ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ನಡೆದ ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮತ್ತು ಸರ್ಕಾರ ವಿರುದ್ಧ ಮುಸ್ಲಿಂ ಮುಖಂಡರು ಆಕ್ರೋಶ ಹೊರಹಾಕುತ್ತಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಕಾಂಗ್ರೆಸ್ ನಾಯಕರ ವಿರುದ್ಧ ಮುಸ್ಲಿಂ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದು, ಸಾಮೂಹಿಕ ರಾಜೀನಾಮೆ ನೀಡುವಂತೆ ಆಗ್ರಹಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಅವರು ಜಿಲ್ಲೆಗೆ ಆಗಮಿಸಬೇಕೆಂದು ಪಟ್ಟು ಹಿಡಿದಿದ್ದಾರೆ. ಇನ್ನು, ಪ್ರಕರಣ ಸಂಬಂಧ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಮೊಹಮ್ಮದ್ ನಿಸಾರ್ ಎಂಬುವರು ನೀಡಿದ ದೂರು ಆಧರಿಸಿ, ಅಬ್ದುಲ್ ರಹಿಮಾನ್ಗೆ ಪರಿಚಯಸ್ಥರೇ ಆಗಿರುವ ದೀಪಕ್ ಮತ್ತು ಸುಮಿತ್ ಸೇರಿದಂತೆ 15 ಜನರ ವಿರುದ್ಧ ಬಿಎನ್ಎಸ್ ಕಾಯ್ದೆ 103, 109, 118(1), 118(2), 190, 191(1), 191(2), 191(3)ರ ಅಡಿ ಎಫ್ಐಆರ್ ದಾಖಲಾಗಿದೆ. “ಅಬ್ದುಲ್ ರಹಿಮಾನ್ ಮತ್ತು ನಾನು (ಕಲಂದರ್ ಶಾಫಿ) ಪಿಕ್ ಅಪ್ ವಾಹನದಲ್ಲಿನ ಮರಳನ್ನು ಅನ್ ಲೋಡ್ ಮಾಡಲು ಕುರಿಯಾಳ ಗ್ರಾಮದ ಈರಾ ಕೋಡಿಯ ರಾಜೀವಿ…
Author: main-admin
ಮಂಗಳೂರು : ಕಳೆದ ಕೆಲವು ದಿನಗಳ ಹಿಂದೆ ರೌಡಿಶೀಟರ್ ಹಾಗೂ ಹಿಂದೂ ಕಾರ್ಯಕರ್ತ ಸುಹಾಸ ಶೆಟ್ಟಿ ಭೀಕರ ಕೊಲೆ ನಡೆದಿತ್ತು. ಈ ಒಂದು ಘಟನೆ ಮಾಸುವ ಮುನ್ನವೇ ಇದೀಗ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನಲ್ಲಿ ಯುವಕನೋರ್ವವನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಹೌದು ಯುವಕನ ಹತ್ಯೆಯ ಬಳಿಕ ಜಿಲ್ಲೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆದಂತೆ ಮುನ್ನೆಚ್ಚರಿಕ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮೂರು ದಿನಗಳ ಕಾಲ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮೇ 27ರ ಸಂಜೆ 6 ಗಂಟೆಯಿಂದ ಮೇ 30ರ ಸಂಜೆ 6ರವರೆಗೆ ನಿಷೇಧಾಜ್ಞೆ ಜಾರಿ ಮಾಡಿ ಆದೇಶ ಹೊರಡಿಸಲಾಗಿದೆ. ಬಂಟ್ವಾಳ ತಾಲೂಕಿನ ಕುರಿಯಾಳ ಸಮೀಪದ ಇರಾಕೋಡಿ ಎಂಬಲ್ಲಿ ಇಬ್ಬರು ಮುಸ್ಲಿಂ ಯುವಕರ ಮೇಲೆ ಮಂಗಳವಾರ (ಮೇ 27) ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ದಾಳಿ ನಡೆಸಿದ್ದರು. ಪರಿಣಾಮ ಕೊಳತ್ತಮಜಲು ನಿವಾಸಿ ರಹೀಮ್ ಸ್ಥಳದಲ್ಲೇ ಮೃತಪಟ್ಟಿದ್ದು, ಇನ್ನೋರ್ವ ಗಾಯಾಳು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಪ್ರಾಣಾಪಾಯದಿಂದ…
