ಮಂಗಳೂರು: ಮಂಗಳೂರು ನಗರ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯಲ್ಲಿ ಸಾರ್ವಜನಿಕ ಶಾಂತಿ ಮತ್ತು ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ದೃಷ್ಟಿಯಿಂದ ಎಲ್ಲಾ ರೀತಿಯ ಡ್ರೋನ್‌ಗಳ ಬಳಕೆ, ಹಾರಾಟ ಮತ್ತು ಚಿತ್ರೀಕರಣವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಈ ಆದೇಶವು ಇಂದು (ಮೇ 10, 2025) ಸಂಜೆ 4 ಗಂಟೆಯಿಂದ ಮೇ 14, 2025 ರ ಸಂಜೆ 4 ಗಂಟೆಯವರೆಗೆ ಜಾರಿಯಲ್ಲಿರುತ್ತದೆ ಎಂದು ಪೊಲೀಸ್ ಆಯುಕ್ತರು ಹಾಗೂ ಹೆಚ್ಚುವರಿ ಜಿಲ್ಲಾ ದಂಡಾಧಿಕಾರಿ ಶ್ರೀ ಅನುಪಮ್ ಅಗ್ರವಾಲ್ ಅವರು ತಿಳಿಸಿದ್ದಾರೆ.ಪ್ರಸಕ್ತ ವಿದ್ಯಮಾನಗಳು ಮತ್ತು ಸಾರ್ವಜನಿಕರ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ. ಡ್ರೋನ್ ರೂಲ್ಸ್ 2021 ರ ರೂಲ್ಸ್ 24 ರ ಅಡಿಯಲ್ಲಿ ಈ ನಿಷೇಧಾಜ್ಞೆಯನ್ನು ಹೊರಡಿಸಲಾಗಿದೆ. ಮಂಗಳೂರು ನಗರದ ಎಲ್ಲಾ ಪೊಲೀಸ್ ಠಾಣಾಧಿಕಾರಿಗಳು ತಮ್ಮ ವ್ಯಾಪ್ತಿಯಲ್ಲಿ ಈ ಆದೇಶವು ಕಟ್ಟುನಿಟ್ಟಾಗಿ ಪಾಲನೆಯಾಗುವಂತೆ ನೋಡಿಕೊಳ್ಳಲು ಸೂಚಿಸಲಾಗಿದೆ. ಈ ಕುರಿತು ಮಾಹಿತಿಯನ್ನು ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳು, ಮಂಗಳೂರು ನಗರದ ಉಪ ಪೊಲೀಸ್ ಆಯುಕ್ತರು (ಕಾನೂನು ಮತ್ತು ಸುವ್ಯವಸ್ಥೆ), ಉಪ ಪೊಲೀಸ್ ಆಯುಕ್ತರು…
Author: main-admin
ಮಂಗಳೂರು: ಬೆಂದೂರ್‌ವೆಲ್ ಜಂಕ್ಷನ್‌ನಲ್ಲಿ 2023ರಲ್ಲಿ ಬಸ್ ಢಿಕ್ಕಿಯಾಗಿ ಮಹಿಳೆ ಮೃತಪಟ್ಟ ಪ್ರಕರಣದಲ್ಲಿ ಖಾಸಗಿ ಬಸ್ ಚಾಲಕನಿಗೆ ಮಂಗಳೂರಿನ ಜೆಎಂಎಫ್‌ಸಿ ಮೂರನೇ ನ್ಯಾಯಾಲಯ 8 ತಿಂಗಳು ಜೈಲು ಶಿಕ್ಷೆ ವಿಧಿಸಿ ಆದೇಶ ನೀಡಿದೆ. ಐರಿನ್ ಡಿ ಸೋಜ (72) ಮೃತಪಟ್ಟಿರುವ ಮಹಿಳೆ. ವಾಮಂಜೂರಿನ ಎಚ್.