ಮಂಗಳೂರು : ಕಳೆದ ಕೆಲವು ತಿಂಗಳ ಹಿಂದೆ ಮಂಗಳೂರಿನಲ್ಲಿ ಹಿಂದೂ ಕಾರ್ಯಕರ್ತ ಹಾಗೂ ರೌಡಿಶೀಟರ್ ಸುಹಾಸ್ ಶೆಟ್ಟಿಯನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಭೀಕರವಾಗಿ ಕೊಲೆ ಮಾಡಲಾಗಿತ್ತು. ಇದೀಗ ಈ ಒಂದು ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಂಗಳೂರಲ್ಲಿ ಇಂದು NIA ಅಧಿಕಾರಿಗಳು 14 ಕಡೆ ಏಕಕಾಲದಲ್ಲಿ ದಾಳಿ ಮಾಡಿದ್ದಾರೆ. ಹೌದು ಸುಹಾಸ್ ಶೆಟ್ಟಿ, ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಂದು ಮಂಗಳೂರಿನ 14 ಕಡೆ ಎನ್ಐಎ ಅಧಿಕಾರಿಗಳು ಏಕಾಏಕಿ ದಾಳಿ ನಡೆಸಿದ್ದಾರೆ. ಮಂಗಳೂರಿನ 14 ಕಡೆ ದಾಳಿ ನಡೆಸಿ ದಾಖಲೆ ಪರಿಶೀಲನೆ ಮಾಡುತ್ತಿದ್ದಾರೆ. ಹಲವರ ಮನೆ ಮತ್ತು ಕಚೇರಿಯ ಮೇಲೆ ಎನ್ಐಎ ತಂಡ ದಾಳಿ ಮಾಡಿದೆ ಈ ವೇಳೆ ಕೆಲವರನ್ನು ಅಧಿಕಾರಿಗಳು ವಿಚಾರಣೆಗೆ ಒಳಪಡಿಸಿದ್ದಾರೆ.
Author: main-admin
ಬೆಂಗಳೂರು : ಮೈಸೂರಿನ ಕೆ.ಆರ್ ನಗರದ ಮಹಿಳೆ ಮೇಲೆ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಿನ್ನೆ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯವು ಮಾಜಿ ಸಂಸದ ಪ್ರಜ್ವಲ್ ರೇವಣ್ಣ ದೋಷಿ ಎಂದು ತೀರ್ಪು ನೀಡಿದ್ದು, ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಶಿಕ್ಷೆಯ ಪ್ರಮಾಣದ ಕುರಿತು ವಿಚಾರಣೆ ನಡೆಯಿತು. ವಿಚಾರಣೆಯ ಬಳಿಕ ಸಂತೋಷ್ ಗಜಾನನ ಭಟ್ ಅವರು, ಪ್ರಕರಣದ ಆದೇಶವನ್ನು ಕಾಯ್ದಿರಿಸಿ 2:45 ಕ್ಕೆ ಆದೇಶ ನೀಡುವುದಾಗಿ ತಿಳಿಸಿದರು. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಶಿಕ್ಷ ಪ್ರಮಾಣದ ಕುರಿತು ವಿಚಾರಣೆ ನಡೆಯಿತು. ಮೊದಲಿಗೆ ಪ್ರಾಸಿಕ್ಯೂಷನ್ ಪರ ವಾದಿಸಲು ಕೋರ್ಟ್ ಸೂಚನೆ ನೀಡಿತು ಪ್ರಾಸಿಕ್ಯೂಷನ್ ಪರವಾಗಿ ಎಸ್ಪಿಪಿ ಬಿ.