Author: main-admin

ಕಾರ್ಕಳ: ಬೈಲೂರು ಪರಶುರಾಮ ಥೀಮ್ ಪಾರ್ಕ್‌ನಲ್ಲಿ ಮೂರ್ತಿ ನಿರ್ಮಾಣ ಮಾಡಿರುವ ಕೃಷ್ ಆರ್ಟ್ ವಲ್ಡ್‌ನ ಶಿಲ್ಪಿ ಕೃಷ್ಣ ನಾಯ್ಕ್‌ಗೆ ಜಾಮೀನು ಮಂಜೂರು ಆಗಿದೆ. ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಶಿಲ್ಪಿ ಕೃಷ್ಣ ನಾಯ್ಕ್‌ಗೆ ಡಿಸೆಂಬರ್ 7 ರಂದು ಜಾಮೀನು ಮಂಜೂರುಗೋಳಿಸಿದೆ. ಬೈಲೂರು ಪರಶುರಾಮ ಥೀಮ್ ಪಾರ್ಕಿನಲ್ಲಿ ನಿರ್ಮಿಸಿದ ಮೂರ್ತಿಯ ವಿಚಾರದಲ್ಲಿ ಕೃಷ್ಣ ಶೆಟ್ಟಿ ಬಜಗೋಳಿಯವರು ಶಿಲ್ಪಿ ವಿರುದ್ಧ ದೂರು ದಾಖಲಿಸಿದ್ದರು. ಈ ಬಗ್ಗೆ ನ್ಯಾಯಾಲಯದಲ್ಲಿ ನವೆಂಬರ್ 4 ರಂದು ವಿಚಾರಣೆ ನಡೆದಿತ್ತು. ನಾಯಾಧೀಶರು ವಾದ ಪ್ರತಿವಾದವನ್ನು ಆಲಿಸಿ ನಿರೀಕ್ಷಣಾ ಜಾಮೀನನ್ನು ನವೆಂಬರ್ 7ಕ್ಕೆ ಕಾಯ್ದಿರಿಸಿದ್ದರು. ಆದರೆ ನ. 7ರಂದು ಕಾಯ್ದಿರಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯು ತಿರಸ್ಕಾರವಾಗಿತ್ತು. ಇದರಿಂದ ಕಾರ್ಕಳ ನಗರ ಪೊಲೀಸರು ನ. 10ರಂದು ಶಿಲ್ಪಿಯನ್ನು ಕೇರಳದಲ್ಲಿ ಬಂಧಿಸಿ ನವೆಂಬರ್ 11ಕ್ಕೆ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ಪೊಲೀಸರು ಹೆಚ್ಚಿನ ತನಿಖೆಗೆ ಶಿಲ್ಪಿಯನ್ನು 7 ದಿನಗಳ ಕಾಲ ಕಸ್ಟಡಿಗೆ ಪಡೆದುಕೊಂಡಿದ್ದರು. ನಂತರ ನವೆಂಬರ್ 15ರಂದು ಪೊಲೀಸರು ಕ್ರಷ್ಣ ನಾಯ್ಕ್‌ರನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದರು.…

