Author: main-admin

ಮಂಗಳೂರು: ವ್ಯಕ್ತಿಯೋರ್ವ ನಕಲಿ ಚಿನ್ನ ಅಡವಿಟ್ಟು 2 ಕೋಟಿಗೂ ಅಧಿಕ ರೂ. ಸಾಲ ಪಡೆದು ಮಂಗಳೂರಿನ ಸಮಾಜ ಸೇವಾ ಸಹಕಾರಿ ಸಂಘಕ್ಕೆ ವಂಚಿಸಿರುವ ಆರೋಪ ಕೇಳಿಬಂದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಈಶ್ವರ ಮಂಗಲ ಗ್ರಾಮದ ಅಬೂಬಕ್ಕರ್ ಸಿದ್ದಿಕ್ ವಂಚಿಸಿದ ಆರೋಪಿ. 500 ನಕಲಿ ಚಿನ್ನದ ಬಳೆಗಳನ್ನು ಅಡವಿಟ್ಟು ಅಬೂಬಕ್ಕರ್ ಸಿದ್ದಿಕ್ 2,11,89,800 ರೂ. ಸಾಲ ಪಡೆದು, ಮೋಸ ಮಾಡಿದ್ದಾನೆ. ಹೀಗಾಗಿ, ಅಬೂಬಕ್ಕರ್​ ಸಿದ್ದಿಕ್​, ಬ್ಯಾಂಕ್ ಆಡಳಿತ ಮಂಡಳಿ ಮತ್ತು ನೌಕರರ ವಿರುದ್ಧ ಮಂಗಳೂರಿನ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಮಾಜ ಸೇವಾ ಸಹಕಾರಿ ಸಂಘ ಜಿಲ್ಲೆಯಲ್ಲಿ 16 ಶಾಖೆ ಹೊಂದಿದೆ. ಮಂಗಳೂರಿನ ಪಡೀಲ್​ನ ಶಾಖೆಯಲ್ಲಿ ಕೋಟ್ಯಂತರ ರೂಪಾಯಿ ಅವ್ಯವಹಾರವಾಗಿದೆ ಎಂಬ ಆರೋಪ ಕೇಳಿಬಂದಿದೆ. ಚಿನ್ನ ಪರೀಕ್ಷೆ ನಡೆಸುವ ಸರಪ, ಬ್ಯಾಂಕ್​ನ ಅಧ್ಯಕ್ಷ, ನಿರ್ದೇಶಕರು ಮ್ಯಾನೇಜರ್, ಸಿಬ್ಬಂದಿ ಸಹಕಾರದಿಂದ ಅವ್ಯವಹಾರ ನಡೆದಿದೆ ಎಂಬ ಆರೋಪವಿದೆ. ಈ ಬಗ್ಗೆ ಬ್ಯಾಂಕ್​ನ ಸದಸ್ಯರು, ಮಾಜಿ ನಿರ್ದೇಶಕ ಡಿ.ಲೋಕನಾಥ್ ದೂರಿನ ಮೇರೆಗೆ 28…

