Author: main-admin

ಮಂಗಳೂರು : ಆಳ್ವಾಸ್ ಶಿಕ್ಷಣ ಸಂಸ್ಥೆಯಲ್ಲಿಅಗಸ್ಟ್ 1 ರಿಂದ 2 ರವರೆಗೆ 15ನೇ ಆವೃತ್ತಿಯ ಉದ್ಯೋಗ ಮೇಳವು ನಡೆಯಲಿದ್ದು, ವಿವಿಧ ವಲಯಗಳ 300ಕ್ಕೂ ಹೆಚ್ಚು ಕಂಪನಿಗಳು ಭಾಗವಹಿಸಲಿದ್ದು, 15,900ಕ್ಕೂ ಅಧಿಕ ಉದ್ಯೋಗಾವಕಾಶಗಳು ತೆರೆದುಕೊಂಡಿವೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವ್ಯವಸ್ಥಾಪಕ ಟ್ರಸ್ಟಿ ವಿವೇಕ್ ಆಳ್ವ ಹೇಳಿದರು. ಶುಕ್ರವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ‘ಮಾನ್ಯುಫ್ಯಾಕ್ಟರಿಂಗ್, ಲಾಜಿಸ್ಟಿಕ್ಸ್, ಐಟಿ, ಐಟಿಇಎಸ್, ಬ್ಯಾಂಕಿಂಗ್ ಹಾಗೂ ಹಣಕಾಸು, ಹೆಲ್ತ್‌ಕೇರ್, ಫಾರ್ಮಾ, ಮಾಧ್ಯಮ, ಮಾರಾಟ ಮತ್ತು ಚಿಲ್ಲರೆ, ಆತಿಥ್ಯ ವಲಯಗಳ ಪ್ರಮುಖ ಕಂಪನಿಗಳು ಈಗಾಗಲೇ ನೋಂದಣಿ ಮಾಡಿಕೊಂಡಿವೆ’ ಎಂದರು.ಮೇಳದಲ್ಲಿ ಭಾಗವಹಿಸಲು ಇಚ್ಛಿಸುವ ಉದ್ಯೋಗಾಕಾಂಕ್ಷಿಗಳು ಕಡ್ಡಾಯವಾಗಿ ನೋಂದಣಿ ಮಾಡಿಕೊಳ್ಳಬೇಕು. ಹೊರ ರಾಜ್ಯ ಹಾಗೂ ಹೊರ ಜಿಲ್ಲೆಗಳಿಂದ ಬರುವವರಿಗೆ ಜುಲೈ 31ರಿಂದ ಉಚಿತ ವಸತಿ ವ್ಯವಸ್ಥೆ ಕಲ್ಪಿಸಲಾಗುತ್ತದೆ. ನೋಂದಣಿ ಹಾಗೂ ಪಾಲ್ಗೊಳ್ಳುವ ಕಂಪನಿಗಳ ವಿವರಕ್ಕೆ www.alvaspragati.com ಈ ತಾಣಕ್ಕೆ ಭೇಟಿ ನೀಡಬಹುದು ಎಂದು ಹೇಳಿದರು. ಮಾಹಿತಿಗೆ ಸಂಪರ್ಕ ಸಂಖ್ಯೆ: 9741440490, 7975223865.

