Author: main-admin

ಉಳ್ಳಾಲ: ಟೋಲ್ ಸಿಬ್ಬಂದಿಗೆ ಕಾರಿನಲ್ಲಿದ್ದ ಮೂವರ ತಂಡ ಹಲ್ಲೆ ಎಸಗಿರುವ ಘಟನೆ ರಾ.ಹೆ. 66ರ ತಲಪಾಡಿಯಲ್ಲಿ ಭಾನುವಾರ ತಡರಾತ್ರಿ ವೇಳೆ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಹಲ್ಲೆ ನಡೆಸಿದ ಉಳ್ಳಾಲದ ಓರ್ವನನ್ನು ಪೊಲೀಸರು ಬಂಧಿಸಿದ್ದು, ಇನ್ನಿಬ್ಬರು ತಲೆಮರೆಸಿಕೊಂಡಿದ್ದಾರೆ. ಹಲ್ಲೆ ನಡೆಸಿದ ಮೂವರು ಆರೋಪಿಗಳು ಮೂಲತಃ ಉಳ್ಳಾಲ ನಿವಾಸಿಗಳಾಗಿದ್ದು, ಅವರನ್ನು ಝುಲ್ಪಾನ್, ನಿಫಾನ್, ಫಯಾಝ್ ಎಂದು ಗುರುತಿಸಲಾಗಿದೆ. ಮಂಗಳೂರಿನಿಂದ ಕೇರಳ ಕಡೆಗೆ ಉತ್ತರಪ್ರದೇಶ ನೋಂದಾಯಿತ ಐ-20 ಕಾರೊಂದರಲ್ಲಿ ಐವರು ಯುವಕರು ತೆರಳುತ್ತಿದ್ದರು. ತಲಪಾಡಿ ಟೋಲ್ ಗೇಟಿನಲ್ಲಿ ಟೋಲ್ ಪಾವತಿಸದೆ ಕಾರು ಮುಂದೆ ಚಲಿಸಿದ್ದು, ಈ ವೇಳೆ ಟೋಲ್ ನಿರ್ವಹಣೆ ನಡೆಸುವ ಇಜಿಎಸ್ ಸಂಸ್ಥೆ ಉದ್ಯೋಗಿ ಕಾರಿನ ಹಿಂಭಾಗಕಕ್ಕೆ ಕೈಯಿಂದ ಬಡಿದಿದ್ದಾನೆ. ಇದರಿಂದ ಸಿಟ್ಟಿಗೆದ್ದ ಕಾರಿನಲ್ಲಿದ್ದ ಯುವಕರ ತಂಡ ಕಾರನ್ನು ಮುಂದೆ ನಿಲ್ಲಿಸಿ ಸಿಬ್ಬಂದಿ ಬಳಿಗೆ ಬಂದು ಕೈಗೆ ಸಿಕ್ಕ ವಸ್ತುಗಳಿಂದ ಹಲ್ಲೆ ನಡೆಸಿರುತ್ತಾರೆ. ಘಟನೆಯಲ್ಲಿ ಟೋಲ್ ಸಿಬ್ಬಂದಿ ಮನು, ಸುಧಾಮ, ಅಮನ್ ಅವರು ಗಾಯಗೊಂಡಿದ್ದು, ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯ ದೃಶ್ಯ ಸಿಸಿ…

