Author: main-admin

ಮಂಗಳೂರು: ಗ್ಯಾಸ್ ಸಿಲಿಂಡರ್ ಸ್ಪೋಟಗೊಂಡ ಪರಿಣಾಮ ಗಂಭೀರ ಗಾಯಗೊಂಡಿದ್ದ ಮಹಿಳೆಯೊಬ್ಬರು ಚಿಕಿತ್ಸೆ ಫಲಕಾರಿಯಾಗದೇ ಸಾವನಪ್ಪಿದ್ದಾರೆ. ಮೃತರನ್ನು ಖಂಡಿಕ ನಿವಾಸಿ ಮುತ್ತಲಿಬ್ ಎಂಬವರ ಪತ್ನಿ ಖುಬ್ರಾ ಎಂದು ಗುರುತಿಸಲಾಗಿದೆ. ನಾಲ್ಕು ದಿನಗಳ ಹಿಂದೆ ಮಂಜನಾಡಿ ಗ್ರಾಮ ವ್ಯಾಪ್ತಿಯ ಕಲ್ಕಟ್ಟ ಖಂಡಿಕ ಎಂಬಲ್ಲಿ ಗ್ಯಾಸ್ ಸ್ಪೋಟಗೊಂಡ ಪರಿಣಾಮ ಮನೆಯಲ್ಲಿ ಮಲಗಿದ್ದ ತಾಯಿ ಮತ್ತು ಮೂವರು ಮಕ್ಕಳಿಗೆ ಗಂಭೀರ ಗಾಯಗೊಂಡಿದ್ದರು. ಇದರಿಂದ ಮನೆಯೊಡತಿ ಖುಬ್ರಾ ಹಾಗೂ ಅವರ ಮೂವರು ಮಕ್ಕಳಾದ ಮಹದಿಯಾ,ಮಝಿಯಾ,ಮಾಯಿಝಾ ಗಂಭೀರ ಗಾಯಗೊಂಡಿದ್ದರು. ದೇರಳಕಟ್ಟೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ಪೈಕಿ ಮನೆಯೊಡತಿ ಖುಬ್ರಾ ಚಿಕಿತ್ಸೆ ಫಲಕಾರಿಯಾಗದೆ ಗುರುವಾರ ತಡರಾತ್ರಿ ಮೃತಪಟ್ಟಿದ್ದಾರೆ.

Read More

ಮಂಗಳೂರು: ಮೂಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯ ಬಪ್ಪನಾಡು ಬಳಿ ಬಾಡಿಗೆ ಮನೆಯಲ್ಲಿ ವಾಸ್ತವ್ಯವಿದ್ದ ಕಾಲೇಜು ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ. ಮೃತ ವಿದ್ಯಾರ್ಥಿನಿಯನ್ನು ಬಾಗಲಕೋಟ ಜಿಲ್ಲೆಯ ಬಾದಾಮಿ ತಾಲೂಕು ಉಗಳಾಟ ನಿವಾಸಿ ಬಪ್ಪನಾಡು ಬಳಿ ಬಾಡಿಗೆ ಮನೆಯಲ್ಲಿ ವಾಸ್ತವ್ಯವಿರುವ ಐಶ್ವರ್ಯ(19) ಎಂದು ಗುರುತಿಸಲಾಗಿದೆ. ಮೃತ ಐಶ್ವರ್ಯ ಹಳೆಯಂಗಡಿ ಪದವಿ ಕಾಲೇಜಿನಲ್ಲಿ ದ್ವಿತೀಯ ವರ್ಷದ ಬಿಎ ಓದುತ್ತಿದ್ದು ಗುರುವಾರ ಪರೀಕ್ಷೆಯ ದಿನವಾದ್ದರಿಂದ ಬೆಳಗಿನ ಜಾವ ನಾಲ್ಕು ಗಂಟೆಗೆ ಮನೆಯ ಹೊರಗೆ ಓದಲು ಬಂದಿದ್ದು ಬಳಿಕ ಏಕಾಏಕಿ ಮನೆಯ ಎದುರಿನ ಬಾಗಿಲಿನ ಚಿಲಕ ಲಾಕ್ ಮಾಡಿ ಸ್ಟೇರ್‌ಕೇಸ್‌ನ ಕಬ್ಬಿಣದ ರಾಡ್‌ಗೆ ಚೂಡಿದಾರ್ ಶಾಲುನಿಂದ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಮನೆಯಲ್ಲಿ ಸೋದರತ್ತೆ, ಅವರ ಮಗಳು ಹಾಗೂ ತಮ್ಮನ ಜೊತೆ ವಾಸ್ತವ್ಯವಿದ್ದು ಬೆಳಗ್ಗೆ ಸುಮಾರು ಆರು ಗಂಟೆ ಹೊತ್ತಿಗೆ ಸೋದರತ್ತೆ ಮನೆಯ ಹೊರಗೆ ಬರಲು ಎದುರು ಬದಿಯ ಬಾಗಿಲಿನ ಚಿಲಕ ತೆಗೆಯಲು ಪ್ರಯತ್ನಿಸಿ ವಿಫಲರಾಗಿದ್ದು ಬಳಿಕ ಹೊರಗೆ ಬಂದು ನೋಡುವಾಗ ಆತ್ಮಹತ್ಯೆ ಪ್ರಕರಣ ಬಯಲಿಗೆ…

