ಉಡುಪಿಯಲ್ಲಿ 33 ವರ್ಷದ ಮಹಿಳೆಯೊಬ್ಬರು ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ. ಮೃತರನ್ನು ಪ್ರಮೀಳಾ ಸ್ವೈನ್ (33) ಎಂದು ಗುರುತಿಸಲಾಗಿದೆ. ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಪ್ರಮೀಳಾ ಅವರು ಡಿಸೆಂಬರ್ 3 ರಂದು ಮುಂಜಾನೆ 5.30 ಕ್ಕೆ ಬಾಡಿಗೆ ಕೊಠಡಿಯ ಸಮೀಪ ಶೌಚಾಲಯದ ಬಳಿ ಕುಸಿದು ಬಿದ್ದಿದ್ದಾರೆ. ತಕ್ಷಣ ಅವರನ್ನು ಚಿಕಿತ್ಸೆಗಾಗಿ ಉಡುಪಿಯ ಟಿ ಎಂ ಎ ಪೈ ಆಸ್ಪತ್ರೆಗೆ ಕರೆದೊಯ್ಯಲಾಯಿತು.ಆಸ್ಪತ್ರೆಯ ವೈದ್ಯರು ತಪಾಸಣೆ ನಡೆಸಿ, ಪ್ರಮೀಳಾ ಈಗಾಗಲೇ ಮೃತಪಟ್ಟಿದ್ದಾರೆ ಎಂದು ಘೋಷಿಸಿದರು.ಈ ಕುರಿತು ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Author: main-admin
ಮಂಗಳೂರು: ನಗರದ ವಾಮಂಜೂರಿನ ಪಿಲಿಕುಳ ಬಳಿಯ ದೂರದರ್ಶನ ಕೇಂದ್ರದ ಮುಂಭಾಗದ ಗೇಟ್ ಬಳಿ ಸಾರ್ವಜನಿಕರಿಗೆ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಮೂಡ ಗ್ರಾಮದ ಜೋಡುಮಾರ್ಗ ಗೂಡಿನ ಬಳಿ ನಿವಾಸಿ ಮೊಹಮ್ಮದ್ ಆಸೀಫ್(34), ಮೂಡ ಗ್ರಾಮದ ಜೋಡುಮಾರ್ಗ ಗೂಡಿನ ಬಳಿ ಮಸ್ಜಿದ್ ನಿವಾಸಿ ನಿಯಾಜ್ ಎನ್.ಎ.(40) ಬಂಧಿತ ಆರೋಪಿಗಳು. ಜನವರಿ 02ರಂದು ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಪಿಲಿಕುಳದ ಬಳಿ ಮೊಹಮ್ಮದ್ ಅಸಿಫ್ ಮತ್ತು ನಿಯಾಜ್ ಸಾರ್ವಜನಿಕರಿಗೆ ಮತ್ತು ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಮಾರಾಟ ಮಾಡುತ್ತಿದ್ದರು. ಈ ಬಗ್ಗೆ ದೊರೆತ ಖಚಿತ ಮಾಹಿತಿಯಂತೆ ದಾಳಿ ನಡೆಸಿದ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಗಳಿಂದ ಸುಮಾರು 958 ಗ್ರಾಂ (20,000ರೂ.) ಗಾಂಜಾ ಹಾಗೂ ಮೊಬೈಲ್ ಫೋನ್‌ಗಳನ್ನು ಸ್ವಾಧೀನಪಡಿಸಲಾಗಿದೆ. ಈ ಬಗ್ಗೆ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಿಟ್ಲ: ಇಡಿ ಅಧಿಕಾರಿಗಳು ಎಂದು ನಂಬಿಸಿ ಉದ್ಯಮಿಯ ಮನೆಗೆ ದಾಳಿ ನಡೆಸಿ ಬರೋಬ್ಬರಿ 30 ಲಕ್ಷ ಲೂಟಿ ಮಾಡಿದ ಘಟನೆ ಬೋಳಂತೂರು ಸಮೀಪದ ನಾರ್ಶ ಎಂಬಲ್ಲಿ ನಡೆದಿದೆ. ಬಂಟ್ವಾಳ ತಾಲ್ಲೂಕಿನ ವಿಟ್ಲ ಪೋಲೀಸ್ ಠಾಣೆ ವ್ಯಾಪ್ತಿಯ ಬೋಳಂತೂರು ಸಮೀಪದ ನಾರ್ಶ ಎಂಬಲ್ಲಿ ಸುಲೈಮಾನ್ ಹಾಜಿ ಅವರು ಸಿಂಗಾರಿ ಬೀಡಿ ಸಂಸ್ಥೆಯನ್ನು ಅನೇಕ ವರ್ಷಗಳಿಂದ ನಡೆಸುತ್ತಿದ್ದಾರೆ. ತಡರಾತ್ರಿ ಅವರ ಮನೆಗೆ ತಮಿಳುನಾಡು ಮೂಲದ ಕಾರ್ ನಲ್ಲಿ ಆಗಮಿಸಿದ ತಂಡ ಬಂದು ದಿಡೀರ್ ದಾಳಿ ನಡೆಸಿದೆ.ನಾವು ಇಡಿ ಅಧಿಕಾರಿಗಳು ‘ ಎಂದು ನಂಬಿಸಿ ಸುಮಾರು ಎರಡು ಗಂಟೆಗಳ ವರೆಗೆ ತನಿಖೆ ನಡೆಸಿದೆ.ಮನೆಯಲ್ಲಿದ್ದ ಸುಮರು 30 ಲಕ್ಷ ರೂಪಾಯಿಗಳನ್ನು ದೋಚಿ ಪರಾರಿಯಾಗಿದ್ದರು. ಸ್ಥಳಕ್ಕೆ ವಿಟ್ಲ ಪೊಲೀಸರು ಭೇಟಿ ನೀಡಿದ್ದಾರೆ.
ಬೆಂಗಳೂರು : ದೂರು ನೀಡಲು ಬಂದ ಮಹಿಳೆಯ ಜೊತೆ ಕಚೇರಿಯಲ್ಲೇ ರಾಸಲೀಲೆ ನಡೆಸಿದ್ದ ತುಮಕೂರು ಜಿಲ್ಲೆಯ ಮಧುಗಿರಿಯ ಡಿವೈಎಸ್‌ಪಿ ರಾಮಚಂದ್ರಪ್ಪ ಅರೆಸ್ಟ್ ಮಾಡಲಾಗಿದೆ. ಜಮೀನು ವ್ಯಾಜ್ಯದ ವಿಚಾರಕ್ಕೆ ಪಾವಗಡದಿಂದ ದೂರು ನೀಡಲು ಬಂದಿದ್ದ ಮಹಿಳೆಯನ್ನು ಪುಸಲಾಯಿಷಿ ಆಕೆಯೊಂದಿಗೆ ಅಸಭ್ಯವಾಗಿ ನಡೆದುಕೊಂಡಿದ್ದು, ಈ ವಿಡಿಯೋ ವೈರಲ್ ಆಗುತ್ತಿದ್ದಂತೆಯೇ ಮಧುಗಿರಿಯ ಡಿವೈಎಸ್‌ಪಿ ರಾಮಚಂದ್ರಪ್ಪನನ್ನು ಅಮಾನತು ಮಾಡಿ ಡಿಜಿ, ಐಜಿಪಿ ಅಲೋಕ್ ಮೋಹನ್ ಆದೇಶಿಸಿದ್ದರು. ಇದರ ಬೆನ್ನಲ್ಲೇ ಇದೀಗ ಡಿವೈಎಸ್‌ಪಿ ರಾಮಚಂದ್ರಪ್ಪನನ್ನು ಪೊಲೀಸರು ಬಂಧಿಸಿದ್ದಾರೆ.ಮಹಿಳೆ ನೀಡಿದ ದೂರಿನ ಮೇರೆಗೆ ಅತ್ಯಾಚಾರ ಕೇಸ್ ಅಡಿಯಲ್ಲಿ ಮಧುಗಿರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಈ ದೂರಿನ ಮೇರೆಗೆ ಇದೀಗ ಮಧುಗಿರಿ ಉಪವಿಭಾಗ ಡಿವೈಎಸ್ ಪಿ ರಾಮಚಂದ್ರಪ್ಪನನ್ನು ಅರೆಸ್ಟ್ ಮಾಡಲಾಗಿದೆ.
