Author: main-admin

ಉಡುಪಿ : ಸಣ್ಣ ಪುಟ್ಟ ಭಿನ್ನಾಬಿಪ್ರಾಯದಿಂದ ವಿಚ್ಚೇದನಕ್ಕಾಗಿ ನ್ಯಾಯಾಲಯದ ಮೆಟ್ಟಿಲೇರುವ ಪ್ರಕರಣಗಳು ಇತ್ತೀಚಿನ ದಿನಗಳಲ್ಲಿ ಹೆಚ್ಚಾಗುತ್ತಿದೆ. ಮದುವೆಯಾಗಿ ಹೊಂದಾಣಿಕೆಯ ಬಾಳು ಬದುಕಬೇಕಾದ ಅನೇಕರು ಈ ರೀತಿ ವಿಚ್ಛೇದನಕ್ಕಾಗಿ ನ್ಯಾಯಾಲಯ ಅಲೆದಾಡುತ್ತಿದ್ದಾರೆ. ಈ ರೀತಿ ಉಡುಪಿಯ ಕೌಟುಂಬಿಕ ನ್ಯಾಯಾಲಯಕ್ಕೆ ಅಲೆದಾಡುತ್ತಿದ್ದ ಮೂರು ಜೋಡಿಯನ್ನು ರಾಷ್ಟ್ರೀಯ ಲೋಕ ಅದಾಲತ್ ನಲ್ಲಿ ಮತ್ತೆ ಒಂದು ಮಾಡಲಾಗಿದೆ. ಇದೊಂದು ಅಪರೂಪದ ಕ್ಷಣವಾಗಿದ್ದು, ನ್ಯಾಯಾದೀಶರುಗಳು ಈ ಜೋಡಿಗಳ ಮನ ಒಲಿಸಿ ಮತ್ತೆ ಒಂದಾಗಿ ಬಾಳುವಂತೆ ಮಾಡಿದ್ದಾರೆ. ಉಡುಪಿಯಲ್ಲಿ ಶನಿವಾರ ನಡೆದ ರಾಷ್ಟ್ರೀಯ ಲೋಕ ಅದಾಲತ್ನಲ್ಲಿ, ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಕಿರಣ್ ಎಸ್. ಗಂಗಣ್ಣವರ್, ಕೌಟುಂಬಿಕ ನ್ಯಾಯಾಲಯದ ನ್ಯಾಯಾಧೀಶ ಶ್ರೀನಿವಾಸ ಸುವರ್ಣ , ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಯೋಗೇಶ್ ಪಿ.ಆರ್ ಅವರ ನೇತೃತ್ವದಲ್ಲಿ ಜೋಡಿಗಳು ಮತ್ತೆ ಒಂದಾಗಿದ್ದಾರೆ. ಒಂದು ಜೋಡಿ 2011 ರಲ್ಲಿ ಬೇರೆಯಾಗಿದ್ದರೆ, ಮತ್ತೊಂದು ಜೋಡಿ 2019 ರಲ್ಲಿ ಹಾಗೂ ಇನ್ನೊಂದು ಜೋಡಿ 2021 ರಲ್ಲಿ ವಿಚ್ಛೇದನಕ್ಕಾಗಿ ಕೋರ್ಟ್ ಮೆಟ್ಟಿಲೇರಿದ್ದರು. ಈ ಮೂರು ಜೋಡಿಗಳ…

Read More

ಮಂಗಳೂರು: ವಿಳಾಸ ಕೇಳುವ ನೆಪದಲ್ಲಿ ಮಹಿಳೆಯೋರ್ವರ ಕತ್ತಿನಲ್ಲಿದ್ದ ಚಿನ್ನದ ಸರವನ್ನು ಬೈಕ್‌ನಲ್ಲಿ ಬಂದ ಇಬ್ಬರು ಎಗರಿಸಿ ಪರಾರಿಯಾಗಿರುವ ಘಟನೆ ಎಡಪದವು ಗ್ರಾಮ ಪಂಚಾಯತ್ ಬಳಿ ನಡೆದಿದೆ. ಎಡಪದವು ನಿವಾಸಿ ಅನುಸೂಯ ಕಾಜವ ಎಂಬವರು ಎಡಪದವು ಗ್ರಾಮ ಪಂಚಾಯತ್ ಬಳಿಯ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದರು‌. ಈ ವೇಳೆ ಹೆಲ್ಮೆಟ್ ಧರಿಸಿಕೊಂಡು ಬೈಕ್‌ನಲ್ಲಿ ಬಂದವರಿಬ್ಬರು ಅನುಸೂಯರಲ್ಲಿ ವಿಳಾಸವೊಂದನ್ನು ಕೇಳುವ ನೆಪದಲ್ಲಿ ಅವರ ಕತ್ತಿನಲ್ಲಿದ್ದ ಸುಮಾರು 2 ಪವನ್‌ ಚಿನ್ನದ ಸರವನ್ನು ಎಗರಿಸಿ ಪರಾರಿಯಾಗಿದ್ದಾರೆ. ಈ ಕುರಿತು ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.