Read More

ಧರ್ಮಸ್ಥಳದಲ್ಲಿ ಶವಗಳನ್ನು ಹೂತಿಟ್ಟ ಪ್ರಕರಣದ ತನಿಖೆ ಚುರುಕುಗೊಂಡಿದ್ದು, ದೂರುದಾರ ಎಸ್ ಐ ಟಿ ಎದುರು ವಿಚಾರಣೆಗೆ ಹಾಜರಾಗಿದ್ದಾನೆ. ರಾಜ್ಯ ಸರ್ಕಾರ ನಿಯೋಜಿಸಿರುವ ಎಸ್ ಐ ಟಿ ( ವಿಶೇಷ ತನಿಖಾ ತಂಡ) ದ ಎದುರು ಈತ ವಿಚಾರಣೆಗೆ ಹಾಜರಾಗಿದ್ದಾನೆ. ಕದ್ರಿಯಲ್ಲಿರುವ ಐಬಿ ಕಚೇರಿಯಲ್ಲಿ ತೆರೆದಿರುವ ಎಸ್ ಐ ಟಿ ಕಚೇರಿಗೆ ದೂರುದಾರ ತನ್ನ ವಕೀಲರ ಜೊತೆ ಆಗಮಿಸಿದ್ದಾನೆ. ಡಿಐಜಿ ಎಂಎನ್ ಅನುಚೇತ್ ಸಮ್ಮುಖದಲ್ಲಿ ದೂರುದಾರನ ವಿಚಾರಣೆ ನಡೆಯಲಿದೆ. ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿಟ್ಟಿರುವ ಪ್ರಕರಣದ ತನಿಖೆಗೆ ಇಂದು ಎಸ್ಐಟಿ ಅಧಿಕಾರಿಗಳ ತಂಡ ಧರ್ಮಸ್ಥಳಕ್ಕೆ ತೆರಳಿದ್ದು, ಇಂದಿನಿಂದ ತನಿಖೆ ನಡೆಸಲಿದೆ. ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷ ಪತ್ರದಲ್ಲಿ ಪ್ರಸ್ತಾಪಿಸಿರುವ ಅಂಶಗಳು ಹಾಗೂ ದಕ್ಷಿಣ ಕನ್ನಡ ಜಿಲ್ಲೆ, ಧರ್ಮಸ್ಥಳ ಪೊಲೀಸ್ ಠಾಣೆ ಮೊ.ಸಂ. 39/2025 ಕಲಂ 211(ಎ), ಬಿ.ಎನ್.ಎಸ್. ಪ್ರಕರಣಕ್ಕೆ ಸಂಬಂಧಿಸಿದಂತೆ ಸಮಗ್ರ ರಾಜ್ಯ ಸರ್ಕಾರ ಎಸ್ಐಟಿ ರಚಿಸಿ ಆದೇಶಿಸಿದೆ.

Read More

ನವದೆಹಲಿ: ಮಂಗಳೂರಿನ ಹಳೇ ಬಂದರಿನಲ್ಲಿ ನಿರ್ಮಿಸಲು ಉದ್ದೇಶಿಸಿರುವ ಪ್ರತ್ಯೇಕ ಲಕ್ಷದ್ವೀಪ ಜೆಟ್ಟಿ ನಿರ್ಮಾಣ ಯೋಜನೆ ಮಂಜೂರಾತಿ ಪಡೆದು ಮೂರು ವರ್ಷ ಕಳೆದರೂ ಇನ್ನು ಕೂಡ ಪರಿಸರ ಇಲಾಖೆ ಸೇರಿದಂತೆ ರಾಜ್ಯ ಸರ್ಕಾರದ ಹಲವು ಅಗತ್ಯ ಅನುಮತಿ ಬಾಕಿಯಿದ್ದು, ಈ ಮಹತ್ವಾಕಾಂಕ್ಷಿ ಯೋಜನೆ ಅನುಷ್ಠಾನ ಪ್ರಕ್ರಿಯೆ ಸಾಕಷ್ಟು ವಿಳಂಬವಾಗಿರುವ ಬಗ್ಗೆ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರು ಇಂದು ಲೋಕಸಭೆಯಲ್ಲಿ ಪ್ರಸ್ತಾಪಿಸಿ ಬಂದರು ಸಚಿವ ಸರ್ಬಾನಂದ ಸೋನೋವಾಲ್ ಅವರ ಗಮನಸೆಳೆದಿದ್ದಾರೆ. ಸಂಸತ್ತಿನಲ್ಲಿ ನಿಯಮ 377ರಡಿ ವಿಷಯ ಪ್ರಸ್ತಾಪಿಸಿರುವ ಕ್ಯಾ. ಚೌಟ ಅವರು, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರದ ಸಾಗರಮಾಲಾ-1 ಯೋಜನೆಯಡಿ ಮಂಗಳೂರಿನಿಂದ ಲಕ್ಷದ್ವೀಪಕ್ಕೆ ಸರಕು ಸಾಗಣೆ ಹಾಗೂ ವ್ಯಾಪಾರ-ವಹಿವಾಟು ವೃದ್ಧಿಸುವ ಉದ್ದೇಶದಿಂದ ಮಂಗಳೂರಿನ ಹಳೇ ಬಂದರಿನಲ್ಲಿ ಪ್ರತ್ಯೇಕ ಲಕ್ಷದ್ವೀಪ ಜೆಟ್ಟಿ ನಿರ್ಮಾಣ ಯೋಜನೆ 2022 ಘೋಷಣೆಯಾಗಿತ್ತು. 2023ರಲ್ಲಿ ಟೆಂಡರ್‌ ಪ್ರಕ್ರಿಯೆ ಕೂಡ ನಡೆದಿತ್ತು. ಆದರೆ, ಆ ಬಳಿಕ ಈ ಯೋಜನೆ ಅನುಷ್ಠಾನಕ್ಕೆ ಬರುವಲ್ಲಿ ಯಾವುದೇ ಆಡಳಿತಾತ್ಮಕ ಕ್ರಮಗಳಾಗಿಲ್ಲ…

