Author: main-admin

ಬೆಂಗಳೂರು: ಗೃಹ ಸಚಿವ ಜಿ.ಪರಮೇಶ್ವರ್‌ ಒಡೆತನದ ಸಂಸ್ಥೆಗಳ ಮೇಲೆ ಇಂದು ಬೆಳ್ಳಂಬೆಳಗ್ಗೆ ಇ.ಡಿ ದಾಳಿ ನಡೆಸಿದೆ. ತುಮಕೂರಿನಲ್ಲಿರುವ ಸಿದ್ದಾರ್ಥ ಮೆಡಿಕಲ್, ಇಂಜಿನಿಯರಿಂಗ್‌ ಕಾಲೇಜು ಅಲ್ಲದೆ ನೆಲಮಂಗಲದ ಟಿ ಬೇಗೂರು ಬಳಿ ಇರುವ ಕಾಲೇಜು ಮೇಲೂ ಇಡಿ ದಾಳಿ ನಡೆದಿದೆ. 9 ಕಾರುಗಳಲ್ಲಿ ಬಂದಿರುವ ಇಡಿ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ. ಕನ್ನಡ ನಟಿ ರನ್ಯಾ ರಾವ್‌ ಒಳಗೊಂಡಿರುವ ಗೋಲ್ಡ್‌ ಸ್ಮಗ್ಲಿಂಗ್‌ ಕೇಸಿಗೆ ಸಂಬಂಧಪಟ್ಟಂತೆ ಈ ದಾಳಿ ನಡೆದಿದೆ ಎನ್ನಲಾಗುತ್ತಿದೆ. ಆದರೆ ಈ ಕುರಿತು ಅಧಿಕೃತ ಮಾಹಿತಿ ಇನ್ನೂ ಹೊರಬಿದ್ದಿಲ್ಲ. ನಾಲ್ಕು ವರ್ಷದ ಹಿಂದೆಯೂ ಆದಾಯ ತೆರಿಗೆ ಇಲಾಖೆ ಪರಮೇಶ್ವರ್‌ ಒಡೆತನದ ಕಾಲೇಜಿನ ಮೇಲೆ ದಾಳಿ ನಡೆಸಿತ್ತು. ಈ ದಾಳಿ ಸಂದರ್ಭದಲ್ಲಿ ಕೋಟ್ಯಂತರ ರೂಪಾಯಿ ವಶಕ್ಕೆ ಪಡೆಯಲಾಗಿತ್ತು. ಆಗ ಅಕ್ರಮ ಹಣ ವರ್ಗಾವಣೆ ಪ್ರಕರಣ ದಾಖಲಾಗಿತ್ತು. ಕೋಟಿಗಟ್ಟಲೆ ಮೊತ್ತದ ಚಿನ್ನ ದುಬೈಯಿಂದ ಕಳ್ಳದಾರಿಯಲ್ಲಿ ತಂದ ಪ್ರಕರಣಕ್ಕೆ ಸಂಬಂಧಿಸಿ ಸೆರೆಯಾಗಿ ಕೆಲವು ತಿಂಗಳಿಂದ ಜೈಲಿನಲ್ಲಿದ್ದ ರನ್ಯಾ ರಾವ್‌ಗೆ ನಿನ್ನೆಯಷ್ಟೇ ನ್ಯಾಯಾಲಯ ಜಾಮೀನು…

