ವಿಟ್ಲ: ಯುವಕನೊಬ್ಬನನ್ನು ಕಾರಿನಲ್ಲಿ ಅಪಹರಿಸಿ, ಕೊಠಡಿಯಲ್ಲಿ ಕೂಡಿಹಾಕಿ ಅಪ್ರಾಪ್ತ ಬಾಲಕನೊಂದಿಗೆ ಬೆತ್ತಲೆಯಾಗಿ ನಿಲ್ಲಿಸಿ ವೀಡಿಯೋ ಚಿತ್ರೀಕರಿಸಿ, ಪೋಕ್ಸೋ ಕೇಸ್ ಹಾಕುವುದಾಗಿ ಬೆದರಿಕೆಯೊಡ್ಡಿ 1.02 ಲಕ್ಷ ರೂಪಾಯಿ ಸುಲಿಗೆ ಮಾಡಿರುವ ಭೀಕರ ಘಟನೆ ಬೆಳಕಿಗೆ ಬಂದಿದೆ. ಈ ಸಂಬಂಧ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ವಿಟ್ಲ ಸಮೀಪದ ಸೇರಾಜೆ ನಿವಾಸಿ ಎ.ಎಸ್. ಸುಜೀತ್ ನೀಡಿದ ದೂರಿನ ಆಧಾರದಲ್ಲಿ ಕಾಸರಗೋಡಿನ ಬದಿಯಡ್ಕ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ದೂರಿನಲ್ಲಿ ಉಲ್ಲೇಖಿಸಲಾದ ವಿವರಗಳ ಪ್ರಕಾರ, ಆಗಸ್ಟ್ 29ರಂದು ಸಂಜೆ ಸುಮಾರು 6 ಗಂಟೆಗೆ ವೇಲ್ಸ್ ಸಮೀಪದ ಉಕ್ಕಿನಡ್ಕದಲ್ಲಿ ಈ ಘಟನೆ ನಡೆದಿದೆ. ಉಕ್ಕಿನಡ್ಕದಲ್ಲಿದ್ದ ಸುಜೀತ್ ಅವರನ್ನು ತಡೆದ ಆರೋಪಿಗಳ ತಂಡವು ಮರದ ದೊಣ್ಣೆ ಹಾಗೂ ಕತ್ತಿ ತೋರಿಸಿ ಬೆದರಿಕೆ ಹಾಕಿದೆ. ಬಳಿಕ ಅವರನ್ನು ಬಲವಂತವಾಗಿ ಕಾರಿನಲ್ಲಿ ಕರೆದೊಯ್ದು ಜೇಕಳ ಸಮೀಪದ ಕ್ವಾರ್ಟರ್ಸ್‌ಗೆ ತಲುಪಿಸಲಾಗಿದೆ. ಕ್ವಾರ್ಟರ್ಸ್‌ನ ಕೊಠಡಿಯಲ್ಲಿ ಸುಜೀತ್ ಅವರನ್ನು ಕೂಡಿಹಾಕಿ ಬಟ್ಟೆ ಬಿಚ್ಚಿಸಿ ಬೆದರಿಕೆ ಒಡ್ಡಲಾಗಿದೆ. ನಂತರ ಕೊಠಡಿಯಲ್ಲಿದ್ದ ಅಪ್ರಾಪ್ತ ಬಾಲಕನೊಂದಿಗೆ ನಿಲ್ಲಿಸಿ…
Author: main-admin
ಮೂಡುಬಿದಿರೆಯ ಖಾಸಗಿ ಕಾಲೇಜೊಂದರ ವಿದ್ಯಾರ್ಥಿಗಳ ಮೇಲೆ ಅನೈತಿಕ ಪೊಲೀಸ್ ಗಿರಿ ನಡೆಸಿದ ಆರೋಪದಲ್ಲಿ ಓರ್ವ ಕಾಂಗ್ರೆಸ್ ಮುಖಂಡ ಸೇರಿ ಮೂವರ ಮೇಲೆ ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಾಂಗ್ರೆಸ್ ಸಾಮಾಜಿಕ ಜಾಲತಾಣ ನಿರ್ವಹಿಸುವ ಮತ್ತು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಿಥುನ್ ರೈ ಆಪ್ತ ರಿತಿಲ್ ಪೂಜಾರಿ, ಸಂಘ ಪರಿವಾರದ ಕಾರ್ಯಕರ್ತರಾದ ಪ್ರೇಮ್ ಭಂಡಾರಿ, ಬಜರಂಗದಳ ಮಾಜಿ ಸಂಚಾಲಕ ಸಂಜಯ್ ಹೆಗ್ಡೆ ಎಂಬವರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಮೂಡುಬಿದಿರೆಯ ಖಾಸಗಿ ಕಾಲೇಜಿನ ಇಬ್ಬರು ವಿದ್ಯಾರ್ಥಿನಿಯರು ಹಾಗೂ ಇಬ್ಬರು ವಿದ್ಯಾರ್ಥಿಗಳು ಮೂಡುಬಿದಿರೆ ಬಸ್ ನಿಲ್ದಾಣದ ಬಳಿಯ ಕೆಫೆಯೊಂದಕ್ಕೆ ಉಪಾಹಾರ ಸೇವಿಸಲು ತೆರಳಿದ್ದರು. ಈ ವೇಳೆ ಆರೋಪಿಗಳು ಕೆಫೆಗೆ ಅಕ್ರಮವಾಗಿ ನುಗ್ಗಿ ವಿದ್ಯಾರ್ಥಿಗಳ ಹೆಸರು ಕೇಳಿ ಅವಾಚ್ಯವಾಗಿ ನಿಂದಿಸಿ, ಬೆದರಿಕೆ ಹಾಕಿದ್ದಾರೆ ಎಂದು ದೂರಲಾಗಿದೆ. ಆರೋಪಿಗಳ ಬೆದರಿಕೆಯಿಂದ ಹೆದರಿದ ವಿದ್ಯಾರ್ಥಿಗಳು ದೂರು ನೀಡಲು ನಿರಾಕರಿಸಿದ್ದರು. ಆದರೆ ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಮೂಡುಬಿದಿರೆ ಪೊಲೀಸ್ ಠಾಣೆಯ ಪಿಎಸ್ಸೈ ಪ್ರತಿಭಾ…
ಸುಳ್ಯ: ಶ್ರೀರಾಮ್ ಫೈನಾನ್ಸ್ ಸಂಸ್ಥೆಯಿಂದ 10 ಲಕ್ಷ ರೂ. ಸಾಲ ಪಡೆದು ಟೆಲ್ಕಾನ್ ಇ ಎಕ್ಸ್ 70 ಮೆಷಿನ್ ವಾಹನ ಖರೀದಿಸಿ, ಸಾಲದ ಕಂತು ಪಾವತಿಸದೆ ವಂಚನೆ ಮಾಡಿದ ಪ್ರಕರಣದಲ್ಲಿ 14 ವರ್ಷದಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಸುಳ್ಯದ ಜಾಲ್ಸೂರು ಗ್ರಾಮದ ನಿವಾಸಿ ಶ್ರೀನಿವಾಸ ಬಿ.ಆರ್ (48) ಎಂದು ಗುರುತಿಸಲಾಗಿದೆ. ಆರೋಪಿಯು 2009ರ ಮೇ ತಿಂಗಳಲ್ಲಿ ಶ್ರೀರಾಮ್ ಫೈನಾನ್ಸ್ ಸಂಸ್ಥೆಯ ಷರತ್ತುಗಳಿಗೆ ಒಪ್ಪಿ ವಾಹನ ಖರೀದಿಗೆ 10 ಲಕ್ಷ ರೂ. ಸಾಲ ಪಡೆದು, ಬಳಿಕ ಕಂತು ಪಾವತಿಸದೆ, ತಪಾಸಣೆಗೆ ವಾಹನ ಹಾಜರುಪಡಿಸದೆ ವಂಚನೆ ಮಾಡಿದ್ದಾನೆ ಎಂಬ ಆರೋಪದ ಮೇಲೆ 2012 ರಲ್ಲಿ ಮೂಡಬಿದ್ರೆ ಠಾಣೆಯಲ್ಲಿ ಅ.ಕ್ರ. 59/2012, ಕಲಂ 406, 420, 421 ಜೊತೆಗೆ 34 ಐಪಿಸಿ ರಂತೆ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದಲ್ಲಿ ಸಿಸಿ ನಂಬರ್ 526/2025 ರಲ್ಲಿ ನ್ಯಾಯಾಲಯ ಜಾಮೀನು ರಹಿತ ವಾರಂಟ್ ಹೊರಡಿಸಿದ್ದು, ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಉತ್ತರ ಉಪವಿಭಾಗದ ಅಪರಾಧ ಪತ್ತೆ ತಂಡವು…
