ಮಂಗಳೂರು: ಹಿಂದೂ ಯುವತಿ ಮತ್ತು ಮಹಿಳೆ ಇರುವ ಮನೆಗೆ ಅನ್ಯ ಕೋಮಿನ ಯುವಕನೋರ್ವ ಬಂದು ಕಿಟಾಲೆ ಮತ್ತು ಹಲ್ಲೆ ನಡೆಸಿರುವ ಘಟನೆ ಮಂಗಳೂರಿನ ಕುಲಶೇಖರದಲ್ಲಿ ನಡೆದಿದೆ. ಮಾಹಿತಿ ಪಡೆದ ಸ್ಥಳೀಯರು ಯುವಕಕನ್ನು ಹಿಡಿದು ಧರ್ಮದೇಟು ನೀಡಿ ಪೋಲಿಸರಿಗೆ ಒಪ್ಪಿಸಿದ್ದಾರೆ. ಈತ ಮಹಿಳೆಗೆ ರವಿ ಎಂಬ ಹೆಸರಿನಲ್ಲಿ ಒಂದು ವರ್ಷದ ಹಿಂದೆ ಪರಿಚಯವಾಗಿದ್ದು ಆಗಾಗ ಮಹಿಳೆ ಮನೆಗೆ ಬರುತ್ತಿದ್ದ ಎನ್ನಲಾಗಿದೆ. ಇವರಿಬ್ಬರ ಮಧ್ಯೆ ಹಣಕಾಸಿನ ವ್ಯವಹಾರವೂ ಇತ್ತೆಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಶುಕ್ರವಾರ ಬೆಳಿಗ್ಗೆ ಬಂದಿದ್ದ ಯುವಕ ಮಹಿಳೆ ಮತ್ತು ಮಹಿಳೆಯ ಅಕ್ಕನ ಮಗಳೊಂದಿಗೆ ಅಸಭ್ಯವಾಗಿ ವರ್ತಿಸಿದ್ದಾನೆ ಇದರಿಂದ ಮಹಿಳೆ ಮತ್ತು ಯುವಕನ ಮಧ್ಯೆ ಗಲಾಟೆ ನಡೆದಿದೆ. ಮಾಹಿತಿ ಪಡೆದ ಸ್ಥಳಿಯರು ಬಂದು ಯುವಕಕನ್ನು ಹಿಡಿದು ಧರ್ಮದೇಟು ನೀಡಿ ವಿಚಾರಿಸಿದ್ದಾರೆ. ಈ ವೇಳೆ ತಾನು ಮುಸ್ಲಿಂ ಸಮುದಾಯಕ್ಕೆ ಸೇರಿದವನಾಗಿದ್ದು, ತನ್ನ ಹೆಸರು ಸೈಯದ್ ನಹೀಮ್ (25) ಎಂದು ಬಾಯ್ಬಿಟ್ಟಿದ್ದಾನೆ. ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿ ಯುವಕಕನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ. ಕಂಕನಾಡಿ ನಗರ ಠಾಣಾ…
Author: main-admin
ಮಂಗಳೂರು : ಬೆಂಗಳೂರಿನಿಂದ ಮಂಗಳೂರು ನಗರಕ್ಕೆ ನಿಷೇಧಿತ ಮಾದಕದ್ರವ್ಯ ಎಂಡಿಎಂಎಯನ್ನು ಸಾಗಾಟ ಮಾಡಿ ಮಾರಾಟ ಮಾಡುತ್ತಿದ್ದ ನೈಜೀರಿಯಾ ಪ್ರಜೆ ಸೇರಿ ಇಬ್ಬರು ಡ್ರಗ್ ಪೆಡ್ಲರ್‌ಗಳನ್ನು ಬಂಧಿಸಿರುವ ಸಿಸಿಬಿ ಪೊಲೀಸರು 200 ಗ್ರಾಂ ಎಂಡಿಎಂಎಯನ್ನು ವಶಪಡಿಸಿಕೊಂಡಿದ್ದಾರೆ. ಬೆಂಗಳೂರು ಅಂದ್ರಹಳ್ಳಿ ನಿವಾಸಿ ದರ್ಶನ್ ಕೆ.ಜಿ.