Read More

ಬೆಳ್ತಂಗಡಿ: ಸಮೀಪ ಬೆಳಾಲು ಗ್ರಾಮದ ಕೂಡಿಗೆ ಎಂಬಲ್ಲಿ ಸೋಮವಾರ (ಡಿ.02) ಸಂಜೆ ನೇತ್ರಾವತಿ ನದಿಗೆ ಇಳಿದ ವ್ಯಕ್ತಿ ನೀರಿನಲ್ಲಿ ಮುಳುಗಿ ನಾಪತ್ತೆಯಾದ ಘಟನೆಗೆ ಸಂಬಂಧಿಸಿದಂತೆ‌ ಮೃತದೇಹ ಹೊರತೆಗೆಯಲಾಗಿದೆ ಎಂದು ಮಾಹಿತಿ ತಿಳಿದು ಬಂದಿದೆ. ಬೆಳಾಲು ಗ್ರಾಮದ ಸುರುಳಿ ಕುಂಡಡ್ಕ ನಿವಾಸಿ ಪ್ರಸಾದ್ (38) ಎಂಬವರು ಯಾವುದೋ ಕಾರಣಕ್ಕೆ ಸಂಜೆ‌ ಸುಮಾರು 5‌‌ರಿಂದ‌ 6 ಗಂಟೆ ಸುಮಾರಿಗೆ ನದಿಗೆ ಇಳಿದಿದ್ದು ಬಳಿಕ ಮುಳುಗಿ ನಾಪತ್ತೆಯಾಗಿದ್ದರು. ಸ್ಥಳಕ್ಕೆ ಅಗ್ನಿಶಾಮಕ ದಳ ಹಾಗೂ ಶೌರ್ಯ ವಿಪತ್ತು ನಿರ್ವಹಣೆ ತಂಡದ ಸದಸ್ಯರು ಭೇಟಿ ನೀಡಿದ್ದು, ಮುಳುಗು ತಜ್ಞ ಈಶ್ವರ್ ಮಲ್ಪೆಗೂ ಮಾಹಿತಿ‌‌‌ ನೀಡಲಾಗಿತ್ತು. ಆದರೆ ಮುಳುಗು ತಜ್ಞ ಬೆಳ್ತಂಗಡಿ‌ಯ‌ ಸಂಜಯ ನಗರದ ಇಸ್ಮಾಯಿಲ್‌ ಹಾಗೂ ಅಗ್ನಿಶಾಮಕದಳದವರು ರಾತ್ರಿ‌11‌ರ‌ ಸುಮಾರಿಗೆ ಮೃತದೇಹ ಮೇಲೆತ್ತಿದ್ದಾರೆ. ಸಂಘದ ಪ್ರಚಾರಕರಾಗಿ ಐದು ವರ್ಷ ಕಾರ್ಯ ನಿರ್ವಹಿಸಿ ಪ್ರಸ್ತುತ ಪುತ್ತೂರು ಜಿಲ್ಲಾ ಧರ್ಮಜಾಗರಣ ಜಿಲ್ಲಾ ಸಂಯೋಜಕರಾಗಿದ್ದರು.

Read More

ಹೈದರಾಬಾದ್‌ : ತೆಲಂಗಾಣ ಪೊಲೀಸ್ ಇಲಾಖೆಯ ಮಹಿಳಾ‌ ಕಾನ್‌ಸ್ಟೆಬಲ್ ಒಬ್ಬರನ್ನು ನಡುರಸ್ತೆಯಲ್ಲಿಯೇ ಆಕೆಯ ಸಹೋದರ ಬರ್ಬರವಾಗಿ ಹತ್ಯೆಗೈದಿರುವ ಘಟನೆ ಹೈದರಾಬಾದ್‌ನ ಇಬ್ರಾಹಿಂಪುರದಲ್ಲಿ ನಡೆದಿದೆ. ಇತ್ತೀಚೆಗೆ ಪ್ರೇಮ ವಿವಾಹವಾಗಿದ್ದ ಮಹಿಳಾ ಕಾನ್‌ಸ್ಟೆಬಲ್ ಹಯಾತ್‌ನಗರ ಪೊಲೀಸ್ ಠಾಣೆಯಲ್ಲಿ ಕೆಲಸ ಮಾಡುತ್ತಿದ್ದರು. ಸೋಮವಾರ ದ್ವಿಚಕ್ರ ವಾಹನದಲ್ಲಿ ಕರ್ತವ್ಯಕ್ಕೆ ತೆರಳುತ್ತಿರುವ ವೇಳೆ ಈ ಹತ್ಯೆ ನಡೆದಿದ್ದು, ಈ ಕೊಲೆಯನ್ನು ಮರ್ಯಾದಾ ಹತ್ಯೆ ಪ್ರಕರಣವೆಂದು ಶಂಕಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಕಾರಿನಲ್ಲಿ ಬಂದಿದ್ದ ಆರೋಪಿ ಹಿಂದಿನಿಂದ ಮಹಿಳೆಯ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆಸಿದ್ದಾನೆ. ಆಕೆ ಕೆಳಗೆ ಬಿದ್ದಾಗ ಚಾಕುವಿನಿಂದ ಕುತ್ತಿಗೆಗೆ ಚುಚ್ಚಿ ಕೊಲೆ ಮಾಡಿದ್ದಾನೆ. ಇದು ಮರ್ಯಾದಾ ಹತ್ಯೆಯ ಪ್ರಕರಣವೇ ಎಂಬುವುದರ ತನಿಖೆ ನಡೆಸುತ್ತಿದ್ದೇವೆ. ಮೃತ ಮಹಿಳೆ ಮತ್ತು ಸಹೋದರನ ನಡುವೆ ಜಮೀನಿನ ವಿಚಾರವಾಗಿ ಗಲಾಟೆ ನಡೆದಿರುವ ಬಗ್ಗೆಯೂ ಪರಿಶೀಲಿಸಲಾಗುತ್ತಿದೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

