ಮಂಗಳೂರು: ಮಂಗಳೂರು ಪೊಲೀಸ್ ಕಮಿಷನರೆಟ್ ವ್ಯಾಪ್ತಿಯಲ್ಲಿ 2024ರಲ್ಲಿ ಡ್ರಗ್ಸ್ ಮಾರಾಟ ಮತ್ತು ಸೇವನೆಗೆ ಸಂಬಂಧಿಸಿ ಒಟ್ಟು 1,090 ಪ್ರಕರಣಗಳನ್ನು ದಾಖಲಿಸಿಕೊಳ್ಳಲಾಗಿದೆ. ಜೊತೆಗೆ ಉಡುಪಿ ಜಿಲ್ಲೆಯಲ್ಲಿ 2024ರಲ್ಲಿ ಮಾದಕ ವಸ್ತು ಮಾರಾಟ, ಸೇವನೆಗೆ ಸಂಬಂಧಿಸಿ ಈ ವರ್ಷ 116 ಪ್ರಕರಣ ದಾಖಲಾಗಿರುತ್ತದೆ. ಡ್ರಗ್ಸ್ ಮಾರಾಟಕ್ಕೆ ಸಂಬಂಧಿಸಿ 88, ಸೇವನೆಗೆ ಸಂಬಂಧಿಸಿ 1,002 ಪ್ರಕರಣಗಳು ದಾಖಲಾಗಿವೆ. ಡ್ರಗ್ಸ್ ಮಾರಾಟಕ್ಕೆ ಸಂಬಂಧಿಸಿ 157 ಹಾಗೂ ಸೇವನೆಗೆ ಸಂಬಂಧಿಸಿ 1,211 ಮಂದಿ ಸಹಿತ ಒಟ್ಟು 1,372 ಮಂದಿಯನ್ನು ಅರೆಸ್ಟ್ ಮಾಡಲಾಗಿದೆ. ಈ ಪೈಕಿ ನಾಲ್ವರು ವಿದೇಶಿಗರಾಗಿದ್ದಾರೆ. ಇದು ಹಿಂದಿನ ಎಲ್ಲ ವರ್ಷಗಳಿಗಿಂತಲೂ ಅಧಿಕವಾಗಿದೆ ಎಂದು ಪೊಲೀಸ್ ಆಯುಕ್ತ ಅನುಪಮ್ ಅಗರ್‌ವಾಲ್ ಮಾಹಿತಿ ನೀಡಿದ್ದಾರೆ. 2023ಕ್ಕೆ ಹೋಲಿಸಿದಾಗ ಡ್ರಗ್ಸ್ ಸೇವನೆ ಪ್ರಕರಣಗಳಲ್ಲಿ ಶೇ.62ರಷ್ಟು ಏರಿಕೆಯಾಗಿದೆ. ಕಾವೂರು, ಉಳ್ಳಾಲ, ಉತ್ತರ ಠಾಣೆ, ಕಂಕನಾಡಿ ನಗರ ಮತ್ತು ಕೊಣಾಜೆ ಠಾಣೆಗಳ ವ್ಯಾಪ್ತಿಗಳಲ್ಲಿ ಹೆಚ್ಚಿನ ಪ್ರಕರಣಗಳು ದಾಖಲಾಗಿವೆ. ಮೂವರು ಡ್ರಗ್ಸ್ ಮಾರಾಟಗಾರರ ವಿರುದ್ಧ ಗೂಂಡಾ ಕಾಯಿದೆಯಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. 28 ಮಂದಿಯನ್ನು ಗಡೀಪಾರು…
Author: main-admin
ಕಾಸರಗೋಡು: ಕರಿವೇಡಗಂ ಪಡ್ಪು ಕ್ವಾರ್ಟರ್ಸ್‌ನಲ್ಲಿ ವಾಸಿಸುತ್ತಿದ್ದ ಮಹಿಳೆಯೊಬ್ಬಳು ಮೂರು ಮಕ್ಕಳೊಂದಿಗೆ ನಾಪತ್ತೆಯಾದ ಘಟನೆ ನಡೆದಿದೆ. ಅಬ್ದುಲ್ ಹಕೀಂ ಅವರ ಪತ್ನಿ ಜನತ್ತುಲ್ ನಿಶಾ (29) ಮತ್ತು 11, 9 ಮತ್ತು 8 ವರ್ಷ ಪ್ರಾಯದ ಮಕ್ಕಳು ನಾಪತ್ತೆಯಾಗಿದ್ದಾರೆಂದು ಬೇಡಗಂ ಪೊಲೀಸರಿಗೆ ದೂರು ನೀಡಲಾಗಿದೆ. ಡಿ.24 ರಿಂದ ನಾಪತ್ತೆಯಾಗಿರುವುದಾಗಿ ದೂರಿನಲ್ಲಿ ತಿಳಿಸಲಾಗಿದೆ.ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.
