Author: main-admin

ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಹಿಂದೆ ನಡೆದಿದೆ ಎನ್ನಲಾದ ಶವಗಳನ್ನು ಹೂತು ಹಾಕಿರುವುದಾಗಿ ಹೇಳಲಾದ ಸ್ಥಳಗಳಲ್ಲಿ ಮಹಜರು ನಡೆಸಲಾಗಿದ್ದು, ಒಟ್ಟು 13 ಜಾಗಗಳನ್ನು ದೂರುದಾರ ತೋರಿಸಿದ್ದಾರೆ. ವಿಶೇಷ ತನಿಖಾ ತಂಡ ಸೋಮವಾರ ಸಂಜೆ 6 ಗಂಟೆ ತನಕ ಧರ್ಮಸ್ಥಳ ಗ್ರಾಮದ ಸುತ್ತಮುತ್ತ ಮಹತ್ವದ ಮಹಜರು ಕಾರ್ಯ ನಡೆಸಿತು. ದೂರುದಾರ ಅನಾಮಿಕ ವ್ಯಕ್ತಿಯನ್ನು ಮುಸುಕುಧಾರಿಯಾಗಿ ಕರೆತಂದ ಎಸ್ಐಟಿ ತಂಡ ಬೆಳಗ್ಗಿನಿಂದ ಸಂಜೆಯವರೆಗೂ ಧರ್ಮಸ್ಥಳ ನೇತ್ರಾವತಿ ಸ್ನಾನಘಟ್ಟದ ಸುತ್ತಮುತ್ತಲಿನ ಅರಣ್ಯ ಪ್ರದೇಶದ ನಿಗೂಢ ಸ್ಥಳಗಳಿಗೆ ಕರೆದೊಯ್ದು ಮಹಜರು ಕಾರ್ಯ ನಡೆಸಿತು. ಧರ್ಮಸ್ಥಳದ ನೇತ್ರಾವತಿ ಸ್ನಾನಘಟ್ಟದ ಸಮೀಪ 13 ಜಾಗಗಳನ್ನು ಎಸ್ಐಟಿ ಅಧಿಕಾರಿಗಳಿಗೆ ದೂರುದಾರ ತೋರಿಸಿದ್ದಾರೆ. ಈ ಜಾಗಗಳಲ್ಲಿ ರಾತ್ರಿಯಿಡಿ ಬಿಗಿ ಬಂದೋಬಸ್ತ್ ನಿಯೋಜಿಸಲಾಗಿದೆ. ಇಂದೂ ಕೂಡ ಮಹಜರು ಕಾರ್ಯ ಮುಂದುವರಿಯಲಿದೆ ಎಂದು ಹೇಳಲಾಗಿದೆ.

Read More

ಬೆಂಗಳೂರು : ಚಿನ್ನಸ್ವಾಮಿ ಕಾಲ್ತುಳಿತ ದುರಂತ ಸಂಬಂಧ ಪೊಲೀಸ್ ಅಧಿಕಾರಿಗಳ ಅಮಾನತು ಆದೇಶವನ್ನು ಸರ್ಕಾರ 52 ದಿನಗಳ ನಂತರ ಹಿಂಪಡೆದುಕೊಂಡಿದೆ. ಬೆಂಗಳೂರು ಪಶ್ಚಿಮ ವಲಯದ ಹೆಚ್ಚುವರಿ ಪೊಲೀಸ್‌ ಕಮಿಷನರ್‌ ಆಗಿದ್ದ ವಿಕಾಸ್‌ ಕುಮಾರ್ ಒಬ್ಬರನ್ನು ಬಿಟ್ಟು ಬೆಂಗಳೂರು ನಗರ ಪೊಲೀಸ್ ಆಯುಕ್ತ ದಯಾನಂದ್, ಡಿಸಿಪಿ ಶೇಖರ್, ಎಸಿಪಿ ಎಚ್.ಟಿ.ಬಾಲಕೃಷ್ಣ ಹಾಗೂ ಕಬ್ಬನ್‌ ಪಾರ್ಕ್ ಠಾಣೆಯ ಇನ್‌ಸ್ಪೆಕ್ಟರ್‌ ಗಿರೀಶ್ ಅವರ ಅಮಾನತು ಆದೇಶವನ್ನು ರಾಜ್ಯ ಸರ್ಕಾರ ವಾಪಸ್ ಪಡೆದುಕೊಂಡಿದೆ.ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾ. ಮೈಕಲ್ ಡಿ ಕುನ್ಹಾ, ಜಿಲ್ಲಾಧಿಕಾರಿಗಳ ಮ್ಯಾಜಿಸ್ಟ್ರೇಟ್‌ ತನಿಖೆ ಪೂರ್ಣಗೊಂಡು ಸರ್ಕಾರಕ್ಕೆ ವರದಿ ಸಲ್ಲಿಸಿದ ಬಳಿಕ ಸರ್ಕಾರ ತನ್ನ ಅಮಾನತು ನಿರ್ಧಾರವನ್ನು ಹಿಂದಕ್ಕೆ ಪಡೆದಿದೆ. ನಿಯಾಮವಳಿ ಪ್ರಕಾರ ಅಮಾನತು ಆದೇಶ ರದ್ದುಗೊಳಿಸಿ ನಾಲ್ವರ ವಿರುದ್ಧ ಇಲಾಖಾ ತನಿಖೆಗೆ ಆದೇಶ ಹೊರಡಿಸಿದೆ. ಕರ್ತವ್ಯಲೋಪದ ಅಡಿಯಲ್ಲಿ ಐಪಿಎಸ್‌ ಅಧಿಕಾರಿ ವಿಕಾಸ್‌ ಕುಮಾರ್‌ ವಿಕಾಸ್‌ ಅವರನ್ನು ಅಮಾನತು ಮಾಡಿ ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶವನ್ನು ಕೇಂದ್ರೀಯ ಆಡಳಿತಾತ್ಮಕ ನ್ಯಾಯಮಂಡಳಿ (ಸಿಎಟಿ) ರದ್ದುಗೊಳಿಸಿತ್ತು. ಅರ್ಜಿದಾರರನ್ನು ತಕ್ಷಣದಿಂದ ಜಾರಿಗೆ…

Read More

ಉಡುಪಿ: ಆಳ್ವಾಸ್ ಶಿಕ್ಷಣ ಪತಿಷ್ಠಾನದ ವತಿಯಿಂದ “ಆಳ್ವಾಸ್ ಪ್ರಗತಿ-2025” ಬೃಹತ್ ಉದ್ಯೋಗ ಮೇಳವನ್ನು ಆ.1 ಮತ್ತು 2ರಂದು ಮೂಡುಬಿದಿರೆಯ ವಿದ್ಯಾಗಿರಿ ಆವರಣದಲ್ಲಿ ಆಯೋಜಿಸಲಾಗಿದೆ ಎಂದು ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಮುಖ್ಯಸ್ಥ ಪ್ರಸಾದ್ ಶೆಟ್ಟಿ ತಿಳಿಸಿದರು. ಈ ಕುರಿತು‌ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಆಳ್ವಾಸ್ ಪ್ರಗತಿ-2025ರಲ್ಲಿ ವಿವಿಧ ಕಂಪೆನಿಗಳು ಪದವಿ ಮತ್ತು ಸ್ನಾತಕೋತ್ತರ ಪದವೀಧರರು, ವೈದ್ಯಕೀಯ ಮತ್ತು ಪ್ಯಾರಾಮೆಡಿಕಲ್, ಇಂಜಿನಿಯರಿಂಗ್, ಕಲಾ, ವಾಣಿಜ್ಯ ಹಾಗೂ ಮ್ಯಾನೇಜ್‌ಮೆಂಟ್, ಬೇಸಿಕ್ ಸೈನ್ಸ್, ನರ್ಸಿಂಗ್, ಐಟಿಐ, ಡಿಪ್ಲೊಮಾ, ಪಿಯುಸಿ ಎಸ್‌ಎಸ್‌ಎಲ್‌ಸಿ ಹಾಗೂ ಇತರ ಅರ್ಹ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉದ್ಯೋಗಾವಕಾಶ ಕಲ್ಪಿಸಲಿವೆ ಎಂದರು. ಯಾವುದೇ ಕೋರ್ಸಗಳನ್ನು 2025ರ ಶೈಕ್ಷಣಿಕ ವರ್ಷದ ಮುಂಚೆ ಅಥವಾ ಒಳಗೆ ಪೂರ್ಣಗೊಳಿಸುವ ವರು ಹಾಗೂ ಅನುಭವವಿರುವ ಅಭ್ಯರ್ಥಿಗಳು ಈ ಮೇಳದಲ್ಲಿ ಮುಕ್ತವಾಗಿ ಭಾಗವಹಿಸಬಹುದು. ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ-3012, ಐಟಿಐ ಹಾಗೂ ಡಿಪ್ಲೋಮಾ- 4350, ಯಾವುದೇ ಪದವಿ- 3847, ಬಿಇ/ಬಿಟೆಕ್- 805, ಕೋರ್ ಐಟಿ- 119, ಮೆಡಿಕಲ್ ಹಾಗೂ ಪ್ಯಾರಾ ಮೆಡಿಕಲ್-…