Read More

ಪುತ್ತೂರು: ಸಿಡಿಲು ಬಡಿದು ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಪುತ್ತೂರಿನಲ್ಲಿ ನಡೆದಿದೆ. ಕೆಯ್ಯೂರು ನಿವಾಸಿ ನಾರಾಯಣ (45) ಮೃತ ವ್ಯಕ್ತಿ. ಮನೆಯ ಮುಂಭಾಗದ ಶೀಟ್ ನಲ್ಲಿ ಬಲ್ಬ್ ಹೊತ್ತುತ್ತಿಲ್ಲ ಎಂದು ಸರಿಪಡಿಸುತ್ತಿದ್ದ ಸಂದರ್ಭ ಸಿಡಿಲು ಬಡಿದು ನೆಲಕ್ಕೆ ಕುಸಿದು ಬಿದ್ದ ನಾರಾಯಣ ಅವರನ್ನು ಕೂಡಲೇ ಆಸ್ಪತ್ರೆಗೆ ಕರೆತರಾಯಲಿತಾದರೂ ಅವರು ದಾರಿ ಮದ್ಯೆ ಮೃತಪಟ್ಟಿದ್ದರು. ಮೃತರು ಕುಟುಂಬಸ್ಥರನ್ನು ಅಗಲಿದ್ದಾರೆ.

Read More

ಮಂಗಳೂರು: ಫೆಂಗಲ್ ಚಂಡಮಾರುತದಿಂದಾಗಿ ದ.ಕ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿರುವ ಕಾರಣ ನಾಳೆ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಜಿಲ್ಲೆಯ ಎಲ್ಲ ಅಂಗನವಾಡಿ, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ, ಪ್ರೌಢಶಾಲೆ, ಪದವಿಪೂರ್ವ ಕಾಲೇಜು (12ನೇ ತರಗತಿವರೆಗೆ)ಗಳಿಗೆ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ಪ್ರಕಟನೆ ಹೊರಡಿಸಿದ್ದಾರೆ.ತಮಿಳುನಾಡು ಮತ್ತು ಪುದುಚೇರಿಯಲ್ಲಿ ಕಾಣಿಸಿಕೊಂಡಿರುವ ಫೆಂಗಲ್ ಚಂಡಮಾರುತದ ಪರಿಣಾಮ ದ.ಕ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆಯು ಪ್ರಕಟನೆಯಲ್ಲಿ ತಿಳಿಸಿದೆ.ಭಾರೀ ಮಳೆಯಾಗುವ ಮುನ್ಸೂಚನೆಯ ಹಿನ್ನೆಲೆಯಲ್ಲಿ ದ.ಕ.ಜಿಲ್ಲಾಡಳಿತವು ಹೊರಡಿಸಿದ ಪ್ರಕಟನೆಯಲ್ಲಿ ಸೋಮವಾರ ಮತ್ತು ಮಂಗಳವಾರ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಅಲ್ಲದೆ ಮೀನುಗಾರರಿಕೆಗೆ ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಸೂಚಿಸಲಾಗಿದೆ.

