Author: main-admin

ಮಂಗಳೂರು: ಪಾರ್ಕ್ ಮಾಡಿದ್ದ ಕಾರಿನ ಗ್ಲಾಸ್ ಒಡೆದು ಕಾರಿನೊಳಗಿದ್ದ 6,80,000ರೂ. ಮೌಲ್ಯದ ಚಿನ್ನಾಭರಣ, ಮತ್ತು ಲ್ಯಾಪ್ ಟಾಪ್ ಇರುವ ವ್ಯಾನಿಟ್ ಬ್ಯಾಗ್ ಅನ್ನು ಕಳವು ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಪೂರ್ವ ಠಾಣೆಯ ಪೊಲೀಸರು ಕ್ಷಿಪ್ರ ಕಾರ್ಯಚರಣೆ ನಡೆಸಿ ಆರೋಪಿಯನ್ನು ಬಂಧಿಸಿದ್ದು, ಕಳವು ಮಾಡಿದ ಸೊತ್ತನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಬಂಧಿತ ಆರೋಪಿಯನ್ನು ಮಂಗಳೂರಿನ ಅಡ್ಯಾರು ಗ್ರಾಮದ ಪದವು, ಅಡ್ಯಾರ್, ಭರಿರತ್ ಮಂಜಿಲ್ ನಿವಾಸಿ ಅಬ್ದುಲ್ ಅಕ್ರಮ್(33) ಎಂದು ಗುರುತಿಸಲಾಗಿದೆ. ಆರೋಪಿಯು ಡಿ. 8ರ ರಾತ್ರಿ ಕಂಕನಾಡಿ ಮಾರ್ಕೆಟ್ ಬಳಿ ಪಾರ್ಕ್ ಮಾಡಿದ್ದ ಕ್ರೇಟಾ ಕಾರಿನ ಗ್ಲಾಸ್ ಒಡೆದು ಕಾರಿನ ಒಳಗಡೆ ಇದ್ದ 6,80,000 ರೂ. ಮೌಲ್ಯದ ಚಿನ್ನಾಭರಣ ಮತ್ತು ಲ್ಯಾಪ್ ಟಾಪ್ ಇರುವ ವ್ಯಾನಿಟ್ ಬ್ಯಾಗ್ ಅನ್ನು ಕಳ್ಳತನ ಮಾಡಿದ್ದಾನೆ. ಬಳಿಕ ದೂರುದಾರರು ಬಂದು ನೋಡಿದಾಗ ಘಟನೆಯು ಬೆಳಕಿಗೆ ಬಂದಿದ್ದು, ಈ ಬಗ್ಗೆ ಮಂಗಳೂರು ಪೂರ್ವ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಅವರ ದೂರಿನ ಮೇರೆಗೆ ಕಲಂ 303(2) ಬಿಎನ್ ಎಸ್…