ಬಂಟ್ವಾಳ: ಲಾರಿ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿದ ಘಟನೆ ಮಾಣಿ ಸಮೀಪದ ಗಡಿಯಾರ ಎಂಬಲ್ಲಿ ಇದೀಗ ಸಂಭವಿಸಿದೆ. ಘಟನೆಯಲ್ಲಿ ಒಂದು ಮಗು ಮೃತಪಟ್ಟಿದ್ದಾಗಿ ತಿಳಿದು ಬಂದಿದೆ. ಬೆಳ್ತಂಗಡಿ ಸಮೀಪದ ನಾವುರ ಮುರ ನಿವಾಸಿ ಸಲೀಮ್ ರವರು ಕುಟುಂಬ ಸಮೇತ ಸಂಚರಿಸುತ್ತಿದ್ದ ಬೈಕ್ ಅಪಘಾತಕ್ಕೆ ಒಳಗಾಗಿದ್ದು ಚಾಲಕ ಸಲೀಮ್ ರವರಿಗೆ ಗಂಭೀರ ಗಾಯಗೊಂಡು ಮಂಗಳೂರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಬೈಕ್ ನಲ್ಲಿ ತಾಯಿ ಮಕ್ಕಳು ಸಹಿತ ಸಲೀಮ್ ರವರ ಕುಟುಂಬ ಪ್ರಯಾಣಿಸುತ್ತಿದ್ದ ವೇಳೆ ಇವರ ಬೈಕ್ ಲಾರಿ ನಡುವೆ ಅಪಘಾತ ನಡೆದಿದ್ದು ಸಲೀಮ್ ರವರ ಪುಟ್ಟ ಮಗುವೊಂದು ಮೃತಪಟ್ಟಿದ್ದಾಗಿ ತಿಳಿದು ಬಂದಿದೆ.
ಕಾಸರಗೋಡು: ನದಿಯಲ್ಲಿ ಸ್ನಾನಕ್ಕಿಳಿದ ಮೂವರು ಬಾಲಕರು ನೀರಿನಲ್ಲಿ ಮುಳುಗಿ ಮೃತಪಟ್ಟ ದಾರುಣ ಘಟನೆ ಶನಿವಾರ ಮಧ್ಯಾಹ್ನ ಬೋವಿಕ್ಕಾನ ಸಮೀಪದ ಎರಿಂಞಪುಯದಲ್ಲಿ ನಡೆದಿದೆ. ಸಿದ್ದಿಕ್ ರವರ ಪುತ್ರ ರಿಯಾಜ್ (16), ಅಶ್ರಫ್ ರವರ ಪುತ್ರ ಯಾಸಿನ್ (13) ಮತ್ತು ಮಜೀದ್ ರವರ ಪುತ್ರ ಸಮದ್ (13) ಮೃತಪಟ್ಟವರು. ಮಧ್ಯಾಹ್ನ ಸಮೀಪ ನಿವಾಸಿಗಳಾದ ಮೂವರು ವಿದ್ಯಾರ್ಥಿಗಳು ಸ್ನಾನಕ್ಕೆ ಇಳಿದಿದ್ದಾರೆ. ಈ ವೇಳೆ ಈ ಅವಘಡ ನಡೆದಿದೆ. ಶನಿವಾರ ಮಧ್ಯಾಹ್ನ 2 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. ನೀರುಪಾಲಾಗಿದ್ದ ಮೂವರನ್ನು ಅಗ್ನಿಶಾಮಕ ದಳದ ಸಿಬಂದಿಗಳು ಹಾಗೂ ಸೈಫುದ್ದೀನ್ ನೇತೃತ್ವದ ಸ್ಕೂಬಾ ತಂಡವು ಕಾರ್ಯಾಚರಣೆ ನಡೆಸಿ ಮೇಲಕ್ಕೆತ್ತಿದರೂ ಮೂವರ ಜೀವ ಉಳಿಸಲು ಸಾಧ್ಯವಾಗಲಿಲ್ಲ. ಮೃತದೇಹಗಳನ್ನು ಕಾಸರಗೋಡು ಜನರಲ್ ಆಸ್ಪತ್ರೆ ಶವಗಾರದಲ್ಲಿರಿಸಲಾಗಿದೆ.