Read More

ಬೆಂಗಳೂರು :ಪ್ರಸಕ್ತ ಸಾಲಿನ (2024-25) ದ್ವೀತಿಯ ಪಿಯುಸಿ ಮತ್ತು ಎಸ್ಎಸ್ಎಲ್‌ಸಿ ವಾರ್ಷಿಕ ಪರೀಕ್ಷೆ-1ರ ತಾತ್ಕಾಲಿಕ ವೇಳಾಪಟ್ಟಿ ಪ್ರಕಟವಾಗಿದೆ‌. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ವೇಳಾಪಟ್ಟಿ ಪ್ರಕಟ ಮಾಡಿದೆ. ಮಾರ್ಚ್ 1 ರಿಂದ 19ರ ವರೆಗೆ ದ್ವೀತಿಯ ಪಿಯುಸಿ ಪರೀಕ್ಷೆಗಳು ನಡೆದರೆ, ಮಾರ್ಚ್ 20 ರಿಂದ ಏಪ್ರಿಲ್ 2ರ ವರೆಗೆ ಎಸ್ಎಸ್ಎಲ್‌ಸಿ ಪರೀಕ್ಷೆಗಳು ನಡೆಯಲಿದ್ದು, ಬಹುತೇಕ ತಾತ್ಕಾಲಿಕ ವೇಳಾಪಟ್ಟಿಯೇ ಅಂತಿಮವಾಗಲಿದೆ. ವೇಳಾಪಟ್ಟಿಗೆ ಆಕ್ಷೇಪಣೆ ಸಲ್ಲಿಸಲು 15 ದಿನ ಕಾಲಾವಕಾಶ ನೀಡಿಲಾಗಿದ್ದು, ಡಿ.16ರ ಒಳಗೆ ಆಕ್ಷೇಪಣೆಯಲ್ಲಿ ಬೋರ್ಡ್ ಸಲ್ಲಿಕೆ ಮಾಡಬಹುದಾಗಿದೆ. ತಾತ್ಕಾಲಿಕ ವೇಳಾಪಟ್ಟಿ : ದ್ವೀತಿಯ ಪಿಯುಸಿ ಪರೀಕ್ಷೆ- ವೇಳಾಪಟ್ಟಿ ಮಾರ್ಚ್ 1- ಕನ್ನಡ, ಅರೇಬಿಕ್.ಮಾರ್ಚ್ 3- ಗಣಿತ, ಶಿಕ್ಷಣ ಶಾಸ್ತ್ರ, ತರ್ಕಶಾಸ್ತ್ರ, ವ್ಯವಹಾರ ಅಧ್ಯಯನಮಾರ್ಚ್ 4- ತಮಿಳು, ತೆಲುಗು, ಮಲಯಾಳಂ,ಮರಾಠಿ, ಉರ್ದು,ಸಂಸ್ಕೃತ,ಫ್ರೆಂಚ್.ಮಾರ್ಚ್ 5- ರಾಜ್ಯಶಾಸ್ತ್ರ, ಸಂಖ್ಯಾಶಾಸ್ತ್ರ.ಮಾರ್ಚ್ 7- ಇತಿಹಾಸ, ಭೌತಶಾಸ್ತ್ರಮಾರ್ಚ್‌ 8- ಹಿಂದಿ.ಮಾರ್ಚ್ 10- ಐಚಿಕ ಕನ್ನಡ, ಲೆಕ್ಕಶಾಸ್ತ್ರ,ಭೂಗರ್ಭ ಶಾಸ್ತ್ರ, ಗೃಹ ವಿಜ್ಞಾನ.ಮಾರ್ಚ್ 12- ಮನಃಶಾಸ್ತ್ರ, ರಸಾಯನಶಾಸ್ತ್ರ,ಮೂಲ ಗಣಿತ.ಮಾರ್ಚ್…

