Author: main-admin

ಮಂಗಳೂರು: ಬಜ್ಪೆ ಬಳಿ ನಡೆದ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಮತ್ತೆ ಮೂವರು ಆರೋಪಿಗಳನ್ನು ಬಜ್ಪೆ ಪೊಲೀಸರು ಬಂಧಿಸಿದ್ದಾರೆ. ಕಳವಾರು ನಿವಾಸಿ ಅಜರುದ್ದೀನ್ ಅಲಿಯಾಸ್​ ಅಜರ್ ಅಲಿಯಾಸ್​ ಅಜ್ಜು(29), ಬಜಪೆ ನಿವಾಸಿ ಅಬ್ದುಲ್ ಖಾದರ್ ಅಲಿಯಾಸ್​ ನೌಫಲ್(24), ವಾಮಂಜೂರು ನಿವಾಸಿ ನೌಷದ್ ಅಲಿಯಾಸ್​ ವಾಮಂಜೂರು ನೌಷದ್ ಅಲಿಯಾಸ್​ ಚೊಟ್ಟೆ ನೌಷದ್(39) ಬಂಧಿತರು. ಅಜರುದ್ದೀನ್ ವಿರುದ್ಧ ಈ ಹಿಂದೆ ಪಣಂಬೂರು, ಸುರತ್ಕಲ್, ಮುಲ್ಕಿ ಪೊಲೀಸ್ ರಾಣೆಗಳಲ್ಲಿ ಮೂರು ಕಳವು ಪ್ರಕರಣ ದಾಖಲಾಗಿದ್ದವು. ಈತ ಕೊಲೆಯಾದ ಸುಹಾಸ್ ಶೆಟ್ಟಿಯ ಚಲನವಲನದ ಬಗ್ಗೆ ಮಾಹಿತಿ ನೀಡಿ ಕೊಲೆಗೆ ಸಹಕರಿಸಿದ್ದಾನೆ. ಆರೋಪಿಗಳು ಕೊಲೆ ಮಾಡಿದ ನಂತರ ಕಾರಿನಲ್ಲಿ ಪರಾರಿಯಾಗಲು ಆರೋಪಿ ಅಬ್ದುಲ್ ಖಾದರ್ ಸಹಕರಿಸಿದ್ದನು. ಇನ್ನೋರ್ವ ಆರೋಪಿ ನೌಷದ್ ಉಳಿದ ಆರೋಪಿಗಳ ಜೊತೆ ಸೇರಿ ಕೊಲೆಗೆ ಸಂಚು ರೂಪಿಸಿದ್ದನು ಎಂದು ಪೊಲೀಸರ ತನಿಖೆಯಲ್ಲಿ ತಿಳಿದುಬಂದಿದೆ. ಆರೋಪಿ ನೌಷದ್ ವಿರುದ್ಧ ಈ ಹಿಂದೆ ಸುರತ್ಕಲ್, ಬಜ್ಪೆ, ಮೂಡಬಿದ್ರಿ, ಮಂಗಳೂರು ಉತ್ತರ, ಬಂಟ್ವಾಳ ಗ್ರಾಮಾಂತರ ಪೊಲೀಸ್…