Read More

ಉಪ್ಪಿನಂಗಡಿ: ಚಾಲಕನ ನಿಯಂತ್ರಣ ತಪ್ಪಿದ ಆಂಬ್ಯುಲೆನ್ಸ್‌‌ ಮನೆಯ ಅಂಗಳಕ್ಕೆ ನುಗ್ಗಿದ ಘಟನೆ ನೆಕ್ಕಿಲಾಡಿಯಲ್ಲಿ ನಡೆದಿದೆ. ಪುತ್ತೂರಿನಿಂದ ನೆಕ್ಕಿಲಾಡಿ ಕಡೆಗೆ ಬರುತ್ತಿದ್ದ ಆಂಬ್ಯುಲೆನ್ಸ್‌‌ ಇಲ್ಲಿನ ವನಸುಮ ನರ್ಸರಿ ರಸ್ತೆಯಲ್ಲಿ ನೇರಸಾಗಿ ಮನೆಯೊಂದರ ವರಾಂಡಕ್ಕೆ ನುಗ್ಗಿದೆ. ಘಟನೆಯಿಂದ ಮನೆಯ ಆವರಣಗೋಡೆಗೆ ಹಾನಿಯಾಗಿದ್ದು, ಆ್ಯಂಬುಲೆನ್ಸ್ ಮನೆಯ ಗೋಡೆಗೆ ಢಿಕ್ಕಿಯಾಗುವುದು ಸ್ವಲ್ಪದರಲ್ಲೇ ತಪ್ಪಿದೆ. ಈ ಸಂದರ್ಭ ರಸ್ತೆ ಬದಿ ಶಾಲಾ ಮಕ್ಕಳು ನಿಂತಿದ್ದು ಅವರು ಅಪಾಯದಿಂದ ಪಾರಾಗಿದ್ದಾರೆ. ಕನ್ಯಾಡಿಯ ಸೇವಾ ಭಾರತಿಗೆ ಸೇರಿದ ಆಂಬ್ಯುಲೆನ್ಸ್‌‌ ಇದಾಗಿದ್ದು, ಆರೋಗ್ಯ ಶಿಬಿರವೊಂದಕ್ಕೆ ತೆರಳುತ್ತಿದ್ದ ವೇಳೆ ಘಟನೆ ನಡೆದಿದೆ ಎನ್ನಲಾಗಿದೆ. ಘಟನೆಯಿಂದ ಆಂಬ್ಯುಲೆನ್ಸ್‌‌ ಚಾಲಕ ಗಾಯಗಳಿಲ್ಲದೆ ಅಪಾಯದಿಂದ ಪಾರಾಗಿದ್ದಾರೆ.

Read More

ಮಂಗಳೂರು: ಸಾಂಸ್ಕೃತಿಕ ಮನಸ್ಸುಗಳನ್ನು ಒಗ್ಗೂಡಿಸಿಕೊಂಡು, ಎಲ್ಲರಲ್ಲೂ ಸಾಂಸ್ಕೃತಿಕ ಉಲ್ಲಾಸ ಮೂಡಿಸುವ ಸದುದ್ದೇಶದ ರಾಷ್ಟ್ರೀಯ ಸಾಂಸ್ಕೃತಿಕ ಉತ್ಸವ “ಆಳ್ವಾಸ್‌ ವಿರಾಸತ್‌’ 30ನೇ ವರ್ಷದ ಹೊಸ್ತಿಲಲ್ಲಿದ್ದು, ಸುಮನಸರ ಸ್ವಾಗತಕ್ಕಾಗಿ ವಿದ್ಯಾಗಿರಿ ಕ್ಯಾಂಪಸ್‌ ಸಜ್ಜಾಗುತ್ತಿದೆ. ಈ ವರ್ಷದ “ವಿರಾಸತ್‌’ ಸಂಭ್ರಮವು ಡಿ.10ರಿಂದ 15ರ ವರೆಗೆ ನಡೆಯಲಿದೆ.ಡಿ.10ರಿಂದ ಪುತ್ತಿಗೆಯ ವನಜಾಕ್ಷಿ ಕೆ. ಶ್ರೀಪತಿ ಭಟ್‌ ಬಯಲು ರಂಗ ಮಂದಿರದಲ್ಲಿ ಮುಖ್ಯ ಕಾರ್ಯ ಕ್ರಮ, ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ಉಳಿದಂತೆ ಕೃಷಿ ಮೇಳ, ಆಹಾರ ಮೇಳ, ಕರಕುಶಲ ಮೇಳ, ಫಲಪುಷ್ಪ ಮೇಳ, ಚಿತ್ರಕಲಾ ಮೇಳ, ಕೈಮಗ್ಗ ಸೀರೆಗಳ ಪ್ರದರ್ಶನ ಮುಂತಾದ ವೈಶಿಷ್ಟéಪೂರ್ಣ ಮೇಳಗಳೂ ಇರಲಿವೆ. ದೇಶದ ವಿವಿಧೆಡೆಗಳ ಖ್ಯಾತ ತಂಡ, ವ್ಯಕ್ತಿಗಳಿಂದ ನಡೆಯಲಿರುವ ಸಾಂಸ್ಕೃತಿಕ ಸಂಜೆಯು ಭರಪೂರ ಮನರಂಜನೆ ಒದಗಿಸಲಿದೆ. ಪಂಡಿತ್‌ ವೆಂಕಟೇಶ್‌ ಕುಮಾರ್‌ ಹಿಂದೂ ಸ್ಥಾನಿ ಗಾಯನಸಂಜೆ, ಒಸ್ಮಾನ್‌ ಮೀರ್‌ ಸಂಗೀತ ಲಹರಿ, ನೀಲಾದ್ರಿ ಕುಮಾರ್‌ ಅವರ ಸೌಂಡ್‌ ಆಫ್‌ ಇಂಡಿಯಾ, ಭರತ ನಾಟ್ಯ-ಒಡಿಸ್ಸಿ-ಕಥಕ್‌ ನೃತ್ಯ ಸಂಗಮ, ಸ್ಟೆಕೆಟೊ ಚೆನ್ನೈ ಅವರ ಸಂಗೀತ ಸಂಜೆ ಹೀಗೆ ಪ್ರತಿದಿನವೂ…

