ಮಂಗಳೂರು: ಯುವಕರಿಗೆ ಡ್ರಗ್ಸ್ ಸಾಗಾಟ ಮಾಡುತ್ತಿದ್ದ 6ಜನ ವ್ಯಾಪಾರಿಗಳಿಗೆ ವ್ಯವಸ್ಥಿತವಾಗಿ ಬೆಂಗಳೂರು ಸರಹದ್ದಿನಿಂದ ಡ್ರಗ್ಸ್ ನೀಡುತ್ತಿದ್ದ ಉಗಾಂಢ ಮೂಲದ ಮಹಿಳೆಯನ್ನು4ಕೆಜಿ ಎಂಡಿಎಂನೊಂದಿಗೆ ಜಿಗ್ನಿ ಸರಹದ್ದಿನಲ್ಲಿ ಸಿಸಿಬಿ ಪೋಲಿಸರು ಬಂಧಿಸಿದ್ದಾರೆ. ಇದರೊಂದಿಗೆ ಮಂಗಳೂರು ಸರಹದ್ದಿನಲ್ಲಿ ಡ್ರಗ್ಸ್ ಸಾಗಾಟ ಮಾಡುತ್ತಿದ್ದ ಸಪ್ಲೆಯರ್,ಗೆ ಇದ್ದ ಒಂದು ಮೂಲವನ್ನು ಬಂಧಿಸಿದ ಹಾಗೆ ಆಗಿದೆ. ಈಗಾಗಲೇ ಡ್ರಗ್ಸ್ ಸಾಗಾಟ ಮಾಡುತ್ತಿದ್ದ 6ಜನ ವ್ಯಾಪಾರಿಗಳನ್ನು ಬಂಧಿಸಿ ಅವರು JC(ನ್ಯಾಯಾಂಗ ಬಂಧನ) ಯಲ್ಲಿದ್ದಾರೆ. NCB ಲೆಕ್ಕಾಚಾರದ ಪ್ರಕಾರ ಸುಮಾರು 4ಕೋಟಿ ಬೆಲೆಬಾಳುವಷ್ಟು 4ಕೆಜಿ ಎಂಡಿಎಂನೊಂದಿಗೆ ಇವರನ್ನು ಬಂಧಿಸಿ ನ್ಯಾಯಾಂಗ ಬಂದನಕ್ಕೆ ಒಳಪಡಿಸಲಾಗಿದೆ. ಮುಂದಿನ ವಿಚಾರಣೆಗಾಗಿ ಪೋಲಿಸರು ತನಿಖೆ ನಡೆಸಲಿದ್ದಾರೆ.
Author: main-admin
ಮಂಗಳೂರು: ಜಾರ್ಖಂಡ್ ಮೂಲದ ವಲಸೆ ಕಾರ್ಮಿಕನನ್ನು ಬಾಂಗ್ಲಾದೇಶಿ ಪ್ರಜೆ ಎಂದು ಆರೋಪಿಸಿ, ನಾಲ್ವರು ವ್ಯಕ್ತಿಗಳು ದೈಹಿಕ ಹಾಗೂ ಮಾನಸಿಕ ಹಿಂಸೆ ನೀಡಿ ಹಲ್ಲೆ ನಡೆಸಿದ ಘಟನೆ ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿರುವ ಬಗ್ಗೆ ವರದಿಯಾಗಿದೆ. ಆರೋಪಿಗಳನ್ನು ಕೂಳೂರು ನಿವಾಸಿಗಳಾದ ಸಾಗರ್, ಧನುಷ್, ಲಾಲು ಯಾನೆ ರತೀಶ್, ಮೋಹನ್ ಎಂದು ಗುರುತಿಸಲಾಗಿದೆ. ಜಾರ್ಖಂಡ್ ಮೂಲದ ದಿಲ್‌ಜಾನ್ ಅನ್ಸಾರಿ ಕಳೆದ 10–15 ವರ್ಷಗಳಿಂದ ವಲಸೆ ಕಾರ್ಮಿಕನಾಗಿ ಜೀವನ ನಡೆಸುತ್ತಿದ್ದು, ಸ್ಥಳೀಯರಾದ ಈ ನಾಲ್ವರು ಆರೋಪಿಗಳು ಸತತವಾಗಿ “ನೀನು ಬಾಂಗ್ಲಾದೇಶದ ಪ್ರಜೆ” ಎಂದು ಆರೋಪಿಸಿ ಹಲ್ಲೆ ನಡೆಸುತ್ತಿದ್ದರು. ತಾನು ಜಾರ್ಖಂಡ್ ಮೂಲದವನೆಂದು ತಿಳಿಸಿದರೂ ಆರೋಪಿಗಳು ಕೇಳದೆ, ದಾಖಲೆಗಳನ್ನು ಒದಗಿಸುವಂತೆ ಒತ್ತಡ ಹೇರುತ್ತಾ ದೌರ್ಜನ್ಯ ಎಸಗಿದ್ದಾರೆ ಎಂದು ದೂರಲಾಗಿದೆ. ಹಲ್ಲೆ ಮತ್ತು ಮಾನಸಿಕ ಹಿಂಸೆಗೆ ಒಳಗಾದ ದಿಲ್‌ಜಾನ್ ಅನ್ಸಾರಿ ದುಷ್ಕರ್ಮಿಗಳ ಭಯದಿಂದ ಪೊಲೀಸರಿಗೆ ದೂರು ನೀಡಲು ಹಿಂಜರಿದಿದ್ದರು. ಈ ಕುರಿತು ಮಾಹಿತಿ ಪಡೆದ ಪೊಲೀಸರು ತಕ್ಷಣ ಸ್ಥಳಕ್ಕೆ ಧಾವಿಸಿ ವಲಸೆ ಕಾರ್ಮಿಕನನ್ನು ರಕ್ಷಿಸಿದ್ದಾರೆ ಎಂದು ಪೊಲೀಸ್…