Read More

ಬಂಟ್ವಾಳ: ತಾಲೂಕಿನ ಕೂರಿಯಾಳ ಗ್ರಾಮದ ಇರಾಕೋಡಿಯಲ್ಲಿ ಮೇ ೨೭ರಂದು ನಡೆದ ಕೊಳತ್ತಮಜಲಿನ ಅಬ್ದುಲ್ ರಹಿಮಾನ್ ಹತ್ಯೆ ಹಾಗೂ ಖಲಂಧರ್ ಶಾಫಿ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು 12ನೇ ಆರೋಪಿಯನ್ನು ಜು. 25ರಂದು ಬಂಧಿಸಿದ್ದಾರೆ. ಪುದು ಗ್ರಾಮದ ರೊಟಿ ಗುಡ್ಡೆ ನಿವಾಸಿ ಸಚಿನ್ ಯಾನೆ ಸಚ್ಚು ರೊಟ್ಟಿಗುಡ್ಡೆ (32) ಬಂಧಿತ ಆರೋಪಿ.ಪೊಲೀಸರು ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಬಳಿಕ ಹೆಚ್ಚಿನ ವಿಚಾರಣೆ ನಡೆಸಲು ನ್ಯಾಯಾಲಯ ಆರೋಪಿಯನ್ನು ಪೊಲೀಸ್ ಕಸ್ಟಡಿಗೆ ನೀಡಿದೆ.ಪ್ರಕರಣಕ್ಕೆ ಸಂಬಂಧಪಟ್ಟಂತೆ ಈ ಹಿಂದೆ ಬಂಟ್ವಾಳ ಗ್ರಾಮಾಂತರ ಪೊಲೀಸರು 10 ಮಂದಿ ಆರೋಪಿಯನ್ನು ಬಂಧಿಸಿದ್ದರು. ಜು. 21ರಂದು 11ನೇ ಆರೋಪಿ ಅಮ್ಮುಂಜೆ ಗ್ರಾಮದ ಶಾಹಿತ್ ಯಾನೆ ಸಾಹಿತ್‌ನನ್ನು ಬಂಧಿಸಿ ಕಸ್ಟಡಿಗೆ ಪಡೆದಿದ್ದರು. ಪ್ರಾರಂಭದಲ್ಲಿ ಬಂಧಿತ ಬಹುತೇಕ ಎಲ್ಲಾ ಆರೋಪಿಗಳನ್ನು ಪೊಲೀಸರು ಕೆಲ ದಿನಗಳ ಕಾಲ ಕಸ್ಟಡಿಗೆ ಪಡೆದಿದ್ದು, ಪ್ರಸ್ತುತ ಆರೋಪಿಗಳು ನ್ಯಾಯಾಂಗ ಬಂಧನದಲ್ಲಿದ್ದಾರೆ.