ಕಲಬುರಗಿ- ಸಾಮಾನ್ಯವಾಗಿ ಉದ್ಯಮಿ ಗಳು, ರಾಜಕಾರಣಿಗಳು, ಹನಿಟ್ರ್ಯಾಪ್ ಖೆಡ್ಡಾಕ್ಕೆ ಕೆಡುವುದನ್ನು ನೋಡಿರುತ್ತೀರಿ. ಆದರೆ ಇಲ್ಲೊಬ್ಬ ಖತರ್ನಾಕ್ ಮಹಿಳೆ ಪೊಲೀಸ್ ಕಾನ್ಸಟೇಬಲ್ ಒಬ್ಬರನ್ನು ಹನಿ ಟ್ರ್ಯಾಪ್ ಖೆಡ್ಡಾಗೆ ಖೆಡವಿದ್ದಾಳೆ ಎನ್ನುವ ಆರೋಪ ಕೇಳಿ ಬಂದಿದೆ. ಖತರ್ನಾಕ ಮಹಿಳೆಯೊಬ್ಬರು ಪೊಲೀಸರನ್ನೇ ಹನಿ ಟ್ರ್ಯಾಪ್ ಖೆಡ್ಡಾಗೆ ಕೆಡವಿ ಬರೊಬ್ಬರಿ 8 ಲಕ್ಷ ರೂ. ಹಣ ವಸೂಲು ಮಾಡಿದ್ದಾಳೆ. ಈ ಖತರ್ನಾಕ್ ಲೇಡಿಯ ಕಾಟಕ್ಕೆ ಬೇಸತ್ತು ಕಾನ್ಸಟೇಬಲ್ ಪತ್ನಿ ಆತ್ಮಹತ್ಯೆಗೆ ಯತ್ನಿಸಿದ್ದಳು. ಈ ಹಿಂದೆ ಕಲಬುರಗಿಯಲ್ಲಿ ನಡೆದ ಹನಿ ಟ್ರ್ಯಾಪ್ ಪ್ರಕರಣದಲ್ಲಿ ಈ ಪೂಜಾ ಭಾಗಿಯಾಗಿದ್ದಳು. ಕಲಬುರಗಿಯ ಸೆನ್ ಪೊಲೀಸ್ ಠಾಣೆಯ ಕಾನ್ಸ್ ಟೇಬಲ್‌ನನ್ನು ಪೂಜಾ ಡೊಂಗರಗಾಂವ್ ಎಂಬ ಮಹಿಳೆ ಹನಿಟ್ರ್ಯಾಪ್ ಖೆಡ್ಡಾಗೆ ಕೆಡವಿದ್ದಾಳೆ. ಆ ಬಳಿಕ ಕಾನ್ಸಟೇಬಲ್ ಪತ್ನಿಯಿಂದ ಎಂಟು ಲಕ್ಷ ಹಣ ವಸೂಲಿ ಮಾಡಿದ್ದಾಳಂತೆ. ಆರೋಪಿ ಪೂಜಾ ಡೊಂಗರಗಾಂವ್ ಕಾಟಕ್ಕೆ ಬೇಸತ್ತು ಕಾನ್ಸಟೇಬಲ್ ಪತ್ನಿ ಆತ್ಮಹತ್ಯೆಗೆ ಯತ್ನಿಸಿದ್ದಳು. ಪೂಜಾ ಮತ್ತು ಅಮರ್ ಸಿಂಗ್ ಎಂಬುವರಿಂದ 15 ಲಕ್ಷಕ್ಕೆ ಬೇಡಿಕೆ ಇಟ್ಟು 8 ಲಕ್ಷ ಹಣ…
ಮಂಗಳೂರು: ವಿದೇಶಾಂಗ ಸಚಿವಾಲಯದಲ್ಲಿ ನೋಂದಣಿಯಾಗದೆ, ಅನಧಿಕೃತವಾಗಿ ಸಾಗರೋತ್ತರ ಉದ್ಯೋಗಗಳಿಗೆ ಜಾಹೀರಾತು ನೀಡಿ ನೇಮಕಾತಿಯಲ್ಲಿ ತೊಡಗಿಸಿಕೊಂಡ ಮಂಗಳೂರಿನ ಎಸ್ಸೆಲ್ ವಿಲ್ಕನ್ ಎಂಬ ಸಂಸ್ಥೆಯ ವಿರುದ್ಧ ಮಂಗಳೂರು ಪೂರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಬಗ್ಗೆ ಮಂಗಳೂರು ಪೂರ್ವ ಪೊಲೀಸ್ ಠಾಣೆಗೆ Protector of Emigrants, Ministry of External Affairs