Author: main-admin

ಮಂಗಳೂರು: ಪೆಟ್ರೋಲ್ ಬಂಕ್‌ನ ಸೂಪರ್‌ವೈಸರ್‌ನೊಬ್ಬ ವೈಯಕ್ತಿಕ ಖಾತೆಯ ಕ್ಯು ಆರ್ ಕೋಡ್‌ನ್ನು ಹಾಕಿ 58.85 ಲಕ್ಷ ರೂ. ವಂಚಿಸಿರುವ ಬಗ್ಗೆ ದೂರು ನೀಡಲಾಗಿದೆ. ಬಂಗ್ರಕೂಳೂರಿನ ರಿಲಯನ್ಸ್‌ ಔಟ್‌ಲೆಟ್ ಪ್ರೈಯೆಲ್ ಬಂಕ್‌ ನಲ್ಲಿ ಸೂಪರ್‌ವೈಸರ್ ಆಗಿ ದ್ದ ಮೋಹನದಾಸ್ ಎಂಬಾತ ಬಂಕ್‌ನ ಹಣಕಾಸು ವ್ಯವಹಾರ ನಿರ್ವಹಣೆಯ ಜವಾಬ್ದಾರಿ ನೋಡಿಕೊಂಡಿದ್ದನು ಈತ 2023ರ ಮಾ.1ರಿಂದ ಜು.31ರವರೆಗೆ ಪೆಟ್ರೋಲ್ ಬಂಕ್‌ನಲ್ಲಿ ಸಂಸ್ಥೆಯ ಕ್ಯುಆರ್ ಕೋಡ್ ತೆಗೆದು ವೈಯಕ್ತಿಯ ಖಾತೆಯ ಕ್ಯುಆರ್ ಕೋಡ್‌ನ್ನು ಅಳವಡಿಸಿ ಆ ಮೂಲಕ 58,85,333 ರೂ.ಗಳನ್ನು ವರ್ಗಾಯಿಸಿಕೊಂಡು ವಂಚಿಸಿದ್ದಾನೆ ಎಂದು ರಿಲಯನ್ಸ್ ಔಟ್ ಲೆಟ್ ಫ್ಯುಯೆಲ್ ಬಂಕ್‌ನ ಮ್ಯಾನೇಜರ್ ನಗರದ ಸೆನ್ ಪೊಲೀಸರಿಗೆ ದೂರು ನೀಡಿದ್ದಾರೆ.

Read More

ಬೆಂಗಳೂರು: ರಾಜ್ಯದ ವಿವಿಧೆಡೆ 8 ಜನ ಸರ್ಕಾರಿ ಅಧಿಕಾರಿಗಳಿಗೆ ಸಂಬಂಧಿಸಿದ ಸ್ಥಳಗಳಲ್ಲಿ ಲೋಕಾಯುಕ್ತ ಪೊಲೀಸರ ತಂಡ ದಾಳಿ ನಡೆಸಿದೆ. ಅಸಮತೋಲಿತ ಆಸ್ತಿ ಸಂಗ್ರಹದ ಆರೋಪದಡಿ ಬೆಂಗಳೂರು, ಚಿಕ್ಕಮಗಳೂರು, ಬೀದರ್, ಬೆಳಗಾವಿ, ತುಮಕೂರು, ಗದಗ, ಬಳ್ಳಾರಿ ಹಾಗೂ ರಾಯಚೂರು ಜಿಲ್ಲೆಗಳಲ್ಲಿ ಲೋಕಾಯುಕ್ತ ಪೊಲೀಸರು ಶೋಧ ಕಾರ್ಯ ನಡೆಸುತ್ತಿದ್ದಾರೆ. ಲೋಕಾಯುಕ್ತ ದಾಳಿಗೊಳಗಾದ ಅಧಿಕಾರಿಗಳ ವಿವರ ಶೋಭಾ – ಜಂಟಿ ಆಯುಕ್ತೆ, ಸಾರಿಗೆ ಇಲಾಖೆ, ಬೆಂಗಳೂರು ಡಾ.ಎಸ್.ಎನ್ ಉಮೇಶ್ – ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ – ಕಡೂರು ತಾಲ್ಲೂಕು, ಚಿಕ್ಕಮಗಳೂರು ರವೀಂದ್ರ – ಇನ್ಸ್‌ಪೆಕ್ಟರ್, ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಉಪವಿಭಾಗ, ಬಸವ ಕಲ್ಯಾಣ, ಬೀದರ್ ಪ್ರಕಾಶ್ ಶ್ರೀಧರ್ ಗಾಯಕ್ವಾಡ್ – ತಹಶಿಲ್ದಾರ್, ಖಾನಾಪುರ, ಬೆಳಗಾವಿ ಎಸ್.ರಾಜು – ಪ್ರಾದೇಶಿಕ ಸಾರಿಗೆ ಅಧಿಕಾರಿ (ನಿವೃತ್ತ), ಪ್ರಾದೇಶಿಕ ಸಾರಿಗೆ ಇಲಾಖೆ, ತುಮಕೂರು ಹುಚ್ಚೇಶ್ – ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ (ಇನ್ ಚಾರ್ಜ್), ಗದಗ – ಬೆಟಗೇರಿ ಪುರಸಭೆ, ಗದಗ ಆರ್.ಎಚ್.ಲೋಕೇಶ್ – ಕಲ್ಯಾಣಾಧಿಕಾರಿ, ಹಿಂದುಳಿದ…

