ಬಂಗಾಳದ ಮುರ್ಷಿದಾಬಾದ್ನಿಂದ ಉಡುಪಿಗೆ ಬಂದಿದ್ದನು. ಇಲ್ಲಿಂದ, ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಹೊರವಲಯದ ಮುಕ್ಕ ಗ್ರಾಮದ ರೋಹನ್ ಎಸ್ಟೇಟ್ನಲ್ಲಿ ಅನರುಲ್ ಶೇಖ್ ಕಟ್ಟಡ ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದನು. ಅನರುಲ್ ಶೇಖ್ ಬಗ್ಗೆ ಖಚಿತ ಮಾಹಿತಿ ಪಡೆದ ರಾಜ್ಯ ಆಂತರಿಕ ಭದ್ರತಾ ವಿಭಾಗ ಮತ್ತು ಮಂಗಳೂರು ಪೊಲೀಸರು ಕಾರ್ಯಾಚರಣೆ ನಡೆಸಿ, ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಅನರುಲ್ ಶೇಖ್ನನ್ನು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ.
ಮಂಗಳೂರು: ಹಳೆಯ ನಾಣ್ಯಗಳ ಖರೀದಿ ನೆಪದಲ್ಲಿ ಮಂಗಳೂರಿನ ವ್ಯಕ್ತಿಯೊಬ್ಬರಿಗೆ 58 ಲಕ್ಷ ರೂ. ವಂಚಿಸಿದ ಘಟನೆ ಮಂಗಳೂರು ಕಾವೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಂಗಳೂರಿನ ವ್ಯಕ್ತಿ 2024ರ ನವೆಂಬರ್ 25ರಂದು ಫೇಸ್ಬುಕ್ ನೋಡುತ್ತಿರುವಾಗ ಹಳೆಯ ನ್ಯಾಣ್ಯಗಳನ್ನು ಖರೀದಿಸಿ ಹೆಚ್ಚಿನ ಹಣ ನೀಡುವುದಾಗಿ ತಿಳಿಸಿರುವ ಜಾಹಿರಾತನ್ನು ನೋಡಿದ್ದಾರೆ. ಬಳಿಕ ಆ ಜಾಹಿರಾತಿನಲ್ಲಿದ್ದ ವಾಟ್ಸ್ಆ್ಯಪ್ ಖಾತೆಗೆ ತಮ್ಮ ಬಳಿ ಇದ್ದ 15 ಹಳೆಯ ನ್ಯಾಣ್ಯಗಳ ಫೋಟೋಗಳನ್ನು ಕಳುಹಿಸಿದ್ದರು. ಅದರಂತೆ, ಆ ಕಡೆಯಿಂದ 15 ಹಳೆಯ ನ್ಯಾಣ್ಯಗಳನ್ನು ಖರೀದಿಸಿ, ಅದಕ್ಕೆ ಪ್ರತಿಯಾಗಿ 49,00,000 ರೂ. ಹಣ ನೀಡುವುದಾಗಿ ಆರೋಪಿ ತಿಳಿಸಿದ್ದ ಎಂದು ವಂಚನೆಗೊಳಗಾದವರು ದೂರಿನಲ್ಲಿ ತಿಳಿಸಿದ್ದಾರೆ. ಬಳಿಕ, ನಾಣ್ಯ ಮಾರಲು ಇಷ್ಟವಿದ್ದರೆ ಮೊದಲಿಗೆ ಆರ್ ಬಿಐ ನೋಂದಣಿ ಮಾಡಲು 