Read More

ಮಂಡ್ಯ: ಸರ್ಕಾರಿ ಕೆಲಸ ಬಿಟ್ಟು ಸನ್ಯಾಸತ್ವ ಸ್ವೀಕರಿಸಲು ಮಂಡ್ಯ ಅಪರ ಜಿಲ್ಲಾಧಿಕಾರಿ ನಿರ್ಧರಿಸಿದ್ದಾರೆ. ಎಡಿಸಿಯ ಈ ನಡೆ ಜನರಲ್ಲಿ ಅಚ್ಚರಿ ಮೂಡಿಸಿದೆ. ಮಂಡ್ಯ ಅಪರ ಜಿಲ್ಲಾಧಿಕಾರಿ ಹೆಚ್.ಎಲ್.ನಾಗರಾಜು ಅವರು ಕೆಲವೇ ದಿನಗಳಲ್ಲಿ ಕೆಲಸ ಬಿಟ್ಟು ನಿವೃತ್ತಿ ಪಡೆದು ಸನ್ಯಾಸ ದೀಕ್ಷೆ ಸ್ವೀಕರಿಸಲಿದ್ದಾರೆ. ಈ ನಿಟ್ಟಿನಲ್ಲಿ ಶೀಘ್ರದಲ್ಲೇ ಕೆಲಸಕ್ಕೆ ರಾಜೀನಾಮೆ ನೀಡಲಿದ್ದಾರೆ. ಬಳಿಕ ವಿಶ್ವ ಒಕ್ಕಲಿಗರ ಸಂಸ್ಥಾನ ಮಠದಲ್ಲಿ ಸನ್ಯಾಸ ದೀಕ್ಷೆ ಸ್ವೀಕಾರ ಮಾಡಲಿದ್ದಾರೆ. ಚಂದ್ರಶೇಖರನಾಥಶ್ರೀ ಶಿಷ್ಯರಾಗಿ ಮುಂದುವರೆಯಲಿದ್ದಾರೆ. ಈ ಹಿಂದೆಯೂ ಹೆಚ್.ಎಲ್.ನಾಗರಾಜು ಸನ್ಯಾಸತ್ವ ಸ್ವೀಕರಿಸಿದ್ದರು. 2011ರಲ್ಲಿ ಆದಿಚುಂಚನಗಿರಿ ಮಠದಲ್ಲಿ ಸ್ವಾಮೀಜಿಯಾಗಿ ದೀಕ್ಷೆ ಪಡೆದಿದ್ದರು. ‘ನಿಶ್ಚಲಾನಂದನಾಥ’ ಎಂದು ಹೆಸರು ಬದಲಾವಣೆ ಮಾಡಿಕೊಂಡಿದ್ದರು. ತಹಶೀಲ್ದಾರ್ ಹುದ್ದೆ ತ್ಯಜಿಸಿ ಸನ್ಯಾಸತ್ವ ಸ್ವೀಕರಿಸಿದ್ದರು. ಆದರೆ ಹಿತೈಷಿಗಳು, ಸಾರ್ವಜನಿಕರ ಒತ್ತಾಯಕ್ಕೆ ಮಣಿದು ಸನ್ಯಾಸತ್ವ ತ್ಯಜಿಸಿ ಅಧಿಕಾರಿಯಾಗಿದ್ದರು. ಇದೀಗ ಮತ್ತೆ ಕಾವಿ ಧರಿಸಲು ನಿರ್ಧರಿಸಿರುವ ಹೆಚ್.ಎಲ್ ನಗರಾಜು, ಮತ್ತೆ ಸನ್ಯಾಸತ್ವ ಸ್ವೀಕರಿಸಲಿದ್ದಾರೆ ಎಂದು ತಿಳಿದುಬಂದಿದೆ.