Read More

ಮಂಗಳೂರು: “ಮೇ 16ರಂದು ಜಿಲ್ಲೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭೇಟಿ ನೀಡಲಿದ್ದು ಈ ವೇಳೆ ದೇಶದಲ್ಲೇ ಅತ್ಯಂತ ದೊಡ್ಡದಾದ ಹಾಗೂ ವಿವಿಧ ಇಲಾಖೆಗಳ ಕಚೇರಿಗಳನ್ನು ಒಂದೇ ಸೂರಿನಡಿ ಒಳಗೊಂಡಿರುವ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿ ಲೋಕಾರ್ಪಣೆಗೊಳ್ಳಲಿದೆ” ಎಂದು ವಿಧಾನ ಪರಿಷತ್ ಶಾಸಕ, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಮಂಜುನಾಥ ಭಂಡಾರಿ ಅವರು ಪತ್ರಿಕಾಗೋಷ್ಟಿಯಲ್ಲಿ ಮಾಹಿತಿ ನೀಡಿದರು. ಸಿದ್ದರಾಮಯ್ಯ ಅವರು ಪಾಲ್ಗೊಳ್ಳುವ ಕಾರ್ಯಕ್ರಮವನ್ನು ಅವಿಸ್ಮರಣೀಯಗೊಳಿಸಬೇಕು ಎಂಬ ನಿಟ್ಟಿನಲ್ಲಿ ಅಂದು 8000 ಮಂದಿ ಫಲಾನುಭವಿಗಳಿಗೆ ಮನೆಯ ಆರ್ ಟಿಸಿ ವಿತರಣೆ, ಅಲ್ಪಸಂಖ್ಯಾತ ನಿಗಮ, ಅಂಬೇಡ್ಕರ್ ನಿಗಮ ಸಹಿತ ಮೂರು ನಿಗಮಗಳ ಫಲಾನುಭವಿಗಳಿಗೆ ವಿವಿಧ ಯೋಜನೆಗಳ ಸವಲತ್ತುಗಳ ವಿತರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ“ ಎಂದರು. ”ಅದೇ ದಿನ 30 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಕಬಡ್ಡಿ ಮತ್ತು ಬ್ಯಾಡ್ಮಿಂಟನ್ ಕ್ರೀಡಾಂಗಣ ಉದ್ಘಾಟನೆಯನ್ನು ಮುಖ್ಯಮಂತ್ರಿಗಳು ನೆರವೇರಿಸಲಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿಗೆ 8 ವರ್ಷಗಳ ಹಿಂದೆಯೇ ಶಿಲಾನ್ಯಾಸ ನೆರವೇರಿತ್ತಾದರೂ ಅದು ಸಂಪೂರ್ಣಗೊಂಡಿರಲಿಲ್ಲ. ನಾನು, ಜಿಲ್ಲಾ ಉಸ್ತುವಾರಿ ಸಚಿವರು, ವಿಧಾನಸಭಾ ಅಧ್ಯಕ್ಷರು ಸೇರಿ…

Read More

ಸಂವಿಧಾನದ ಹತ್ತನೇ ಅನುಸೂಚಿ ಅಡಿಯಲ್ಲಿ ಸಭಾಧ್ಯಕ್ಷರ ಅಧಿಕಾರಗಳನ್ನು ಮತ್ತು ನಿಯಮಗಳನ್ನು ಪರಿಶೀಲಿಸುವ ರಾಷ್ಟ್ರೀಯ ಸಮಿತಿಗೆ ಕರ್ನಾಟಕ ವಿಧಾನಸಭಾಧ್ಯಕ್ಷ ಹಾಗೂ ಮಂಗಳೂರು ಶಾಸಕರಾದ ಯು.ಟಿ.ಖಾದರ್ ಅವರನ್ನು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರು ನೇಮಕಗೊಳಿಸಿ ಆದೇಶ ಹೊರಡಿಸಿದ್ದಾರೆ. ವಿಶೇಷ ಅಂದರೆ ಈ ರಾಷ್ಟ್ರೀಯ ಸಮಿತಿಯಲ್ಲಿ ವಿವಿಧ ರಾಜ್ಯಗಳ ಕೇವಲ 4 ಮಂದಿ ಮಾತ್ರ ಸ್ಪೀಕರ್ ಗಳಿದ್ದು, ಕರ್ನಾಟಕ ಮತ್ತು ಅದರಲ್ಲೂ ಮಂಗಳೂರು (ಉಳ್ಳಾಲ) ಕ್ಷೇತ್ರದ ಜನತೆಗೆ ಇದೊಂದು ಹೆಮ್ಮೆ ಮತ್ತು ಸಂತೋಷದ ಸುದ್ದಿಯಾಗಿದೆ. ಮಹಾಠಾಷ್ಟ್ರ ಸ್ಪೀಕರ್ ರಾಹುಲ್ ನಾರ್ವೇಕರ್ ಈ ಸಮಿತಿಯ ಅಧ್ಯಕ್ಷರಾಗಿದ್ದು, ಒಡಿಶಾ ಸ್ಪೀಕರ್ ಸುರಮ ಪಾದಿ, ಕರ್ನಾಟಕ ಸ್ಪೀಕರ್ ಯು.ಟಿ.ಖಾದರ್ ಫರೀದ್, ನಾಗಲ್ಯಾಂಡ್ ಸ್ಪೀಕರ್ ಷರಿಂಗೈನ್ ಲಾಂಗ್ ಕುಮೆರ್ ಸೇರಿದಂತೆ ಈ ಮೂವರು ರಾಷ್ಟ್ರೀಯ ಸಮಿತಿ ಸದಸ್ಯರಾಗಿದ್ದಾರೆ. ಕರ್ನಾಟಕ ವಿಧಾನಸಭೆಗೆ ಚುರುಕು ಮುಟ್ಟಿಸಿ ಅಮೂಲಾಗ್ರ ಬದಲಾವಣೆ ತಂದಿರುವ ಯು.ಟಿ.ಖಾದರ್ ಅವರಿಗೆ ಈ ಸ್ಥಾನ ಅರ್ಹವಾಗಿಯೇ ಸಂದಿವೆ.