Read More

ಕಾಸರಗೋಡು: :ಮದುವೆ ಗೆಂದು ಲಿಫ್ಟ್‌ನಲ್ಲಿ ಸಭಾಂಗಣಕ್ಕೇರುತ್ತಿದ್ದ ವೇಳೆ ಲಿಫ್ಟ್ ದಿಢೀರ್ ಕೈಕೊಟ್ಟು ವಧೂ-ವರರ ಸಹಿತ 18 ಮಂದಿಯಿದ್ದ ವಿವಾಹ ತಂಡ ಎರಡು ಗಂಟೆಗಳ ತನಕ ಲಿಫ್ಟ್‌ನಲ್ಲೇ ಸಿಲುಕಿಕೊಂಡ ಘಟನೆ ತೃಕ್ಕರಿ ಪುರ ವಡಕ್ಕೇ ಕೊವ್ವಲ್‌ನಲ್ಲಿ ನಡೆದಿದೆ. ಪಳಯಂಗಾಡಿ ನಿವಾಸಿಯಾದ ವರ ಹಾಗೂ ಹೊಸದುರ್ಗ ನಿವಾಸಿಯಾದ ವಧು ಮತ್ತು ಅವರ ಕುಟುಂಬದವರು 1ನೇ ಮಹಡಿಯಲ್ಲಿರುವ ಸಭಾಂಗಣಕ್ಕೆ ಹೋಗಲು ಲಿಫ್ಟ್‌ ಗೇರಿದ್ದರು. ಲಿಫ್ಟ್ ಮೇಲೇರುತ್ತಿದ್ದಂತೆ ಭಾರೀ ಸದ್ದಿನೊಂದಿ ಗೆ ಅರ್ಧದಲ್ಲೇ ನಿಂತಿತ್ತು. ಅಗ್ನಿಶಾಮಕದಳದ ಎರಡು ಗಂಟೆಗಳ ಪ್ರಯತ್ನದಿಂದ ಲಿಫ್ಟ್‌ನ ಬಾಗಿಲು ತೆರೆದು ಅದರಲ್ಲಿ ಸಿಲುಕಿಕೊಂಡಿದ್ದವರನ್ನು ಏಣಿಯ ಮೂಲಕ ರಕ್ಷಿಸಲಾಯಿತು. ನಿಗದಿತ ಸಂಖ್ಯೆಗಿಂತ ಅಧಿಕ ಮಂದಿ ಲಿಫ್ಟ್ ಏರಿದ್ದು, ಲಿಫ್ಟ್ ನಿಲುಗಡೆಗೆ ಕಾರಣವೆನ್ನಲಾಗಿದೆ.

