Author: main-admin

ಮಂಗಳೂರು : ನಗರ ಹೊರವಲಯದ ಕುಡುಪು ಸಮೀಪ ರವಿವಾರ ವ್ಯಕ್ತಿಯೊಬ್ಬರನ್ನು ಸುಮಾರು 30ಕ್ಕೂ ಅಧಿಕವಿದ್ದ ಗುಂಪು ಹಲ್ಲೆ ನಡೆಸಿ ಹತ್ಯೆಗೈದಿರುವುದು ದೃಢಪಟ್ಟಿದೆ. ಪ್ರಕರಣಕ್ಕೆ ಸಂಬಂಧಿಸಿ 15 ಮಂದಿ ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎಂದು ಪೊಲೀಸ್ ಆಯುಕ್ತ ಅನುಪಮ್ ಅಗ್ರವಾಲ್ ತಿಳಿಸಿದ್ದಾರೆ. ಮಂಗಳವಾರ ಮಧ್ಯಾಹ್ನ ಆಯುಕ್ತರ ಕಚೇರಿಯಲ್ಲಿ ಸುದ್ದಿಗೋಷ್ಟಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಅವರು, ಪ್ರಕರಣಕ್ಕೆ ಸಂಬಂಧಿಸಿ ಆರೋಪಿಗಳಾದ ಕುಡುಪು ಮತ್ತು ಸುತ್ತಮುತ್ತಲಿನ ಸಚಿನ್ ಟಿ., ದೇವದಾಸ್, ಮಂಜುನಾಥ್, ಸಾಯಿದೀಪ್, ನಿತೀಶ್ ಕಮಾರ್ ಯಾನೆ ಸಂತೋಷ್, ದೀಕ್ಷಿತ್ ಕುಮಾರ್, ಸಂದೀಪ್, ವಿವಿಯನ್ ಅಲ್ವಾರಿಸ್, ಶ್ರೀದತ್ತ, ರಾಹುಲ್, ಪ್ರದೀಪ್ ಕುಮಾರ್, ಮನೀಶ್ ಶೆಟ್ಟಿ, ಧನುಷ್, ದೀಕ್ಷಿತ್, ಕಿಶೋರ್ ಕುಮಾರ್ ಎಂಬವರನ್ನು ಬಂಧಿಸಲಾಗಿದೆ ಎಂದು ಹೇಳಿದರು. ರವಿವಾರ ಪತ್ತೆಯಾದ ಅಪರಿಚಿತ ವ್ಯಕ್ತಿಯ ಮೃತದೇಹದ ಹಿನ್ನೆಲೆಯಲ್ಲಿ ಪ್ರಕರಣ ದಾಖಲಿಸಿಕೊಂಡು ಅನುಮಾನದ ಆಧಾರದಲ್ಲಿ ಸೋಮವಾರ ಶವಪರೀಕ್ಷೆ ನಡೆಸಲಾಯಿತು. ಮರಣೋತ್ತರ ಪರೀಕ್ಷೆ ನಡೆಸಿದ ವೈದ್ಯರು ಪ್ರಾಥಮಿಕ ವರದಿ ಪ್ರಕಾರ ಮೃತರ ಬೆನ್ನು ಭಾಗದಲ್ಲಿ ಬಲವಾದ ಹೊಡೆತದ…