Read More

ಮಂಗಳೂರು: ಭಕ್ತರು ತಮ್ಮ ಕಾಣಿಕೆಗಳನ್ನು ಡಿಜಿಟಲ್ ವಿಧಾನದ ಮೂಲಕ ಪಾವತಿಸಲು ಅನುಕೂಲ ವಾಗುವಂತೆ, ಕೆನರಾ ಬ್ಯಾಂಕಿನ ಕಾರ್ಯನಿರ್ವಾಹಕ ನಿರ್ದೇಶಕ ಎಸ್.ಕೆ. ಮಜುಂದಾರ್ ಅವರು ಮಂಗಳೂರಿನ ಮಹತೋಭಾರ ಶ್ರೀ ಮಂಗಳಾ ದೇವಿ ದೇವಸ್ಥಾನದಲ್ಲಿ ಡಿಜಿಟಲ್ ಇ-ಹುಂಡಿಯನ್ನು ಉದ್ಘಾಟಿಸಲು ಭೇಟಿ ನೀಡಿದ್ದಾರೆ. ಈ ಇ-ಹುಂಡಿಯ ಪ್ರಮುಖ ಲಕ್ಷಣವೆಂದರೆ ಭಕ್ತರು ದರ್ಶನ ನಿಧಿ, ಪೂಜಾ ನಿಧಿ, ಕಟ್ಟಡ ನಿಧಿ, ಅನ್ನ ಪ್ರಸಾದ ನಿಧಿ ಇತ್ಯಾದಿ ದೇಣಿಗೆಯ ಉದ್ದೇಶವನ್ನು ಆನ್‌ಲೈನ್‌ನಲ್ಲಿ ಆಯ್ಕೆ ಮಾಡಬಹುದು ಮತ್ತು ಅದಕ್ಕೆ ರಶೀದಿಯನ್ನು ತಕ್ಷಣವೇ ನೀಡುವ ವ್ಯವಸ್ಥೆ ಇದೆ. ಭಕ್ತರು ತಮ್ಮ ಕಾಣಿಕೆಯನ್ನು ಪಾವತಿಸುವುದು ಈಗ ತುಂಬಾ ಸುಲಭವಾಗಲಿದೆ ಎಂದು ದೇವಾಲಯದ ಟ್ರಸ್ಟಿಗಳು ಹೆಚ್ಚಿನ ಸಂಖ್ಯೆಯಲ್ಲಿ ತಿಳಿಸಿದ್ದಾರೆ. ಕೆನರಾ ಬ್ಯಾಂಕ್ ಡಿಜಿಟಲ್ ಕ್ರಮವನ್ನು ಪ್ರವರ್ತಿಸಲಿದೆ ಎಂದು ಕಾರ್ಯ ನಿರ್ವಾಹಕ ನಿರ್ದೇಶಕ ಎಸ್.ಕೆ. ಮಜುಂದಾರ್ ಹೇಳಿದರು ಮತ್ತು ಸ್ಥಾಪಕ ವಲಯಕ್ಕೆ ತಮ್ಮ ಕೃತಜ್ಞತೆಯನ್ನು ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ದೇವಾಲಯದ ಟ್ರಸ್ಟಿ ಅರುಣ್ ಜಿ, ಕೆನರಾ ಬ್ಯಾಂಕಿನ ಜನರಲ್ ಮ್ಯಾನೇಜರ್ ಮಂಜುನಾಥ್ ಬಿ ಸಿಂಗೈ, ಡಿಜಿಎಂ…

