Author: main-admin

ಮುಂಬೈ: ಪೊಲೀಸ್ ಇಲಾಖೆಯಲ್ಲೇ ಹೊಸ ಮೈಲಿಗಲ್ಲನ್ನು ಸೃಷ್ಟಿಸಿದ್ದ ಕಾರ್ಕಳ ಎಣ್ಣೆಹೊಳೆ ಮೂಲದ ಮುಂಬೈ ಪೊಲೀಸ್ ಅಧಿಕಾರಿ ದಯಾನಾಯಕ್ ಅವರು ಅಸಿಸ್ಟೆಂಟ್ ಕಮಿಷನರ್ ಆಫ್ ಪೊಲೀಸ್ ಆಗಿ ಭಡ್ತಿ ಹೊಂದಿದ್ದಾರೆ. ಮುಂಬೈ ಭೂಗತ ಲೋಕದ ಎಂಭತ್ತೈದಕ್ಕೂ ಹೆಚ್ಚು ಪಾತಕಿಗಳನ್ನು ಎನ್ಕೌಂಟರ್ ಮಾಡಿದ್ದ ಧುರೀಣ ದಯಾ ನಾಯಕ್ ಅವರು ಮುಂಬೈ ಕ್ರೈಂ ಬ್ರ್ಯಾಂಚ್ ಸೀನಿಯರ್ ಇನ್ಸ್ಪೆಕ್ಟರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಡ್ರಗ್ಸ್ ಮಾಫಿಯಾಕ್ಕೆ ಕಡಿವಾಣ ಹಾಕುವಲ್ಲಿ ಕೂಡಾ ಇವರು ಪ್ರಮುಖ ಪಾತ್ರ ವಹಿಸಿದ್ದರು. ಮಹಾರಾಷ್ಟ್ರ ಭಯೋತ್ಪಾದಕ ನಿಗ್ರ ದಳದಲ್ಲೂ ಕರ್ತವ್ಯ ನಿರ್ವಹಿಸಿದ ಅನುಭವ ಇವರದ್ದು.

Read More

ಉಳ್ಳಾಲ: ಎಡೆಬಿಡದೆ ಸುರಿದ ವಿಪರೀತ ಮಳೆಗೆ ಎರಡು ಮನೆಗಳಿಗೆ ಗುಡ್ಡ ಜರಿದು ಬಿದ್ದ ಪರಿಣಾಮ ಓರ್ವ ಮಹಿಳೆ ಮೃತ ಪಟ್ಟ ಘಟನೆ ತಾಲೂಕಿನ ಮಂಜನಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಮೊಂಟೆ ಪದವು ಸಮೀಪದ ಕೋಡಿ ಎಂಬಲ್ಲಿ ನಡೆದಿರುವುದು ವರದಿಯಾಗಿದೆ. ಮೃತ ಮಹಿಳೆಯನ್ನು ಕಾಂತಪ್ಪ ಪೂಜಾರಿ ಅವರ ಪತ್ನಿ ಪ್ರೇಮ (50) ಎಂದು ಗುರುತಿಸಲಾಗಿದೆ. ಗುರುವಾರ ತಡರಾತ್ರಿ ಈ ಘಟನೆ ನಡೆದಿದ್ದು,ಕಾಂತಪ್ಪ ಪೂಜಾರಿ ಅವರ ಕುಟುಂಬ ಮಲಗಿದ್ದ ಕೊಠಡಿಯ ಭಾಗಕ್ಕೆ ಗುಡ್ಡ ಜರಿದು ಬಿದ್ದ ಪರಿಣಾಮ ಈ ದುರಂತ ಸಂಭವಿಸಿದೆ. ಕಾಂತಪ್ಪ ಪೂಜಾರಿ ಅವರ ಕಾಲಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ನಾಲ್ವರು ಮಣ್ಣಿನಡಿಯಲ್ಲಿ ಸಿಲುಕಿಕೊಂಡಿದ್ದಾರೆ ಎಂದು ತಿಳಿದು ಬಂದಿದ್ದು, ಕಾರ್ಯಾಚರಣೆ ಮುಂದುವರಿದಿದೆ. ಮಾಹಿತಿ ಮೇರೆಗೆ ಘಟನಾ ಸ್ಥಳಕ್ಕೆ ಆಗಮಿಸಿದ ಸ್ಥಳೀಯರು, ಅಧಿಕಾರಿಗಳು ಕಾರ್ಯಾಚರಣೆ ನಡೆಸುತ್ತಿದ್ದಾರೆ. ಘಟನಾ ಸ್ಥಳಕ್ಕೆ ಎನ್ ಡಿಆರ್ ಎಫ್, ಎಸ್ ಡಿ ಆರ್ ಎಫ್ , ಉಳ್ಳಾಲ ತಾಲೂಕು ತಹಶೀಲ್ದಾರ್ ಪುಟ್ಟರಾಜು, ಕಂದಾಯ ನಿರೀಕ್ಷಕ ಪ್ರಮೋದ್ ಮತ್ತಿತರರು ಭೇಟಿ…