Read More

ಪುತ್ತೂರು: ಚಾಲಕನ ನಿಯಂತ್ರಣ ತಪ್ಪಿ ಲಾರಿಯೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾದ ಘಟನೆ ನೆಕ್ಕಿಲಾಡಿಯಲ್ಲಿ ನಡೆದಿದೆ. ಘಟನೆ ಪರಿಣಾಮ ಚಾಲಕ ಅಪಾಯದಿಂದ ಪಾರಾಗಿದ್ದಾನೆ. ಲಾರಿ ಡಿಕ್ಕಿ ಹೊಡೆದ ಪರಿಣಾಮ ವಿದ್ಯುತ್ ಕಂಬಕ್ಕೆ ಮತ್ತು ಲಾರಿಗೆ ಹಾನಿ ಉಂಟಾಗಿದೆ. ಈ ಬಗ್ಗೆ ಸ್ಥಳೀಯ ಪೊಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಕಾರ್ಕಳ: ಉದ್ಯಮಿಯೋರ್ವರು ಗುಂಡು ಹಾರಿಸಿಕೊಂಡು ಪ್ರಾಣ ಕಳೆದುಕೊಂಡಿರುವ ಘಟನೆ ಕಾರ್ಕಳ ತಾಲೂಕು ನಿಟ್ಟೆ ದೂಪದಕಟ್ಟೆ ರಾಜ್ಯ ಹೆದ್ದಾರಿ ಬಳಿ ಮಂಗಳವಾರ ಮುಂಜಾನೆ ನಡೆದಿದೆ. ಕಾರ್ಕಳದ ದಿಲೀಪ್ ಎನ್ ಆರ್ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ದಿಲೀಪ್ ಎನ್ ಆರ್ ಅವರು ಮಂಗಳೂರಿನಲ್ಲಿ ಉದ್ಯಮ ನಡೆಸುತ್ತಿದ್ದು ಮಂಗಳವಾರ ನಸುಕಿನ ಜಾವ ಕಾರ್ಕಳದ ನಿಟ್ಟೆ ದೂಪದಕಟ್ಟೆ ರಾಜ್ಯ ಹೆದ್ದಾರಿ ಬಳಿಯ ಎಸ್ಟೇಟ್ ಮುಂಭಾಗ ಕಾರು ನಿಲ್ಲಿಸಿ ಕಾರಿನೊಳಗೆ ಕುಳಿತು ಸ್ವಯಂ ತಾನೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಉದ್ಯಮ ನಷ್ಟ ಹಾಗೂ ವಿಪರೀತ ಸಾಲ ಆತ್ಮಹತ್ಯೆಗೆ ಕಾರಣ ಎಂಬ ಶಂಕೆ ವ್ಯಕ್ತಪಡಿಸಲಾಗಿದೆ. ಕೆಲ ವರ್ಷಗಳಿಂದ ಕುಟುಂಬದ ಜೊತೆ ಮಂಗಳೂರಿನಲ್ಲಿ ವಾಸವಾಗಿದ್ದರು ಕಾರಿನಲ್ಲಿ ಸ್ವೀಟ್ ಬಾಕ್ಸ್ , ರಿವಾಲ್ವರ್ ಪತ್ತೆಯಾಗಿದ್ದು ಕಾರ್ಕಳ ಗ್ರಾಮಾಂತರ ಠಾಣೆಯ ಪೊಲೀಸರು ಭೇಟಿ ನೀಡಿ ಪರೀಶಿಲನೆ ನಡೆಸಿದ್ದಾರೆ. ಶವವನ್ನು ಮರಣೋತ್ತರ ಪರೀಕ್ಷೆಗೆ ಮಣಿಪಾಲ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದಿಲೀಪ್ ಅವರು…