ಮಂಗಳೂರು : ನಗರದ ಹೊರವಲಯದ ಗುರುಪುರ ಕೈಕಂಬದ ವಿಕಾಸನಗರದಲ್ಲಿ ಟೆಂಪೊದಲ್ಲಿ ಅಕ್ರಮ ಸಾಗಾಟದ 300ಕೆಜಿ ಗೋಮಾಂಸ ಸೇರಿದಂತೆ ಇಬ್ಬರು ಆರೋಪಿಗಳನ್ನು ಬಜ್ಪೆ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಮೂಲರಪಟ್ಣ ನಿವಾಸಿ ಅಝೀಝ್ ಮತ್ತು ಮೂಡುಬಿದಿರೆ ಹಂಡೇಲು ನಿವಾಸಿ ಅಬೂಬಕ್ಕರ್ ಬಂಧಿತ ಆರೋಪಿಗಳು. ಸಾರ್ವಜನಿಕರು ನೀಡಿದ ಮಾಹಿತಿಯಂತೆ ಪೋಲಿಸರು ದಾಳಿ ನಡೆಸಿದ್ದರು. ಈ ವೇಳೆ ರಿಕ್ಷಾಟೆಂಪೊದಲ್ಲಿ ಗೋಮಾಂಸ ಸಾಗಾಟ ಮಾಡುತ್ತಿರುವುದು ಪತ್ತೆಯಾಗಿದೆ. ತಕ್ಷಣ ಪೊಲೀಸರು ಮಾಂಸ ಸಾಗಿಸುತ್ತಿದ್ದ ಇಬ್ಬರು ಆರೋಪಿಗಳು ಹಾಗೂ ಸುಮಾರು 300 ಕೆ.ಜಿ. ಗೋಮಾಂಸ ಮತ್ತು ಮಾಂಸ ಸಾಗಾಟಕ್ಕೆ ಬಳಸಿದ್ದ ರಿಕ್ಷಾ ಟೆಂಪೋವನ್ನು ಬಜಪೆ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಈ ಬಗ್ಗೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.
ಬೆಂಗಳೂರು: ಹೊಸ ವರ್ಷದ ಸಂಭ್ರಮಾಚರಣೆಯಲ್ಲಿ ಯಾವುದೇ ತೊಂದರೆ ಆಗದಂತೆ ಪೊಲೀಸರು ಹದ್ದಿನ ಕಣ್ಣು ನೆಟ್ಟಿದ್ದಾರೆ. ಬೆಂಗಳೂರು ನಗರದ ಎಲ್ಲಾ ಫ್ರೈ ಓವರ್ ಗಳಲ್ಲಿ ವಾಹನಗಳ ಸಂಚಾರವನ್ನು ಬಂದ್ ಮಾಡಲಾಗುತ್ತಿದೆ. ಜೊತೆಗೆ ಸಿಸಿಟಿವಿ ಕ್ಯಾಮರಾ ಕಣ್ಗಾವಲಿರಿಸಲಾಗಿದೆ. ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದಂತ ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್, ಬೆಂಗಳೂರಲ್ಲಿ ಹೊಸ ವರ್ಷಾಚರಣೆಯ ವೇಳೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಕಟ್ಟೆಚ್ಚರ ವಹಿಸಲಾಗಿದೆ. ಡಿಸೆಂಬರ್ 31ರ ಮಧ್ಯರಾತ್ರಿ 1ರ ನಂತ್ರ ಎಲ್ಲಾ ಫ್ಲೈಓವರ್ ಗಳನ್ನು ಬಂದ್ ಮಾಡಲಾಗುತ್ತಿದೆ. ಮೇಲ್ ಸೇತುವೆಯ ಮೇಲೆ ವಾಹನಗಳ ಸಂಚಾರವನ್ನು ನಿಷೇಧಿಸುತ್ತಿರುವುದಾಗಿ ತಿಳಿಸಿದರು. ಎಂಜಿ ರೋಡ್, ಬ್ರಿಗೇಡ್ ರೋಡ್ ಗಳಲ್ಲಿ ಪೊಲೀಸರ ಭದ್ರತೆಯನ್ನು ಹೆಚ್ಚಿಸಲಾಗಿದೆ. ವಾಚ್ ಟವರ್ ನಿರ್ಮಾಣ ಮಾಡಲಾಗಿದೆ. ಹೆಚ್ಚಿನ ಸಿಸಿಟಿವಿ ಅಳವಡಿಸಲಾಗಿದೆ. ಪೊಲೀಸರ ಭದ್ರತೆಯನ್ನು ಹೊಸ ವರ್ಷದ ಸಂಭ್ರಮಾಚರಣೆಯಲ್ಲಿ ಯಾವುದೇ ಸಮಸ್ಯೆ ಆಗದಂತೆ ಎಚ್ಚರಿಕೆ ವಹಿಸಲು ನಿಯೋಜಿಸಲಾಗಿದೆ ಎಂದರು. ಇನ್ನೂ ಬೆಂಗಳೂರಲ್ಲಿ ಡಿಸೆಂಬರ್.31ರಂದು ರಾತ್ರಿ 1 ಗಂಟೆಯವರೆಗೆ ರೆಸ್ಟೋರೆಂಟ್, ಪಬ್, ಹೋಟೆಲ್ ತೆರೆಯೋದಕ್ಕೆ ಅವಕಾಶ…
ಮಂಗಳೂರು: ಮಂಗಳೂರಿನಲ್ಲಿ ಕೋಸ್ಟಲ್ ಬಿಗ್ ಭಾಷ್ ಲೀಗ್ ಕ್ರಿಕೆಟ್ ಪಂದ್ಯಾಟವನ್ನು ಸಹ್ಯಾದ್ರಿ ಕಾಲೇಜಿನ ಮೈದಾನಲ್ಲಿ ಜನವರಿ ತಿಂಗಳಾಂತ್ಯದಲ್ಲಿ ಆಯೋಜಿಸಲಾಗುವುದು ಎಂದು ಆಯೋಜಕರು ಹೇಳಿದ್ದಾರೆ. ಇದು ಟಿ20 ಫಾರ್ಮ್ಯಾಟ್ ಲೆದರ್ ಬಾಲ್ ಕ್ರಿಕೆಟ್ ಟೂರ್ನಮೆಂಟ್ ಆಗಿದ್ದು, ಫ್ರಾಂಚೈಸ್ ಆಧಾರಿತ ಟೂರ್ನಮೆಂಟ್ ಅಗಿದೆ. ಇದರಲ್ಲಿ ಒಟ್ಟು 6 ತಂಡಗಳು ಭಾಗವಹಿಸಲಿವೆ. ಪ್ರತೀ ಫ್ರಾಂಚೈಸ್‌ಗೆ 16 ಆಟಗಾರರು ಇರಲಿದ್ದು, ಪ್ರತಿ ತಂಡವು 5 ಲೀಗ್ ಪಂದ್ಯಗಳನ್ನು ಆಡುತ್ತದೆ. ಪ್ರತಿ ಪೂಲ್‌ನಿಂದ ಟಾಪ್ 2 ತಂಡಗಳು