Read More

ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತು ಹಾಕಿದ್ದೇನೆ ಎಂದು ಅನಾಮಿಕ ವ್ಯಕ್ತಿ ಕೊಟ್ಟ ದೂರಿನ ತನಿಖೆಯನ್ನು ಎಸ್ಐಟಿ (SIT) ಇಂದಿನಿಂದ ನಡೆಸಲಿದೆ. ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿಟ್ಟಿರುವ ಪ್ರಕರಣದ ತನಿಖೆಗೆ ಇಂದು ಎಸ್ಐಟಿ ಅಧಿಕಾರಿಗಳ ತಂಡ ಧರ್ಮಸ್ಥಳಕ್ಕೆ ತೆರಳಿದ್ದು, ಇಂದಿನಿಂದ ತನಿಖೆ ನಡೆಸಲಿದೆ. ಎಸ್ಐಟಿ ಮುಖ್ಯಸ್ಥ ಡಿಜಿಪಿ ಪ್ರಣವ್ ಮೊಹಾಂತಿ ನೇತೃತ್ವದ ಅಧಿಕಾರಿಗಳ ತಂಡವು ಬೆಳ್ತಂಗಡಿಯಲ್ಲಿ ಕಚೇರಿ ತೆರೆಯಲಿದೆ. ಬೆಳ್ತಂಗಡಿ ಪೊಲೀಸ್ ಠಾಣೆಯ ಬಳಿ ನೂತನವಾಗಿ ನಿರ್ಮಾಣಗೊಂಡಿರುವ ಪೊಲೀಸ್ ಕ್ವಾಟ್ರಸ್ನಲ್ಲಿ ಎಸ್ಐಟಿ ಕಚೇರಿ ಆರಂಭಿಸಲಿದೆ ಎನ್ನಲಾಗಿದೆ. ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷ ಪತ್ರದಲ್ಲಿ ಪ್ರಸ್ತಾಪಿಸಿರುವ ಅಂಶಗಳು ಹಾಗೂ ದಕ್ಷಿಣ ಕನ್ನಡ ಜಿಲ್ಲೆ, ಧರ್ಮಸ್ಥಳ ಪೊಲೀಸ್ ಠಾಣೆ ಮೊ.ಸಂ. 39/2025 ಕಲಂ 211(ಎ), ಬಿ.ಎನ್.ಎಸ್. ಪ್ರಕರಣಕ್ಕೆ ಸಂಬಂಧಿಸಿದಂತೆ ಸಮಗ್ರ ರಾಜ್ಯ ಸರ್ಕಾರ ಎಸ್ಐಟಿ ರಚಿಸಿ ಆದೇಶಿಸಿದೆ.