Read More

ಮಂಗಳೂರು : ಯುವತಿಯಿಂದ ಸಾಮಾಜಿಕ ಜಾಲತಾಣದಲ್ಲಿ ಧರ್ಮ ವಿರೋಧಿ ಹಾಗೂ ದೇಶದ್ರೋಹಿ ಪೋಸ್ಟ್ ಹಂಚಿಕೊಳ್ಳಲಾಗಿದ್ದು, ಹೈಲ್ಯಾಂಡ್ ಆಸ್ಪತ್ರೆಯ ವೈದ್ಯ ಅಸಿಫಾ ಫಾತಿಮಾ ಎಂಬ ವೈದ್ಯೆ ಧರ್ಮ ವಿರೋಧಿ ಪೋಸ್ಟ್ ಹಂಚಿಕೊಂಡಿದ್ದಾಳೆ. ಇದೀಗ ಆಸ್ಪತ್ರೆಯ ಎಚ್ ಆರ್ ಅವರ ದೂರು ಆಧರಿಸಿ ಮಂಗಳೂರಿನ ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ವೈದ್ಯೆ ವಿರುದ್ಧ ಎಫ್ಐಆರ್ ದಾಖಲಾಗಿದೆ. ಪೋಸ್ಟ್ ನಲ್ಲಿ ಕಾಪಾಡಿ ಕೊಳಕು ಹಿಂದೂಗಳು ನನ್ನ ಹಿಂದೆ ಬಿದ್ದಿದ್ದಾರೆ.ಹೌದು ನಾನು ಭಾರತೀಯಳು ಆದರೆ ನಾನು ಭಾರತವನ್ನು ದ್ವೇಷಿಸುತ್ತೇನೆ ಎಂದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ ವೈದ್ಯೆ ಅಸಿಫಾ ಫಾತಿಮಾ. ಇದೀಗ ಹೈಲ್ಯಾಂಡ್ ಆಸ್ಪತ್ರೆಯ ವೈದ್ಯೆ ಫಾತಿಮಾ ವಿರುದ್ಧ ಇದೀಗ ತೀವ್ರ ಅಕ್ರೋಶ ವ್ಯಕ್ತವಾಗುತ್ತಿದೆ. ಆಕ್ರೋಶ ಭುಗಿಲೆಳುತ್ತಿದಂತೆ ಆಡಳಿತ ಮಂಡಳಿ ವೈದ್ಯೆ ಅಸಿಫಾ ಫಾತಿಮಾ ಅವರನ್ನು ಆಸ್ಪತ್ರೆಯಿಂದ ವಜಾಗೋಳಿಸಿದೆ. ಸದ್ಯ ಅಸಿಫಾ ವಿರುದ್ಧ ಪೊಲೀಸರು FIR ದಾಖಲಿಸಿಕೊಂಡಿದ್ದಾರೆ. ಮಂಗಳೂರು ನಗರದ ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ. ಐಲ್ಯಾಂಡ್ ಆಸ್ಪತ್ರೆ ಎಚ್ ಆರ್ ಮೊಹಮ್ಮದ್ ಅಸ್ಲಾಂ ದೂರು ಆಧರಿಸಿ…

Read More

ಬೆಳಗಾವಿಯಲ್ಲಿ ನಡೆದ ಕಾಂಗ್ರೆಸ್ ಸಮಾವೇಶದಲ್ಲಿ ಸಿಎಂ ಸಿದ್ದರಾಮಯ್ಯ ಗರಂ ಆಗಿದ್ದರು. ವೇದಿಕೆ ಮೇಲೆಯೇ ಧಾರವಾಡದ ಹೆಚ್ಚುವರಿ ಎಸ್‌ಪಿ ನಾರಾಯಣ ಭರಮನಿ ಅವರತ್ತ ಸಿಎಂ ಕೈ ಎತ್ತಿದ್ದ ವಿಡಿಯೋ ಈಗ ಎಲ್ಲೆಡೆ ವೈರಲ್ ಆಗತೊಡಗಿದೆ. ಬೆಲೆ ಏರಿಕೆ ವಿರೋಧಿಸಿ ಇಂದು ಕಾಂಗ್ರೆಸ್‌ ಪ್ರತಿಭಟನಾ ಸಭಾ ಆಯೋಜಿಸಿತ್ತು. ಸಿಎಂ ಮಾತನಾಡುವಾಗ ಬಿಜೆಪಿಯ ಮಹಿಳಾ ಕಾರ್ಯಕರ್ತೆಯರು ಕಪ್ಪು ಪಟ್ಟಿಯನ್ನು ಧರಿಸಿ ಪ್ರತಿಭಟಿಸಿದರು. ಪಾಕ್ ಜೊತೆ ಯುದ್ಧ ಅನಿವಾರ್ಯವಲ್ಲ ಎಂಬ ಹೇಳಿಕೆಯನ್ನು ವಿರೋಧಿಸಿ ಬಿಜೆಪಿ ಕಾರ್ಯಕರ್ತರು ಕಪ್ಪು ಪಟ್ಟಿ ಪ್ರದರ್ಶಿಸಿದ್ದಾರೆ. ಈ ವೇಳೆ ಸಂಯಮ ಕಳೆದುಕೊಂಡ ಸಿಎಂ ಹೆಚ್ಚುವರಿ ಎಸ್‌ಪಿಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಕಾಂಗ್ರೆಸ್ ಸಮಾವೇಶಕ್ಕೆ ಬಿಜೆಪಿ ಮಹಿಳಾ ಕಾರ್ಯಕರ್ತೆಯರು ಆಗಮಿಸಿದ್ದರು. ಬೇರೆ ನಾಯಕರ ಭಾಷಣದವರೆಗೆ ಸುಮ್ಮನೇ ಕುಳಿತಿದ್ದ ಕಾರ್ಯಕರ್ತೆಯರು ಸಿಎಂ ಭಾಷಣ ಮಾಡುವಾಗ ಕಪ್ಪು ಪಟ್ಟಿಯನ್ನು ತೋರಿಸಿ ಪ್ರತಿಭಟಿಸಿದರು. ಇದ್ದಕ್ಕಿದ್ದಂತೆ ತನ್ನ ಮುಂಭಾಗವೇ ಪ್ರತಿಭಟನೆ ನೋಡಿ ಸಿಎಂ ಒಂದು ಕ್ಷಣ ಭಾಷಣ ಮಾಡುವುದನ್ನು ನಿಲ್ಲಿಸಿದರು. ನಿಲ್ಲಿಸಿದ ಬಳಿಕ ಯಾರದು ಎಸ್‌ಪಿ ಎಂದು ಹೇಳಿ ವೇದಿಕೆಗೆ ಬರುವಂತೆ…