ಎನ್ ಜಗದೀಶ್ ವಾದ ಆರಂಭ ಮಾಡಿದರು. ಗರಿಷ್ಠ ಶಿಕ್ಷಕನಿಷ್ಠ ಶಿಕ್ಷೆ ಎಷ್ಟು ಎಂದು ಸ್ಪಷ್ಟವಾಗಿದೆ ಕೇವಲ ಅತ್ಯಾಚಾರ ಆಗಿದ್ದರೆ 10 ವರ್ಷದಿಂದ ಜೀವಾವಧಿ ಶಿಕ್ಷೆ ವಿಧಿಸಲು ಅವಕಾಶವಿತ್ತು. ಆದರೆ ಇಲ್ಲಿ ಪದೇ ಪದೇ ಅತ್ಯಾಚಾರವಾಗಿದೆ. ಕನಿಷ್ಠ 10 ವರ್ಷ ಗರಿಷ್ಠ ಜೀವನ ಪರ್ಯಂತ ಸೆರೆವಾಸದ ಅವಕಾಶ ಇದೆ, ಮಹಿಳೆ ಶಿಕ್ಷಿತಳಲ್ಲ, ಬಡ ಕೂಲಿ…
ಬಂಟ್ವಾಳ: ಅಕ್ರಮ ಮರಳು ಅಡ್ಡೆಗೆ ವಿಟ್ಲ ಠಾಣಾ ಪೊಲೀಸರು ದಾಳಿ ನಡೆಸಿದ ಘಟನೆ ಬಂಟ್ವಾಳ, ಸಾಲೆತ್ತೂರು ಗ್ರಾಮದ ಕಟ್ಟತ್ತಿಲ ಎಂಬಲ್ಲಿಆಗಸ್ಟ್ 1ರಂದು ನಡೆದಿದೆ. ಆರೋಪಿ ಅಬ್ದುಲ್ ಸಮದ್ ಎಂಬಾತನು ಹೊಳೆಯಿಂದ ಯಂತ್ರದ ಮೂಲಕ ಮರಳನ್ನು ಅಕ್ರಮವಾಗಿ ತೆಗೆದು ಸಂಗ್ರಹಿಸಿಟ್ಟಿರುವ ಬಗ್ಗೆ ಪೊಲೀಸರಿಗೆ ಮಾಹಿತಿ ಹೊರೆತಿದೆ. ಈ ಹಿನ್ನೆಲೆ ವಿಟ್ಲ ಠಾಣಾ ಪೊಲೀಸ್ ಉಪ ನಿರೀಕ್ಷಕರಾದ ರತ್ನಕುಮಾರ್ ರವರು ಸಿಬ್ಬಂದಿಗಳೊಂದಿಗೆ ತೆರಳಿ ಪರಿಶೀಲಿಸಿದ್ದಾರೆ.ಈ ವೇಳೆ ಕೇರಳ ಗಡಿಭಾಗದಿಂದ ಅಂದಾಜು ಒಂದು ಕಿ.ಮೀ ದೂರದ ಸಾಲೆತ್ತೂರು ಕಟ್ಟತ್ತಿಲ ಹೊಳೆಯ ಸೇತುವೆ ಬಳಿ, ಸುಮಾರು 2 ರಿಂದ 3 ಪಿಕಪ್ ನಷ್ಟು ಮರಳು ಮತ್ತು ಹೊಳೆಯಿಂದ ಮರಳನ್ನು ತೆಗೆಯಲು ಉಪಯೋಗಿಸುತ್ತಿದ್ದ ಯಂತ್ರ, ಕಬ್ಬಿನದ ಜಾಲರಿ, ಪೈಬರ್ ಬುಟ್ಟಿಗಳು, ಕಬ್ಬಿಣದ ಹಾರೆ ಹಾಗೂ ಕೃತ್ಯಕ್ಕೆ ಬಳಸಿದ ಇತರೆ ಸೊತ್ತುಗಳು ಕಂಡುಬಂದಿದೆ. ಈ ಸೊತ್ತುಗಳನ್ನು ಪೊಲೀಸರು ಸ್ವಾಧೀನಪಡಿಸಿಕೊಂಡಿದ್ದಾರೆ. ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಅಕ್ರ:93/2025 ರಂತೆ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.
