Author: main-admin

ಮಂಗಳೂರು : ಸಿಎಂ ಸಿದ್ದರಾಮಯ್ಯ ಮಂಗಳೂರು ಪ್ರವಾಸ ಕೈಗೊಂಡಿದ್ದು, ಮಂಗಳೂರಿನ ಉರ್ವದಲ್ಲಿ ನೂತನವಾಗಿ ನಿರ್ಮಿಸಿರುವ ಕಬಡ್ಡಿ ಹಾಗೂ ಬ್ಯಾಡ್ಮಿಂಟನ್ ಒಳಾಂಗಣ ಕ್ರೀಡಾಂಗಣವನ್ನು ಶುಕ್ರವಾರ ಬ್ಯಾಡ್ಮಿಂಟನ್ ಆಡುವ ಮೂಲಕ ಉದ್ಘಾಟಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, ಮಂಗಳೂರಿನ ಉರ್ವದಲ್ಲಿ ನೂತನವಾಗಿ ನಿರ್ಮಿಸಿರುವ ಕಬಡ್ಡಿ ಹಾಗೂ ಬ್ಯಾಡ್ಮಿಂಟನ್ ಒಳಾಂಗಣ ಕ್ರೀಡಾಂಗಣವನ್ನು ಶುಕ್ರವಾರ ಬ್ಯಾಡ್ಮಿಂಟನ್ ಆಡುವ ಮೂಲಕ ಉದ್ಘಾಟಿಸಿದೆ.ಕರಾವಳಿ ಭಾಗದ ಯುವಜನರು ಕ್ರೀಡಾಕ್ಷೇತ್ರದಲ್ಲಿ ಹೆಚ್ಚು ತೊಡಗಿಸಿಕೊಂಡು, ರಾಷ್ಟ್ರೀಯ – ಅಂತಾರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಲು ಈ ಕ್ರೀಡಾಂಗಣ ನೆರವಾಗಲಿದೆ ಎನ್ನುವ ನಂಬಿಕೆ ನನ್ನದು ಎಂದು ತಿಳಿಸಿದ್ದಾರೆ.

Read More

ಬಂಟ್ವಾಳ : ನಾಲ್ಕು ಮಂದಿಯ ತಂಡವೊಂದು ಯುವಕನೋರ್ವನಿಗೆ ಚೂರಿಯಿಂದ ಇರಿದು ಪರಾರಿಯಾದ ಘಟನೆ ಪಾಣೆಮಂಗಳೂರು ಸಮೀಪದ ಅಕ್ಕರಂಗಡಿ ಬಸ್ಸು ನಿಲ್ದಾಣ ಬಳಿ ಶುಕ್ರವಾರ ರಾತ್ರಿ ನಡೆದಿದೆ. ಚೂರಿ ಇರಿತಕ್ಕೊಳಗಾದ ವ್ಯಕ್ತಿಯನ್ನು ಇಲ್ಲಿನ ನಿವಾಸಿ, ಪೈಂಟರ್ ವೃತ್ತಿಯ ಹಮೀದ್ ಯಾನೆ ಅಮ್ಮಿ ಎಂದು ಗುರುತಿಸಲಾಗಿದೆ. ಇರಿತದಿಂದ ಹಮೀದ್ ಅವರ ಕೈಗೆ ಗಂಭೀರ ಗಾಯವಾಗಿದ್ದು, ಅವರನ್ನು ಸ್ಥಳೀಯರು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಸಾಗಿಸಿದ್ದಾರೆ. ಘಟನಾ ಸ್ಥಳಕ್ಕೆ ಬಂಟ್ವಾಳ ಪೊಲೀಸರು ದೌಡಾಯಿಸಿದ್ದು ಪರಿಶೀಲನೆ ನಡೆಸುತ್ತಿದ್ದಾರೆ. ಘಟನೆಗೆ ಕಾರಣ ಏನು ಎಂಬುದು ಸದ್ಯಕ್ಕೆ ತಿಳಿದು ಬಂದಿಲ್ಲ. ದುಷ್ಕರ್ಮಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ

