ಮಳೆಗಾಲದಲ್ಲಿ ದರೋಡೆ, ಕಳ್ಳತನ ಪ್ರಕರಣಗಳಿಗೆ ಸಂಬಂಧಿಸಿ ಮುಂಜಾಗ್ರತೆ ವಹಿಸುವಂತೆ ಪೋಲೀಸ್ ಇಲಾಖೆ ಸಾರ್ವಜನಿಕರಿಗೆ ಸೂಚಿಸಿದ್ದಾರೆ. ದರೋಡೆ ನಡೆಸುವ ಉತ್ತರ ಭಾರತದ ಚಡ್ಡಿ ಗ್ಯಾಂಗ್ ಮಳೆಗಾಲದ ಪ್ರಾರಂಭದಲ್ಲಿ ಈಗಾಗಲೇ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಸಕ್ರಿಯವಾಗಿದೆ ಎಂದು ವರದಿಯಾಗಿದೆ.ಮಂಗಳೂರು ಅಸುಪಾಸಿನ ಜಿಲ್ಲೆಗಳಾದ ಉಡುಪಿ, ಚಿಕ್ಕಮಗಳೂರು, ಮಡಿಕೇರಿಯಲ್ಲಿ ಕಳೆದ ಒಂದು ವಾರದಿಂದ ಸರಣಿ ಕಳ್ಳತನ ನಡೆಯುತ್ತಿದೆ. ಈ ಗ್ಯಾಂಗ್ ಮಂಗಳೂರು ನಗರಕ್ಕೂ ಬರುವ ಸಾಧ್ಯತೆ ಇರುವುದರಿಂದ ಒಂಟಿ ಮನೆಗಳು, ಬೀದಿಯ ಕೊನೆಯ ಮನೆಗಳು ಹಾಗೂ ನಾಗರಿಕರು ಸಾಕಷ್ಟು ಎಚ್ಚರಿಕೆಯಿಂದ ಇರಬೇಕು. ಯಾವುದೇ ಅಪರಿಚಿತ ವ್ಯಕ್ತಿಗಳ ಬಗ್ಗೆ ಮಾಹಿತಿ ನೀಡುವಂತೆ ಪೊಲೀಸರು ಹೇಳಿದ್ದಾರೆ.
Author: main-admin
ಕಾಸರಗೋಡು ಜೂನ್ 28: ಹೆತ್ತ ತಾಯಿಯನ್ನೇ ಕೊಲೆ ಮಾಡಿ ಪೆಟ್ರೋಲ್ ಹಾಕಿ ಸುಟ್ಟು ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಪೊಲೀಸ್ ವಶದಲ್ಲಿರುವ ಮಗ ಕೊಲೆಗೆ ಕಾರಣ ತಿಳಿಸಿದ್ದಾನೆ. ಸಾಲ ಪಡೆಯಲು ಮನೆಯ ಪತ್ರ ನೀಡದ ಕಾರಣ ತಾಯಿಯನ್ನು ಕೊಲೆ ಮಾಡಿದ್ದೇನೆ ಎಂದು ಮಂಜೇಶ್ವರ ಪೊಲೀಸರಿಗೆ ಹೇಳಿಕೆ ನೀಡಿದ್ದಾನೆ. ಕೇರಳದ ಕಾಸರಗೋಡು ಜಿಲ್ಲೆಯ ವರ್ಕಾಡಿಯಲ್ಲಿ ಈತ ತನ್ನ ತಾಯಿ 60 ವರ್ಷದ ಹಿಲ್ಡಾ ಜೊತೆ ಈ ಮನೆಯಲ್ಲಿ ವಾಸವಿದ್ದ ಆರೋಪಿ ಮೆಲ್ವಿನ್ ಜೂನ್ 25 ಮದ್ಯರಾತ್ರಿ ಒಂದು ಗಂಟೆಗೆ ತಾಯಿ ಹಿಲ್ಡಾಳ ತಲೆಗೆ ಮಗ ಮೆಲ್ವಿನ್ ಮಾರಕಾಸ್ತ್ರದಿಂದ ಹೊಡೆದಿದ್ದಾನೆ. ಬಳಿಕ ಅಲ್ಲಿಂದ ಎಳೆದುಕೊಂಡು ಮನೆಯ ಹಿಂಭಾಗಕ್ಕೆ ಹೋಗಿ ಕಾಡಿನಂತಹ ಜಾಗದಲ್ಲಿ ಎಸೆದಿದ್ದಾನೆ. ಬಳಿಕ ಪೆಟ್ರೋಲ್ ಹಚ್ಚಿ ಜೀವಂತವಾಗಿ ಸುಟ್ಟು ಹಾಕಿದ್ದ. ಬಳಿಕ ಮನೆಯ ಹತ್ತಿರದಲ್ಲಿದ್ದ ಆತನ ಸಂಬಂಧಿ ಲೊಲಿಟಾ ಮನೆಯ ಬಾಗಿಲು ಬಡಿದಿದ್ದಾನೆ. ಲೊಲಿಟಾಳಿಗೆ ತನ್ನ ತಾಯಿಗೆ ಹುಷಾರಿಲ್ಲ. ಸೀರಿಯಸ್ ಆಗಿದ್ದಾಳೆ ಎಂದು ಹೇಳಿದ್ದಾನೆ. ಇದನ್ನು ಕೇಳಿದ ಲೊಲಿಟಾ ಮಗುವನ್ನು ಒಂಟಿಯಾಗಿ ಮನೆಯಲ್ಲಿ…
ಮಂಗಳೂರು : ಬೆಲೆಬಾಳುವ ಕಾರು ನೋಂದಣಿಯ ವೇಳೆ ನಕಲಿ ದಾಖಲೆ ಸೃಷ್ಟಿಸಿ ಸರಕಾರಕ್ಕೆ ಲಕ್ಷಾಂತರ ರೂ. ತೆರಿಗೆ ವಂಚಿಸಿದ ಆರೋಪದಲ್ಲಿ ಮಂಗಳೂರು RTO ಕಚೇರಿಯ ಮೂವರು ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿದೆ. RTO ಕಚೇರಿಯ ಪ್ರಥಮ ದರ್ಜೆ ಸಹಾಯಕ ನೀಲಪ್ಪ, ಕಚೇರಿಯ ಅಧೀಕ್ಷಕಿ ರೇಖಾ ನಾಯಕ್ ಹಾಗೂ ಸ್ಥಾನೀಯ ಸಹಾಯಕಿ ಸರಸ್ವತಿ ಅಮಾನತುಗೊಂಡ ಅಧಿಕಾರಿಗಳು. ಈ ಮಧ್ಯೆ RTO ಶ್ರೀಧರ್ ಮಲ್ಲಾಡ್ ವಿರುದ್ಧ ಇಲಾಖಾ ತನಿಖೆ ನಡೆಸುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಇಲಾಖಾ ವಿಚಾರಣೆ ಬಾಕಿಯಿರಿಸಿ ಮೂವರನ್ನು ಅಮಾನತುಗೊಳಿಸಿದ್ದಲ್ಲದೆ ಬೇರೆ ಕಡೆಗಳಿಗೆ ವರ್ಗಾವಣೆಗೊಳಿಸಿ ಆದೇಶಿಸಲಾಗಿದೆ.
