ಕಾಸರಗೋಡು: ಎಟಿಎಂಗೆ ಹಣ ತುಂಬಿಸಲು ಬಂದಿದ್ದ ವಾಹನದಿಂದಲೇ 50 ಲಕ್ಷ ರೂ. ದರೋಡೆಗೈದಿರುವ ಪ್ರಕರಣದ ಪ್ರಮುಖ ಆರೋಪಿಯನ್ನು ವಿಶೇಷ ತನಿಖಾ ಪೊಲೀಸ್ ತಂಡ ತಮಿಳುನಾಡಿನ ತಿರುಚ್ಚಿಯಲ್ಲಿ ಬಂಧಿಸಿದೆ. ತಿರುಚ್ಚಿ ರಾಮ್‌ಜಿ ನಗರ ಹರಿಭಾಸ್ಕರ ಕಾಲನಿಯ ಕಾವರ್ಣನ್(28) ಬಂಧಿತ ಆರೋಪಿ. 2024ರ ಮಾರ್ಚ್ 24ರಂದು ಕಾಸರಗೋಡಿನ ಉಪ್ಪಳದಲ್ಲಿ ಈ ದರೋಡೆ ನಡೆದಿತ್ತು. ಎಟಿಎಂಗೆ ಹಣ ತುಂಬಿಸಲು ಆಗಮಿಸಿದ ವಾಹನದಲ್ಲಿದ್ದ 50 ಲಕ್ಷ ರೂ. ಹಣವನ್ನು ದರೋಡೆ ಮಾಡಲಾಗಿತ್ತು. ಮಾಹಿತಿ ತಿಳಿದು ಆಗಮಿಸಿದ ಪೊಲೀಸರು ಸಿ.ಸಿ.ಕ್ಯಾಮರಾ ಪರಿಶೀಲಿಸಿದಾಗ ಆರೋಪಿಗಳ ಬಗ್ಗೆ ಸುಳಿವು ಲಭಿಸಿತ್ತು. ಈ ಹಿನ್ನೆಲೆಯಲ್ಲಿ ಓರ್ವ ಆರೋಪಿ ಮುತ್ತು ಕುಮಾರ್ ಎಂಬಾತನ್ನು ಘಟನೆ ನಡೆದ ಒಂದು ತಿಂಗಳ ಬಳಿಕ ಬಂಧಿಸಲಾಗಿತ್ತು. ಆದರೆ ದರೋಡೆಯ ಸೂತ್ರಧಾರ ಕಾವರ್ಣನ್ ಹಾಗೂ ಇನ್ನೋರ್ವ ಆರೋಪಿ ಪರಾರಿಯಾಗಿದ್ದರು. ಇವರ ಬಂಧನಕ್ಕಾಗಿ ಪೊಲೀಸರು ತನಿಖೆ ಚುರುಕುಗೊಳಿಸಿದ್ದರು. ಇದಲ್ಲಿ ಕಾವರ್ಣನ್ ತಿರುಚ್ಚಿಯಲ್ಲಿರುವ ಬಗ್ಗೆ ಲಭಿಸಿದ ಖಚಿತ ಮಾಹಿತಿಯಂತೆ ಕಾರ್ಯಾಚರಣೆ ನಡೆಸಿದ ಪೊಲೀಸರು ಆತನನ್ನು ಇದೀಗ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
Author: main-admin
ಉಡುಪಿ: ಅಂಬಲಪಾಡಿ ಜಂಕ್ಷನ್ ನಲ್ಲಿ ರಾ.ಹೆ. ಮೇಲ್ಸೇತುವೆ ಕಾಮಗಾರಿಗೆ ಅಗೆದಿರುವ ಬೃಹತ್ ಹೊಂಡಕ್ಕೆ ಕಾರೊಂದು ಮಗುಚಿಬಿದ್ದ ಘಟನೆ ಇಂದು ಮುಂಜಾನೆ 3ಗಂಟೆಗೆ ಸಂಭವಿಸಿದೆ. ಅದೃಷ್ಟವಶಾತ್ ಕಾರಿನಲ್ಲಿದ್ದ ಪ್ರಯಾಣಿಕರು ಸಣ್ಣಪುಟ್ಟ ಗಾಯದೊಂದಿಗೆ ಅಪಾಯದಿಂದ ಪಾರಾಗಿದ್ದಾರೆ. ಕೇರಳ ನೋಂದಣಿ ಸಂಖ್ಯೆ ಹೊಂದಿರುವ ಕಾರಿನಲ್ಲಿ ಐದು ಮಂದಿ ಪ್ರಯಾಣಿಕರು ಕೊಲ್ಲೂರಿಗೆ ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ. ರಾಷ್ಟ್ರೀಯ ಹೆದ್ದಾರಿ 66ರ ಅಂಬಲಪಾಡಿ ಜಂಕ್ಷನ್ ನಲ್ಲಿ ಮೇಲ್ಸೇತುವೆಯ ಫಿಲ್ಲರ್ ನಿರ್ಮಿಸಲು ಬಹೃತ್ ಹೊಂಡ ಅಗೆಯಲಾಗಿದ್ದು, ಚಾಲಕನ ನಿಯಂತ್ರಣ ತಪ್ಪಿದ ಕಾರು ಈ ಹೊಂಡಕ್ಕೆ ಮಗುಚಿಬಿದ್ದಿದೆ
ಮಂಗಳೂರು: ಹೊಸ ವರ್ಷದ ನೆಪದಲ್ಲಿ ಯುವ ಜನತೆಯನ್ನು ಗುರಿಯಾಗಿಸಿ ನಡೆಸುವ ಎಲ್ಲ ಕಾರ್ಯಕ್ರಮಗಳನ್ನು ಪೊಲೀಸ್ ಇಲಾಖೆ ನಿರ್ಬಂಧಿಸಬೇಕು ಎಂದು ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳ ಪೊಲೀಸ್ ಇಲಾಖೆಗೆ ಮನವಿ ಮಾಡಿವೆ. ಹಲವಾರು ವರ್ಷದಿಂದ ಡ್ರಗ್ಸ್ ಮಾಫಿಯಾ ಕರಾವಳಿ ಭಾಗದಲ್ಲಿ ವ್ಯಾಪಕವಾಗಿದ್ದು, ಪಾರ್ಟಿಗಳಿಗೆ ಪೂರೈಕೆಯಾಗುತ್ತಿದೆ. ಸಾಕಷ್ಟು ಯುವಕ ಯುವತಿಯರ ಜೀವನ ಹಾಳಾಗಿದೆ. ಜಿಲ್ಲಾಡಳಿತ, ಪೊಲೀಸ್ ಇಲಾಖೆ ಮತ್ತು ಸರಕಾರದ ಗಮನಕ್ಕೆ ಸಾಕಷ್ಟು ಬಾರಿ ಇದನ್ನು ತರಲಾಗಿದೆ. ಮಂಗಳೂರಿನಲ್ಲಿ ಲಕ್ಷಾಂತರ ರೂಪಾಯಿ ವಹಿವಾಟು ನಡೆಯುತ್ತಿದ್ದು, ಇದರ ಹಿಂದೆ ದೊಡ್ಡ ಜಾಲವೇ ಇದೆ. ಕೇರಳ-ಗೋವಾ ಸಹಿತ ವಿವಿಧ ರಾಜ್ಯಗಳಿಂದ ಮಾದಕ ಪದಾರ್ಥ ಬರುತ್ತಿರುವುದು ಆತಂಕಕಾರಿ ವಿಚಾರ. ಈ ಸಂದರ್ಭ ನಡೆಯುವ ಪಾರ್ಟಿಗಳಲ್ಲಿ ಡ್ರಗ್ಸ್ ಮಾತ್ರವಲ್ಲದೆ ಕೇರಳದಿಂದ ಯುವಕರು ಬಂದು ಯುವತಿಯರ ಬಾಳು ಹಾಳು ಮಾಡುವ ಕೆಲಸವನ್ನೂ ಮಾಡುತ್ತಾರೆ. ಕಾನೂನಿಗೆ ವಿರುದ್ಧವಾಗಿ ಸಾರ್ವಜನಿಕ ಸ್ಥಳಗಳಲ್ಲಿ ಹೊಸ ವರ್ಷದ ಪಾರ್ಟಿಗೆ ಪೊಲೀಸ್ ಆಯುಕ್ತರು ಅವಕಾಶ ಕೊಡಬಾರದು ಎಂದು ವಿಹಿಂಪ ದಕ್ಷಿಣ ಪ್ರಾಂತ ಸಹ ಕಾರ್ಯದರ್ಶಿ ಶರಣ್ ಪಂಪ್‌ವೆಲ್…