ಭಾಸ್ಕರ ಶಿಕ್ಷೆಗೊಳಗಾದ ಚಾಲಕ. 2023ರ ಮಾ.30ರಂದು ಮಧ್ಯಾಹ್ನ ಐರಿನ್ ಡಿ ಸೋಜ ಅವರು ಖಾಸಗಿ ಸಿಟಿ ಬಸ್‌ನಲ್ಲಿ ಬಂದು ಬೆಂದೂರ್ ವೆಲ್ ಜಂಕ್ಷನ್‌ನಲ್ಲಿ ಇಳಿದು ಅದೇ ಬಸ್‌ನ ಮುಂಭಾಗದಿಂದ ರಸ್ತೆಯನ್ನು ದಾಟುತ್ತಿದ್ದರು. ಆಗ ಐರಿನ್ ಡಿಸೋಜ ಅವರಿಗೆ ಬಸ್ ಢಿಕ್ಕಿಯಾಗಿ, ಅವರ ತಲೆಯ ಮೇಲೆ ಬಸ್‌ನ ಚಕ್ರ ಹರಿದು ಹೋಗಿ ಆಕೆ ಸ್ಥಳದಲ್ಲಿಯೇ ಮೃತಪಟ್ಟಿದ್ದರು. ಚಾಲಕ ವಾಮಂಜೂರಿನ ಎಚ್.ಭಾಸ್ಕರ ನಿರ್ಲಕ್ಷ್ಯತನದಿಂದ ಬಸ್ ಚಲಾಯಿಸಿದ ಪರಿಣಾಮವಾಗಿ ಬಸ್ ಢಿಕ್ಕಿ ಹೊಡೆದು ಮಹಿಳೆ ಮೃತಪಟ್ಟಿರುವುದಾಗಿ ಆರೋಪಿಸಲಾಗಿತ್ತು. ಬಸ್ ಚಾಲಕ ಬಸ್ ನಿಲ್ಲಿಸದೇ ಬಸ್‌ನೊಂದಿಗೆ ಪರಾರಿಯಾಗಿದ್ದ. ಈ ಬಗ್ಗೆ ಸಂಚಾರ ಪೂರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆರೋಪಿ ಭಾಸ್ಕರನಿಗೆ 8 ತಿಂಗಳು…
ಉಡುಪಿ: ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ನಿಟ್ಟೆ ಇಂಜಿನಿಯರಿಂಗ್ ಕಾಲೇಜಿನ (Engineering College) ವಸತಿ ನಿಲಯದ ಗೋಡೆಯ ಮೇಲೆ ವಿದ್ಯಾರ್ಥಿನಿಯೊಬ್ಬಳು ʼಹಿಂದೂಸ್ಥಾನ್ ನಹಿ, ಮುಸ್ಲಿಂಸ್ಥಾನ ಬೋಲ್ʼ ಎಂದು ಗೋಡೆಯ ಮೇಲೆ ಬರೆದಿರುವುದು ಇದೀಗ ವಿವಾದಕ್ಕೆ ಕಾರಣವಾಗಿದೆ. “Hindustan nahi muslim sthan bola Muslim zindabad Hindu fuck off” ಎಂದು ವಿದ್ಯಾರ್ಥಿ ಬರೆದಿರುವ ಬರಹ ಈಗ ಎಲ್ಲರ ಕೋಪಕ್ಕೆ ಕಾರಣವಾಗಿದೆ. ಸ್ಥಳಕ್ಕೆ ಕಾರ್ಕಳ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ದೇಶ ವಿರೋಧಿ (Anti-national