Read More

ಮಡಿಕೇರಿ: ಸ್ಕೂಟಿಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ದಂಪತಿ ಸಾವನ್ನಪ್ಪಿರುವ ದುರ್ಘಟನೆ ಕೊಯನಾಡು ಸಮೀಪದ ಚಡಾವು ಎಂಬಲ್ಲಿ ನಡೆದಿದೆ. ನೆಲ್ಲಿಹುದಿಕೇರಿ ಗ್ರಾಮದಲ್ಲಿ ಚಿನ್ನಾಭರಣಗಳ ಕೆಲಸ ಮಾಡುತ್ತಿದ್ದ ಚಿದಾನಂದ ಆಚಾರ್ಯ ಮತ್ತು ನಳಿನಿ ದಂಪತಿ ಸಾವನ್ನಪ್ಪಿರುವ ದುರ್ದೈವಿಗಳು. ಚಿದಾನಂದ ಆಚಾರ್ಯ (47) ಎಂಬವರು ತನ್ನ ಸ್ಕೂಟಿ ಸಂಖ್ಯೆ (ಕೆಎ 12-ಡಬ್ಲು 7708)ಯಲ್ಲಿ ತನ್ನ ಪತ್ನಿ ನಳಿನಿ (40) ಅವರೊಂದಿಗೆ ಮಂಗಳೂರಿನಲ್ಲಿ ನಡೆಯ ಬೇಕಾಗಿದ್ದ ಉಪನಯನ ಕಾರ್ಯಕ್ಕೆಂದು ತೆರಳುತ್ತಿರುವ ಸಂದರ್ಭ ಕಂಟೈನರ್ ಲಾರಿಯೊಂದು ಸ್ಕೂಟಿಗೆ ಡಿಕ್ಕಿ ಹೊಡೆದಿದೆ. ಲಾರಿಯು ಡಿಕ್ಕಿ ಹೊಡೆದ ರಭಸಕ್ಕೆ ಸ್ಕೂಟಿ ಚಾಲನೆ ಮಾಡುತ್ತಿದ್ದ ಚಿದಾನಂದ ಆಚಾರ್ಯ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಗಂಭೀರ ಗಾಯಗೊಂಡು ಚಿಂತಾಜನಕ ಸ್ಥಿತಿಯಲ್ಲಿದ್ದ ಪತ್ನಿ ನಳಿನಿ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗುವಷ್ಟರಲ್ಲಿ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ. ಮೃತ ಚಿದಾನಂದ ಆಚಾರ್ಯ ನೆಲ್ಲಿಹುದಿಕೇರಿ ಗ್ರಾಮದ ಮುಖ್ಯ ರಸ್ತೆಯ ಅಂಗಡಿಯೊಂದಲ್ಲಿ ಚಿನ್ನಾಭರಣಗಳನ್ನು ರಿಪೇರಿ ಹಾಗೂ ತಯಾರಿಸುವ ಕೆಲಸವನ್ನು ಮಾಡಿಕೊಂಡಿದ್ದರು. ಪತ್ನಿ ನಳಿನಿ ಸಿದ್ದಾಪುರ ಸಂತ ಅನ್ನಮ್ಮ ಶಾಲೆಯಲ್ಲಿ ಕೆಲಸ ಮಾಡುತ್ತಿದ್ದರು. ಮಂಗಳೂರಿನಲ್ಲಿ ನಡೆಯುವ…