ಬೆಂಗಳೂರು: ಎಸ್‌ಎಸ್‌ಎಲ್‌ಸಿ ಪೂರ್ವಸಿದ್ಧತಾ ಪರೀಕ್ಷೆ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿಕ್ಷಕರು, ವಿದ್ಯಾರ್ಥಿಗಳನ್ನು ಉತ್ತರ ವಿಭಾಗದ ಸೈಬರ್ ಕ್ರೈಂ ಪೊಲೀಸರು ಬಂಧಿಸಿದ್ದಾರೆ. ಜನವರಿ 9ರಂದು ಹಿಂದಿ ಪರೀಕ್ಷೆ ಇತ್ತು. ಆದರೆ ಜನವರಿ 8ರಂದು ನಿರಂಜನ್ ಶೆಟ್ಟಿ ಹೆಸರಿನ ಯೂಟ್ಯೂಬ್ ಚಾನೆಲ್‌ನಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿತ್ತು. ಈ ಸಂಬಂಧ ಪದವಿ ಪೂರ್ವ ಇಲಾಖೆಯ ಜಂಟಿ ನಿರ್ದೇಶಕ ರಾಜು ನೀಡಿದ ದೂರಿನ ಹಿನ್ನೆಲೆಯಲ್ಲಿ ಉತ್ತರ ವಿಭಾಗದ ಸೈಬರ್ ಸೆನ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿತ್ತು. ತನಿಖೆಗೆ ಇಳಿದ ಪೊಲೀಸರು ಹೆಡ್‌ಮಾಸ್ಟರ್‌ಗಳು, ಶಿಕ್ಷಕರು, ಇಬ್ಬರು ವಿದ್ಯಾರ್ಥಿಗಳು ಸೇರಿ 8 ಮಂದಿಯನ್ನು ಬಂಧಿಸಿದ್ದಾರೆ. ತುಮಕೂರು, ರಾಮನಗರ, ಕಲಬುರಗಿ ಜಿಲ್ಲೆಯ ಹೆಡ್ ಮಾಸ್ಟರ್ ಹಾಗೂ ಶಿಕ್ಷಕರ ಬಂಧನವಾಗಿದೆ. ಈಗ ಪೊಲೀಸರು ಪ್ರಶ್ನೆ ಪತ್ರಿಕೆ ವೈರಲ್ ಮಾಡಿದವರ ವಾಟ್ಸಪ್, ಇನ್‌ಸ್ಟಾಗ್ರಾಂ, ಟೆಲಿಗ್ರಾಂ ಖಾತೆಯ ಜೊತೆ ಮೊಬೈಲ್ ಪರಿಶೀಲನೆ ಮಾಡುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಈ ಪ್ರಕರಣದಲ್ಲಿ ಮತ್ತಷ್ಟು ಮಂದಿ ಬಂಧನವಾಗುವ ಸಾಧ್ಯತೆಯಿದೆ. ತುಮಕೂರಿನ ಮುಖ್ಯೋಪಾಧ್ಯಾಯ ಗಿರೀಶ್ ವಿ.ಡಿ, ರಾಮನಗರದ ಸಹ ಶಿಕ್ಷಕ…
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ದಕ್ಷಿಣ ಠಾಣಾ ಸಹಾಯಕ ಪೊಲೀಸ್ ಉಪ ನಿರೀಕ್ಷಕ ಹರಿಶ್ಚಂದ್ರ ಅವರು ನಿಧನರಾಗಿದ್ದಾರೆ. ಶ್ರೀ ಮುನೀಶ್ವರ ಮಹಾ ಗಣಪತಿ ದೇವಸ್ಥಾನದ ಸೇವಾ ಟ್ರಸ್ಟ್ ನ ಉಪಾಧ್ಯಕ್ಷರಾಗಿದ್ದ ಹರಿಶ್ಚಂದ್ರ ಬಿ ಅವರ ನಿಧನಕ್ಕೆ ದೇವಸ್ಥಾನದ ಆಡಳಿತ ಮಂಡಳಿ ಸಂತಾಪ ಸೂಚಿಸಿದೆ.