ಬಂಟ್ವಾಳ: ತಾಲೂಕಿನ ಕುರಿಯಾಳ ಗ್ರಾಮದ ಈರಾಕೋಡಿ ಎಂಬಲ್ಲಿ ಕೊಳತ್ತಮಜಲು ಜುಮ್ಮಾ ಮಸೀದಿ ಕಾರ್ಯದರ್ಶಿ ಹಾಗೂ ಪಿಕಪ್ ಚಾಲಕ ಅಬ್ದುಲ್ ರಹಿಮಾನ್ (32) ಹತ್ಯೆ ಮತ್ತು ಕಲಂದರ್ ಶಾಫಿ ಎಂಬವರ ಮೇಲಿನ ಕೊಲೆಯತ್ನ ಪ್ರಕರಣ ಸಂಬಂಧ ಸ್ಥಳೀಯ ಇಬ್ಬರು ಸೇರಿ 15 ಮಂದಿಯ ವಿರುದ್ಧ ಬಂಟ್ವಾಳ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಬ್ದುಲ್ ರಹಿಮಾನ್ ಅವರ ಕೊಲೆ ಮತ್ತು ಕಲಂದರ್ ಶಾಫಿ ಕೊಲೆಯತ್ನ ಪ್ರಕರಣದಲ್ಲಿ ದೀಪಕ್ ಮತ್ತು ಸುಮಿತ್ ಸೇರಿ ಒಟ್ಟು 15 ಮಂದಿಯ ವಿರುದ್ಧ ಪ್ರಕರಣ ದಾಖಲಾಗಿದೆ. ದೀಪಕ್ ಮತ್ತು ಸುಮಿತ್ ಕೊಲೆಯಾದ ಅಬ್ದುಲ್ ರಹಿಮಾನ್ ಮತ್ತು ಕಲಂದರ್ ಶಾಫಿ ಅವರಿಗೆ ಪರಿಚಯಸ್ಥರೇ ಆಗಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಅಬ್ದುಲ್ ರಹಿಮಾನ್ ಮತ್ತು ಕಲಂದರ್ ಶಾಫಿ ಹೊಳೆಯಿಂದ ಪಿಕ್ ಅಪ್ ವಾಹನದಲ್ಲಿ ಮರಳು ಲೋಡ್ ಮಾಡಿ ಕುರಿಯಾಳ ಗ್ರಾಮದ ಈರಾ ಕೋಡಿಯ ರಾಜೀವಿ ಎಂಬವರ ಮನೆ ಬಳಿ ಇಳಿಸುವ ಸಮಯ ಪರಿಚಯಸ್ಥರಾದ ದೀಪಕ್, ಸುಮಿತ್ ಮತ್ತು 15 ಮಂದಿ ಏಕಾಏಕಿ…
ಬಂಟ್ವಾಳ: ಬೈಕ್ ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳಿಂದ ಪಿಕಪ್ ಚಾಲಕನನ್ನು ಬರ್ಬರವಾಗಿ ಕೊಚ್ಚಿ ಕೊಲೆ ಮಾಡಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕುರಿಯಾಳ ಸಮೀಪದ ಕಾಂಬೋಡಿಯ ಇರಾಕೋಡಿ ಎಂಬಲ್ಲಿ ಇಂದು ನಡೆದಿದೆ. ಕೊಳತ್ತಮಜಲು ನಿವಾಸಿ ರಹೀಮ್ ಎಂಬಾತ ಕೊಲೆಗೀಡಾದವರು ಎಂದು ಪೊಲೀಸರು ತಿಳಿಸಿದ್ದಾರೆ. ಈತ ಇರಾಕೋಡಿ ಎಂಬಲ್ಲಿ ಮರಳು ಅನ್ ಲೋಡ್ ಮಾಡುತ್ತಿದ್ದ ವೇಳೆ ಬೈಕಿನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಕಡಿದು ಪರಾರಿಯಾಗಿದ್ದಾರೆ. ರಹೀಮ್ ಜೊತೆ ಇನ್ನೊಬ್ಬ ಕೂಡ ಇದ್ದು, ಆತನಿಗೂ ಕಡಿಯಲಾಗಿದೆ. ಆದರೆ ಆತನಿಗೆ ಕೈಗೆ ಗಾಯ ವಾಗಿದ್ದು ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಬಂಟ್ವಾಳ ಗ್ರಾಮಾಂತರ ಪೋಲೀಸರು ಭೇಟಿ ನೀಡಿದ್ದಾರೆ.