Read More

ಉಡುಪಿ: ಅಪರಾಧ ಪ್ರಕರಣವೊಂದರಲ್ಲಿ ಆರೋಪಿಗೆ ಜಾಮೀನಿಗೆ ಅರ್ಜಿ ಸಲ್ಲಿಸುವ ವೇಳೆ ನ್ಯಾಯಾಲಯಕ್ಕೆ ನಕಲಿ ಆಧಾರ್‌ ಕಾರ್ಡ್‌ ನೀಡಿದ ಘಟನೆಗೆ ಸಂಬಂಧಿಸಿ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಕೊಲ್ಲೂರು ಪೊಲೀಸ್‌ ಠಾಣೆಯಲ್ಲಿ ಅಪರಾಧ ಪ್ರಕರಣವೊಂದು ದಾಖಲಾಗಿತ್ತು. ಹೆಚ್ಚುವರಿ ಜಿಲ್ಲಾ ಮತ್ತು ಸತ್ರಾ ನ್ಯಾಯಾಲಯ, ಎಫ್.ಟಿ.ಎಸ್‌.ಸಿ-1,ರಲ್ಲಿ ವಿಚಾರಣೆ ಹಂತದಲ್ಲಿತ್ತು. ಡಿ. 7ರಂದು ಈ ಪ್ರಕರಣದ ವಿಚಾರಣೆಯ ಸಮಯ ಇಬ್ರಾಹಿಂ ಎಂ.ಐ. ಮತ್ತು ಎ.ಕೆ. ಹಮೀದ್‌ ನ್ಯಾಯಾಲಯದ ಮುಂದೆ ಹಾಜರಾಗಿ ಪ್ರಕರಣದಲ್ಲಿನ ಆರೋಪಿಗಳ ಪರ ಜಾಮೀನು ನೀಡಲು ಆಧಾರ್‌ ಕಾರ್ಡ್‌ ಅನ್ನು ನ್ಯಾಯಾ ಧೀಶರ ಮುಂದೆ ಹಾಜರುಪಡಿಸಿದ್ದರು. ಇವರುಗಳುಈಗಾಗಲೇ ವಿವಿಧ ನ್ಯಾಯಾಲಯಗಳಲ್ಲಿ ಹಾಜರುಪಡಿ ಸಿದ್ದ ಆಧಾರ್‌ ಕಾರ್ಡ್‌ಗಳನ್ನು ಹಾಗೂ ಈ ದಿನ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ ಆಧಾರ್‌ ಕಾರ್ಡ್‌ಗಳನ್ನು ಪರಿಶೀಲಿಸಿದಾಗ ಸಾಮ್ಯತೆ ಇಲ್ಲದೇ ಇರುವುದು ಕಂಡುಬಂದಿತ್ತು. ಕೋರ್ಟಿಗೆ ಮೋಸ ಮಾಡುವ ದುರುದ್ದೇಶದಿಂದ ಆಧಾರ್‌ ಕಾರ್ಡ್‌ ಫೋರ್ಜರಿಮಾಡಿರುವುದು ಗೊತ್ತಾಗಿದೆ. ಘಟನೆ ಸಂಬಂಧ ಜಿಲ್ಲಾನ್ಯಾಯಾಲಯದ ಮುಖ್ಯ ಕಾರ್ಯನಿರ್ವಾಹಕ ಅಬ್ಟಾಸ್‌ ಎಸ್‌. ಅವರು ನೀಡಿರುವ ದೂರಿನಂತೆ ಪ್ರಕರಣ ದಾಖಲಾಗಿದೆ.