Read More

ಬಂಟ್ವಾಳ: ಪುಂಜಾಲಕಟ್ಟೆ ಪೊಲೀಸ್ ಠಾಣೆಯ ಪೊಲೀಸ್ ಕಾನ್ಸ್‌ಟೇಬಲ್ ಮನೋಹರ ಪಿ.ಸಿ ರವರು ಹೆಡ್ ಕಾನ್ಸ್ ಟೇಬಲ್ ಹುದ್ದೆಗೆ ಮುಂಬಡ್ತಿಗೊಂದು ಬಂಟ್ವಾಳ ಸಂಚಾರ ಪೊಲೀಸ್ ಠಾಣೆಗೆ ನಿಯೋಜನೆಗೊಂಡಿದ್ದಾರೆ. ಮನೋಹರ‌ ಪಿ ಸಿ ರವರು ಮೂಲತಃ ಬೆಳ್ತಂಗಡಿ ತಾಲೂಕು ಓಡಿಲ್ನಾಳ ಗ್ರಾಮದ ನಿವಾಸಿಯಾಗಿದ್ದು, ಪೊಲೀಸ್ ಹೆಡ್ ಕಾನ್ಸ್ಟೇಬಲ್ ಆಗಿ ಮುಂಬಡ್ತಿಗೊಂಡು ಪುಂಜಾಲಕಟ್ಟೆ ಪೊಲೀಸ್ ಠಾಣೆಯಿಂದ ಬಂಟ್ವಾಳ ಸಂಚಾರ ಪೊಲೀಸ್ ಠಾಣೆಗೆ ನಿಯೋಜನೆಗೊಂಡಿದ್ದಾರೆ. ಈ ಹಿಂದೆ ಇವರು ಉಪ್ಪಿನಂಗಡಿ, ಬೆಳ್ತಂಗಡಿ ಸಂಚಾರ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸಿದ್ದು, ಹಲವು ಪ್ರಮುಖ ಅಪರಾಧ ಪತ್ತೆ ಕಾರ್ಯದಲ್ಲಿ ಅಧಿಕಾರಿಗಳೊಂದಿಗೆ ಸಹಕರಿಸಿದ್ದರು

Read More

ತಾಯಿಯ ಬಳಿಯಿದ್ದ ಚಿನ್ನಾಭರಣ ಮತ್ತು 2 ಲಕ್ಷಕ್ಕೂ ಅಧಿಕ ಹಣವನ್ನು ತಂದು, ಸ್ವಂತ ಬ್ಯೂಟಿಷಿಯನ್ ಆರಂಭಿಸಲು ಬೆಂಗಳೂರಿಗೆ ಬಂದಂತಹ ಮಹಿಳೆಯ ಬಳಿಯಿದ್ದ ಹಣ ಚಿನ್ನಾಭರಣ ದರೋಡೆ ಮಾಡಿರುವ ಆರೋಪದ ಹಿನ್ನೆಲೆಯಲ್ಲಿ, ನೆಲಮಂಗಲ ಗ್ರಾಮಾಂತರ ಠಾಣೆಯ ಕಾನ್ಸ್ಟೇಬಲ್ ವಿರುದ್ಧ ಎಫ್ಐಆರ್ ದಾಖಲಾಗಿದೆ. ಹೌದು ಹಣ ಮತ್ತು ಚಿನ್ನಾಭರಣ ದರೋಡೆ ಮಾಡಿದ ಆರೋಪದ ಹಿನ್ನೆಲೆಯಲ್ಲಿ ನೆಲಮಂಗಲ ಗ್ರಾಮಂತರ ಠಾಣೆ ಎಚ್ ಸಿ ಗಿರಿಜೇಶ್ ವಿರುದ್ಧ ಈ ಒಂದು ಆರೋಪ ಕೇಳಿ ಬಂದಿದೆ. ಈ ಬಗ್ಗೆ ಬಾಗಲಗುಂಟೆ ಪೊಲೀಸ್ ಠಾಣೆಗೆ ಸಿಂಚನ ಎನ್ನುವವರು ನೀಡಿದ್ದಾರೆ. ಬೆಂಗಳೂರಿನಲ್ಲಿ ಬ್ಯೂಟಿಷಿಯನ್ ಆಗಿ ಕೆಲಸ ಮಾಡಿಕೊಂಡಿರುವ ಸಿಂಚನ ಮೂಲತಹ ಶಿವಮೊಗ್ಗ ನಿವಾಸಿಯಾಗಿದ್ದಾರೆ. ಸ್ವಂತ ಬ್ಯೂಟಿ ಪಾರ್ಲರ್ ಶಾಪ್ ಆರಂಭಿಸಲು ಸಿಂಚನ ನಿರ್ಧರಿಸಿದ್ದರು. ಶಿವಮೊಗ್ಗದಲ್ಲಿ ತಾಯಿಯ ಬಳಿ ಚುನಾವಣೆ ಹಾಗೂ 2,50,000 ಪಡೆದು ಬೆಂಗಳೂರಿಗೆ ಬಂದಿದ್ದರು. 8ನೇ ಮೈಲಿಬಳಿ ಬಸ್ ಇಳಿದು ಹೋಗುತ್ತಿದ್ದ ವೇಳೆ, ಜಿಎಪ್ ನಲ್ಲಿ ಬಂದಿದ್ದೆ ಹೆಡ್ ಕಾನ್ಸ್ಟೇಬಲ್ ಗಿರಿಜೇಶ್ ಡ್ರಾಪ್ ನೀಡುವುದಾಗಿ ಮಹಿಳೆಯನ್ನು ಹತ್ತಿಸಿಕೊಂಡಿದ್ದಾನೆ. ಈ ವೇಳೆ…