ಪುತ್ತೂರು: ಖಾಸಗಿ ಬಸ್ಸೊಂದು ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಮಗು ಸೇರಿ ಮೂವರು ಗಂಭೀರವಾಗಿ ಗಾಯಗೊಂಡ ಘಟನೆ ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯ ಪುತ್ತೂರು ಹೊರವಲಯದ ಮುರ ಜಂಕ್ಷನ್ ಸಮೀಪ ಸಂಭವಿಸಿದೆ. ಗಾಯಾಳುಗಳನ್ನು ಅಂಡೆಪುನಿ ನಿವಾಸಿ ಈಶ್ವರ್ ಭಟ್, ಅವರ ಮಗಳು ಅಪೂರ್ವ ಹಾಗೂ ಮೊಮ್ಮಗು ಎಂದು ತಿಳಿದು ಬಂದಿದೆ. ಮಾಹಿತಿಯ ಪ್ರಕಾರ ಈಶ್ವರ್ ಭಟ್ ಅಂಡೆಪುನಿ ಅವರ ಮನೆಯಲ್ಲಿ ಇಂದು ಶ್ರಾದ್ಧ ಕಾರ್ಯಕ್ರಮದ ಹಿನ್ನೆಲೆ ಭಾಗವಹಿಸಲು ಅವರ ಮಗಳು ಅಪೂರ್ವ ಹಾಗೂ ಮೊಮ್ಮಗಳು ಬೆಂಗಳೂರಿನಿಂದ ಪುತ್ತೂರಿಗೆ ಆಗಮಿಸಿದ್ದರು. ಈಶ್ವರ್ ಭಟ್ ಅವರು ಪುತ್ತೂರು ಪೇಟೆಯಿಂದ ಇವರನ್ನು ತಮ್ಮ ಕಾರಿನಲ್ಲಿ ಮನೆಗೆ ಕರೆತರುತ್ತಿದ್ದ ವೇಳೆ, ಮುರ ಜಂಕ್ಷನ್ ಬಳಿ ಪಡೂರಿಗೆ ತೆರಳುವ ಒಳರಸ್ತೆಗೆ ಕಾರನ್ನು ತಿರುಗಿಸುತ್ತಿದ್ದರು. ಈ ಸಂದರ್ಭದಲ್ಲಿ ಪುತ್ತೂರಿನಿಂದ ಮಂಗಳೂರಿನತ್ತ ವೇಗವಾಗಿ ಚಲಿಸುತ್ತಿದ್ದ ಖಾಸಗಿ ಬಸ್, ಕಾರಿಗೆ ರಭಸವಾಗಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಕಾರು ಹಲವು ಮೀಟರ್ ದೂರಕ್ಕೆ ಎಸೆಯಲ್ಪಟ್ಟಿದೆ ಎಂದು ತಿಳಿದುಬಂದಿದೆ. ಅಪಘಾತ ನಡೆದ ಕೂಡಲೇ ಸ್ಥಳೀಯರು…
ಮಂಗಳೂರು: ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಬೃಹತ್ ಮಾವಿನ ಮರವೊಂದು ನಿಲ್ಲಿಸಿದ್ದ ಕಾರಿನ ಮೇಲೆ ಬಿದ್ದ ಘಟನೆ ಕಡಬ ತಾಲೂಕಿನ ರಾಮಕುಂಜದಲ್ಲಿ ನಡೆದಿದೆ. ಅಬ್ದುಲ್ ಸಲೀಂ ಎಂಬವರು ರಾಮಕುಂಜದ ರಸ್ತೆ ಬದಿ ತನ್ನ ಮಾರುತಿ 800 ಕಾರನ್ನು ನಿಲ್ಲಿಸಿ ಹೊರ ಹೋಗಿದ್ದರು. ಕಾರಿನಲ್ಲಿ ರಹಿಮಾನ್, ಅಬ್ಬಾಸ್ ಹಾಗೂ ರಮ್ಲಾನ್ ಕುಳಿತಿದ್ದರು. ಈ ವೇಳೆ ಮರ ಬೀಳುವ ಶಬ್ದ ಕೇಳಿ ಮೂವರು ಕಾರಿನಿಂದ ಇಳಿದು ದೂರ ಹೋಗಿದ್ದಾರೆ. ಅಷ್ಟರಲ್ಲೇ ಮಾವಿನ ಮರ ಕಾರಿನ ಮೇಲೆ ಬಿದ್ದಿದೆ. ಕಾರು ಸಂಪೂರ್ಣ ಜಖಂಗೊಂಡು ಹಾನಿಯಾಗಿದೆ. ಅದೃಷ್ಟವಶಾತ್ ಕಾರಿನಲ್ಲಿದ್ದ ನಾಲ್ವರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ
ಬೆಂಗಳೂರು : ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೋನಾ ಸೋಂಕು ಪ್ರಕರಣ ಹೆಚ್ಚಾಗುತ್ತಿವೆ. ಈ ಹಿನ್ನೆಲೆಯಲ್ಲಿ ಎಂತಹುದೇ ಪರಿಸ್ಥಿತಿ ಬಂದರೂ ಎದುರಿಸಲು ಸರ್ವ ಸನ್ನದ್ದ ವಾಗಿರಬೇಕು. ವೆಂಟಿಲೇ ಟರ್, ಆಕಿಜನ್, ಔಷಧ ಸೇರಿದಂತೆ ಅಗತ್ಯವಿರುವ ಎಲ್ಲವನ್ನೂ ಸಿದ್ದಪಡಿಸಿಕೊ ಳ್ಳಬೇಕು ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ವಯಸಾದವರು, ಗರ್ಭಿಣಿಯರು, ಹೃದಯ ಸಂಬಂಧಿ, ಶ್ವಾಸಕೋಶ ಸಮಸ್ಯೆ ಇರುವವರು ಮುನ್ನೆಚ್ಚರಿಕೆ ಕ್ರಮವಾಗಿ ಮಾಸ್ಕ್ ಧರಿಸುವುದು ಒಳ್ಳೆಯದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರು ಕೋವಿಡ್ ಪರಿಸ್ಥಿತಿ ಅವಲೋಕಿಸಲು ಆರೋಗ್ಯ ಇಲಾಖೆ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆ ಸಚಿವರು ಮತ್ತು ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಮಾಹಿತಿ ಪಡೆದು ಪರಿಸ್ಥಿತಿ ನಿರ್ವಹಣೆಯ ಸಂಬಂಧ ಈ ಕೆಳಗಿನ ಸೂಚನೆಗಳನ್ನು ನೀಡಿದ್ದಾರೆ. ಸದ್ಯಕ್ಕೆ ಕೊರೊನಾ ಬಗ್ಗೆ ಆತಂಕ ಪಡುವ ಅಗತ್ಯವಿಲ್ಲ. ಆದರೆ, ಮುಂಚಿತವಾಗಿಯೇ ಮುಂದೆ ಸಂಭವಿಸಬಹುದಾದ ಪರಿಸ್ಥಿತಿಯನ್ನು ಅವಲೋಕಿಸಿ ಅಗತ್ಯವಾದ ಎಲ್ಲಾ ಸವಲತ್ತು, ಸಲಕರಣೆಗಳನ್ನು ಸಜ್ಜುಗೊಳಿಸಿಟ್ಟುಕೊಳ್ಳಬೇಕು. ಸದ್ಯಕ್ಕೆ ಗಂಭೀರ ಪರಿಸ್ಥಿತಿಗೆ ತಲುಪಿಲ್ಲವಾದರೂ ವೆಂಟಿಲೇಟರ್, ಆಕ್ಸಿಜನ್,…