ಬೆಂಗಳೂರು : ಮದ್ಯಪಾನ ಮಾಡಿ ವಾಹನ ಚಾಲನೆ ಪ್ರಕರಣಗಳಲ್ಲಿ ವಿಮಾದಾರರ ಹೊಣೆಗಾರಿಕೆಯನ್ನು ಮುಕ್ತಗೊಳಿಸಲು 1988 ರ ಮೋಟಾರು ವಾಹನ ಕಾಯ್ದೆಗೆ ತಿದ್ದುಪಡಿ ತರುವುದನ್ನು ಪರಿಗಣಿಸಬೇಕೆಂದು ಕರ್ನಾಟಕ ಹೈಕೋರ್ಟ್ ಕೇಂದ್ರ ಮತ್ತು ರಾಜ್ಯ ಸರ್ಕಾರಗಳನ್ನು ಒತ್ತಾಯಿಸಿದೆ. ಮದ್ಯಪಾನ ಮಾಡಿ ವಾಹನ ಚಾಲನೆ ಮಾಡುವ ಸಮಯದಲ್ಲಿ ಅಪಘಾತವಾದಲ್ಲಿ ಮೂರನೇ ವ್ಯಕ್ತಿಗೆ ವಿಮಾ ಕಂಪನಿಗಳಿಂದ ಪರಿಹಾರ ಮೊತ್ತ ಪಡೆಯುವುದನ್ನು ತಪ್ಪಿಸಲು ಕೇಂದ್ರ ಮತ್ತು ರಾಜ್ಯ ಸರ್ಕಾರ ಮೋಟಾರ್ ವಾಹನಗಳ ಕಾಯ್ದೆ -1988ಕ್ಕೆ ತಿದ್ದುಪಡಿ ತರಬೇಕು ಎಂದು ಹೈಕೋರ್ಟ್ ಆದೇಶಿಸಿದೆ. ಮದ್ಯಪಾನ ಮಾಡಿ ದ್ವಿಚಕ್ರ ವಾಹನ ಚಲಾಯಿಸುತ್ತಿದ್ದಾಗ ಅಪಘಾತಕ್ಕೆ ಒಳಗಾದ ಪ್ರಕರಣದಲ್ಲಿ ಬೆಂಗಳೂರಿನ ಪ್ರತೀಕ್ ಕುಮಾರ್ ತ್ರಿಪಾಠಿಗೆ 2.59 ಲಕ್ಷ ರೂ. ಪರಿಹಾರ ಪಾವತಿಸಲು ಆದೇಶಿಸಿದ ಮೋಟಾರ್ ವಾಹನಗಳ ಅಪಘಾತ ಪರಿಹಾರ ನ್ಯಾಯಾಧೀಕರಣದ ಆದೇಶ ಪ್ರಶ್ನಿಸಿ ಓರಿಯಂಟಲ್ ಇನ್ಸೂರೆನ್ಸ್ ಕಂಪನಿ ಹೈಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿತ್ತು.ಈ ಮೇಲ್ಮನವಿ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ಉಮೇಶ್ ಅಡಿಗ ಅವರ ಪೀಠ ಈ ಪ್ರಕರಣದಲ್ಲಿ ಮೋಟಾರ್ ವಾಹನ ಚಾಲಕ…
ಬೆಂಗಳೂರು: ಧರ್ಮಸ್ಥಳದಲ್ಲಿನ ಕೊಲೆಯಾದ ನೂರಾರು ಶವಗಳನ್ನು ಹೂತಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಈ ಪ್ರಕರಣ ಸಂಬಂಧ ಮಾಧ್ಯಮಗಳ ಮೇಲಿನ ನಿರ್ಬಂಧವನ್ನು ರದ್ದುಗೊಳಿಸಿ ಆದೇಶಿಸಿದೆ. ಧರ್ಮಸ್ಥಳದಲ್ಲಿ ಕೊಲೆಯಾದ ನೂರಾರು ಶವಗಳನ್ನು ಹೂತಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗಡೆ ಅವರ ಸಹೋದರ ಹರ್ಷೇಂದ್ರ ಕುಮಾರ್.