Read More

ಮಂಗಳೂರು: ಗಂಡುಕಲೆ ಯಕ್ಷಗಾನ ರಂಗದ ಮೊದಲ ಮಹಿಳಾ ವೃತ್ತಿಪರ ಭಾಗವತರಾಗಿ ಗುರುತಿಸಿಕೊಂಡಿದ್ದ ಲೀಲಾವತಿ ಬೈಪಡಿತ್ತಾಯ ಅವರು ನಿಧನರಾಗಿದ್ದಾರೆ. ಕೇರಳದ ಕಾಸರಗೋಡಿನ ಮಧೂರಿನಲ್ಲಿ ಜನಿಸಿದ ಲೀಲಾವತಿ ಅವರು ಹಿರಿಯ ಹಿಮ್ಮೇಳವಾದಕ ಹರಿನಾರಾಯಣ ಬೈಪಡಿತ್ತಾಯರ ಪತ್ನಿ. ಲೀಲಾವತಿ ಬೈಪಾಡಿತ್ತಾಯ ಅವರು ಸುಮಾರು ನಾಲ್ಕು ದಶಕಗಳ ಕಾಲ ಭಾಗವತರಾಗಿ ಮನೆಮಾತಾಗಿದ್ದರು. ಇವರ ಸಾಧನೆಯನ್ನು ಗುರುತಿಸಿ ರಾಜ್ಯ ಸರಕಾರ 2010ನೇ ಸಾಲಿನ ಕರ್ನಾಟಕ ಯಕ್ಷಗಾನ ಬಯಲಾಟ ಅಕಾಡೆಮಿ ಪ್ರಶಸ್ತಿ ನೀಡಿ ಗೌರವಿಸಿದೆ. 2012ರಲ್ಲಿ ಕರ್ನಾಟಕ ಸರಕಾರದ ಸಾಧಕ ಹಿರಿಯ ನಾಗರಿಕರು ಪ್ರಶಸ್ತಿಗೂ ಭಾಜನರಾಗಿದ್ದಾರೆ. ಪತಿಯೊಂದಿಗೆ ಧರ್ಮಸ್ಥಳದ ಪ್ರಖ್ಯಾತ ಯಕ್ಷಗಾನ ತರಬೇತಿ ಕೇಂದ್ರದಲ್ಲಿ ಹತ್ತು ವರ್ಷ ಹಾಗೂ ಕಟೀಲು, ಮೂಡುಬಿದಿರೆ, ಬಜಪೆ ಮುಂತಾದೆಡೆ ಭಾಗವತಿಕೆ ಗುರುಗಳಾಗಿ ಸೇವೆ ಸಲ್ಲಿಸಿದ್ದಾರೆ. ಕಟೀಲು, ಮೂಡುಬಿದಿರೆ ಹಾಗೂ ತಮ್ಮದೇ ಮನೆಯಲ್ಲಿ ಹಲವು ಮಂದಿಗೆ ಭಾಗವತಿಕೆ ಹೇಳಿಕೊಟ್ಟಿದ್ದಾರೆ. ಯಕ್ಷಗಾನ ರಂಗದ ಪ್ರಥಮ ವೃತ್ತಿಪರ ಯಕ್ಷಗಾನ ಭಾಗವತೆ ಎಂಬ ಖ್ಯಾತಿ ಅವರದ್ದಾಗಿತ್ತು.ಕುಂಬಳೆ, ಬಪ್ಪನಾಡು, ಸುಬ್ರಹ್ಮಣ್ಯ, ಧರ್ಮಸ್ಥಳ, ತಲಕಳ ಮೇಳಗಳಲ್ಲಿಯೂ ಭಾಗವತಿಕೆ ಮಾಡಿದ್ದರು.

