Author: main-admin

ಮಂಗಳೂರು : ಸಂಚಾರ ನಿಯಮ ಉಲ್ಲಂಘನೆ ಬಗ್ಗೆ ನಕಲಿ ಇ ಚಲನ್ ಕಳುಹಿಸಿ ವ್ಯಕ್ತಿಯೊಬ್ಬರ ಖಾತೆಯಿಂದ 1.31 ಲಕ್ಷ ರೂ. ಗಳನ್ನು ವರ್ಗಾಯಿಸಿಕೊಂಡ ಬಗ್ಗೆ ಮಂಗಳೂರಿನ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನ.24ರಂದು ತನಗೆ ವಾಟ್ಸಾಪ್ ನಂಬರ್‌ ವೊಂದರಿಂದ ಮೆಸೇಜ್ ಬಂದಿದ್ದು, ಅದನ್ನು ಡೌನ್‌ಲೋಡ್ ಮಾಡಿದಾಗ ಮೊಬೈಲ್‌ ಗೆ 16 ಒಟಿಪಿಗಳು ಬಂದಿದ್ದವು. ಬಳಿಕ ಪ್ಲಿಪ್‌ ಕಾರ್ಟ್ ಹಾಗೂ ಅಮೇಜಾನ್ ನಲ್ಲಿ ತನ್ನ ಕ್ರೆಡಿಟ್ ಕಾರ್ಡ್ ಮೂಲಕ 30,400 ರೂ., ಡೆಬಿಟ್ ಕಾರ್ಡ್ ಮೂಲಕ 16,700 ರೂ. ಮತ್ತು ಪೇ ಲೇಟರ್ ನಲ್ಲಿ 71,496 ರೂ. ಹಣ ವರ್ಗಾವಣೆಯಾದ ಬಗ್ಗೆ ಮೊಬೈಲ್‌ಗೆ ಮೆಸೇಜ್ ಬಂತು. ತಕ್ಷಣ ಮೊಬೈಲ್‌ ಮೂಲಕ ಡೆಬಿಟ್ ಕಾರ್ಡ್ ಹಾಗೂ ಕ್ರೆಡಿಟ್ ಕಾರ್ಡ್‌ ನ್ನು ಬ್ಲಾಕ್ ಮಾಡಿದೆ. ಯಾರೋ ಅಪರಿಚಿತರು ಎಪಿಕೆ ಫೈಲ್ ಮೂಲಕ ತನ್ನ ಡೆಬಿಟ್, ಕ್ರೆಡಿಟ್ ಕಾರ್ಡ್‌ನ ಮಾಹಿತಿ ಪಡೆದು ಪ್ಲಿಪ್‌ಕಾರ್ಟ್ ನಲ್ಲಿ 39,398 ರೂ. ಮೌಲ್ಯದ ಒನ್ ಪ್ಲಸ್ ಮೊಬೈಲ್, 32,398 ರೂ.…

Read More

ಮೂಲ್ಕಿ : ಆಗಸ್ಟ್ 25 ರಂದು ರೈಲ್ವೆ ಬೋಗಿಯಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಕಂಡು ಬಂದ ವ್ಯಕ್ತಿ ನಂತರ ಮೃತ ಪಟ್ಟ ಬಗ್ಗೆ ಮೂಲ್ಕಿ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಚಿಕ್ಕಬಳ್ಳಾಪುರದ ಕುಮಾರ್ ಪೇಟೆಯ ಮೌಜಾಮ್ (35) ಕೊಲೆಯಾಗಿದ್ದ ವ್ಯಕ್ತಿ. ಮೂಲ್ಕಿ ಠಾಣಾ ಪೊಲೀಸರು ಆರೋಪಿಯಾದ ರಾಹುಲ್ ನನ್ನು ಗುಜರಾತ್ ನ ಪರ್ದಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬಂಧಿಸಿದ್ದಾರೆ. ಈತ ವಿವಿಧ ರಾಜ್ಯಗಳಲ್ಲಿ 3 ಅತ್ಯಾಚಾರ ಸಹಿತ 5 ಕೊಲೆ ನಡೆಸಿರುವುದಾಗಿ ಪೊಲೀಸರ ತನಿಖೆಯಲ್ಲಿ ಗೊತ್ತಾಗಿದೆ.