Read More

ಮಂಗಳೂರು: ಡಿಜಿಟಲ್ ಅರೆಸ್ಟ್ ಮಾಡಿಸುವುದಾಗಿ ಮಂಗಳೂರಿನ ವ್ಯಕ್ತಿಯೊಬ್ಬರನ್ನು ನಂಬಿಸಿ 1.71ಕೋಟಿ ರೂ. ವಂಚನೆ ಮಾಡಿರುವ ಕೇರಳ ಮೂಲದ ಯುವಕನನ್ನು ಮಂಗಳೂರು ಸೆನ್ ಠಾಣಾ ಪೊಲೀಸರು ಬಂಧಿಸಿ ಕಂಬಿ ಹಿಂದೆ ಕಳುಹಿಸಿದ್ದಾರೆ. ಕೇರಳ ರಾಜ್ಯದ ಕೋಝಿಕೋಡ್ ಜಿಲ್ಲೆಯ ಮಾವೂರ್, ಪಳ್ಳಿಯೊಲ್, ಚಿರಕ್ಕಲ್ ತಝಾಮ್, ಚೊಕ್ಕತ್‌ನ ಆಕಾಶ್ ಎ.(22) ಬಂಧಿತ ಆರೋಪಿ. ಪಿರ್ಯಾದಿದಾರರಿಗೆ ಅಪರಿಚಿತ ವ್ಯಕ್ತಿ TRAIನಿಂದ ಕರೆ ಮಾಡುವುದಾಗಿ ತಿಳಿಸಿ ನಿಮ್ಮ ಹೆಸರಿನಲ್ಲಿ ಇನ್ನೊಂದು ಮೊಬೈಲ್ ನಂಬ್ರ ರಿಜಿಸ್ಟರ್ ಆಗಿದೆ. ಮಾರ್ಕೆಟಿಂಗ್ ನೆಪದಲ್ಲಿ ತಮಗೆ ಸಂಬಂಧಿಸಿದ ಮೊಬೈಲ್ ಸಂಖ್ಯೆಯಿಂದ ಕರೆ ಮಾಡಿ ಕಿರುಕುಳ ಕೊಡುತ್ತಿರುವುದರ ಬಗ್ಗೆ FIR ದಾಖಲಾಗಿದೆ. ಆದ್ದರಿಂದ ತಕ್ಷಣ ಎಫ್ಐಆರ್‌ ದಾಖಲಾದ ಅಂಧೇರಿ(E) ಪೊಲೀಸ್ ಠಾಣೆಗೆ ಸಂಪರ್ಕಿಸಬೇಕು ಇಲ್ಲದಿದ್ದಲ್ಲಿ ನಿಮ್ಮ ಮೊಬೈಲ್ ಸಂಖ್ಯೆ (9967014480)ಯ ಸೇವೆಯನ್ನು 2 ಗಂಟೆಗಳಲ್ಲಿ ಕೊನೆಗೊಳಿಸಲಾಗುತ್ತದೆ. ಅಲ್ಲದೆ ಅಂಧೇರಿಯ ಕೆನರಾ ಬ್ಯಾಂಕ್‌ನಲ್ಲಿ ತಮ್ಮ ಹೆಸರಿನಲ್ಲಿ ಖಾತೆ ತೆರೆದು ವಂಚನೆಗೆ ಬಳಸಲಾಗಿದ್ದು, ಇದಕ್ಕೆ Identity ಬಳಸಿ ಸಿಮ್ ಖರೀದಿಸಲಾಗಿದೆ. ಆದ್ದರಿಂದ ತಮ್ಮನ್ನು ಬಂಧಿಸಿ ಜೈಲಿಗಟ್ಟಲಾಗುತ್ತದೆ‌. ಡಿಜಿಟಲ್ ಆರೆಸ್ಟ್…

Read More

ಮಂಗಳೂರು: ಅಧಿಕ ಲಾಭಾಂಶದ ಆಮಿಷವೊಡ್ಡಿ ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿಸಿ 10.84ಲಕ್ಷ ರೂ. ವಂಚನೆಗೈದಿರುವ ಬಗ್ಗೆ ಪ್ರಕರಣ ದಾಖಲಿಸಿಕೊಂಡ ಮಂಗಳೂರು ಸೆನ್ ಠಾಣಾ ಪೊಲೀಸರು ಓರ್ವನನ್ನು ಬಂಧಿಸಿದ್ದಾರೆ. ಕೇರಳ ರಾಜ್ಯದ, ಪಾಲಕ್ಕಾಡ್‌ನ ಮಲಪ್ಪುರಂ ಪುಲಪಟ್ಟ ಪರಕ್ಕಾಡ್‌ನ ಜಾಫರ್ ಕೆ(49) ಬಂಧಿತ ಆರೋಪಿ. ಅಪಚಿರಿತ ವ್ಯಕ್ತಿಯೊಬ್ಬನು ಪಿರ್ಯಾದಿದಾರರಿಗೆ ಷೇರು ಮಾರುಕಟ್ಟೆಯಲ್ಲಿ ಹಣ ತೊಡಗಿಸಿದರೆ ಹೆಚ್ಚಿನ ಲಾಭಾಂಶ ಸಿಗಬಹುದು ಎಂಬುದಾಗಿ ತಿಳಿಸಿದ್ದಾರೆ. ಅದರಂತೆ ಷೇರು ಮಾರುಕಟ್ಟೆಯಲ್ಲಿ ಹಣ ವಿನಿಯೋಗಿಸುವ ಬಗ್ಗೆ ಸ್ಟೋಕ್ ಫ್ರಂಟ್ ಲೈನ್ ಎಂಬ ಲಿಂಕ್ ಅನ್ನು ವಾಟ್ಸ್ಆ್ಯಪ್‌ಗೆ ಕಳುಹಿಸಿದ್ದಾರೆ. ಅದರಂತೆ ಪಿರ್ಯಾದಿದಾರರಿಂದ ಹಂತ ಹಂತವಾಗಿ 10,84,017ರೂ‌. ಹಣ ಪಡೆದು ವಂಚನೆ ಮಾಡಿರುವ ಬಗ್ಗೆ ದೂರು ದಾಖಲಾಗಿದೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಕೈಗೊಂಡಿದ್ದರು. ತನಿಖೆಯಲ್ಲಿ ಪಿರ್ಯಾದಿದಾರರಿಂದ ಹಣ ವರ್ಗಾವಣೆಯಾಗಿದ್ದ ಬ್ಯಾಂಕ್ ಖಾತೆದಾರರ ವಿವರವನ್ನು ಸಂಗ್ರಹಿಸಿ ನೋಡಿದಾಗ ಈತ ಕೇರಳ ಮೂಲದ ಜಾಫರ್ ಎಂದು ತಿಳಿದು ಬಂದಿದೆ. ಕೇರಳ ರಾಜ್ಯಕ್ಕೆ ತೆರಳಿದ ಮಂಗಳೂರು ಸೆನ್ ಪೊಲೀಸರು ಆರೋಪಿತನನ್ನು ಪತ್ತೆ ಮಾಡಿ…