Read More

ನವದೆಹಲಿ: ಪಾಕಿಸ್ತಾನ ವಿರುದ್ಧ ಭಾರತಕ್ಕೆ ಮತ್ತೊಂದು ರಾಜತಾಂತ್ರಿಕ ಜಯ ಲಭಿಸಿದ್ದು, ಇತ್ತೀಚೆಗೆ ಅಜಾಗರೂಕತೆಯಿಂದ ಆಕಸ್ಮಿಕವಾಗಿ ಪಾಕಿಸ್ತಾನ ಗಡಿ ಪ್ರವೇಶ ಮಾಡಿದ್ದ BSF ಯೋಧ ಕೊನೆಗೂ ಬಿಡುಗಡೆಯಾಗಿದ್ದಾನೆ. ಹೌದು.. ಈ ಹಿಂದೆ ಅಂದರೆ ಏಪ್ರಿಲ್ ನಲ್ಲಿ ಭಾರತ ಪಾಕ್ ಗಡಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾಗ ಅಜಾಗರೂಕತೆಯಿಂದ ಪಾಕಿಸ್ತಾನ ಗಡಿ ಪ್ರವೇಶ ಮಾಡಿದ್ದ ಭಾರತೀಯ ಗಡಿ ಭದ್ರತಾ ಪಡೆಯ ಯೋಧ ಪೂರ್ಣಂ ಕುಮಾರ್ ಶಾನನ್ನು ಪಾಕಿಸ್ತಾನ ಸೇನೆ ಬಿಡುಗಡೆ ಮಾಡಿದೆ. ಈಗಾಗಲೇ ಯೋಧ ಪಿಕೆ ಶಾನನ್ನು ಭಾರತದ ವಶಕ್ಕೆ ನೀಡಲಾಗಿದೆ ಎಂದು ಸೇನಾ ಮೂಲಗಳು ತಿಳಿಸಿವೆ. ಪೂರ್ಣಮ್ ಕುಮಾರ್ ಶಾ ಅವರನ್ನು ಅಮೃತಸರದ ಅಟ್ಟಾರಿಯಲ್ಲಿರುವ ಜಂಟಿ ಚೆಕ್ ಪೋಸ್ಟ್ ಮೂಲಕ ಬೆಳಿಗ್ಗೆ 10.30 ರ ಸುಮಾರಿಗೆ ಹಸ್ತಾಂತರಿಸಲಾಯಿತು ಎಂದು ಬಿಎಸ್ಎಫ್ ತಿಳಿಸಿದೆ. ಏಪ್ರಿಲ್ 23, 2025 ರಿಂದ ಪಾಕಿಸ್ತಾನ ರೇಂಜರ್‌ಗಳ ವಶದಲ್ಲಿದ್ದ ಜವಾನ್ ಪಿಕೆ ಶಾ ಅವರನ್ನು ಭಾರತಕ್ಕೆ ಹಸ್ತಾಂತರಿಸಲಾಗಿದೆ ಎಂದು ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಬುಧವಾರ ತಿಳಿಸಿದೆ.

Read More

ಮಲ್ಪೆ: ಭಾರತ ಮತ್ತು ಪಾಕಿಸ್ತಾನದ ನಡುವೆ ಯುದ್ಧದ ಬಿಕ್ಕಟ್ಟು ಎದುರಾಗಿರುವ ಸಂದರ್ಭದಲ್ಲಿ ಮಂಗಳೂರಿನ ಮಲ್ಪೆ ಬಂದರಿನಲ್ಲಿ ಮಂಗಳವಾರ ಸಂಜೆ ಬಾಂಬ್‌ ಸ್ಫೋಟಗೊಂಡು ಐವರು ಗಂಭೀರ ಗಾಯಗೊಂಡ ಘಟನೆ ಸಂಭವಿಸಿದೆ. ಸಂಜೆ ಸುಮಾರು 4.30ಕ್ಕೆ ಬಂದರಿನಲ್ಲಿ ಕುಳಿತಿದ್ದ ಮೀನುಗಾರರಿಗೆ ಒಮ್ಮೆಲೆ ದೊಡ್ಡ ಸದ್ದು ಕೇಳಿಸಿತು. ಬೆಂಕಿಯ ಕೆನ್ನಾಲಿಗೆಯಿಂದ ತಪ್ಪಿಸಿಕೊಳ್ಳಲು ಗಾಬರಿಯಿಂದ ಓಡಿದರು. ತತ್‌ಕ್ಷಣ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದವರು ಬೆಂಕಿಯನ್ನು ನಂದಿಸಿದರು. ಗಾಯಗೊಂಡ ಐವರು ಮೀನುಗಾರರನ್ನು ತತ್‌ಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಇದರ ಹಿಂದಿನ ಅಸಲಿ ಎತ್ತು ಬೇರೆ ಇದೆ. ಇದು ನಿಜ ಘಟನೆ ಅಲ್ಲ. ಸಂಭಾವ್ಯ ಆತಂಕದ ಹಿನ್ನೆಲೆಯಲ್ಲಿ ನಡೆದ ಅಣಕು ಪ್ರದರ್ಶನವಷ್ಟೆ. ಮಲ್ಪೆ ಮೀನುಗಾರರ ಸಂಘ, ಕರಾವಳಿ ಕಾವಲು ಪಡೆ, ಆರೋಗ್ಯ ಇಲಾಖೆ, ಮೀನುಗಾರಿಕೆ ಇಲಾಖೆ, ಅಗ್ನಿಶಾಮಕ ದಳ, ಕಸ್ಟಮ್ಸ್‌ ವತಿಯಿಂದ ಜಂಟಿಯಾಗಿ ಮಲ್ಪೆ ಬಂದರಿನಲ್ಲಿ ಅಣಕು ಕಾರ್ಯಾಚರಣೆ ನಡೆಸಲಾಯಿತು. ಈ ಅಣಕು ಪ್ರದರ್ಶನವನ್ನು ಅಗ್ನಿಶಾಮಕ -ಪೊಲೀಸ್ ಇಲಾಖೆ ಸಾರ್ವಜನಿಕರ ಮುಂದೆ ಯಶಸ್ವಿಯಾಗಿ ತೋರಿಸಿ, ಅನಿರೀಕ್ಷಿತ ಯುದ್ಧದಂತಹ ಸಂದರ್ಭ ನಿಭಾಯಿಸಲು…