(25), ನೈಜೀರಿಯಾ ಪ್ರಜೆ, ಹಾಲಿ ಬೆಂಗಳೂರಿನ ಬೆಟ್ಟಹಲ್ಸೂರ್ ನಲ್ಲಿ ವಾಸ್ತವ್ಯವಿರುವ ಚಿಕ ಜೋಸೇಫ್ ಇಝಿ(26) ಬಂಧಿತ ಆರೋಪಿಗಳು. ಇತ್ತೀಚೆಗೆ ಬಜ್ಪೆ ಠಾಣಾ ವ್ಯಾಪ್ತಿಯಲ್ಲಿ ಮಾದಕದ್ರವ್ಯ ಮಾರಾಟ ಮಾಡುತ್ತಿದ್ದ ಇಕ್ಬಾಲ್ ಎಂಬಾತನನ್ನು ಬಜ್ಪೆ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣದಲ್ಲಿ ಆರೋಪಿಗಳಿಗೆ ಎಂಡಿಎಂಎಯನ್ನು ಪೂರೈಕೆ ಮಾಡುತ್ತಿದ್ದ ಡ್ರಗ್ ಪೆಡ್ಲರ್‌ಗಳ ಬಗ್ಗೆ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಪೊಲೀಸರು ಪ್ರತ್ಯೇಕ ಕಾರ್ಯಾಚರಣೆ ನಡೆಸಿದ್ದಾರೆ. ಆದ್ದರಿಂದ ಮಂಗಳೂರಿನಿಂದ ಹಾಗೂ ಬೆಂಗಳೂರಿನಿಂದ ಮಾದಕ ವಸ್ತುವಾದ ಎಂಡಿಎಂಎಯನ್ನು ಸಾಗಾಟ ಮತ್ತು ಮಾರಾಟ ಮಾಡುತ್ತಿದ್ದ ನೈಜೀರಿಯಾ ಪ್ರಜೆ ಸೇರಿ ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರಿಂದ 10,00,000 ರೂ. ಮೌಲ್ಯದ 200 ಗ್ರಾಂ ನಿಷೇಧಿತ ಮಾದಕದ್ರವ್ಯ ಎಂಡಿಎಂಎ, ಮಾರುತಿ ಬಲೆನೋ ಕಾರು, 5…
ಮಂಗಳೂರು: ದ.ಕ. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಅವರು ತುಳುನಾಡಿನ ಸಂಸ್ಕೃತಿ ಬಿಂಬಿಸುವ ಹಾಡೊಂದನ್ನು ಹಾಡುವ ಮೂಲಕ ಜನರ ಮನ ಗೆದ್ದಿದ್ದಾರೆ. ಗುರುವಾರ ಸಂಜೆ ನಗರದ ಕಮಿಷನರ್ ಕಚೇರಿ ಸಭಾಂಗಣದಲ್ಲಿ ದ.ಕ. ಜಿಲ್ಲಾ ಪೊಲೀಸ್ ಹಾಗೂ ಮಂಗಳೂರು ಕಮಿಷನರೆಟ್ ಘಟಕದ ವತಿಯಿಂದ ಆಯೋಜಿಸಿದ್ದ ಸ್ನೇಹ ಸೌಹಾರ್ದ ಸಮ್ಮಿಲನದಲ್ಲಿ ಜಿಲ್ಲಾಧಿಕಾರಿ ಹಾಡಿದ ಹಾಡು ವೈರಲ್ ಆಗಿದ್ದು, ಕರಾವಳಿ ಜನರ ಮೆಚ್ಚುಗೆಗೆ ಪಾತ್ರವಾಗಿದೆ. ಮೂಲತಃ ತಮಿಳುನಾಡಿನ ವರಾಗಿರುವ ಜಿಲ್ಲಾಧಿಕಾರಿಯವರು ಮಂಗಳೂರಿನಲ್ಲಿ ತಮ್ಮ ಸೇವೆ ಸಲ್ಲಿಸುತ್ತಿದ್ದಾರೆ. ತುಳು ಸಂಪ್ರದಾಯ, ಆಚಾರ ವಿಚಾರಗಳ ಬಗ್ಗೆ ಅರಿತುಕೊಂಡಿರುವ ಅವರು ತುಳುನಾಡಿನ ಬಗ್ಗೆ ಅಪಾರ ಗೌರವ ಹೊಂದಿದ್ದಾರೆ. ಇದೀಗ ಅವರು ಹಾಡಿದ ತೌಲವ ಸಂಸ್ಕೃತಿ ಬಿಂಬಿಸುವ ಹಾಡಿಗೆ ಕರಾವಳಿ ಜನ ಫಿದಾ ಆಗಿದ್ದಾರೆ. ಜಿಲ್ಲಾಧಿಕಾರಿಗಳು ಕಳೆದ ಲೋಕಸಭೆ ಚುನಾವಣೆ ವೇಳೆ ತುಳು ಭಾಷೆಯಲ್ಲೇ ಮತದಾನ ಜಾಗೃತಿ ಮಾಡಿದ್ದರು.