ಬೆಂಗಳೂರಿನಿಂದ ದೂರು ಬಂದಿತ್ತು. ಮಂಗಳೂರಿನ ಬೆಂದೂರುವೆಲ್‌ನ Essel Willcon ಎಂಬ ಸಂಸ್ಥೆಯ M/S Hireglow Elegant Overseas International (OPC) Pvt, Mangaluru ಎಂಬ ಏಜನ್ಸಿಯಿಂದ ಈ ಕೃತ್ಯ ಎಸಗಿದೆ. ಎಮಿಗ್ರೇಷನ್ ಆ್ಯಕ್ಟ್ 1983ರಡಿಯಲ್ಲಿ ವಿದೇಶಾಂಗ ಸಚಿವಾಲಯದಲ್ಲಿ ನೋಂದಣಿಯಾಗದೆ, ಅನಧಿಕೃತವಾಗಿ ಸಾಗರೋತ್ತರ ಉದ್ಯೋಗಗಳಿಗೆ ಜಾಹೀರಾತು ನೀಡುವ ಮೂಲಕ ಸಾಗರೋತ್ತರ ನೇಮಕಾತಿಯಲ್ಲಿ ತೊಡಗಿಸಿಕೊಂಡಿದ್ದಾರೆ ಎಂದು ದೂರಲಾಗಿತ್ತು. ನೇಮಕಗೊಂಡ ಅಭ್ಯರ್ಥಿಗಳಿಂದ ಅನಧಿಕೃತವಾಗಿ ನಿಯಮ ಬಾಹಿರವಾಗಿ ಪಾಸ್‌ಪೋರ್ಟ್‌ಗಳನ್ನು ಸಂಗ್ರಹಿಸಿದ್ದಾರೆ. ಈ ಏಜೆನ್ಸಿ ವಿದೇಶಾಂಗ ಸಚಿವಾಲಯದಲ್ಲಿ ನಿಯಮದ ಪ್ರಕಾರ ನೋಂದಣಿಯಾಗಿಲ್ಲ. ಆದ್ದರಿಂದ ಇಮಿಗ್ರೇಷನ್ ಆಕ್ಟ್ 1983ನ್ನು ಉಲ್ಲಂಘಿಸಿದ್ದಾರೆ ಎಂದು ದೂರು ನೀಡಲಾಗಿದೆ.
ಮಂಗಳೂರು: ನಕಲಿ ಆಧಾರ್ ಕಾರ್ಡ್‌ಗಳನ್ನು ಬಳಸಿ ನಕಲಿ ದಾಖಲೆಗಳನ್ನು ಸೃಷ್ಟಿಸಿ ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿರುವ ಪ್ರಕರಣಗಳ ಆರೋಪಿಗಳಿಗೆ ಶ್ಯೂರಿಟಿದಾರನಾಗಿ ನಿಂತು ವಂಚಿಸುತ್ತಿದ್ದ ಆರೋಪಿಯನ್ನು ಮಂಗಳೂರು ಉತ್ತರ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಕೆ.ಉಮ್ಮರಬ್ಬ ಮೊಯ್ದೀನ್ ಬಂಧಿತ ಆರೋಪಿ. ಈ ಬಗ್ಗೆ ಮಂಗಳೂರು ಉತ್ತರ ಪೊಲೀಸ್ ಠಾಣೆಯಲ್ಲಿ ದಾಖಲಾಗಿತ್ತು. ಅದರಂತೆ ಅಪರಾಧ ಕ್ರಮಾಂಕ: 141/2023 ಐಪಿಸಿ ಕಲಂ 464, 465, 466, 468, 471, 474ರಂತೆ ಆರೋಪಿ ಕೆ. ಉಮ್ಮರಬ್ಬ ಮೊಯ್ದೀನ್‌ನನ್ನು ಬಂಧಿಸಿ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದೆ.