Read More

ಬಂಟ್ವಾಳ: ಎಂ.ಡಿ.ಎಂ.ಎ ಮಾದಕ ವಸ್ತು ಸೇವಿಸಿ ಬಳಿಕ ಮಾರಾಟದ ಉದ್ದೇಶದಿಂದ ಅವಿತುಕೊಂಡಿದ್ದ ಮೂವರು ಆರೋಪಿಗಳ ಸಹಿತ ಲಕ್ಷಾಂತರ ರೂ ಮೌಲ್ಯದ ವಿವಿಧ ಸೊತ್ತುಗಳನ್ನು ಬಂಟ್ವಾಳ ನಗರ ಎಸ್.ಐ.ರಾಮಕೃಷ್ಣ ನೇತ್ರತ್ವದ ತಂಡ ವಶಕ್ಕೆ ಪಡೆದುಕೊಂಡು ಪ್ರಕರಣ ದಾಖಲಿಸಿದ್ದಾರೆ. ನಂದಾವರ ಬಸ್ತಿಗುಡ್ಡೆ ನಿವಾಸಿ ಮೊಹಮ್ಮದ್ ಇಮ್ತಿಯಾಜ್ , ನಂದಾವರ ಬಸ್ತಿಗುಡ್ಡೆ ನಿವಾಸಿ ಯೂನಸ್, ಹಾಗೂ ಪುತ್ತೂರು ನರಿಮೊಗರು ಪುರುಷರಕಟ್ಟೆ ನಿವಾಸಿ ಮೊಹಮ್ಮದ್ ಇಕ್ಬಾಲ್ ಬಂಧಿತ ಆರೋಪಿಗಳು. ಬಂಧಿತರಿಂದ ರೂ.5000 ಮೌಲ್ಯದ 2.99 ಗ್ರಾಂ ತೂಕದ ಎಂ.ಡಿ.ಎಂ.ಸೊತ್ತು ಹಾಗೂ ಖಾಲಿ 5 ಪ್ಲಾಸ್ಟಿಕ್ ಕವರ್, ರೂ.30 ಲಕ್ಷ ಮೌಲ್ಯದ ಕಾರು, ಆರೋಪಿಗಳ ಕೈಯಲ್ಲಿದ್ದ ರೂ.45 ಸಾವಿರ ಮೌಲ್ಯದ 4 ಮೊಬೈಲ್ ಪೋನ್ ಗಳನ್ನು ವಶಕ್ಕೆ ಪಡೆಯಲಾಗಿದೆ. ಬಂಟ್ವಾಳ ನಗರ ಠಾಣಾ ಪೊಲೀಸರು ರೌಂಡ್ಸ್ ನಲ್ಲಿದ್ದ ವೇಳೆ ಸಂಶಯದ ಮೇಲೆ ವಿಚಾರಿಸಿದಾಗ ಇವರು ಮಾದಕ ವಸ್ತು ಸೇವನೆ ಮತ್ತು ಮಾರಾಟ ಮಾಡುವ ವಿಚಾರ ಬೆಳಕಿಗೆ ಬಂದಿದೆ ಎಂದು ತಿಳಿದು ಬಂದಿದೆ. ನಂದಾವರದ ಗೌಸಿಯಾ ಎಂಬಲ್ಲಿ ರಸ್ತೆ ಬದಿಯಲ್ಲಿ…