ಡಿ ಅವರು ಮಾಧ್ಯಮಗಳ ವಿರುದ್ಧ ಪ್ರತಿಬಂಧಕಾದೇಶ ತಂದಿದ್ದರು. ಇಂದು ಈ ಪ್ರತಿಬಂಧಕಾದೇಶವನ್ನು ಪ್ರಶ್ನಿಸಿ ಹೈಕೋರ್ಟ್ ಗೆ ದಕ್ಷಿಣ ಕನ್ನಡದ ಕುಡ್ಲ ರ್ಯಾಂಪೇಜ್ ಪ್ರಧಾನ ಸಂಪಾದಕ ಅಜಯ್ ಅವರು ಸಲ್ಲಿಸಿದ್ದಂತ ಅರ್ಜಿಯನ್ನು ಹೈಕೋರ್ಟ್ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರನ್ನು ಒಳದೊಂಡಂತ ಏಕಸದಸ್ಯ ನ್ಯಾಯಪೀಠವು ವಿಚಾರಣೆ ನಡೆಸಿತು. ಈ ಅರ್ಜಿಯನ್ನು ಪುರಸ್ಕರಿಸಿದಂತ ಹೈಕೋರ್ಟ್ ನ್ಯಾಯಪೀಠವು ದಿನಾಂಕ 8-7-2025ರಂದು ವಿಚಾರಣಾಧೀನ ನ್ಯಾಯಾಲಯವು ಮಾಡಿರುವ ಆಕ್ಷೇಪಾರ್ಹವಾದ ಏಕಪಕ್ಷೀಯ ಪ್ರತಿಬಂಧಕಾದೇಶವನ್ನು ರದ್ದುಪಡಿಸಿದೆ. ಇದಲ್ಲದೇ ಮಧ್ಯಂತರ ಅರ್ಜಿಯನ್ನು ಹೊಸದಾಗಿ ಪರಿಗಣಿಸಲು ಪ್ರಕರಣವನ್ನು ಸಕ್ಷಮ ನ್ಯಾಯಾಲಯಕ್ಕೆ ವಾಪಾಸ್ ಕಳುಹಿಸಿದೆ. ಇನ್ನೂ ವಿಚಾರಣಾಧೀನ ನ್ಯಾಯಾಲಯವು ಈ ಆದೇಶವನ್ನು ಮಾಡಿರುವ ಅಂಶಗಳನ್ನು ಗಮನದಲ್ಲಿ ಇಟ್ಟುಕೊಳ್ಳಬೇಕು.…
ಮಂಗಳೂರು: ನಗರದ ಮಹಿಳಾ ಠಾಣೆಯಲ್ಲಿ ದಾಖಲಾಗಿದ್ದ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ದೀರ್ಘಕಾಲದಿಂದ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಕಂಕನಾಡಿಯ ಅಪಾರ್ಟ್‌ಮೆಂಟ್‌ವೊಂದರ ನಿವಾಸಿ ಉಬೇದುಲ್ಲಾ ಮತ್ತು ಹೊಯಿಗೆ ಬಜಾರ್ ನಿವಾಸಿ ದಾಮೋದರ ಎಂದು ಗುರುತಿಸಲಾಗಿದೆ. 2011ರ ಮಾರ್ಚ್ 14ರಂದು ನಗರದ ಹಂಪನಕಟ್ಟೆಯ ಲಾಡ್ಜ್‌ವೊಂದರಲ್ಲಿ ವೇಶ್ಯಾವಾಟಿಕೆ ನಡೆಯುತ್ತಿದ್ದ ಬಗ್ಗೆ ಮಾಹಿತಿ ಪಡೆದ ಮಹಿಳಾ ಪೊಲೀಸರು ದಾಳಿ ನಡೆಸಿ ನಾಲ್ಕು ಮಂದಿಯ ವಿರುದ್ಧ ಪ್ರಕರಣ ದಾಖಲಿಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು. ಈ ಪೈಕಿ ಮೂವರ ವಿಚಾರಣೆಯಾಗಿದ್ದು, ಅವರು ಪ್ರಕರಣದಿಂದ ಖುಲಾಸೆಗೊಂಡಿದ್ದರು. ಆದರೆ 4ನೇ ಆರೋಪಿ ಪಿ. ದಾಮೋದರ ಎಂಬಾತನು 14 ವರ್ಷದಿಂದ ತಲೆಮರೆಸಿಕೊಂಡಿದ್ದ. ಹಾಗಾಗಿ ನ್ಯಾಯಾಲಯವು ಆತನ ಬಂಧನಕ್ಕೆ ವಾರಂಟ್ ಹೊರಡಿಸಿತ್ತು. ಅದರಂತೆ ಮಹಿಳಾ ಠಾಣೆಯ ಪೊಲೀಸರು ದಾಮೋದರನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ. ಉಬೇದುಲ್ಲಾ ಎಂಬಾತನು ಹೆಚ್ಚುವರಿ ವರದಕ್ಷಿಣೆಗಾಗಿ ತನ್ನ ಹೆಂಡತಿಗೆ ದೈಹಿಕ ಮತ್ತು ಮಾನಸಿಕ ಹಿಂಸೆ ನೀಡಿದ ಬಗ್ಗೆ 2018ರಲ್ಲಿ ಮಹಿಳಾ ಠಾಣೆಯಲ್ಲಿ ಪ್ರಕರಣ…