Read More

ಮಂಗಳೂರು: ಮಂಗಳೂರು ಕಮೀಷನರೇಟ್ ವ್ಯಾಪ್ತಿಯಲ್ಲಿ ಹಾಗೂ ಉಡುಪಿ ಜಿಲ್ಲೆಯ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬೈಕ್ ನಲ್ಲಿ ಬಂದು ಮಹಿಳೆಯರ ಕುತ್ತಿಗೆಯಿಂದ ಚಿನ್ನದ ಸರವನ್ನು ಸುಲಿಗೆ ಮಾಡಿದ ಪ್ರಕರಣದಲ್ಲಿ ಭಾಗಿಯಾದ ಕುಖ್ಯಾತ ಸರಕಳ್ಳರಿಬ್ಬರನ್ನು ಕೃತ್ಯ ನಡೆದ 24 ಗಂಟೆ ಒಳಗಡೆ ಮಂಗಳೂರು ಸಿಸಿಬಿ ಪೊಲೀಸರು ದಸ್ತಗಿರಿ ಮಾಡಿ ಚಿನ್ನದ ಸರ ಹಾಗೂ ಕಳವುಗೈದ ಬೈಕ್ ನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.ಮಂಗಳೂರು ಸುರತ್ಕಲ್ ಕೃಷ್ಣಾಪುರ ನಿವಾಸಿ ಹಬೀಬ್ ಹಸನ್ ಯಾನೆ ಚೊಂಬುಗುಡ್ಡೆ ಹಬೀಬ್ ಯಾನೆ ಅಬ್ಬಿ(43), ಬಂಟ್ವಾಳ ತಾಲೂಕಿನ ಅದ್ದೆಡ್ಡಿ ಹೌಸ್, ಬಿ.ಮೂಡ ಪರ್ಲಿಯಾ ಕ್ರಾಸ್ ರೋಡ್ ನಿವಾಸಿ ಉಮ್ಮರ್ ಶಿಯಾಫ್(29) ಬಂಧಿತ ಆರೋಪಿಗಳು.ಪ್ರಕರಣ-1ಡಿಸೆಂಬರ್ 6ರಂದು ನರಿಂಗಾನ ಗ್ರಾಮದ ತೌಡುಗೋಳಿ ಅಂಗನವಾಡಿ ಕೇಂದ್ರದಲ್ಲಿ ಅಡುಗೆ ಸಹಾಯಕರಾಗಿ ಕೆಲಸ ಮಾಡಿಕೊಂಡಿದ್ದ ಸುಜಿನಾ ಡಿಸೊಜಾರವರು ಮಧ್ಯಾಹ್ನ ವೇಳೆ ಅಂಗನವಾಡಿಯಲ್ಲಿ ಕೆಲಸದಲ್ಲಿರುವ ಸಂದರ್ಭ ಇಬ್ಬರು ಬೈಕಿನಲ್ಲಿ ಅಂಗನವಾಡಿಗೆ ಬಂದಿದ್ದಾರೆ. ಬಳಿಕ ಬೈಕಿನಿಂದ ಇಳಿದು ಮಂಜನಾಡಿಗೆ ಹೋಗುವ ದಾರಿಯ ಬಗ್ಗೆ ವಿಚಾರಿಸಿದ್ದು, ಸುಜಿನಾ ಡಿಸೊಜಾರವರು ಮಂಜನಾಡಿಗೆ ಹೋಗುವ ದಾರಿಯನ್ನು…

Read More

ಬಂಟ್ವಾಳ : ಸೌದಿ ಅರೇಬಿಯಾದ ತಬೂಕ್ ಸಮೀಪದ ಅಲ್ ಉಲಾ ಎಂಬ ಪ್ರದೇಶದಲ್ಲಿ ಸೋಮವಾರ ನಡೆದ ಕಾರು ಅಪಘಾತದಲ್ಲಿ ಬಂಟ್ವಾಳ ತಾಲೂಕಿನ ಮೇಲಿನ ವಗ್ಗ ನಿವಾಸಿ ಯುವಕನೋರ್ವ ದಾರುಣವಾಗಿ ಮೃತಪಟ್ಟ ಘಟನೆ ವರದಿಯಾಗಿದೆ.ಮೃತ ಯುವಕನನ್ನು ಮೇಲಿನ ವಗ್ಗದ ಈಗಲ್ ಕುಟುಂಬದ ದಿವಂಗತ ಮುಹಮ್ಮದ್ ಯಾನೆ ಪುತ್ತೂಬಾವ ಎಂಬವರ ಪುತ್ರ ಇಬ್ರಾಹೀಮ್ ನವಾಜ್ (35) ಎಂದು ಹೆಸರಿಸಲಾಗಿದೆ. ಈ ಹಿಂದೆ ಊರಿನಲ್ಲಿ ಬಿ ಸಿ ರೋಡು ಸಮೀಪದ ಮಿತ್ತಬೈಲು ಎಂಬಲ್ಲಿ ಟಾಪ್ ಆಂಡ್ ಟಾಪ್ ಹೆಸರಿನ ಕಾರು ಉದ್ಯಮ ನಡೆಸುತ್ತಿದ್ದು ಟಾಪ್ ಆಂಡ್ ಟಾಪ್ ನವಾಜ್ ಎಂದೇ ಗುರುತಿಸಿಕೊಂಡಿದ್ದ.ಬಳಿಕ ಬೆಂಗಳೂರು ನಲ್ಲಿ ಉದ್ಯೋಗಿಯಾಗಿದ್ದರು. ಬಳಿಕ ಇವರು ಇತ್ತೀಚಿಗೆ ಸುಮಾರು ಆರು ತಿಂಗಳ ಹಿಂದೆಯಷ್ಟೇ ಉದ್ಯೋಗಕ್ಕಾಗಿ ಸೌದಿ ಅರೇಬಿಯಾಕ್ಕೆ ತೆರಳಿದ್ದರು. ಸೋಮವಾರ ಕಾರಿನಲ್ಲಿ ತೆರಳುತ್ತಿದ್ದ ವೇಳೆ ಅಪಘಾತ ಸಂಭವಿಸಿ ಅವರು ಮೃತ್ತಾಪಟ್ಟಿದ್ದಾರೆ ಎನ್ನಲಾಗಿದೆ. ಈತ ವಗ್ಗ ನಿವಾಸಿ, ಕಾಂಗ್ರೆಸ್ ಮುಖಂಡ, ಬೀಡಿ ಉದ್ಯಮಿ ಇ ಕೆ ಲತೀಫ್ ಅವರ ಸಹೋದರಿಯ ಪುತ್ರ.ಮೃತರು ಪತ್ನಿ, ತಾಯಿ…