Read More

ಕಾರ್ಕಳ: ಟೂರಿಸ್ಟ್ (ಟಿಟಿ) ವಾಹನವೊಂದು ಹೊತ್ತಿ ಉರಿದ ಘಟನೆ ಪಶ್ಚಿಮ ಘಟ್ಟದ ಕುದುರೆಮುಖದಲ್ಲಿ ನಡೆದಿದೆ. ಉಡುಪಿಯಿಂದ ಮಾಳ ಮಾರ್ಗವಾಗಿ ಕುದುರೆಮುಖ ಮೂಲಕ ಕಳಸ ಕಡೆಗೆ ತೆರಳುತ್ತಿದ್ದ ಹನ್ನೊಂದು ಮಂದಿ ಇದ್ದ ಟೂರಿಸ್ಟ್ ವಾಹನದಲ್ಲಿ ಬೆಂಕಿ, ಹೊಗೆ ಕಾಣಿಸಿಕೊಂಡಿದ್ದು ನೋಡ ನೋಡುತ್ತಿದ್ದಂತೆ ಬೆಂಕಿ ವಾಹನದ ತುಂಬಾ ವ್ಯಾಪಿಸಿದೆ. ಚಾಲಕ ಸಹಿತ ವಾಹನದೊಳಗಿದ್ದವರು ಆತಂಕದಿಂದ ತಕ್ಷಣ ಹೊರ ಬಂದಿದ್ದಾರೆ. ಕೆಲವೇ ನಿಮಿಷಗಳಲ್ಲಿ ಅಗ್ನಿ ಜ್ವಾಲೆಗೆ ವಾಹನ ಸಂಪೂರ್ಣ ಸುಟ್ಟು ಹೋಗಿದೆ. ಅದೃಷ್ಟವಶಾತ್ ಪ್ರಾಣಹಾನಿ ಸಂಭವಿಸಿಲ್ಲ.ಕಾರ್ಕಳ ಅಗ್ನಿಶಾಮಕ ಠಾಣೆ ತಂಡವು ಸ್ಥಳಕ್ಕೆ ಭೇಟಿ ನೀಡಿ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಂದಿಸಿದ್ದಾರೆ. ಟೂರಿಸ್ಟ್ ವಾಹನದ ಪ್ರಯಾಣಿಕರಿಗೆ ಬೇರೆ ವ್ಯವಸ್ಥೆ ಮಾಡಿಸಿ ಸುರಕ್ಷಿತವಾಗಿ ಕಳುಹಿಸಿಕೊಡಲಾಗಿದೆ.ಕಾರ್ಕಳ ಅಗ್ನಿ ಶಾಮಕದಳ ಠಾಣಾಧಿಕಾರಿ ಆಲ್ಬರ್ಟ್ ಮೋನಿಸ್, ಸಹಾಯಕ ಠಾಣಾಧಿಕಾರಿ ಚಂದ್ರಶೇಖರ್, ಪ್ರಮುಖರಾದ ನಿತ್ಯಾನಂದ, ಜಯ, ಮುಜಾಂಬಿಲ್ ಕಾರ್ಯಾಚರಣೆ ತಂಡದಲ್ಲಿದ್ದರು.

Read More

ಬಂಟ್ವಾಳದ ಬಿ.ಮೂಡ ಗ್ರಾಮದಲ್ಲಿ ಕಾಂಗ್ರೆಸ್ ಪುರಸಭೆ ಸದಸ್ಯನ ಪಟಾಲಂ ನಿಂದ ಗೂಂಡಗಿರಿ ನಡೆದಿದೆ. ಪುರಸಭೆ ಸದಸ್ಯ, ರೌಡಿಶೀಟರ್ ಆಗಿರೊ ಅಸೈನರ್ ತಂಡದಿಂದ ದಾಂಧಲೆ. ಗರ್ಭಿಣಿ ಮಹಿಳೆ ಇದ್ದ ಮನೆಗೆ ನುಗ್ಗಿ ಪುರುಷರ ಮೇಲೆ ಹಲ್ಲೆ ಮಾಡಲಾಗಿದೆ ಮನೆ ಬಾಡಿಗೆ ವ್ಯಾಜ್ಯ ಸಂಬಂಧ ಮಧ್ಯರಾತ್ರಿ ಹಲ್ಲೆ ನಡೆದಿದ್ದು, ಸಾಹುಲ್ ಹಮೀದ್ ಎಂಬುವವರ ಮನೆಗೆ ಮಧ್ಯರಾತ್ರಿ ನುಗ್ಗಿ ಅಸೈನರ್ ಹಲ್ಲೆಮಾಡಿದ್ದಾನೆ. ಈ ವೇಳೆ 112ಗೆ ಕರೆ ಮಾಡಿದ್ದು, ಇದರಿಂದ ಪೊಲೀಸರು ಬಂದಿದ್ದರಿಂದ ಅನಾಹುತ ತಪ್ಪಿದೆ. ಹಲ್ಲೆಯಿಂದ ಕೆಲವರಿಗೆ ಗಾಯಗಳಾಗಿದ್ದು, ಬಂಟ್ವಾಳ ಟೌನ್ ಠಾಣೆಯಲ್ಲಿ ಎರಡು ಕಡೆಯಿಂದ ದೂರು-ಪ್ರತಿದೂರು ದಾಖಲಾಗಿದೆ. ಪೊಲೀಸರು ಎರಡು ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್.ಐ.ಆರ್. ದಾಖಲಿಸಿಕೊಂಡಿದ್ದು, ತಲೆಮರೆಸಿಕೊಂಡಿರೋ ಆರೋಪಿಗಳಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.