Read More

ಕೋಮು ಸೂಕ್ಷ್ಮವಾತಾವಾರಣ ನಿರ್ಮಾಣವಾಗಿರುವ ಬೆನ್ನಲ್ಲೇ ರಾಜ್ಯ ಸರಕಾರ ಮೇ 29 ರಂದು ದಕ್ಷಿಣ ಕನ್ನಡ ಜಿಲ್ಲೆಗೆ ಐಪಿಎಸ್ ಅಧಿಕಾರಿಗಳ ವರ್ಗಾವಣೆ ಮಾಡಿದೆ. ಮಂಗಳೂರು ನೂತನ ಪೊಲೀಸ್ ಆಯುಕ್ತರಾಗಿ ಸುಧೀರ್ ಕುಮಾರ್ ರೆಡ್ಡಿ, ದ.ಕ. ಜಿಲ್ಲಾ ಎಸ್ಪಿಯಾಗಿ ಡಾ.ಅರುಣ್ ಕೆ. ಅವರನ್ನು ನೇಮಕ ಮಾಡಿ ರಾಜ್ಯ ಸರಕಾರ ಗುರುವಾರ ಆದೇಶ ಹೊರಡಿಸಿದೆ.ಸುಧೀರ್ ಕುಮಾರ್ ರೆಡ್ಡಿ ಇದುವರೆಗೂ ಬೇಹುಗಾರಿಕಾ ಇಲಾಖೆಯ ಡಿ ಐ ಜಿ ಆಗಿದ್ದರು. ಅವರು ವರ್ಗಾವಣೆಯಾಗಿರುವ ಅನುಪಮ್ ಅಗ್ರವಾಲ್ ಅವರ ಸ್ಥಾನಕ್ಕೆ ಮಂಗಳೂರು ನಗರ ಪೊಲೀಸ್ ಕಮಿಷನ‌ರ್ ಆಗಿ ನೇಮಕಗೊಂಡಿದ್ದಾರೆ. ಉಡುಪಿ ಎಸ್ಪಿಯಾದ್ದ ಡಾ.ಅರುಣ್‌ ಕೆ. ಅವರು ವರ್ಗಾವಣೆಯಾಗಿರುವ ಯತೀಶ್ ಎನ್. ಅವರ ಸ್ಥಾನಕ್ಕೆ ದಕ್ಷಿಣ ಕನ್ನಡ ಜಿಲ್ಲಾ ಎಸ್ಪಿಯಾಗಿ ನೇಮಕಗೊಂಡಿದ್ದಾರೆ.ಉಡುಪಿ ಪೊಲೀಸ್ ವರಿಷ್ಠಾಧಿಕಾರಿಯಾಗಿರುವ ಡಾ. ಅರುಣ್ ಕೆ ಅವರನ್ನು ದಕ್ಷಿಣ ಕನ್ನಡ ಜಿಲ್ಲೆಯ ಎಸ್. ಪಿ ಯಾಗಿ ವರ್ಗಾವಣೆ ಮಾಡಲಾಗಿದೆ. ಮಂಗಳೂರು ನಗರ ಪೊಲೀಸ್ ಕಮಿಷನರ್ ಅನುಪಮ್ ಅಗರ್‌ವಾಲ್ ಹಾಗೂ ದಕ್ಷಿಣ ಕನ್ನಡ ಎಸ್ ಪಿ ಯತೀಶ್ ಅವರನ್ನು ವರ್ಗಾವಣೆ…

Read More

ಬೆಂಗಳೂರು : ದಕ್ಷಿಣ‌ ಕನ್ನಡ, ಉಡುಪಿ ಮತ್ತು ಶಿವಮೊಗ್ಗ ಜಿಲ್ಲೆಗಳನ್ನು ಸೂಕ್ಷ್ಮ‌ ಪ್ರದೇಶಗಳಾಗಿ ಪರಿಗಣಿಸಿ, ಸರ್ಕಾರ ಕ್ರಮ ತೆಗೆದುಕೊಳ್ಳಲಿದೆ ಎಂದು ಗೃಹ ಸಚಿವ ಡಾ.‌ ಜಿ.ಪರಮೇಶ್ವರ ಅವರು ಹೇಳಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಂಗಳೂರಲ್ಲಿ ನಡೆದ ಘಟನೆಗೆ ಸಂಬಂಧಿಸಿದಂತೆ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಯಾವುದೇ ಮುಲಾಜಿಲ್ಲದೇ ಕ್ರಮ ತೆಗೆದುಕೊಳ್ಳುತ್ತೇವೆ. ಪ್ರತಿಸಾರಿ ಈರೀತಿ ಆಗುತ್ತಿದ್ದರೆ ಸುಮ್ಮನೆ ಕೂರಲು ಆಗುವುದಿಲ್ಲ. ಕಾನೂನನ್ನು ಮತ್ತಷ್ಟು ಬಿಗಿ ಮಾಡುತ್ತೇವೆ ಎಂದರು. ಕಳೆದ ಬಾರಿ ಘಟನೆ ನಡೆದಾಗ ಪರಿಸ್ಥಿತಿ ಅರ್ಥೈಸಿಕೊಂಡು, ಕೋಮು ಹಿಂಸೆ ನಿಗ್ರಹ ಕಾರ್ಯಪಡೆ ರಚಿಸಲು ಪರಿಶೀಲನೆ ಮಾಡಿ, ತಕ್ಷಣ ಜಾರಿಗೆ ಬರುವ ನಿಟ್ಟಿನಲ್ಲಿ ಸರ್ಕಾರ ಆದೇಶ ಹೊರಡಿಸಿದೆ.‌ ಈ ಬಗ್ಗೆ ರಾಜ್ಯ ಪೊಲೀಸ್ ಮಹಾನಿರ್ದೇಶಕರು ಕ್ರಮ ತೆಗೆದುಕೊಳ್ಳುತ್ತಾರೆ. ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ ಜಿಲ್ಲೆಗಳನ್ನು ಸೂಕ್ಷ್ಮ ಪ್ರದೇಶಗಳಾಗಿ ಪರಿಗಣಿಸುತ್ತೇವೆ. ಕೋಮು ಹಿಂಸೆಯನ್ನು ಹತ್ತಿಕ್ಕಲು, ಸರ್ಕಾರ ಮುಲಾಜಿಲ್ಲದೆ ಕ್ರಮ ತೆಗೆದುಕೊಳ್ಳಲಿದೆ ಎಂದು‌ ತಿಳಿಸಿದರು. ನಕ್ಸಲ್ ನಿಗ್ರಹ ಕಾರ್ಯಪಡೆಯಲ್ಲಿನ ಅರ್ಧ ಸಿಬ್ಬಂದಿಗಳನ್ನು ಕೋಮು ಹಿಂಸೆ ನಿಗ್ರಹ ಪಡೆಗೆ…