ಮಂಗಳೂರು: ಸಂಚಾರಿ ನಿಯಮ ಉಲ್ಲಂಘನೆ ಮಾಡಲಾಗಿದೆ ಎಂಬ ಎಪಿಕೆ ಫೈಲ್ ಅನ್ನು ವಾಟ್ಸ್ಆ್ಯಪ್‌ಗೆ ಕಳುಹಿಸಿ ಮಂಗಳೂರಿನ ಯುವಕನೊಬ್ಬನಿಗೆ 1.31 ಲಕ್ಷ ರೂ. ವಂಚಿಸಿದ ಆರೋಪಿಯನ್ನು ಮಂಗಳೂರು ಸೆನ್ ಕ್ರೈಂ ಪೊಲೀಸರು ದೆಹಲಿಯಲ್ಲಿ ಬಂಧಿಸಿದ್ದಾರೆ. ದೆಹಲಿಯ ಮಾಳವೀಯಾ ನಗರದ ಪಂಚಶೀಲ ವಿಹಾರದ ಗೌರವ್ ಮಕ್ವಾನ್(25) ಬಂಧಿತ ಆರೋಪಿ. ಮಂಗಳೂರಿನ ಕೊಟ್ಟಾರದ ಯದುನಂದನ್ ಆಚಾರ್ಯ ಎಂಬವರ ವಾಟ್ಸ್ಆ್ಯಪ್‌ಗೆ VAHAN PARIVAHAN.apk ಫೈಲ್ ಬಂದಿತ್ತು. ಆ ಫೈಲ್ ಅನ್ನು ಡೌನ್‌ಲೋಡ್ ಮಾಡುತ್ತಿದ್ದಂತೆ ಅವರ ಫ್ಲಿಪ್‌ಕಾರ್ಟ್ ಖಾತೆ ಹ್ಯಾಕ್ ಆಗಿದೆ. ಸೈಬರ್ ವಂಚಕರು ಈ ಖಾತೆಯನ್ನು ಬಳಸಿಕೊಂಡು ಡೆಬಿಟ್ ಮತ್ತು ಕ್ರೆಡಿಟ್ ಕಾರ್ಡ್‌ಗಳಿಂದ 1,31,000 ರೂ. ಮೌಲ್ಯದ 2 ಮೊಬೈಲ್ ಪೋನ್ 1 ಏರ್ ಪ್ಯಾಡ್ ಹಾಗೂ ಗಿಫ್ಟ್ ವೋಚರ್ ಗಳನ್ನು ಖರೀದಿ ಮಾಡಿದ್ದಾರೆ. ಈ ಬಗ್ಗೆ ತನಿಖೆ ಕೈಗೊಂಡಿದ್ದು, ಫ್ಲಿಪ್ ಕಾರ್ಟ್ ಕಂಪೆನಿಯಿಂದ ಮಾಹಿತಿಯನ್ನು ಪಡೆದುಕೊಂಡು, ಪ್ರಕರಣ ದಾಖಲಿಸಲಾಗಿತ್ತು. ತಕ್ಷಣ ಸೆನ್ ಕ್ರೈಂ ಪೊಲೀಸ್ ಠಾಣಾ ಪಿಎಸ್ಐ ಗುರಪ್ಪ ಕಾಂತಿ ಹಾಗೂ ಪಿಸಿ ತಿಪ್ಪಾರೆಡ್ಡಿಯವರು ದೆಹಲಿಗೆ…
ಮಣಿಪಾಲ: ಉಡುಪಿಯ ಮಣಿಪಾಲದಲ್ಲಿ ಮತ್ತೆ ನೆತ್ತರು ಹರಿದಿದೆ. ಹೋಟೆಲ್ ಕಾರ್ಮಿಕನನ್ನು ಯಾರೋ ಆಗಂತುಕರು ಬಿಯರ್ ಬಾಟಲಿಯಿಂದ ಚುಚ್ಚಿ ಚುಚ್ಚಿ ಕೊಲೆಗೈದಿದ್ದಾರೆ. ಕೊಲೆಯಾದ ಜಾಗ ಹಲವು ನಿಗೂಢತೆಗಳಿಗೆ ಸಾಕ್ಷಿಯಾಗಿದೆ. ಹತ್ಯೆ ಮಾಡಿದ ಆರೋಪಿಗಳಿಗಾಗಿ ತಲಾಶ್ ಆರಂಭವಾಗಿದೆ. ಶುಕ್ರವಾರ ಬೆಳ್ಳಂಬೆಳಗ್ಗೆ ಮಣಿಪಾಲದಲ್ಲಿ ಜಾಗಿಂಗ್ ಮಾಡುತ್ತಿದ್ದವರಿಗೆ ಶಾಕ್ ಎದುರಾಗಿತ್ತು.