Read More

ರಾಜ್ಯದಲ್ಲಿ ವರುಣಾರ್ಭಟ ಮತ್ತಷ್ಟು ಹೆಚ್ಚಲಿದ್ದು, 7 ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮಳೆಯ ಅಬ್ಬರಕ್ಕೆ ಈಗಾಗಲೇ ಅವಾಂತರಗಳು ಸೃಷ್ಟಿಯಾಗಿದ್ದು, ಜನಜೀವನ ಅಸ್ತವ್ಯಸ್ಥಗೊಂಡಿದೆ. ಈ ನಡುವೆ ಇಂದಿನಿಂದ ರಾಜ್ಯದಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಕಡೆಗಳಲ್ಲಿ ಮಳೆಯಾಗಲಿದೆ. ಇಂದು ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದ್ದು, ರೆಡ್ ಅಲರ್ಟ್ ಘೋಷಿಸಲಾಗಿದೆ. ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ದಾವಣಗೆರೆ ಜಿಲ್ಲೆಗಳಿಗೆ ಆರೇಂಝ್ ಅಲರ್ಟ್ ಘೋಷಿಸಲಾಗಿದೆ. ತುಮಕೂರು, ಕೋಲಾರ, ರಾಮನಗರ, ಚಿಕ್ಕಬಳ್ಳಾಪುರ, ಚಿತ್ರೌರ್ಗ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೊಪ್ಪಳ, ಬೀದರ್ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ವಾಯುಭಾರ ಕುಸಿತದಿಂದಾಗಿ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಮೇ. 24ರ ವರೆಗೆ ಗುಡುಗು ಮಿಂಚು ಸಮೇತವಾಗಿ ಮಳೆ ಆಗುವ ಹೆಚ್ಚಿನ ಸಾಧ್ಯತೆಗಳಿವೆ. ಕರಾವಳಿ ಭಾಗಗಳಲ್ಲಿ ಪ್ರತಿ ಗಂಟೆಗೆ 55 ಕೀ.ಮೀ ವೇಗದಲ್ಲಿ…

Read More

ಮಂಗಳೂರು: ಕರಾವಳಿಯಲ್ಲಿ ಯಾವುದೇ ಬಲೆಗಳನ್ನು / ಸಾಧನಗಳನ್ನು ಉಪಯೋಗಿಸಿ ಎಲ್ಲಾ ಯಾಂತ್ರೀಕೃತ ದೋಣಿಗಳ ಮುಖಾಂತರ ಹಾಗೂ 10 ಅಶ್ವಶಕ್ತಿ ಸಾಮಥ್ರ್ಯಕ್ಕಿಂತ ಮೇಲ್ಪಟ್ಟ ಮೋಟಾರೀಕೃತ ದೋಣಿ ಹಾಗೂ ಸಾಂಪ್ರದಾಯಿಕ ದೋಣಿಗಳ ಮುಖಾಂತರ ಕೈಗೊಳ್ಳುವ ಮೀನುಗಾರಿಕೆ ಚಟುವಟಿಕೆಯನ್ನು ಜೂನ್ 1 ರಿಂದ ಜುಲೈ 31 ರವರೆಗೆ (ಉಭಯ ದಿನಗಳು ಸೇರಿ) ಒಟ್ಟು 61 ದಿನಗಳು ನಿಷೇದಿಸಲಾಗಿದೆ . ದೋಣಿಯನ್ನು ಸಾಗಿಸುವ ಉದ್ದೇಶಕ್ಕಾಗಿಯೇ 10 ಅಶ್ವಶಕ್ತಿಯವರೆಗಿನ ಸಾಮಥ್ರ್ಯದ ಮೋಟಾರೀಕೃತ ಇಂಜಿನ್ ಹಾಗೂ ಸಾಂಪ್ರದಾಯಿಕ / ನಾಡದೋಣಿಗಳು ಕರಾವಳಿ ಮೀನುಗಾರಿಕೆಯನ್ನು ಕೈಗೊಳ್ಳಲು ಅನುಮತಿಸಿದೆ. ಮೀನುಗಾರಿಕೆ ನಿಷೇದಿಶಿದ ಸರ್ಕಾರದ ಆದೇಶವನ್ನು ಉಲ್ಲಂಘಿಸುವ ಮೀನುಗಾರಿಕಾ ದೋಣಿಗಳು ಮತ್ತು ಮೀನುಗಾರರು ಕರ್ನಾಟಕ ಕಡಲ ಮೀನುಗಾರಿಕೆ ಕಾಯ್ದೆ-1986ರಲ್ಲಿ ವಿಧಿಸಲಾಗಿರುವ ದಂಡನೆಗಳಿಗೆ ಹೊಣೆಯಾಗುವುದಲ್ಲದೇ ಒಂದು ವರ್ಷದ ಅವಧಿಗೆ ರಾಜ್ಯ ಮಾರಾಟ ಕರ ರಹಿತ ಡೀಸೆಲ್ ಪಡೆಯಲು ಅನರ್ಹರಾಗುತ್ತಾರೆ. ಈ ಆದೇಶವನ್ನು ಕರಾವಳಿ ಪ್ರದೇಶದ ಎಲ್ಲಾ ಮೀನುಗಾರರ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಹೊರಡಿಸಿರುವುದರಿಂದ ಎಲ್ಲಾ ಮೀನುಗಾರರು ಆದೇಶವನ್ನು ಪಾಲಿಸಿ ಸರ್ಕಾರದೊಂದಿಗೆ ಸಹಕರಿಸಬೇಕು ಎಂದು ಮೀನುಗಾರಿಕೆ ಜಂಟಿ ನಿರ್ದೇಶಕರು…