ಪುತ್ತೂರು: ಕಾಲೇಜೊಂದರಲ್ಲಿ ಓದುತ್ತಿದ್ದ ಅಪ್ರಾಪ್ತ ವಯಸ್ಕ ವಿದ್ಯಾರ್ಥಿನಿ ಜತೆ ಪ್ರೀತಿಸುವ ನಾಟಕವಾಡಿ ಆಕೆಯ ಮೇಲೆ ಅತ್ಯಾಚಾರವೆಸಗಿರುವ ಆರೋಪದಲ್ಲಿ ಕಡಬ ತಾಲೂಕು ಕೋಡಿಂಬಾಳ ಗ್ರಾಮದ ಓಂಕಲ್ ನಿವಾಸಿ ಪ್ರವೀಣ್ ಪೂಜಾರಿಯನ್ನು ಕಡಬ ಪೊಲೀಸರು ಬಂಧಿಸಿದ್ದಾರೆ. ಆತ ಬಾಲಕಿ ಜತೆಗೆ ಸುತ್ತಾಟ ನಡೆಸಿ ವಿಶ್ವಾಸ ಗಳಿಸಿ ಬಳಿಕ ಬಾಡಿಗೆ ರೂಂಗೆ ಕರೆದೊಯ್ದು ದೈಹಿಕ ಸಂಪರ್ಕ ಬೆಳೆಸಿದ್ದಲ್ಲದೆ, ಅದರ ವೀಡಿಯೋ ಚಿತ್ರೀಕರಿಸಿಕೊಂಡು ಬ್ಲ್ಯಾಕ್ ಮೇಲ್ ಮಾಡುತ್ತಿದ್ದ. ಅನೇಕ ಬಾರಿ ಆಕೆಯನ್ನು ಪುತ್ತೂರು ಬಳಿಯ ಬಾಡಿಗೆ ರೂಂಗೆ ಕರೆದೊಯ್ಡು ದೈಹಿಕವಾಗಿ ಬಳಸಿಕೊಂಡಿದ್ದ. ಆಕೆ ಗರ್ಭಿಣಿಯಾಗದಂತೆ ಮಾತ್ರೆಯನ್ನು ತಂದುಕೊಟ್ಟಿದ್ದ. ಅದರ ಜತೆಗೆ ಖಾಸಗಿ ಕ್ಷಣದ ವೀಡಿಯೋಗಳನ್ನು ತನ್ನ ಮೊಬೈಲ್‌ನಲ್ಲಿ ರೆಕಾರ್ಡ್ ಮಾಡಿಕೊಂಡಿದ್ದ ಎಂದು ದೂರಿನಲ್ಲಿ ತಿಳಿಸಲಾಗಿದೆ. ಬಾಲಕಿ ಜತೆಗೆ ಸುತ್ತಾಟ ನಡೆಸಿ ವಿಶ್ವಾಸ ಗಳಿಸಿ ಬಳಿಕ ಬಾಡಿಗೆ ರೂಂಗೆ ಕರೆದೊಯ್ದು ದೈಹಿಕ ಸಂಪರ್ಕ ಬೆಳೆಸಿದ್ದಲ್ಲದೆ, ಅದರ ವೀಡಿಯೋ ಚಿತ್ರೀಕರಿಸಿಕೊಂಡು ಬ್ಲ್ಯಾಕ್ ಮೇಲ್ ಮಾಡುತ್ತಿದ್ದ. ಅನೇಕ ಬಾರಿ ಆಕೆಯನ್ನು ಪುತ್ತೂರು ಬಳಿಯ ಬಾಡಿಗೆ ರೂಂಗೆ ಕರೆದೊಯ್ಡು ದೈಹಿಕವಾಗಿ ಬಳಸಿಕೊಂಡಿದ್ದ. ಆಕೆ…
ಮಂಗಳೂರು: ಚಾಕು ತೋರಿಸಿ ಮೆಡಿಕಲ್ ಶಾಪ್‌ನ ಕ್ಯಾಶ್ ಡ್ರಾವರ್‌ನಲ್ಲಿದ್ದ ಹಣ ಸುಲಿಗೆಗೈದ ಆರೋಪಿಯನ್ನು ಕಂಕನಾಡಿ ನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ. ಬೊಂದೇಲ್‌ನ ಪಟ್ರಕೋಡಿ ನಿವಾಸಿ ಸುನೀಲ್ (31) ಬಂಧಿತ ಆರೋಪಿ. ಡಿಸೆಂಬರ್ 28ರಂದು ಮಧ್ಯಾಹ್ನ ಮಂಗಳೂರಿನ ನಾಗುರಿ ಮೆಡಿಕಲ್ ಶಾಪ್‌ವೊಂದಕ್ಕೆ ಆರೋಪಿ ಸುನಿಲ್ ಹೋಗಿದ್ದಾನೆ. ಅಲ್ಲಿ ಕೆಲಸ ಮಾಡುತ್ತಿದ್ದ ಮಹಿಳಾ ಉದ್ಯೋಗಿಗೆ ಚೂರಿ ತೋರಿಸಿದ ಈತ ಹಲ್ಲೆ ನಡೆಸಿ ಶಾಪ್‌ನ ಕ್ಯಾಶ್ ಡ್ರಾವರ್‌ನಲ್ಲಿದ್ದ 