Read More

ಮಂಗಳೂರು: WhatsApp ಮತ್ತು ಟೆಲಿಗ್ರಾಂ ಲಿಂಕ್‌ ಮೂಲಕ ಕೆಲಸದ ಆಮಿಷ ತೋರಿಸಿ ಆನ್‌ಲೈನ್‌ ಮೂಲಕ ಕೊಣಾಜೆ ನಿವಾಸಿಯಿಂದ ಹಣ ಪಡೆದುಕೊಂಡು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿ ಬೆಂಗಳೂರು ಮತ್ತು ಜಮ್ಮು ಕಾಶ್ಮೀರ ಮೂಲದ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಬೆಂಗಳೂರಿನ ಜಲಸಂದ್ರ ನಿವಾಸಿ ಅಮೀರ್‌ ಸುಹೇಲ್‌ ಹಾಗೂ ಕಾಶ್ಮೀರ ನಿವಾಸಿ ಸುಹೈಲ್‌ ಅಹ್ಮದ್‌ ವಾನಿಯನ್ನು ಬಂಧಿಸಲಾಗಿದೆ.ಆರೋಪಿಗಳು 2024ರ ಜು. 21ರಂದು ಪಾರ್ಟ್‌ ಟೈಮ್‌ ಜಾಬ್‌ ಕುರಿತು ವಾಟ್ಸಪ್‌ ಮತ್ತು ಟೆಲಿಗ್ರಾಂ ಲಿಂಕ್‌ ಕಳುಹಿಸಿದ್ದರು. ಕೆಲಸ ಏನೆಂದು ಕೇಳಿದ ತತ್‌ಕ್ಷಣ ವೀಡಿಯೋ ಕಳುಹಿಸಿ ಅದರ ಸ್ಕ್ರೀನ್‌ ಶಾಟ್‌ ಕಳುಹಿಸಲು ತಿಳಿಸಿ ಅವರಿಗೆ 130 ರೂ. ಅನ್ನು ಪಾವತಿಸಿ, ಅನಂತರ ಮತ್ತೆ ಹಾಕಿದ ವೀಡಿಯೋ ತಪ್ಪಾಗಿದೆ ಎಂದು ಹೇಳಿ ಇನ್ನೊಂದು ಲಿಂಕ್‌ ಕಳುಹಿಸಿದ್ದರು.ಆ ಲಿಂಕ್‌ ಓಪನ್‌ ಮಾಡಿದ ತತ್‌ಕ್ಷಣ 1 ಸಾವಿರ ರೂ. ಮೊತ್ತವನ್ನು ಹಾಕಲು ಹೇಳಿ ಅನಂತರ ಹಂತ ಹಂತವಾಗಿ ಅಕೌಂಟಿನಿಂದ ಬೇರೆ ಬೇರೆ ಖಾತೆಗಳಿಗೆ ವರ್ಗಾಯಿಸಿ ಒಟ್ಟು 28,18,065 ರೂ. ವಂಚನೆ ಮಾಡಿದ್ದರು. ಈ…