ಬೆಳ್ತಂಗಡಿ: ತಾಲೂಕಿನಲ್ಲಿ 14 ವರ್ಷದ 9ನೇ ತರಗತಿ ವಿದ್ಯಾರ್ಥಿ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸಂಭವಿಸಿದೆ. ಮೃತ ಬಾಲಕ ಶ್ರವಣ್ ಬಿ.ಕೆ ಎಂದು ತಿಳಿಯಲಾಗಿದೆ.ಈತ ಬೆಳ್ತಂಗಡಿ ನಗರದ ಹಳೆಕೋಟೆಯ ವಾಣಿ ಹೈಸ್ಕೂಲ್‌ನ 9ನೇ ತರಗತಿ ವಿದ್ಯಾರ್ಥಿಯಾಗಿದ್ದನು. ಶ್ರವಣ್ ಆ.29 ಶನಿವಾರ ಸಂಜೆ ತನ್ನ ಹುಟ್ಟುಹಬ್ಬವನ್ನು ಮನೆಯಲ್ಲಿ ಆಚರಿಸಿಕೊಂಡಿದ್ದ. ಆದರೆ ಆ.30 ಭಾನುವಾರ ಬೆಳಗ್ಗೆ ಮನೆಯ ಮೇಲ್ಛಾವಣಿಗೆ ವೇಲ್ ನಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಘಟನಾ ಸ್ಥಳದಲ್ಲಿ ಬಾಲಕ ಡೆತ್ ನೋಟ್ ಬರೆದಿಟ್ಟಿದ್ದು ಪತ್ತೆಯಾಗಿದೆ. ಪರೀಕ್ಷೆಯಲ್ಲಿ ಕಡಿಮೆ ಅಂಕ ಬಂದ ಬೇಜಾರಿನಿಂದ ಈ ನಿರ್ಧಾರ ತೆಗೆದುಕೊಂಡಿರುವ ಶಂಕೆ ವ್ಯಕ್ತವಾಗಿದೆ. ತಂದೆ ಭರತ್ ಗೌಡ ತಾಯಿ ಮತ್ತು ಓರ್ವ ಸಹೋದರಿಯನ್ನು ಶ್ರವಣ್ ಅಗಲಿದ್ದಾನೆ. ಈ ಸಂಬಂಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಆತ್ಮಹತ್ಯೆ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ಉಪ್ಪಿನಂಗಡಿ: ಪೆರ್ನೆ ಸಮೀಪ ಮಹಿಳೆಯೊಬ್ಬರು ಮನೆಯೊಳಗೆ ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟಿರುವ ಘಟನೆ ಆತಂಕಕ್ಕೆ ಕಾರಣವಾಗಿದೆ.ಮಹಿಳೆಯ ಮೃತದೇಹ ಮನೆಯೊಳಗೆ ನೇಣು ಬಿಗಿದು ಅರ್ದ ಕಾಲು ನೆಲದ ಮೇಲೆ ಬಿದ್ದ ಸ್ಥಿತಿಯಲ್ಲಿ ಪತ್ತೆಯಾಗಿದ್ದು ಸಾವಿನ ಸುತ್ತ ಹಲವು ಅನುಮಾನಗಳು ಮೂಡಿವೆ.ಇದು ಆತ್ಮಹತ್ಯೆಯೇ ಅಥವಾ ಕೊಲೆಯೇ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ.ಮೃತ ಮಹಿಳೆಯನ್ನು ಸೇವಾ ಯೋಜನೆಯಲ್ಲಿ ಕೆಲಸ ಮಾಡುತ್ತಿದ್ದ ಕಾವ್ಯ ಎಂದು ಗುರುತಿಸಲಾಗಿದೆ. ಹೆಚ್ಚಿನ ಮಾಹಿತಿ ತಿಳಿದು ಬಂದಿಲ್ಲ. ಮೃತರಿಗೆ ಇಬ್ಬರು ಮಕ್ಕಳಿದ್ದು ಇತ್ತೀಚೆಗೆ ಹೆಣ್ಣು ಮಗಳ ಮದುವೆ ನೆರವೇರಿಸಿದ್ದರು. ಇನ್ನೋರ್ವ ಗಂಡು ಮಗ ಮತ್ತು ಕುಟುಂಬಸ್ಥರನ್ನು ಅಗಲಿದ್ದಾರೆ. ಘಟನಾ ಸ್ಥಳಕ್ಕೆ ಉಪ್ಪಿನಂಗಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಸಾವಿನ ನಿಖರ ಕಾರಣ ತಿಳಿಯಲು ತನಿಖೆ ಕೈಗೊಂಡಿದ್ದಾರೆ. ಮರಣೋತ್ತರ ಪರೀಕ್ಷೆಯ ವರದಿ ಹಾಗೂ ಪೊಲೀಸ್ ತನಿಖೆಯ ಬಳಿಕವಷ್ಟೇ
ಮಂಗಳೂರು: ಬಂಟ್ವಾಳ ತಾಲೂಕಿನ ಪೆರುವಾಯಿ ಗ್ರಾಮದ ಯತೀಶ್ ಎ. ವಿರುದ್ಧ ಕರ್ನಾಟಕ ಪೊಲೀಸ್ ಕಾಯ್ದೆಯ ಕಲಂ 55(ಎ), 55(ಬಿ) ಅಡಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಿಂದ ಹೊರ ಜಿಲ್ಲೆಗೆ ಗಡಿಪಾರು ಮಾಡುವಂತೆ ವಿಟ್ಲ ಪೊಲೀಸ್ ಠಾಣಾಧಿಕಾರಿ ಸಲ್ಲಿಸಿದ್ದ ಪ್ರಸ್ತಾವನೆಯನ್ನು ಸದ್ಯಕ್ಕೆ ಕೈಬಿಟ್ಟು ವಿಶೇಷ ಕಾರ್ಯನಿರ್ವಾಹಕ ದಂಡಾಧಿಕಾರಿ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ. ಅರುಣ್ ಕೆ. ಐಪಿಎಸ್ ಆದೇಶ ಹೊರಡಿಸಿದ್ದಾರೆ. ಯತೀಶ್ ಪೆರುವಾಯಿ ವಿರುದ್ಧ ಕೆಲವು ತಿಂಗಳ ಹಿಂದೆ ಗಡಿಪಾರು ಶೋಕಾಸ್ ನೋಟೀಸ್ ಜಾರಿಯಾಗಿದ್ದು ಈ ಸಂಬಂಧ 2026ರ ಜುಲೈ 15ರಂದು ವಿಶೇಷ ಕಾರ್ಯನಿರ್ವಾಹಕ ದಂಡಾಧಿಕಾರಿ ಹಾಗೂ ಪೊಲೀಸ್ ಅಧೀಕ್ಷಕರ ನ್ಯಾಯಾಲಯದಲ್ಲಿ ವಿಚಾರಣೆ ನಿಗದಿಯಾಗಿತ್ತು. ಈ ಸಂದರ್ಭದಲ್ಲಿ ಯತೀಶ್ ಪೆರುವಾಯಿ ಅವರು ಸ್ವತಃ ನ್ಯಾಯಾಲಯಕ್ಕೆ ಹಾಜರಾಗಿ,ಯಾವುದೇ ವಕೀಲರನ್ನು ನೇಮಿಸಿಕೊಳ್ಳದೆ (Party-in-Person) ಆಗಿ ತಮ್ಮ ಪರವಾಗಿ ತಾವೇ ಆಕ್ಷೇಪಣೆ ಸಲ್ಲಿಸಿ ವಾದ ಮಂಡಿಸಲು ಅನುಮತಿ ಕೋರಿ ಮನವಿ ಸಲ್ಲಿಸಿದ್ದರು.ಸದರಿ ಮನವಿಯನ್ನು ಪರಿಗಣಿಸಿದ ಮಾನ್ಯ ನ್ಯಾಯಾಲಯವು, ಅವರಿಗೆ Party-in-Person ಆಗಿ ತಮ್ಮ ಪರವಾಗಿ…
