Author: main-admin

ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಮಂಗಳೂರು ಇದರ ದಶಮ ಸಂಭ್ರಮದ ಸಭಾ ಕಾರ್ಯಕ್ರಮ ಆದಿತ್ಯವಾರ ಅಡ್ಯಾರ್ ಗಾರ್ಡನ್ ನಲ್ಲಿ ಜರುಗಿತು. ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಲಾಯಿತು ಬಳಿಕ ಮಾತಾಡಿದ ಎಂಆರ್ ಜಿ ಗ್ರೂಪ್ ನ ಸಿಎಂಡಿ ಡಾ.ಕೆ.ಪ್ರಕಾಶ್ ಶೆಟ್ಟಿ ಅವರು, “ಸತೀಶ್ ಪಟ್ಲರಿಗೆ ಅವರ ಕಂಠವೇ ದೇವರು, ಆದರೆ ಯಕ್ಷಗಾನ ಕಲಾವಿದರಿಗೆ ಸತೀಶ್ ಪಟ್ಲರೇ ದೇವರು. ಯಕ್ಷಗಾನ ಕಲಾವಿದರು ತಮ್ಮ ಕಷ್ಟವನ್ನು ಬದಿಗಿರಿಸಿ ಜನರಿಗೆ ಮನೋರಂಜನೆ ನೀಡುತ್ತಾರೆ ಎಂದಿಗೂ ಯಾರ ಮುಂದೆಯೂ ಕೈಚಾಚುವುದಿಲ್ಲ. ಅವರ ಸ್ವಾಭಿಮಾನದ ಬದುಕು ಹಾಗಿರುತ್ತದೆ, ಇಂತಹ ಕಲಾವಿದರಿಗೆ ನೆರವಾಗಲು ಯಕ್ಷಧ್ರುವ ಪಟ್ಲ ಟ್ರಸ್ಟ್ ಸ್ಥಾಪಿಸಿ ರಾತ್ರಿ ಹಗಲು ಕಲಾವಿದರ ನೋವಿಗೆ ಸ್ಪಂದಿಸಿದರು. ಅವರು ಪ್ರಾರಂಭದಲ್ಲಿ ನನ್ನ ಬಳಿ ತೊಟ್ಟಿಲು ಕೇಳಿದಾಗ ನಾನು ಹಿಂದೆ ಮುಂದೆ ಯೋಚಿಸದೆ ಬೆಳ್ಳಿ ತೊಟ್ಟಿಲು ನೀಡಿದೆ. ಆದರೆ ನಂತರ ನನ್ನ ಜೀವನದಲ್ಲಿ ವ್ಯವಹಾರದಲ್ಲಿ ಬಹಳಷ್ಟು ಅಭಿವೃದ್ಧಿಯನ್ನು ಕಂಡೆ. ನಾವೆಲ್ಲರೂ ಅವರು ಮಾಡುವ ಒಳ್ಳೆಯ ಕೆಲಸಕ್ಕೆ ಕೈಜೋಡಿಸೋಣ. ಅವರ ಸಮಾಜಮುಖಿ ಚಿಂತನೆ,…