Read More

ಮಂಗಳೂರು: ಮಾದಕ ವಸ್ತುವನ್ನು ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಕಾವೂರು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ವಾಮಂಜೂರು ತಿರುವೈಲು ಮೂಡುಜೆಪ್ಪು ಅಮೃತೇಶ್ವರ ದೇವಸ್ಥಾನದ ಬಳಿಯ ನಿವಾಸಿ ನದೀಂ(34) ಎಂದು ಪತ್ತೆ ಹಚ್ಚಲಾಗಿದೆ. ಈತ ಬಂಗ್ರ ಕೂಳೂರು ಕಡೆಗೆ ಹೋಗುವ ರಸ್ತೆಯಲ್ಲಿ ಕಾರಿನಲ್ಲಿ ಮಾದಕ ವಸ್ತುಗಳನ್ನಿಟ್ಟುಕೊಂಡು ಗಿರಾಕಿಗಳಿಗಾಗಿ ಕಾಯುತ್ತಿದ್ದ ಎನ್ನಲಾಗಿದ್ದು, ಈತನ ವಶದಲ್ಲಿದ್ದ ಅಂದಾಜು 56,000 ರೂ. ಬೆಲೆಬಾಳುವ ಮಾದಕ ವಸ್ತುಗಳು, ಮೊಬೈಲ್ ಫೋನ್, 7 ಡೆಬಿಟ್‌ ಕಾರ್ಡ್‌ಗಳು ಮತ್ತು ಕಾರನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

Read More

ಬೆಳ್ತಂಗಡಿ: ಆಟೋರಿಕ್ಷಾದಲ್ಲಿ ಅಪ್ರಾಪ್ತ ವಯಸ್ಸಿನ ಬಾಲಕಿಗೆ ಲೈಂಗಿಕ ದೌರ್ಜನ್ಯವೆಸಗಿದ ಆರೋಪಿಗಳಿಗೆ ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ (ಪೋಕ್ಸ್) ಎಫ್ಟಿಎಸ್‌ಸಿ 1 ನ್ಯಾಯಾಲಯದ ನ್ಯಾಯಾಧೀಶರಾದ ಡಿ. ವಿನಯ್ ಅವರು ಶಿಕ್ಷೆ ವಿಧಿಸಿ ಆದೇಶ ಹೊರಡಿಸಿದ್ದಾರೆ. ಇಳಂತಿಲ ಗ್ರಾಮದ ನಿವಾಸಿ ಅಬ್ದುಲ್ ಕರೀಂ (39) ಹಾಗೂ ಮೊಗ್ರು ಗ್ರಾಮದ ಅಟೋ ಚಾಲಕ ಸಾಧಿಕ್ (34) ಶಿಕ್ಷೆಗೆ ಒಳಗಾದವರಾಗಿದ್ದಾರೆ. ಅಪ್ರಾಪ್ತ ವಯಸ್ಸಿನ ಬಾಲಕಿಯೊಬ್ಬಳು 2023ರ ಜೂನ್ 18ರಂದು ಬಂದಾರು ಗ್ರಾಮದ ನೇಲೋಳ್ಪಲ್ಕೆ ಎಂಬಲ್ಲಿಗೆ ನಡೆದುಕೊಂಡು ಹೋಗುತ್ತಿದ್ದ ವೇಳೆ ಕುಂಟಾಲ ಎಂಬಲ್ಲಿಗೆ ತಲುಪುವ ವೇಳೆ ಅಟೋರಿಕ್ಷದಲ್ಲಿ ‌ಬಂದ ಆರೋಪಿಗಳು ರಿಕ್ಷಾವನ್ನು ನಿಲ್ಲಿಸಿದ್ದು ಆಕೆಯೂ ರಿಕ್ಷಾದಲ್ಲಿ ಹತ್ತಿದ್ದಾಳೆ. ರಿಕ್ಷಾದಲ್ಲಿ ತೆರಳುವ ವೇಳೆ ರಿಕ್ಷಾದಲ್ಲಿದ್ದ ಕರೀಂ ಎಂಬಾತ ಆಕೆಯ ಮೈಮೇಲೆ ಕೂಹಾಕಿ ದೌರ್ಜನ್ಯ ನಡೆಸಿದ್ದಾನೆ, ಈ ವೇಳೆ ಭಯಗೊಂಡ ಬಾಲಕಿ ರಿಕ್ಷಾದಿಂದ ಹಾರಿದ್ದಾಳೆ ರಸ್ತೆಗೆ ಬಿದ್ದ ಬಾಲಕಿ ಗಾಯಗೊಂಡಿದ್ದಳು ಈ ವೇಳೆ ರಿಕ್ಷಾ ನಿಲ್ಲಿಸದೆ ಪರಾರಿಯಾಗಿದ್ದರು. ಈ ಬಗ್ಗೆ ಬಾಲಕಿಯ ದೂರಿನಂತೆ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. ಪ್ರಕರಣದ…