Read More

ಮಂಗಳೂರು: ಬಾತ್‌ರೂಮ್‌ನಲ್ಲಿ ಸ್ನಾನ ಮಾಡುತ್ತಿದ್ದ ಬಾಲಕಿಯ ವೀಡಿಯೋ ಚಿತ್ರೀಕರಣ ಮಾಡಿದ ಯುವಕನಿಗೆ ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ (ಪೋಕ್ಸೋ) ಎಫ್ಟಿಎಸ್‌ಸಿ-1 ನ್ಯಾಯಾಲಯದ ನ್ಯಾಯಾಧೀಶ ವಿನಯ್‌ ದೇವರಾಜ್‌ ಅವರು ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದಾರೆ. ಬಜಪೆ ಠಾಣಾ ವ್ಯಾಪ್ತಿಯಲ್ಲಿ 2024ರ ಮಾ. 10ರಂದು ಘಟನೆ ನಡೆದಿತ್ತು. ಆರೋಪಿ ಗಗನ್‌ (24) ಮನೆಯೊಂದರ ಕಾಂಪೌಂಡ್‌ ಗೋಡೆಯೇರಿ ಎಕ್ಸಾಸ್ಟ್‌ ಫ್ಯಾನ್‌ ಹಾಕಲೆಂದು ಬಿಟ್ಟಿದ್ದ ಕಿಟಕಿಯಲ್ಲಿ ಮೊಬೈಲ್‌ನಲ್ಲಿ ವೀಡಿಯೋ ಚಿತ್ರೀಕರಣ ಮಾಡಿದ್ದ. ಪ್ರಕರಣ ನಡೆದು 9 ತಿಂಗಳಲ್ಲಿ ನ್ಯಾಯಾಲಯ ಆರೋಪಿಗೆ ಶಿಕ್ಷೆ ವಿಧಿಸಿದೆ. ಆರೋಪಿಗೆ 1 ವರ್ಷ ಜೈಲು, 20 ಸಾವಿರ ರೂ. ದಂಡ ವಿಧಿಸಲಾಗಿದೆ. ದಂಡದಲ್ಲಿ 10 ಸಾವಿರ ರೂ.ಗಳನ್ನು ಅಲ್ಲದೆ ಪ್ರತ್ಯೇಕವಾಗಿ 1 ಲ.ರೂ.ಗಳನ್ನು ನೊಂದ ಬಾಲಕಿಗೆ ಪರಿಹಾರವಾಗಿ ನೀಡುವಂತೆ ನ್ಯಾಯಾಧೀಶರು ಕಾನೂನು ಸೇವಾ ಪ್ರಾಧಿಕಾರಕ್ಕೆ ನಿರ್ದೇಶನ ನೀಡಿದ್ದಾರೆ. ಪ್ರಾಸಿಕ್ಯೂಷನ್‌ ಪರ ವಿಶೇಷ ಸರಕಾರಿ ಅಭಿಯೋಜಕಿ ಸಹನಾದೇವಿ ಬೋಳೂರು ವಾದಿಸಿದ್ದರು. ಆರೋಪಿ ಚಿತ್ರೀಕರಿಸಿದ್ದ ದೃಶ್ಯಗಳನ್ನು ಡಿಲೀಟ್‌ ಮಾಡಿದ್ದರೂ, ಸಾಕ್ಷಿಗಳ ಹೇಳಿಕೆಯ ಆಧಾರದಲ್ಲಿ…