Read More

ಸುಳ್ಯ: ಲಾರಿ ಮತ್ತು ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿ ಕಾರಿನಲ್ಲಿದ್ದ ನಾಲ್ವರೂ ಸಾವನ್ನಪ್ಪಿರುವ ಘಟನೆ ಸಂಪಾಜೆಯ ಕೊಯನಾಡಿನಲ್ಲಿ ನಡೆದಿದೆ. ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದರೆ ಮತ್ತಿಬ್ಬರು ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ಸಾವನ್ನಪ್ಪಿದ್ದಾರೆ. ಮಂಗಳೂರು ಕಡೆಯಿಂದ ಮಡಿಕೇರಿ ಕಡೆಗೆ ಹೋಗುತ್ತಿದ್ದ ಲಾರಿಗೆ ಮಡಿಕೇರಿಯಿಂದ ಬರುತ್ತಿದ್ದ ಕಾರು ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಕಾರಿನಲ್ಲಿ ನಾಲ್ವರು ಪ್ರಯಾಣಿಕರಿದ್ದು, ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದರೆ, ಮತ್ತಿಬ್ಬರು ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ಸಾವನ್ನಪ್ಪಿದ್ದಾರೆ. ಅಪಘಾತಕ್ಕೊಳಗಾದ ಕಾರು ಕೊಡಗು ಜಿಲ್ಲೆ ಗೋಣಿಕೊಪ್ಪ ಮೂಲದ್ದೆಂದು ತಿಳಿದು ಬಂದಿದ್ದು, ಮೃತಪಟ್ಟವರನ್ನು ನಿಹಾದ್, ರಿಷಾನ್, ಮತ್ತು ರಾಶಿಬ್ ಎಂದು ಗುರುತಿಸಲಾಗಿದೆ. ಈ ಕಾರು ಕೊಡಗು ಜಿಲ್ಲೆ ಗೋಣಿಕೊಪ್ಪಲಿನಲ್ಲಿದ್ದು ಎನ್ನಲಾಗಿದ್ದು, ಮೃತಪಟ್ಟವರನ್ನು ನಿಹಾದ್, ರಿಷಾನ್, ಮತ್ತು ರಾಶಿಬ್ ಎಂದು ಗುರುತಿಸಲಾಗಿದೆ. ಮತ್ತೋರ್ವ ಮೃತ ಯುವಕನ ಬಗ್ಗೆ ಮಾಹಿತಿ ತಿಳಿದು ಬಂದಿಲ್ಲ.

Read More

ಸುಬ್ರಹ್ಮಣ್ಯದ ಸರ್ಕಾರಿ ಆಸ್ಪತ್ರೆಯ ಅಂಬ್ಯುಲೆನ್ಸ್‌ ಚಾಲಕ ಹೊನ್ನಪ್ಪ ಗೌಡ ಕುಮಾರಧಾರ ನದಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಈ ಮೂಲಕ ಅವರು ಬದುಕಿದ್ದಾರೆ ಅನ್ನುವ ಊಹಪೋಹಗಳಿಗೆ ತೆರೆಬಿದ್ದಂತಾಗಿದೆ. ಈಶ್ವ‌ರ್ ಮಲ್ಪೆ ಹಾಗೂ ತಂಡದ ಮೂರು ದಿನದ ಕಾರ್ಯಾಚರಣೆ ಬಳಿಕ ಶವವನ್ನು ಮೇಲಕ್ಕೆ ಎತ್ತಿದ್ದಾರೆ ಅನ್ನುವುದು ವಿಶೇಷ. ಈಶ್ವರ್ ಮಲ್ಪೆ ಜೊತೆಗೆ ಸುಳ್ಯದ ಪ್ರಗತಿ ಆಂಬ್ಯುಲೆನ್ಸ್‌ ಚಾಲಕ ಅಚ್ಚು ಪ್ರಗತಿ ಸೇರಿದಂತೆ ಸುಳ್ಯ ತಾಲೂಕು ಆಂಬ್ಯುಲೆನ್ಸ್ ಚಾಲಕ-ಮಾಲಕರು ಕೂಡ ಪಾಲ್ಗೊಂಡಿದ್ದರು.