ಬಂಟ್ವಾಳ: ಟ್ರೇಡಿಂಗ್ ಮಾರ್ಕೆಟ್ ನಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ರಾಯಿ ಗ್ರಾಮದ ಕೊಯಿಲ ನಿವಾಸಿ ಶ್ವಾನ್ ಫ್ರಾನ್ಸಿಸ್ ಸಿಲ್ವೇರಾ (29) ಕಾಣೆಯಾದ ವ್ಯಕ್ತಿ. ಶ್ವಾನ್ ಫ್ರಾನ್ಸಿಸ್ ಸಿಕ್ಕೇರಾ 5 ವರ್ಷಗಳಿಂದ ಟ್ರೇಡಿಂಗ್ ಮಾರ್ಕೆಟಿಂಗ್ ನಲ್ಲಿ ಕೆಲಸ ಮಾಡುತ್ತಿದ್ದು, ಆಗಾಗ ನಷ್ಟ ಆಗುತ್ತಿದ್ದ ಬಗ್ಗೆ ಮನೆಯವರಲ್ಲಿ ತಿಳಿಸುತ್ತಿದ್ದ. ಈ ನಡುವೆ ಜ.7 ರಂದು ಬಿ.ಸಿ ರೋಡಿಗೆ ಹೋಗಿ ಬರುವುದಾಗಿ ಹೋದ ವ್ಯಕ್ತಿ ಮನೆಗೆ ಬರದೆ ನಾಪತ್ತೆಯಾಗಿದ್ದಾನೆ. ಮೊಬೈಲ್ ಕೂಡಾ ಸ್ವಿಚ್ ಆಫ್ ಆಗಿದೆ. ಮಾರ್ಕೆಟಿಂಗ್ ವ್ಯವಹಾರದಲ್ಲಿ ನಷ್ಟದ ಕಾರಣವೋ ಅಥವಾ ಬೇರೆ ಕಾರಣಗಳಿಗಾಗಿ ಈತ ನಾಪತ್ತೆಯಾಗಿರಬಹುದಾ ಎಂಬ ಶಂಕೆ ವ್ಯಕ್ತವಾಗಿದೆ. ಕಾಣೆಯಾಗಿರುವ ಮಗನನ್ನು ಪತ್ತೆ ಮಾಡುವಂತೆ ಈತನ ತಾಯಿ ಪ್ರೇವಿಯ ಸಿರಾ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಗೆ ದೂರನ್ನು ನೀಡಿದ್ದು, ಪ್ರಕರಣ ದಾಖಲಾಗಿದೆ.