ಸಾರ್ವಜನಿಕರ ಸುರಕ್ಷತೆಗಾಗಿ ಮನೆ ಮನೆಗೆ ಪೊಲೀಸ್ ಎಂಬ ವಿನೂತನ ಉಪಕ್ರಮವನ್ನು ರಾಜ್ಯ ಪೊಲೀಸ್ ಇಲಾಖೆ ಜಾರಿಗೊಳಿಸಿದೆ. ಶಾಂತಿ ಮತ್ತು ಭದ್ರತೆಯ ಸ್ಥಿರತೆಯನ್ನು ಕಾಪಾಡುವಲ್ಲಿ ಪ್ರಮುಖ ಪಾತ್ರ ವಹಿಸಲಿದೆ. ಸರ್ವರನ್ನು ಸಮಾನರಾಗಿ ಒಳಗೊಂಡು ಸಾರ್ವಜನಿಕ ಕಾರ್ಯದಲ್ಲಿ ನೇರವಾಗಿ ಪಾಲ್ಗೊಳ್ಳುವಿಕೆ ಖಾತರಿ ಪಡಿಸಿ, ಸಾಮಾಜಿಕ ಪಿಡುಗುಗಳ ವಿರುದ್ಧ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವಲ್ಲಿ ಈ ವ್ಯವಸ್ಥೆಯು ಒಂದು ಆಶಾಕಿರಣವಾಗಲಿದೆ. ಈ ಉಪಕ್ರಮದ ಮೂಲಕ ಪೊಲೀಸರ ಬಗ್ಗೆ ಇರುವ ಭಯದ ಭಾವದ ಬದಲು ವಿಶ್ವಾಸದ ಚಿಹ್ನೆಯಾಗಿ ಸಮಾಜದಲ್ಲಿ ಗುರುತಿಸಿಕೊಳ್ಳಲು ಸಾಧ್ಯವಾಗುತ್ತದೆ. ಆಧುನಿಕ ಯುಗದಲ್ಲಿ ಪೊಲೀಸ್ ಪಾತ್ರವು ಬಹುಮುಖ್ಯವಾಗಿದೆ. ಕೇವಲ ಕಾನೂನು ಮತ್ತು ಸುವ್ಯವಸ್ಥೆ ಕಾಯ್ದುಕೊಳ್ಳುವವರಾಗಿ ಮಾತ್ರವಲ್ಲದೇ, ಸಮಾಜದ ಶಾಂತಿ ಮತ್ತು ಭದ್ರತೆಯ ರೂವಾರಿಗಳಾಗಿದ್ದಾರೆ. ಅಪರಾಧಗಳ ತಡೆ, ಅಪರಾಧ ಪ್ರಕರಣಗಳ ತನಿಖೆ, ಸಾರ್ವಜನಿಕ ಸಮಾರಂಭಗಳಲ್ಲಿ ಭದ್ರತೆ ಏರ್ಪಡಿಸುವುದು, ಪ್ರವಾಹ, ಭೂಕಂಪ, ಮುಂತಾದ ಸಂದರ್ಭಗಳಲ್ಲಿ ರಕ್ಷಣಾತ್ಮಕ ಕಾರ್ಯಗಳಲ್ಲಿ ಶಾಂತಿಯುತವಾಗಿ ನಿಭಾಯಿಸುವ ಮೂಲಕ ಪೊಲೀಸರು ಸಾರ್ವಜನಿಕರಲ್ಲಿ ಭದ್ರತೆ ಮತ್ತು ವಿಶ್ವಾಸ ಉಂಟು ಮಾಡುವುದು ಇಲಾಖೆಯ ಆದ್ಯತೆಯಾಗಿದೆ. ಸಾರ್ವಜನಿಕರಲ್ಲಿ ಕಾನೂನುಗಳ ಬಗ್ಗೆ ತಿಳುವಳಿಕೆ…