Read More

ಉಡುಪಿ: ಸೌಹಾರ್ದ ಸಹಕಾರ ಸಂಘದ ಆಡಳಿತ ಚುನಾವಣೆಯ ಲೆಕ್ಕ ಪರಿಶೋಧನ ಮಾಡಿಕೊಡಲು ಉಡುಪಿ ಜಿಲ್ಲಾ ಸಹಕಾರಿ ಸಂಘದ ಲೆಕ್ಕ ಪರಿಶೋಧನ ಇಲಾಖೆಯ ಇಬ್ಬರು ಸಿಬ್ಬಂದಿ ಲಂಚಕ್ಕೆ ಬೇಡಿಕೆ ಇಟ್ಟಿದ್ದು ಲೋಕಾಯುಕ್ತ ಪೊಲೀಸರು ಅವರನ್ನು ಬಲೆಗೆ ಕೆಡವಿದ್ದಾರೆ. ಸಹಕಾರಿ ಸಂಘದ ಲೆಕ್ಕ ಪರಿಶೋಧನ ಇಲಾಖೆಯ ಉಪನಿರ್ದೇಶಕಿ ರೇಣುಕಾ ಮತ್ತು ಪ್ರಥಮ ದರ್ಜೆ ಸಹಾಯಕ ಜಯರಾಮ್ ಬಂಧಿತ ಆರೋಪಿಗಳು. ಇವರು ತಲಾ ಐದು ಸಾವಿರದಂತೆ ಹತ್ತು ಸಾವಿರ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ. ಹಣ ಪಡೆಯುತ್ತಿದ್ದಾಗಲೇ ಲೋಕಾಯುಕ್ತ ಪೊಲೀಸರ ಕೈಯ್ಯಲ್ಲಿ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾನೆ. ಮಂಗಳೂರು ಲೋಕಾಯುಕ್ತ ಪೊಲೀಸ್ ಅಧೀಕ್ಷಕ ಕುಮಾರಚಂದ್ರ ಮಾರ್ಗದರ್ಶನದಲ್ಲಿ ಲೋಕಾಯುಕ್ತ ಇತರ ಪೊಲೀಸರು ಅವರನ್ನು ಬಂಧಿಸಿದ್ದಾರೆ.

Read More

ಧರ್ಮಸ್ಥಳಲ್ಲಿ ನಡೆದಿದೆ ಎನ್ನಲಾದ ಸರಣಿ ಸಾವು ಪ್ರಕರಣಕ್ಕೆ ಸಂಬಂಧ ಸರಕಾರ ನಿಯೋಜಿಸಿದ್ದ ಅಧಿಕಾರಿಗಳ ಪೈಕಿ ಇಬ್ಬರು ಹಿಂದೆ ಸರಿದಿದ್ದಾರೆ ಎನ್ನಲಾಗಿದೆ. ಈ ಪೈಕಿ ವಿಶೇಷ ತನಿಖಾ ತಂಡದ (ಎಸ್‌ಐಟಿ) ಐಪಿಎಸ್ ಅಧಿಕಾರಿ ಇದ್ದಾರೆ ಎಂಬ ಮಾತುಗಳು ಕೇಳಿಬಂದಿವೆ. ಧರ್ಮಸ್ಥಳ ಪ್ರಕರಣ ತನಿಖೆ ನಡೆಸಲು ಸರಕಾರ 4 ಅಧಿಕಾರಿಗಳ ಎಸ್‌ಐಟಿ ರಚನೆ ಮಾಡಿತ್ತು. ಆಂತರಿಕ ಭದ್ರತಾ ವಿಭಾಗದ ಪೊಲೀಸ್ ಮಹಾ ನಿರ್ದೇಶಕ ಪ್ರಣವ ಮೊಹಂತಿಗೆ ಮುಂದಾಳತ್ವ ನೀಡಿತ್ತು. ಉಳಿದಂತೆ ತಂಡದಲ್ಲಿ ಹಿರಿಯ ಐಪಿಎಸ್ ಅಧಿಕಾರಿಗಳಾದ ಎಂ.ಎನ್.ಅನುಚೇತ್, ಸೌಮ್ಯಲತಾ ಮತ್ತು ಜಿತೇಂದ್ರ ಕುಮಾರ್ ದಯಾಮ ಇದ್ದರು. ಸದ್ಯ ಸಿಎಆ‌ರ್ ಕೇಂದ್ರಸ್ಥಾನದ ಉಪ ಪೊಲೀಸ್ ಆಯುಕ್ತರಾದ ಸೌಮ್ಯಲತಾ ಅವರು ವೈಯಕ್ತಿಕ ಕಾರಣಗಳಿಂದ ಹಿಂದೆ ಸರಿಯಲು ನಿರ್ಧರಿಸಿ ಪತ್ರ ಬರೆದಿದ್ದಾರೆ ಎನ್ನಲಾಗುತ್ತಿದೆ. ತನಿಖೆಯ ಕುರಿತು ಬೆಂಗಳೂರಿನ ಸಿಐಡಿ ಕಚೇರಿಯಲ್ಲಿ ನಡೆದ ಸಭೆಗೂ ಗೈರಾಗಿದ್ದರು.ಸೌಮ್ಯಲತಾ ಅವರು ಯಾವ ಕಾರಣಕ್ಕೆ ಹಿಂದೆ ಸರಿಯುತ್ತಿದ್ದಾರೆ ಎಂಬುದು ತಿಳಿದುಬಂದಿಲ್ಲ ಧರ್ಮಸ್ಥಳ ಪ್ರಕರಣದಲ್ಲಿ ಎಸ್‌ಐಟಿ ತಂಡದಿಂದ ಐಪಿಎಸ್ ಅಧಿಕಾರಿ ಹೊರಗುಳಿಯುವ ವಿಚಾರದ ಕುರಿತು ಗೃಹ…