Read More

ಬೆಂಗಳೂರು : ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ, ಕೇಂದ್ರ ಸಚಿವ ಎಸ್​ಎಂ ಕೃಷ್ಣ (SM Krishna) ಅವರು ನಿಧನರಾಗಿದ್ದಾರೆ. ಎಸ್​ಎಂ ಕೃಷ್ಣ ಅವರ ನಿಧನ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಇಂದಿನಿಂದ ಮೂರು ದಿನಗಳ ಕಾಲ ಶೋಕಾಚರಣೆ ಘೋಷಣೆ ಮಾಡಿದೆ. ಇದೇ ವೇಳೆ ಬುಧವಾರ (ಡಿಸೆಂಬರ್ 11) ರಾಜ್ಯಾದ್ಯಂತ ಸರ್ಕಾರಿ ರಜೆ ಘೋಷಣೆ ಮಾಡಲಾಗಿದೆ. ಡಿಸೆಂಬರ್​ 10 ರಿಂದ ಡಿಸೆಂಬರ್ 12ರವರೆಗೆ ಶೋಕಾಚರಣೆಗೆ ಘೋಷಣೆ ಮಾಡಲಾಗಿದೆ. ಮೂರು ದಿನಗಳ ಕಾಲ ರಾಜ್ಯ ಸರ್ಕಾರದ ಎಲ್ಲಾ ಕಟ್ಟಡಗಳ ಮೇಲೆ ರಾಷ್ಟ್ರಧ್ವಜ ಅರ್ಧಕ್ಕೆ ಹಾರಿಸಿ ಅಗಲಿದ ಹಿರಿಯ ಚೇತನಕ್ಕೆ ಶ್ರದ್ಧಾಂಜಲಿ ಸಲ್ಲಿಸಲಾಗುವುದು ಎಂದು ಸರ್ಕಾರ ಪ್ರಕಟಣೆಯಲ್ಲಿ ತಿಳಿಸಿದೆ. ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನೆರವೇರಲಾಗುವುದು. ಖಾಸಗಿ ಶಾಲೆಗಳಿಗೂ ರಜೆಬುಧವಾರ ಖಾಸಗಿ ಶಾಲಾ-ಕಾಲೇಜುಗಳಿಗೂ ರಜೆ ಘೋಷಣೆ ಮಾಡಲಾಗಿದೆ. ಖಾಸಗಿ ಶಾಲೆಗಳ ಒಕ್ಕೂಟ ರಜೆ ಘೋಷಿಸಿ ಆದೇಶ ಹೊರಡಿಸದೆ. ಶನಿವಾರ ಪೂರ್ಣ ದಿನ ತರಗತಿ ನಡೆಸಿ ಸರಿಪಡಿಸಿಕೊಳ್ಳುವಂತೆ ಕ್ಯಾಮ್ಸ್ ಪ್ರಧಾನ ಕಾರ್ಯದರ್ಶಿ ಶಶಿಕುಮಾರ್ ಮಾಹಿತಿ ನೀಡಿದ್ದಾರೆ.