Read More

ಉಡುಪಿ: ದ್ವಿತೀಯ ಪಿಯುಸಿ ವಿದ್ಯಾರ್ಥಿ ಬೆಲ್ಟ್’ನಿಂದ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಆಘಾತಕಾರಿ ಸುದ್ದಿ ವರದಿಯಾಗಿದೆ. ಮೃತರನ್ನು ಕೆಳಾರ್ಕಳ ಬೆಟ್ಟಿನ ಸ್ವಸ್ತಿಕ್‌ (16) ಎಂದು ಗುರುತಿಸಲಾಗಿದೆ. ಮೃತನು ಉಡುಪಿಯ ಜ್ಞಾನ ಸುಧಾ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದರು. ಜುಲೈ 27 ರಂದು ಅವರ ತಾಯಿ ಬಂದು ನೋಡಿದಾಗ ಮನೆಯ ಹಾಲ್‌ ನ ಉತ್ತರ ಬದಿಯ ಕಿಟಕಿಗೆ ನೇಣು ಹಾಕಿಕೊಂಡು ಸೋಫಾದ ಮೇಲೆ ಒರಗಿಕೊಂಡ ಸ್ಥಿತಿಯಲ್ಲಿ ಕಂಡುಬಂದಿದ್ದಾನೆ. ಕೂಡಲೆ ಸ್ವಸ್ತಿಕ್‌ ನ ಕುತ್ತಿಗೆಯಲ್ಲಿದ್ದ ಬೆಲ್ಟ್‌ ಅನ್ನು ಕಟ್‌ ಮಾಡಿ ನೆರೆಮನೆಯವರ ಸಹಾಯದಿಂದ ಕಾರಿನಲ್ಲಿ ಗೆರೊಟ್ಟಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು ವೈದ್ಯರ ಸಲಹೆ ಮೇರೆಗೆ ಉಡುಪಿಯ ಆದರ್ಶ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು ಆಸ್ಪತ್ರೆಯಲ್ಲಿ ಪರೀಕ್ಷಿಸಿದ ವೈದ್ಯರು ಸ್ವಸ್ತಿಕ್‌ ಈತನು ಈಗಾಗಲೆ ಮೃತ ಪಟ್ಟಿರುವುದಾಗಿ ತಿಳಿಸಿದ್ದಾರೆ. ದೂರಿನ ಅನ್ವಯ ಮಗ ದಿನಾಂಕ 27/07/2025 ರಂದು ಬೆಳಿಗ್ಗೆ 11:30 ಗಂಟೆಯಿಂದ 01:00 ಗಂಟೆಯ ಮದ್ಯಾವಧಿಯಲ್ಲಿ ಯಾವುದೋ ಕಾರಣದಿಂದ ಮನೆಯಲ್ಲಿನ ಕಿಟಕಿಗೆ ಬೆಲ್ಟ್‌ ಕಟ್ಟಿ ಅದರಿಂದ ಕುತ್ತಿಗೆಗೆ…