ಸೆಮಿಫೈನಲ್‌ಗಾಗಿ ಅರ್ಹರಾಗುವರು. ಈ ಆಟ OTT ಪ್ಲ್ಯಾಟ್‌ಫಾರ್ಮ್ ಒಂದರಲ್ಲಿ ಬಿತ್ತರಗೊಳ್ಳಲಿದೆ. KSCA ಯಿಂದ ವೈಶಿಷ್ಟ್ಯಪೂರ್ಣ ಗುರುತಿನ ಸಂಖ್ಯೆಯು ಇರುವವರು ಮಾತ್ರ ಪಾಲ್ಗೊಳ್ಳಲು ಅರ್ಹರಾಗಿದ್ದಾರೆ, ಕರ್ನಾಟಕ ಡೊಮೆಸ್ಟಿಕ್ ಕ್ರಿಕೆಟ್‌ನಲ್ಲಿ ಪಾಲ್ಗೊಂಡ 8 ಐಕಾನ್ ಆಟಗಾರರು ಆಡಲಿದ್ದಾರೆ. ನೋಂದಾಯಿತ ಆಟಗಾರರನ್ನು ಹರಾಜು ಪಟ್ಟಿಯಲ್ಲಿ ವಿಂಗಡಿಸಲಾಗುವುದು. ಒಂದು Under-19 ಆಟಗಾರ ಮತ್ತು ಎರಡು Under-23 ವಯೋಮಿತಿಯ ಆಟಗಾರರು ಪ್ಲೇಯಿಂಗ್ 11 ರ ತಂಡದಲ್ಲಿರಬೇಕು. ಪ್ರತಿ ದಿನ 3 ಪಂದ್ಯಗಳು. ಪ್ರೇಕ್ಷಕರು ಪ್ರವೇಶ ಶುಲ್ಕವಿಲ್ಲದೆ ಟೂರ್ನಮೆಂಟ್…
ಪುತ್ತೂರು: ನಿಯಂತ್ರಣ ತಪ್ಪಿ ಕಾರೊಂದು ಹೊಂಡಕ್ಕೆ ಉರುಳಿ ಬಿದ್ದ ಪರಿಣಾಮ ಮೂವರು ಮೃತಪಟ್ಟ ಘಟನೆ ಪುತ್ತೂರಿನ ಪರ್ಲಡ್ಕ ಜಂಕ್ಷನ್ ಬಳಿಯ ಬೈಪಾಸ್ ರಸ್ತೆಯಲ್ಲಿ ನಡೆದಿದೆ. ಮೃತಪಟ್ಟವರು ಸುಳ್ಯ ಜಟ್ಟಿಪಳ್ಳ ನಿವಾಸಿಗಳೆಂದು ತಿಳಿದು ಬಂದಿದೆ. ಬೈಪಾಸ್ ರಸ್ತೆಯ ಪರ್ಲಡ್ಕ ಜಂಕ್ಷನ್ ಬಳಿಯಲ್ಲೇ ಘಟನೆ ನಡೆದಿದ್ದು, ಮೃತಹೇಹವನ್ನು ಪುತ್ತೂರು ಸರಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ತಿಳಿದದು ಬಂದಿದೆ. ಘಟನಾ ಸ್ಥಳಕ್ಕೆ ಪುತ್ತೂರು ಸಂಚಾರಿ ಠಾಣಾ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.
ಮಂಗಳೂರು: ನಾಪತ್ತೆಯಾಗಿದ್ದ ಯುವಕನೋರ್ವನು ನಗರದ ಮರವೂರು ಸೇತುವೆ ಬಳಿಯ ಗುರುಪುರ ನದಿಯಲ್ಲಿ ಮೃತದೇಹವಾಗಿ ಪತ್ತೆಯಾಗಿದ್ದಾನೆ. ಮೂಡುಶೆಡ್ಡೆ ನಿವಾಸಿ ಸೂರ್ಯ (24) ಎಂಬಾತ ಮೃತಪಟ್ಟ ಯುವಕ. ಡಿಸೆಂಬರ್ 25ರಂದು ಸೂರ್ಯ ಏಕಾಏಕಿ ನಾಪತ್ತೆಯಾಗಿದ್ದ. ಆ ಬಳಿಕ ಹುಡುಕಾಟ ನಡೆಸಿದರೂ ಆತ ಪತ್ತೆಯಾಗಿರಲಿಲ್ಲ. ಈ ಬಗ್ಗೆ ಕಾವೂರು ಠಾಣೆಯಲ್ಲಿ ದೂರು ದಾಖಲಿಸಲಾಗಿತ್ತು. ಇದೀಗ ಆತ ಮರವೂರು ಸೇತುವೆ ಬಳಿಯ ಗುರುಪುರ ನದಿಯಲ್ಲಿ ಮೃತದೇಹವಾಗಿ ಪತ್ತೆಯಾಗಿದ್ದಾನೆ. ಈ ಬಗ್ಗೆ ಕಾವೂರು ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಾಗಿದೆ.