Read More

ಮಂಗಳೂರು: ಇತ್ತೀಚೆಗೆ ನಡೆದ ದ ಕ ಜಿಲ್ಲಾ ಹಾಲು ಉತ್ಪಾದಕರ ಒಕ್ಕೂಟದ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ದಕ್ಷಿಣ ಕನ್ನಡ ಜಿಲ್ಲಾ ಸಹಕಾರ ಭಾರತಿಯ ವಿಜೇತ ಅಭ್ಯರ್ಥಿಗಳನ್ನು ಮಂಗಳೂರು ಮಹಾನಗರ ಜಿಲ್ಲೆ ಮತ್ತು ಸಹಕಾರ ಭಾರತಿ ದ ಕ ಜಿಲ್ಲೆಯ ವತಿಯಿಂದ ತಾರೀಕು ಮೇ 19 ರಂದು ಕ್ಯಾಂಪ್ಕೊ ಸಭಾ ಭವನದಲ್ಲಿ ಅಭಿನಂದಿಸಲಾಯಿತು. ಹಿರಿಯ ಸಹಕಾರಿ, ಸಹಕಾರ ಭಾರತಿ ರಾಷ್ಟ್ರೀಯ ಮಾಜಿ ಉಪಾಧ್ಯಕ್ಷ ಮತ್ತು ಕ್ಯಾಂಪ್ಕೋ ಮಾಜಿ ಅಧ್ಯಕ್ಷ ಶ್ರೀ ಪದ್ಮನಾಭ ಕೊಂಕೋಡಿಯವರು ತಮ್ಮ ಅಭಿನಂದನಾ ಭಾಷಣದಲ್ಲಿ ಎಲ್ಲಾ ಅಭ್ಯರ್ಥಿಗಳನ್ನು ಹಾಗೂ ಚುನಾವಣೆಯಲ್ಲಿ ಶ್ರಮವಹಿಸಿದ ಕಾರ್ಯಕರ್ತರನ್ನು ಪ್ರಶಂಸಿಸಿದರು. ಕರ್ನಾಟಕದಲ್ಲಿ ಸಹಕಾರ ಭಾರತಿ ಬೆಳೆದು ಬಂದ ವಿವರ, ಈ ಪಥದಲ್ಲಿ ಏಳು ಬೀಳುಗಳು, ಸಾಧನೆ, ಅತ್ತು ಅದರ ಹಿಂದಿನ ಪರಿಶ್ರಮ ಎಲ್ಲವೂ ಸೇರಿ ಒಟ್ಟಾರೆ ಸಂಘಟನೆಯ ಬೆಳವಣಿಗೆಯೇ ಒಂದು ಪಾಠ ಮತ್ತು ಸಂಘಟನೆಯು ವ್ಯಕ್ತಿಯ ಯಶಸ್ಸಿಗೆ ಉತ್ತಮ ಅನುಭವದ ಸಾರವಾಗಲಿದೆ ಎಂದರು. ನಿರ್ದೇಶಕರಾಗಿ ಆಯ್ಕೆಯಾದವರು, ಗೊ ಸಾಕಾಣೆದಾರರ ಸಂಕಷ್ಟ, ಮತ್ತು ಅಹವಾಲುಗಳಿಗೆ ತುರ್ತು ಸ್ಪಂದಿಸುವ ಅವಶ್ಯಕತೆ…