Read More

ಮಂಗಳೂರು: ಸುಮಾರು 200 ಕೋಟಿ ರೂಪಾಯಿಗೂ ಹೆಚ್ಚು ವಂಚನೆ ನಡೆಸಿದ್ದಾನೆ ಎನ್ನಲಾದ ಬಹುಕೋಟಿ ವಂಚಕ ರೋಶನ್ ಸಲ್ಡಾನ ಪ್ರಕರಣದಲ್ಲಿ ಹೈಕೋರ್ಟ್ ಆರೋಪಿಗೆ ರಿಲೀಫ್ ನೀಡಿದೆ. ಬಿಹಾರದ ಉದ್ಯಮಿಗೆ ಹತ್ತು ಕೋಟಿ ರೂ ವಂಚನೆ ಮತ್ತು ಮಂಗಳೂರಿನ ವ್ಯಕ್ತಿಗೆ ಒಂದುವರೆ ಕೋಟಿ ರೂ ವಂಚನೆ ಪ್ರಕರಣದಲ್ಲಿ ಹೈಕೋರ್ಟ್ ತನಿಖಾ ಪ್ರಕ್ರಿಯೆಗೆ ಮಧ್ಯಂತರ ತಡೆಯಾಜ್ಞೆ ನೀಡಿದೆ. ಇತ್ತೀಚೆಗೆ ಸಾಲ ನೀಡುವ ನೆಪದಲ್ಲಿ ಭಾರೀ ವಂಚನೆ ನಡೆಸಿದ ಜಾಲದಲ್ಲಿ ಮಂಗಳೂರಿನ ಜೆಪ್ಪಿನಮೊಗರಿನಲ್ಲಿ ರೋಶನ್ ಸಲ್ಡಾನ ಎಂಬಾತನನ್ನು ಸಿಎನ್ ಪೊಲೀಸರ್ ಬಂಧಿಸಿದ್ದರು. ಆತನ ಬಂಧನ ವಿಚಾರ ದೇಶದಾದ್ಯಂತ ಸುದ್ದಿಯಾಗುತ್ತಿದ್ದಂತೆ ಹಲವಾರು ಉದ್ಯಮಿಗಳು ತಮಗೆ ವಂಚನೆ ನಡೆಸಿರುವ ಬಗ್ಗೆ ದೂರು ನೀಡಲು ಮುಂದೆ ಬಂದಿದ್ದರು. ಬಿಹಾರ ಮೂಲದ ಉದ್ಯಮಿ ತನ್ನಿಂದ ಹತ್ತು ಕೋಟಿ ರೂ ವಂಚನೆ ಎಸಗಿದ್ದಾನೆಂದು ದೂರು ನೀಡಿದ್ದರು. ಅಸ್ಸಾಂ ಮತ್ತು ಮಹಾರಾಷ್ಟ್ರ ಮೂಲದ ವ್ಯಕ್ತಿಗಳೂ ಕೋಟಿ ರೂ ನಂತೆ ವಂಚನೆ ಎಸಗಿದ್ದಾಗಿ ದೂರು ನೀಡಿದ್ದರು. ಅದಕ್ಕೂ ಮೊದಲೇ ಮಂಗಳೂರಿನಲ್ಲಿ ವ್ಯಕ್ತಿಯೊಬ್ಬರು ಒಂದೂವರೆ ಕೋಟಿ ರೂ ವಂಚಿಸಿದ್ದ…