19,300ರೂ. ನಗದು ಸುಲಿಗೆ ಮಾಡಿ ಪರಾರಿಯಾಗಿದ್ದಾನೆ. ಈ ಬಗ್ಗೆ ಕಂಕನಾಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣಕ್ಕೆ ಸಂಬಂಧಸಿದಂತೆ ಆರೋಪಿಯ ಪತ್ತೆಗೆ ತಂಡವನ್ನು ರಚಿಸಿ ತನಿಖೆ ನಡೆಸಲಾಗಿತ್ತು. ಅದರಂತೆ ಗುರುವಾರ ಆರೋಪಿಯನ್ನು ಬಂಧಿಸಿದ ಪೊಲೀಸರು ಆತನಿಂದ ಕಳವು ಮಾಡಿದ 17,500ರೂ. ಹಣ, ಸುಲಿಗೆ ಮಾಡಲು ಬಳಸಿದ ಸ್ಕೂಟರ್ ಹಾಗೂ ಇತರ ಸೊತ್ತುಗಳನ್ನು ಸೇರಿಸಿ ಒಟ್ಟು 1,20,000ರೂ. ಮೌಲ್ಯದ ಸೊತ್ತುಗಳನ್ನು ಸ್ವಾಧೀನಪಡಿಸಿ ಕೊಂಡಿದ್ದಾರೆ.
ಮಂಗಳೂರು: ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನ ಹಾಗೂ ಜಿಲ್ಲಾಡಳಿತ ಈ ಬಾರಿಯ ಮಂಗಳೂರು ಸ್ಟ್ರೀಟ್ ಫುಡ್ ಫಿಯೆಸ್ಟ್ ನಡೆಸಲು ಸಜ್ಜಾಗಿದೆ. ಇದೀಗ ‘ಮಂಗಳೂರು ಸ್ಟ್ರೀಟ್ ಫುಡ್ ಫಿಯೆಸ್ಟ್‌ಗೆ’ ದಿನಾಂಕ ನಿಗದಿಯಾಗಿದೆ. ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನ ಹಾಗೂ ಜಿಲ್ಲಾಡಳಿತದ ಸಹಕಾರದೊಂದಿಗೆ ಮೂರನೇ ಆವೃತ್ತಿ ಯ ಮಂಗಳೂರು ಸ್ಟ್ರೀಟ್ ಫುಡ್ ಫಿಯೆಸ್ಟ ಇದೇ 2025ರ ಜನವರಿ 18 ರಿಂದ 22 ರ ವರೆಗೆ ಐದು ದಿನಗಳ ಕಾಲ ನಡೆಯಲಿದೆ ಎಂದು ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನದ ಗೌರವಾಧ್ಯಕ್ಷ ಗಿರೀಧರ್ ಶೆಟ್ಟಿ ತಿಳಿಸಿದ್ದಾರೆ. ಮಂಗಳೂರು ಸ್ಟ್ರೀಟ್ ಫುಡ್ ಫಿಯೆಸ್ಟ್ ಸೀಸನ್ 3 ಜನವರಿ 18 ರಿಂದ 22ರವರೆಗೆ ನಡೆಯಲಿದೆ ಎನ್ನುವುದು ಖಚಿತವಾಗಿದೆ. ಪ್ರತಿದಿನ ಸಂಜೆ 4ರಿಂದ ರಾತ್ರಿ 10ರವರೆಗೆ ಕರಾವಳಿ ಉತ್ಸವ ಮೈದಾನದಿಂದ ನಾರಾಯಣ ಗುರು ವೃತ್ತ, ಮಣ್ಣಗುಡ್ಡ ಗುರ್ಜಿ ವೃತ್ತ, ಕೆನರಾ ಉರ್ವದವರೆಗೆ ಈ ಸ್ಟ್ರೀಟ್ ಫುಡ್ ಫಿಯೆಸ್ಟ್ ನಡೆಯಲಿದೆ. ಮಂಗಳೂರು ಸ್ಟ್ರೀಟ್ ಫುಡ್ ಫಿಯೆಸ್ಟ್ ಸೀಸನ್ 3ರ ಸಿದ್ಧತೆ ಭರದಿಂದ ಸಾಗುತ್ತಿದ್ದು, ಆನ್ ಲೈನ್ ಮೂಲಕ…