ಮಂಗಳೂರು: ಜೂನ್ 1 ರಂದು ಮಂಗಳೂರಿನಲ್ಲಿ ನಡೆಯುವ ಒಂದು ದಿನದ ಯಕ್ಷಧ್ರುವ ಪಟ್ಲ ದಶಮ ಸಂಭ್ರಮ 2025 ಮತ್ತು ರಾಷ್ಟ್ರೀಯ ಕಲಾ ಸಮ್ಮೇಳನವನ್ನು ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್ ತಂಗಡಗಿ ಅವರು ಉದ್ಘಾಟಿಸಲಿದ್ದಾರೆ. ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್(YPFT)ಆಯೋಜಿಸಿರುವ ಈ ಕಾರ್ಯಕ್ರಮ, ಜೂನ್ 1 ರಂದು ಬೆಳಗ್ಗೆ 9.30 ರಿಂದ ರಾತ್ರಿ 11 ರವರೆಗೆ ದಿನವಿಡೀ ನಡೆಯಲಿದೆ. ಕಾರ್ಯಕ್ರಮದಲ್ಲಿ ಕಲಾ ಪ್ರದರ್ಶನಗಳು ಮತ್ತು ಸಾಂಸ್ಕೃತಿಕ ಪ್ರದರ್ಶನಗಳು ನಡೆಯಲಿವೆ. ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ YPFTಯ ಸತೀಶ್ ಶೆಟ್ಟಿ ಅವರು, ವಿವಿಧ ಕ್ಷೇತ್ರಗಳಲ್ಲಿನ ಸಾಧಕರನ್ನು ಈ ಕಾರ್ಯಕ್ರಮದಲ್ಲಿ ಸನ್ಮಾನಿಸಲಾಗುವುದು ಎಂದು ತಿಳಿಸಿದರು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಎಂ. ಮೋಹನ್ ಆಳ್ವ ಅವರ ಸಮನ್ವಯದಲ್ಲಿ, ಈ ಕಾರ್ಯಕ್ರಮದಲ್ಲಿ ಯಕ್ಷಗಾನ ಮತ್ತು ಸಾಂಪ್ರದಾಯಿಕ ಕಲಾ ಛಾಯಾಗ್ರಹಣ ಪ್ರದರ್ಶನದ ಜೊತೆಗೆ ಎಂಟು ಭಾರತೀಯ ಶಾಸ್ತ್ರೀಯ ಕಲಾ ಪ್ರಕಾರಗಳನ್ನು ಪ್ರದರ್ಶಿಸಲಾಗುವುದು ಎಂದರು. ಅಂದು ಮಧ್ಯಾಹ್ನ 1 ಗಂಟೆಗೆ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಅವರನ್ನು ಸನ್ಮಾನಿಸಲಾಗುವುದು…