Read More

ಬಂಟ್ವಾಳ : ನ್ಯಾಯಾಲಯಕ್ಕೆ ಹಾಜರಾಗದೆ ಸುಮಾರು 12 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಟ್ವಾಳ ಪೊಲೀಸರು ಬಂಧಿಸಿದ್ದಾರೆ. ಕಾವಳಪಡೂರು ಗ್ರಾಮದ ಮಧ್ವ ನಿವಾಸಿ ಮೊಹಮ್ಮದ್ ಅನ್ಸಾರ್ ಬಂಧಿತ ಆರೋಪಿ.ಆರೋಪಿಯು 2012ರಲ್ಲಿ ಕಾವಳಕಟ್ಟೆಯ ಮನೆಯೊಂದರಲ್ಲಿ ನಡೆಯುತ್ತಿದ್ದ ಜ್ಯೋತಿಷ್ಯಶಾಸ್ತ್ರದ ವಿಚಾರದಲ್ಲಿ ವಿವಾದದ ಹಿನ್ನೆಲೆ ಮನೆಗೆ ನುಗ್ಗಿ ಹಲ್ಲೆ ನಡೆಸಿದ್ದನು. ಈ ಬಗ್ಗೆ ಅನ್ಸಾರ್ ಮೇಲೆ ಪ್ರಕರಣ ದಾಖಲಾಗಿತ್ತು. ಆದರೆ ಆರೋಪಿಯು ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದನು.ಇದೀಗ ಬಂಟ್ವಾಳ ಡಿವೈಎಸ್‌ಪಿ ಎಸ್.ವಿಜಯಪ್ರಸಾದ್ ಅವರ ಮಾರ್ಗದರ್ಶನದಲ್ಲಿ ಬಂಟ್ವಾಳ ಗ್ರಾಮಾಂತರ ಠಾಣಾ ಪೊಲೀಸ್ ಇನ್‌ಸ್ಪೆಕ್ಟರ್ ಶಿವಕುಮಾರ್ ಹಾಗೂ ಪಿಎಸ್‌ಐಗಳಾದ ಹರೀಶ್ ಎಂ.ಆರ್. ಮೂರ್ತಿ, ಲೋಲಾಕ್ಷ ಅವರ ನೇತೃತ್ವದಲ್ಲಿ ಹೆಡ್‌ಕಾನ್ಸ್‌ಟೆಬಲ್‌ ಗಣೇಶ್‌ಪ್ರಸಾದ್, ಕಾನ್ಸ್‌ಟೆಬಲ್‌ಗಳಾದ ಪ್ರವೀಣ್, ಶಿದ್ದಪ್ಪ, ಶಿವಾನಂದ ಮಡ್ಡಿ, ನಾಗರಾಜ್ ಅವರು ಆರೋಪಿಯನ್ನು ಬೆಳ್ತಂಗಡಿಯಲ್ಲಿ ಬಂಧಿಸಿದ್ದಾರೆ. ಬಳಿಕ ಆತನನ್ನು ಬಂಟ್ವಾಳ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