Read More

ಉಳ್ಳಾಲ: ಎರಡು ಕಾರುಗಳ ನಡುವಿನ ಓವರ್ ಟೇಕ್ ರಭಸಕ್ಕೆ ವೃದ್ಧೆಯೋರ್ವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಅಡಂಕುದ್ರು ನಲ್ಲಿ ಸಂಭವಿಸಿದ್ದು, ಬಳಿಕ ಎರಡೂ ಕಾರುಗಳು ರಸ್ತೆ ಬದಿಯ ಕಮರಿಗೆ ಬಿದ್ದಿವೆ. ಮೃತಪಟ್ಟ ಮಹಿಳೆ ಸೇವಂತಿಗುಡ್ಡೆಯ ನಿವಾಸಿ ಕೃಷ್ಣಪ್ಪ ಅವರ ಪತ್ನಿ ಬೇಬಿ (65) ಎಂದು ಗುರುತಿಸಲಾಗಿದೆ. ಬೇಬಿ ಅವರು ಅಡಂ ಕುದ್ರುವಿನಲ್ಲಿ ಅಂಗಡಿ ಹೊಂದಿದ್ದು, ಪಂಪ್ವೆಲ್ ಅಪಾರ್ಟ್ ಮೆಂಟ್ ಒಂದರಲ್ಲಿ ರಾತ್ರಿ ಪಾಳಿ ಕೆಲಸ ಮಾಡುತ್ತಿದ್ದರು. ಸೋಮವಾರ ಸಂಜೆ ಅವರು ಕೆಲಸಕ್ಕೆ ತೆರಳಲು ರಸ್ತೆ ದಾಟುತ್ತಿದ್ದ ವೇಳೆ ತೊಕ್ಕೊಟ್ಟಿನಿಂದ ಮಂಗಳೂರಿನ ಕಡೆಗೆ ವೇಗವಾಗಿ ಧಾವಿಸುತ್ತಿದ್ದ ಕಾರು ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಬೇಬಿ ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ನಿಯಂತ್ರಣ ತಪ್ಪಿದ ಕಾರು ಹೆದ್ದಾರಿ ಅಂಚಿನ ಆಳವಾದ ಕಮರಿಗೆ ಬಿದ್ದಿದೆ. ಪೋಲೋ ಕಾರನ್ನು ಓವರ್ ಟೇಕ್ ಮಾಡುತ್ತಿದ್ದ ಕಿಯಾ ಕಾರು ಕೂಡ ರಸ್ತೆ ಬದಿಯ ಪೊದೆಗೆ ನುಗ್ಗಿದೆ. ಅಪಘಾತದಲ್ಲಿ ಕಾರು ಚಾಲಕರಿಬ್ಬರು ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ. ಘಟನಾ ಸ್ಥಳಕ್ಕೆ ಡಿಸಿಪಿ ರವಿಶಂಕರ್, ಸಂಚಾರಿ ಎಸಿಪಿ…

Read More

ಬೆಂಗಳೂರು: ಮಾಜಿ ಸಿಎಂ ಎಸ್‌ಎಂ ಕೃಷ್ಣ ಬೆಳಗಿನ ಜಾವ ಸುಮಾರು 2.45ಕ್ಕೆ ಕೊನೆಯುಸಿರೆಳೆದಿದ್ದಾರೆ. ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ಮುಖ್ಯಮಂತ್ರಿಗಳು ಚಿಕಿತ್ಸೆ ಪಡೆದು ಗುಣಮುಖರಾಗಿ ಹಿಂದಿರುಗಿದ್ದರು. ಇಂದು ಸದಾಶಿವನಗರದ ನಿವಾಸದಲ್ಲಿ ಎಸ್‌ಎಂ ಕೃಷ್ಣ ನಿಧನರಾಗಿದ್ದಾರೆ. ದೀರ್ಘ ಕಾಲದವರೆಗೆ ಕಾಂಗ್ರೆಸ್‌ನಲ್ಲಿ ಗುರುತಿಸಿಕೊಂಡಿದ್ದ ಎಸ್‌ಎಂ ಕೃಷ್ಣ ಅವರು ರಾಜಕೀಯ ಅಂತ್ಯದ ಸಂದರ್ಭದಲ್ಲಿ ಬಿಜೆಪಿ ಸೇರ್ಪಡೆಯಾಗಿದ್ದರು. ಶ್ವಾಸಕೋಶದ ಸೋಂಕು ಕಾಣಿಸಿಕೊಂಡಿದ್ದರಿಂದ ಮಣಿಪಾಲದ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಬಳಿಕವೂ ಎಸ್ ಎಂ ಕೃಷ್ಣ ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದರು ಎಂದು ತಿಳಿದು ಬಂದಿದೆ. ಎಸ್‌ಎಂ ಕೃಷ್ಣ ಅವರಿಗೆ 92 ವರ್ಷ ವಯಸ್ಸಾಗಿತ್ತು.