Read More

ಅಮರಾವತಿ: ವೈಎಸ್‌ಆರ್‌ಸಿಪಿ ಆಡಳಿತದ ಅವಧಿಯಲ್ಲಿ ನಡೆದ ಮದ್ಯ ಹಗರಣದಲ್ಲಿ ಲೂಟಿ ಮಾಡಿದ ಸಾವಿರಾರು ಕೋಟಿ ರೂಪಾಯಿ ಲಂಚದ ಹಣವನ್ನು ಶೆಲ್ ಕಂಪನಿಗಳಿಗೆ ವರ್ಗಾಯಿಸಿ ‘ಅಂತಿಮ ಫಲಾನುಭವಿ’ಗೆ ವರ್ಗಾಯಿಸುವಲ್ಲಿ ಸಕ್ರಿಯ ಪಾತ್ರ ವಹಿಸಿದ್ದ ಭಾರತಿ ಸಿಮೆಂಟ್ಸ್‌ನ ಪೂರ್ಣಾವಧಿ ನಿರ್ದೇಶಕ ಗೋವಿಂದಪ್ಪ ಬಾಲಾಜಿ ಅವರನ್ನು ಕೊನೆಗೂ ಬಂಧಿಸಲಾಗಿದೆ. ಈ ಪ್ರಕರಣದಲ್ಲಿ ಅವರು 33 ನೇ ಆರೋಪಿ (A33) ಆಗಿದ್ದು, ಮಾಜಿ ಮುಖ್ಯಮಂತ್ರಿ ಜಗನ್ ಅವರಿಗೆ ತುಂಬಾ ಆಪ್ತರು. ಜಗನ್ ಪರವಾಗಿ ಅವರ ಪತ್ನಿ ಭಾರತಿ ಎಲ್ಲಾ ಹಣಕಾಸಿನ ವಿಷಯಗಳನ್ನು ನಿರ್ವಹಿಸುತ್ತಾರೆ. ಒಂದು ತಿಂಗಳಿನಿಂದ ತಲೆಮರೆಸಿಕೊಂಡಿದ್ದ ಗೋವಿಂದಪ್ಪ ಬಾಲಾಜಿಗಾಗಿ ಮೂರು ರಾಜ್ಯಗಳಲ್ಲಿ ಹುಡುಕಾಟ ನಡೆಸಿದ್ದ ಎಸ್‌ಐಟಿ ತಂಡಗಳು, ಮಂಗಳವಾರ ಬೆಳಿಗ್ಗೆ 11 ಗಂಟೆ ಸುಮಾರಿಗೆ ಎರಕನಗದ್ದೆ ಕಾಲೋನಿಯಲ್ಲಿರುವ ಕ್ಷೇಮ ಕೇಂದ್ರದ ಹೊರಗೆ ಅವರನ್ನು ವಶಕ್ಕೆ ತೆಗೆದುಕೊಳ್ಳಲಾಯಿತು. ಟ್ರಾನ್ಸಿಟ್ ವಾರಂಟ್ ಮೇಲೆ ಅವರನ್ನು ಎಳಂದೂರು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಯಿತು. ಅವರನ್ನು ಬುಧವಾರ ಮಧ್ಯಾಹ್ನ ವಿಜಯವಾಡಕ್ಕೆ ಕರೆತಂದು ಇಲ್ಲಿನ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು. ಬಾಲಾಜಿ ಬಂಧನದೊಂದಿಗೆ, ಈ ಹಗರಣದ ನಿಜವಾದ…

Read More

ಹಾವೇರಿ: 50 ಸಾವಿರ ರೂ. ಲಂಚ ಪಡೆಯುತ್ತಿದ್ದ ವೇಳೆ ಪಿಡಿಓ(PDO) ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ಹಾವೇರಿ ಜಿಲ್ಲೆಯ ಸವಣೂರು ತಾಲೂಕಿನ ತೆಗ್ಗಿಹಳ್ಳಿ ಗ್ರಾಮ ಪಂಚಾಯತಿಯಲ್ಲಿ ನಡೆದಿದೆ. ಅಶೋಕ ಗೊಂದಿ ಬಂಧಿತ ತೆಗ್ಗಿಹಳ್ಳಿ ಗ್ರಾಮ ಪಂಚಾಯತಿ ಪಿಡಿಓ. ಹುಬ್ಬಳ್ಳಿ ಹೊಸ ಬಸ್ ನಿಲ್ದಾಣ ಬಳಿ ಹೊಟೇಲ್‌ನಲ್ಲಿ ಲಂಚ ಪಡೆಯುತ್ತಿದ್ದ ವೇಳೆ ಪಿಡಿಓ ಅಶೋಕ್ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಪಿಡಿಓ ಅಶೋಕ್, 1 ಲಕ್ಷ 60 ಸಾವಿರದ ಗೋದಾಮು ನಿರ್ಮಾಣ ಕಾಮಾಗಾರಿಯ ಬಿಲ್ ಮಂಜೂರು ಮಾಡಲು 80 ಸಾವಿರ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಮುಂಚಿತವಾಗಿ 50,000 ರೂ. ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಹಾವೇರಿ ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