Read More

ಮೂಡುಬಿದಿರೆ: ದ.ಕ.ಜಿಲ್ಲೆಯ ಮೂಡಬಿದಿರೆ ತಾಲೂಕಿನ ಬಡಗಮಿಜಾರು ಮರಕಡ ಎಂಬಲ್ಲಿ ವಿವಾಹಿತೆಯೊಬ್ಬರ ಮೃತದೇಹ ಆಕೆಯ ಪ್ರಿಯಕರನೊಂದಿಗೆ ಬಾವಿಯಲ್ಲಿ ಪತ್ತೆಯಾಗಿದೆ. ಬಡಗಮಿಜಾರು ನಿವಾಸಿ, ಎರಡು ಮಕ್ಕಳ ತಾಯಿ ನಮಿಕ್ಷಾ ಶೆಟ್ಟಿ(29) ಹಾಗೂ ಆಕೆಯ ಪ್ರಿಯಕರ ಬಾಗಲಕೋಟೆ ಮೂಲದ, ಸದ್ಯ ನಿಡ್ಡೋಡಿ ನಿವಾಸಿ ಪ್ರಶಾಂತ್ ಮೃತಪಟ್ಟವರು. ನಮೀಕ್ಷಾ ಶೆಟ್ಟಿಗೆ ವಿವಾಹವಾಗಿದ್ದು, ಇಬ್ಬರು ಪುಟ್ಟ ಗಂಡು ಮಕ್ಕಳಿದ್ದಾರೆ. ಇವರ ಪತಿ ಸತೀಶ್ ಪೂನಾದಲ್ಲಿದ್ದಾರೆ ಎನ್ನಲಾಗಿದೆ. ನಮೀಕ್ಷಾ ಶೆಟ್ಟಿ ಪತಿಯೊಂದಿಗೆ ಸಂಸಾರ ಸರಿ ಬಾರದೆ ತನ್ನ ಮಕ್ಕಳೊಂದಿಗೆ ತವರು ಮನೆ ಸೇರಿದ್ದರು‌. ಈ ನಡುವೆ, ನಮೀಕ್ಷಾ ಶೆಟ್ಟಿಗೆ ಇನ್‌ಸ್ಟಾಗ್ರಾಂ ಮೂಲಕ ಪ್ರಶಾಂತ್‌ನ ಪರಿಚಯವಾಗಿದೆ. ಪ್ರಶಾಂತ್‌ಗೆ ಮದುವೆಯಾಗಿ ವಿಚ್ಛೇದನ ಆಗಿದೆ. ಪ್ರಿಯಕರ ಪ್ರಶಾಂತ್ ಆಗಾಗ ನಮೀಕ್ಷಾ ಶೆಟ್ಟಿ ಮನೆಗೆ ಬಂದು ಹೋಗುತ್ತಿದ್ದ ಎನ್ನಲಾಗಿದೆ. ಬುಧವಾರ ಮನೆಯಲ್ಲಿ ಯಾರೂ ಇಲ್ಲದ ವೇಳೆ ಬಂದಿದ್ದು, ಈ ಸಂದರ್ಭ ಇಬ್ಬರ ನಡುವೆ ಜಗಳವಾಗಿದೆ. ಈ ವೇಳೆ ಪ್ರಶಾಂತ್ ಆಕೆಯನ್ನು ಬಾವಿಗೆ ದೂಡಿದ್ದು, ಇದನ್ನು ನಮೀಕ್ಷಾಳ ಪುತ್ರ ನೋಡಿದ್ದಾನೆ. ಇದರಿಂದ ಭೀತಿಗೊಳಗಾದ ಪ್ರಶಾಂತ್ ತಾನೂ ಬಾವಿಗೆ…