Read More

ಮಂಗಳೂರು: ಉರ್ವ ಠಾಣೆಯಲ್ಲಿ 2014ರಲ್ಲಿ ಆರ್ಮ್ಸ್ ಆ್ಯಕ್ಟ್‌ನಡಿ ದಾಖಲಾಗಿದ್ದ ಶೂಟೌಟ್ ಪ್ರಕರಣವೊಂದರಲ್ಲಿ ಪ್ರಮುಖ ಆರೋಪಿಯಾಗಿದ್ದು, 10 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಗಣೇಶ ಲಕ್ಷ್ಮಣ್ ಸಕಟ್ ಎಂಬಾತನನ್ನು ಉರ್ವ ಠಾಣೆ ಪೊಲೀಸರು ಬಂಧಿಸಿದ್ದಾರೆ. ಭೂಗತ ಪಾತಕಿ ರವಿ ಪೂಜಾರಿ ಸಹಚರನಾಗಿದ್ದ ಈತ 2014ರಲ್ಲಿ ಉರ್ವ ಠಾಣೆ ವ್ಯಾಪ್ತಿಯ ಬಿಜೈನ ಭಾರತಿ ಬಿಲ್ಡ‌ರ್ ಕಚೇರಿಯಲ್ಲಿ ನಡೆದ ಶೂಟೌಟ್ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿದ್ದ. 2015ರಿಂದ ವರ್ಷದಿಂದ ತಲೆಮರೆಸಿಕೊಂಡಿದ್ದ ಈತನನ್ನು ಮಹಾರಾಷ್ಟ್ರದ ಪಂಡರಾಪುರದಿಂದ ಉರ್ವ ಠಾಣಾ ಎಎಸ್‌ಐ ವೇಣುಗೋಪಾಲ್ ಮತ್ತು ಸಿಬಂದಿಯವರಾದ ಪ್ರಮೋದ್, ನಾರಾಯಣ, ಗೋವಿಂದರಾಜ್ ಅವರು ದಸ್ತಗಿರಿ ಮಾಡಿ ಮಂಗಳೂರಿನ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯ ಆತನಿಗೆ ನ್ಯಾಯಾಂಗ ಬಂಧನ ವಿಧಿಸಿದೆ. ಈತನ ವಿರುದ್ಧ ಕಾವೂರು ಠಾಣೆಯಲ್ಲಿಯೂ ಅಪರಾಧ ಪ್ರಕರಣ ದಾಖಲಾಗಿದ್ದು, ಜೆಎಂಎಫ್‌ಸಿ 3ನೇ ನ್ಯಾಯಾಲಯ ದಸ್ತಗಿರಿ ವಾರಂಟ್‌ ಹೊರಡಿಸಿತ್ತು. ಮಹಾರಾಷ್ಟ್ರದ ಸತಾರಾ ಜಿಲ್ಲೆಯ ಕರಾಡ್‌ ನಗರ ಠಾಣೆಯಲ್ಲೂ ಆರ್ಮ್ಸ್ ಆ್ಯಕ್ಟ್ ಅಡಿ ಪ್ರಕರಣ ದಾಖಲಾಗಿದೆ. ಪ್ರಸ್ತುತ ಜಾಮೀನು ನಿಯಮಗಳನ್ನು ಉಲ್ಲಂಘನೆ ಮಾಡಿರುವ ಬಗ್ಗೆ ಉರ್ವ…