Read More

ಬೆಂಗಳೂರು: ದ್ವೇಷ ಭಾಷಣ-ಪ್ರಚೋದನಾಕಾರಿ ಪೋಸ್ಟ್‌, ಆನ್‌ಲೈನ್ ಬೆಟ್ಟಿಂಗ್ ವಿರುದ್ಧ ಶೀಘ್ರದಲ್ಲೇ ಕಠಿಣ ಕಾನೂನು ಜಾರಿಗೆ ತರಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಹೇಳಿದರು. ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳು (ಡಿಸಿಗಳು) ಮತ್ತು ಎಲ್ಲಾ ಜಿಲ್ಲಾ ಪಂಚಾಯತ್‌ಗಳ ಸಿಇಒಗಳೊಂದಿಗೆ ಎರಡು ದಿನಗಳ ಪರಿಶೀಲನಾ ಸಭೆಯ ನಂತರ ಮುಖ್ಯಮಂತ್ರಿಗಳು ಈ ವಿಷಯ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾರಾದರೂ ದ್ವೇಷ ಭಾಷಣ ಮಾಡಿದರೆ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಸೂಚಿಸಿದ್ದೇನೆ. ಈ ನಿಟ್ಟಿನಲ್ಲಿ ಶೀಘ್ರದಲ್ಲೇ ಕಠಿಣ ಕಾನೂನು ಜಾರಿಗೆ ತರಲಾಗುವುದು. ಈ ಬೆಳವಣಿಗೆಯನ್ನು ಸರ್ಕಾರ ಗಂಭೀರವಾಗಿ ಪರಿಗಣಿಸುತ್ತಿದೆ ಎಂದು ಹೇಳಿದರು. ದ್ವೇಷ ಭಾಷಣ ಮಾಡುವವರು ಎಷ್ಟೇ ಪ್ರಭಾವಿಗಳಾಗಿದ್ದರೂ ಅವರ ವಿರುದ್ಧ ನಿರ್ದಯ ಕ್ರಮ ಕೈಗೊಳ್ಳಬೇಕು. ಅವರ ವಿರುದ್ಧ ಕ್ರಿಮಿನಲ್ ಪ್ರಕರಣಗಳನ್ನು ದಾಖಲಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆಂದು ತಿಳಿಸಿದರು. ಕಾನೂನು-ಸುವ್ಯವಸ್ಥೆ ಮತ್ತು ಅಭಿವೃದ್ಧಿಯ ನಡುವೆ ನೇರ ಸಂಬಂಧವಿದೆ. ರಾಜ್ಯಾದ್ಯಂತ ಅವುಗಳನ್ನು ಖಚಿತಪಡಿಸಿಕೊಳ್ಳಬೇಕು. ಸಂವಿಧಾನದ ಉದ್ದೇಶಗಳನ್ನು ಅಡ್ಡಿಪಡಿಸುವ ಶಕ್ತಿಗಳನ್ನು ಮೊಳಕೆಯಲ್ಲೇ ಕಿತ್ತುಹಾಕುವಂತೆ ಜಿಲ್ಲಾಧಿಕಾರಿಗಳು ಮತ್ತು ಎಸ್‌ಪಿಗಳಿಗೆ ಕಟ್ಟುನಿಟ್ಟಿನ…