ಬೆಂಗಳೂರು : ಅಬಕಾರಿ ಸನ್ನದುಗಳ ನವೀಕರಣ ಶುಲ್ಕವನ್ನು ಭಾರಿ ಪ್ರಮಾಣದಲ್ಲಿ ಹೆಚ್ಚಳ ಮಾಡಲು ಮುಂದಾಗಿರುವ ಸರ್ಕಾರದ ಪ್ರಸ್ತಾವ ವಿರೋಧಿಸಿ ಮದ್ಯ ಮಾರಾಟಗಾರರು ಮೇ. 29 ರಿಂದ ಕರ್ನಾಟಕದಾದ್ಯಂತ ಮದ್ಯದಂಗಂಡಿ ಬಂದ್ ಮಾಡಲು ರಾಜ್ಯದ ಮದ್ಯ ಮಾರಾಟಗಾರರು ತೀರ್ಮಾನ ಮಾಡಿದ್ದಾರೆ. ರಾಜ್ಯ ಸರ್ಕಾರವು ಮೂರು ಬಾರಿ ಮದ್ಯದ ದರ ಏರಿಕೆ ಮಾಡಿದೆ. ಇದರಿಂದ ಹಿಂದಿನ ರೀತಿಯಲ್ಲಿ ಮದ್ಯ ಮಾರಾಟ ಆಗುತ್ತಿಲ್ಲ. ಇದೇ ಸಂದರ್ಭದಲ್ಲಿ ಮದ್ಯ ಮಾರಾಟಗಾರರ ಲೈಸೆನ್ಸ್ ಶುಲ್ಕ ದುಪ್ಪಟ್ಟು ಏರಿಕೆ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ, ಮದ್ಯ ಮಾರಾಟಗಾರರ ಸಂಘ ಸಭೆ ಕರೆದು ಸಮಾಲೋಚನೆ ನಡೆಸಿದೆ. ಮದ್ಯ ಮಾರಾಟಗಾರರು ಈ ತಿಂಗಳು 29 ರಿಂದ ಬಾರ್ ಆ್ಯಂಡ್ ರೆಸ್ಟೋರೆಂಟ್, ವೈನ್ ಸ್ಟೋರ್ ಕ್ಲೋಸ್ ಮಾಡಲು ತೀರ್ಮಾನ ಮಾಡಿದ್ದಾರೆ ಎಂದು ರಾಜ್ಯ ಮದ್ಯ ಮಾರಾಟಗಾರರ ಸಂಘದ ಉಪಾಧ್ಯಕ್ಷ ಕರುಣಾಕರ್ ಹೆಗ್ಡೆ ತಿಳಿಸಿದ್ದಾರೆ. ರಾಜ್ಯದಲ್ಲಿ ಜುಲೈನಿಂದ ಅಬಕಾರಿ ವರ್ಷ ಆರಂಭವಾಗಲಿದ್ದು, ಆಗ ರಾಜ್ಯದ ಎಲ್ಲಾ 13 ಸಾವಿರಕ್ಕೂ ಅಧಿಕ ಅಬಕಾರಿ ಸನ್ನದುದಾರರು ತಮ್ಮ ಲೈಸೆನ್ಸ್ ನವೀಕರಿಸಿಕೊಳ್ಳಬೇಕಿದೆ.…
ಮಂಗಳೂರಿನಲ್ಲಿ ನಿರಂತರವಾಗಿ ಧಾರಾಕಾರ ಮಳೆ ಸುರಿಯುತ್ತಿದ್ದು ಪಂಪ್ವೆಲ್ ಸೇತುವೆಯ ಕೆಳಭಾಗ ಸಂಪೂರ್ಣವಾಗಿ ಜಲಾವೃತಗೊಂಡಿದೆ. ಇದರಿಂದ ವಾಹನ ಸವಾರರು ಸಂಚರಿಸಲು ಪರದಾಡುತ್ತಿದ್ದಾರೆ. ಇಲ್ಲಿ ಪ್ರವಾಹ ಪರಿಸ್ಥಿತಿ ಎದುರಾದ ಹಿನ್ನೆಲೆ ವಾಹನ ಸಂಚಾರ ಅಸ್ತವ್ಯಸ್ತಗೊಂಡಿದೆ. ರಾಜಕಾಲುವೆಯಲ್ಲಿ ಅಧಿಕ ಪ್ರಮಾಣದಲ್ಲಿ ನೀರು ತುಂಬಿ ಹರಿಯುತ್ತಿದೆ. ಇದೀಗ ನಿರಂತರವಾಗಿ ಮಳೆ ನೀರು ಹರಿಯುತ್ತಿದ್ದು ಮುಂದೆ ಸಾರ್ವಜನಿಕರು ಯಾವ ರೀತಿಯ ಪರಿಸ್ಥಿತಿಯನ್ನು ಎದುರಿಸಬೇಕಾಗಿ ಬರುತ್ತದೋ ಎಂಬ ಆತಂಕ ಕೂಡಾ ಸೃಷ್ಟಿಯಾಗಿದೆ. ಇಲ್ಲಿ ದಿನನಿತ್ಯ ಟ್ರಾಫಿಕ್ ಜಾಂ ಸಮಸ್ಯೆ ಕೂಡಾ ಕಂಡುಬರುತ್ತಿದೆ.