Read More

ಸೈಂಟ್ ಜೋಸೆಫ್ ವಿಶ್ವವಿದ್ಯಾಲಯದ ಅಡ್ವಾನ್ಸ್ಡ್ ಕಂಪ್ಯೂಟಿoಗ್ ವಿಭಾಗವು, 2025ರ ಜುಲೈ 24ರಂದು ತನ್ನ ವಿದ್ಯಾರ್ಥಿ ಸಂಘಟನೆಗಳಾದ ಸಿಗ್ಮಾ ಸ್ಕ್ವೇರ್ಡ್ ಮತ್ತು ಅನಾಲಿಟಿಕಾ ಸಂಸ್ಥೆಗಳ ಪದಗ್ರಹಣ ಸಮಾರಂಭವನ್ನು ವಿಜೃಂಭಣೆಯಿ0ದ ಆಯೋಜಿಸಿತು. ಹೊಸದಾಗಿ ಆಯ್ಕೆಯಾದ ಕಾರ್ಯದರ್ಶಿಗಳನ್ನು ಅಧಿಕೃತವಾಗಿ ಪದಗ್ರಹಣಗೊಳಿಸಲು ಹಾಗೂ ಅವರ ಮುಂದಿನ ನಾಯಕತ್ವದ ಪ್ರಯಾಣವನ್ನು ಸಮಾರಂಭಾತ್ಮಕವಾಗಿ ಶುಭಾಶಯಗಳೊಂದಿಗೆ ಆಚರಿಸಲು ಈ ಕಾರ್ಯಕ್ರಮ ನಿಗದಿಪಡಿಸಲಾಗಿತ್ತು. ಕಾರ್ಯಕ್ರಮವು ಗಣ್ಯರನ್ನು ಆತ್ಮೀಯವಾಗಿ ಸ್ವಾಗತಿಸುವ ಮೂಲಕ ಪ್ರಾರಂಭವಾಯಿತು. ಬಳಿಕ ವಿಶ್ವವಿದ್ಯಾಲಯದ ಗಾಯನ ತಂಡವು ಪ್ರಾರ್ಥನೆ ಗೀತೆಯನ್ನು ಹಾಡಿದರೆ, ವಿದ್ಯಾರ್ಥಿಗಳಿಂದ ಸ್ವಾಗತ ನೃತ್ಯವಾಗಿ ಪ್ರದರ್ಶಿತವಾದ ಸಾಂಸ್ಕೃತಿಕ ಸ್ವಾಗತ ಪ್ರದರ್ಶನವು ಸಮಾರಂಭಕ್ಕೆ ಹರ್ಷಭರಿತ ಉತ್ಸಾಹದ ವಾತಾವರಣ ನೀಡಿತು. ಗಣ್ಯರಿಂದ ದೀಪ ಬೆಳಗಿಸುವ ಮೂಲಕ ಜ್ಞಾನ, ಬೆಳಕು ಮತ್ತು ಹೊಸ ಶೈಕ್ಷಣಿಕ ಅವಧಿಯ ಶುಭಾರಂಭವನ್ನು ಸಂಕೇತಿಸಿದoತೆ ಆಚರಿಸಲಾಯಿತು. ಅಡ್ವಾನ್ಸ್ಡ್ ಕಂಪ್ಯೂಟಿoಗ್ ವಿಭಾಗದ ಮುಖ್ಯಸ್ಥೆ ಡಾ. ಜಯತಿ ಭದ್ರಾ, ಸ್ವಾಗತ ಭಾಷಣವನ್ನು ನೀಡಿ ಸಮಾರಂಭದ ಉದ್ದೇಶವನ್ನು ತಿಳಿಸಿದರು. ಮುಖ್ಯ ಅತಿಥಿಯನ್ನು ಗೌರವಿಸುವ ಮೂಲಕ ಅವರನ್ನು ಪರಿಚಯಿಸಲು ಶ್ರೀ ಆ್ಯರೆನ್ ಲಾರೆನ್ಸ್ ಡಿ’ಲಿಮಾ ಆವರಣ ರೂಪದಲ್ಲಿ…