Read More

ಮಂಗಳೂರು: 2008ನೇ ಸಾಲಿನಲ್ಲಿ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಭಯೋತ್ಪಾದನಾ ಪ್ರಕರಣದಲ್ಲಿ ಪ್ರಮುಖ ಆರೋಪಿ ಯಾಸೀನ್ ಭಟ್ಕಳ @ ಶಾರೂಕ್ @ ಡಾಕ್ಟರ್ ಅರಾಜೂ ಎಂಬಾತನನ್ನು ಈ ದಿನ ಮೊದಲ ಬಾರಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.ಈತನ ವಿರುದ್ಧದ ವಿಚಾರಣೆಯು ಹಲವು ವರ್ಷಗಳಿಂದ ನ್ಯಾಯಾಲಯದಲ್ಲಿ ಬಾಕಿ ಇದ್ದು, ಈ ಮೂಲಕ ವಿಚಾರಣೆಯು ಪುನಾರಂಭವಾಗಿದೆ. ಪ್ರಕರಣದ ಹಿನ್ನೆಲೆ: 2008ರ ಅಕ್ಟೋಬರ್ 4ರಂದು, ನಿಷೇಧಿತ ಇಂಡಿಯನ್ ಮುಜಾಹೀದ್ದೀನ್ ಸಂಘಟನೆಯ ಸದಸ್ಯರು ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಮುಕ್ಕಚ್ಚೇರಿ ಮತ್ತು ಚೆಂಬುಗುಡ್ಡೆ ಪ್ರದೇಶಗಳಲ್ಲಿ ಭಯೋತ್ಪಾದನಾ ಕ್ರಿಯಾಕಲಾಪಗಳನ್ನು ನಿರ್ವಹಿಸುತ್ತಿದ್ದರು ಎಂಬ ಮಾಹಿತಿಯ ಮೇರೆಗೆ, ಡಿಸಿಐಬಿ (DCIB) ಅಧಿಕಾರಿಗಳು ಮತ್ತು ಸಿಬ್ಬಂದಿಗಳು ದಾಳಿ ನಡೆಸಿ ಆರೋಪಿಗಳನ್ನು ಪತ್ತೆ ಹಚ್ಚಿದರು.ಸದ್ಯ ಪ್ರಕರಣ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಮೊ.ನಂ. 242/2008ರಂತೆ ದಾಖಲಾಗಿ, ಐಎಫ್ಎಕ್ಸ್ ಹಾಗೂ ಇತರ ಸ್ಪೋಟಕ ವಸ್ತುಗಳು ಸಹಿತ ಸಿಕ್ಕಿಬಿದ್ದ ಆರೋಪಿಗಳಲ್ಲಿ ಒಟ್ಟು 7 ಜನರನ್ನು ಬಂಧಿಸಲಾಗಿದ್ದು, ಉಳಿದ 6 ಆರೋಪಿಗಳು ತಲೆಮರೆಸಿಕೊಂಡಿದ್ದರು.ಈ ಪ್ರಕರಣದಲ್ಲಿ, ಆರೋಪಿಗಳಾದ:…

Read More