Read More

ಪುತ್ತೂರು: ಸರಕಾರಿ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ಮಾಡಲು ತೆರಳುತ್ತಿದ್ದ ಸರಕಾರಿ ಆಸ್ಪತ್ರೆಯ ವೈದ್ಯರೊಬ್ಬರ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಲ್ಲದೆ, ವೈದ್ಯರು ಕರ್ತವ್ಯಕ್ಕೆ ತಡವಾಗಿ ಹೋಗುತ್ತಿದ್ದಾರೆಂದು ಸುಳ್ಳು ಆಪಾದನೆ ಹೊರಿಸಿ ವಿಡಿಯೋ ವೈರಲ್‌ ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳುವಂತೆ ತಾಲೂಕು ಸರಕಾರಿ ಆಸ್ಪತ್ರೆಯಿಂದ ನಗರ ಠಾಣೆ ಪೊಲೀಸರಿಗೆ ದೂರು ನೀಡಲಾಗಿದೆ. ಡಿ.10ರಂದು ಬೆಳಗ್ಗೆ ಪುಂಜಾಲಕಟ್ಟೆ ಯಿಂದ ಸುಮಾರು 29 ವರ್ಷದ ವ್ಯಕ್ತಿ ಆಸ್ಪತ್ರೆಗೆ ಕರೆ ತರುವಾಗ ಮೃತಪಟ್ಟಿದ್ದರು. ಬಳಿಕ ಮರಣೋತ್ತರ ಪರೀಕ್ಷೆಯ ಮೊದಲು ಪೊಲೀಸ್‌ ಠಾಣೆಗೆ ಆಸ್ಪತ್ರೆಯಿಂದ ಮಾಹಿತಿ ನೀಡಲಾಗಿತ್ತು. ಪರೀಕ್ಷೆಗೆ ಪುಂಜಾಲ ಕಟ್ಟೆಯಿಂದ ಪೊಲೀಸರು ಬರಬೇಕಾ ಗಿತ್ತು. ಪೊಲೀಸರು ಮಧ್ಯಾಹ್ನದ ಬಳಿಕ ಬಂದಿದ್ದರು. ಬಳಿಕ ಅವರು ಮರಣೋತ್ತರ ಪರೀಕ್ಷೆಗೆ ಆಸ್ಪತ್ರೆಗೆ ಮನವಿ ನೀಡುವ ಕಾರ್ಯ ಮಾಡಿದರು. ಸಂಜೆ ವೇಳೆ ಎಲ್ಲ ಪ್ರಕ್ರಿಯೆ ಮುಗಿದು ಕರ್ತವ್ಯದಲ್ಲಿದ್ದ ಡಾ.ಶ್ವೇತಾ ಮರಣೋತ್ತರ ಪರೀಕ್ಷೆಗೆ ಹೋಗುವ ಸಂದರ್ಭ ಮೃತರ ಕಡೆಯವರು ಎನ್ನಲಾದ ಕೆಲವರು ವೈದ್ಯರು ತಡವಾಗಿ ಬಂದಿರುವುದಾಗಿ ಆರೋಪಿಸಿ ಅವರನ್ನು ತರಾಟೆಗೆತ್ತಿಕೊಂಡು ಅದನ್ನು ವೀಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹಾಕಿದ್ದರು.…