Read More

ಉಡುಪಿ: ನಿನ್ನೆ ಬೆಳಿಗ್ಗೆ 2:30ರ ಸುಮಾರಿಗೆ ರಾತ್ರಿ ಗಸ್ತು ಕರ್ತವ್ಯದಲ್ಲಿದ್ದ ಮಹಿಳಾ ಪೊಲೀಸ್ ಅಧಿಕಾರಿಯೊಬ್ಬರು ಅನುಮಾನಾಸ್ಪದವಾಗಿ ವರ್ತಿಸುತ್ತಿದ್ದ ವ್ಯಕ್ತಿಯನ್ನು ತಡೆದು ನಿಲ್ಲಿಸಿದಾಗ ಅವರಿಗೆ ಅವಾಚ್ಯ ಶಬ್ಧಗಳಿಂದ ನಿಂದಿಸಿ ಹಲ್ಲೆಗೆ ಯತ್ನಿಸಿದ ಯುವಕನನ್ನು ಬಂಧಿಸಿದ ಘಟನೆ ಉಡುಪಿಯಲ್ಲಿ ನಡೆದಿದೆ.ಆರೋಪಿಯನ್ನು ಉಡುಪಿ ತಾಲ್ಲೂಕು ಕೊಡವೂರು ಗ್ರಾಮದ ಜುಮಾದಿನಗರ ನಿವಾಸಿ ಸಾಗರ್ (25) ಎಂದು ಗುರುತಿಸಲಾಗಿದೆ. ಮಣಿಪಾಲ ಪೊಲೀಸರು ಕೂಡಲೇ ಆತನನ್ನು ಬಂಧಿಸಿ ಉಡುಪಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯ ಆತನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.ಈತ ವಿಚಾರಣೆಯ ಸಂದರ್ಭ ಅವಾಚ್ಯ ಶಬ್ದಗಳಿಂದ ನಿಂದಿಸಿ ಅಧಿಕಾರಿಯ ಮೇಲೆ ಹಲ್ಲೆಗೆ ಯತ್ನಿಸಿದ್ದಾನೆ. ಮತ್ತು ಅವರ ಕರ್ತವ್ಯಗಳನ್ನು ನಿರ್ವಹಿಸದಂತೆ ತಡೆದಿದ್ದಾನೆ ಎಂದು ಆರೋಪಿಸಲಾಗಿದೆ.

Read More

ಬೆಳ್ತಂಗಡಿ : ‌ಧರ್ಮಸ್ಥಳ ಗ್ರಾಮದಲ್ಲಿ ಹೂತು ಹಾಕಲಾಗಿರುವ ಶವಗಳ ಕುರಿತಂತೆ ರಾಜ್ಯ ಸರಕಾರ ನಡೆಸುತ್ತಿರುವ ಎಸ್ಐಟಿ ತನಿಖೆ ಚುರುಕುಗೊಂಡಿದೆ. ಈಗಾಗಲೇ ಎಸ್ ಐಟಿ ದೂರುದಾರನ ವಿಚಾರಣೆ ಪ್ರಾರಂಭಿಸಿದ್ದು. ಇಂದು ಎರಡನೇ ಮತ್ತೆ ದೂರುದಾರನ ವಿಚಾರಣೆ ಪ್ರಾರಂಭಿಸಿದೆ. ಎಸ್‌ಐಟಿ ತಂಡದ ಮುಖ್ಯಸ್ಥ ಪ್ರಣಬ್ ಮೊಹಾಂತಿ ನೇತೃತ್ವದಲ್ಲಿ ರವಿವಾರ ಎಸ್‌ಐಟಿ ತಂಡವು ದೂರುದಾರನ ವಿಚಾರಣೆ ನಡೆಸುತ್ತಿದೆ. ರವಿವಾರ ಬೆಳಗ್ಗೆ 10.30ರ ಸುಮಾರಿಗೆ ದೂರುದಾರ ತನ್ನ ವಕೀಲರೊಂದಿಗೆ ಮಂಗಳೂರಿನ ಎಸ್.ಐ.ಟಿ ಕಚೇರಿಗೆ ಆಗಮಿಸಿದ್ದಾರೆ ಎನ್ನಲಾಗಿದ್ದು, ಮಧ್ಯಾಹ್ನ 12 ಗಂಟೆಯ ವೇಳೆಗೆ ಪ್ರಣಬ್ ಮೊಹಾಂತಿ ಎಸ್.ಐ.ಟಿ ಕಚೇರಿಗೆ ಆಗಮಿಸಿ, ದೂರುದಾರನ ವಿಚಾರಣೆ ಆರಂಭಿಸಿದ್ದಾರೆ ಎಂದು ತಿಳಿದು ಬಂದಿದೆ. ಜುಲೈ 26ರಂದು ದೂರುದಾರನನ್ನು ಪೊಲೀಸ್ ಅಧಿಕಾರಿಗಳಾದ ಅನುಚೇತ್, ಜಿತೇಂದ್ರ ಕುಮಾರ್ ದಯಾಮ ಸಹಿತ ಇತರ ಸಿಬ್ಬಂದಿ ಸತತ 8 ಗಂಟೆಗಳ ಕಾಲ ವಿಚಾರಣೆ ನಡೆಸಿ ಮಾಹಿತಿ ಕಲೆ ಹಾಕಿದ ಬಳಿಕ ಸಂಜೆ ವೇಳೆ ಅವರ ವಕೀಲರ ಜೊತೆ ಕಳುಹಿಸಿ ಕೊಟ್ಟಿದ್ದರು. ರವಿವಾರ ಮತ್ತೆ ದೂರುದಾರನನ್ನು ಎಸ್‌.ಐ.ಟಿ ಕಚೇರಿಗೆ ಕರೆಸಿದ್ದು,…