Read More

ಮಂಜೇಶ್ವರ: ಬೈಕ್‌ನಲ್ಲಿ ತೆರಳುತಿದ್ದ ಯುವ ಅಡಿಕೆ ವ್ಯಾಪಾರಿಗೆ ಗುಂಡೇಟು ತಗಲಿರುವ ಘಟನೆ ಕೇರಳದ ಮಂಜೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯ ಕರ್ನಾಟಕ ಗಡಿಭಾಗ ಮುಡಿಪು ಸಮೀಪದ ಕಜೆಪದವು ಎಂಬಲ್ಲಿ ನಡೆದಿದೆ. ಬಾಕ್ರಬೈಲ್ ನಡೀಬೈಲು ನಿವಾಸಿ ಸವಾದ್ (20) ಎಂಬಾತನ ಮೇಲೆ ಶೂಟೌಟ್ ನಡೆದಿದೆ. ನಿನ್ನೆ ಸಂಜೆ ವೇಳೆ ಬೈಕ್‌ನಲ್ಲಿ ಮನೆ ಕಡೆಗೆ ತೆರಳುವ ಸಂದರ್ಭ ಕಜೆಪದವು ತಿರುವಿನಲ್ಲಿ ಈ ಶೂಟೌಟ್ ನಡೆದಿದೆ. ಕಾಲಿಗೆ ಗಂಭೀರ ಗಾಯಗೊಂಡ ಸಾವಾದ್‌ನನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದೆ. ಪ್ರಾಣಿ ಬೇಟೆ ಬಂದವರು ತಪ್ಪಿ ಗುಂಡು ಹಾರಿಸಿರುವ ಸಾಧ್ಯತೆ ಇರುವುದಾಗಿ ಮಂಜೇಶ್ವರ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಹರ್ಷಾದ್ ವರ್ಕಾಡಿ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ್ದಾರೆ. ಇನ್ನೊಂದು ಮೂಲಗಳ ಪ್ರಕಾರ ಗಾಂಜಾ ವ್ಯಸನಿಗಳು ಅಥವಾ ವ್ಯಾಪಾರಿಗಳು ಕೃತ್ಯ ಎಸೆದಿರುವ ಸಾಧ್ಯತೆಯೂ ವ್ಯಕ್ತವಾಗಿದೆ. ಬೈಕ್‌ನಲ್ಲಿ ತೆರಳುವ ಸಂದರ್ಭ ನಿರ್ಜನ ಪ್ರದೇಶದಲ್ಲಿ ವಾಹನದ ಹೆಡ್ಲೈಟ್ ಕಾಣಿಸಿದ್ದು., ಅದನ್ನು ಗಮನಿಸಿ ಸವಾದ್ ಬೈಕ್ ನಿಲ್ಲಿಸಿದ ಕಾರಣಕ್ಕೆ ಶೂಟೌಟ್ ನಡೆದಿದೆ ಅನ್ನುವ ಮಾತುಗಳು ಕೇಳಿಬಂದಿದೆ. ಮಂಜೇಶ್ವರ ಠಾಣಾ ಪೋಲೀಸರು…