Read More

ಉಪ್ಪಿನಂಗಡಿ: ಸೈಬರ್‌ ವಂಚಕರು ಹಣ ದೋಚಲು ಹೊಸ ಹೊಸ ತಂತ್ರ ಹುಡುಕುತ್ತಿದ್ದು, ನಗರದಲ್ಲಿ ಪೋನ್‌ ಕರೆಯನ್ನು ಸ್ವೀಕರಿಸಿದ ಮಾತ್ರಕ್ಕೆ ವ್ಯಕ್ತಿಯೋರ್ವರ ಖಾತೆಯಿಂದ ಹಣ ವರ್ಗಾವಣೆಯಾಗಿದೆ. ಉಪ್ಪಿನಂಗಡಿಯ ಮಾಧ್ಯಮ ಪ್ರತಿನಿಧಿಯೋರ್ವರಿಗೆ ಗುರುವಾರ ಮುಂಜಾನೆ ಪೋನ್‌ ಕರೆ ಬಂದಿದ್ದು, ಅದನ್ನು ಸ್ವೀಕರಿಸಿದ ಕೂಡಲೇ ಕರೆ ಕಡಿತಗೊಂಡಿತ್ತು. ಸ್ವಲ್ಪ ಹೊತ್ತಿನಲ್ಲೇ ಈ ದೂರವಾಣಿ ಸಂಖ್ಯೆ ಜೋಡಣೆ ಆಗಿದ್ದ ಬ್ಯಾಂಕಿನ ಖಾತೆಯಿಂದ ಹಣವರ್ಗಾವಣೆಯಾಗಿರುವ ಬಗ್ಗೆ ಸಂದೇಶ ಬಂದಿತ್ತು. ಕೂಡಲೇ ಬ್ಯಾಂಕ್‌ಗೆ ದೂರು ಸಲ್ಲಿಸಿದಾಗ, 161 ರೂ. ವರ್ಗಾವಣೆಗೊಂಡಿದ್ದು, ಸಮರ್ಪಕ ಬ್ಯಾಲೆನ್ಸ್‌ ಇಲ್ಲದ ಕಾರಣ 14,839 ರೂ. ವರ್ಗಾವಣೆ ಆಗಿಲ್ಲ ಎಂದು ತಿಳಿದು ಬಂತು. ಇದೇ ವೇಳೆ ಅದೇ ಸಂಖ್ಯೆಯಿಂದ ಮತ್ತೊಂದು ಕರೆ ಬಂದಿದ್ದು, ಅದನ್ನು ಸ್ವೀಕರಿಸಲಿಲ್ಲ. ಸೈಬರ್‌ ಕ್ರೈಂ ವಿಭಾಗದ ಪೊಲೀಸರಿಗೆ ದೂರು ಸಲ್ಲಿಸಲಾಗಿದೆ.