Read More

ಬೆಂಗಳೂರು : ಮಂಡ್ಯ ಜಿಲ್ಲೆಯಲ್ಲಿ ಇತ್ತೀಚೆಗೆ ಸಂಚಾರ ನಿಯಮ ಉಲ್ಲಂಘಿಸುವ ವಾಹನ ತಪಾಸಣೆ ವೇಳೆ ಅಪಘಾತಕ್ಕೀಡಾಗಿ ಮಗು ಸಾವಿಗೀಡಾದ ಪ್ರಕರಣ ಹಿನ್ನೆಲೆಯಲ್ಲಿ ರಸ್ತೆಯಲ್ಲಿ ಪೊಲೀಸರ ವಾಹನ ತಪಾಸಣೆಗೆ ರಾಜ್ಯ ಪೊಲೀಸ್ ಮಹಾನಿರ್ದೇಶಕರು ಹಲವು ಸೂಚನೆಗಳನ್ನು ನೀಡಿದ್ದಾರೆ. ಈ ಸಂಬಂಧ ಶನಿವಾರ ಸುತ್ತೋಲೆ ಹೊರಡಿಸಿರುವ ಡಿಜಿಪಿ-ಐಜಿಪಿ ಡಾ.ಎಂ.ಎ.ಸಲೀಂ, ಕಣ್ಣಿಗೆ ಕಾಣುವಂತೆ ಸಂಚಾರ ನಿಯಮ ಉಲ್ಲಂಘಿಸದ ವಾಹನಗಳನ್ನು ಅಡ್ಡಗಟ್ಟಿ ತಪಾಸಣೆ ಮಾಡಬಾರದು. ವಾಹನ ತಪಾಸಣೆ ವೇಳೆ ಬಾಡಿ ವೋರ್ನ್‌ ಕ್ಯಾಮೆರಾಗಳನ್ನು ಕಡ್ಡಾಯವಾಗಿ ಧರಿಸಿರಬೇಕು. ರಸ್ತೆಯಲ್ಲಿ ದಿಢೀರನೆ ಬಂದು ವಾಹನಗಳನ್ನು ಅಡ್ಡಗಟ್ಟುವುದಾಗಲಿ ಅಥವಾ ವಾಹನಗಳ ಕೀಲಿ ತೆಗೆದುಕೊಳ್ಳವುದಾಗಲಿ ಮಾಡಬಾರದು ಎಂದು ಕಟ್ಟುನಿಟ್ಟಾಗಿ ಸೂಚಿಸಿದ್ದಾರೆ. ಡಿಜಿಪಿ ವಾಹನ ತಪಾಸಣೆ ಸಲುವಾಗಿ ನೀಡಿದ ಮಾರ್ಗಸೂಚಿ ಇಂತಿದೆ: 1.ಸಕಾರಣವಿಲ್ಲದೆ ದಾಖಲೆಗಳನ್ನು ಪರೀಕ್ಷಿಸಲು ವಾಹನಗಳನ್ನು ತಡೆದು ತಪಾಸಣೆಗೊಳಪಡಿಸಬಾರದು. ಕಣ್ಣಿಗೆ ಕಾಣುವ ಸಂಚಾರ ನಿಯಮ ಉಲ್ಲಂಘನೆಗಳು ಕಂಡು ಬಂದಲ್ಲಿ ಮಾತ್ರ ವಾಹನ ತಡೆ ತಪಾಸಣೆ ನಡೆಸಬೇಕು. ಪ್ರಕರಣಗಳನ್ನು ದಾಖಲಿಸುವಾಗ ಈ ಅಂಶಗಳನ್ನು ಗಮನದಲ್ಲಿಟ್ಟುಕೊಳ್ಳುವುದು. (ಅ) ಹೆದ್ದಾರಿಗಳಲ್ಲಿ ಜಿಗ್‌ಜಾಗ್ ಮಾದರಿಯಲ್ಲಿ ಬ್ಯಾರಿಕೇಡ್‌ಗಳನ್ನು ಹಾಕಿ ವಾಹನಗಳನ್ನು…

Read More

ಮಂಗಳೂರು: ಯಾವುದೇ ಪ್ರಕರಣಗಳ ಆರೋಪಿಗಳಿಗೆ ಯಾರೇ ಆದರೂ ಆಶ್ರಯ ನೀಡಿದರೆ ನಿರ್ದಾಕ್ಷಿಣ್ಯವಾಗಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಮಂಗಳೂರು ನಗರ ನೂತನ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಎಚ್ಚರಿಕೆ ನೀಡಿದ್ದಾರೆ. ಅಪರಾಧ ಪ್ರಕರಣ ಮಾಡಿದ ಬಳಿಕ ಆರೋಪಿಗಳಿಗೆ ಆಶ್ರಯ ನೀಡುವುದು, ಆರ್ಥಿಕ ಸಹಾಯ ಮಾಡುವುದು, ಆಹಾರ, ಫೋನ್, ವಾಹನ ಇತ್ಯಾದಿ ರೂಪದಲ್ಲಿ ನೀಡಿದರೆ ಅವರನ್ನೂ ಕೂಡ ಆರೋಪಿಗಳನ್ನಾಗಿ ಮಾಡಲಾಗುವುದು ಎಂದು ಪೊಲೀಸ್ ಆಯುಕ್ತರು ತಿಳಿಸಿದ್ದಾರೆ. ಕೆಲವೊಂದು ಪ್ರಕರಣದಲ್ಲಿ ಅಮಾಯಕರನ್ನು ಬಂಧಿಸಲಾಗಿದೆ ಎಂಬ ಅಭಿಪ್ರಾಯಗಳು ಸಾರ್ವಜನಿಕ ವಲಯದಲ್ಲಿ ವ್ಯಕ್ತವಾಗುತ್ತಿದೆ. ಪ್ರಕರಣದ ತನಿಖೆ ನಡೆಸಿದಾಗ ಕೃತ್ಯಕ್ಕೆ, ಆರೋಪಕ್ಕೆ ಸಹಕಾರ ನೀಡಿದ ವ್ಯಕ್ತಿ ಎಷ್ಟೇ ಪ್ರಭಾವಶಾಲಿಯಾದರೂ ಅವರನ್ನು ಬಂಧಿಸುತ್ತೇವೆ ಎಂದು ಪೊಲೀಸ್ ಆಯುಕ್ತರು ಹೇಳಿದ್ದಾರೆ.