Read More

ಮಂಗಳೂರು: ವರ್ಕ್‌ ಫ್ರಮ್‌ ಹೋಮ್‌ ಆನ್‌ಲೈನ್‌ ಕೆಲಸದ ಜಾಹೀರಾತನ್ನು ನಂಬಿ ವ್ಯಕ್ತಿಯೊಬ್ಬ 6.50 ಲಕ್ಷ ರೂ. ಕಳೆದುಕೊಂಡ ಬಗ್ಗೆ ಸೆನ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದೂರುದಾರರು ಇನ್‌ಸ್ಟಾಗ್ರಾಂನಲ್ಲಿ ಆನ್‌ಲೈನ್‌ ಕೆಲಸದ ಜಾಹೀರಾತೊಂದರ ಲಿಂಕ್‌ ಕ್ಲಿಕ್‌ ಮಾಡಿದಾಗ ಅದು ವಾಟ್ಸ್‌ಆ್ಯಪ್‌ ಹೋಗಿದೆ.ಅದರಲ್ಲಿ ಅಪರಿಚಿತ ಸಂಖ್ಯೆಯಿಂದ ಲಿಂಕ್‌ ಒಂದು ಬಂದಿದ್ದು. ಲಿಂಕ್‌ ಒತ್ತಿ ನೋಂದಣಿ ಮಾಡುವಂತೆ ಅಪರಿಚಿತ ವ್ಯಕ್ತಿ ತಿಳಿಸಿದಂತೆ ದೂರುದಾರು ಲಿಂಕ್‌ ತೆರೆದರು. ಬಳಿಕ ಟೆಲಿಗ್ರಾಂ ಆ್ಯಪ್‌ ಡೌನ್‌ಲೋಡ್‌ ಮಾಡಿ ಅಖೀಲ್‌ ಎಂಬಾತನನ್ನು ಫಾಲೋ ಮಾಡುವಂತೆ ಅಪರಿಚಿತ ವ್ಯಕ್ತಿ ತಿಳಿಸಿದನು. ಅದರಂತೆ ಅಖೀಲ್‌ 5 ಟಾಸ್ಕ್‌ಗಳನ್ನು ನೀಡಿದ್ದು, ಮೊದಲಿಗೆ 500 ರೂ. ಟ್ರಾನ್ಸ್‌ಫರ್‌ ಮಾಡಿದ್ದಕ್ಕೆ ಲಾಭಾಂಶ ಸಹಿತ 2,000 ರೂ. ವಾಪಸು ನೀಡಿದರು. ಇದನ್ನು ನಂಬಿ ದೂರುದಾರರು ಹಂತ ಹಂತವಾಗಿ ಒಟ್ಟು 6.50 ಲಕ್ಷ ರೂ. ಆನ್‌ಲೈನ್‌ ಮೂಲಕ ವರ್ಗಾವಣೆ ಮಾಡಿದ್ದಾರೆ. ಆದರೆ ಆ ಬಳಿಕ ಅಪರಿಚಿತ ವ್ಯಕ್ತಿಗಳು ವಿವಿಧ ಕಾರಣ ನೀಡಿ ಲಾಭಾಂಶ, ಹೂಡಿಕೆ ಮಾಡಿದ ಹಣ ವಾಪಸು ನೀಡಿಲ್ಲ. ಆಗ…