Read More

ಬಿ.ಕಾಂ ವಿದ್ಯಾರ್ಥಿನಿಯೊಬ್ಬಳು ಎದೆನೋವಿನಿಂದ ಕುಸಿದು ಬಿದ್ದು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ನಡೆದಿದೆ. ಹಾಸನ ತಾಲೂಕಿನ ಕೆಲವತ್ತಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಕವನ ಕೆವಿ (21) ಮೃತ ವಿದ್ಯಾರ್ಥಿನಿ. ಪಾಪಣ್ಣ ಹಾಗೂ ಗಾಯತ್ರಿ ದಂಪತಿಯ ಮಗಳು. ಹಾಸನ ನಗರದ ಸರ್ಕಾರಿ ಕಾಲೇಜಿನಲ್ಲಿ ಅಂತಿಮ ವರ್ಷದ ಬಿ.ಕಾಂ ಓದುತ್ತಿದ್ದ ಕವನಳಿಗೆ ನಿನ್ನೆ ಸಂಜೆ ಮನೆಗೆ ಬಂದಾಗ ತೀವ್ರ ಎದೆನೋವು ಕಾಣಿಸಿ ಕೊಂಡಿದ್ದು, ಕುಡಿಯಲು ನೀರು ಕೊಡುವಂತೆ ಕೇಳಿದ್ದಾಳೆ. ನೀರು ತರುವಷ್ಟರಲ್ಲಿ ಏಕಾಏಕಿ ಕುಸಿದು ಬಿದ್ದ ಕವನಳನ್ನು ಪೋಷಕರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಆಸ್ಪತ್ರೆಗೆ ಬರುವಷ್ಟರಲ್ಲೇ ಆಕೆ ಕೊನೆಯುಸಿರೆಳೆದಿದ್ದಳು. ಹೃದಯಾಘಾತದಿಂದ ಸಾವನ್ನಪ್ಪಿರುವುದಾಗಿ ವೈದ್ಯರು ತಿಳಿಸಿದ್ದಾರೆ.

Read More

ಮಂಗಳೂರು: ಅಬ್ದುಲ್ ರಹಿಮಾನ್ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಟ್ವಾಳ ಪೊಲೀಸರು ಮೂವರು ಆರೋಪಿಗಳನ್ನು ವಶಪಡಿಸಿಕೊಂಡಿದ್ದಾರೆ. ದೀಪಕ್ ಸೇರಿದಂತೆ ಮೂವರು ಆರೋಪಿಗಳನ್ನು ಪೊಲೀಸರು ವಶಪಡಿಸಿಕೊಂಡು ವಿಚಾರಣೆ ನಡೆಸುತ್ತಿದ್ದಾರೆ. ಕೃತ್ಯದಲ್ಲಿ ಇನ್ನೂ ಹಲವರು ಭಾಗಿಯಾಗಿರುವ ಮಾಹಿತಿಯಿದ್ದು, ಈ ಬಗ್ಗೆಯೂ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಅಬ್ದುಲ್ ರಹಿಮಾನ್ ಹತ್ಯೆ ಹಾಗೂ ಕಲಂದರ್ ಶಾಫಿ ಕೊಲೆಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ದೀಪಕ್ ಮತ್ತು ಸುಮಿತ್ ಸೇರಿ ಒಟ್ಟು 15 ಮಂದಿಯ ವಿರುದ್ಧ ಪ್ರಕರಣ ದಾಖಲಾಗಿತ್ತು. ಇದೀಗ ದೀಪಕ್ ಸೇರಿದಂತೆ ಮೂವರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.