Read More

ಮಂಗಳೂರು : ವ್ಯಕ್ತಿಯೊಬ್ಬರು ನಿಜವಾದ ರಿವಾಲ್ವರ್ ನ್ನು ಆಟದ ಸಾಮಾನು ಎಂದು ಅದರ ಟ್ರಿಗರ್ ಒತ್ತಿದ ಪರಿಣಾಮ ಹೊಟ್ಟೆ ಗುಂಡು ಹೊಡೆದು ಆಸ್ಪತ್ರೆಗೆ ದಾಖಲಾದ ಘಟನೆ ಮಂಗಳೂರು ಹೊರವಲಯದ ವಾಮಂಜೂರಿನಲ್ಲಿ ನಡೆದಿದೆ. ಗಾಯಗೊಂಡವರನ್ನು ಸಫ್ವಾನ್ ಎಂದು ಗುರುತಿಸಲಾಗಿದೆ. ವಾಮಂಜೂರಿನ ಸೆಕೆಂಡ್ ಹ್ಯಾಂಡ್ ಅಂಗಡಿಯೊಂದರಲ್ಲಿ ಭಾಸ್ಕರ್ ಎಂಬವರು ಗನ್ ಅನ್ನು ಟೇಬಲ್ ಮೇಲಿರಿಸಿ ವಾಶ್ ರೂಂ ಗೆಂದು ತೆರಳಿದ್ದರು. ಈ ವೇಳೆ ಸೆಕೆಂಡ್ ಹ್ಯಾಂಡ್ ಬಜಾರ್ ಗೆ ಖರೀದಿಗೆ ಬಂದಿದ್ದ ಸಫ್ವಾನ್ ಎಂಬವರು ಆಟದ ವಸ್ತುವೆಂದು ಭಾವಿಸಿ ಹೊಟ್ಟೆಯ ಮೇಲಿಟ್ಟು ಶೂಟ್ ಮಾಡಿಕೊಂಡಿದ್ದಾರೆ. ಪರಿಣಾಮ ಸಫ್ವಾನ್ ಹೊಟ್ಟೆಗೆ ಗುಂಡು ತಗುಲಿ ಗಾಯಗೊಂಡಿದ್ದಾರೆ. ಸದ್ಯ ಗಾಯಾಳು ಪಡೀಲ್ ನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದೊಂದು ಆಕಸ್ಮಿಕ ಘಟನೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