Read More

ವಿಟ್ಲ:  ಆಟೋರಿಕ್ಷಾ ಮತ್ತು ಬೈಕ್ ಮುಖಾಮುಖಿ ಡಿಕ್ಕಿ ಹೊಡೆದು ಮೂವರು ಗಂಭೀರವಾಗಿ ಗಾಯಗೊಂಡ ಘಟನೆ ಸಾಲೆತ್ತೂರು ಸಮೀಪದ ಕಾಡುಮಠ ಸೇತುವೆ ಬಳಿ ನಡೆದಿದೆ. ಆಟೋ ಚಾಲಕ ಸಾಲೆತ್ತೂರು ನಿವಾಸಿ ರಫೀಕ್, ಬೈಕ್ ಸವಾರರಾದ ಕಡಂಬು ನಿವಾಸಿ ಉಮ್ಮರ್ ಮತ್ತು ರಾದುಕಟ್ಟೆ ನಿವಾಸಿ ಅಬೂಬಕ್ಕರ್ ಗಾಯಾಳುಗಳು ಎಂದು ತಿಳಿಯಲಾಗಿದೆ. ಸುಂಕದಕಟ್ಟೆ ಮಜೀರ್ ಪಳ್ಳದಲ್ಲಿ ಸೆಂಟ್ರಿಂಗ್ ಕೆಲಸ ಮುಗಿಸಿ ಮನೆಗೆ ಹಿಂತಿರುತ್ತಿದ್ದ ಉಮ್ಮರ್ ಮತ್ತು ಅಬೂಬಕ್ಕರ್ ಅವರ ಬೈಕ್ ಸಾಲೆತ್ತೂರು ಕಡೆಗೆ ಸಂಚರಿಸುತ್ತಿದ್ದ ರಫೀಕ್ ಎಂಬವರ ಆಟೋಗೆ ಕಾಡುಮಠ ಸೇತುವೆಯಲ್ಲಿ ಮುಖಾಮುಖಿ ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ಆಟೋ ಮತ್ತು ಬೈಕ್ ಸಂಪೂರ್ಣ ಜಖಂಗೊಂಡು ಮೂವರೂ ರಸ್ತೆಗೆಸೆಯಲ್ಪಟ್ಟು ಗಂಭೀರವಾಗಿ ಗಾಯಗೊಂಡಿದ್ದಾರೆ. ತಕ್ಷಣವೇ ಸ್ಥಳೀಯರು ಗಾಯಾಳುಗಳನ್ನು ದೇರಳಕಟ್ಟೆ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಗಾಯಾಳುಗಳ ಪೈಕಿ ಅಬೂಬಕ್ಕರ್ ಅವರ ಸ್ಥಿತಿ ಮತ್ತಷ್ಟು ಗಂಭೀರವಾಗಿದೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ. ಈ ಕುರಿತು ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Read More