ಬೆಂಗಳೂರು: ಗೃಹ ಸಚಿವರಾದ ಡಾ. ಜಿ.ಪರಮೇಶ್ವರ ಅವರು ಹಿರಿಯ ಪೊಲೀಸ್ ಅಧಿಕಾರಿಗಳ ವಾರ್ಷಿಕ ಸಮಾವೇಶದಲ್ಲಿ ಅಧಿಕಾರಿಗಳನ್ನು ಉದ್ದೇಶಿಸಿ ಮಾತನಾಡಿದರು. ಅವರ ಭಾಷಣದ ಪ್ರಮುಖ ಹೈಲೈಟ್ಸ್ ಮುಂದಿದೆ ಓದಿ. ಸರ್ಕಾರಕ್ಕೆ ಪೊಲೀಸ್ ಇಲಾಖೆ ಬಹಳ ಮುಖ್ಯ. ಕಾನೂನು ಸುವ್ಯವಸ್ಥೆ ಕಾಪಾಡುವ ಜವಾಬ್ದಾರಿ ಸರಿಯಾಗಿ ಮಾಡದೆ ಹೋದರೆ, ಎಂತಹ ಸಮಾಜ ಆಗುತ್ತದೆ ಎಂಬುದರ ಬಗ್ಗೆಯೂ ಯೋಚಿಸಬೇಕು. ಎಲ್ಲ ಇಲಾಖೆಗಳಿಗಿಂತಲೂ ಬಹಳ ದೊಡ್ಡ ಜವಾಬ್ದಾರಿ ಪೊಲೀಸ್ ಇಲಾಖೆ ಮೇಲಿದೆ. ಇದಙದು ಅರಿತುಕೊಳ್ಳಬೇಕಿದೆ ಇತ್ತೀಚೆಗೆ ಖಾಸಗಿ ಸಂಸ್ಥೆಯೊಂದರ ಸಮೀಕ್ಷೆ ವರದಿ ಪ್ರಕಾರ, ನ್ಯಾಯ ಒದಗಿಸುವುದರಲ್ಲಿ ಕರ್ನಾಟಕ ಪೊಲೀಸ್ ಮೊದಲ ಸ್ಥಾನದಲ್ಲಿದೆ. ಇದು ಸಂತೋಷದ ವಿಚಾರ. ಆದರೆ, ಸಮೀಕ್ಷೆ ವರದಿಯಿಂದ ನಮ್ಮ ಬೆನ್ನು ನಾವೇ ತಟ್ಟಿಕೊಂಡು ಸಮಾದಾನಪಟ್ಟುಕೊಂಡು ಸುಮ್ಮನಿರಲು ಆಗುವುದಿಲ್ಲ. ಮತ್ತಷ್ಟು ಪರಿಣಾಮಕಾರಿಯಾಗಿ ಕೆಲಸ ಮಾಡಬೇಕಾದ ಜವಾಬ್ದಾರಿ ಪೊಲೀಸ್ ಇಲಾಖೆಯ ಮೇಲಿದೆ. ಉಡುಪಿ ಜಿಲ್ಲಾ ಪ್ರವಾಸದ ವೇಳೆ ಕೋಟ ಠಾಣೆಗೆ ಭೇಟಿ ನೀಡಿದ್ದೆ. ರಿಜಿಸ್ಟರ್ ಪರಿಶೀಲಿಸಿ ಠಾಣೆಗೆ ಭೇಟಿ ನೀಡಿದ ಇಬ್ಬರಿಗೆ ಕರೆ ಮಾಡಿ ಮಾತನಾಡಿದೆ. ಪೊಲೀಸರು ಸರಿಯಾಗಿ…
ಪಡುಬಿದ್ರಿ: ಅಂತರಾಷ್ಟ್ರೀಯ ಮಾದಕ ದ್ರವ್ಯ ದುರುಪಯೋಗ ಮತ್ತು ಆಕ್ರಮ ಸಾಗಣೆ ವಿರುದ್ಧ ದಿನಾಚರಣೆಯ ಅಂಗವಾಗಿ ಗುರುವಾರ ನಂದಿಕೂರಿನ ಆಯುಷ್ ಎನ್ವಿರೋಟಿಕ್ ಘಟಕದಲ್ಲಿ ಉಡುಪಿ ಜಿಲ್ಲಾ ಪೊಲೀಸರು ವಿವಿಧ ಠಾಣೆಗಳಲ್ಲಿ ವಶ ಪಡಿಸಿಕೊಂಡ ಸುಮಾರು 3.80ಲಕ್ಷ ರೂ. ಮೌಲ್ಯದ ಮಾದಕ ದ್ರವ್ಯಗಳನ್ನು ವಿಲೇವಾರಿ ಮಾಡಲಾಯಿತು. ಜಿಲ್ಲೆಯ ವಿವಿಧ ಆರು ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ 2015ರಿಂದ 2023ರವರೆಗಿನ ಅವಧಿಯಲ್ಲಿ ಪೊಲೀಸ್ ವಶವಾಗಿದ್ದ ಆರು ಮಾದಕ ದ್ರವ್ಯ ವಶ ಪ್ರಕರಣಗಳಲ್ಲಿನ ಸುಮಾರು 3.80ಲಕ್ಷ ರೂ. ಮೌಲ್ಯದ ಗಾಂಜಾ, ಅಫೀಮು ಹಾಗೂ ಎಂಡಿಎoಎ ಮಾತ್ರೆಗಳನ್ನು ನ್ಯಾಯಾಲಯದ ತೀರ್ಪಿನ ಬಳಿಕ ನಾಶಪಡಿಸಲಾಗಿದೆ ಎಂದು ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಂ ಶಂಕರ್ ತಿಳಿಸಿದರು. ಜಿಲ್ಲೆಯ ವಿವಿಧ ಠಾಣೆಗಳಲ್ಲಿ ವಶಪಡಿಸಿಕೊಳ್ಳಲಾದ ಸುಮಾರು 32800ರೂ. ಬೆಲೆಯ 3.138ಕೆಜಿ ಗಾಂಜಾ, 36.259ಗ್ರಾಂ ತೂಕದ ಸುಮಾರು 2ಲಕ್ಷ ರೂ. ಮೌಲ್ಯದ ಎಂಡಿಎoಎ ಹಾಗೂ 1 ಲಕ್ಷ 47200ರೂ. ಬೆಲೆಯ 368ಗ್ರಾಂ ಅಫೀಮು ಒಳಗೊಂಡಿರುವುದಾಗಿ ತಿಳಿಸಲಾಗಿದೆ. ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾ ಎಡಿಷನಲ್ ಎಸ್ಪಿ ಪರಮೇಶ್ವರ…
ಬೆಂಗಳೂರು : ರಾಜ್ಯ ಪೊಲೀಸ್ ಇಲಾಖೆಯ ಕಾನ್ಸ್ಟೇಬಲ್ಗಳು ಧರಿಸುತ್ತಿರುವ ಬ್ರಿಟಿಷ್ ಕಾಲದ ಟೋಪಿ ಬದಲಾವಣೆಯ ಕಾಲ ಸನ್ನಿಹಿತವಾಗಿದೆ. ಟೋಪಿ ಬದಲಿಸುವಂತೆ ಹಲವು ವರ್ಷಗಳಿಂದಲೂ ಪೊಲೀಸ್ ಸಿಬ್ಬಂದಿ ಬೇಡಿಕೆಯಿಡುತ್ತಲೇ ಬಂದಿದ್ದರಾದರೂ ಇದುವರೆಗೂ ಬೇಡಿಕೆ ಈಡೇರಿಲ್ಲ. ಇದೀಗ ಹಳೆಯ ಮಾದರಿಯ ಸ್ಲೋಚ್ ಹ್ಯಾಟ್ ಬದಲಿಗೆ ಪೀಕ್ ಕ್ಯಾಪ್ ನೀಡುವುದರ ಕುರಿತು ಚರ್ಚೆ ನಡೆಸಿ ನೂತನ ಕ್ಯಾಪ್ ಬಳಕೆಗೆ ಚಿಂತನೆ ನಡೆಸಲಾಗುತ್ತಿದೆ. ಹೌದು ಕರ್ನಾಟಕ ಪೊಲೀಸರ ಕ್ಯಾಪ್ ದಲಾವಣೆಗೆ ಇದೀಗ ರಾಜ್ಯ ಸರ್ಕಾರ ಚಿಂತನೆ ನಡೆಸುತ್ತಿದ್ದು, ರಾಜ್ಯದಲ್ಲಿ ಸದ್ಯ ಪೊಲೀಸರು ಬಳಸುತ್ತಿರುವ ಕ್ಯಾಪ್ ಬದಲು ಮಾಡಲು ರಾಜ್ಯ ಸರ್ಕಾರ ಮಹತ್ವದ ಚಿಂತನೆ ನಡೆಸುತ್ತಿದೆ. ಹೊಸ ಮಾದರಿಯ ಪೊಲೀಸ್ ಕ್ಯಾಪ್ ಬಳಕೆಗೆ ಸರ್ಕಾರ ಚಿಂತನೆ ನಡೆಸುತ್ತಿದೆ. ಹೊಸ ಪ್ರಸ್ತಾಪಿತ ಕ್ಯಾಪ್ ಅನ್ನು ಗೃಹ ಸಚಿವ ಜಿ. ಪರಮೇಶ್ವರ್ ಅವರು ಇಂದು ವೀಕ್ಷಿಸಿದರು. ಬೇರೆ ರಾಜ್ಯಗಳ ಪೊಲೀಸರು ಬಳಸುತ್ತಿರುವ ಕ್ಯಾಪ್ ಗಳನ್ನು ಇದೇ ಸಂದರ್ಭದಲ್ಲಿ ವೀಕ್ಷಣೆ ಮಾಡಿದರು. ರಾಜ್ಯ ಪೊಲೀಸ್ ಪ್ರಧಾನ ಕಚೇರಿಯಲ್ಲಿ ಗೃಹ ಸಚಿವ ಜಿ ಪರಮೇಶ್ವರ್…
ಮಂಗಳೂರು : ಮಂಗಳೂರು ನಗರ ಪೊಲೀಸ್ ಮತ್ತು ದ.ಕ ಜಿಲ್ಲಾ ಪೊಲೀಸ್ ರಾಷ್ಟ್ರೀಯ ಸೇವಾ ಯೋಜನೆ ಘಟಕದ ವತಿಯಿಂದ ಅಂತರಾಷ್ಟ್ರೀಯ ಮಾಧಕ ಮತ್ತು ವಸ್ತು ವಿರೋಧಿ ದಿನ 2025 ಕಾರ್ಯಕ್ರಮ ಮಂಗಳೂರಿನ ಪುರಭವನದಲ್ಲಿ ನೆರವೇತು. ಕಾರ್ಯಕ್ರಮಕ್ಕೆ ಮಂಗಳೂರು ನಿಟ್ಟೆ ವಿಶ್ವ ವಿದ್ಯಾನಿಲಯದ ಉಪಕುಲಪತಿ ಡಾ. ಎಂ ಎಸ್ ಮುಡಿತ್ತಾಯ, ತುಳು ಚಲನ ಚಿತ್ರ ನಟ ರೂಪೇಶ್ ಶೆಟ್ಟಿ, ಮಂಗಳೂರು ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ, ದ.ಕ ಜಿಲ್ಲಾಧಿಕಾರಿ ಎಚ್ ವಿ ದರ್ಶನ್, ದ.ಕ ಜಿಲ್ಲಾ ಎಸ್ಪಿ ಡಾ. ಅರುಣ್. ಕೆ ಇತರ ಗಣ್ಯರು ಸೇರಿ ದೀಪ ಪ್ರಜ್ವಲಿಸಿ ಚಾಲನೆ ನೀಡಿದರು ಬಳಿಕ ಮಂಗಳೂರು ನಿಟ್ಟೆ ವಿಶ್ವ ವಿದ್ಯಾನಿಲಯದ ಉಪಕುಲಪತಿ ಡಾ. ಎಂ ಎಸ್ ಮುಡಿತ್ತಾಯ ಮಾತನಾಡಿ ಭಾರತ ಈಗಾಗಲೆ ಅಭಿವೃದ್ದಿಯಲ್ಲಿ ನಾಲ್ಕನೇ ಸ್ಥಾನಕ್ಕೆ ಬಂದಿದ್ದು ಮುಂದಿನ ದಿನಗಳಲ್ಲಿ ಮೂರನೇ ಸ್ಥಾನಕ್ಕೆ ಏರಲಿದೆ. ಈ ಅಭೊವೃದ್ದಿ ಅಥವ ವಿಕಸಿತ ಭಾರತ ಯಾರಿಗೆ ಎಂದರೆ ಯುವ ಪೀಳಿಗೆಗೆ ಆಗಿದೆ. ಯುವ ಪೀಳಿಗೆ ದುಷ್ಚಟದತ್ತ ಆಕರ್ಷಿತರಾಗುವ…