Read More

ಮಂಗಳೂರು: ನಗರದ ಜೈಲಿನೊಳಗಡೆ ಮೊಬೈಲ್ ಹಾಗೂ ಸಿಗರೆಟ್ ಎಸೆಯಲು ಯತ್ನಿಸಿದ ಯುವಕನೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಪಂಜಿಮೊಗರು ನಿವಾಸಿ ಪ್ರಜ್ವಲ್(21) ಎಂಬಾತ ಬಂಧಿತ ಆರೋಪಿ. ಭಾನುವಾರ ಮಧ್ಯಾಹ್ನ 3 ಗಂಟೆ ಸುಮಾರಿಗೆ ಆರೋಪಿ ಪ್ರಜ್ವಲ್ ಜೈಲು ಸಮೀಪದ ಕೆನರಾ ಕಾಲೇಜಿನ ಮುಖ್ಯದ್ವಾರದ ಒಳಗೆ ಪ್ರವೇಶಿಸಿದ್ದಾನೆ. ಅಲ್ಲಿಂದ ಕಾರಾಗೃಹದೊಳಗೆ ಕೆಂಪು ಬಣ್ಣದ ಗಮ್‌ಟೇಪ್‌ನಿಂದ ಸುತ್ತಿದ ಪೊಟ್ಟಣಗಳನ್ನು ಎಸೆಯಲು ಪ್ರಯತ್ನಿಸುತ್ತಿದ್ದ. ಇದನ್ನು ಗಮನಿಸಿದ ಗಸ್ತು ಕರ್ತವ್ಯದಲ್ಲಿದ್ದ ಕೆಎಸ್‌ಐಎಸ್‌ಎ- ಸಿಬ್ಬಂದಿ ಆರೋಪಿಯನ್ನು ವಶಪಡಿಸಿಕೊಂಡಿದ್ದಾರೆ. ಈ ಪೊಟ್ಟಣದೊಳಗೆ ಎರಡು ಕೀ ಪ್ಯಾಡ್ ಮೊಬೈಲ್ ಮತ್ತು ಎರಡು ಪ್ಯಾಕೆಟ್ ಸಿಗರೇಟ್ ಇತ್ತು. ಪ್ರಜ್ವಲ್ ಈ ಹಿಂದೆ ಪ್ರಕರಣವೊಂದರಲ್ಲಿ ಬಂಧಿಸಲ್ಪಟ್ಟು ಕಾರಾಗೃಹದಲ್ಲಿದ್ದ. ಈ ಬಗ್ಗೆ ಬರ್ಕೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಮಂಗಳೂರು: ಅತಿ ಅಪರೂಪದ ಪ್ರಕರಣವೊಂದರಲ್ಲಿ ಮಹಿಳೆಯೊಬ್ಬರು ನಾಲ್ಕು ಮಕ್ಕಳಿಗೆ ಜನ್ಮ ನೀಡಿದ ಪ್ರಕರಣ ಕಂಕನಾಡಿ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ನಡೆದಿದೆ. ವೈದ್ಯರ ತಂಡ ಶಸ್ತ್ರಚಿಕಿತ್ಸೆ ಮೂಲಕ ಹೆರಿಗೆ ಮಾಡಿಸಿದ್ದು, ತಾಯಿ ಮಕ್ಕಳು ಆರೋಗ್ಯವಾಗಿದ್ದಾರೆ ಎಂದು ವೈದ್ಯರು ಹೇಳಿದ್ದಾರೆ. ತೆಲಂಗಾಣ ರಾಜ್ಯದ ತೇಜ ಎಂಬವರ ಪತ್ನಿ ಬಾನೋತ್ ದುರ್ಗಾ ಅವರು ನಾಲ್ವರು ಮಕ್ಕಳಿಗೆ ಜನನ ನೀಡಿದ ಮಹಾತಾಯಿ. ಈ ನಾಲ್ವರು ಮಕ್ಕಳಲ್ಲಿ ಎರಡು ಗಂಡು, ಎರಡು ಹೆಣ್ಣು ಮಕ್ಕಳಿಗೆ ಅವರು ಜನನ ನೀಡಿದ್ದಾರೆ. ಈ ನಾಲ್ಕು ಮಕ್ಕಳೂ ಆರೋಗ್ಯವಾಗಿದ್ದಾರೆ‌‌. ಪ್ರಸವ ಪೂರ್ವ ಜನನ ಆಗಿದ್ದರಿಂದ ಸದ್ಯ ಮಕ್ಕಳಿಗೆ ಎನ್ಐಸಿಯುವಿನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ತೆಲಂಗಾಣ ರಾಜ್ಯದ ತೇಜ ಎಂಬವರ ಪತ್ನಿ ಬಾನೋತ್ ದುರ್ಗಾ ಅವರು ನಾಲ್ವರು ಮಕ್ಕಳಿಗೆ ಜನನ ನೀಡಿದ ಮಹಾತಾಯಿ. ಈ ನಾಲ್ವರು ಮಕ್ಕಳಲ್ಲಿ ಎರಡು ಗಂಡು, ಎರಡು ಹೆಣ್ಣು ಮಕ್ಕಳಿಗೆ ಅವರು ಜನನ ನೀಡಿದ್ದಾರೆ. ಈ ನಾಲ್ಕು ಮಕ್ಕಳೂ ಆರೋಗ್ಯವಾಗಿದ್ದಾರೆ‌‌. ಪ್ರಸವ ಪೂರ್ವ ಜನನ ಆಗಿದ್ದರಿಂದ ಸದ್ಯ ಮಕ್ಕಳಿಗೆ ಎನ್ಐಸಿಯುವಿನಲ್ಲಿ ಚಿಕಿತ್ಸೆ…