Read More

ಉಡುಪಿ : ಧರ್ಮ ದಂಗಲ್ ಕಾರಣಕ್ಕೆ ನಗರದಲ್ಲಿ ಸದ್ದು ಮಾಡಿದ್ದ ಪ್ರಕರಣ ಸಂಬಂಧ ಹಿಂದೂ ಮುಖಂಡರಿಗೆ ಜಾಮೀನು ಮಂಜೂರಾಗಿದೆ. ಕಾರ್ಕಳದ ಶ್ರೀ ವೆಂಕಟರಮಣ ದೇವಸ್ಥಾನದ ಲಕ್ಷ ದೀಪೋತ್ಸವ ಸಂದರ್ಭ ಹಿಂದೂ ವ್ಯಾಪಾರಿಗಳಿಗೆ ವ್ಯಾಪಾರ ಮಾಡಲು ಮೊದಲು ಪ್ರಾಶಸ್ಯ ನೀಡಬೇಕು ಎಂದು ಹೇಳಿದ ಕಾರಣಕ್ಕೆ ಪೊಲೀಸರಿಂದ ಸುಮೋಟೋ ಕೇಸ್ ದಾಖಲಾಗಿತ್ತು. ಹಿಂದೂ ಜಾಗರಣ ವೇದಿಕೆಯ ರಮೇಶ್ ತೆಳ್ಳಾರು ಹಾಗೂ ಹಿಂದೂ ಮುಖಂಡ ಶ್ರೀಕಾಂತ ಶೆಟ್ಟಿ ಮೇಲೆ ಕೇಸು ದಾಖಲಾಗಿತ್ತು. ಸುಮೋಟೋ ಕೇಸ್ ಖಂಡಿಸಿ ಪ್ರತಿಭಟನೆಗೆ ಕರೆ ನೀಡಿದ್ದರು ಎಂಬ ಕಾರಣಕ್ಕೆ ಹಿಂದೂ ಜಾಗರಣ ವೇದಿಕೆಯ ಪ್ರಾಂತಸ್ತರದ ಮುಖಂಡ ಶ್ರೀಕಾಂತ್ ಶೆಟ್ಟಿ ವಿರುದ್ಧ ಪೊಲೀಸರು ದೂರು ದಾಖಲಿಸಿಕೊಂಡಿದ್ದರು.ಇದೀಗ 26 ದಿನಗಳ ಅನಂತರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜಾಮೀನು ಮಂಜೂರುಗೊಳಿಸಿದೆ. ರಮೇಶ್ ಪರವಾಗಿ ಮಣಿರಾಜ್ ಶೆಟ್ಟಿ ಮತ್ತು ಶ್ರೀಕಾಂತ್ ಶೆಟ್ಟಿ ಪರವಾಗಿ ಮಟ್ಟಾರು ರತ್ನಾಕರ ಹೆಗ್ಡೆ ವಾದಿಸಿದ್ದರು. ಹಿಂದೂ ನಾಯಕರನ್ನು ಟಾರ್ಗೆಟ್ ಮಾಡಿ ಸುಮೋಟೊ ಕೇಸು ದಾಖಲಿಸಲಾಗುತ್ತಿದೆ ಎಂದು ಉಡುಪಿ ಜಿಲ್ಲೆಯ ಐದು ಕ್ಷೇತ್ರಗಳ…

Read More

ಮಂಗಳೂರು: ಬ್ರೇಕ್ ಫೇಲ್ ಆದ ಬಸ್ಸನ್ನು ಕ್ಷಣಮಾತ್ರದಲ್ಲಿ ನಿಯಂತ್ರಣಕ್ಕೆ ಪಡೆದು ಪ್ರಯಾಣಿಸುತ್ತಿದ್ದ ಹಲವು ಪ್ರಯಾಣಿಕರನ್ನು ತಮ್ಮ ಸಮಯ ಪ್ರಜ್ಞೆಯಿಂದ ಖಾಸಗಿ ಬಸ್ ಚಾಲಕ ಅಪಾಯದಿಂದ ಪಾರು ಮಾಡಿದ ಘಟನೆ ಇಂದು ಬೆಳಗ್ಗೆ ಮಂಗಳೂರು ನಗರದ ಬಳ್ಳಾಲ್‌ಬಾಗ್‌ನಲ್ಲಿ ನಡೆದಿದೆ. ಉಡುಪಿಯಿಂದ ಮಂಗಳೂರಿಗೆ ಆಗಮಿಸುತ್ತಿದ್ದ ವಿಶಾಲ್ ಟ್ರಾವೆಲ್ಸ್ ಹೆಸರಿನ ಖಾಸಗಿ ಬಸ್ ಬೆಳಿಗ್ಗೆ 8 ಗಂಟೆ ಸಮಯಕ್ಕೆ ನಗರದ ಬಳ್ಳಾಲ್‌ಬಾಗ್‌ಗೆ ಆಗಮಿಸುತ್ತಲೇ ಬ್ರೇಕ್ ಫೇಲ್ ಆಗಿದ್ದು, ಕೂಡಲೇ ಎಚ್ಚೆತ್ತುಕೊಂಡ ಚಾಲಕ ಸಿದ್ದೀಕ್ ಎರ್ಮಾಳ್ ಸಮಯಪ್ರಜ್ಞೆ ಮೆರೆದಿದ್ದಾರೆ. ತಕ್ಷಣವೇ ಬಸ್‌ನ್ನು ಫುಟ್‌ಪಾತ್ ಮೇಲೇರಿಸಿ ಯಾವುದೇ ಅನಾಹುತವಾಗದಂತೆ ಪಾರು ಮಾಡಿದ್ದಾರೆ. ಬೆಳಿಗ್ಗೆ ಹೊತ್ತು ಆಗಿದ್ದರಿಂದ ಪ್ರಯಾಣಿಕರು ಹೆಚ್ಚಿನ ಸಂಖ್ಯೆಯಲ್ಲಿದ್ದರು. ಆದರೆ ಬಸ್ ಚಾಲಕ ಸಿದ್ದೀಕ್ ಅವರು ತೋರಿದ ಸಮಯಪ್ರಜ್ಞೆಯಿಂದ ಯಾವುದೇ ಅನಾಹುತ ಸಂಭವಿಸದೇ ಎಲ್ಲರೂ ಸುರಕ್ಷಿತವಾಗಿ ಪಾರಾಗಿದ್ದಾರೆ. ಸಿದ್ದೀಕ್ ಅವರ ಸಮಯಪ್ರಜ್ಞೆಗೆ ಪ್ರಯಾಣಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದು, ಜಾಲತಾಣದಲ್ಲಿ ಚಾಲಕನ ಕುರಿತು ಪೋಸ್ಟ್ ಮಾಡಿ ಶ್ಲಾಘಿಸಿದ್ದಾರೆ.