750 ರೂ. ಹಣ ಪಾವತಿಸುವಂತೆ ಆರೋಪಿ ತಿಳಿಸಿದ್ದು, ವ್ಯಕ್ತಿಯು ಯುಪಿಐ ಮೂಲಕ ಪಾವತಿಸಿದ್ದರು. ಆ ಬಳಿಕ ಜಿಎಸ್ ಟಿ ಪ್ರೊಸಿಡಿಂಗ್ ಡಾಟಾ ಶುಲ್ಕವೆಂದು 17,500 ರೂ., ಇನ್ಶೂರೆನ್ಸ್ ಶುಲ್ಕ 94,500 ರೂ., ಟಿಡಿಎಸ್ ಮೊತ್ತದ…
ಪಡುಬಿದ್ರೆ : ಯುವಕನೊಬ್ಬ ಸಾಲದ ಚಿಂತೆಯಲ್ಲಿ ಆತ್ಮಹತ್ಯೆಗೆ ಶರಣಾದ ಘಟನೆ ಪಡುಬಿದ್ರೆಯಲ್ಲಿ ಬುಧವಾರ ಸಂಜೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ನಸ್ರುಲ್ಲಾ(29) ಎಂದು ಗುರುತಿಸಲಾಗಿದೆ. ವಿದೇಶದಲ್ಲಿ ಉದ್ಯೋಗದಲ್ಲಿದ್ದ ಇವರು ಮೂರು ತಿಂಗಳ ಹಿಂದೆ ಊರಿಗೆ ಮರಳಿದ್ದರು. ನಸ್ರುಲ್ಲಾ ಅವರು ಪಡೆದಿದ್ದ ಮನೆ ಸಾಲ, ವೈಯಕ್ತಿಕ ಸಾಲಗಳನ್ನು ಹಿಂತಿರುಗಿಸಲು ಹಣಕಾಸು ಸಂಸ್ಥೆಯ ಮಂದಿ ಹುಡುಕಿಕೊಂಡು ಇವರ ಮನೆಗೆ ಬರುತ್ತಿದ್ದರು. ತಮ್ಮ ಪತ್ನಿಯ ಆಭರಣಗಳನ್ನೂ ಅಡವಿಟ್ಟಿದ್ದ ನಸ್ರುಲ್ಲಾ, ಕೆಲ ಚಿನ್ನಾಭರಣಗಳನ್ನು ಬಿಡಿಸಿಕೊಂಡು ಬಂದಿದ್ದರು ಎಂದು ಹೇಳಲಾಗಿದೆ. ಅಲ್ಲದೆ ಸಾಲಗಾರರು ನಿರಂತರವಾಗಿ ಮನೆಗೆ ಬರುತ್ತಿರುವುದರಿಂದ ಮಾನಸಿಕವಾಗಿ ನೊಂದಿದ್ದರು. ಬುಧವಾರ ಬೆಡ್ ರೂಂನಲ್ಲಿ ಫ್ಯಾನಿಗೆ ಚೂಡಿದಾರದ ವೇಲಿನಿಂದ ಕುತ್ತಿಗೆಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಪಡುಬಿದ್ರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸುಳ್ಯ : ತಾಯಿಯೊಬ್ಬಳು ತನ್ನ 5 ವರ್ಷ ಪ್ರಾಯದ ಮಗುವಿಗೆ ಬಿಸಿ ಪಾತ್ರೆಯಿಂದ ಸುಟ್ಟು ಗಾಯಗೊಳಿಸಿದ ಪ್ರಕರಣದ ವಿಚಾರಣೆ ನ್ಯಾಯಾಲಯದಲ್ಲಿ ನಡೆದು ಆರೋಪ ಸಾಬೀತಾಗಿದ್ದು ನ್ಯಾಯಾಲಯ ಆರೋಪಿಗೆ ಶಿಕ್ಷೆ ಘೋಷಿಸಿದೆ. ಕಾವ್ಯಶ್ರೀ ಎಂಬವರು 2022ರ ಆ.16ರಂದು ಸುಳ್ಯ ಗಾಂಧಿನಗರ ನಾವೂರು ಎಂಬಲ್ಲಿರುವ ತನ್ನ ತಾಯಿಯ ಮನೆಯಲ್ಲಿ ಬಿಸಿ ಹಾಲಿನ ಪಾತ್ರೆಯಿಂದ ತನ್ನ 5 ವರ್ಷ ಪ್ರಾಯದ ಪುತ್ರಿಯ ದೇಹದ ವಿವಿಧ ಕಡೆ ಸುಟ್ಟು ನೋವುಂಟು ಮಾಡಿದ್ದರು. ಈ ಬಗ್ಗೆ ಮಹಿಳಾ ಮತ್ತು ಮಕ್ಕಳ ಸಂರಕ್ಷಣಾಧಿಕಾರಿ ರಶ್ಮಿ ಅವರಿಗೆ ವಿಷಯ ಗೊತ್ತಾಗಿ ಸುಳ್ಯ ಠಾಣೆಯಲ್ಲಿ ತಾಯಿ ವಿರುದ್ಧ ದೂರು ದಾಖಲಿಸಿದ್ದರು. ಸುಳ್ಯ ನ್ಯಾಯಾಲಯದಲ್ಲಿ ವಿಚಾರಣೆ ನಡೆದಿದ್ದು ಹಿರಿಯ ಸಿವಿಲ್ ಜಡ್ಜ್ ಮತ್ತು ಜೆಎಂಎಫ್‌ಸಿ ನ್ಯಾಯಾಧೀಶ ಬಿ.ಮೋಹನ್ ಬಾಬು ಅವರು ಆಪಾದಿತೆಯನ್ನು ದೋಷಿಯೆಂದು ಘೋಷಿಸಿದ್ದಾರೆ. ಅಪಾದಿತೆಗೆ ಒಟ್ಟು 10 ಸಾವಿರ ರೂ. ದಂಡ, ದಂಡ ತೆರಲು ತಪ್ಪಿದ್ದಲ್ಲಿ 2 ತಿಂಗಳ ಸಾದಾ ಕಾರಗೃಹ ವಾಸದ ತೀರ್ಪು ನೀಡಿದೆ. ಸರಕಾರದ ಪರವಾಗಿ ಸಹಾಯಕ ಸರಕಾರಿ ಅಭಿಯೋಜಕರು…
ಕಾಸರಗೋಡು: ಕಾರಿನಲ್ಲಿ ಸಾಗಾಟ ಮಾಡುತ್ತಿದ್ದ ಸುಮಾರು 30 ಕಿಲೋ ಗಾಂಜಾ ಸಹಿತ ಓರ್ವ ನನ್ನು ಬೇಕಲ ಠಾಣಾ ಪೊಲೀಸರು ಬಂಧಿಸಿದ್ದಾರೆ. ಬೋವಿಕ್ಕಾನ ಪೊವ್ವಲ್ ನ ಬಾಸಿತ್ (35) ಬಂಧಿತ ಆರೋಪಿ.ಬುಧವಾರ ರಾತ್ರಿ ರಾಷ್ಟ್ರೀಯ ಹೆದ್ದಾರಿಯ ಕುನಿಯ ಎಂಬಲ್ಲಿ ವಾಹನ ತಪಾಸಣೆ ನಡೆಸುತ್ತಿದ್ದಾಗ ಪೆರಿಯ ಕಡೆಯಿಂದ ಬಂದ ಕಾರನ್ನು ತಡೆದು ತಪಾಸಣೆ ನಡೆಸಿದಾಗ ಗಾಂಜಾ ಪತ್ತೆಯಾಗಿದೆ. ಕಾರಿನಲ್ಲಿದ್ದ ಇಬ್ಬರು ಪರಾರಿಯಾಗಿದ್ದು, ಓರ್ವನನ್ನು ಬಂಧಿಸಲಾಯಿತು.ಗಾಂಜಾವನ್ನು ಪ್ಲಾಸ್ಟಿಕ್ ಕವರ್ ಗಳಲ್ಲಿ ತುಂಬಿಸಿ ಸಾಗಾಟ ಮಾಡಲಾಗುತ್ತಿತ್ತು. ಈ ಬಗ್ಗೆ ಪೊಲೀಸರು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ.