ಚಳಿಗಾಲದಲ್ಲಿ ಋತುಮಾನದ ರೋಗಗಳು ಮತ್ತು ಸೋಂಕುಗಳು ಉಂಟಾಗುವ ಸಾಧ್ಯತೆಗಳು ಹೆಚ್ಚು. ಈ ಅವಧಿಯಲ್ಲಿ ಕೆಲವರು ಆಗಾಗ ಅನಾರೋಗ್ಯಕ್ಕೆ ಒಳಗಾಗುತ್ತಾರೆ. ಜ್ವರ, ಕೆಮ್ಮು, ಗಂಟಲುನೋವು ಮತ್ತು ಶೀತದಂತಹ ಸಮಸ್ಯೆಗಳಿಂದ ಬಳಲುವುದು ಸಾಮಾನ್ಯ. ರೋಗನಿರೋಧಕ ಶಕ್ತಿ ಕಡಿಮೆ ಇರುವುದು ಇದಕ್ಕೆ ಮುಖ್ಯ ಕಾರಣವಾಗಿರಬಹುದು. ಹೀಗಾಗಿ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವ ಆಹಾರವನ್ನು ಸೇವಿಸುವುದು ಬಹಳ ಮುಖ್ಯ. ಪ್ರತಿರಕ್ಷಣಾ ವ್ಯವಸ್ಥೆಯನ್ನು ಸುಧಾರಿಸುವ ಕೆಲವು ಆಹಾರಗಳು ಇಲ್ಲಿವೆ. ಚಳಿಗಾಲದಲ್ಲಿ ಋತುಮಾನದ ರೋಗಗಳು ಮತ್ತು ಸೋಂಕುಗಳು ಉಂಟಾಗುವ ಸಾಧ್ಯತೆಗಳು ಹೆಚ್ಚು. ಈ ಅವಧಿಯಲ್ಲಿ ಕೆಲವರು ಆಗಾಗ ಅನಾರೋಗ್ಯಕ್ಕೆ ಒಳಗಾಗುತ್ತಾರೆ. ಜ್ವರ, ಕೆಮ್ಮು, ಗಂಟಲುನೋವು ಮತ್ತು ಶೀತದಂತಹ ಸಮಸ್ಯೆಗಳಿಂದ ಬಳಲುವುದು ಸಾಮಾನ್ಯ. ರೋಗನಿರೋಧಕ ಶಕ್ತಿ ಕಡಿಮೆ ಇರುವುದು ಇದಕ್ಕೆ ಮುಖ್ಯ ಕಾರಣವಾಗಿರಬಹುದು. ಹೀಗಾಗಿ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವ ಆಹಾರವನ್ನು ಸೇವಿಸುವುದು ಬಹಳ ಮುಖ್ಯ. ಪ್ರತಿರಕ್ಷಣಾ ವ್ಯವಸ್ಥೆಯನ್ನು ಸುಧಾರಿಸುವ ಕೆಲವು ಆಹಾರಗಳು ಇಲ್ಲಿವೆ. ನೆಲ್ಲಿಕಾಯಿ: ನೆಲ್ಲಿಕಾಯಿಯಲ್ಲಿ ವಿಟಮಿನ್ ಸಿ ಅಧಿಕವಾಗಿದೆ. ಇದು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ನೆಲ್ಲಿಕಾಯಿಯನ್ನು ಚಳಿಗಾಲದಲ್ಲಿ ಸೇವಿಸುವುದು ತುಂಬಾ ಒಳ್ಳೆಯದು. ನೆಲ್ಲಿಕಾಯಿಯನ್ನು…

Read More

ಬೆಳ್ತಂಗಡಿ: ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಪಿಯುಸಿ ವಿದ್ಯಾರ್ಥಿನಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಬೆಳ್ತಂಗಡಿ ತಾಲೂಕಿನ ಮಿತ್ತಬಾಗಿಲು ಎಂಬಲ್ಲಿ ನಡೆದಿದೆ. ಮಿತ್ತಬಾಗಿಲು ಕೋಡಿ ನಿವಾಸಿ ಪಿಯುಸಿ ವಿದ್ಯಾರ್ಥಿನಿ ಋಶ್ವಿ(17) ವಿಷ ಸೇವಿಸಿ ಮೃತಪಟ್ಟವಳು. ಋಶ್ವಿ ಬೆಳ್ತಂಗಡಿಯ ಕಾಲೇಜೊಂದರಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದಳು. 2 ದಿನಗಳ ಹಿಂದೆ ಈಕೆ ವಿಷ ಸೇವಿಸಿದ್ದಳು. ಪರಿಣಾಮ ಆಕೆಯ ಆರೋಗ್ಯ ಸ್ಥಿತಿ ಗಂಭೀರವಾಗಿತ್ತು. ಆದ್ದರಿಂದ ಆಕೆಯನ್ನು ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಋಶ್ವಿ ಮೃತಪಟ್ಟಿದ್ದಾಳೆ. ಆತ್ಮಹತ್ಯೆಗೆ ನಿಖರ ಕಾರಣಗಳು ತಿಳಿದು ಬಂದಿಲ್ಲ. ಈ ಬಗ್ಗೆ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Read More