ರಸ್ತೆ ಬದಿ ರಕ್ತ ಸಿಕ್ತವಾಗಿ ಬಿದ್ದಿದ್ದ ಮಧ್ಯ ವಯಸ್ಕ ಪುರುಷನೋರ್ವನ ಮೃತ ದೇಹ ಕಂಡು ಜನ ಹೌಹಾರಿದ್ದಾರೆ. ಮೃತ ದೇಹದ ಪಕ್ಕದಲ್ಲೇ ಒಡೆದ ಬಿಯರ್ ಬಾಟಲಿ ಪತ್ತೆಯಾಗಿದೆ .ಇದೇ ಬಾಟಲಿಯನ್ನು ಒಡೆದು ಆತನ ಕತ್ತಿಗೆ ತಿವಿದು ತಿವಿದು ಭೀಕರವಾಗಿ ಹತ್ಯೆ ಮಾಡಲಾಗಿದೆ. ಮಣಿಪಾಲದ ಅನಂತ ಕಲ್ಯಾಣ ನಗರದಲ್ಲಿ ಈ ಘಟನೆ ನಡೆದಿದೆ . ಹೋಟೆಲ್ ಕಾರ್ಮಿಕ ಶ್ರೀಧರ ಕಾಸರಗೋಡು ಕೊಲೆಯಾದ ವ್ಯಕ್ತಿ .ಈತ ಮೂಲತಃ ಕೇರಳದ ಕಾಸರಗೋಡು ನಿವಾಸಿ. ಶ್ರೀಧರ್ ಮೃತದೇಹದ ಮೇಲೆ ಆತನ ಬ್ಯಾಗ್ ಹಾಗೆಯೇ ಇದೆ .ಸದ್ಯ ಪ್ರಕರಣ ತೀವ್ರ ಅನುಮಾನಗಳಿಗೆ ಕಾರಣವಾಗಿದ್ದು ಪೊಲೀಸರು ಆರೋಪಿಗಳಿಗಾಗಿ ತಲಾಶ್ ಆರಂಭಿಸಿದ್ದಾರೆ.
ಮಂಗಳೂರು: ವೈನ್ ಪ್ರಿಯರಿಗೊಂದು ಶುಭಸುದ್ದಿ, ಆರೋಗ್ಯಕ್ಕೆ ಹಿತಕರವಾಗಿರುವ ‘ವೈನ್’ ಮೇಳವನ್ನು (Wine Festival )ಮಂಗಳೂರು ನಗರದಲ್ಲಿ ಕರ್ನಾಟಕ ದ್ರಾಕ್ಷಿ ಮತ್ತು ವೈನ್ ಬೋರ್ಡ್ ರತ್ನಾ’ಸ್ ವೈನ್ ಗೇಟ್ ಹಾಗೂ ಶೂಲಿನ್ ಗ್ರೂಪ್ ಸಹಭಾಗಿತ್ವದಲ್ಲಿ ಆಯೋಜಿಸಿದೆ. ತೋಟಗಾರಿಕಾ ಇಲಾಖೆಯ ಸಹಯೋಗದೊಂದಿಗೆ ಡಿ.7 ಹಾಗೂ 8ರಂದು ನಗರದ ಕದ್ರಿಪಾರ್ಕ್ ನಲ್ಲಿ ದ್ರಾಕ್ಷಾ ರಸ ಪ್ರದರ್ಶನ, ಮಾರಾಟ ಹಾಗೂ ಬೃಹತ್ ವೈನ್ ಮೇಳ ಆಯೋಜಿಸಲಾಗಿದೆ. ಕರ್ನಾಟಕ ರಾಜ್ಯ ದ್ರಾಕ್ಷಿ ಬೆಳೆಗಾರರ ಹಿತದೃಷ್ಟಿಯಿಂದ ಬೆಳೆಗೆ ಉತ್ತಮ ಬೇಡಿಕೆ ಹಾಗೂ ಬೆಲೆ ಸಿಗುವ ಉದ್ದೇಶಕ್ಕಾಗಿ ಕರ್ನಾಟಕ ದ್ರಾಕ್ಷಿ ಬೆಳೆಗಾರರ ಸಂಘ, ಕರ್ನಾಟಕ ದ್ರಾಕ್ಷಾ ರಸ ಮಂಡಳಿ ಹಾಗೂ ಕರ್ನಾಟಕದ ವೈನರಿಗಳ ಸಹಕಾರದೊಂದಿಗೆ ದ್ರಾಕ್ಷಾ ರಸದ ಉತ್ಪಾದನೆ, ದಾಸ್ತಾನು ಹಾಗೂ ದ್ರಾಕ್ಷಾ ರಸದ ಪೇಯವನ್ನು ಸವಿಯುವ ವಿಧಾನ ಮಾತ್ರವಲ್ಲ, ಇದು ಉತ್ತಮ ಆರೋಗ್ಯಕರ ಪಾನೀಯವಾಗಿರುವುದರಿಂಧ ಇದರ ಬಗ್ಗೆ ಸೂಕ್ತ ಮಾಹಿತಿ ನೀಡಲಾಗುತ್ತದೆ. ‘ಪ್ರದರ್ಶನ-ಸವಿಯುವಿಕೆ-ಮಾರಾಟ’ ಎಂಬ ಘೋಷವಾಕ್ಯದೊಂದಿಗೆ ವೈನ್ ಮೇಳ ಆಚರಿಸಲ್ಪಡುತ್ತಿದ್ದು ದ್ರಾಕ್ಷಾ ರಸ ಉತ್ಪಾದಕ ಸಂಸ್ಥೆಗಳ ಮೂಲಕ ಅತ್ಯಾಕರ್ಷಕ ದರ…
ಬಂಟ್ವಾಳ: ಸರಕಾರಿ ಬಸ್ ನ ನಿರ್ವಾಹಕನಿಗೆ ಅಪರಿಚಿತ ಪ್ರಯಾಣಿಕನೊರ್ವ ಹಲ್ಲೆ ನಡೆಸಿದ್ದಾನೆ ಎಂದು ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಕೆ.ಎಸ್. ಆರ್.ಟಿ.ಬಸ್ ನಿರ್ವಾಹಕ ದೇವಾನಂದ ಎಂಬವರಿಗೆ ಫರಂಗಿಪೇಟೆಯಲ್ಲಿ ಅಪರಿಚಿತ ಪ್ರಯಾಣಿಕ ಹಲ್ಲೆ ನಡೆಸಿರುವ ಬಗ್ಗೆ ಪ್ರಕರಣ ದಾಖಲಾಗಿದೆ.ಪುತ್ತೂರಿನಿಂದ ಮಂಗಳೂರಿನ ಕಡೆಗೆ ಹೋಗುವ ವೇಳೆ ಬಂಟ್ವಾಳ ತಾಲೂಕಿನ ಪುದು ಗ್ರಾಮದ ಫರಂಗಿಪೇಟೆ ಎಂಬಲ್ಲಿ ಬಸ್ ಗೆ ಹತ್ತಿದ ಅಪರಿಚಿತ ಪ್ರಯಾಣಿಕನೋರ್ವ ನಿರ್ವಾಹಕನಿಗೆ ಅವ್ಯಾಚ್ಚ ಶಬ್ದಗಳಿಂದ ಬೈದು ಬಳಿಕ ಹಲ್ಲೆ ನಡೆಸಿದ್ದಾನೆ.ಬಸ್ಸ್ ನಿಲ್ಲಿಸದೆ ಇರುವ ವಿಚಾರಕ್ಕೆ ಸಂಬಂಧಿಸಿದಂತೆ ಆತ ನಿರ್ವಾಹಕನಿಗೆ ಹಲ್ಲೆ ನಡೆಸಿರುವ ಬಗ್ಗೆ ಯೂ ದೂರಿನಲ್ಲಿ ಉಲ್ಲೇಖವಾಗಿದೆ. ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಂಗಳೂರು: ಸಹಾಯ ಮಾಡುವ ನೆಪದಲ್ಲಿ ಜ್ಯೂಸ್‌ನಲ್ಲಿ ಮತ್ತು ಬರುವ ಔಷಧ ಬೆರೆಸಿ ಯುವಕನೋರ್ವ ತನ್ನ ಮೇಲೆ ಅತ್ಯಾಚಾರ ನಡೆಸಿರುವುದು ಮಾತ್ರವಲ್ಲದೆ, 62 ಸಾವಿರ ರೂ. ನಗದು ಕಳವು ಮಾಡಿದ್ದಾನೆ. ಆತನ ಅಣ್ಣನೂ ತನ್ನ ಲೈಂಗಿಕ ಕಿರುಕುಳ ನೀಡಿ ಮಾನಭಂಗಕ್ಕೆ ಯತ್ನಿಸಿರುವುದಾಗಿ ಯುವತಿಯೊಬ್ಬಳು ಕದ್ರಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.