Read More

ಉಪ್ಪಿನಂಗಡಿ: ಉಪ್ಪಿನಂಗಡಿ ಬಸ್‌ ನಿಲ್ದಾಣದ ಬಳಿಯ ಗ್ರಾ.ಪಂ. ಸ್ವಾಮ್ಯದ ನಿರ್ಮಾಣ ಹಂತದಲ್ಲಿರುವ ಗ್ರಂಥಾಲಯ ಕಟ್ಟಡದಲ್ಲಿ ಅಸ್ಸಾಂ ಮೂಲದ ಕಾರ್ಮಿಕ ದೀಪಕ್‌ ಬೆಂಗರ (34) ಅವರನ್ನು ಕೊಲೆಗೈದ ಪ್ರಕರ ಣದ ಆರೋಪಿ ಬಾಬು ಯಾನೆ ರುದ್ರ (68) ನನ್ನು ಉಪ್ಪಿನಂಗಡಿ ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ. ಕೆಲವು ಸಮಯ ಹಿಂದೆ ಸ್ಥಳೀಯ ಬಾರ್‌ನಲ್ಲಿ ಕೆಲಸ ಮಾಡಿಕೊಂಡಿದ್ದ ಈತ ಇತ್ತೀಚೆಗೆ ಕಟ್ಟಡ ನಿರ್ಮಾ ಣ ಕಾರ್ಮಿಕನಾಗಿದ್ದ ಎಂದು ತಿಳಿಯಲಾಗಿದೆ. ಅಸ್ಸಾಂನ ತಿಮ್ಮತಿ ಬೆಂಗರ ಅವರ ಮಗ ದೀಪಕ್‌ ಬೆಂಗರ ಕಳೆದ ಬುಧವಾರ ಕೊಲೆಗೀಡಾದ ಸ್ಥಿತಿ ಯಲ್ಲಿ ಪತ್ತೆಯಾಗಿದ್ದರು. ದೀಪಕ್‌ ನಿರ್ಗತಿಕನಂತೆ ಬೀದಿ ಬದಿ, ಜನವಸತಿ ಇಲ್ಲದ ಕಟ್ಟಡದಲ್ಲಿ ಮಲಗುತ್ತಿದ್ದರಿಂದ ಆತನ ಒಡನಾಡಿಗಳ ಬಗ್ಗೆ ತಿಳಿಯದೆ ಹಂತಕನನ್ನು ಪತ್ತೆ ಹಚ್ಚುವುದು ಪೊಲೀಸ್‌ ಇಲಾಖೆಗೆ ಕಗ್ಗಂಟಾಗಿತ್ತು. ಪೊಲೀಸರು ಬಸ್‌ ನಿಲ್ದಾಣ ಪರಿಸರದಲ್ಲಿನ ಸಿಸಿ ಕೆಮರಾಗಳ ದೃಶ್ಯಾವಳಿಗಳನ್ನು ಪರಿಶೀಲನೆಗೆ ಒಳಪಡಿಸಿದಾಗ ಶಂಕಿತ ಆರೋಪಿಯ ಚಲನವಲನಗಳು ಪತ್ತೆಯಾಗಿದ್ದವು. ಈ ಕಾರಣದಿಂದ ಬೆಳ್ತಂಗಡಿ ತಾಲೂಕು ಕಲ್ಮಂಜ ಗ್ರಾಮದ ಕುಂಬ್ರಂಗೆ ಮನೆ…

Read More

ಪುತ್ತೂರು: ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಪುತ್ತೂರಿನ ಬೈಪಾಸ್ ತೆಂಕಿಲ ವಿವೇಕಾನಂದ ಶಾಲೆಯ ಬಳಿ ನಡೆದಿದೆ. ಉಡುಪಿ ನೊಂದಣಿಯ ಬ್ರಿಝಾ ಕಾರು ನಿಯಂತ್ರಣ ತಪ್ಪಿ ಡಿವೈಡರ್ ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಕಾರಿನಲ್ಲಿದ್ದವರಿಗೆ ಗಂಭೀರ ಸ್ವರೂಪದ ಗಾಯಗಳಾಗಿದೆ. ಗಾಯಗೊಂಡವರನ್ನ ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರಿನಲ್ಲಿದ್ದವರು ಉಡುಪಿ ಮೂಲದವರೆಂಬ ಮಾಹಿತಿ ತಿಳಿದು ಬಂದಿದೆ.

Read More

ಉಳ್ಳಾಲ: ಇಲ್ಲಿನ ಸೋಮೇಶ್ವರ ಕಡಲ ತೀರದ ರುದ್ರಪಾದೆಯಲ್ಲಿ ಪರ್ಸ್, ಪಾದರಕ್ಷೆ, ಕೂಲಿಂಗ್ ಗ್ಲಾಸ್ ಇಟ್ಟು ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಸಮುದ್ರದಲ್ಲಿ ಪತ್ತೆಯಾಗಿದೆ. ಮಂಗಳೂರಿನ ಪಡೀಲು ವೀರನಗರ ನಿವಾಸಿ ಉದಯ್ ಕುಮಾರ್ (46) ಮೃತಪಟ್ಟ ವ್ಯಕ್ತಿ. ಉದಯ್ ಕುಮಾರ್ ಬುಧವಾರ ಮಧ್ಯಾಹ್ನ ಸೋಮೇಶ್ವರ ಸೋಮನಾಥ ಕ್ಷೇತ್ರದ ಮುಂಭಾಗ ತನ್ನ ಸ್ಕೂಟರ್ ನಿಲ್ಲಿಸಿ ಸಮುದ್ರ ತೀರದ ರುದ್ರಪಾದೆಯತ್ತ ತೆರಳಿದ್ದಾರೆ. ಬಳಿಕ ರುದ್ರಪಾದೆಯಲ್ಲಿ ಪರ್ಸ್, ಪಾದರಕ್ಷೆ, ಕೂಲಿಂಗ್ ಗ್ಲಾಸ್ ಇಟ್ಟು ನಾಪತ್ತೆಯಾಗಿದ್ದರು. ಬೀಚ್‌ನಲ್ಲಿ ಸುತ್ತಾಡುತ್ತಿದ್ದ ಹುಡಗನೊಬ್ಬ ರುದ್ರಪಾದೆಯಲ್ಲಿದ್ದ ಪರ್ಸ್‌ಅನ್ನು ಸ್ಥಳೀಯ ಗೂಡಂಗಡಿಯವರಿಗೆ ನೀಡಿದ್ದಾನೆ. ಅವರು ಪೊಲೀಸರಿಗೆ ಈ ವಿಚಾರ ತಿಳಿಸಿದ್ದಾರೆ. ಕರಾವಳಿ ಕಾವಲು ಪಡೆಯ ಜೀವರಕ್ಷಕ ಸಿಬ್ಬಂದಿ ಸೇರಿದಂತೆ ಸ್ಥಳೀಯ ಈಜುಗಾರರು ಉದಯ್‌ರನ್ನು ಸಮುದ್ರದಲ್ಲಿ ರಬ್ಬರ್ ಟ್ಯೂಬ್ ಮೂಲಕ ಶೋಧಿಸಿದ್ದಾರೆ. ಸಂಜೆ ವೇಳೆ ಸೋಮೇಶ್ವರ ಕಡಲ ಕಿನಾರೆಯ ಅಲಿಮಕಲ್ಲು ಎಂಬಲ್ಲಿ ಉದಯ್ ಕುಮಾರ್ ಮೃತದೇಹ ಪತ್ತೆಯಾಗಿದೆ. ಸ್ಥಳೀಯರು ಮೃತದೇಹವನ್ನು ಎಳೆದು ಮೇಲಕ್ಕೆ ಹಾಕಿದ್ದಾರೆ. ಮೇಲ್ನೋಟಕ್ಕೆ ಉದಯ್ ರುದ್ರಪಾದೆಯಿಂದ ಸಮುದ್ರಕ್ಕೆ ಹಾರಿ ಆತ್ಮಹತ್ಯೆ ಮಾಡಿದ್ದಾರೆ ಎನ್ನಲಾಗುತ್ತಿದ್ದು ಉಳ್ಳಾಲ…