Read More

ಮಂಗಳೂರು: ಷೇರು ಟ್ರೇಡಿಂಗ್‌ನಲ್ಲಿ ಹಣ ತೊಡಗಿಸಿದರೆ 500% ಲಾಭಾಂಶ ಬರುವುದಾಗಿ ನಂಬಿಸಿ ವ್ಯಕ್ತಿಯೊಬ್ಬರಿಗೆ 46 ಲಕ್ಷ ರೂ. ವಂಚಿಸಿರುವ ಬಗ್ಗೆ ಸೆನ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಂತ್ರಸ್ತ ವ್ಯಕ್ತಿಯ ವಾಟ್ಸ್‌ಆ್ಯಪ್‌ಗೆ ಶ್ರದ್ಧಾ ಬೆಲಾನಿ ಎಂಬ ಅಪರಿಚಿತಳು ARES MANAGEMENT CORPORATION ಪರವಾಗಿ ಷೇರು ಟ್ರೇಡಿಂಗ್‌ನಲ್ಲಿ ಹಣ ತೊಡಗಿಸಿದರೆ 500% ಲಾಭಾಂಶ ಬರುವುದಾಗಿ ನಂಬಿಸಿದ್ದಳು. ಅದರಂತೆ https://play.google.someco.shop/com.rehvu.dqlgdf/install.html ಎಂಬ ಲಿಂಕ್ ಒತ್ತಿ ರಿಜಿಸ್ಟ್ರೇಷನ್ ಮಾಡಿಕೊಂಡಿದ್ದರು. ಬಳಿಕ ಅವರು H 777 ARES Stock Exchange Group ಎಂಬ ವಾಟ್ಸಾಪ್ ಗ್ರೂಪ್‌ಗೆ ಸೇರಿಸಿದ್ದರು. ಗ್ರೂಪ್‌ನಲ್ಲಿ ಶ್ರದ್ಧಾ ಬೆಲಾನಿ ಗ್ರೂಪ್ ಅಡ್ಮಿನ್ ಆಗಿದ್ದು, ಈ ಟ್ರೇಡ್‌ನಲ್ಲಿ ಅಭಿಷೇಕ್ ರಾಮ್ ಜೀ ಚೀಫ್ ಆಗಿರುತ್ತಾರೆ. ಮೊದಲಿಗೆ ಸ್ಟಾಕ್ ಪರ್ಚೇಸ್ ಮಾಡಲು ತನ್ನ ಬ್ಯಾಂಕ್‌ನಿಂದ 2 ಲಕ್ಷ ಹಣವನ್ನು ಆರ್‌ಟಿಜಿಎಸ್ ಮಾಡಿದ್ದರು. ಮರುದಿನ ಆ ಸ್ಟಾಕ್‌ನ್ನು ಸೇಲ್ ಮಾಡಿದ್ದು, ಇದರಿಂದ 50,000 ರೂ. ಲಾಭವಾಗಿ ಬಂದಿರುತ್ತದೆ. ಇದನ್ನು ನಂಬಿದ ಇವರು ಇನ್ನು ಹೆಚ್ಚಿನ ಲಾಭ ಪಡೆಯುವ…