Read More

ಮಂಗಳೂರು : ಉಳ್ಳಾಲ ತಾಲೂಕಿನ ಇರಾ ಗ್ರಾಮದ ಸರ್ವೆ ನಂಬರ್ 279/5 ರಲ್ಲಿ 1.39 ಎಕರೆ ಜಮೀನಿನ ಪೈಕಿ 0.35 ಎಕರೆ ಪ್ರದೇಶದಲ್ಲಿ ಮನೆ ಕಟ್ಟಲು ಜಾಗದಲ್ಲಿದ್ದ ಕಟ್ಟಡ ಕಲ್ಲು ತೆರವು ಮಾಡಿ ಸಮತಟ್ಟು ಮಾಡಲು ಮಂಗಳೂರು ಗಣಿ ಮತ್ತು ಭೂ ವಿಜ್ಞಾನ ಇಲಾಖೆಗೆ 28/10/2024 ರಂದು ಅರ್ಜಿ ಸಲ್ಲಿಸಿದ್ದು. ಇದಕ್ಕೆ ಉಳ್ಳಾಲ ತಹಶಿಲ್ದಾರರು 21/03/2025 ರಂದು ಪ್ರಮಾಣ ಪತ್ರ ನೀಡಿರುತ್ತಾರೆ. ಆದ್ರೆ ಗಣಿ ಇಲಾಖೆಯಲ್ಲಿ ಅನುಮತಿ ಪತ್ರ ನೀಡಿರುವುದಿಲ್ಲ . ಈ ಬಗ್ಗೆ ವಿಚಾರಿಸಲು ಗಣಿ ಇಲಾಖೆಗೆ ಹೋದಾಗ ಉಪ ನಿರ್ದೇಶಕಿ ಕೃಷ್ಣವೇಣಿಯ ಕೊಠಡಿಗೆ ಸಿಬ್ಬಂದಿ ಪ್ರದೀಪ್ ಎಂಬವರನ್ನು ಕರೆಸಿ ಫೈಲಿಗೆ ಅನುಮತಿ 50 ಸಾವಿರ ಹಣ ತೆಗೆದುಕೊಳ್ಳಿ ನಂತರ ಸಹಿ ಮಾಡುವ ಎಂದು ಲಂಚದ ಹಣಕ್ಕೆ ಬೇಡಿಕೆ ಇಟ್ಟಿದ್ದರು.ಈ ಬಗ್ಗೆ ಮಂಗಳೂರು ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ಉಪ ನಿರ್ದೇಶಕಿ ಕೃಷ್ಣವೇಣಿ ಮತ್ತು ಸಿಬ್ಬಂದಿ ಪ್ರದೀಪ್ ವಿರುದ್ಧ ದೂರುದಾರ ದೂರು ನೀಡಿದ್ದರು. ಲಂಚದ ಹಣ 50 ಸಾವಿರ ರೂಪಾಯಿ ಮಂಗಳೂರು…

Read More

ರಾಜ್ಯದ ಪೊಲೀಸ್ ಇಲಾಖೆಯಲ್ಲಿ ಸುಮಾರು 15 ಸಾವಿರ ಹುದ್ದೆಗಳು ಖಾಲಿ ಇವೆ. ಅದನ್ನು ಭರ್ತಿ ಮಾಡಲಾಗುವುದು. ಈಗಾಗಲೇ 545 ಪಿಎಸ್‌ಐಗಳು ತರಬೇತಿ ಪಡೆಯುತ್ತಿದ್ದಾರೆ. 402 ಪಿಎಸ್‌ಐ ಫಲಿತಾಂಶ ಬಾಕಿ ಇದೆ. ಶೀಘ್ರವಾಗಿ ಬಿಡುಗಡೆ ಮಾಡಲಾಗುವುದು. ಇದರಲ್ಲಿ 219 ಪಿಎಸ್‌ಐಗಳನ್ನು ಬೆಂಗಳೂರು ನಗರಕ್ಕೆ ನೀಡಲಾಗುವುದು ಎಂದು ಗೃಹ ಸಚಿವ ಡಾ.ಜಿ ಪರಮೇಶ್ವರ್ ತಿಳಿಸಿದರು. ಡ್ರಗ್ಸ್ ದಂಧೆಯನ್ನು ಹತೋಟಿಗೆ ತಂದಿದ್ದೇವೆ. ನಗರದಲ್ಲಿ ಡ್ರಗ್ಸ್ ಸಿಗುತ್ತಿದೆ ಎಂಬ ಮಾತುಗಳು ಸಾರ್ವಜನಿಕರಿಂದ ಬರುತ್ತಿವೆ. ಡ್ರಗ್ಸ್ ಚಟುವಟಿಕೆಗಳನ್ನು ಮಟ್ಟ ಹಾಕಲು ಮತ್ತಷ್ಟು‌ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ. ಇದನ್ನು ನಿರ್ಲಕ್ಷ್ಯಿಸುವ ಪೊಲೀಸ್ ಅಧಿಕಾರಿಗಳನ್ನೆ ಹೊಣೆಯನ್ನಾಗಿ ಮಾಡಲಾಗುವುದು. ಮಹಿಳೆಯರು ಮತ್ತು ಮಕ್ಕಳಾ ಸುರಕ್ಷತೆಗೆ ಸೂಕ್ತ ಕ್ರಮ ತೆಗದುಕೊಂಡಿದ್ದೇವೆ. ನಿರ್ಭಯಾ ಯೋಜನೆಯಡಿ 9 ಸಾವಿರ ಕ್ಯಾಮೆರಾಗಳನ್ನು ಅಳವಡಿಸಿದ್ದೇವೆ. ಸೇಫ್ಟಿ ಐಲ್ಯಾಂಡ್ಸ್ ಸ್ಥಾಪಿಸಲಾಗಿದೆ‌. ಬೆಂಗಳೂರು ಸೇಫ್ ಸಿಟಿ ಎಂದು ಸೇಫ್‌ ಸಿಟಿ ವರದಿ ಬಂದಿದೆ. ಬೆಂಗಳೂರು ನಗರ ಪೊಲೀಸ್ ಇಷ್ಟಕ್ಕೆ ಸಮಾದಾನ ಪಟ್ಟುಕೊಳ್ಳದೇ, ಮತ್ತಷ್ಟು ಪರಿಣಾಮಕಾರಿಯಾಗಿ ಕೆಲಸ ಮಾಡಲಿದೆ ಎಂದು ಹೇಳಿದರು. ರಾಜ್ಯದಾದ್ಯಂತ…