Read More

ಮಣಿಪಾಲದ ಸ್ಕೂಲ್ ಆಫ್ ಕಾಮರ್ಸ್ ಎಕೊನೋಮಿಕ್ ಅಕಾಡೆಮಿ ವಿದ್ಯಾರ್ಥಿಯೊಬ್ಬನ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪಟ್ಟೆಯಾಗಿದೆ. ಮೃತರನ್ನು ಛತ್ತಿಸ್‌ಗಡದ ಅನ್ಶುಲ್ ಯಾದವ್ (21) ಎಂದು ಗುರುತಿಸಲಾಗಿದೆ. ಇವರು ಬಿಬಿಎ (ಬ್ಯಾಚುಲರ್ ಆಫ್ ಬ್ಯುಸಿನೆಸ್ ಅಕಾಡೆಮಿ) ವ್ಯಾಸಾಂಗ ಮಾಡುತ್ತಿದ್ದು ಮಣಿಪಾಲದ ಎಂಐಟಿ ಹಾಸ್ಟೆಲ್‌ ನಲ್ಲಿ ವಾಸ್ತವ್ಯ ಮಾಡಿಕೊಂಡಿದ್ದರು. ಇವರು ತನ್ನ ಮೊದಲ ವರ್ಷದ ಸೆಕೆಂಡ್ ಸೆಮಿಸ್ಟರ್‌ನಲ್ಲಿ 4 ವಿಷಯ ಗಳಲ್ಲಿ ಅನುತ್ತೀರ್ಣಗೊಂಡ ವಿಚಾರದಲ್ಲಿ ಮನನೊಂದು ಮೇ 12ರಂದು ರಾತ್ರಿಯಿಂದ ಮೇ 18ರ ಬೆಳಗಿನ ಮಧ್ಯಾವಧಿಯಲ್ಲಿ ಹಾಸ್ಟೆಲ್ ರೂಮಿನಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತದೇಹವು ಕೊಳೆತ ಸ್ಥಿತಿಯಲ್ಲಿ ಕಂಡು ಬಂದಿದೆ. ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಮಂಗಳೂರು: ವಿದೇಶದಲ್ಲಿ ಉದ್ಯೋಗ ಕೊಡಿಸುವ ಆಮಿಷವೊಡ್ಡಿ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಖಾಸಗಿ ಏಜೆನ್ಸಿಯೊಂದು ಸುಮಾರು 300ಕ್ಕೂ ಅಧಿಕ ಮಂದಿಗೆ 9 ಕೋಟಿಗೂ ಅಧಿಕ ವಂಚನೆ ಮಾಡಿದ ಆರೋಪ ಕೇಳಿ ಬಂದಿದ್ದು, ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವನನ್ನು ಸಿಸಿಬಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಇನ್ನು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರು ನೀಡಿದ್ದರೂ ಕ್ರಮಕೈಗೊಳ್ಳದೆ ಮತ್ತಷ್ಟು ವಂಚನೆ ಮಾಡಲು ಅವಕಾಶಕೊಟ್ಟ ಆರೋಪದ ಮೇಲೆ ಇಬ್ಬರು ಪೊಲೀಸ್ ಅಧಿಕಾರಿಗಳನ್ನು ಸಸ್ಪೆಂಡ್ ಮಾಡಲಾಗಿದೆ. ಬೆಂದೂರ್‌ವೆಲ್‌ನಲ್ಲಿ ಒಂದು ವರ್ಷದಿಂದೀಚೆಗೆ ಕಾರ್ಯಾಚರಿಸುತ್ತಿದ್ದ ಹಯರ್‌ ಗ್ಲೋ ಎಲಿಗೆಂಟ್‌ ಓವರ್‌ಸೀಸ್‌ ಇಂಟರ್‌ನ್ಯಾಷನಲ್‌ ಪ್ರೈ.ಲಿ. ಸಂಸ್ಥೆಯು ನ್ಯೂಜಿಲೆಂಡ್‌ನಲ್ಲಿರುವ ವಲರಿಸ್‌ ಎಂಬ ರಿಗ್‌ ಸಂಸ್ಥೆಯಲ್ಲಿ ಕೆಲಸ ಕೊಡಿಸುವುದಾಗಿ ನಂಬಿಸಿ ಜಿಲ್ಲೆಯ 185ಕ್ಕೂ ಅಧಿಕ ಮಂದಿಯಿಂದ ತಲಾ 1.65 ಲಕ್ಷ ರೂ.ನಿಂದ 1.80 ಲಕ್ಷ ರೂ.ವರೆಗೆ ಪಡೆದು ವಂಚಿಸಿದೆ.ಕರ್ನಾಟಕ ಮಾತ್ರವಲ್ಲದೆ ಕೇರಳ ಸೇರಿದಂತೆ ಇತರ ಕೆಲವು ರಾಜ್ಯಗಳ ಜನರೂ ವಂಚನೆಗೆ ಒಳಗಾಗಿದ್ದಾರೆ. ಇದೀಗ ವಂಚನೆಗೊಳಗಾದವರು ಪೊಲೀಸ್ ಠಾಣೆ ಮೆಟ್ಟಿಲೇರುತ್ತಿದ್ದಂತೆಯೇ ವಂಚನೆಯ ಕರಾಳ ಮುಖ ಅನಾವರಣಗೊಂಡಿದೆ.…