Read More

ಬಂಟ್ವಾಳ: ತಾಲೂಕಿನ ಸಜೀಪಮುನ್ನೂರಿನ‌ ಗಾಂಧಿನಗರ ಕ್ರಾಸ್ ನಲ್ಲಿ ನಡೆದ ಸ್ಕೂಟರ್ ಅಪಘಾತದ ಸಂದರ್ಭದಲ್ಲಿ ಒಂದು ಸ್ಕೂಟರಿನಲ್ಲಿ ಅಕ್ರಮ ಗೋಮಾಂಸ ಸಾಗಾಟ ಪತ್ತೆಯಾಗಿದ್ದು, ಸವಾರನ ವಿರುದ್ಧ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಜೀಪಮುನ್ನೂರು ದಾಸರಗುಡ್ಡೆ ನಿವಾಸಿ ಸ್ಕೂಟರ್ ಸವಾರೆ ಅನುರಾಧ ಕೆ. ಅವರು ಡಿ.24ರ ಬೆಳಗ್ಗೆ ಕೆಲಸಕ್ಕೆ ಹೋಗುತ್ತಿರುವ ಸಂದರ್ಭದಲ್ಲಿ ಗಾಂಧಿನಗರ ಕ್ರಾಸ್ ಬಳಿ ಸಜೀಪ ಕಡೆಯಿಂದ ಸವಾರ ಸ್ಕೂಟರನ್ನು ಅತಿ ವೇಗ, ಅಜಾಗರೂಕತೆ ಹಾಗೂ ನಿರ್ಲಕ್ಷ್ಯತನದಿಂದ ಚಲಾಯಿಸಿಕೊಂಡು ಬಂದು ಅನುರಾಧ ಅವರು ಚಲಾಯಿಸುತ್ತಿದ್ದ ಸ್ಕೂಟರಿಗೆ ಡಿಕ್ಕಿ ಹೊಡೆದಿದ್ದಾನೆ. ಈ ವೇಳೆ ಎರಡೂ ಸ್ಕೂಟರಿನ ಸವಾರರು ಕೂಡ ರಸ್ತೆಗೆ ಬಿದ್ದು ಗಾಯವಾಗಿದ್ದು, ಆರೋಪಿಯ ಸ್ಕೂಟರಿನಿಂದ ಪ್ಲಾಸ್ಟಿಕ್ ನಲ್ಲಿ ಕಟ್ಟಿದ ಮಾಂಸದ ಕಟ್ಟುಗಳು ಕೂಡ ರಸ್ತೆಗೆ ಬಿದ್ದಿದೆ. ಈಗ ಎಲ್ಲಿಯೋ ದನವನ್ನು ಹತ್ಯೆ ಮಾಡಿ ಮಾಂಸವನ್ನು ಮಾರಾಟ ಮಾಡುವುದಕ್ಕಾಗಿ ಸಜೀಪ ಕಡೆಯಿಂದ ಮೆಲ್ಕಾರ್ ಕಡೆಗೆ ಹೋಗುತ್ತಿರುವುದಾಗಿ ದೂರಿನಲ್ಲಿ ವಿವರಿಸಲಾಗಿದೆ. ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಮಂಗಳೂರು: ಟ್ಯಾಂಕರ್‌ ವ್ಯವಹಾರಕ್ಕೆ ಸಂಬಂಧಿಸಿ ನಕಲಿ ದಾಖಲೆಗಳನ್ನು ಸೃಷ್ಟಿಸಿ ಅಡ್ಯಾರಿನ ಅಶೋಕ್‌ ಎ. ವಂಚಿಸಿರುವ ಬಗ್ಗೆ ಪ್ರವೀಣ್‌ ಕುತ್ತಾರ್‌ ಪೊಲೀಸರಿಗೆ ದೂರು ನೀಡಿದ್ದಾರೆ. ಪ್ರವೀಣ್‌ ಅವರು ಅಶೋಕ್‌ ಜೊತೆ ಟ್ಯಾಂಕರ್‌ ವ್ಯವಹಾರ ಮಾಡುತ್ತಿದ್ದು, ಅವರ ಹೆಸರಿನಲ್ಲಿ 9 ಟ್ಯಾಂಕರ್‌ಗಳಿವೆ. ಅವರು ಕುತ್ತಾರಿನಲ್ಲಿ ಹೊಟೇಲ್‌ ನಡೆಸುತ್ತಿದ್ದುದರಿಂದ ಅವರ ಬ್ಯಾಂಕ್‌ ವ್ಯವಹಾರ, ಹೊಸ ಟ್ಯಾಂಕರ್‌ ಖರೀದಿ, ಹಳೇ ಟ್ಯಾಂಕರ್‌ ಮಾರಾಟ ಇತ್ಯಾದಿ ವ್ಯವಹಾರಗಳನ್ನು ಅಶೋಕ್‌ ನೋಡಿಕೊಳ್ಳುತ್ತಿದ್ದರು. ತಣ್ಣೀರುಬಾವಿಯಲ್ಲಿರುವ ನಯಾರಾ ತೈಲ ಕಂಪೆನಿಯಲ್ಲಿರುವ ಪ್ರವೀಣ್‌ ಟ್ರಾನ್ಸ್‌ಪೋರ್ಟ್ ಕಂಪೆನಿಯ ಮೂಲಕ ಪ್ರವೀಣ್‌ ವ್ಯವಹಾರ ಮಾಡುತ್ತಿದ್ದು, ಇತ್ತೀಚೆಗೆ ಸುಮಾರು 2 ತಿಂಗಳ ಹಿಂದೆ ಅವರು 9 ಟ್ಯಾಂಕರ್‌ಗಳ ದಾಖಲೆಗಳನ್ನು ಪರಿಶೀಲಿಸಿದಾಗ ಆರೋಪಿ ಅಶೋಕ್‌ ಎ. 9 ಟ್ಯಾಂಕರ್‌ಗಳ ಎಲ್ಲ ದಾಖಲೆ ಪತ್ರಗಳನ್ನು ನಕಲಿಯಾಗಿ ಸೃಷ್ಟಿಸಿ ನಕಲಿ ಸಹಿ ಹಾಕಿಸಿಕೊಂಡು ನೈಜ ದಾಖಲೆಗಳೆಂದು ಆರ್‌ಟಿಒ ಕಚೇರಿಗೆ ಹಾಜರುಪಡಿಸಿ ಅವರ ಪತ್ನಿ, ಮಕ್ಕಳು ಮತ್ತು ಸಂಬಂಧಿಕರ ಹೆಸರಿಗೆ ವರ್ಗಾಯಿಸಿಕೊಂಡಿದ್ದಾರೆ. ನಯಾರಾ ತೈಲ ಕಂಪೆನಿಯಲ್ಲಿ ಪ್ರವೀಣ್‌ ಹೆಸರಿನಲ್ಲಿದ್ದ ಟ್ರಾನ್ಸ್‌ಪೋರ್ಟ್ ವ್ಯವಹಾರವನ್ನು ನಕಲಿ ಸಹಿ…