ಮಂಗಳೂರು: ರಾತ್ರಿ ಮಲಗಿದ್ದ ವೇಳೆ ಸಿಲಿಂಡರ್ ಸ್ಪೋಟಗೊಂಡು ಗಂಭೀರವಾಗಿ ಗಾಯಗೊಂಡು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ಗುರುವಾರ ಮೃತಪಟ್ಟಿದ್ದಾಳೆ. ಮಹದಿಯಾ ಮೃತಪಟ್ಟ ಬಾಲಕಿ. ಡಿಸೆಂಬರ್ 7ರಂದು ರಾತ್ರಿ ಮಂಜನಾಡಿಯ ಖಂಡಿಗದ ತಮ್ಮ ಮನೆಯಲ್ಲಿ ತಾಯಿ ಕುಬ್ರಾ ಮತ್ತು ಮೂವರು ಹೆಣ್ಮಕ್ಕಳಾದ ಮಕ್ಕಳಾದ ಮಹದಿಯಾ,ಮಝಿಯಾ, ಮಾಯಿಝ ಮಲಗಿದ್ದರು. ತಡರಾತ್ರಿ ಗ್ಯಾಸ್ ಸಿಲಿಂಡರ್ ಸ್ಪೋಟಗೊಂಡಿದ್ದು, ನಾಲ್ವರೂ ಗಂಭೀರವಾಗಿ ಗಾಯಗೊಂಡಿದ್ದರು. ತಕ್ಷಣ ಎಲ್ಲರನ್ನೂ ದೇರಳಕಟ್ಟೆಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ಪೈಕಿ ತಾಯಿ ಖುಬ್ರಾ ಚಿಕಿತ್ಸೆ ಫಲಿಸದೇ ಡಿಸೆಂಬರ್ 12ರಂದು ಮೃತಪಟ್ಟಿದ್ದರು. ಮಕ್ಕಳಾದ ಮಹದಿಯಾ, ಮಝಿಯಾ, ಮಾಯಿಝಗೆ ಐಸಿಯುನಲ್ಲಿ ಚಿಕಿತ್ಸೆ ಮುಂದುವರಿಸಲಾಗಿತ್ತು. ಆದರೆ ಈ ಪೈಕಿ ಮಹದಿಯಾ ಗುರುವಾರ ಮೃತಪಟ್ಟಿದ್ದಾರೆ. ಮಂಜನಾಡಿಯ ಖಂಡಿಗ ನಿವಾಸಿ ಮುತ್ತಲಿಬ್ ವಿದೇಶದಲ್ಲಿದ್ದರು. ಮುತ್ತಲಿಬ್ ಪತ್ನಿ ಖುಬ್ರಾ ಮತ್ತು ಮೂವರು ಮಕ್ಕಳು ಮನೆಯಲ್ಲಿ ಒಂದೇ ಕೋಣೆಯಲ್ಲಿ ಮಲಗಿದ್ದರು. ಮಧ್ಯರಾತ್ರಿ ಮನೆಯೊಳಗಡೆ ಭಾರೀ ಸ್ಪೋಟಗೊಂಡಿದೆ. ಸ್ಫೋಟದ ತೀವ್ರತೆಗೆ ಆರ್‌ಸಿಸಿ ಮನೆಯ ಮೇಲ್ಭಾಗದಲ್ಲಿನ ಸಿಮೆಂಟ್ ಶೀಟ್ ಮೇಲ್ಛಾವಣಿ ಸಂಪೂರ್ಣ ಹಾರಿ ಹೋಗಿತ್ತು. ತಾಯಿ…
ಮಾಜಿ ಪ್ರಧಾನಿ ಡಾ.