Read More

ಮಂಗಳೂರು : ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಕರಾವಳಿಯನ್ನೇ ಬೆಚ್ಚಿಬೀಳಿಸಿದೆ. ಸುಹಾಸ್ ಶೆಟ್ಟಿ ಹತ್ಯೆಯ ಬಗ್ಗೆ ಸಾಕಷ್ಟು ವಿಚಾರಗಳು ಹಬ್ಬುತ್ತಲೇ ಇವೆ. ಇದೀಗ ಹತ್ಯೆಗೆ ಸಂಬಂಧಿಸಿದಂತೆ ಸುಳ್ಳು ಸಂದೇಶವೊಂದು ವೈರಲ್ ಆಗಿದ್ದು, ಸಂದೇಶ ರವಾನಿಸಿದ್ದ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ‘ಮಂಗಳೂರು ಮುಸ್ಲಿಂ ಯುವಸೇನೆ’ ಎಂಬ ವಾಟ್ಸ್ ಆ್ಯಪ್ ಗ್ರೂಪ್‌ನಲ್ಲಿ ಪ್ರಚೋದನಕಾರಿ ಸಂದೇಶ ರವಾನಿಸಿದ್ದ ಆರೋಪಿ ವಿಟ್ಲದ ಅನಾಸ್ ನನ್ನು ವಿಚಾರಣೆ ನಡೆಸಲಾಗಿದ್ದು ತನಿಖೆ ಮುಂದುವರೆಸಲಾಗಿದೆ ಎಂದು ಪೊಲೀಸ್ ಆಯುಕ್ತರು ತಿಳಿಸಿದ್ದಾರೆ. ಈ ಬಗ್ಗೆ ಮೂಡುಬಿದಿರೆ ರಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಮುಂದಿನ ತನಿಖೆಗಾಗಿ ಮಂಗಳೂರು ನಗರ ಸೆನ್ ಅಪರಾಧ ಪೊಲೀಸ್‌ ಠಾಣೆಗೆ ವರ್ಗಾಯಿಸಲಾಗಿದೆ ಎಂದು ಪೊಲೀಸ್ ಆಯುಕ್ತರು ಮಾಹಿತಿ ನೀಡಿದ್ದಾರೆ.

Read More

ಉಡುಪಿ: ಕುಡಿದ ಮತ್ತಿನಲ್ಲಿದ್ದ ವ್ಯಕ್ತಿಯೊಬ್ಬ ಮೇ 11 ರಂದು ತನ್ನ ಸ್ವಂತ ಮನೆಗೆ ಬೆಂಕಿ ಹಚ್ಚಿದ್ದಾನೆ. ಮದ್ಯದ ಅಮಲಿನಲ್ಲಿದ್ದ ವ್ಯಕ್ತಿ ಗಲಾಟೆ ಮಾಡಿ ಉಗ್ರ ವರ್ತನೆ ತೋರಿದ್ದರಿಂದ ಆತನ ಕುಟುಂಬ ಸದಸ್ಯರು ಭಯಭೀತರಾಗಿದ್ದರು ಎನ್ನಲಾಗಿದೆ. ಪರಿಸ್ಥಿತಿಯನ್ನು ನಿಭಾಯಿಸಲು ಸಾಧ್ಯವಾಗದ ಕುಟುಂಬ ಸದಸ್ಯರು ಸಮಾಜ ಸೇವಕ ನಿತ್ಯಾನಂದ ಒಳಕಾಡು ಅವರ ಸಹಾಯ ಕೋರಿದರು. ತಕ್ಷಣ ಸ್ಪಂದಿಸಿದ ನಿತ್ಯಾನಂದ ಒಳಕಾಡು ಸ್ಥಳಕ್ಕೆ ಧಾವಿಸಿ ಅಗ್ನಿಶಾಮಕ ದಳಕ್ಕೆ ಬೆಂಕಿಯ ಬಗ್ಗೆ ಮಾಹಿತಿ ನೀಡಿದ್ದಾರೆ.ತಕ್ಷಣ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳದವರು ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇದರಿಂದಾಗಿ ಭಾರೀ ಅಗ್ನಿ ದುರಂತವೊಂದು ತಪ್ಪಿದಂತಾಗಿದೆ.ಘಟನೆಯ ನಂತರ, ಸಮಾಜ ಸೇವಕ ನಿತ್ಯಾನಂದ ಒಳಕಾಡು ಅವರು ಕುಡಿದಿದ್ದ ವ್ಯಕ್ತಿಯನ್ನು ಸಮಾಧಾನಪಡಿಸಿ, ಹೆಚ್ಚಿನ ಚಿಕಿತ್ಸೆಗಾಗಿ ವ್ಯಸನ ಮುಕ್ತಿ ಕೇಂದ್ರಕ್ಕೆ ದಾಖಲಿಸಿದ್ದಾರೆ.

Read More