Read More

ಮಂಗಳೂರು: ದ.ಕ. ಜಿಲ್ಲೆಯ ನಗರ ಆಗಿರಲಿ, ಗ್ರಾಮಾಂತರ ಆಗಿರಲಿ ಎಲ್ಲೇ, ಯಾವುದೇ ರೀತಿಯ ಅಪರಾಧ ಕೃತ್ಯ ನಡೆದಾಗ ಅಥವಾ ಅಕ್ರಮ ಚಟುವಟಿಕೆಗಳು ನಡೆದಾಗ ಅದನ್ನು ಜಂಟಿ ಕಾರ್ಯಾಚರಣೆಯ ಮೂಲಕ ನಿಭಾಯಿಸಲಿದ್ದೇವೆ ಎಂದು ಮಂಗಳೂರಿನ ನೂತನ ಕಮಿಷನರ್ ಸುಧೀರ್ ರೆಡ್ಡಿ ಸ್ಪಷ್ಟಪಡಿಸಿದ್ದಾರೆ. ಪೊಲೀಸ್ ಕಮಿಷನರ್ ಕಚೇರಿಯಲ್ಲಿ ಶನಿವಾರ ತಮ್ಮನ್ನು ಭೇಟಿಯಾದ ಸುದ್ದಿಗಾರರ ಜತೆ ಮಾತನಾಡಿದ ಅವರು, ಕ್ರಿಮಿನಲ್ಗಳು ಜಿಲ್ಲೆಯ ಯಾವುದೇ ಮೂಲೆಯಲ್ಲಿ ಯಾವುದೇ ರೀತಿಯ ಅಪರಾಧ ಕೃತ್ಯ ಎಸಗಿದರೂ ಎಸ್ಪಿ, ಡಿಸಿಪಿಗಳ ಜತೆ ಜಂಟಿ ಕಾರ್ಯಾಚರಣೆ ಮೂಲಕ ಅಪರಾಧಿಗಳಿಗೆ ತಕ್ಕ ಉತ್ತರ ನೀಡಲಾಗುವುದು. ಈ ಕಾರ್ಯಾಚರಣೆ ಇತರ ಅಕ್ರಮ ಚಟುವಟಿಕೆಗಳಿಗೂ ಅನ್ವಯವಾಗಲಿದೆ ಎಂದು ಹೇಳಿದರು. ಈ ಸಂದರ್ಭ ಜತೆಯಲ್ಲಿದ್ದ ಎಸ್ಪಿ ಡಾ.ಅರುಣ್ ಕುಮಾರ್ ಅವರೂ ದನಿಗೂಡಿಸಿ, ಅದಕ್ಕಾಗಿಯೇ ನಾವು ಜತೆಯಲ್ಲಿಯೇ ಇಲ್ಲಿದ್ದೇವೆ ಎಂದರು. ಕೋಮುದ್ವೇಷ ಭಾಷಣ, ಸಾಮಾಜಿಕ ಜಾಲತಾಣಗಳಲ್ಲಿ ಪ್ರಚೋದನಾಕಾರಿ ಪೋಸ್ಟ್ಗಳನ್ನು ಹಾಕುತ್ತಿರುವವರ ಕುರಿತು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದ ಸುಧೀರ್ ರೆಡ್ಡಿ ಅವರು, ಯಾರದ್ದೇ ಯಾವ ಮಾತು ಅಪರಾಧ ಕೃತ್ಯಗಳಿಗೆ ಪ್ರಚೋದನೆ ನೀಡುವಂತಿರಬಾರದು. ವಾಕ್ ಸ್ವಾತಂತ್ರ್ಯ…