Read More

ಕಾರ್ಕಳ: ರಾಜ್ಯಮಟ್ಟದ ಕಬಡ್ಡಿ ಆಟಗಾರ,‌ ಮುಟ್ಲುಪಾಡಿ,‌ ನಡುಮನೆ ನಿವಾಸಿ ಪ್ರೀತಂ ಶೆಟ್ಟಿ(26) ಅವರು ಶುಕ್ರವಾರ(ಡಿ.13) ರಾತ್ರಿ ಹೃದಯಘಾತದಿಂದ ಮೃತಪಟ್ಟಿದ್ದಾರೆ. ಪ್ರೀತಂ‌ ಅವರು ಶುಕ್ರವಾರ ಮಂಡ್ಯಾದಲ್ಲಿ ಕಬಡ್ಡಿ ಪಂದ್ಯಾವಳಿಯಲ್ಲಿ ಭಾಗವಹಿಸಿದ್ದು ಆಟವಾಡುತ್ತಿರುವಾಗ‌ಲೇ ಎದೆ ನೋವು ಕಾಣಿಸಿಕೊಂಡಿದ್ದು, ಆಸ್ಪತ್ರೆಗೆ ಕರೆದೊಯ್ಯುವಷ್ಟರಲ್ಲಿ ಹೃದಯಘಾತದಿಂದ ಮೃತಪಟ್ಟಿದ್ದಾರೆ. ಪ್ರತಿಭಾನ್ವಿತ ಪ್ರೀತಂ ಅವರು ಶಿಕ್ಷಣದ ಜತೆಗೆ ಕ್ರೀಡೆಯಲ್ಲಿಯೂ ಆಸಕ್ತಿ ಹೊಂದಿದ್ದು, ಹಂತಹಂತವಾಗಿ‌ ಶ್ರಮವಹಿಸಿ ಕಬಡ್ಡಿ ಆಟಗಾರನಾಗಿ ಖ್ಯಾತಿ ಪಡೆದಿದ್ದರು. ತಾಯಿ ಮತ್ತು ಓರ್ವ ಸಹೋದರನನ್ನು ಅಗಲಿದ್ದಾರೆ.