Read More

ಸುಳ್ಯ: ಪುತ್ತೂರಿನಿಂದ ಮಡಿಕೇರಿಗೆ ಹೋಗುವ ಕೆ.ಎಸ್.ಆರ್.ಟಿ.ಸಿ. ಬಸ್ಸಿನಲ್ಲಿ ಅಪ್ತಾಪ್ತೆಗೆ ಕಿರುಕುಳ ನೀಡಿದ ಆರೋಪದಲ್ಲಿ ಯುವಕನೋರ್ವನನ್ನು ಸುಳ್ಯ ಪೊಲೀಸರು ಬಂಧಿಸಿದ್ದಾರೆ. ಪುತ್ತೂರು ಬೆಟ್ಟಂಪಾಡಿಯ ಅಬ್ದುಲ್ಲಾ ಬಂಧಿತ ಆರೋಪಿ. ಪುತ್ತೂರಿನಿಂದ ಸುಳ್ಯ ಮೂಲಕ ಮಡಿಕೇರಿಗೆ ತೆರಳುವ ಬಸ್ಸಿನಲ್ಲಿ ಮಡಿಕೇರಿಗೆ ತೆರಳಲು ಮನೆಯವರೊಂದಿಗೆ ಅಪ್ತಾಪ್ತರ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಪಕ್ಕದಲ್ಲಿ ನಿಂತಿದ್ದ ಆರೋಪಿ ಅಬ್ದುಲ್ಲಾ ಅಪ್ರಾಪ್ತ ಬಾಲಕಿಯ ಮೈಗೆ ಕೈ ಹಾಕಿ, ಅನುಚಿತವಾಗಿ ವರ್ತಿಸಿ ಕಿರುಕುಳ ನೀಡಿದ್ದಾನೆ ಎಂದು ಆರೋಪಿಸಲಾಗಿದೆ. ಈ ಬಗ್ಗೆ ಮನೆಯವರು ಸುಳ್ಯ ಪೊಲೀಸರಿಗೆ ದೂರು ನೀಡಿದ್ದು, ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

Read More

ದ.ಕ. ಜಿಲ್ಲಾಡಳಿತ, ಕರ್ನಾಟಕ ಗೃಹ ಮಂಡಳಿ, ಸ್ಮಾರ್ಟ್ ಸಿಟಿ ಲಿಮಿಟೆಡ್ ಆಶ್ರಯದಲ್ಲಿ ಪಡೀಲ್‌ನಲ್ಲಿ ನಿರ್ಮಾಣಗೊಂಡಿರುವ ನೂತನ ಜಿಲ್ಲಾಧಿಕಾರಿ ಸಂಕೀರ್ಣ ‘ಪ್ರಜಾಸೌಧ’ವನ್ನು ಇಂದು CM ಸಿದ್ದರಾಮಯ್ಯ ಲೋಕಾರ್ಪಣೆಗೊಳಿಸಲಿದ್ದಾರೆ. ನೂತನ ಕಚೇರಿಯಲ್ಲಿ ಸುಮಾರು 23 ಇಲಾಖೆಗಳ ಕಾರ್ಯಾಚರಣೆ ಆರಂಭವಾಗಲಿದೆ. ಆಧುನಿಕ ವ್ಯವಸ್ಥೆಯೊಂದಿಗೆ ತುಳುನಾಡಿನ ಪಾರಂಪರಿಕ ಶೈಲಿಯಲ್ಲಿ ಕಟ್ಟಡ ನಿರ್ಮಾವಾಗಿದೆ. ‘ದ.ಕ. ಜಿಲ್ಲಾಧಿಕಾರಿ ನೂತನ ಸಂಕೀರ್ಣ 75 ಕೋಟಿರೂ. ವೆಚ್ಚದಲ್ಲಿ ಪೂರ್ಣಗೊಂಡಿದೆ.ಮೂರು ಮಹಡಿಗಳ ಸಂಕೀರ್ಣವು ಒಟ್ಟು 253159.67 ಚದರ ಅಡಿ ವಿಸ್ತೀರ್ಣವನ್ನು ಹೊಂದಿದೆ.