slogan) ಬರಹ ಬರೆದ ವಿದ್ಯಾರ್ಥಿನಿಗಾಗಿ ತೀವ್ರ ಶೋಧ ನಡೆಸಿದ್ದು, ಮುಂದಿನ ಕಾನೂನು ಕ್ರಮವನ್ನು ಕೈಗೊಂಡಿದ್ದಾರೆ. ಮಂಡ್ಯ : ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ ಶೇರ್ ಮಾಡಿದ ಆರೋಪದಲ್ಲಿ ಮಳವಳ್ಳಿ ತಾಲ್ಲೂಕಿನ ಕಿರುಗಾವಲು ಗ್ರಾಮದ ಜಾವೀದ್ ಎಂಬ ವ್ಯಕ್ತಿಯನ್ನು ಪೋಲೀಸರು ಬಂಧಿಸಿದ್ದಾರೆ. ಆರೋಪಿ ಜಾವೀದ್ ಪಾಕಿಸ್ತಾನದ ಮಾಜಿ ಪ್ರಧಾನಮಂತ್ರಿ ಇಮ್ರಾನ್ ಖಾನ್‌ಗೆ ಮೋದಿ ಶೂ ಧರಿಸುವಂತೆ…
ಬೆಂಗಳೂರು: ಭಾರತ ಮತ್ತು ಪಾಕ್ ನಡುವೆ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಹೀಗಾಗಿ ರಾಜ್ಯದ ಪೊಲೀಸರಿಗೆ ಹೆಚ್ಚಿನ ರಜೆ ಇರುವುದಿಲ್ಲ ಅಂತ ಗೃಹ ಸಚಿವ ಜಿ.ಪರಮೇಶ್ವರ್ ಅವರು ಹೇಳಿದ್ದಾರೆ. ಅವರು ಇಂದು ನಗರದಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡುತ್ತ ಈ ಬಗ್ಗೆ ಮಾಹಿತಿ ನೀಡಿದರು. ಇದೇ ವೇಳೆ ಅವರು ಸದ್ಯ ಪೊಲೀಸರಿಗೆ ಯಾವುದೇ ಹೆಚ್ಚುವರಿ ರಜೆಯನ್ನು ನೀಡುವುದಿಲ್ಲ ಅಂತ ತಿಳಿಸಿದ ಅವರು ಯಾವಾಗ ಏನು ಆಗುತ್ತದೋ ಯಾರಿಗೂ ತಿಳಿದಿಲ್ಲ, ಕೋಸ್ಟಲ್ ಗಾರ್ಡ್‌ನಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ. ಕೇಂದ್ರ ಸರ್ಕಾರದ ನಿರ್ದೇಶನದಂತೆ ಎಲ್ಲಾ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದೆ ಅಂತ ಅವರು ಇದೇ ವೇಳೇ ತಿಳಿಸಿದರು. ಕರ್ನಾಟಕದಲ್ಲಿ ಮುಂಜಾಗ್ರತ ಕ್ರಮವಾಗೀ ರಾಜ್ಯ ಸರ್ಕಾರ ಕೈಗೊಂಡಿದ್ದು, ಕೇಂದ್ರ ಸರ್ಕಾರದ ಸೂಚನೆಗಳಿಗೆ ಅನುಗುಣವಾಗಿ ಎಲ್ಲಾ ರೀತಿಯಲ್ಲಿ ಸಿದ್ದತೆಗಳನ್ನು ರಾಜ್ಯ ಗೃಹ ಇಲಾಖೆ ಮಾಡಿಕೊಂಡಿದೆ.