ಮಂಗಳೂರು: ಲಂಚ ಸ್ವೀಕರಿಸುತ್ತಿದ್ದಾಗಲೇ ಲೋಕಾಯುಕ್ತ ಬಲೆಗೆ ಬಿದ್ದಿದ್ದ ಮುಲ್ಕಿಯ ಕಂದಾಯ ನಿರೀಕ್ಷಕ ಜಿ.ಎಸ್.ದಿನೇಶ್‌ನಿಗೆ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ(ವಿಶೇಷ) ನ್ಯಾಯಾಲಯ ಜಾಮೀನು ನಿರಾಕರಿಸಿ ಅರ್ಜಿ ವಜಾ ಮಾಡಿದೆ. ಡಿ.19ರಂದು ಮುಲ್ಕಿಯ ಕಂದಾಯ ನಿರೀಕ್ಷಕ ಜಿ.ಎಸ್ ದಿನೇಶ್ 4,00,000ರೂ. ಲಂಚದ ಹಣ ಸ್ವೀಕರಿಸುತ್ತಿದ್ದಾಗಲೇ ಲೋಕಾಯುಕ್ತ ಬಲೆಗೆ ಬಿದ್ದಿದ್ದನು. ಈ ಬಗ್ಗೆ ಮಂಗಳೂರು ಲೋಕಾಯುಕ್ತ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ(ವಿಶೇಷ) ನ್ಯಾಯಾಲಯ ಜ.8ರವರೆಗೆ ನ್ಯಾಯಾಂಗ ಬಂಧನ ವಿಧಿಸಿತ್ತು. ಅದರಂತೆ ಬುಧವಾರ ಈ ದಿನ ದಿನಾಂಕ 08.01.2025 ರಂದು ನ್ಯಾಯಾಧೀಶೆ ಸಂಧ್ಯಾ ಎಸ್ ಅವರು ವಿಚಾರಣೆ ನಡೆಸಿ, ಆರೋಪಿ ಜಾಮೀನು ಕೋರಿ ಸಲ್ಲಿಸಿದ ಅರ್ಜಿಯನ್ನು ವಜಾಗೊಳಿಸಿದ್ದಾರೆ. ಲೋಕಾಯುಕ್ತ ಸಂಸ್ಥೆಯ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕ ರವೀಂದ್ರ ಮುನ್ನಿಪ್ಪಾಡಿರವರು ವಾದಿಸಿರುತ್ತಾರೆ. ಆರೋಪಿ ಅಧಿಕಾರಿಗೆ ನ್ಯಾಯಾಂಗ ಬಂಧನ ಮುಂದುವರಿದಿದೆ ಎಂಬುದಾಗಿ ಮಂಗಳೂರು ಲೋಕಾಯುಕ್ತ ವಿಭಾಗದ ಪೊಲೀಸ್ ಅಧೀಕ್ಷಕ ನಟರಾಜ ಎಂ.ಎ. ತಿಳಿಸಿದ್ದಾರೆ.
ಮಂಗಳೂರು : ಸಮುದ್ರದಲ್ಲಿ ಈಜಲು ತೆರಳಿದ್ದ ಮೂವರು ವಿಧ್ಯಾರ್ಥಿಗಳು ನೀರುಪಾಲಾದ ಘಟನೆ ಮಂಗಳೂರು ಹೊರವಲಯದ ಸುರತ್ಕಲ್‌ನ ಕುಳಾಯಿ ಜೆಟ್ಟಿ ಬಳಿಯ ಸಮುದ್ರ ತೀರದಲ್ಲಿ ನಡೆದಿದೆ. ಮೃತರನ್ನು ಬೆಂಗಳೂರಿನ ಎಎಂಸಿ ಇಂಜಿನಿಯರಿಂಗ್ ಕಾಲೇಜಿನ ವಿಧ್ಯಾರ್ಥಿಗಳಾದ ಮಂಜುನಾಥ್, ಶಿವಕುಮಾರ್ ಹಾಗೂ ಸತ್ಯವೇಲು ಎಂದು ಗುರುತಿಸಲಾಗಿದೆ. ಮಂಗಳೂರಿಗೆ ಪ್ರವಾಸಕ್ಕೆಂದು ಬಂದಿದ್ದ ಬೀದರ್ ಜಿಲ್ಲೆಯ ಪರಮೇಶ್ವರ್, ಚಿತ್ರದುರ್ಗ ಜಿಲ್ಲೆಯ ಉಪ್ಪರಿಗೇನಹಳ್ಳಿಯ ಮಂಜುನಾಥ್, ಶಿವಮೊಗ್ಗದ ಶಿವಕುಮಾರ್ ಹಾಗೂ ಬೆಂಗಳೂರಿನ ಸತ್ಯವೇಲು ಎಂಬವರು ಈಜಾಡಲು ನೀರಿಗೆ ಇಳಿದಿದ್ದಾರೆ. ಆ ಸಂದರ್ಭದಲ್ಲಿ ಮಂಜುನಾಥ್, ಶಿವಕುಮಾರ್ ಹಾಗೂ ಸತ್ಯವೇಲು ನೀರಿನಲ್ಲಿ ಕೊಚ್ಚಿ ಹೋಗಿದ್ದಾರೆ. ಪರಮೇಶ್ವರ್ ಅಪಾಯದಿಂದ ಪಾರಾಗಿದ್ದಾರೆ. ಶಿವಕುಮಾರ್, ಸತ್ಯವೇಲು ಮತ್ತು ಮಂಜುನಾಥ್ ಅವರ ಮೃತದೇಹ ಜೆಟ್ಟಿಯ ಬಲಭಾಗದ ಮೂಲೆಯಲ್ಲಿ ಪತ್ತೆಯಾಗಿದೆ. ಮೃತದೇಹಗಳನ್ನು ನಗರದ ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ತಿಳಿದು ಬಂದಿದೆ. ಈ ನಾಲ್ವರು ಬೆಂಗಳೂರಿನ ಎಎಂಸಿ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳಾಗಿದ್ದು, ಎಲ್ಲರೂ ಸ್ನೇಹಿತರಾಗಿದ್ದರು. ಇವರು ಮಂಗಳವಾರ ರಾತ್ರಿ ಕಾರಿನಲ್ಲಿ ಬೆಂಗಳೂರಿನಿಂದ ಹೊರಟು ಇಂದು ಬೆಳಗ್ಗೆ ಮಂಗಳೂರಿಗೆ ತಲುಪಿದ್ದರು. ಮಂಗಳೂರಿನ ಹೊಟೇಲ್‌ವೊಂದರಲ್ಲಿ ಬೆಳಗ್ಗಿನ…
ಮಲ್ಪೆ: ದುರಸ್ತಿಗೆಂದು ಹೋಗಿದ್ದ ಮಲ್ಪೆ ಬಂದರಿನ ಮೀನುಗಾರಿಕಾ ಬೋಟಿಗೆ ಗಂಗೊಳ್ಳಿ ಅಳಿವೆ ಸಮೀಪ ಮರದ ದಿಮ್ಮಿ ಡಿಕ್ಕಿ ಹೊಡೆದ ಪರಿಣಾಮ ಬೋಟ್ ಭಾಗಶಃ ಮುಳುಗಡೆಗೊಂಡು ಅಪಾರ ನಷ್ಟ ಉಂಟಾದ ಘಟನೆ ಸಂಭವಿಸಿದೆ. ತವಕಲ್ ಎನ್ನುವ ಹೆಸರಿನ ಮೀನುಗಾರಿಕೆ ಬೋಟನ್ನು ದುರಸ್ತಿಗೆಂದು ಮೀನುಗಾರರಾದ ರವಿ ಸಾಲ್ಯಾನ್ ಮತ್ತು ಹರೀಶ್ ಅವರು ಮಲ್ಪೆ ಬಂದರಿನಿಂದ ಗಂಗೊಳ್ಳಿಗೆ ಕೊಂಡು ಹೋಗುತ್ತಿದ್ದರು. ಗಂಗೊಳ್ಳಿ ಬಂದರಿನ ಅಳಿವೆಯಿಂದ ಸುಮಾರು 2 ನಾಟಿಕಲ್ ಮೈಲು ದೂರದಲ್ಲಿ ಚಲಿಸುತ್ತಿರುವಾಗ ರಾತ್ರಿ 7.30ರ ವೇಳೆಗೆ ದೊಡ್ಡದಾದ ಮರದ ದಿಮ್ಮಿ ಬಂದು ಬೋಟಿಗೆ ಡಿಕ್ಕಿ ಹೊಡೆದಿದೆ.ಪರಿಣಾಮ ಬೋಟಿನ ಮುಂಭಾಗದ ತಳಬದಿಯಲ್ಲಿ ಹಾನಿಯಾಗಿ ನೀರು ಒಳ ಬರಲು ಪ್ರಾರಂಭಿಸಿತ್ತು. ನೀರಿನ ಒಳ ಹರಿವು ಜಾಸ್ತಿಯಾಗಿ ಬೋಟು ಮುಳುಗುವ ಸಂಭವ ಇರುವುದನ್ನು ಗಮನಿಸಿದ ಬೋಟಿನ ತಾಂಡೇಲ ರವಿ ಸಾಲ್ಯಾನ್ ಬೇರೆ ಬೋಟ್ ಗೆ ಮಾಹಿತಿ ನೀಡಿದರು. ಜಲರಾಣಿ ಬೋಟಿನವರು ಮುಳುಗಡೆಗೊಳ್ಳುತ್ತಿದ್ದ ಬೋಟಿನಲ್ಲಿದ್ದ ರವಿ ಸಾಲ್ಯಾನ್ ಮತ್ತು ಹರೀಶ್ ಅವರನ್ನು ರಕ್ಷಣೆ ಮಾಡಿ ಬೋಟನ್ನು ತಮ್ಮ ಬೋಟಿಗೆ ಹಗ್ಗ…
ಮಂಗಳೂರು: ಪೆಟ್ರೋಲ್ ಬಂಕ್‌ನ ಸೂಪರ್‌ವೈಸರ್‌ನೊಬ್ಬ ವೈಯಕ್ತಿಕ ಖಾತೆಯ ಕ್ಯು ಆರ್ ಕೋಡ್‌ನ್ನು ಹಾಕಿ 58.85 ಲಕ್ಷ ರೂ. ವಂಚಿಸಿರುವ ಬಗ್ಗೆ ದೂರು ನೀಡಲಾಗಿದೆ. ಬಂಗ್ರಕೂಳೂರಿನ ರಿಲಯನ್ಸ್ ಔಟ್‌ಲೆಟ್ ಪ್ರೈಯೆಲ್ ಬಂಕ್ ನಲ್ಲಿ ಸೂಪರ್‌ವೈಸರ್ ಆಗಿ ದ್ದ ಮೋಹನದಾಸ್ ಎಂಬಾತ ಬಂಕ್‌ನ ಹಣಕಾಸು ವ್ಯವಹಾರ ನಿರ್ವಹಣೆಯ ಜವಾಬ್ದಾರಿ ನೋಡಿಕೊಂಡಿದ್ದನು ಈತ 2023ರ ಮಾ.1ರಿಂದ ಜು.31ರವರೆಗೆ ಪೆಟ್ರೋಲ್ ಬಂಕ್‌ನಲ್ಲಿ ಸಂಸ್ಥೆಯ ಕ್ಯುಆರ್ ಕೋಡ್ ತೆಗೆದು ವೈಯಕ್ತಿಯ ಖಾತೆಯ ಕ್ಯುಆರ್ ಕೋಡ್‌ನ್ನು ಅಳವಡಿಸಿ ಆ ಮೂಲಕ 58,85,333 ರೂ.ಗಳನ್ನು ವರ್ಗಾಯಿಸಿಕೊಂಡು ವಂಚಿಸಿದ್ದಾನೆ ಎಂದು ರಿಲಯನ್ಸ್ ಔಟ್ ಲೆಟ್ ಫ್ಯುಯೆಲ್ ಬಂಕ್‌ನ ಮ್ಯಾನೇಜರ್ ನಗರದ ಸೆನ್ ಪೊಲೀಸರಿಗೆ ದೂರು ನೀಡಿದ್ದಾರೆ.