ಜು. 21ರಂದು ದೂರುದಾರ ಯುವತಿ ಕಾರು ಚಲಾಯಿಸಿಕೊಂಡು ಹೋಗುತ್ತಿದ್ದಾಗ ಕದ್ರಿಯಲ್ಲಿ ಕೆಟ್ಟು ಹೋಗಿದೆ. ಈ ವೇಳೆ ಅದೇ ರಸ್ತೆಯಲ್ಲಿ ಬರುತ್ತಿದ್ದ ಬೈಕ್ ಸವಾರ ಮೊಹಮ್ಮದ್ ಶಫಿನ್ ಕಾರನ್ನು ಸರಿಪಡಿಸಿ, ಬಳಿಕ ಆಕೆಯನ್ನು ಅದೇ ಕಾರಿನಲ್ಲಿ ಕೊಡಿಯಾಲಬೈಲಿನ ಅಪಾರ್ಟ್‌ಮೆಂಟ್ ಒಂದರಲ್ಲಿರುವ ಆಕೆಯ ಮನೆಗೆ ಬಿಟ್ಟು ಬಂದಿದ್ದ. ಈ ವೇಳೆ ಆತ ಆಕೆಯ ಮೊಬೈಲ್ ನಂಬರ್ ಪಡೆದಿದ್ದ.ಆ. 8ರಂದು ಯುವತಿಯ ಮನೆಯ ಫ್ರಿಡ್ಜ್ ಕೆಟ್ಟು ಹೋಗಿದ್ದು, ಮನೆಯಲ್ಲಿ ಒಬ್ಬಳೇ ವಾಸವಿರುವುದರಿಂದ ಯುವತಿ ಸಹಾಯಕ್ಕಾಗಿ ಶಫಿನ್‌ಗೆ ಕರೆ ಮಾಡಿದ್ದಾಳೆ. ಆತ ತನ್ನ ಪರಿಚಿತ ರಿಪೇರಿಯವನನ್ನು ಯುವತಿಯ ಮನೆಗೆ ಕರೆದುಕೊಂಡು ಬಂದು ರಿಪೇರಿ ಮಾಡಿಸಿದ್ದ. ಬಳಿಕ…
ಕಡಬ: ಶಿಕ್ಷಕರೋರ್ವರು ಹೃದಯಾಘಾತದಿಂದ ಇಹಲೋಕ ತ್ಯಜಿಸಿರುವ ಘಟನೆ ಕಡಬದಲ್ಲಿ ನಡೆದಿದೆ. ಅಲಂಕಾರು ಗ್ರಾಮದ ಬಾಕಿಲ ನಿವಾಸಿ, ಪ್ರದೀಪ್ ಬಾಕಿಲ(42) ಮೃತ ಶಿಕ್ಷಕ. ಪ್ರದೀಪ್ ಬಾಕಿಲ ಶಾಂತಿನಗರ ಶಾಲೆಯ ಪ್ರಭಾರ ಮುಖ್ಯ ಶಿಕ್ಷಕರಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಡಿ.4 ರಂದು ಶಾಂತಿನಗರ ಶಾಲೆಯಲ್ಲಿ ಸ್ಕೂಲ್ ಡೇ ಕಾರ್ಯಕ್ರಮವಿತ್ತು. ಕಾರ್ಯಕ್ರಮ ಮುಗಿದ ಬಳಿಕ ಮನೆಗೆ ಬಂದು ಅಂಗಳದಲ್ಲಿ ಫೋನ್‌ನಲ್ಲಿ ಮಾತಾಡುತ್ತಿದ್ದರು ಎನ್ನಲಾಗಿದೆ. ಡಿ.5 ರಂದು ಪ್ರದೀಪ್ ಬಾಕಿಲ ಮನೆಯ ಅಂಗಳದಲ್ಲಿ ಮೃತದೇಹ ಪತ್ತೆಯಾಗಿದ್ದು, ಹೃದಯಾಘಾತಕ್ಕೊಳಗಾಗಿ ಅವರು ನಿಧನರಾಗಿದ್ದಾರೆ ಎಂದು ಹೇಳಲಾಗಿದೆ. ಮೃತರು ಪತ್ನಿ ಶಿಕ್ಷಕಿ ಹೇಮಲತಾ ಬಾಕಿಲ, ಓರ್ವ ಪುತ್ರ, ಪುತ್ರಿಯನ್ನು ಅಗಲಿದ್ದಾರೆ.