Read More

ಬಂಟ್ವಾಳ : ಬಿ.ಸಿ.ರೋಡಿನ ಕೈಕಂಬ ಪರ್ಲಿಯಾದಲ್ಲಿ ಬಾಡಿಗೆ ಕೊಡುವ ವಿಚಾರದಲ್ಲಿ ಎರಡು ತಂಡಗಳ ನಡುವೆ ನಡೆದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಟ್ವಾಳ ನಗರ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ಗಲಾಟೆಗೆ ಸಂಬಂಧಿಸಿ ಬಂಟ್ವಾಳ ನಗರ ಪೋಲೀಸ್ ಠಾಣೆಯಲ್ಲಿ ದೂರು ಹಾಗೂ ಪ್ರತಿದೂರು ನೀಡಿದ್ದು ಪ್ರಕರಣ ದಾಖಲಾಗಿತ್ತು. ಬಂಧಿತ ಆರೋಪಿಗಳನ್ನು ಪರ್ಲಿಯಾ ಮದ್ದ ಮನೆ ನಿವಾಸಿ ಶಾಹುಲ್ ಹಮೀದ್ ಹಾಗೂ ತಾರಿಪಡ್ಪು ನಿವಾಸಿ ಹಸೈನಾರ್ ಎಂದು ಗುರುತಿಸಲಾಗಿದೆ. ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು ಇವರಿಗೆ ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಮನೆಯ ಅಂಗಳದಲ್ಲಿ ಎರಡು ತಂಡಗಳ ನಡುವೆ ಗಲಾಟೆಯ ವಿಡಿಯೋ ಸಿ.ಸಿ.ಕ್ಯಾಮರಾದಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ವೈಯಕ್ತಿಕ ವಿಚಾರದಲ್ಲಿ ಆರಂಭವಾದ ಗಲಾಟೆ ರಾಜಕೀಯ ಬಣ್ಣ ಪಡೆದುಕೊಂಡಿದ್ದು, ಎಸ್.ಡಿ.ಪಿ.ಐ.ಮತ್ತು ಕಾಂಗ್ರೆಸ್ ಪಕ್ಷದ ಅಂಗಳದಲ್ಲಿ ಮಾತಿನ ಫೈರಿಂಗ್ ಆರಂಭವಾಗಿತ್ತು. ಪ್ರಕರಣದ ಕುರಿತಂತೆ ಎಸ್.ಡಿ.ಪಿ.ರಾಜ್ಯಾಧ್ಯಕ್ಷ ಮಂಗಳೂರಿಗೆ ಆಗಮಿಸಿದ್ದು ಘಟನೆಯಲ್ಲಿ ಗಾಯವಾಗಿರುವ ಆರೋಪಿಗಳನ್ನು ಭೇಟಿಯಾಗಿ ಆರೋಗ್ಯ ‌ವಿಚಾರಿಸಿದ್ದಲ್ಲದೆ, ಕಾಂಗ್ರೆಸ್ ವಿರುಧ್ದ ಮತ್ತು ಗಾಂಜಾ ಕುರಿತಾಗಿ ಹೇಳಿಕೆಯನ್ನು ನೀಡಿದ್ದರು.…

Read More

ಕೈಕಂಬ: ದನಗಳನ್ನು ಕಳವು ಮಾಡಿ ಕಡಿದು ಮಾಂಸ ಮಾಡಿ ಮಾರಾಟ ಮಾಡಿರುವ ಇಬ್ಬರು ಆರೋಪಿಗಳಾದ ಮೂಡುಬಿದಿರೆ ತಾಲೂಕಿನ ಕರಿಂಜೆ ಗ್ರಾಮದ ಸುವರ್ಣ ನಗರದ ಮೊಹಮ್ಮದ್‌ ರಫೀಕ್‌ ಯಾನೆ ರಫೀಕ್‌ (31) ,ಕಲ್ಲಬೆಟ್ಟು ಗ್ರಾಮದ ನೀರಳಿಕೆ ಹೌಸ್‌ನ ಶೌಕತ್‌ ಅಲಿ ಯಾನೆ ಶೌಕತ್‌ (34)ನನ್ನು ಮತ್ತು ದನ ಕಳವು ಮಾಡಲು ಬಳಸಿರುವ ಸುಮಾರು 3 ಲಕ್ಷ ರೂ. ಮೌಲ್ಯದ ಬಿಳಿ ಬಣ್ಣದ ರಿಡ್ಜ್ ಕಾರನ್ನು ಹಾಗೂ ಇತರೆ ಸೊತ್ತುಗಳನ್ನು ಬಜಪೆ ಪೊಲೀಸರು ಡಿ. 22ರಂದು ವಶಪಡಿಸಿಕೊಂಡಿದ್ದಾರೆ. ಅ.19ರಂದು ತೆಂಕ ಎಡಪದವು ಗ್ರಾಮ, ಪಂಚಾಯತ್‌ ಕಚೇರಿಯ ಬಳಿ ಮೇಯಲು ಬಿಟ್ಟುಗಳನ್ನು ಮತ್ತು ಅ.21ರಂದು ತೆಂಕ ಎಡಪದವು ಗ್ರಾಮದ ಪದರಂಗಿ ಕೊಡೇìಲ್‌ ಎನ್ನುವಲ್ಲಿ ಮೇಯಲು ಬಿಟ್ಟ ದನಗಳನ್ನು ಯಾರೋ ಕಳ್ಳರು ಕಾರಿನಲ್ಲಿ ತುಂಬಿಸಿ ಕಳವು ಮಾಡಿಕೊಂಡು ಹೋಗಿರುವ ಬಗ್ಗೆ ಬಜಪೆ ಪೊಲೀಸ್‌ ಠಾಣೆಯಲ್ಲಿ 2 ಪ್ರತ್ಯೇಕ ಪ್ರಕರಣಗಳು ದಾಖಲಾಗಿತ್ತು. ಆರೋಪಿತರ ವಿರುದ್ಧ ಮೂಡುಬಿದಿರೆ, ಉಡುಪಿಯ ಅಜೆಕಾರು ಮತ್ತು ಕಾರ್ಕಳ ಗ್ರಾಮಾಂತರ ಮತ್ತು ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್‌…

Read More

ಮಂಗಳೂರು: ಪ್ರತೀ ವರ್ಷ ಆಯೋಜಿಸಿಕೊಂಡು ಬಂದಿರುವ ಆಶಾ ಪ್ರಕಾಶ್ ಶೆಟ್ಟಿ ಸಹಾಯ ಹಸ್ತ ಯೋಜನೆಯ “ನೆರವು” ಸಹಾಯಹಸ್ತ ಪ್ರದಾನ ಕಾರ್ಯಕ್ರಮ ಡಿ. 25ರಂದು ಮಧ್ಯಾಹ್ನ ಗಂಟೆ 3.30ಕ್ಕೆ ಮಂಗಳೂರಿನ ಗೋಲ್ಡ್ ಫಿಂಚ್ ಸಿಟಿಯಲ್ಲಿ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಬೆಂಗಳೂರಿನ ಅದಮ್ಯ ಚೇತನ ಫೌಂಡೇಶನ್ನಿನ ಅಧ್ಯಕ್ಷರು ಹಾಗು ಸಹ- ಸಂಸ್ಥಾಪಕರೂ ಆಗಿರುವ ಡಾ. ತೇಜಸ್ವಿನಿ ಅನಂತಕುಮಾರ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಮೂಡಬಿದಿರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷರಾದ ಡಾ.ಎಂ. ಮೋಹನ ಆಳ್ವ, ಕಾಪು ವಿಧನಾಸಭಾ ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ, ಎಂ.ಆರ್.ಜಿ.ಗ್ರೂಪ್ ನ ಆಡಳಿತ ನಿರ್ದೇಶಕರಾದ ಗೌರವ್ ಪಿ. ಶೆಟ್ಟಿ ಮತ್ತು ಉಪಸ್ಥಿತರಿರಲಿದ್ದಾರೆ“ ಎಂದು ಎಂ.ಆರ್.ಜಿ.ಗ್ರೂಪ್ ಚೇರ್ಮನ್ ಡಾ. ಕೆ.ಪ್ರಕಾಶ್ ಶೆಟ್ಟಿ ಪತ್ರಿಕಾಗೋಷ್ಟಿಯಲ್ಲಿ ಮಾಹಿತಿ ನೀಡಿದರು. “ಈ ವರ್ಷ ಒಟ್ಟು 3,000 ಕುಟುಂಬಗಳಿಗೆ 6 ಕೋಟಿ ರೂಪಾಯಿಗೂ ಮಿಕ್ಕಿ ನೆರವನ್ನು ವಿತರಿಸಲಾಗುತ್ತಿದೆ. ಇದರಿಂದ ಸುಮಾರು ಹದಿನೈದು ಸಾವಿರ ಮಂದಿಗೆ ಪ್ರಯೋಜನವಾಗಲಿದೆ. ಫಲಾನುಭವಿಗಳ ಆಯ್ಕೆಯಲ್ಲಿ ಒಂದು ನಿಗದಿತ ಮಾನದಂಡವನ್ನು ಅನುಸರಿಸಲಾಗಿದೆ. ಅರ್ಜಿಗಳನ್ನು ಪರಿಶೀಲಿಸಿ,…