ಕಾಸರಗೋಡು: ಎಟಿಎಂಗೆ ಹಣ ತುಂಬಿಸಲು ಬಂದಿದ್ದ ವಾಹನದಿಂದಲೇ 50 ಲಕ್ಷ ರೂ. ದರೋಡೆಗೈದಿರುವ ಪ್ರಕರಣದ ಪ್ರಮುಖ ಆರೋಪಿಯನ್ನು ವಿಶೇಷ ತನಿಖಾ ಪೊಲೀಸ್ ತಂಡ ತಮಿಳುನಾಡಿನ ತಿರುಚ್ಚಿಯಲ್ಲಿ ಬಂಧಿಸಿದೆ. ತಿರುಚ್ಚಿ ರಾಮ್‌ಜಿ ನಗರ ಹರಿಭಾಸ್ಕರ ಕಾಲನಿಯ ಕಾವರ್ಣನ್(28) ಬಂಧಿತ ಆರೋಪಿ. 2024ರ ಮಾರ್ಚ್ 24ರಂದು ಕಾಸರಗೋಡಿನ ಉಪ್ಪಳದಲ್ಲಿ ಈ ದರೋಡೆ ನಡೆದಿತ್ತು. ಎಟಿಎಂಗೆ ಹಣ ತುಂಬಿಸಲು ಆಗಮಿಸಿದ ವಾಹನದಲ್ಲಿದ್ದ 50 ಲಕ್ಷ ರೂ. ಹಣವನ್ನು ದರೋಡೆ ಮಾಡಲಾಗಿತ್ತು. ಮಾಹಿತಿ ತಿಳಿದು ಆಗಮಿಸಿದ ಪೊಲೀಸರು ಸಿ.ಸಿ.ಕ್ಯಾಮರಾ ಪರಿಶೀಲಿಸಿದಾಗ ಆರೋಪಿಗಳ ಬಗ್ಗೆ ಸುಳಿವು ಲಭಿಸಿತ್ತು. ಈ ಹಿನ್ನೆಲೆಯಲ್ಲಿ ಓರ್ವ ಆರೋಪಿ ಮುತ್ತು ಕುಮಾರ್ ಎಂಬಾತನ್ನು ಘಟನೆ ನಡೆದ ಒಂದು ತಿಂಗಳ ಬಳಿಕ ಬಂಧಿಸಲಾಗಿತ್ತು. ಆದರೆ ದರೋಡೆಯ ಸೂತ್ರಧಾರ ಕಾವರ್ಣನ್ ಹಾಗೂ ಇನ್ನೋರ್ವ ಆರೋಪಿ ಪರಾರಿಯಾಗಿದ್ದರು. ಇವರ ಬಂಧನಕ್ಕಾಗಿ ಪೊಲೀಸರು ತನಿಖೆ ಚುರುಕುಗೊಳಿಸಿದ್ದರು. ಇದಲ್ಲಿ ಕಾವರ್ಣನ್ ತಿರುಚ್ಚಿಯಲ್ಲಿರುವ ಬಗ್ಗೆ ಲಭಿಸಿದ ಖಚಿತ ಮಾಹಿತಿಯಂತೆ ಕಾರ್ಯಾಚರಣೆ ನಡೆಸಿದ ಪೊಲೀಸರು ಆತನನ್ನು ಇದೀಗ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.