Read More

ಮಂಗಳೂರು: ನಗರದ ಕೊಡಿಯಾಲ್ ಬೈಲ್ ನ್ಲಲಿರುವ ಜಿಲ್ಲಾ ಕಾರಾಗೃಹದಲ್ಲಿ ಸೋಮವಾರ ವಿಚಾರಣಾಧೀನ ಕೈದಿಗಳ ನಡುವೆ ಮಾರಾಮಾರಿ ನಡೆದಿರುವ ಬಗ್ಗೆ ವರದಿಯಾಗಿದೆ. ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ಆರೋಪಿಗಳು ಮತ್ತು ಮತ್ತೊಂದು ಗ್ಯಾಂಗ್ ನಡುವೆ ಹೊಡೆದಾಟ ನಡೆದಿದ್ದು ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ನೌಷದ್ ಮೇಲೆ ಇನ್ನೊಂದು ಗುಂಪಿನ ಕೈದಿಗಳು ದಾಳಿ ನಡೆಸಿರುವುದಾಗಿ ವರದಿಯಾಗಿದೆ ಸೋಮವಾರ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ಆರೋಪಿ ನೌಷಾದ್ ನ ಪೊಲೀಸ್ ಕಸ್ಟಡಿ ಅಂತ್ಯವಾಗಿದ್ದು, ಕೋರ್ಟ್ ಗೆ ಚೊಟ್ಟೆ ನೌಷಾದ್ ನನ್ನು ಪೊಲೀಸರು ಹಾಜರುಪಡಿಸಿದ್ದರು. ಬಳಿಕ ಮೈಸೂರು ಜೈಲಿಗೆ ಸ್ಥಳಾಂತರ ಮಾಡಲು ಪೊಲೀಸರು ನಿರ್ಧರಿಸಿದ್ದು ಈ ಮಧ್ಯೆ ಮಂಗಳೂರು ಜೈಲಿನಲ್ಲಿ ಯಾರನ್ನೊ ನೋಡಬೇಕು ಎಂದು ನೌಷಾದ್ ಹೇಳಿದ್ದ ಎನ್ನಲಾಗಿದೆ. ಜೈಲಿನಲ್ಲಿ ಮತ್ತೋರ್ವ ಖೈದಿ ಭೇಟಿಗಾಗಿ ನೌಷಾದ್ ನನ್ನು ಪೊಲೀಸರು ಕರೆದುಕೊಂಡು ಹೋಗಿದ್ದ ವೇಳೆ ಇದ್ದಕಿದ್ದಂತೆ ನೌಷಾದ್ ಮೇಲೆ ಕಲ್ಲು ಹಾಗೂ ಸಿಕ್ಕ ಸಿಕ್ಕ ವಸ್ತುಗಳನ್ನ ಎಸೆದು ಹಲ್ಲೆಗೆ ಯತ್ನ ನಡೆದಿದೆ. ಕೂಡಲೇ ಜೈಲು ಸಿಬಂದಿಗಳು ದಾಳಿಯನ್ನು…

Read More

ಉಳ್ಳಾಲ: ಯುವಕನೊಬ್ಬ ತಾನು ಕಲಿತ ಶಾಲೆಯಲ್ಲೇ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ಕುರ್ನಾಡು ದತ್ತಾತ್ರೇಯ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಸೋಮವಾರ ಘಟನೆ ನಡೆದಿದೆ. ಕುರ್ನಾಡು ಹೂವಿನಕೊಪ್ಪಲ ನಿವಾಸಿ ಸುಧೀರ್ (32) ಆತ್ಮಹತ್ಯೆ ಮಾಡಿಕೊಂಡವರು. ಕಿಡ್ನಿ ಸಮಸ್ಯೆಯಿಂದ ಬಳಲುತ್ತಿರುವ ಸಂಬಂಧಿಕರಿಗೆ ನನ್ನ ಕಿಡ್ನಿಯನ್ನು ನೀಡಿ, ಮೇ 29ರಂದು ನಿಗದಿಯಾಗಿರುವ ಸಹೋದರನ ವಿವಾಹವನ್ನು ನಿಲ್ಲಿಸಬೇಡಿ’ ಎಂದು ಡೆತ್ ನೋಟ್ ಬರೆದಿಟ್ಟ ಯುವಕ ತಾನು ಕಲಿತ ಶಾಲೆಯ ಆವರಣದಲ್ಲಿ ನೇಣುಹಾಕಿಕೊಂಡು ಮೃತಪಟ್ಟಿದ್ದಾರೆ.ಪೇಂಟರ್ ಆಗಿದ್ದ ಸುಧೀರ್, ನಸುಕಿನ ಜಾವ ಬೈಕ್‌ನಲ್ಲಿ ಹಾಲು ತರಲು ಮನೆಯಿಂದ ತೆರಳಿದ್ದರು. ತಡವಾದರೂ ಮಗ ಬಾರದ ಕಾರಣ ಅವರ ತಾಯಿ ಸುಧೀರ್ ಅವರನ್ನು ಹುಡುಕೊಂಡು ಹೋದಾಗ ಮನೆ ಸಮೀಪದ ಶಾಲೆಯ ಹೊರಗಡೆ ಬೈಕ್ ಕೀ ಸಮೇತ ಪತ್ತೆಯಾಗಿತ್ತು. ಶಾಲೆಯೊಳಗೆ ಗಮನಿಸುವಾಗ ಸುಧೀರ್ ಅವರು ಶಾಲೆಯ ಮಹಡಿಗೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು ಗೊತ್ತಾಗಿದೆ. ಅವಿವಾಹಿತರಾಗಿದ್ದ ಸುಧೀರ್ ಅವರ ಸಹೋದರಿಯ ಪತಿ ಕಿಡ್ನಿ ಸಮಸ್ಯೆಯಿಂದ…