Read More

ಹಾಸನ: ಇಂದು ಡಿವೈಎಸ್‌ಪಿಯಾಗಿ ಅಧಿಕಾರ ಸ್ವೀಕರಿಸಬೇಕಿತ್ತು. ಇಂತಹ ಹೊತ್ತಿನಲ್ಲೇ ಅಧಿಕಾರಿ ಬಾಳಲ್ಲಿ ವಿಧಿಯಾಟವಾಡಿದೆ. ಡ್ಯೂಟಿ ರಿಪೋರ್ಟ್‌ಗೆ ಬಂದ ದಿನವೇ ಪ್ರೊಬೇಷನರಿ ಐಪಿಎಸ್‌ ಅಧಿಕಾರಿ ಹರ್ಷವರ್ಧನ್, ಹಾಸನ ಬಳಿ ಭೀಕರ ರಸ್ತೆ ಅಪಘಾತದಲ್ಲಿ ದುರಂತ ಅಂತ್ಯ ಕಂಡಿದ್ದಾರೆ.‌ ಹಾಸನದ ಎಸ್‌ಪಿ ಕಚೇರಿಯಲ್ಲಿ ಅಧಿಕಾರ ಸ್ವೀಕಾರಕ್ಕೆ ಆಗಮಿಸುತ್ತಿದ್ದ ವೇಳೆ ಈ ಅಪಘಾತ ನಡೆದಿದೆ. ಮೈಸೂರಿನ ಪೊಲೀಸ್ ಅಕಾಡಮೆಯಿಂದ ಹಾಸನದ ಕಡೆ ಬರುತ್ತಿದ್ದ ವೇಳೆ ಪೊಲೀಸ್ ಜೀಪು ಅಪಘಾತಕ್ಕೀಡಾಗಿದೆ. ಐಪಿಎಸ್ ವೃತ್ತಿ ಜೀವನ ಆರಂಭಿಸಿದ ಮೊದಲ ದಿನವೇ ಹರ್ಷಬರ್ಧನ್ ದುರಂತ ಅಂತ್ಯ ಕಂಡಿದ್ದಾರೆ. ಪೊಲೀಸ್ ವಾಹನದ ಟೈಯರ್ ಸ್ಪೋಟಗೊಂಡ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ವಾಹನ ಅಪಘಾತವಾಗಿದೆ ಅನ್ನೋ ಮಾಹಿತಿ ಲಭ್ಯವಾಗಿದೆ. ಮೈಸೂರಿನ ಐಜಿಪಿ ಕಚೇರಿಗೆ ತೆರಳಿ ಅಧಿಕಾರಿ ಭೇಟಿಯಾಗಿದ್ದ ಹರ್ಷಬರ್ಧನ್ ಮಹತ್ವದ ಮಾತುಕತೆ ನಡೆಸಿದ್ದರು. ಈ ವೇಳೆ ಹರ್ಷಬರ್ಧನ್‌ಗೆ ಶುಭಕೋರಿ ಕಳುಹಿಸಲಾಗಿತ್ತು. ಮಧ್ಯ ಪ್ರದೇಶ ಮೂಲದ ಹರ್ಷಬರ್ಧನ್ ಅಧಿಕಾರ ಸ್ವೀಕಾರಕ್ಕಾಗಿ ಮೈಸೂರಿನಿಂದ ಮಾರ್ಗದ ಮೂಲಕ ಹಾಸನಕ್ಕೆ ಆಗಮಿಸಿದ್ದಾರೆ. ಹರ್ಷಬರ್ಧನ್ ಸಾವಿನ ಸುದ್ದಿಯನ್ನು ಆಸ್ಪತ್ರೆ ಮುಖ್ಯಸ್ಥ…

Read More

ಬೆಂಗಳೂರು : ಹೆಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಸಲು ನೀಡಿದ್ದ ಗಡುವನ್ನು ಸರ್ಕಾರ ಮತ್ತೆ ವಿಸ್ತರಿಸಿದ್ದು, ಡಿಸೆಂಬರ್ 31 ಕೊನೆಯ ದಿನವಾಗಿದೆ. ಈ ಮೊದಲು ಹೆಚ್‌ಎಸ್‌ಆರ್‌ಪಿ ಅಳವಡಿಕೆಗೆ ಡಿಸೆಂಬರ್ 4 ಕೊನೆ ದಿನವಾಗಿತ್ತು. ಆದರೆ ಇದೀಗ ಡಿ. 31 ರ ವರೆಗೆ ಅವಧಿ ವಿಸ್ತರಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.ಸಾರಿಗೆ ಇಲಾಖೆ ಈ ವರ್ಷದ ಕೊನೆಯ ದಿನದವರೆಗೆ ಹೆಚ್‌ಎಸ್‌ಆರ್‌ಪಿ ಅಳವಡಿಕೆ ನೀಡಿದ್ದ ಗಡುವು ವಿಸ್ತರಣೆ ಮಾಡಿದೆ. ರಾಜ್ಯದಲ್ಲಿ ಸುಮಾರು 2 ಕೋಟಿಯಷ್ಟು ವಾಹನಗಳು ಹೆಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಸಿಕೊಳ್ಳಬೇಕಿತ್ತು. ಆದರೆ ಸದ್ಯ 55 ಲಕ್ಷ ವಾಹನಗಳಿಗೆ ಮಾತ್ರ ಹೆಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಕೆಯಾಗಿದೆ. ಹೀಗಾಗಿ ಸತತ 5ನೇ ಬಾರಿಗೆ ಹೆಚ್‌ಎಸ್‌ಆರ್‌ಪಿ ಅಳವಡಿಕೆಗೆ ಸಾರಿಗೆ ಇಲಾಖೆ ಗಡುವು ವಿಸ್ತರಿಸಿದೆ.

Read More