Read More

ಮಂಗಳೂರು: ನಗರದ ಕದ್ರಿ ಪಾರ್ಕ್‌ನಲ್ಲಿ ಕಳೆದ ವಾರ ನಡೆದ ವೈನ್ ಮೇಳಕ್ಕೆ ಗ್ರಾಹಕರಿಂದ ಅಭೂತಪೂರ್ವ ಸ್ಪಂದನೆ ವ್ಯಕ್ತವಾಗಿದ್ದು, ಗ್ರಾಹಕರ ಬೇಡಿಕೆ ಹಿನ್ನೆಲೆಯಲ್ಲಿ ಡಿ.15ರಂದು ಮತ್ತೆ ಮೇಳ ಆಯೋಜಿಸಲಾಗಿದೆ.ರತ್ನಾಸ್ ವೈನ್ ಗೇಟ್ ಹಾಗೂ ಶೂಲಿನ್ ಗ್ರೂಪ್ ಮಂಗಳೂರು ಪ್ರಾಯೋಜಕತ್ವದಲ್ಲಿ ಕರ್ನಾಟಕ ದ್ರಾಕ್ಷಿ ಮತ್ತು ವೈನ್ ಬೋರ್ಡ್ (ಸರ್ಕಾರಿ ಸ್ವಾಮ್ಯದ ಸಂಸ್ಥೆ), ಕರ್ನಾಟಕ ದ್ರಾಕ್ಷಿ ಮತ್ತು ವೈನ್ ಬೋರ್ಡ್ ಹಾಗೂ ತೋಟಗಾರಿಕಾ ಇಲಾಖೆಯ ಸಹಯೋಗದೊಂದಿಗೆ ಬೆಳಗ್ಗೆ 10.30ರಿಂದ ರಾತ್ರಿ 9.30 ಗಂಟೆ ತನಕ ವೈನ್ ಮೇಳ ನಡೆಯಲಿದೆ.ದ್ರಾಕ್ಷಾ ರಸದ ಉಪಯೋಗಗಳು, ಸವಿಯುವ ಕ್ರಮ ಮುಂತಾದ ಸೂಕ್ತ ಮಾಹಿತಿಗಳೊಂದಿಗೆ ಬ್ರಾೃಂಡುಗಳ ಪ್ರದರ್ಶನ. ರಾಜ್ಯ, ರಾಷ್ಟ್ರ ಹಾಗೂ ಅಂತರಾಷ್ಟ್ರೀಯ ಮಟ್ಟದ ಉತ್ಪನ್ನಗಳು, ಎಲ್ಲಾ ಕಂಪನಿಗಳ ಹೊಸ ಹೊಸ ಪಾನೀಯಗಳನ್ನು ಪ್ರದರ್ಶಿಸಿ ಪರಿಚಯಿಸುವ ಹಾಗೂ ದ್ರಾಕ್ಷಾ ರಸದ (ವೈನ್ ) ರುಚಿಯನ್ನು ಸವಿದು ಬೇಕಾದ ರೀತಿಯಲ್ಲಿ ಖರೀದಿ ಮಾಡಲು ಉತ್ತಮ ಅವಕಾಶ ಕಲ್ಪಿಸಲಾಗಿದೆ. ದ್ರಾಕ್ಷಾ ರಸ ಉತ್ಪಾದಕ ಸಂಸ್ಥೆಗಳ ಮೂಲಕ ಅತ್ಯಾಕರ್ಷಕ ದರ ಹಾಗೂ ಅತ್ಯುತ್ತಮ ಕೊಡುಗೆಗಳೊಂದಿಗೆ ಮೇಳ…

Read More

ಮಂಗಳೂರು: ದಾಖಲೆ ನೀಡಲು ಲಂಚಕ್ಕೆ ಕೈಒಡ್ಡಿದ ಪಿಡಿಓ ಒಬ್ಬರಿಗೆ 3 ವರ್ಷಗಳ ಜೈಲು ಶಿಕ್ಷೆ ನೀಡಿ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಆದೇಶಿಸಿದೆ. ಕಡಬ ತಾಲ್ಲೂಕಿನ ಐತ್ತೂರು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಪ್ರೇಮ್ ಸಿಂಗ್ ನಾಯ್ಕ 9/11ರ ದಾಖಲೆ ನೀಡಲು ₹9,000 ಲಂಚದ ಬೇಡಿಕೆ ಇಟ್ಟಿದ್ದರು ಎಂಬ ಆರೋಪದ ಮೇಲೆ 2019ರ ಜೂನ್ 3ರಂದು ಭ್ರಷ್ಟಾಚಾರ ನಿಗ್ರಹ ದಳದ ಪೊಲೀಸರು ದಾಳಿ ನಡೆಸಿದ್ದರು. ತನಿಖಾಧಿಕಾರಿಯಾಗಿದ್ದ ಪೊಲೀಸ್ ಇನ್‌ಸ್ಪೆಕ್ಟರ್ ಶ್ಯಾಮಸುಂದರ ಎಚ್.ಎಂ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಶುಕ್ರವಾರ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯವು ಶಿಕ್ಷೆ ಹಾಗೂ ದಂಡ ವಿಧಿಸಿ ಆದೇಶ ಪ್ರಕಟಿಸಿದೆ. ಆರೋಪಿಗೆ ಮೂರು ವರ್ಷಗಳ ಸಾದಾ ಸಜೆ ಹಾಗೂ ₹50 ಸಾವಿರ ದಂಡ ವಿಧಿಸಿದೆ. ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ವಕೀಲ ರವೀಂದ್ರ ಮುನ್ನಿಪಾಡಿ ವಾದಿಸಿದ್ದರು.