Read More

ಮಂಗಳೂರು: ವಿದೇಶಗಳಲ್ಲಿ ವಂಚನೆಯ ಉದ್ಯೋಗ ನೇಮಕಾತಿಗೆ ಸಂಬಂಧಿಸಿದ ಕ್ರಿಮಿನಲ್ ಪ್ರಕರಣಗಳನ್ನು ನಿರ್ವಹಿಸುವಲ್ಲಿ ಗಂಭೀರ ಲೋಪ ಎಸಗಿದ ಇಬ್ಬರು ಅಧಿಕಾರಿಗಳನ್ನು ಮಂಗಳೂರು ನಗರ ಪೊಲೀಸ್ ಆಯುಕ್ತರು ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತುಗೊಳಿಸಿದ್ದಾರೆ. ಹಿಂದಿನ ದೂರುಗಳು ಮತ್ತು ನಿರ್ದೇಶನಗಳನ್ನು ನೀಡಿದ್ದರೂ ಸಹ, ಮೆಸರ್ಸ್ ಹೈರ್ಗ್ಲೋ ಎಲಿಗಂಟ್ ಓವರ್ಸೀಸ್ ಇಂಟರ್ನ್ಯಾಷನಲ್ ಪ್ರೈವೇಟ್ ಲಿಮಿಟೆಡ್ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲು ವಿಫಲರಾದ ಕಾರಣ ಮಂಗಳೂರು ಪೂರ್ವ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಸೋಮಶೇಖರ್ ಜಿ.ಸಿ. ಅವರನ್ನು ಅಮಾನತುಗೊಳಿಸಲಾಗಿದೆ. ಪೊಲೀಸರ ನಿಷ್ಕ್ರಿಯತೆ ಮತ್ತು ಮೇಲ್ವಿಚಾರಣೆಯ ಕೊರತೆಯು ಆರೋಪಿಗಳು ಹಲವಾರು ಉದ್ಯೋಗ ಆಕಾಂಕ್ಷಿಗಳಿಗೆ 1.82 ಕೋಟಿ ರೂ.ಗಳಿಗೂ ಹೆಚ್ಚು ವಂಚನೆ ಮಾಡಲು ಅವಕಾಶ ನೀಡಿದಂತಾಗಿದೆ ಪ್ರಸ್ತುತ ಬರ್ಕೆ ಪೊಲೀಸ್ ಠಾಣೆಯಲ್ಲಿ ನಿಯೋಜನೆಗೊಂಡಿರುವ ಮತ್ತು ಈ ಹಿಂದೆ ಮಂಗಳೂರು ಪೂರ್ವ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 235/2024 ರಲ್ಲಿ ತನಿಖಾಧಿಕಾರಿಯಾಗಿದ್ದ ಪಿಎಸ್ಐ ಶ್ರೀ ಉಮೇಶ್ ಕುಮಾರ್ ಎಂ.ಎನ್. ಅವರನ್ನು ಬಹು ತನಿಖಾ ಲೋಪಗಳಿಗಾಗಿ ಅಮಾನತುಗೊಳಿಸಲಾಗಿದೆ. ಆರೋಪಿಗಳನ್ನು ಬಂಧಿಸಲು ವಿಫಲವಾಗಿರುವುದು, ಪ್ರಮುಖ ಸಾಕ್ಷ್ಯಗಳನ್ನು ಸಂಗ್ರಹಿಸಲು,…

Read More