Read More

ಬ್ಯಾಂಕಿಂಗ್‌’ನಲ್ಲಿ ಹೊಸ ದಿಗಂತಗಳನ್ನು ಅನ್ವೇಷಿಸಲು ಮತ್ತು ಮುಂದಿನ ಹಂತದ ಬೆಳವಣಿಗೆಗೆ ವಿಚಾರ, ಅಭಿಪ್ರಾಯ ಮತ್ತು ಸಲಹೆಗಳನ್ನು ಸಂಗ್ರಹಿಸಲು, ಎಂಸಿಸಿ ಬ್ಯಾಂಕ್ ಜುಲೈ 24, 2025 ರಂದು ಮಂಗಳೂರಿನ ಅತ್ತಾವರದಲ್ಲಿರುವ ಹೋಟೆಲ್ ಅವತಾರ್‌ನಲ್ಲಿ ‘ಐಡಿಯಾ ಸಮ್ಮಿತ್ 2025’ (Idea Summit 2025) ಅನ್ನು ಆಯೋಜಿಸಲಾಗಿತ್ತು. ಈ ಸಮ್ಮಿತ್‌’ನ ಅಧ್ಯಕ್ಷತೆಯನ್ನು ಎಂಸಿಸಿ ಬ್ಯಾಂಕ್‌ನ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಅನಿಲ್ ಲೋಬೋ ಅವರು ವಹಿಸಿದ್ದರು. ಗಣ್ಯ ಭಾಷಣಕಾರರಲ್ಲಿ ಹೆಸರಾಂತ ಎನ್‌ಆರ್‌ಐ ಉದ್ಯಮಿ ಮತ್ತು ಉದಾರ ದಾನಿ ಶ್ರೀ ಮೈಕಲ್ ಡಿಸೋಜಾ, ಎನ್‌ಐಟಿಕೆ ಸುರತ್ಕಲ್‌ನ ನಿವೃತ್ತ ಪ್ರಾಧ್ಯಾಪಕರು (HAG) ಪ್ರೊ. ಡಾ| ಅಲೋಶಿಯಸ್ ಸಿಕ್ವೇರಾ, ಆರ್‌ಎಂಸಿಆರ್ & ಕಂ., ಪಾಲುದಾರರಾದ ಸಿಎ ಮ್ಯಾಕ್ಸಿಮ್ ಎಂ. ಫೆರ್ನಾಂಡಿಸ್, ಚಾರ್ಟರ್ಡ್ ಅಕೌಂಟೆಂಟ್, ಆರ್ಬಿಟ್ರೇಟರ್ ಮತ್ತು IIM kozhikode ಇದರ ಅತಿಥಿ ಪ್ರಾಧ್ಯಾಪಕ ಪ್ರೊ. ಸಿಎ ಲಾಯ್ನಲ್ ಅರಾನ್ಹಾ ಮತ್ತು ಅನುಭವಿ ಬ್ಯಾಂಕರ್ ಹಾಗೂ ಬ್ಯಾಂಕ್ ಆಫ್ ಮಹಾರಾಷ್ಟ್ರದ ಮಾಜಿ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕ ಶ್ರೀ ಅಲೆನ್ ಸಿ.…

Read More