ಕಿನ್ನಿಗೋಳಿ: ಎರಡು ಕಾರುಗಳ ನಡುವೆ ಭೀಕರ ಅಪಘಾತ ಸಂಭವಿಸಿ ಮಗು ಸಹಿತ ಮೂವರು ಗಂಭೀರ ಗಾಯಗೊಂಡ ಘಟನೆ ಕಿನ್ನಿಗೋಳಿ ಮುಲ್ಕಿ ರಾಜ್ಯ ಹೆದ್ದಾರಿಯ ಕೆರೆಕಾಡು ಜಂಕ್ಷನ್ ಬಳಿ ನಡೆದಿದೆ. ಗಾಯಗೊಂಡವರನ್ನು ಕುಂದಾಪುರ ತೆಕ್ಕಟ್ಟೆ ನಿವಾಸಿಗಳಾದ ನಿತಿಲ್ (25), ಅವಿನಾಶ್(23), ಮಗು ಮೃತ್ತಿನ್ (2) ಎಂದು ಗುರುತಿಸಲಾಗಿದೆ. ಇನ್ನೊಂದು ಕಾರಿನಲ್ಲಿದ್ದ ಮುಲ್ಕಿ ಮೂಲದ ಮೂವರು ಯುವಕರು ಸಣ್ಣ ಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ. ಗಾಯಾಳುಗಳನ್ನು ಕಿನ್ನಿಗೋಳಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಟೀಲು ಕಡೆಯಿಂದ ಕುಂದಾಪುರದ ಕಡೆಗೆ ಹೊರಟಿದ್ದ ಕಾರು ಕಿನ್ನಿಗೋಳಿ ಮೂಲ್ಕಿ ರಾಜ್ಯ ಹೆದ್ದಾರಿಯ ಕೆರೆಕಾಡು ತಲುಪುತ್ತಿದ್ದಂತೆ ಮೂಲ್ಕಿ ಕಡೆಯಿಂದ ಅತಿ ವೇಗದಿಂದ ಬಂದ ಕಾರು ಹೆದ್ದಾರಿಯ ಹೊಂಡ ತಪ್ಪಿಸುವ ಭರದಲ್ಲಿ ಎದುರಿನಿಂದ ಬಂದ ಕಾರಿಗೆ ಢಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಎರಡೂ ಕಾರುಗಳು ಪಲ್ಟಿಯಾಗಿದ್ದು ಕಾರಿನಲ್ಲಿ ಸಿಲುಕಿಕೊಂಡವರನ್ನು ಸ್ಥಳೀಯರು ರಕ್ಷಿಸಿ ಕಿನ್ನಿಗೋಳಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಅಪಘಾತದಲ್ಲಿ ಎರಡೂ ಕಾರುಗಳು ಜಖಂಗೊಂಡಿವೆ. ಘಟನಾ ಸ್ಥಳಕ್ಕೆ ಮಂಗಳೂರು ಉತ್ತರ ಟ್ರಾಫಿಕ್ ಪೊಲೀಸ್ ಭೇಟಿ ನೀಡಿ ಪರಿಶೀಲನೆ…
ಬಂಟ್ವಾಳ: ಅಡಿಕೆ ಕಳ್ಳತನ ಪ್ರಕರಣದ ಆರೋಪಿಯನ್ನು ವಸ್ತು ಸಹಿತ ಪೊಲೀಸರು ಬಂಧಿಸಿದ ಘಟನೆ ಬಂಟ್ವಾಳದಲ್ಲಿ ನಡೆದಿದೆ. ಸುಳ್ಯ ತಾಲೂಕಿನ ಪ್ರಚಾರು ನಿವಾಸಿ ಸತೀಶ್ (29) ಬಂಧಿತ ಆರೋಪಿ. ಮಣಿನಾಲ್ಕೂರು ಗ್ರಾಮದ ಪೂಂಜೂರು ಎಂಬಲ್ಲಿ ಜುಲೈ 3 ರಿಂದ 22 ರ ಅವಧಿಯಲ್ಲಿ ಸುಮಾರು 45 ಪ್ಲಾಸ್ಟಿಕ್ ಚೀಲದಲ್ಲಿದ್ದ 2.20 ಲಕ್ಷ ರೂ. ಮೌಲ್ಯದ ಒಣ ಅಡಿಕೆ ಕಳವಾಗಿರುವ ಬಗ್ಗೆ ಜುಲೈ, 23 ರಂದು ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆರೋಪಿಗಳ ಪತ್ತೆ ಕಾರ್ಯಕ್ಕಾಗಿ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ಇನ್ಸ್ ಪೆಕ್ಟರ್ ಶಿವಕುಮಾರ ಬಿ ಅವರ ನೇತೃತ್ವದಲ್ಲಿ ತಂಡ ರಚಿಸಿ ಕಾರ್ಯಾಚರಣೆ ನಡೆಸಿದ ಪೊಲೀಸರು ಜುಲೈ 28 ರಂದು ಆರೋಪಿ ಸತೀಶ್ ಎಂಬಾತನನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಯಿಂದ ಕಳವುಗೈದ 74 ಸಾವಿರ ರೂ. ಮೌಲ್ಯದ 15 ಚೀಲ ಒಣ ಅಡಿಕೆ, ಕಳವುಗೈದ ಅಡಿಕೆಯನ್ನು ಮಾರಾಟ ಮಾಡಿದ 70 ಸಾವಿರ ರೂ. ನಗದು ಹಣ, ಕೃತ್ಯಕ್ಕೆ ಬಳಸಿದ 80 ಸಾವಿರ…
ಬೆಂಗಳೂರು : ರಾಜ್ಯ ಸರ್ಕಾರವು ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ಮಾಡಿದ್ದು, ಮತ್ತೆ 4 ಮಂದಿ ಕೆಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಕರ್ನಾಟಕ ಆಡಳಿತ ಸೇವೆಗೆ ಸೇರಿದ ಈ ಕೆಳಕಂಡ ಅಧಿಕಾರಿಗಳನ್ನು ಸಾರ್ವಜನಿಕ ಹಾಗೂ ಆಡಳಿತಾತ್ಮಕ ಹಿತದೃಷ್ಠಿಯಿಂದ ಈ ಕೂಡಲೇ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಅವರುಗಳ ಹೆಸರಿನ ಮುಂದೆ ನಮೂದಿಸಿರುವ ಹುದ್ದೆಗಳಿಗೆ ವರ್ಗಾಯಿಸಿ / ಸ್ಥಳ ನಿಯುಕ್ತಿಗೊಳಿಸಿ ಆದೇಶಿಸಿದೆ
ಕಾಸರಗೋಡು: ಸ್ಕೂಟರ್ ಪ್ರಯಾಣಿಕನೋರ್ವನಿಂದ 1.800 ಕಿಲೋ ಗಾಂಜಾವನ್ನು ಕುಂಬಳೆ ಅಬಕಾರಿ ದಳದ ಸಿಬ್ಬಂದಿಗಳು ವಶಪಡಿಸಿಕೊಂಡಿದ್ದಾರೆ. ಬಂಧಿತ ಆರೋಪಿಯನ್ನು ಬಂದ್ಯೋಡಿನ ಮುಹಮ್ಮದ್ ಅಲಿ (51) ಎಂದು ಗುರುತಿಸಲಾಗಗಿದೆ. ಮಂಗಳವಾರ ರಾತ್ರಿ ಕುಂಬಳೆ ಶಿರಿಯ ಎಂಬಲ್ಲಿ ವಾಹನ ತಪಾಸಣೆ ನಡೆಸುತ್ತಿದ್ದಾಗ ಈ ದಾರಿಯಾಗಿ ಬಂದ ಸ್ಕೂಟರ್ ಪ್ರಯಾಣಿಕನನ್ನು ತಪಾಸಣೆ ನಡೆಸಿದಾಗ ಗಾಂಜಾ ಸಾಗಾಟ ಪತ್ತೆಯಾಗಿದೆ.