Read More

ಮಂಗಳೂರು : ನಗರದ ಹೊರವಲಯದ ಕುಡುಪು ಭಟ್ರಕಲ್ಲುರ್ಟಿ ದೈವಸ್ಥಾನದ ಬಳಿ ನಿರ್ಜನ ಪ್ರದೇಶದಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಭಾನುವಾರ ಸಂಜೆ ವೇಳೆಗೆ ಪತ್ತೆಯಾಗಿದೆ. ವ್ಯಕ್ತಿಯನ್ನು ಹಲ್ಲೈಗೈದು ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಇಲ್ಲಿನ ಸ್ಥಳೀಯರಿಗೆ ಮೃತ ವ್ಯಕ್ತಿಯ ಪರಿಚಯವಿಲ್ಲ. ಆತ ದಿನಗೂಲಿ ಕಾರ್ಮಿಕನಾಗಿರಬಹುದು ಎಂದು ಶಂಕಿಸಲಾಗಿದೆ. ಇಲ್ಲೆ ಸಮೀಪ ಕ್ರಿಕೆಟ್‌ ಪಂದ್ಯಾಟವೊಂದು ನಡೆದಿದ್ದು, ಅದನ್ನು ನೋಡಲು ಬಂದ ವ್ಯಕ್ತಿ ಕೊಲೆಯಾಗಿದ್ದಾನೆಯೇ ಎಂಬ ಅನುಮಾನವೂ ಇದೆ. ಕುಡುಪು ಕಟ್ಟೆ ಸಮೀಪದ ಗದ್ದೆಯಲ್ಲಿ ಯುವಕರ ಗುಂಪೊಂದು 6 ತಂಡಗಳ ಕ್ರಿಕೆಟ್ ಮ್ಯಾಚ್ ಆಯೋಜಿಸಿತ್ತು. ಸಂಜೆ ವೇಳೆ ಕ್ರಿಕೆಟ್ ಪಂದ್ಯಾಟ ನಡೆಯುತ್ತಿದ್ದ ಗದ್ದೆಗೆ ಅಪರಿಚಿತ ಯುವಕನೊಬ್ಬ ತೆರಳಿದ್ದು, ಯಾವುದೋ ಕಾರಣಕ್ಕೆ ಈ ಯುವಕ ಮತ್ತು ಕ್ರಿಕೆಟ್ ಆಟಗಾರರ ಮಧ್ಯೆ ಮಾತಿಗೆ ಮಾತು ಬೆಳೆದಿದೆ ಎನ್ನಲಾಗಿದೆ. ಆಕ್ರೋಶಗೊಂಡ ಯುವಕರ ತಂಡ ಈ ಯುವಕನಿಗೆ ಹಲ್ಲೆಗೈದಿದ್ದು, ಗಂಭೀರ ಗಾಯಗೊಂಡ ಯುವಕ ಸ್ಥಳದಲ್ಲೇ ಮೃತಪಟ್ಟಿರುವುದಾಗಿ ವರದಿಯಾಗಿದೆ. ಘಟನಾ ಸ್ಥಳಕ್ಕೆ ನಗರ ಉಪ ಆಯುಕ್ತ ಸಿದ್ದಾರ್ಥ್ ಗೋಯಲ್, ನಗರ ದಕ್ಷಿಣ ಉಪವಿಭಾಗ…