Read More

ಉಳ್ಳಾಲ: ಮನೆಯೊಳಗಡೆ ಭಾರೀ ಸ್ಫೋಟವುಂಟಾಗಿ ತಾಯಿ ಹಾಗೂ ಮೂವರು ಹೆಣ್ಮಕ್ಕಳು ಗಂಭೀರ ಸುಟ್ಟ ಗಾಯಗಳಿಂದ ದೇರಳಕಟ್ಟೆಯ ಖಾಸಗಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆಗೆ ದಾಖಲಾಗಿದ್ದು, ಅಡುಗೆ ಗ್ಯಾಸ್ ಸಿಲಿಂಡರ್ ಸ್ಫೋಟಿಸಿ ಘಟನೆ ಸಂಭವಿಸಿದೆ ಎನ್ನಲಾಗಿದೆ. ಶನಿವಾರ ಮಧ್ಯರಾತ್ರಿ ನಾಟೆಕಲ್ ಮಂಜನಾಡಿ ಎಂಬಲ್ಲಿ ಘಟನೆ ಸಂಭವಿಸಿದೆ. ಮಂಜನಾಡಿಯ ಖಂಡಿಕ ನಿವಾಸಿ ವಿದೇಶದಲ್ಲಿರುವ ಮುತ್ತಲಿಬ್ ಎಂಬವರ ಮನೆಯಲ್ಲಿ ಸ್ಫೋಟ ನಡೆದಿದೆ. ಮುತ್ತಲಿಬ್ ಪತ್ನಿ ಖುಬ್ರಾ ಮತ್ತು ಮೂವರು ಮಕ್ಕಳಾದ ಮೆಅದಿಯಾ, ಮಝಿಯಾ, ಮಾಯಿದಾ ಅವರು ಒಂದೇ ಕೊಠಡಿಯಲ್ಲಿ ಮಲಗಿದ್ದರು. ಮಧ್ಯರಾತ್ರಿ ವೇಳೆ ಮನೆಯೊಳಗಡೆ ಭಾರೀ ಸ್ಫೋಟದ ಸದ್ದು ಕೇಳಿಸಿದೆ. ಸ್ಫೋಟದ ತೀವ್ರತೆಗೆ ತಾರಸಿ ಮನೆಯ ಮೇಲ್ಭಾಗದ ಸಿಮೆಂಟ್ ಶೀಟ್ ಮೇಲ್ಛಾವಣಿ ಸಂಪೂರ್ಣ ಹಾರಿ ಹೋಗಿದೆ. ತಾಯಿ ,ಮಕ್ಕಳು ಮಲಗಿದ್ದ ಕೊಠಡಿ, ಮಂಚ, ಕಿಟಕಿ ಸಂಪೂರ್ಣ ಛಿಧ್ರಗೊಂಡು ಸುಟ್ಟು ಕರಕಲಾಗಿದೆ. ಈ ಸಂದರ್ಭ ತಾಯಿ ಜೊತೆ ಮಲಗಿದ್ದ ಹಿರಿ ಮಗಳು ಬಾಗಿಲು ತೆರೆದಿದ್ದಾಳೆ. ತಕ್ಷಣ ನೆರವಿಗೆ ಧಾವಿಸಿದ ಸ್ಥಳೀಯರು ಬೆಂಕಿ ನಂದಿಸಿ, ಗಂಭೀರ ಸ್ಥಿತಿಯಲ್ಲಿದ್ದ…

Read More

ಮಂಗಳೂರು: ನಗರದ ಕೆಂಜಾರಿನಲ್ಲಿರುವ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಕ್ರಮ ಸಾಗಾಟದ 50 ಲಕ್ಷ ರೂಪಾಯಿ ಮೌಲ್ಯದ ಚಿನ್ನ ಮತ್ತು ಇ-ಸಿಗರೇಟ್ ಅನ್ನು ಕಸ್ಟಮ್ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಡಿಸೆಂಬರ್ 1ರಂದು IX832/IX814 ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನದ ಮೂಲಕ ದುಬೈನಿಂದ ಮಂಗಳೂರಿಗೆ ಪ್ರಯಾಣಿಸುತ್ತಿದ್ದ ಕೇರಳದ ಕಾಸರಗೋಡಿನ ನಿವಾಸಿಗಳಾದ ಇಬ್ಬರು ಪ್ರಯಾಣಿಕರು ಅನುಮಾನಾಸ್ಪದವಾಗಿ ವಿಮಾನ ನಿಲ್ದಾಣದಲ್ಲಿ ವರ್ತಿಸಿದ್ದರು. ಇವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಸ್ಮಗ್ಲಿಂಗ್ ಬೆಳಕಿಗೆ ಬಂದಿದೆ. ಇಬ್ಬರಿಂದ ಅಕ್ರಮ ಸಾಗಾಟದ ಚಿನ್ನ ಮತ್ತು ಇ-ಸಿಗರೇಟ್ ವಶಪಡಿಸಲಾಗಿದೆ. ಓರ್ವ ಪ್ರಯಾಣಿಕನಿಂದ 24ಕ್ಯಾರಟ್ ಶುದ್ಧತೆಯ ಚಿನ್ನವನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ. ಈತನಿಂದ 625ಗ್ರಾಂ ತೂಕದ 48,75,000 ರೂಪಾಯಿ ಮೌಲ್ಯದ ಚಿನ್ನ ವಶಪಡಿಸಲಾಗಿದೆ. ಇನ್ನೊರ್ವ ಪ್ರಯಾಣಿಕನಿಂದ 1,41,134 ರೂಪಾಯಿ ಮೌಲ್ಯದ ಇ-ಸಿಗರೇಟ್‌ಗಳನ್ನು ವಶಪಡಿಸಲಾಗಿದೆ.