Read More

ಮಂಜೇಶ್ವರ: ರಾಷ್ಟ್ರೀಯ ಹೆದ್ದಾರಿ 66ರ ಉಪ್ಪಳ ಗೇಟ್ ಬಳಿ ಇಂದು ಸಂಜೆ ಮೀನಿನ ಲಾರಿಯೊಂದು ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ವರ್ಕಡಿ ಸಮೀಪದ ಕೋಳ್ಯೂರು ಪದವು ನಿವಾಸಿ ಮಹಿಳೆ ನವ್ಯ ಮೃತಪಟ್ಟಿದ್ದಾರೆ. ಪತಿ ಪದ್ಮನಾಭ (36) ಹಾಗೂ ಮಗು ಗಾಯನ್ (2)ಗಂಭೀರ ಗಾಯಗೊಂಡಿದ್ದು ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತ ನವ್ಯಾ.ಕೆ (24) ಅವರು ತಲಪಾಡಿ ಗ್ಯಾರೇಜಿನ ಶಿವರಾಮ ಆಚಾರ್ಯ ಅವರ ಪುತ್ರಿಯಾಗಿದ್ದು ಇಂದು ಔಷಧಿ ಗೆಂದು ತೆರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ.

Read More

ಮಂಗಳೂರು : ದಾಳಿ ಮಾಡದಂತೆ ಲೋಕಾಯುಕ್ತ ಇನ್‌ಸ್ಪೆಕ್ಟರ್‌ಗೆ ಲಂಚ ನೀಡಲು ಬಂದ ಆರೋಪದ ಮೇಲೆ ಕಾನೂನು ಮಾಪನ ಶಾಸ್ತ್ರ ಇಲಾಖೆಯ ಅಧಿಕಾರಿಯನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ. ಶುಕ್ರವಾರ ಮಂಗಳೂರು ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ಲೋಕಾಯುಕ್ತ ಇನ್‌ಸ್ಪೆಕ್ಟರ್‌ ಕರ್ತವ್ಯದಲ್ಲಿರುವಾಗ ಬೆಳಿಗ್ಗೆ 11.15 ಗಂಟೆಯ ಸುಮಾರಿಗೆ ಕೋಟೆಕಣಿ ಪ್ರಶಾಂತ್ ಆಯಿಲ್ ಇಂಡಸ್ಟ್ರೀಸ್ ಮಾಲೀಕ ಪ್ರವೀಣ್ ನಾಯ್ಕ್ ಮತ್ತು ಗಜೇಂದ್ರ, ಕಾನೂನು ಮಾಪನ ಶಾಸ್ತ್ರ ಇಲಾಖೆಯ ಸಹಾಯಕ ನಿಯಂತ್ರಕರು ಮಂಗಳೂರು ಲೋಕಾಯುಕ್ತ ಪೊಲೀಸ್ ಠಾಣೆಗೆ ಬಂದಿದ್ದರು. ಬಂದವರು ಇನ್‌ಸ್ಪೆಕ್ಟರ್‌ ಅವರಲ್ಲಿ ಮಾತನಾಡುತ್ತಾ ತನ್ನ ವಿರುದ್ಧ ಹಾಗೂ ತನ್ನ ಇಲಾಖೆಯ ವಿರುದ್ಧ ಲೋಕಾಯುಕ್ತ ಸಂಸ್ಥೆಯಿಂದ ಯಾವುದೇ ಪ್ರಕರಣ ದಾಖಲಿಸಬಾರದು ಅಥವಾ ದಾಳಿ ಮಾಡಬಾರದು ಎಂಬುದಾಗಿ ತಿಳಿಸಿದ್ದಾರೆ. ಇದಕ್ಕಾಗಿ ತಾನು 3 ತಿಂಗಳಿಗೊಮ್ಮೆ 25,000 ರೂ ಹಣವನ್ನು ಲಂಚವಾಗಿ ಮಂಗಳೂರು ಲೋಕಾಯುಕ್ತ ಠಾಣೆಗೆ ನೀಡುವುದಾಗಿ ಲಂಚದ ಆಮಿಷವೊಡ್ಡಿದ್ದಾರೆ ಎಂದು ಆರೋಪಿಸಿ ಈ ಬಗ್ಗೆ ಮಂಗಳೂರು ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ಗಜೇಂದ್ರ ಅವರ ವಿರುದ್ಧ ಪ್ರಕರಣ ದಾಖಲಾಗಿರುತ್ತದೆ.

Read More

ಮಂಗಳೂರು: ನಗರ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯ ನೂತನ ಪೋಲಿಸ್ ಕಮೀಶನರ್ ಆಗಿ ಸುಧೀರ್ ಕುಮಾರ್ ರೆಡ್ಡಿ ಶುಕ್ರವಾರ ಅಧಿಕಾರ ವಹಿಸಿಕೊಂಡರು. ನಿರ್ಗಮನ ಕಮೀಷನರ್ ಅನುಪಮ್ ಅಗರ್ವಾಲ್ ಅವರು ನೂತನ ಪೊಲೀಸ್ ಆಯುಕ್ತರಿಗೆ ಅಧಿಕಾರವನ್ನು ಹಸ್ತಾಂತರಿಸಿದರು.

Read More

ಬೆಂಗಳೂರು : ಕರ್ನಾಟಕವನ್ನು ಸರ್ವಜನಾಂಗದ ಶಾಂತಿಯ ತೋಟವಾಗಿಸುವ ವಾಗ್ದಾನವನ್ನು ನಾಡಿನ ಜನತೆಗೆ ನಾವು ಚುನಾವಣಾ ಪೂರ್ವದಲ್ಲೇ ನೀಡಿದ್ದೆವು, ಅದರಂತೆ ಜನತೆ ನಮ್ಮ ಮೇಲೆ ವಿಶ್ವಾಸವಿಟ್ಟು ಬಹುಮತದ ಸರ್ಕಾರ ರಚನೆಗೆ ಅವಕಾಶ ನೀಡಿದ್ದಾರೆ. ರಾಜ್ಯದಲ್ಲಿ ಶಾಂತಿ, ಸೌಹಾರ್ದತೆ ಮತ್ತು‌ ಸಾಮರಸ್ಯದ ವಾತಾವರಣವನ್ನು ನಿರ್ಮಾಣ ಮಾಡುವ ಅಗತ್ಯ ಎಂದಿಗಿಂತಲೂ ಈಗ ಹೆಚ್ಚಾಗಿದೆ. ಇತ್ತೀಚಿನ ದಿನಗಳಲ್ಲಿ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಕೋಮುವಾದಿ ದುಷ್ಕರ್ಮಿಗಳು ವಿದ್ವೇಷಕಾರಿ ಚಟುವಟಿಕೆಗಳ ಮೂಲಕ ಧಾರ್ಮಿಕ ಸಾಮರಸ್ಯವನ್ನು ಕೆಡಿಸಿ ಸಾಮಾಜಿಕ ಸ್ವಾಸ್ಥ್ಯವನ್ನು ಹಾಳುಗೆಡಹುತ್ತಿರುವುದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಇಂತಹ ಕಾನೂನು ವಿರೋಧಿ ಚಟಿವಟಿಕೆಗಳನ್ನು ನಿಗ್ರಹಿಸಲು ನಮ್ಮ ಸರ್ಕಾರ ವಿಶೇಷ ಕಾರ್ಯಪಡೆಯನ್ನು ರಚಿಸಿದೆ. ಈಗಾಗಲೇ ಅಸ್ತಿತ್ವದಲ್ಲಿರುವ ನಕ್ಸಲ್‌ ನಿಗ್ರಹ ಪಡೆಯಿಂದ ಒಬ್ಬರು ಡಿಜಿಪಿ, ಒಬ್ಬರು ಡಿವೈಎಸ್‌ಪಿ, ಒಬ್ಬರು ಸಹಾಯಕ ಕಮಾಂಡೆಂಟ್‌, ನಾಲ್ವರು ಪೊಲೀಸ್ ಇನ್ಸ್‌ಪೆಕ್ಟರ್, 16 ಪಿಎಸ್‌ಐ ಸೇರಿ 248 ಹುದ್ದೆಗಳನ್ನು ಬೇರ್ಪಡಿಸಿ ಟಾಸ್ಕ್‌ ಫೋರ್ಸ್‌ ರಚಿಸಲಾಗಿದೆ. ಕೋಮು ಭಾವನೆ ಕೆರಳಿಸುವ ಮತ್ತು ಸಮಾಜದಲ್ಲಿ ಶಾಂತಿ ಕದಡುವ…