ಮನಮೋಹನ್ ನಿಧನ ಹಿನ್ನಲೆ : ಡಿ.27 ( ಇಂದು) ಶಾಲಾ ಕಾಲೇಜುಗಳಿಗೆ ರಜೆ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ (92) ಅವರು ಡಿ.26 ರಂದು ವಯೋಸಹಜ ಕಾಯಿಲೆಯಿಂದ ಕೊನೆಯುಸಿರೆಳೆದರು. ಈ ಹಿನ್ನೆಲೆಯಲ್ಲಿ ಇಂದು ಕರ್ನಾಟಕ ರಾಜ್ಯಾದ್ಯಂತೆ ಸರ್ಕಾರಿ ರಜೆ ಘೋಷಣೆ ಮಾಡಲಾಗಿದೆ. ಇಂದು ರಾಜ್ಯದ ಎಲ್ಲಾ ಶಾಲಾ- ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಮನಮೋಹನ ಸಿಂಗ್ ಅವರ ನಿಧನದ ಗೌರವಾರ್ಥ ರಾಜ್ಯದಲ್ಲಿ 7 ದಿನಗಳ ಶೋಕಾಚರಣೆ ಘೋಷಿಸಲಾಗಿದೆ. ಜೊತೆಗೆ ಡಿ.27ರಂದು ಸರ್ಕಾರಿ ರಜೆ ಘೋಷಿಸಲಾಗಿದೆ. ಎಲ್ಲಾ ಸರ್ಕಾರಿ ಕಾರ್ಯಕ್ರಮಗಳನ್ನು ಈಗಾಗಲೇ ಒಂದು ವಾರಗಳ ಕಾಲ ರದ್ದು ಮಾಡುವುದಾಗಿ ಡಿಸಿಎಂ ಡಿ ಕೆ ಶಿವಕುಮಾರ್ ಅವರು ತಿಳಿಸಿದ್ದಾರೆ.
ಮಂಗಳೂರು: ಕ್ಯಾಪ್ಟನ್ ಬೃಜೇಶ್ ಚೌಟ ಸಾರಥ್ಯದಲ್ಲಿ 8ನೇ ವರ್ಷದ ಮಂಗಳೂರು ಕಂಬಳ ಡಿಸೆಂಬರ್ 28 ರಂದು ಬಂಗ್ರಕೂಳೂರಿನ ಗೋಲ್ಡ್ ಫಿಂಚ್ ಸಿಟಿಯ ರಾಮ ಲಕ್ಷ್ಮಣ ಜೋಡು ಕರೆಯಲ್ಲಿ ನಡೆಯಲಿದೆ. ಕ್ಯಾಪ್ಟನ್ ಬೃಜೇಶ್ ಚೌಟ ಸಾರಥ್ಯದಲ್ಲಿ 8ನೇ ವರ್ಷದ ಮಂಗಳೂರು ಕಂಬಳ ಡಿಸೆಂಬರ್ 28 ರಂದು ಬಂಗ್ರಕೂಳೂರಿನ ಗೋಲ್ಡ್ ಫಿಂಚ್ ಸಿಟಿಯ ರಾಮ ಲಕ್ಷ್ಮಣ ಜೋಡು ಕರೆಯಲ್ಲಿ ನಡೆಯಲಿದೆ. ಕಳೆದ 7 ವರ್ಷಗಳಿಂದ ಯಶಸ್ವಿಯಾಗಿ ನಡೆದುಕೊಂಡು ಬರುತ್ತಿರುವ ಮಂಗಳೂರು ಕಂಬಳಕ್ಕೆ ಉತ್ತಮ ಜನಮನ್ನಣೆ ಸಿಗುತಿದ್ದು, ಇದು ಕರಾವಳಿಯ ಪ್ರವಾಸೋಧ್ಯಮಕ್ಕೆ ಮೈಲುಗಲ್ಲಾಗಲಿದೆ. ಕಂಬಳವನ್ನು ಮುಂದಿನ ತಲೆಮಾರುಗಳಿಗೆ ಉಳಿಸುವ ಉದ್ದೇಶದಿಂದ ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯೋನ್ಮುಖರಾಗುವಂತೆ ಹಾಗೂ ಕಂಬಳಕ್ಕೆ ಮೆರುಗನ್ನು ನೀಡುವ ದೃಷ್ಟಿಯಿಂದ ಕರಾವಳಿಯ ಸಂಸ್ಕೃತಿಯನ್ನು ಸಾರುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು.