ನೆಲ್ಯಾಡಿ: ಚಾಕುವಿನಿಂದ ಇರಿದು ಯುವಕನೋರ್ವನನ್ನು ಹತ್ಯೆ ಮಾಡಿದ ಘಟನೆ ಶುಕ್ರವಾರ ರಾತ್ರಿ ನೆಲ್ಯಾಡಿ ಹೊರ ಠಾಣೆ ವ್ಯಾಪ್ತಿಯ ಮಾದೇರಿ ಸಮೀಪ ಸಂಭವಿಸಿದೆ. ಮೃತ ಯುವಕನನ್ನು ಮಾದೇರಿ ನಿವಾಸಿ ಶರತ್ ಎಂದು ತಿಳಿದು ಬಂದಿದೆ. ಮನೆಯ ಅಂಗಳದಲ್ಲಿ ಶರತ್ ನನ್ನು ಚಾಕುವಿನಿಂದ ಇರಿದು ಕೊಲೆಗೈಯಲಾಗಿದ್ದು, ಕೌಟುಂಬಿಕ ಕಲಹ ಘಟನೆಗೆ ಕಾರಣ ಎಂದು ಪೊಲೀಸರು ತಿಳಿಸಿದ್ದಾರೆ. ಸ್ಥಳಕ್ಕೆ ನೆಲ್ಯಾಡಿ ಹೊರ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಮಂಗಳೂರು: ಎಂಟರ್‌ಪ್ರೈನರ್‌ಶಿಪ್ ಡೆವಲಪ್‌ಮೆಂಟ್ ಪ್ರೋಗ್ರಾಂ (EDP) – 2025 ಅನ್ನು ಮೇ 8, 2025ರಂದು ಮಂಗಳೂರುದಲ್ಲಿರುವ ಸೇಂಟ್ ಅಲೋಶಿಯಸ್ (ಅಭ್ಯರ್ಥಿತ ವಿಶ್ವವಿದ್ಯಾಲಯ) ಯೂನಿಟ್‌ನ AIMIT ನಲ್ಲಿ ಶೆಣೈ ಸಭಾಂಗಣದಲ್ಲಿ ಯಶಸ್ವಿಯಾಗಿ ಆಯೋಜಿಸಲಾಯಿತು. ಬಿಸಿನೆಸ್ ಅಡ್ಮಿನಿಸ್ಟ್ರೇಶನ್ (ಎಂ.ಬಿ.ಎ) ವಿಭಾಗದ ವತಿಯಿಂದ ಈ ಪೂರ್ಣದಿನ ಕಾರ್ಯಕ್ರಮವನ್ನು ಬೆಳಗ್ಗೆ 9:00ರಿಂದ ಸಂಜೆ 4:15ರ ವರೆಗೆ ನಡೆಸಲಾಯಿತು. ಕಾರ್ಯಕ್ರಮದ ಉದ್ಘಾಟನಾ ಸಮಾರಂಭವನ್ನು ಹಲವಾರು ಗಣ್ಯರ ಸಮ್ಮುಖದಲ್ಲಿ ನಡೆಸಲಾಯಿತು. ಮುಖ್ಯ ಅತಿಥಿಯಾಗಿ ಪ್ರಖ್ಯಾತ ಉದ್ಯಮಿ ಮತ್ತು ಜ್ಯೋತಿ ಲ್ಯಾಬ್ಸ್‌ನ ಜಂಟಿ ವ್ಯವಸ್ಥಾಪಕ ನಿರ್ದೇಶಕರಾದ ಶ್ರೀ ಉಲ್ಲಾಸ್ ಕಾಮತ್ ಅವರು ಪಾಲ್ಗೊಂಡರು. ಇವರೊಂದಿಗೆ ರೆ। ಫಾ| ಕಿರಣ್ ಕೊತ್ ಎಸ್‌ಜೆ (AIMIT ನಿರ್ದೇಶಕ), ಡಾ. ರಜನಿ ಸುರೇಶ್ (ಅಕಾಡೆಮಿಕ್ಸ್ ಮತ್ತು ಸಂಶೋಧನಾ ಡೀನ್), ಮಿಸ್ ಬೀನಾ ಡಯಸ್ (ವಿಭಾಗದ ಮುಖ್ಯಸ್ಥೆ), ಕಾರ್ಯಕ್ರಮ ಸಂಯೋಜಕ ಡಾ. ಸ್ವಪ್ನಾ ರೋಸ್ ಮತ್ತು ಕಾರ್ಯಕ್ರಮ ಸಹ ಸಂಯೋಜಕರಾದ ಮಿಸ್ ಪ್ರಥ್ವಿ ಪ್ರಕಾಶ್ ಮತ್ತು ಮಿಸ್ ಲವೀನಾ ನೈಟಿಂಗೇಲ್ ಅವರು ಉಪಸ್ಥಿತರಿದ್ದರು. ಕಾರ್ಯಕ್ರಮದ ಆರಂಭವನ್ನು ಪರಂಪರೆಯಂತೆ…
ಬೆಂಗಳೂರು: ಸುಹಾಸ್ ಹತ್ಯೆ ಪ್ರಕರಣದ ಎನ್‍ಐಎ ತನಿಖೆ ಆಗಬೇಕು. ಈ ವಿಷಯದಲ್ಲಿ ರಾಜ್ಯಪಾಲರು ರಾಜ್ಯ ಸರಕಾರಕ್ಕೆ ಆಗ್ರಹಿಸಿ ಆದೇಶ ಮಾಡಿಸಲು ವಿನಂತಿಸಿದ್ದೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ತಿಳಿಸಿದ್ದಾರೆ. ರಾಜ್ಯಪಾಲರ ಭೇಟಿ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಸುಹಾಸ್ ಹತ್ಯೆ ವಿಷಯದಲ್ಲಿ ನಿಷ್ಪಕ್ಷಪಾತ ತನಿಖೆಯ ನಿರೀಕ್ಷೆ ಹುಸಿಯಾಗಿದೆ. ಆದ್ದರಿಂದ ನಮ್ಮೆಲ್ಲ ಜನಪ್ರತಿನಿಧಿಗಳು, ಸುಹಾಸ್ ಮನೆಯವರು, ರಾಜ್ಯಪಾಲರನ್ನು ಭೇಟಿ ಮಾಡಿದ್ದೇವೆ ಎಂದು ತಿಳಿಸಿದರು.ಪ್ರಕರಣದಲ್ಲಿ ವಿದೇಶಿ ಹಣದ ಹರಿವಿನ ಚರ್ಚೆ ನಡೆಯುತ್ತಿದೆ. ಪಿಎಫ್‍ಐ ನಂಟು ಕೂಡ ಕಾಣುತ್ತಿದೆ ಎಂದರು. ಸುಹಾಸ್ ಹತ್ಯೆ ಸಂದರ್ಭದಲ್ಲಿ ಬಿಜೆಪಿ ವತಿಯಿಂದ ಮಂಗಳೂರು ಚಲೋ ಮಾಡಲು ತೀರ್ಮಾನ ಮಾಡಿದ್ದೆವು. ‘ಆಪರೇಷನ್ ಸಿಂಧೂರ್’ ಪ್ರಾರಂಭವಾದ ಸಂದರ್ಭದಲ್ಲಿ ಶಾಂತಿ ಕಾಪಾಡಲು ಮತ್ತು ದೇಶದ ಜೊತೆ ನಿಲ್ಲಬೇಕೆಂದು ಹಾಗೇ ಇದ್ದೆವು. ಆದರೆ, ಸುಹಾಸ್ ಹತ್ಯೆ ಆದ ನಂತರದಲ್ಲಿ ನಡೆಯುತ್ತಿರುವ ತನಿಖೆಯು ಅನುಮಾನಕ್ಕೆ ಆಸ್ಪದ ಮಾಡಿಕೊಟ್ಟಿದೆ ಎಂದು ಟೀಕಿಸಿದರು.ಈಚೆಗೆ ಮಂಗಳೂರಿನಲ್ಲಿ ಕೊಲೆಯಾದ ಸುಹಾಸ್ ಶೆಟ್ಟಿ ಅವರ ತಾಯಿ, ತಂದೆ ಮತ್ತು ಮಾವನ…