Read More

ಮಂಗಳೂರು: ದ.ಕ. ಜಿಲ್ಲಾ ನೂತನ ಎಸ್ಪಿಯಾಗಿ ಡಾ. ಅರುಣ್ ಕೆ. ಶುಕ್ರವಾರ ನಿರ್ಗಮನ ಎಸ್ಪಿ ಯತೀಶ್ ಎನ್. ಅವರಿಂದ ಅಧಿಕಾರ ಸ್ವೀಕರಿಸಿದರು. ಅಧಿಕಾರ ವಹಿಸಿಕೊಂಡ ಬಳಿಕ ಮಾತನಾಡಿದ ಅವರು ಕಾನೂನು ಸುವ್ಯವಸ್ಥೆ ಕಾಪಾಡುವುದು ಹಾಗೂ ಅಪರಾಧ ಪ್ರಕರಣಗಳ ನಿಯಂತ್ರಣಕ್ಕೆ ಮೊದಲ ಆದ್ಯತೆ ನೀಡಲಾಗುವುದು ಎಂದು ಹೇಳಿದ್ದಾರೆ. ಮತೀಯ ಪ್ರಕರಣ, ನೈತಿಕ ಪೊಲೀಸ್ ಗಿರಿ ಪ್ರಕರಣಗಳ ಬಗ್ಗೆಯೂ ಗಂಭೀರವಾಗಿ ಪರಿಗಣಿಸಲಾಗುವುದು. ಅದೇ ರೀತಿ ರೌಡಿ ಶೀಟರ್‌ಗಳ ಚಲನವಲನಗಳ ಮೇಲೆ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿಗಳನ್ನು ಹಬ್ಬಿಸುವವರ ಮೇಲೆ ನಿಗಾ ಇರಿಸಲಾಗುವುದು. ಅಕ್ರಮ ಗಣಿಗಾರಿಕೆ, ಗ್ಯಾಂಬ್ಲಿಂಗ್, ಬೆಟ್ಟಿಂಗ್ ಹಾಗೂ ಇನ್ನಿತರ ಯಾವುದೇ ರೀತಿಯ ಕಾನೂನು ಬಾಹಿರ ಚಟುವಟಿಕೆಗಳು ಕಂಡುಬಂದಲ್ಲಿ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು. ಸಾರ್ವಜನಿಕರಲ್ಲಿ ಯಾವುದೇ ಮಾಹಿತಿಗಳಿದ್ದಲ್ಲಿ ನೇರವಾಗಿ ಮೊಬೈಲ್ ಸಂಖ್ಯೆ: 9480805301 ಅಥವಾ ಕಛೇರಿ ಸಂಖ್ಯೆ: 0824-2220503ಗೆ ಮಾಹಿತಿ ನೀಡಬಹುದು ಎಂದು ನೂತನ ಎಸ್ಪಿ ಡಾ. ಅರುಣ್. ಕೆ ತಿಳಿಸಿದ್ದಾರೆ.

Read More