ದಾವಣಗೆರೆ: ಜಿಲ್ಲೆಯ ನ್ಯಾಮತಿ ತಾಲೂಕಿನ ಫಲವನಹಳ್ಳಿ ಅರಣ್ಯ ವಲಯದಲ್ಲಿ 32 ನಾಡಬಾಂಬ್‍ಗಳು ಪತ್ತೆಯಾಗಿವೆ. ಉಪವಲಯ ಅರಣ್ಯಾಧಿಕಾರಿ ಬರ್ಕತ್ ಅಲಿಯವರು ಗಸ್ತು ತಿರುಗುವ ವೇಳೆ ನಾಡ ಬಾಂಬ್‍ಗಳು ಪತ್ತೆಯಾಗಿವೆ. ನಾಡಬಾಂಬ್‍ಗಳನ್ನು ಕಾಡು ಪ್ರಾಣಿಗಳನ್ನು ಬೇಟೆಯಾಡಲು ಇರಿಸಲಾಗಿತ್ತು. ಸಿಬ್ಬಂದಿ ಗಸ್ತು ತಿರುಗುತ್ತಾ ಆ ಸ್ಥಳಕ್ಕೆ ತೆರಳುತ್ತಿದ್ದಂತೆ 4 ಜನ ಆರೋಪಿಗಳು ಬೈಕ್‍ಗಳನ್ನು ಬಿಟ್ಟು ಪರಾರಿಯಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 2 ಬೈಕ್ ಹಾಗೂ 32 ನಾಡಬಾಂಬ್‍ಗಳನ್ನು ಅರಣ್ಯ ಇಲಾಖೆಯ ಅಧಿಕಾರಿಗಳು ನ್ಯಾಮತಿ ಪೊಲೀಸರಿಗೆ ಒಪ್ಪಿಸಿದ್ದಾರೆ. ನ್ಯಾಮತಿ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ. ಆರೋಪಿಗಳ ಬಂಧನಕ್ಕೆ ಪೊಲೀಸರು ಬಲೆ ಬಿಸಿದ್ದಾರೆ.
ಮಂಗಳೂರು: ಮಾದಕ ವಸ್ತುವಾದ ಗಾಂಜಾ ಸೇವನೆ ಮಾಡಿದ ಆರೋಪದಲ್ಲಿ ಮಂಗಳೂರು ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ರಾಷ್ಟ್ರೀಯ ಹೆದ್ದಾರಿ-66ರ ಗೋರಿಗುಡ್ಡೆ ಸರ್ವೀಸ್ ರಸ್ತೆ ಬದಿ ಮಾದಕ ವಸ್ತು ಸೇವನೆ ಮಾಡಿ ಸಾರ್ವಜನಿಕರಿಗೆ ತೊಂದರೆ ನೀಡುತ್ತಿದ್ದ ಅಬ್ದುಲ್ ಅಝದ್(21)ನನ್ನು ಕಂಕನಾಡಿ ನಗರ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಸುಲ್ತಾನ್ ಬತ್ತೇರಿ ಬಳಿ ಡ್ರಗ್ಸ್ ಸೇವನೆ ಮಾಡಿದ್ದ ವಾಮಂಜೂರು ತಿರುವೈಲ್‌ನ ಸಚಿನ್(29)ನನ್ನು ಬರ್ಕೆ ಪೊಲೀಸರು ಬಂಧಿಸಿದ್ದಾರೆ.