ಮಂಗಳೂರು: ಸಾರ್ವಜನಿಕ ಶಾಂತಿ, ಸೌಹಾರ್ದತೆ ಹಾಗೂ ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗುವ ರೀತಿಯಲ್ಲಿ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ಆರೋಪದ ಹಿನ್ನೆಲೆಯಲ್ಲಿ ರಾಜೇಶ್ ನಾಯಕ್ (32) ಅವರನ್ನು ದಕ್ಷಿಣ ಕನ್ನಡ ಜಿಲ್ಲೆಯಿಂದ ಆರು ತಿಂಗಳ ಅವಧಿಗೆ ಗಡಿಪಾರು ಮಾಡಿ ವಿಶೇಷ ಕಾರ್ಯನಿರ್ವಾಹಕ ದಂಡಾಧಿಕಾರಿ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ. ಅರುಣ್. ಕೆ., ಐಪಿಎಸ್ ಆದೇಶ ಹೊರಡಿಸಿದ್ದಾರೆ. ಬಂಟ್ವಾಳ ತಾಲೂಕಿನ ಕರೋಪಾಡಿ ಗ್ರಾಮದ ನಿವಾಸಿಯಾಗಿರುವ ರಾಜೇಶ್ ನಾಯಕ್ ಅವರ ವಿರುದ್ಧ ಈ ಹಿಂದೆ ಹಲವು ಅಪರಾಧ ಪ್ರಕರಣಗಳು ದಾಖಲಾಗಿರುವ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆಯಲ್ಲಿ ರೌಡಿ ಹಾಳೆ ತೆರೆದು ಅವರ ಚಲನವಲನಗಳ ಮೇಲೆ ನಿಗಾ ಇರಿಸಲಾಗಿತ್ತು ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ. ಕರ್ನಾಟಕ ಪೊಲೀಸ್ ಕಾಯ್ದೆಯ ಕಲಂ 55(ಎ) ಅಡಿಯಲ್ಲಿ ವಿಚಾರಣೆ ನಡೆಸಿದ ಬಳಿಕ, ಅವರ ಚಟುವಟಿಕೆಗಳು ಸಾರ್ವಜನಿಕರಿಗೆ ಭಯ, ಅಪಾಯ ಅಥವಾ ಹಾನಿ ಉಂಟುಮಾಡುವ ಸಾಧ್ಯತೆ ಇದೆ ಎಂಬ ಅಂಶಗಳು ಕಂಡುಬಂದಿರುವುದಾಗಿ ಆದೇಶದಲ್ಲಿ ತಿಳಿಸಲಾಗಿದೆ. ಆದರೆ, ಕಲಂ 55(ಬಿ)ಗೆ ಸಂಬಂಧಿಸಿದಂತೆ ಸಾಕಷ್ಟು ಸಾಕ್ಷ್ಯಾಧಾರಗಳು…
ಮಂಗಳೂರು: ಮನೆ ನಿರ್ಮಿಸಿ ಕೊಡುವುದಾಗಿ ಭರವಸೆ ನೀಡಿ ಹಣ ಪಡೆದ ಬಳಿಕ ಮನೆಯನ್ನೂ ನಿರ್ಮಿಸದೆ, ಹಣವನ್ನೂ ವಾಪಸ್ ಕೊಡದೆ, ಹಣದ ಕುರಿತು ಪ್ರಶ್ನಿಸಿದಾಗ ಜಾತಿ ನಿಂದನೆ ಮಾಡಿದ ಪ್ರಕರಣ ಸಂಬಂಧ ಮಂಗಳೂರಿನ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ(ವಿಶೇಷ) ನ್ಯಾಯಾಲಯವು