Read More

ನವದೆಹಲಿ : HMPV (ಹ್ಯೂಮನ್ ಮೆಟಾಪ್ನ್ಯೂಮೋವೈರಸ್) ಭಾರತಕ್ಕೆ ಬಂದಿದೆ ಮತ್ತು ಅದರ ಪ್ರಕರಣಗಳು ನಿರಂತರವಾಗಿ ಹೆಚ್ಚುತ್ತಿವೆ. ಮಹಾರಾಷ್ಟ್ರದ ನಾಗ್ಪುರದಲ್ಲಿ ಹೆಚ್‌ಎಂಪಿವಿ ವೈರಸ್‌ನ ಇಬ್ಬರು ಶಂಕಿತ ರೋಗಿಗಳು ಪತ್ತೆಯಾಗಿದ್ದಾರೆ. ಈ ಹಿಂದೆ ಕರ್ನಾಟಕದಲ್ಲಿ 2, ಗುಜರಾತ್‌ನಲ್ಲಿ 1 ಮತ್ತು ತಮಿಳುನಾಡಿನಲ್ಲಿ ಎರಡು ಪ್ರಕರಣಗಳು ವರದಿಯಾಗಿದ್ದವು. ನಾಗ್ಪುರದಲ್ಲಿ 13 ವರ್ಷದ ಬಾಲಕಿ ಮತ್ತು 7 ವರ್ಷದ ಬಾಲಕನಲ್ಲಿ ವೈರಸ್ ಲಕ್ಷಣಗಳು ಕಂಡುಬಂದಿವೆ. ನಿರಂತರ ಶೀತ, ಕೆಮ್ಮು ಮತ್ತು ಜ್ವರದ ನಂತರ, ಕುಟುಂಬವನ್ನು ಖಾಸಗಿ ಲ್ಯಾಬ್‌ನಲ್ಲಿ ಪರೀಕ್ಷಿಸಲಾಯಿತು ಮತ್ತು ವರದಿ ಪಾಸಿಟಿವ್ ಬಂದಿತು, ನಂತರ ಕುಟುಂಬ ಸದಸ್ಯರು ಭಯಗೊಂಡರು. ಈ ಎರಡೂ ಮಕ್ಕಳನ್ನು ಆಸ್ಪತ್ರೆಗೆ ದಾಖಲಿಸಬೇಕಿಲ್ಲವಾದರೂ ಮನೆಯಲ್ಲಿ ಚಿಕಿತ್ಸೆ ನೀಡಿದ್ದರಿಂದ ಅವರ ಸ್ಥಿತಿ ನಿಯಂತ್ರಣದಲ್ಲಿದೆ. ಈ ವೈರಸ್ ಮಕ್ಕಳನ್ನು ಬಲಿಪಶುಗಳನ್ನಾಗಿ ಮಾಡುತ್ತಿದೆ, ಇಂತಹ ಪರಿಸ್ಥಿತಿಯಲ್ಲಿ, ಮಕ್ಕಳ ಆರೈಕೆಯು ಬಹಳ ಮುಖ್ಯವಾಗಿದೆ. ಮಕ್ಕಳ ಬಗ್ಗೆ ಕಾಳಜಿ ವಹಿಸಲು ಈ ವಿಷಯಗಳನ್ನು ನೆನಪಿನಲ್ಲಿಡಿ. ನಿಯಮಿತವಾಗಿ ಕೈಗಳನ್ನು ಸ್ವಚ್ಛಗೊಳಿಸಲು ಮಕ್ಕಳಿಗೆ ಸಲಹೆ ನೀಡಿನಿಮ್ಮ ಮಗುವನ್ನು ಸೋಂಕಿನಿಂದ ರಕ್ಷಿಸಲು ಸೂಕ್ತ ಕ್ರಮಗಳನ್ನು…

Read More

ಬೆಂಗಳೂರು : ಪೊಲೀಸ್ ಇಲಾಖೆಗೆ ನಕಲಿ ದಾಖಲೆ ಪ್ರಮಾಣ ಪತ್ರ ಸಲ್ಲಿಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬೆಂಗಳೂರಿನ ಬ್ಯಾಡರಹಳ್ಳಿ ಠಾಣೆಯ ಪಿಎಸ್ಐ ಕಾಶಿಲಿಂಗೇಗೌಡ ಸಸ್ಪೆಂಡ್ ಮಾಡಿ ಬೆಂಗಳೂರು ಪಶ್ಚಿಮ ವಿಭಾಗದ ಡಿಸಿಪಿ ಗಿರೀಶ್ ಅವರು ಆದೇಶ ಹೊರಡಿಸಿದ್ದಾರೆ. ನಕಲಿ ದಾಖಲೆ ನೀಡಿದ ಸಂಬಂಧ ವಿಧಾನಸೌಧ ಠಾಣೆಯಲ್ಲಿ PSI ಕಾಶಿಲಿಂಗೇಗೌಡನ ವಿರುದ್ಧ ಈ ಕುರಿತು ಪ್ರಕರಣ ದಾಖಲಾಗಿತ್ತು. ಪ್ರಕರಣ ಸಂಬಂಧ ಪಿಎಸ್ಐ ಜಾಮೀನು ಪಡೆದುಕೊಂಡಿದ್ದ ನಂತರ ಪೊಲೀಸ್ ಠಾಣೆಗೆ ಪಿಎಸ್ಐ ಕರ್ತವ್ಯಕ್ಕೆ ಹಾಜರಾಗಿದ್ದ, ಇದೀಗ ಪಿಎಸ್ಐ ಅಮಾನತು ಮಾಡಿ ಡಿಸಿಪಿ ಗಿರೀಶ್ ಆದೇಶ ಹೊರಡಿಸಿದ್ದಾರೆ.