ಉಪ್ಪಿನಂಗಡಿ: ಕ್ರಿಸ್ಮಸ್ ಪೂಜೆಗೆ ಹೋಗಿದ್ದ ವೇಳೆ ಮನೆಗೆ ನುಗ್ಗಿ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಕಳ್ಳತನ ಮಾಡಿರುವ ಘಟನೆ ಶಿರಾಡಿ ಗ್ರಾಮದ ಅಡ್ಡಹೊಳೆ ಎಂಬಲ್ಲಿ ನಡೆದಿದೆ. ಇಲ್ಲಿನ ತಂಗಚ್ಚನ್ ಎಂಬವರ ಮನೆಗೆ ನುಗ್ಗಿದ ಕಳ್ಳರು 2.46 ಲಕ್ಷ ರೂ. ಮೌಲ್ಯದ ಚಿನ್ನ ಮತ್ತು ನಗದನ್ನು ಕದ್ದಿದ್ದಾರೆ. ಮನೆ ಮಂದಿ ಸಮೀಪದ ಚರ್ಚ್‌ನಲ್ಲಿ ನಡೆದ ಕ್ರಿಸ್ಮಸ್ ಪೂಜೆಗೆ ಹೋಗಿದ್ದ ವೇಳೆ ಮುಂಭಾಗದ ಬಾಗಿಲ ಚಿಲಕ ಮುರಿದು ಒಳ ನುಗ್ಗಿದ ಕಳ್ಳರು ಮನೆಯ ಕಪಾಟಿನಲ್ಲಿದ್ದ 78 ಸಾವಿರ ರೂ. ನಗದು ಸಹಿತ 42 ಗ್ರಾಮ್ ತೂಕದ ವಿವಿಧ ಚಿನ್ನದ ಆಭರಣಗಳನ್ನು ಕದ್ದಿದ್ದಾರೆ. ಈ ಬಗ್ಗೆ ಉಪ್ಪಿನಂಗಡಿ ಠಾಣೆಗೆ ದೂರು ನೀಡಲಾಗಿದೆ.
ಕಾಸರಗೋಡು: ಕಾಡುಹಂದಿಯೊಂದು ಸೂಪರ್ ಮಾರ್ಕೆಟ್‌ಗೆ ನುಗ್ಗಿದ ಘಟನೆ ಗಡಿಭಾಗದ ಕಾಸರಗೋಡು ಜಿಲ್ಲೆಯ ಕುಂಬಳೆಯಲ್ಲಿ ಮಂಗಳವಾರ ರಾತ್ರಿ ನಡೆದಿದೆ. ಕುಂಬಳೆ ಪೇಟೆಯಲ್ಲಿರುವ ಸೂಪರ್ ಪಾಯಿಂಟ್ ಹೈಪರ್ ಮಾರ್ಕೆಟ್ ನೊಳಗೆ ಮಂಗಳವಾರ ರಾತ್ರಿ 9 ಗಂಟೆಯ ವೇಳೆ ಕಾಡು ಹಂದಿ ಸೂಪರ್ ಮಾರ್ಕೆಟ್‌ಗೆ ನುಗ್ಗಿದೆ. ಈ ವೇಳೆ ಬೆರಳೆಣಿಕೆಯ ಗ್ರಾಹಕರು ಹಾಗೂ ಸಿಬ್ಬಂದಿ ಮಾತ್ರ ಎನ್ನಲಾಗಿದೆ. ಅನಿರೀಕ್ಷಿತವಾಗಿ ಒಳಗೆ ಬಂದ ಹಂದಿಯನ್ನು ಕಂಡು ಗಲಿಬಿಲಿಗೊಂಡ ಸಿಬ್ಬಂದಿ ಹಾಗೂ ಇತರರು ಬೊಬ್ಬೆ ಹಾಕುವಷ್ಟರಲ್ಲಿ ಹಂದಿ ಹೊರಕ್ಕೆ ಓಡಿ ಹೋಗಿದೆ. ಬಳಿಕ ಹಂದಿ ಶಾಲಾ ರಸ್ತೆಯತ್ತ ಪರಾರಿಯಾಗಿದೆ ಎನ್ನಲಾಗಿದೆ.