ಮಂಗಳೂರು : ಹಿಂದೂ ಜಾಗರಣ ವೇದಿಕೆ ಮಂಗಳೂರು ಗ್ರಾಮಾಂತರ ಜಿಲ್ಲಾ ಸಹ ಸಂಚಾಲಕ ಸಮಿತ್ ರಾಜ್ ಅವರನ್ನು ಮೂಡುಬಿದಿರೆ ಪೊಲೀಸರು ಗುರುವಾರ ಬಂಧಿಸಿದ್ದಾರೆ. ಠಾಣೆಗೆ ಭೇಟಿಯಾಗಿ ನಡೆದ ಚರ್ಚೆಯ ಸಂದರ್ಭದಲ್ಲಿ ಪೊಲೀಸರ ಜೊತೆ ವಾಗ್ವಾದ ಉಂಟಾಗಿದ್ದು, ಅವರನ್ನು ಬಂಧಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಈ ಘಟನೆಯ ಕುರಿತು ಹಿಂಜಾವೇ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದು, ಅವರ ಬಂಧನವನ್ನು ರಾಜಕೀಯ ಪ್ರೇರಿತ ಎನ್ನುತ್ತಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಈ ಸಂಬಂಧ ಚರ್ಚೆ ಜೋರಾಗಿದ್ದು, ಹೆಚ್ಚಿನ ವಿವರಗಳು ನಿರೀಕ್ಷೆಯಲ್ಲಿವೆ.
ಮಂಗಳೂರು: ಜಿಲ್ಲಾ ಕಾರಾಗೃಹದಲ್ಲಿ ಖೈದಿಗಳ ನಡುವೆ ಹೊಡೆದಾಟ ನಡೆದಿದೆ. ಈ ಪ್ರಕರಣದಲ್ಲಿ ಓರ್ವನಿಗೆ ಗಂಭೀರ ಪ್ರಮಾಣದಲ್ಲಿ ಗಾಯಗಳಾಗಿದ್ದು, ಆತನನ್ನು ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಉಳ್ಳಾಲದ ರೌಡಿ ಮುಖ್ತರ್ ಮತ್ತು ಇತರ ಖೈದಿಗಳ ನಡುವೆ ಗಲಾಟೆ ನಡೆದಿದೆ. ಈ ಘಟನೆಯಲ್ಲಿ ರೌಡಿ ಮುಖ್ತರ್ ಅಕ್ಷಯ್ ಕಲ್ಲೇಗ ಕೊಲೆ ಆರೋಪಿ ಕೇಶವ ಎಂಬಾತನ ಮೇಲೆ ಹಲ್ಲೆ ಮಾಡಿದ್ದಾನೆ. ಇದರಿಂದ ಗಂಭೀರ ಗಾಯಗೊಂಡ ಕೇಶವನನ್ನು ವೆನ್ಲಾಕ್ ಆಸ್ಪತ್ರೆಗೆ ಪೊಲೀಸರು ದಾಖಲಿಸಿದ್ದಾರೆ. ಖೈದಿ ಗಾಯಾಳು ಕೇಶವ ಅಕ್ಷಯ್ ಕಲ್ಲೇಗ ಹತ್ಯೆಯ ಆರೋಪಿ. ಖೈದಿ ಮುಖ್ತರ್ ಮೇಲೆ ಈಗಾಗಲೇ 15 ,ಕ್ಕೂ ಹೆಚ್ಚು ಪ್ರಕರಣಗಳಿದ್ದು, 2022 ರಲ್ಲಿ ಆತನ ಕಾಲಿಗೆ ಗುಂಡು ಹಾರಿಸಿ ಪೊಲೀಸರು ವಶಕ್ಕೆ ಪಡೆದಿದ್ದರು. ಈ ಸಂಬಂಧ ಬರ್ಕೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.