Read More

ಕುಕ್ಕೆ ಸುಬ್ರಹ್ಮಣ್ಯದಿಂದ ಮಂಗಳೂರಿಗೆ ಪ್ರಯಾಣಿಸುತ್ತಿದ್ದ ಕೆ.ಎಸ್‌.ಆರ್.ಟಿ.ಸಿ ಬಸ್‌ನ ಚಾಲಕ ಎದೆನೋವಿನಿಂದ ಅಸ್ವಸ್ಥಗೊಂಡ ಘಟನೆ ನಡೆದಿದೆ.ಕಡಬ ತಾಲೂಕಿನ ಆತೂರು ಎಂಬಲ್ಲಿ ಈ ಘಟನೆ ನಡೆದಿದ್ದು, ವೇಗವಾಗಿ ಬರುತ್ತಿದ್ದ ಬಸ್ ಇದ್ದಕ್ಕಿದ್ದಂತೆ ನಿಧಾನಗೊಂಡಿದೆ. ಈ ವೇಳೆ ಜಾಗೃತಗೊಂಡ ನಿರ್ವಾಹಕ ಚಾಲಕನತ್ತ ಗಮನಿಸಿದ್ದು, ಚಾಲಕ ಎದೆನೋವಿನಲ್ಲಿ ಒದ್ದಾಡುವುದು ಕಂಡಿದೆ. ತಕ್ಷಣ ಕಾರ್ಯಪ್ರವೃತ್ತರಾದ ನಿರ್ವಾಹಕ ಚಾಲಕನ ಮೂಲಕ ಬಸ್ ನಿಲ್ಲಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಳಿಕ ಅವರನ್ನು ಸೀಟೊಂದರಲ್ಲಿ ಮಲಗಿಸಿ ತಾನೇ ಬಸ್ ಚಲಾಯಿಸಿಕೊಂಡು ಉಪ್ಪಿನಂಗಡಿ ತನಕ ಕರೆ ತಂದಿದ್ದಾರೆ. ಉಪ್ಪಿನಂಗಡಿಯಲ್ಲಿ ಅವರಿಗೆ ಪ್ರಥಮ ಚಿಕಿತ್ಸೆ ನೀಡಿ ಬಳಿಕ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿಗೆ ಕರೆ ತರಲಾಗಿದೆ. ಬಸ್‌ ನಲ್ಲಿ ಮೂವತ್ತು ಜನ ಪ್ರಯಾಣಿಕರಿದ್ದು, ಬಸ್ ನಿರ್ವಾಹಕನ ಸಮಯಪ್ರಜ್ಞೆಯನ್ನು ಮೆಚ್ಚಿಕೊಂಡಿದ್ದಾರೆ. ಬಸ್ ಚಾಲಕ ಗಣಪತಿ ಅವರು ಸದ್ಯ ಮಂಗಳೂರಿನ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Read More