Read More

ಮುರುಡೇಶ್ವರ ಕಡಲ ತೀರದಲ್ಲಿ ನಡೆದ ದುರ್ಘಟನೆಯಲ್ಲಿ, ನೀರು ಪಾಲಾದ ಮೂವರು ವಿದ್ಯಾರ್ಥಿನಿಯರು ಶವವಾಗಿ ಪತ್ತೆಯಾಗಿದ್ದಾರೆ. ದೀಕ್ಷಾ, ಲಾವಣ್ಯ, ಲಿಪಕಾ ಮೃತ ದೇಹವು ಮುರುಡೇಶ್ವರದ ದೇವಾಲಯದ ಹಿಂಭಾಗದ ಗುಡ್ಡ ಪ್ರದೇಶದ ಸಮೀಪ ಪತ್ತೆಯಾಗಿದೆ. ಕರಾವಳಿ ಕಾವಲು ಪಡೆ, ಲೈಫ್ ಗಾರ್ಡ್ ಮತ್ತು ಸ್ಥಳೀಯ ಮೀನುಗಾರರು ಮೃತ ದೇಹವನ್ನು ಪತ್ತೆ ಹಚ್ಚಿದ್ದಾರೆ. ಕೋಲಾರ ಜಿಲ್ಲೆಯ ಮುಳಬಾಗಿಲು ಕೊತ್ತುರು ಗ್ರಾಮದ ಮುರಾರ್ಜಿ ದೇಸಾಯಿ ವಸತಿ ಶಾಲೆಯ ಸುಮಾರು 54 ವಿದ್ಯಾರ್ಥಿನಿಯರನ್ನು ಒಳಗೊಂಡು ಶೈಕ್ಷಣಿಕ ಪ್ರವಾಸಕ್ಕೆಂದು ಮುರುಡೇಶ್ವರಕ್ಕೆ ಬಂದಿದ್ದರು. ಅಲೆಗಳ ಅಬ್ಬರವು ಹೆಚ್ಚಿದ್ದರೂ ಶಿಕ್ಷಕರು ಮುನ್ನೆಚ್ಚರಿಕೆಯನ್ನು ಕೈಗೊಳ್ಳದೆ ಮಕ್ಕಳನ್ನು ಸಮುದ್ರದಲ್ಲಿ ಆಡಲು ಬಿಟ್ಟಿದ್ದರಿಂದ ಅಲೆಗಳ ಹೊಡೆತಕ್ಕೆ 7 ವಿದ್ಯಾರ್ಥಿನಿಯರು ಮತ್ತು ಓರ್ವ ಶಿಕ್ಷಕ ನೀರುಪಾಲಾಗಿದ್ದರು. ಈ ಸಂದರ್ಭದ ಲೈಫ್ ಗಾರ್ಡಗಳು ಯಾವುದೇ ಪರಿಕರ ಇಲ್ಲದಿದ್ದರೂ 3 ಜನ ವಿದ್ಯಾರ್ಥಿನಿಯರನ್ನು ಮತ್ತು ಓರ್ವ ಶಿಕ್ಷಕನನ್ನು ರಕ್ಷಣೆ ಮಾಡಿದ್ದಾರೆ. ಆದರೂ ಈ ದುರ್ಘಟನೆಯಲ್ಲಿ ಓರ್ವ ವಿದ್ಯಾರ್ಥಿನಿ ಮೃತಪಟ್ಟಿದ್ದು, ಮೂವರು ಸಮುದ್ರಪಾಲಾಗಿ ಕಣ್ಮರೆಯಾಗಿದ್ದರು. ಕಣ್ಮರೆಯಾಗಿದ್ದ ಮೂವರು ವಿದ್ಯಾರ್ಥಿನಿಯರು ಈಗ ಶವವಾಗಿ ಪತ್ತೆಯಾಗಿದ್ದಾರೆ.

Read More