Read More

ಬೆಂಗಳೂರು: ಇಬ್ಬರು ಮಕ್ಕಳನ್ನು ಹತ್ಯೆ ಮಾಡಿ ದಂಪತಿ ಆತ್ಮಹತ್ಯೆಗೆ ಶರಣಾದ ಘಟನೆ ಬೆಂಗಳೂರಿನ ಸದಾಶಿವ ನಗರದ ಆರ್.ಎಂ.ವಿ ಎರಡನೇ ಹಂತದ ಟೆಂಪಲ್ ರಸ್ತೆಯಲ್ಲಿ ನಡೆದಿದೆ. ಪತಿ ಅನೂಪ್‌ (38), ರಾಖಿ(35), ಅನುಪ್ರಿಯಾ (5) ವರ್ಷ ಮತ್ತು ಪ್ರಿಯಾಂಶ್ (2) ಮೃತಪಟ್ಟಿದ್ದಾರೆ. ಅನೂಪ್‌ ಉತ್ತರ ಪ್ರದೇಶ ಮೂಲದವರಾಗಿದ್ದು ಖಾಸಗಿ ಕಂಪನಿಯಲ್ಲಿ ಸಾಫ್ಟ್‌ವೇರ್‌ ಕನ್ಸಲ್ಟೆಂಟ್‌ ಆಗಿ ಕೆಲಸ ಮಾಡುತ್ತಿದ್ದರು. ಇಂದು ಬೆಳಗ್ಗೆ ಮನೆಗೆ ಕೆಲಸವರು ಬಂದಾಗ ಆತ್ಮಹತ್ಯೆ ಪ್ರಕರಣ ಬೆಳಕಿಗೆ ಬಂದಿದೆ. ರಾತ್ರಿ ಇಬ್ಬರು ಮಕ್ಕಳನ್ನು ಹತ್ಯೆ ಮಾಡಿದ ಬಳಿಕ ದಂಪತಿ ಮನೆಯಲ್ಲೇ ನೇಣಿಗೆ ಶರಣಾಗಿದ್ದಾರೆ. ಘಟನೆಗೆ ಕಾರಣ ತಿಳಿದು ಬಂದಿಲ್ಲ. ಘಟನಾ ಸ್ಥಳಕ್ಕೆ ಸದಾಶಿವ ನಗರ ಪೊಲೀಸರು ಭೇಟಿ ಪರಿಶೀಲನೆ ನಡೆಸುತ್ತಿದ್ದಾರೆ. ಅನೂಪ್ ಮನೆಯಲ್ಲಿ ಮೂರು ಜನ ಕೆಲಸ ಮಾಡುತ್ತಿದ್ದರು. ಅನುಪ್ರಿಯಾಗೆ ಆರೋಗ್ಯ ಸಮಸ್ಯೆ ಇತ್ತು. ಈ ವಿಚಾರಕ್ಕೆ ದಂಪತಿ ಬಹಳ ಬೇಸರದಲ್ಲಿದ್ದರು. ಇಂದು ಬೆಳಗ್ಗೆ 11 ಗಂಟೆಗೆ ಪಾಂಡಿಚೇರಿಗೆ ಹೋಗಲಿದ್ದೇವೆ. ಬೇಗ ಕೆಲಸಕ್ಕೆ ಬನ್ನು ಎಂದು ಕೆಲಸದವರಿಗೆ ಅನೂಪ್ ಹೇಳಿದ್ದರು. ಹೀಗಾಗಿ…

Read More