ಇಂದು, ಸೇಂಟ್ ಅಲೋಶಿಯಸ್ ವಿಶ್ವವಿದ್ಯಾಲಯದ AIMIT ಕೇಂದ್ರವು ಡಾ. ಫಾ. ಕಿರಣ್ ಕೋತ್ (AIMIT ನಿರ್ದೇಶಕ) ಮತ್ತು ಡಾ. ನಿಕ್ಕಿ ಫೆನ್ನರ್ನ್ (ಜಡ್ಸನ್ ವಿಶ್ವವಿದ್ಯಾಲಯದ ಉಪಾಧ್ಯಕ್ಷ) ಅವರ ನೇತೃತ್ವದಲ್ಲಿ ಜಡ್ಸನ್ ವಿಶ್ವವಿದ್ಯಾಲಯ, USA ಜೊತೆ ಒಪ್ಪಂದದ ಒಡಂಬಡಿಕೆ (MOU) ಒಪ್ಪಂದಕ್ಕೆ ಸಹಿ ಹಾಕಿದೆ. ಈ ಒಪ್ಪಂದದ ಉದ್ದೇಶವೆಂದರೆ ಜಡ್ಸನ್, AU ಮತ್ತು ಕ್ಯಾಂಪಸ್ USA ಸಂಸ್ಥೆಗಳ ನಡುವೆ ಶೈಕ್ಷಣಿಕ ಸಹಯೋಗ, ಸಂಶೋಧನೆ, ಸಂಪನ್ಮೂಲ ಹಂಚಿಕೆ ಮತ್ತು ಶ್ರೇಷ್ಠತಾ ಕೇಂದ್ರ ಸ್ಥಾಪನೆಯ ಸಾಧ್ಯತೆಯನ್ನು ಅನ್ವೇಷಿಸುವುದು. ಇದರ ಮೂಲಕ ಅಂತರರಾಷ್ಟ್ರೀಯ ಶೈಕ್ಷಣಿಕ ಸಹಯೋಗವನ್ನು ಉತ್ತೇಜಿಸಲು ಮತ್ತು ಎಲ್ಲಾ ಭಾಗಿಗಳಿಗೆ ಲಾಭದಾಯಕವಾದ ಶಿಕ್ಷಣ ಅವಕಾಶಗಳನ್ನು ರೂಪಿಸುವುದು.
ನವದೆಹಲಿ: ಪ್ರತೀಕಾರವಾಗಿ ಪಾಕಿಸ್ತಾನ , ಭಾರತೀಯ ಸೇನಾ ನೆಲೆಯನ್ನೇ ಟಾರ್ಗೆಟ್ ಮಾಡಿ ದಾಳಿ ಮಾಡಲು ಮುಂದಾಗಿದೆ. ಆದರೆ ಭಾರತ, ಪಾಕ್ ಡ್ರೋನ್‌ಗಳನ್ನು ಹೊಡೆದುರುಳಿಸಿದೆ. ಜಮ್ಮು ವಾಯುನೆಲೆ, ಜೈಸಲ್ಮೇರ್, ಪಠಾಣ್‌ಕೋಟ್, ಅಖ್ನೂರ್, ರಾಜೌರಿ,ಪೂಂಚ್, ತಂಗಹಾರ್, ಸೇರಿದಂತೆ ಗಡಿ ಸಮೀಪದ ಹಲವಾರು ಪ್ರದೇಶಗಳ ಮೇಲೆ ಪಾಕಿಸ್ತಾನ ಡ್ರೋನ್ ದಾಳಿಗೆ ಯತ್ನಿಸಿದೆ. ಆದ್ರೆ, ಇದನ್ನು ಭಾರತೀಯ ಸೇನೆ ವಿಫಲಗೊಳಿಸಿದೆ. ಅಲ್ಲದೇ ಪಾಕಿಸ್ತಾನದ ಫೈಟರ್ ಜೆಟ್ ಎಫ್-16 ಅನ್ನು ಭಾರತೀಯ ಸೇನಾಪಡೆ ಧ್ವಂಸಗೊಳಿಸಿದೆ. ಎನ್ನುವ ಮಾಹಿತಿ ಲಭ್ಯವಾಗಿದೆ. ಪ್ರಮುಖವಾಗಿ ಚನಿ ಹಿಮತ್, ಆರ್‌ಎಸ್ ಪುರ, ಜಮ್ಮುವಿನ 3 ಕಡೆಯಲ್ಲಿ ಪಾಕಿಸ್ತಾನ ಡ್ರೋನ್ ದಾಳಿಗೆ ಯತ್ನ ಮಾಡಿದೆ. ಅಂತಾರಾಷ್ಟ್ರೀಯ ಗಡಿಯಲ್ಲಿ ಪಾಕ್‌ನಿಂದ ಗುಂಡಿನ ದಾಳಿ ಕೂಡ ಮುಂದುವರಿದಿದೆ. ಈ ಬಿಗುವಿನ ವಾತಾವರಣದಲ್ಲಿ ಜಮ್ಮುವಿನಾದ್ಯಂತ ವಾಯು ದಾಳಿ ಸೈರನ್ ಮೊಳಗಿದೆ. ಜಮ್ಮು ವಿಮಾನ ನಿಲ್ದಾಣದ ಮೇಲೆ ದಾಳಿ ಮಾಡಲು ಪಾಕಿಸ್ತಾನ ವಿಫಲ ಪ್ರಯತ್ನ ನಡೆಸಿದ್ದು,, ಎಸ್ -400 ಹಲವಾರು ಪಾಕ್ ಡ್ರೋನ್‌ಗಳನ್ನು ಹೊಡೆದುರುಳಿಸಿದೆ. ಪಾಕಿಸ್ತಾನದಿಂದ ಕಳುಹಿಸಲಾದ ಕ್ಷಿಪಣಿ, ಡ್ರೋನ್‌ಗಳನ್ನು ಭಾರತೀಯ ಸೇನೆ…
ನವದೆಹಲಿ: ಪಾಕಿಸ್ತಾನ ಕ್ಷಿಪಣಿ ದಾಳಿ ನಡೆಸಿದ ಬಳಿಕ ಉಭಯ ರಾಷ್ಟ್ರಗಳ ನಡುವೆ ಉದ್ವಿಗ್ನತೆ ಹೆಚ್ಚಾಗಿದೆ. ದೇಶಾದ್ಯಂತ 24 ವಿಮಾನ ನಿಲ್ದಾಣಗಳ ಕಾರ್ಯಾಚರಣೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದು ವರದಿಯಾಗಿದೆ. ಹಲವು ಭಾರತೀಯ ವಿಮಾನಯಾನ ಸಂಸ್ಥೆಗಳು ಪ್ರಯಾಣದ ಸಲಹೆಗಳನ್ನು ನೀಡಿದ್ದು, ಅದಕ್ಕೆ ಅನುಗುಣವಾಗಿ ಪ್ರಯಾಣಿಕರು ತಮ್ಮ ಪ್ರಯಾಣದ ಯೋಜನೆಯನ್ನು ಮಾಡಿಕೊಳ್ಳುವಂತೆ ತಿಳಿಸಿವೆ. ದೇಶಾದ್ಯಂತ ರಾಷ್ಟ್ರೀಯ, ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಗಳಲ್ಲಿ ಬಿಗಿ ಕಟ್ಟೆಚ್ಚರ ವಹಿಸಲಾಗಿದೆ. ದೇಶದ ರಾಜಧಾನಿ ದೆಹಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದಿನಂತೆ ಕಾರ್ಯನಿರ್ವಹಿಸುತ್ತಿದೆ. ಭದ್ರತೆ ಹೆಚ್ಚಿಸಿರುವ ಕಾರಣ ಕೆಲವು ವಿಮಾನಗಳ ಹಾರಾಟಗಳು ರದ್ದಾಗಿವೆ. ಪ್ರಯಾಣಿಕರು ತಮ್ಮ ವಿಮಾನಯಾನದ ಬಗ್ಗೆ ಮಾಹಿತಿ ತಿಳಿದುಕೊಂಡು ಏರ್‌ಪೋರ್ಟ್‌ಗೆ ಬರಲು ಸೂಚಿಸಲಾಗಿದೆ.