ಕಾರ್ಕಳ ಉಮ್ಮಿಕಲ್ ಬೆಟ್ಟದಲ್ಲಿರುವ ಪರಶುರಾಮ ಥೀಮ್ ಪಾರ್ಕ್ ಕಟ್ಟಡದಲ್ಲಿ ತಾಮ್ರದ ಹೊದಿಕೆ ಕಳವು ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಕಾರ್ಕಳ ನಗರ ಪೊಲೀಸರು ಬಂಧಿಸಿದ್ದಾರೆ. ಕಳವಾರು ನಿವಾಸಿ ಆರೀಫ್ @ ಮುನ್ನ (37) ಹಾಗೂ ಕಾವೂರು ನಿವಾಸಿ ಅಬ್ದುಲ್ ಹಮೀದ್ (32) ಎಂದು ಗುರುತಿಸಲಾಗಿದೆ. ಬಂಧಿತರಿಂದ ಸುಮಾರು 2.18 ಲಕ್ಷ ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಜ. 3ರಂದು ಪರಶುರಾಮ ಥೀಮ್ ಪಾರ್ಕ್ ಕಟ್ಟಡದ ಮುಖ್ಯ ಬಾಗಿಲನ್ನು ಸಾಧನದ ಸಹಾಯದಿಂದ ಬಲವಂತವಾಗಿ ತೆರೆದು ಒಳಪ್ರವೇಶಿಸಿದ ದುಷ್ಕರ್ಮಿಗಳು, ಕಟ್ಟಡದ ಮೇಲ್ಛಾವಣಿಗೆ ಅಳವಡಿಸಲಾಗಿದ್ದ ತಾಮ್ರದ ಹೊದಿಕೆಯನ್ನು ಕಳವು ಮಾಡಿಕೊಂಡು ಪರಾರಿಯಾಗಿದ್ದರು. ಈ ಕುರಿತು ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಬಿಎನ್‌ಎಸ್ 2023ರ ಕಲಂ 331(3), 331(4) ಹಾಗೂ 305ರಡಿ ಪ್ರಕರಣ ದಾಖಲಾಗಿತ್ತು. ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಹರೀರಾಂ ಶಂಕರ ಅವರ ನಿರ್ದೇಶನದಂತೆ ಮೂರು ವಿಶೇಷ ತಂಡಗಳನ್ನು ರಚಿಸಲಾಗಿತ್ತು. ಈ ತಂಡಗಳು ಉಡುಪಿ, ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಮಂಗಳೂರು ನಗರ ವ್ಯಾಪ್ತಿಯಲ್ಲಿ ತನಿಖೆ…
ಕಡಬ: ಸಕಲೇಶಪುರದಿಂದ ಅಕ್ರಮವಾಗಿ ಮರದ ದಿಮ್ಮಿಗಳನ್ನು ಮಂಗಳೂರಿಗೆ ಸಾಗಾಟ ಮಾಡುತ್ತಿದ್ದ ವೇಳೆ ಅರಣ್ಯ ಅಧಿಕಾರಿಗಳು ದಾಳಿ ನಡೆಸಿ 7-8 ಲಕ್ಷ ಮೌಲ್ಯದ ಸೊತ್ತು ಸೇರಿದಂತೆ ವಾಹವನ್ನು ವಶಪಡಿಸಿಕೊಂಡ ಘಟನೆ ಕಡಬ ತಾಲೂಕಿನ ಕೌಕ್ರಾಡಿ ಗ್ರಾಮದ ಮಣ್ಣಗುಂಡಿ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ನಡೆದಿದೆ. ಕಾರ್ಯಾಚರಣೆಯಲ್ಲಿ ಉಪ ವಲಯ ಅರಣ್ಯ ಅಧಿಕಾರಿ ವಿನಯ್ ಕುಮಾರ್, ಪ್ರವೀಣ್ ಪಿ, ಗಸ್ತು ಅರಣ್ಯ ಪಾಲಕರಾದ ವಿನಯ ಚಂದ್ರ, ಶಿವಾನಂದ ಕುದುರಿ ಇತರೆ ಸಿಬ್ಬಂದಿ ಪಾಲ್ಗೊಂಡಿದ್ದರು. ಈ ಬಗ್ಗೆ ಪ್ರಕರಣ ದಾಖಲಾಗಿದೆ.