ಮಂಗಳೂರು: ಪಜೀರು ಗ್ರಾಮದ ಕಂಬಳಪದವು ಬಳಿ ನಿಷೇಧಿತ ಎಂಡಿಎಂಎ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಎಸಿಪಿ ಧನ್ಯಾ ನಾಯಕ್ ನೇತೃತ್ವದ ಆ್ಯಂಟಿ ಡ್ರಗ್ ಟೀಮ್ ಕಾರ್ಯಾಚರಣೆ ನಡೆಸಿ ಬಂಧಿಸಿದೆ. ಬಂಧಿತರಿಂದ ಸುಮಾರು ಒಂದೂವರೆ ಲಕ್ಷ ರೂ. ಮೌಲ್ಯದ ಎಂಡಿಎಂಎ ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ತಲಪಾಡಿಯ ಮರಿಯ ಚರ್ಚ್ ಕಂಪೌಂಡ್ ನಿವಾಸಿ ಗೌತಮ್(22), ಕುಂಪಲ ಹನುಮಾನ್ ದೇವಸ್ಥಾನ ಬಳಿಯ ನಿವಾಸಿ ಕಾರ್ತಿಕ್(27), ತೊಕ್ಕೊಟ್ಟು ಗಣೇಶ ನಗರದ ಗಣೇಶ ಮಂದಿರದ ಬಳಿ ನಿವಾಸಿ ನಿಖಿಲ್(28) ಬಂಧಿತ ಆರೋಪಿಗಳು. ಕೊಣಾಜೆ ಠಾಣಾ ವ್ಯಾಪ್ತಿಯ ಪಜೀರಿನ ಕೈಗಾರಿಕಾ ನಿರ್ಜನ ಪ್ರದೇಶದಲ್ಲಿ ಸೋಮವಾರ ಆರೋಪಿಗಳು ಕಾರಿನಲ್ಲಿ ಎಂಡಿಎಂಎ ಪದಾರ್ಥ ಮಾಡುತ್ತಿದ್ದ ವೇಳೆ ಪೊಲೀಸರು ದಾಳಿ ನಡೆಸಿದ್ದಾರೆ. ಬಂಧಿತರಿಂದ 1.50,000 ರೂ. ಅಂದಾಜು ಮೌಲ್ಯದ 50 ಗ್ರಾಂ ತೂಕದ ಎಂಡಿಎಂಎ ಮಾದಕ ವಸ್ತು ಹಾಗೂ ಮಾರಾಟ ಮಾಡಲು ಬಳಸಿದ ಕಾರು ಮತ್ತು 3 ಮೊಬೈಲ್ ಫೋನ್ ಗಳು, ಡಿಜಿಟಲ್ ತೂಕ ಮಾಪನ ಹಾಗೂ ಗಾಜಿನ ನಳಿಕೆಯನ್ನು…

Read More

11 ವರ್ಷದ ಬಾಲಕ ಪೂರಿ ತಿಂದು ಸಾವನ್ನಪ್ಪಿರುವ ಘಟನೆ ತೆಲಂಗಾಣದ (Telangana) ಸಿಕಂದರಾಬಾದ್‌ನ ಶಾಲೆಯೊಂದರಲ್ಲಿ ನಡೆದಿದೆ. ಮೃತ ಬಾಲಕನನ್ನು 6ನೇ ತರಗತಿಯ ವಿಕಾಸ್ ಜೈನ್ ಎಂದು ಗುರುತಿಸಲಾಗಿದೆ. ಸಿಕಂದರಾಬಾದ್‌ನ ತಿವೋಲಿ ಥಿಯೇಟರ್ ಬಳಿ ಇರುವ ಶಾಲೆಯಲ್ಲಿ ವಿಕಾಸ್ ಜೈನ್ 6ನೇ ತರಗತಿಯಲ್ಲಿ ಓದುತ್ತಿದ್ದ. ಮನೆಯಿಂದ ತಂದ ಪೂರಿಯನ್ನು ಮಧ್ಯಾಹ್ನ ಊಟದ ಸಮಯದಲ್ಲಿ ತಿನ್ನುವಾಗ ಈ ಘಟನೆ ಸಂಭವಿಸಿದೆ.