ಪುತ್ತೂರು : ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ಆರೋಪಿಗಳಿಗೆ ಸಹಕರಿಸಿದ್ದಾರೆ ಎನ್ನಲಾದ ಅಬೂಬಕ್ಕರ್ ಸಿದ್ದಿಕ್ ಅವರ ಪತ್ನಿ ವಾಸವಾಗಿರುವ ಮನೆ ಮೇಲೆ ಇಂದು ಬೆಳಗ್ಗೆ ಎನ್‌ಐಎ ಅಧಿಕಾರಿಗಳು ದಾಳಿ ನಡೆಸಿ ತನೆಖೆ ನಡೆಸಿದ್ದಾರೆ. ಕೆಯ್ಯೂರು ಶಾಲಾ ಬಳಿಯ ಬಾಡಿಗೆ ಮನೆಯೊಂದರಲ್ಲಿ ಅಬೂಬಕ್ಕರ್ ಸಿದ್ದಿಕ್ ಅವರ ಪತ್ನಿ ವಾಸವಾಗಿದ್ದಾರೆ. ಅವರ ಮನೆಗೆ ಎನ್‌ಐಎ ಅಧಿಕಾರಿಗಳು ಆಗಮಿಸಿ ತನಿಖೆ ನಡೆಸಿದ್ದಾರೆ. ಜೊತೆಗೆ ಸಿದ್ದಿಕ್ ಅವರ ಸಹೋದರರೋರ್ವರು ಕೆಯ್ಯೂರಿನ ಅರಿಕ್ಕಿಲದಲ್ಲಿ ವಾಸವಾಗಿದ್ದು, ಅಲ್ಲಿಗೂ ತೆರಳಿದ ಅಧಿಕಾರಿಗಳು ತನಿಖೆ ನಡೆಸಿದ್ದಾರೆ. ಸರ್ಚ್ ವಾರೆಂಟ್ ಪಡೆದ ಎನ್‌ಐಎ ಪೊಲೀಸರು ಕೆಯ್ಯೂರಿಗೆ ಆಗಮಿಸಿ ತನಿಖೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.ಬಿಜೆಪಿ ಜಿಲ್ಲಾ ಯುವ ಮೋರ್ಚಾದ ಪದಾಧಿಕಾರಿಯಾಗಿದ್ದ ಪ್ರವೀಣ್ ನೆಟ್ಟಾರ್ ಅವರನ್ನು 2022ರ ಜು.26 ರಂದು ದುಷ್ಕರ್ಮಿಗಳು ಕೊಲೆ ಮಾಡಿದ್ದರು. ಪ್ರವೀಣ್ ಅವರ ಹತ್ಯೆ ನಡೆದ ವೇಳೆ ಅಬೂಬಕ್ಕರ್ ಸಿದ್ದಿಕ್ ಅವರು ಸ್ಥಳದಲ್ಲೇ ಇದ್ದು ಆರೋಪಿಗಳಿಗೆ ಸಹಕಾರ ನೀಡಿದ ಆರೋಪ ಎದುರಿಸುತ್ತಿದ್ದು ಸದ್ಯ ತಲೆ ಮರೆಸಿಕೊಂಡಿರುತ್ತಾರೆ.