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಂಪೂರ್ಣವಾಗಿಗಾಂಜಾ ದಂಧೆಯನ್ನು ನಿಷೇಧಿಸಲು ಇಲಾಖೆಗಳು ಜಂಟಿಯಾಗಿ ಕಾರ್ಯ ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಮುಲೈ ಮುಹಿಲನ್ ಎಂ.ಪಿ. ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಶುಕ್ರವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಈ ಸೂಚನೆ ನೀಡಿದ್ದಾರೆ.ಶಿಕ್ಷಣ ಸಂಸ್ಥೆಗಳಲ್ಲಿ ಸಂಪೂರ್ಣವಾಗಿ ಡ್ರಗ್ಸ್‌ ಜಾಲವನ್ನು ನಿಷೇಧಿಸಲು ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು. ವಿದ್ಯಾರ್ಥಿಗಳೇ ಹೆಚ್ಚಿನ ಸಂಖ್ಯೆಯಲ್ಲಿ ಡ್ರಗ್ಸ್ ಚಟದಲ್ಲಿ ಭಾಗಿಯಾಗಿರುವುದು ಕಳವಳಕಾರಿ ಸಂಗತಿಯಾಗಿದೆ. ವಿದ್ಯಾರ್ಥಿಗಳ ಚಲನವಲನಗಳನ್ನು ಆಪ್ತ ಸಮಾಲೋಚಕರನ್ನಿಟ್ಟುಕೊಂಡು ಗಮನಿಸಿ, ವಿದ್ಯಾರ್ಥಿಗಳ ಮನಃಪರಿವರ್ತನೆ ಹಾಗೂ ಅವರಿಗೆ ಎಲ್ಲಿಂದ ಡ್ರಗ್ಸ್ ಲಭ್ಯವಾಗುತ್ತಿದೆ ಎಂಬುವುದರ ಬಗ್ಗೆ ಮಾಹಿತಿ ತಿಳಿದುಕೊಳ್ಳಬೇಕು. ಇದರಿಂದ ಪೊಲೀಸರ ಕಾರ್ಯಾಚರಣೆಯು ಸುಲಭ ಎಂದು ಅವರು ತಿಳಿಸಿದರು.

Read More

ಮಂಗಳೂರು: ಹಲ್ಲೆಗೆ ಪ್ರತೀಕಾರಕ್ಕೆ ನಡೆದ ತಲವಾರ ದಾಳಿ ನಡೆಸಿದ್ದರೆನ್ನಲಾದ ಪ್ರಕರಣದಲ್ಲಿ ಬಜರಂಗದಳದ ಸಂಯೋಜಕ ಅರ್ಜುನ್ ಮಾಡೂರುನನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ. ತೊಕ್ಕೊಟ್ಟುವಿನ ಮೇಲ್ಸೇತುವೆಯಲ್ಲಿ ಅ.16ರಂದು ರಾತ್ರಿ ಕುಂಪಲದ ಶರತ್, ಕೇರಳದ ಇಬ್ರಾಹಿಂ ಖಲೀಲ್ ಅವರ ಕಾರುಗಳ ನಡುವೆ ನಡೆದಿದ್ದ ಸಣ್ಣ ಅಪಘಾತ ಪ್ರಕರಣವು ಉಳ್ಳಾಲ ಪೊಲೀಸ್ ಠಾಣೆಯ ಮೆಟ್ಟಿಲೇರಿತ್ತು. ಶರತ್ ಸ್ನೇಹಿತ ಅರ್ಜುನ್ ಮಾಡೂರು ಉಳ್ಳಾಲ ಪೊಲೀಸ್ ‌ ಠಾಣೆಗೆ ಭೇಟಿ ನೀಡಿ ಇನ್‌ಸ್ಪೆಕ್ಟರ್ ಕೊಠಡಿಯೊಳಗೆ ಕಾರು ಚಾಲಕರಾದ ಶರತ್, ಖಲೀಲ್‌ರೊಂದಿ ಸಂಧಾನ ನಡೆಸುತ್ತಿದ್ದ ವೇಳೆ ಖಲೀಲ್ ಸಹೋದರ ಹೊಸಂಗಡಿ ಕಡಂಬಾರು ನಿವಾಸಿ ಮಹಮ್ಮದ್ ಆಸಿಫ್ ಎಂಬಾತ ಅರ್ಜುನ್ ಮಾಡೂರಿಗೆ ಏಕಾಏಕಿ ಹಲ್ಲೆ ನಡೆಸಿದ್ದ. ಅರ್ಜುನ್ ಮಾಡೂರು ಹಲ್ಲೆಗೈದಿದ್ದ ಆರೋಪಿ ಮಹಮ್ಮದ್ ಆಸಿಫ್ ಜಾಮೀನಿನಲ್ಲಿ ಜೈಲಿನಿಂದ ಹೊರಬರುತ್ತಲೇ ಪ್ರತೀಕಾರ ತೀರಿಸಲು ಆತನ ಮೇಲೆ ತಲವಾರು ದಾಳಿಗೆ ಯತ್ನಿಸಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದರು. ಇದೀಗ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಮತ್ತೋರ್ವ ಆರೋಪಿ ಅರ್ಜುನ್ ಮಾಡೂರುನನ್ನು ಉಳ್ಳಾಲ ಪೊಲೀಸರು…

Read More