Read More

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಕೊಳತ್ತಮಜಲು ನಲ್ಲಿ ಅಬ್ದುಲ್ ರಹಿಮಾನ್ ಅವರ ಹತ್ಯೆ ಮಾಡಿದವರನ್ನು ಪತ್ತೆ ಹಚ್ಚಿ ಪೊಲೀಸರು ಕಾನೂನು ಕ್ರಮ ಕೈಗೊಳ್ಳಲಿದ್ದಾರೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಶಿವಮೊಗ್ಗದಲ್ಲಿ ಇಂದು ಪ್ರಕರಣ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಸಚಿವರು, ಯಾವುದೇ ಅಹಿತಕರ ಘಟನೆ ನಡೆಯದಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಲ್ಲ ರೀತಿಯ ಕಟ್ಟೆಚ್ಚರ ವಹಿಸುವಂತೆ ಸೂಚನೆ ನೀಡಲಾಗಿದೆ. ಅಬ್ದುಲ್ ಅವರ ಅಂತ್ಯಕ್ರಿಯೆ ಹಿನ್ನೆಲೆಯಲ್ಲಿ ಬಿಗಿ ಪೊಲೀಸ್ ಬಂದೂಬಸ್ತ ಮಾಡಲಾಗಿದೆ ಎಂದರು.‌ ಬಿಜೆಪಿ ಶವಗಳ ಮೇಲೆ ರಾಜಕಾರಣ ನಡೆಸುತ್ತಿದೆ ಎಂದು ಆರೋಪಿಸಿದ ಸಚಿವರು, ಪ್ರಚೋದನಾಕಾರಿ ಭಾಷಣಗಳನ್ನ ಮಾಡಿ ಸಮಾಜದಲ್ಲಿ ಕೋಮು ದ್ವೇಷವನ್ನ ಮೂಡಿಸಲಾಗುತ್ತಿದೆ. ಹತ್ಯೆ ಮಾಡುವ ಕೊಲೆಗಡುಕರ ವಿಚಾರದಲ್ಲಿ ಧರ್ಮ, ಜಾತಿ ನೋಡುವ ಪ್ರಶ್ನೆಯೇ ಇಲ್ಲ. ಮಂಗಳೂರಿನಲ್ಲಿ ನಡೆದ ಹತ್ಯೆಗಳ ವಿಚಾರದಲ್ಲಿ ನಮ್ಮ ಸರ್ಕಾರ ನಿಸ್ಪಕ್ಷಪಾತವಾದ ತನಿಖೆ ನಡೆಸಿ ಕಾನೂನು ರೀತಿ ಕ್ರಮ ಕೈಗೊಂಡಿದೆ. ಯಾವುದೇ ಭೇದ ಭಾವ ಮಾಡಿಲ್ಲ. ತಪ್ಪಿತಸ್ಥರು ಯಾರೇ ಆಗಿರಲಿ, ಎಷ್ಟೇ…

Read More