Read More

ಪುತ್ತೂರು: ಕಳೆದ ಏಪ್ರಿಲ್ ತಿಂಗಳಲ್ಲಿ ವನ್ಯಜೀವಿ ಬೇಟೆಯಾಡಿ, ಅದರ ಮಾಂಸವನ್ನು ದಾಸ್ತಾನಿರಿಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿಗೆ ದ.ಕ ಜಿಲ್ಲಾ ಮತ್ತು ಸೆಶನ್ಸ್ ನ್ಯಾಯಾಲಯ ನಿರೀಕ್ಷಣ ಜಾಮೀನು ಮಂಜೂರುಗೊಳಿಸಿ ಆದೇಶ ನೀಡಿದೆ. ಏ.24 ರಂದು ಕಡಬ ತಾಲೂಕಿನ ನೂಜಿಬಾಳ್ತಿಲ ಗ್ರಾಮದ ಕಲೆಂಜಾಲು ಎಂಬಲ್ಲಿ ವಾಸವಿರುವ ವರ್ಗೀಸ್‍ ಥಾಮಸ್ ಎಂಬವರ ಮನೆಯಲ್ಲಿ ವನ್ಯ ಪ್ರಾಣಿಯ ಮಾಂಸದ ತುಂಡುಗಳನ್ನು ದಾಸ್ತಾನಿಟ್ಟಿರುವ ಕುರಿತು ಮಾಹಿತಿ ಬಂದಿದ್ದು, ಪಂಜ ವಲಯದ ಕಡಬ ಅರಣ್ಯಾಧಿಕಾರಿಗಳು ಆರೋಪಿ ಮನೆಗೆ ದಾಳಿ ನಡೆಸಿದಾಗ ಮನೆಯ ರೆಫ್ರಿಜರೇಟರ್ ಒಳಗಡೆ ಹಸಿ ಮಾಂಸ ಪತ್ತೆಯಾಗಿ ಬಳಿಕ ಆರೋಪಿ ಪರಾರಿಯಾಗಿರುವುದಾಗಿ ಆರೂಪಿಸಿ, ತದನಂತರ ಕೃತ್ಯಕ್ಕೆ ಉಪಯೋಗಿಸಿದೆ ಎನ್ನಲಾದ ಕೋವಿ, ವಾಹನವನ್ನು ಮತ್ತು ಹಸಿ ಮಾಂಸವನ್ನು ವಶಕ್ಕೆ ಪಡೆದುಕೊಂಡು, ಆರೋಪಿ ವರ್ಗಿಸ್ ಥಾಮಸ್ ವಿರುದ್ಧ ಭಾರತೀಯ ವನ್ಯಜೀವಿ ಸಂರಕ್ಷಣಾ ಕಾಯ್ದೆ 1972 ರನ್ವಯ ಮೊಕದ್ದಮೆ ದಾಖಲಿಸಿ, ಪುತ್ತೂರು ನ್ಯಾಯಾಲಯಕ್ಕೆ ಅರಣ್ಯ ಅಧಿಕಾರಿಗಳು ವರದಿಯನ್ನು ನೀಡಿದ್ದರು. ಪ್ರಕರಣದ ಆರೋಪಿ ವರ್ಗೀಸ್ ಥಾಮಸ್‍ ರವರು, ತಾನು ನಿರಪರಾಧಿ, ಈ ಪ್ರಕರಣಕ್ಕೂ…