Read More

ಉಳ್ಳಾಲ: ತಾಂತ್ರಿಕ ದೋಷದಿಂದ ಅನಿಲ ಟ್ಯಾಂಕರ್‌ನಿಂದ ಹೈಡ್ರಾಲಿಕ್ ಆಸಿಡ್ ಸೋರಿಕೆಯಾಗುತ್ತಿರುವ ಘಟನೆ ರಾಷ್ಟ್ರೀಯ ಹೆದ್ದಾರಿ ಕೋಟೆಕಾರ್ ಉಚ್ಚಿಲ ಸಮೀಪ ನಡೆದಿದ್ದು, ಘಟನಾ ಸ್ಥಳದಲ್ಲಿ ಉಳ್ಳಾಲ, ಮಂಗಳೂರು ದಕ್ಷಿಣ ಸಂಚಾರಿ ಪೊಲೀಸರು ಬೀಡುಬಿಟ್ಟಿದ್ದಾರೆ. ಎಂಆರ್‌ಪಿಎಲ್‌ ತಂಡ ಮತ್ತು ಅಗ್ನಿ ಶಾಮಕ ದಳದವರು ಸ್ಥಳಕ್ಕೆ ದೌಡಾಯಿಸಿದ್ದಾರೆ. ಕಾರವಾರದಿಂದ ಕೊಚ್ಚಿಗೆ ಹೈಡ್ರಾಲಿಕ್ ಆಸಿಡ್ ಸಾಗಿಸುತ್ತಿದ್ದ ಟ್ಯಾಂಕರ್‌ನಲ್ಲಿ ಅನಿಲ ಸೋರಿಕೆಯಾಗಿದೆ. ಟ್ಯಾಂಕರ್‌ನಿಂದ ಅನಿಲ ಸೋರಿಕೆಯಾಗುವುದನ್ನು ಗಮನಿಸಿದ ಚಾಲಕ ಹೆದ್ದಾರಿ ಬಳಿ ಟ್ಯಾಂಕ‌ರ್ ಅನ್ನು ನಿಲ್ಲಿಸಿದ್ದಾರೆ. ತಕ್ಷಣವೇ ಪೊಲೀಸರಿಗೆ ಸ್ಥಳೀಯರು ಮಾಹಿತಿಯನ್ನು ನೀಡಿದ್ದಾರೆ. ಅನಿಲ ಸೋರಿಕೆಯಿಂದ ಶ್ವಾಸಕೋಶದ ತೊಂದರೆಯುಂಟಾಗುವ ಸಾಧ್ಯತೆಯಿದ್ದು, ಸ್ಥಳಕ್ಕೆ ಅಗ್ನಿ ಶಾಮಕ ದಳ, ಉಳ್ಳಾಲ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಹೆದ್ದಾರಿಯಲ್ಲಿ ವಾಹನ ಸಂಚಾರ ಯಥಾಸ್ಥಿತಿಯಲ್ಲಿದ್ದು, ಯಾವುದೇ ಸೂಚನೆಗಳನ್ನು ಇಲಾಖೆ ಈವರೆಗೆ ಸ್ಥಳೀಯರಿಗೆ, ವಾಹನ ಸವಾರರಿಗೆ ನೀಡಿಲ್ಲ ಎಂದು ತಿಳಿದು ಬಂದಿದೆ.

Read More