ಬೆಂಗಳೂರು : ದ್ವೇಷಭಾಷಣ ಮತ್ತು ದ್ವೇಷ ಅಪರಾಧಗಳು (ತಡೆಗಟ್ಟುವಿಕೆ) ಮಸೂದೆಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೊಟ್ ತಡೆ ನೀಡಿದ್ದಾರೆ. ಪ್ರತಿಪಕ್ಷಗಳ ವಿರೋಧದ ನಡುವೆಯೇ ಸರ್ಕಾರ ಕರ್ನಾಟಕ ದ್ವೇಷಭಾಷಣ ಮತ್ತು ದ್ವೇಷ ಅಪರಾಧಗಳು (ತಡೆಗಟ್ಟುವಿಕೆ) ಮಸೂದೆಯನ್ನು ಚಳಿಗಾಲದ ಅಧಿವೇಶನದಲ್ಲಿ ಅಂಗೀಕರಿಸಿ ಲೋಕಭವನಕ್ಕೆ ಕಳುಹಿಸಿತ್ತು. ಬಳಿಕ ಬಿಜೆಪಿ, ಜೆಡಿಎಸ್ ಮುಖಂಡರು, ಸಹಿ ಮಾಡದಂತೆ ರಾಜ್ಯಪಾಲರಿಗೆ ಮನವಿ ಪತ್ರ ಸಲ್ಲಿಸಿದ್ದರು. ಆದ್ದರಿಂದ ರಾಜ್ಯಪಾಲರು ಕೆಲ ಆಕ್ಷೇಪಗಳ ಬಗ್ಗೆ ಸ್ಪಷ್ಟನೆ ನೀಡುವಂತೆ ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಿದ್ದಾರೆ. ಬೆಳಗಾವಿಯ ವಿಧಾನ ಮಂಡಲದ ಚಳಿಗಾಲದ ಅಧಿವೇಶನದಲ್ಲಿ ದ್ವೇಷ ಭಾಷಣ ತಡೆ ಮಸೂದೆ ಸೇರಿದಂತೆ ಹಲವು ಮಹತ್ವದ ಮಸೂದೆಗಳಿಗೆ ವಿಪಕ್ಷಗಳ ತೀವ್ರ ವಿರೋಧದ ನಡುವೆಯೂ ಅಂಕಿತ ಹಾಕಲಾಗಿತ್ತು. ಈ ಮಸೂದೆಗಳನ್ನು ರಾಜ್ಯಪಾಲರ ಒಪ್ಪಿಗೆಗೆ ಕಳುಹಿಸಲಾಗಿತ್ತು. ಆದರೇ ಇನ್ನೂ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅಂಕಿತ ಹಾಕಿಲ್ಲ. ರಾಜ್ಯಪಾಲರ ಪರಿಶೀಲನೆಯಲ್ಲೇ ದ್ವೇಷ ಭಾಷಣ ತಡೆ ಮಸೂದೆ ಇದೆ. ಇದಲ್ಲದೇ ಎಸ್ಸಿ ಒಳಮೀಸಲಾತಿ ಮಸೂದೆಯನ್ನು ರಾಜ್ಯಪಾಲರು ವಾಪಾಸ್ ಕಳುಹಿಸಿದ್ದಾರೆ. ಮಸೂದೆ ಕುರಿತು ಹೆಚ್ಚಿನ…
ಮಂಗಳೂರು: ತಪಸ್ಯ ಫೌಂಡೇಶನ್ ವತಿಯಿಂದ ಕಳೆದ 4 ವರ್ಷಗಳಿಂದ ಬೀಚ್ ಫೆಸ್ಟಿವಲ್ ಉತ್ಸವ ನಡೆಯುತ್ತಿದ್ದು, ಕ್ಯಾನ್ಸರ್ ರೋಗಿಗಳ ಚಿಕಿತ್ಸೆಗಾಗಿ ನೆರವು ನೀಡುತ್ತಿರುವ ತಪಸ್ಯ ಫೌಂಡೇಶನ್ ಪ್ರತಿ ವರ್ಷವೂ ಬೀಚ್ ಫೆಸ್ಟಿವಲ್ ಕಾರ್ಯಕ್ರಮ ಆಯೋಜಿಸುತ್ತಿದೆ. ಕಳೆದ 3 ವರ್ಷಗಳಿಂದ ಅಖಿಲ ಭಾರತೀಯ ಬೀಚ್ ರೆಸ್ಲಿಂಗ್ ಕಮಿಟಿಯ ಅಧ್ಯಕ್ಷರು ಹಾಗೂ ಕರ್ನಾಟಕ ರೆಸ್ಲಿಂಗ್ ಅಸೋಸಿಯೇಷನ್ ಅಧ್ಯಕ್ಷರಾದ ಬಿ. ಗುಣರಂಜನ್ ಶೆಟ್ಟಿಯವರ ನೇತೃತ್ವದಲ್ಲಿ ಬೀಚ್ ಕುಸ್ತಿ ಪಂದ್ಯಾಟವನ್ನು ನಡೆಸುತ್ತಾ ಬಂದಿರುತ್ತಾರೆ. ಈ ವರ್ಷದ ಕರ್ನಾಟಕ ಸ್ಟೇಟ್ ಲೆವೆಲ್ ಬೀಚ್ ರೆಸ್ಲಿಂಗ್ ಚಾಂಪಿಯನ್ ಶಿಪ್ -2026 ಮಂಗಳೂರಿನ ತಣ್ಣೀರು ಬಾವಿ ಬೀಚ್ ದಡದಲ್ಲಿ ಉದ್ಘಾಟನೆಗೊಂಡಿತು. ಉದ್ಘಾಟನಾ ಸಮಾರಂಭದಲ್ಲಿ ಶರವು ಶ್ರೀ ಮಹಾಗಣಪತಿ ದೇವಸ್ಥಾನದ ಟ್ರಸ್ಟಿ ರಾಘವೇಂದ್ರ ಶಾಸ್ತ್ರಿ, ತಪಸ್ಯ ಫೌಂಡೇಷನ್ ಮೆನೇಜಿಂಗ್ ಟ್ರಸ್ಟಿ ಸಬೀತಾ ಆರ್ ಶೆಟ್ಟಿ, ಕರ್ನಾಟಕ ಕುಸ್ತಿ ಸಂಘದ ಉಪಾಧ್ಯಕ್ಷರಾದ ಪ್ರಸಾದ್. ಕೆ. ಶೆಟ್ಟಿ, ಖಜಾಂಚಿ ಶ್ರೀನಿವಾಸ್ ಅಂಗರಕೋಡಿ, ಕರ್ನಾಟಕ ಬೀಚ್ ರೆಸ್ಲಿಂಗ್ ಕಮಿಟಿ ವೈಸ್ ಛೇರ್ಮನ್ ನಿತ್ಯಾನಂದ ಶೆಟ್ಟಿ, ಕನ್ವೆಂನರ್ ಪ್ರಸಾದ್ ಶೆಟ್ಟಿ,…
ಕರ್ನಾಟಕದಲ್ಲಿ ಅಪ್ರಾಪ್ತ ಹೆಣ್ಣು ಮಕ್ಕಳು, ಮಹಿಳೆಯರ ಮೇಲಿನ ದೌರ್ಜನ್ಯದಂಥ ಪ್ರಕರಣಗಳನ್ನು ತಡೆಯಲು ರಾಜ್ಯದ ಎಲ್ಲ 31 ಜಿಲ್ಲೆಗಳು, ಐದು ಪೊಲೀಸ್ ಆಯುಕ್ತಾಲಯಗಳಲ್ಲಿ ‘ಅಕ್ಕ ಪಡೆ’ ಯೋಜನೆಯನ್ನು ಒಳಾಡಳಿತ ಇಲಾಖೆ ಸಹಯೋಗದೊಂದಿಗೆ ಅನುಷ್ಠಾನಗೊಳಿಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಗುರುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಕಾನೂನು ಮತ್ತು ಸಂಸದೀಯ ಸಚಿವ ಎಚ್.ಕೆ.ಪಾಟೀಲ್, ಬಾಲ್ಯವಿವಾಹ ಪ್ರಕರಣಗಳ ತಡೆ, ಅಪ್ರಾಪ್ತ ಹೆಣ್ಣು ಮಕ್ಕಳು, ಮಹಿಳೆಯರ ಮೇಲಿನ ದೌರ್ಜನ್ಯದಂತಹ ಪ್ರಕರಣಗಳನ್ನು ತಡೆದು ರಕ್ಷಣೆ ನೀಡುವ ದೃಷ್ಟಿಯಿಂದ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಪ್ರಾಯೋಗಿಕವಾಗಿ ‘ಅಕ್ಕ ಪಡೆ’ ರಚಿಸಿ ಕಾರ್ಯನಿರ್ವಹಿಸಲಾಗಿತ್ತು. ಇದು ಉದ್ದೇಶಿತ ಕಾರ್ಯಗಳಲ್ಲಿ ಯಶಸ್ವಿಯಾಗಿರುವುದರಿಂದ ರಾಜ್ಯಾದ್ಯಂತ ಅಕ್ಕ ಪಡೆಯನ್ನು ವಿಸ್ತರಿಸಲಾಗುತ್ತಿದೆ ಎಂದು ತಿಳಿಸಿದರು.