Read More

ಮಂಗಳೂರು: ನಂದಿನಿ ನದಿಯ ದಂಡೆಯ ಮೇಲಿರುವ ಪ್ರೀಮಿಯಂ ವಸತಿ ಬಡಾವಣೆಯಾಗಿರುವ ರೋಹನ್ ಎಸ್ಟೇಟ್ ಮುಕ್ಕಾ ಲೇಔಟ್‌ನ ಗ್ರ್ಯಾಂಡ್ ಲಾಂಚ್ ಮಂಗಳೂರಿನಲ್ಲಿ ನಡೆಯಿತು. ರೆಸಾರ್ಟ್ ಶೈಲಿಯ ವಸತಿ ಅಭಿವೃದ್ಧಿರೆಸಾರ್ಟ್ ತರಹದ ವಾತಾವರಣದೊಂದಿಗೆ ವಿನ್ಯಾಸಗೊಳಿಸಲಾದ ವಸತಿ ವಿನ್ಯಾಸವಾಗಿದೆ. ಇದು ರೆಸಾರ್ಟ್ ಅಲ್ಲದಿದ್ದರೂ, ಲೇಔಟ್‌ನ ಉನ್ನತ-ಮಟ್ಟದ ಸೌಲಭ್ಯಗಳು ಮತ್ತು ಪ್ರಶಾಂತವಾದ ಸುತ್ತಮುತ್ತಲಿನ ಪ್ರದೇಶಗಳು ವಿಶಿಷ್ಟವಾದ ಹಿಮ್ಮೆಟ್ಟುವಿಕೆಗೆ ಹೋಲುವ ಜೀವನಶೈಲಿಯನ್ನು ಸೃಷ್ಟಿಸುತ್ತವೆ.ನದಿ, ಸಮುದ್ರ ಮತ್ತು ರಾಷ್ಟ್ರೀಯ ಹೆದ್ದಾರಿಯ ನಡುವೆ ಕಾರ್ಯತಂತ್ರವಾಗಿ ನೆಲೆಗೊಂಡಿರುವ ಎಸ್ಟೇಟ್ ಗಣ್ಯ ವಸತಿ ಸಮುದಾಯವನ್ನು ನೀಡಲು ತನ್ನ ನೈಸರ್ಗಿಕ ಪರಿಸರವನ್ನು ಬಳಸಿಕೊಳ್ಳುತ್ತದೆ. ನದಿಯ ಮುಂಭಾಗವನ್ನು ವಿಶಿಷ್ಟವಾದ ಗಡಿ ಗೋಡೆಯೊಂದಿಗೆ ಅಭಿವೃದ್ಧಿಪಡಿಸಲಾಗಿದೆ. ಈ ಐಷಾರಾಮಿ ವಿನ್ಯಾಸವು ಕರಾವಳಿ ಪ್ರದೇಶದಲ್ಲಿ ಒಂದು ವಿಶೇಷ ಸ್ಥಾನವನ್ನು ಹೊಂದಿದೆ. ಅದರ ಪ್ರಮುಖ ಸ್ಥಳ, ವಿಶಿಷ್ಟ ವೈಶಿಷ್ಟ್ಯಗಳು ಮತ್ತು ಉನ್ನತ ವಿನ್ಯಾಸದಿಂದ ಭಿನ್ನವಾಗಿದೆ. ಇದು ಉನ್ನತ ಜೀವನ ಅನುಭವವನ್ನು ಬಯಸುವವರಿಗೆ ಹೆಚ್ಚು ಬೇಡಿಕೆಯಿರುವ ಅವಕಾಶವನ್ನು ಪ್ರತಿನಿಧಿಸುತ್ತದೆ.ಕ್ರಿಸ್ಮಸ್ ಕೊಡುಗೆ ಮತ್ತು ಭವಿಷ್ಯದ ದೃಷ್ಟಿ ರೋಹನ್ ಕಾರ್ಪೊರೇಷನ್ ವಿಶೇಷ ಕ್ರಿಸ್ಮಸ್ ಕೊಡುಗೆಯಾಗಿ ಮುಂದಿನ 15…

Read More