Read More

ಮಂಗಳೂರು: ಮಂಗಳೂರಿನಲ್ಲಿ ಇಂದು ಲೋಕಾಯುಕ್ತ ಅಧಿಕಾರಿಗಳು ಸರ್ವೆ ಇಲಾಖೆಯ ಅಧಿಕಾರಿಯೊಬ್ಬರ ಮನೆ ಮತ್ತು ಕಚೇರಿಯ ಮೇಲೆ ದಿಢೀರ್ ದಾಳಿ ನಡೆಸಿದ್ದಾರೆ. ಕಳೆದ ಒಂದು ಗಂಟೆಯಿಂದ ಅಧಿಕಾರಿಗಳು ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ ಎಂದು ತಿಳಿದುಬಂದಿದೆ.ಮೂರು ಕಾರುಗಳಲ್ಲಿ ಆಗಮಿಸಿದ ಲೋಕಾಯುಕ್ತ ಅಧಿಕಾರಿಗಳ ತಂಡವು, ಮಂಗಳೂರಿನ ಬಿಜೈ 8ನೇ ಕ್ರಾಸ್‌ನಲ್ಲಿರುವ ಸರ್ವೆ ಅಧಿಕಾರಿ ಮಂಜುನಾಥ್ ಅವರ ಮನೆಗೆ ನುಗ್ಗಿ ಪರಿಶೀಲನೆ ನಡೆಸುತ್ತಿದೆ. ಮೂರು ಅಂತಸ್ತಿನ ಈ ಮನೆಯಲ್ಲಿ ಮಂಜುನಾಥ್ ಅವರ ಕುಟುಂಬ ವಾಸಿಸುತ್ತಿದೆ. ಕಳೆದ 23 ವರ್ಷಗಳಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿಯೇ ಕರ್ತವ್ಯ ನಿರ್ವಹಿಸುತ್ತಿರುವ ಮಂಜುನಾಥ್ ಅವರು ಸದ್ಯ ಸರ್ವೆ ಇಲಾಖೆಯಲ್ಲಿ ಮೇಲ್ವಿಚಾರಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ತುಮಕೂರು ಮೂಲದವರಾದ ಮಂಜುನಾಥ್ ಅವರ ಕುರಿತು ಲೋಕಾಯುಕ್ತಕ್ಕೆ ನಿರ್ದಿಷ್ಟ ದೂರುಗಳು ಬಂದಿರುವ ಹಿನ್ನೆಲೆಯಲ್ಲಿ ಈ ದಾಳಿ ನಡೆದಿದೆ ಎನ್ನಲಾಗಿದೆ. ದಾಳಿಯ ಕುರಿತು ಹೆಚ್ಚಿನ ಮಾಹಿತಿಗಳು ಇನ್ನಷ್ಟೇ ಲಭ್ಯವಾಗಬೇಕಿದೆ. ಲೋಕಾಯುಕ್ತ ಅಧಿಕಾರಿಗಳು ದಾಖಲೆಗಳ ಪರಿಶೀಲನೆಯನ್ನು ಮುಂದುವರಿಸಿದ್ದಾರೆ.

Read More

ಬಂಟ್ವಾಳ: ದ್ವಿಚಕ್ರ ವಾಹನದಲ್ಲಿ ಸಂಚರಿಸುತ್ತಿದ್ದ ವಿದ್ಯಾರ್ಥಿಯೋರ್ವನಿಗೆ ಕಾರು ಢಿಕ್ಕಿಯಾಗಿ ಗಂಭೀರವಾಗಿ ಗಾಯಗೊಂಡು ಸಾವನ್ನಪ್ಪಿದ ಘಟನೆ ಬಂಟ್ವಾಳದಲ್ಲಿ ನಡೆದಿದೆ‌. ಇಪ್ಪತ್ತೆರಡು ವರ್ಷದ ಮಂಚಿ ಕುಕ್ಕಾಜೆ ನಿವಾಸಿ ಲಿಖಿತ್ ಸಾವನ್ನಪ್ಪಿದ ಮೃತ ದುರ್ದೈವಿ. ಈತ ರಜೆಯಲ್ಲಿದ್ದ ಕಾರಣ ಸ್ಟೇಜ್ ಡೆಕೋರೇಷನ್ ಕೆಲಸಕ್ಕೆ ಹೋಗಿದ್ದು ಬಿಸಿರೋಡಿನಿಂದ ಮನೆ ಕಡೆಗೆ ಸಂಚರಿಸುತ್ತಿದ್ದ ವೇಳೆ ಪಾಣೆಮಂಗಳೂರು ಎಂಬಲ್ಲಿ ಅತೀ ವೇಗವಾಗಿ ಬಂದ ಕಾರು ಢಿಕ್ಕಿಯಾಗಿ ಈ ಘಟನೆ ನಡೆದಿದೆ. ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಸ್ಪಂದಿಸದೆ ಸಾವನ್ನಪ್ಪಿದ್ದಾನೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Read More