ಶಿಕ್ಷೆ, ದಂಡ ವಿಧಿಸಿ ತೀರ್ಪು ನೀಡಿದೆ. ಶಿಕ್ಷೆಗೊಳಗಾದ ಆರೋಪಿ ಸಿಪ್ರಿಯಾನ್ ಡಿಸೋಜ ಎಂದು ತಿಳಿದು ಬಂದಿದೆ. ಜಯಂತ್ ನಾಯ್ಕ ಮನೋಜ್, ವಾಸುದೇವ ಎಂಬವರಿಗೆ 1250 ಚದರ ಅಡಿಯ ಮನೆ ಕಟ್ಟಿಸಿ ಕೊಡುವುದಾಗಿ ತಿಳಿಸಿದ ಸಿಪ್ರಿಯಾನ್ ಡಿಸೋಜ ಜಾಗ ಮತ್ತು ಮನೆಗೆ 30 ಲಕ್ಷ ರೂ. ನಿಗದಿಪಡಿಸಿದ್ದ. ಹಾಗೆಯೇ 2017ರ ಜೂ.28ರಂದು ಕರಾರು ಪತ್ರ ಮಾಡಿಸಿಕೊಂಡು ಒಂದು ವರ್ಷದೊಳಗೆ ಮನೆ ನಿರ್ಮಿಸಿಕೊಡುವುದಾಗಿ ಮೂವರಿಗೆ ಭರವಸೆ ನೀಡಿ ಮುಂಗಡ ಪಡೆದಿದ್ದ. ಆದರೆ ಒಂದು ವರ್ಷದೊಳಗೆ ಮನೆ ನಿರ್ಮಿಸದ ಕಾರಣ ಮೂವರು ವಿಚಾರಿಸಿದಾಗ ಮುಂಗಡ ವಾಪಸ್ ಕೊಡುವುದಾಗಿ ಹೇಳಿದ್ದರೂ ಹಣ ವಾಪಸ್ ಕೊಟ್ಟಿರಲಿಲ್ಲ ಎಂದು ದೂರಲಾಗಿತ್ತು. 2021ರ ಜ.20ರಂದು ಪುತ್ತಿಗೆ ಗ್ರಾಮದ ಮಿತ್ತಬೈಲಿನ ಸಿಪ್ರಿಯಾನ್…
ಪುತ್ತೂರು: ಪುತ್ತೂರು ಕಸಬ ಗ್ರಾಮದ ಪುತ್ತೂರು ಪ್ರೆಸ್ ಕ್ಲಬ್ ಎದುರು ಸಾರ್ವಜನಿಕ ಸ್ಥಳದಲ್ಲಿ ಗುಂಪು ಸೇರಿ ಗಲಾಟೆ ನಡೆಸಿದ ಆರೋಪದಡಿ ಮೂವರು ಸೇರಿದಂತೆ ಇತರರ ವಿರುದ್ಧ ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸೆ.1ರಂದು ಮಧ್ಯಾಹ್ನ ಸಾರ್ವಜನಿಕ ಸ್ಥಳದಲ್ಲಿ ಕೆಲವರು ಗುಂಪು ಸೇರಿ ಗಲಾಟೆ ನಡೆಸುತ್ತಿರುವ ಬಗ್ಗೆ ಪುತ್ತೂರು ನಗರ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕ ಜಾನ್ಸನ್ ಡಿಸೋಜ ಅವರಿಗೆ ಮಾಹಿತಿ ಲಭಿಸಿತ್ತು. ಮಾಹಿತಿ ಮೇರೆಗೆ ಪೊಲೀಸರು ಸಿಬ್ಬಂದಿಯೊಂದಿಗೆ ಸ್ಥಳಕ್ಕೆ ತೆರಳಿದಾಗ, ಕೆಲವರು ಪರಸ್ಪರ ಕೈಕೈ ಮಿಲಾಯಿಸಿಕೊಂಡು ಗಲಾಟೆ ನಡೆಸುತ್ತಾ ಸಾರ್ವಜನಿಕ ಶಾಂತಿಗೆ ಭಂಗ ಉಂಟು ಮಾಡುತ್ತಿರುವುದು ಕಂಡುಬಂದಿದೆ. ಪೊಲೀಸ್ ನಿರೀಕ್ಷಕರು ಗಲಾಟೆ ನಡೆಸುತ್ತಿದ್ದವರಿಗೆ ತಿಳುವಳಿಕೆ ನೀಡಿ ಶಾಂತಿ ಕಾಪಾಡುವಂತೆ ಸೂಚಿಸಿದರೂ, ಅವರು ಕಲಹ ಮುಂದುವರಿಸಿದ್ದಾರೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಮುಂಡೂರು ಗ್ರಾಮದ ಪ್ರವೀಣ್ ಆಚಾರ್ಯ, ಕೂರ್ನಡ್ಕದ ರವೂಫ್ ಹಾಗೂ ಬೋಳ್ವಾರದ ಹಕೀಂ ಸೇರಿದಂತೆ ಇತರರ ವಿರುದ್ಧ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಅ.ಕ್ರ. 104/2026, ಕಲಂ 194(2) ಬಿಎನ್‌ಎಸ್ ಅಡಿಯಲ್ಲಿ…
ಪುತ್ತೂರು : ದರ್ಬೆಯ ಜನಸೇವಾ ಕೇಂದ್ರವೊಂದರಲ್ಲಿ ತಾಂತ್ರಿಕ ದೋಷದಿಂದ ಗ್ರಾಹಕರ ದಾಖಲಾತಿ ಹಾನಿಗೊಂಡ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ಹಲ್ಲೆ ಪ್ರಕರಣದಲ್ಲಿ ಬಂಧಿತರಾಗಿ ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸುದರ್ಶನ್ ಪೈಗೆ ಜಿಲ್ಲಾ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಇದೇ ಪ್ರಕರಣದ ಇನ್ನೋರ್ವ ಆರೋಪಿಯಾಗಿರುವ ಜನಸೇವಾ ಕೇಂದ್ರದ ಮಾಲಕಿ ಅಂಜನಾ ಎಸ್. ಪೈ ಅವರಿಗೆ ನಿರೀಕ್ಷಣಾ ಜಾಮೀನು ಲಭಿಸಿದೆ. ಪುತ್ತೂರಿನ ಐದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಉಭಯ ಆರೋಪಿಗಳಿಗೆ ಜಾಮೀನು ಮಂಜೂರು ಮಾಡಿ ಆದೇಶಿಸಿದೆ. ಸುಳ್ಯ ತಾಲೂಕಿನ ಜಾಲ್ಲೂರು ನಿವಾಸಿ ಫಾತಿಮತ್ ಮಿಸ್ವಾನ್ ಎಂಬವರು ನೀಡಿರುವ ದೂರಿನ ಆಧಾರದಲ್ಲಿ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಈ ಪ್ರಕರಣ ದಾಖಲಾಗಿತ್ತು. ಆಗಸ್ಟ್ 21ರಂದು ಫಾತಿಮತ್ ಮಿಸ್ವಾನ್ ಅವರು ತಮ್ಮ ಸಹೋದರ ಹಾಗೂ ತಂಗಿಯೊಂದಿಗೆ ಪುತ್ತೂರಿಗೆ ಆಗಮಿಸಿ, ಕೆಲವು ಮುಖ್ಯ ದಾಖಲಾತಿಗಳ ಪ್ರಿಂಟ್ ಹಾಗೂ ಲ್ಯಾಮಿನೇಷನ್‌ಗಾಗಿ ದರ್ಬೆಯ ಡಿಜಿಟಲ್ ಜನಸೇವಾ ಕೇಂದ್ರಕ್ಕೆ ನೀಡಿದ್ದರು. ಬಳಿಕ ದಾಖಲಾತಿಗಳನ್ನು ಪಡೆಯಲು ಹೋದಾಗ ಒಂದು ದಾಖಲೆ ಹಾನಿಗೊಳಗಾಗಿರುವುದು ಕಂಡುಬಂದಿತ್ತು. ಅದನ್ನು…