Read More

ಬೆಳ್ತಂಗಡಿ: ಖಾಸಗಿ ಕಾಲೇಜ್ ವಿದ್ಯಾರ್ಥಿನಿಗೆ ವಾಲಿಬಾಲ್ ತರಬೇತುದಾರ ಮೆಸೇಜ್ ಕಳುಹಿಸಿದ ಆರೋಪದಲ್ಲಿ ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆಯ ಹತ್ತಕ್ಕೂ ಹೆಚ್ಚು ಕಾರ್ಯಕರ್ತರ ತಂಡ ಕಾರ್ಕಳದ ಸಯ್ಯದ್ (24)ಗೆ ಮಾರಣಾಂತಿಕವಾಗಿ ಹಲ್ಲೆ ನಡೆಸಿದ ಘಟನೆ ಸಂಭವಿಸಿದೆ. ಇದೀಗ ಬೆಳ್ತಂಗಡಿ ಠಾಣೆಯಲ್ಲಿ ವಿದ್ಯಾರ್ಥಿನಿಯ ದೂರಿನಂತೆ ಸಯ್ಯದ್ ವಿರುದ್ಧ ಪೋಕ್ಸೋ ಪ್ರಕರಣ‌ ದಾಖಲಿಸಲಾಗಿದ್ದು, ಹಲ್ಲೆ ನಡೆಸಿದ ಆರೋಪಿಗಳ ವಿರುದ್ಧವೂ ಪ್ರಕರಣ ದಾಖಲಿಸಲಾಗಿದೆ. ಖಾಸಗಿ ಕಾಲೇಜಿನ 17ರ ಹರೆಯದ ವಿದ್ಯಾರ್ಥಿನಿಗೆ ಕಾರ್ಕಳ ನಿವಾಸಿ ಸಯ್ಯದ್ ಕಳೆದ ಕೆಲವು ದಿನಗಳಿಂದ‌ ಮೆಸೇಜ್ ಕಳುಹಿಸುತ್ತಾ ಕಿರುಕುಳ ನೀಡುತ್ತಿದ್ದ ಎಂದು ಆರೋಪಿಸಿ ದೂರು ನೀಡಲಾಗಿದೆ. ಸಯ್ಯದ್ ಇಲ್ಲಿನ ಕಾಲೇಜೊಂದರಲ್ಲಿ ವಾಲಿಬಾಲ್ ಆಡಲು ಹಾಗೂ ತರಬೇತಿ ನೀಡಲು ಬರುತ್ತಿದ್ದ ಎನ್ನಲಾಗಿದೆ. ಈ ಬಗ್ಗೆ ಮಾಹಿತಿ ಪಡೆದ ಉಜಿರೆಯ ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆಯ ಕಾರ್ಯಕರ್ತರ ಗುಂಪೊಂದು ಎ.26 ರಂದು ಉಜಿರೆಯಲ್ಲಿ ಸಯ್ಯದ್ ಗೆ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾರೆ. ಇದಾದ ಬಳಿಕ ಪೊಲೀಸರು ಸಯ್ಯದ್ ನನ್ನು ವಶಕ್ಕೆ ಪಡೆದಿದ್ದರು. ವಿದ್ಯಾರ್ಥಿನಿ ಬೆಳ್ತಂಗಡಿ ಪೊಲೀಸ್ ಠಾಣೆಗೆ…

Read More

ಬೆಂಗಳೂರು: ರಾಜ್ಯ ಸರ್ಕಾರಿ ನೌಕರನು ಕ್ರಿಮಿನಲ್ ಪ್ರಕರಣಗಳಲ್ಲಿ ದೋಷಿಯಾಗಿ ಜೈಲು ಶಿಕ್ಷೆಗೆ ಒಳಗಾದಲ್ಲಿ, ಅಂತರ ಸರ್ಕಾರಿ ನೌಕರ ಪುನಃ ಸೇವೆಯಲ್ಲಿ ಮುಂದುವರೆಯಲು ಅವಕಾಶವಿಲ್ಲ ಎಂಬುದಾಗಿ ಹೈಕೋರ್ಟ್ ಸ್ಪಷ್ಟ ಪಡಿಸಿದೆ. ಬೆಂಗಳೂರಿನ ನಗರ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯ ಪ್ರಾಂಶುಪಾಲರ ಕಚೇರಿಯಲ್ಲಿ ದ್ವಿತೀಯ ದರ್ಜೆ ಸಹಾಕರಾಗಿದ್ದಂತ ನಂಜೇಗೌಡ ಎಂಬುವರನ್ನು 2001ರಲ್ಲಿ ನಡೆದಿದ್ದಂತ ಹಲ್ಲೆ ಪ್ರಕರಣದಲ್ಲಿ ಜೈಲು ಶಿಕ್ಷೆಗೆ ಒಳಗಾಗಿದ್ದರು. ಹೀಗಾಗಿ ಅವರನ್ನು ಉದ್ಯೋಗದಿಂದ ವಜಾಗೊಳಿಸಲಾಗಿತ್ತು. ಈ ವಜಾ ಆದೇಶವನ್ನು ಪ್ರಶ್ನಿಸಿ ನಂಜೇಗೌಡ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ವಿಚಾರಣೆ ನಡೆಸಿದಂತ ಹೈಕೋರ್ಟ್ ನ್ಯಾಯಮೂರ್ತಿ ಕೃಷ್ಣ ಎಸ್ ದೀಕ್ಷಿತ್ ನೇತೃತ್ವದ ವಿಭಾಗೀಯ ಪೀಠವು, ಅರ್ಜಿಯನ್ನು ತಿರಸ್ಕರಿಸಿದೆ. ಅಲ್ಲದೇ ಕ್ರಿಮಿನಲ್ ಪ್ರಕರಣಗಳಲ್ಲಿ ದೋಷಿಯಾಗಿ ಜೈಲು ಶಿಕ್ಷೆಗೆ ಒಳಗಾದ ಸರ್ಕಾರಿ ನೌಕರ ಪುನಹ ಸೇವೆಯಲ್ಲಿ ಮುಂದುವರೆಯಲು ಅವಕಾಶವಿಲ್ಲ ಅಂತ ಸ್ಪಷ್ಟ ಪಡಿಸಿದರು. ಅಂದಹಾಗೇ 2001ರಲ್ಲಿ ಬೆಂಗಳೂರು ನಗರ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯ ಪ್ರಾಂಶುಪಾಲರ ಕಚೇರಿಯಲ್ಲಿ ದ್ವಿತೀಯ ದರ್ಜೆ ಸಹಾಯಕನಾಗಿದ್ದಂತ ನಂಜೇಗೌಡ…