Read More

ಮಂಗಳೂರು: ಮುಂಬೈಯಿಂದ ಮಂಗಳೂರು ನಗರಕ್ಕೆ ಮಾದಕದ್ರವ್ಯ ಗಾಂಜಾ ಸಾಗಾಟ ಮಾಡಿ ಮಾರಾಟ ಮಾಡುತ್ತಿದ್ದವನನ್ನು ಬಂಧಿಸಿದ ಸಿಸಿಬಿ ಪೊಲೀಸರು ಪೊಲೀಸರು 6.7ಕೆಜಿ ಗಾಂಜಾ ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಉಡುಪಿ ಜಿಲ್ಲೆಯ ಅಂಬಲಪಾಡಿ ಕುಂಜಗುಡ್ಡೆ ಹೌಸ್ ನಿವಾಸಿ ಅಖಿಲೇಶ್(30) ಬಂಧಿತ ಆರೋಪಿ. ಅಖಿಲೇಶ್ ಮುಂಬೈಯಿಂದ ಗಾಂಜಾ ಖರೀದಿಸಿ ಮುಲ್ಕಿ ಪರಿಸರದಲ್ಲಿ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿದ್ದ. ಈ ಬಗ್ಗೆ ಖಚಿತ ಮಾಹಿತಿಯನ್ನು ಪಡೆದ ಮಂಗಳೂರು ಸಿಸಿಬಿ ಪೊಲೀಸರು ಮುಲ್ಕಿ ಬಪ್ಪನಾಡು ಪರಿಸರದಲ್ಲಿ ದಾಳಿ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ. ಆತನ ವಶದಿಂದ 1,62,000 ರೂ. ಮೌಲ್ಯದ 6.7 ಕೆಜಿ ಗಾಂಜಾ, ಮೊಬೈಲ್ ಫೋನ್, 660 ರೂ. ನಗದು ಸ್ವಾಧೀನಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಸೊತ್ತಿನ ಒಟ್ಟು ಮೌಲ್ಯ 1,63,000ರೂ. ಆಗಬಹುದು ಎಂದು ಅಂದಾಜಿಸಲಾಗಿದೆ. ಈ ಬಗ್ಗೆ ಮುಲ್ಕಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಮಂಗಳೂರು : ಮಾದಕ ವಸ್ತು ಗಾಂಜಾ ಸೇವನೆ ಮಾಡಿದ ಆರೋಪದ ಮೇಲೆ ನಗರದ ವಿವಿಧೆಡೆಯ ಮೂವರು ಯುವಕರನ್ನು ಪೊಲೀಸರು ಬಂಧಿಸಿದ್ದಾರೆ. ಪಾಂಡೇಶ್ವರ ಕಟ್ಟೆ ಬಳಿ ಸಾರ್ವಜನಿಕರಿಗೆ ತೊಂದರೆ ನೀಡುತ್ತಿದ್ದ ಎರ್ನಾಕುಳಂ ಜಿಲ್ಲೆಯ ಶ್ರೀಹರಿಯನ್ನು ಪಾಂಡೇಶ್ವರ ಠಾಣೆ ಪೊಲೀಸರು, ನೀರುಮಾರ್ಗದ ಬಸ್‌ ನಿಲ್ದಾಣ ಬಳಿ ತಿರುವನಂತಪುರ ಜಿಲ್ಲೆಯ ಕೆಲ್ರಾಯ್‌ ಮೊಹಮ್ಮದ್‌ ಯೂಸುಫ್‌ ನನ್ನು ಮಂಗಳೂರು ಗ್ರಾ. ಠಾಣೆ ಪೊಲೀಸರು, ಕೆಂಜಾರು ಜಂಕ್ಷನ್‌ ಬಳಿ ಉಮ್ಮರ್‌ ಫಾರುಕ್ ಬಜಪೆ ಪೊಲೀಸರು ಬಂಧಿಸಿದ್ದಾರೆ. ವೈದ್ಯಕೀಯ ತಪಾಸಣೆ ನಡೆಸಿದಾಗ ಗಾಂಜಾ ಸೇವನೆ ಮಾಡಿರುವುದು ದೃಢಪಟ್ಟಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Read More