Read More

ಉಡುಪಿ: ಮಹಿಳೆಯೊಬ್ಬರು ರಸ್ತೆ ದಾಟುತ್ತಿದ್ದಾಗ ದ್ವಿಚಕ್ರ ವಾಹನವೊಂದು ಢಿಕ್ಕಿ ಹೊಡೆದು ಸವಾರ ಅಲ್ಲಿಂದ ಎಸ್ಕೇಪ್ ಆಗಿರುವ ಘಟನೆ ಉಡುಪಿಯ ಕಲ್ಸಂಕ ಸಮೀಪ ನಡೆದಿದೆ. ಗಾಯಾಳು ಮಹಿಳೆಯನ್ನು ಸ್ಥಳೀಯ ನಿವಾಸಿ ಲಲಿತಾ ಆಚಾರ್ಯ ಎಂದು ಗುರುತಿಸಲಾಗಿದೆ. ಅಂಬಾಗಿಲು ಉಡುಪಿ ರಸ್ತೆಯ ಪಾಡಿಗಾರು ಎಂಬಲ್ಲಿ ಮಹಿಳೆಯೊಬ್ಬರು ರಸ್ತೆ ದಾಟುತ್ತಿದ್ದು ಆ ಸಂದರ್ಭ ಅದೇ ರಸ್ತೆಯಲ್ಲಿ ಬಂದ ರಿಕ್ಷಾ ಚಾಲಕನೋರ್ವ ಅವರನ್ನು ಗಮನಿಸಿ ನಿಧಾನಗತಿಯಲ್ಲಿ ರಿಕ್ಷಾ ಚಾಲನೆ ಮಾಡಿಕೊಂಡು ಬಂದಿದ್ದಾರೆ. ಆದರೆ ರಿಕ್ಷಾವನ್ನು ಓವರ್ ಟೇಕ್ ಮಾಡುವ ಭರದಲ್ಲಿ ಅತೀ ವೇಗದಿಂದ ಬಂದ ಬೈಕ್ ಮಹಿಳೆಗೆ ಗುದ್ದಿದೆ. ಗುದ್ದಿದ ರಭಸಕ್ಕೆ ಮಹಿಳೆಗೆ ತೀವ್ರತರ ಗಾಯಗಳಾಗಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ. ಹಿಟ್ ಆ್ಯಂಡ್ ರನ್ ಮಾಡಿದ ಸವಾರನಿಗೆ ಪೊಲೀಸರು ಶೋಧಕಾರ್ಯ ನಡೆಸಿದ್ದಾರೆ. ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

Read More