Read More

ಅಜ್ಜ ಅಜ್ಜಿ ಡಬರ್ ಮರ್ಡರ್ ಮಾಡಿ ಎಸ್ಕೇಪ್ ಆಗಿದ್ದ ಸೈಕೊ ಕ್ಯಾಬ್ ಡ್ರೈವರ್ ನನ್ನು ಘಟನೆ ನಡೆದ 48 ಗಂಟೆಗಳ ಒಳಗೆ ಚಿಕ್ಕಮಗಳೂರು ಜಿಲ್ಲೆಯ ಮಲ್ಲಂದೂರು ಪೊಲೀಸರು ಬಂಧಿಸಿದ್ದಾರೆ. ಅಜ್ಜಿ ರೇಪ್ ಮಾಡಲು ಹೋಗಿ ಅಜ್ಜ ಅಜ್ಜಿ ಇಬ್ಬರನ್ನೂ ಮುಗಿಸಿದ ನಿಶಾಂತ್ ಕೊಲೆಗೆ ಕಾರಣವಾದ ರೋಚಕತೆಯನ್ನು ಪೊಲೀಸರು ಕೊನೆಗೂ ಬಾಯಿ ಬಿಡಿಸಿದ್ದಾರೆ. ನವೆಂಬರ್ 22 ರಂದು ಬೆಳ್ಳಂಬೆಳಗ್ಗೆ ಡಬಲ್ ಮರ್ಡರ್ ಸುದ್ದಿಯನ್ನು ಕೇಳಿದ ತಕ್ಷಣ ಪೊಲೀಸರಿಗೆ ಶಾಕ್ ಆಗಿತ್ತು. ಏಕೆಂದರೆ ಕಾಫಿನಾಡು ಚಿಕ್ಕಮಗಳೂರು ತಾಲೂಕಿನ ಅಭಯಾರಣ್ಯದ ಅಂಚಿನ ಗ್ರಾಮದಿಂದ ಕೊಲೆ ಸುದ್ದಿ ಬಂದಿತ್ತು.ಮುತ್ತೋಡಿ ಅಭಯಾರಣ್ಯ ಕ್ಕೆ ಹೊಂದಿಕೊಂಡಿರೋ ಕೊಳಗಾಮೆ ಗ್ರಾಮದ ತೋಟದ ಲೈನ್ ನಲ್ಲಿ ಕೂಲಿ ಕಾರ್ಮಿಕರಾದ ಬಸಪ್ಪ, ಲಲತಾ ಎನ್ನುವ ವೃದ್ದ ದಂಪತಿಗಳು ಹೆಣವಾಗಿ ಬಿದ್ದಿದ್ದರು.ಈ ವೃದ್ದ ದಂಪತಿಗಳಿಗೆ ಮಕ್ಕಳು ಇಲ್ಲ ಮೂಲತಃ ತುಮಕೂರು ಜಿಲ್ಲೆಯ ಗುಬ್ಬಿಯವ್ರು 18 ವರ್ಷದಿಂದ ಇದೇ ತೋಟದಲ್ಲಿ ಕೆಲಸ ಮಾಡಿಕೊಂಡು ಜೀವನ ನಡೆಸುತ್ತಿದ್ದರು.ತೋಟದ ಲೈನ್ ನಲ್ಲಿ ಇದ್ದರೂ ಯಾರ ಜೊತೆಯಲ್ಲಿ‌ ಕಿರಿಕ್ ಇಲ್ಲ ಅವ್ರಾಯ್ತು…

Read More

ಸುಳ್ಯ: ರಾತ್ರಿ ವೇಳೆಯಲ್ಲಿ ಅಂಗಡಿ ಮತ್ತು ಹೋಟೆಲ್ ಬೀಗ ಮುರಿದು ಒಳ ನುಗ್ಗಿದ ಕಳ್ಳರು ನಗದು ಹಣ ಕಳವುಗೈದ ಘಟನೆ ಕನಕಮಜಲು ಗ್ರಾಮದ ಕೋಡಿಯಲ್ಲಿ ನ.25ರಂದು ರಾತ್ರಿ ಸಂಭವಿಸಿದೆ. ಕೋಡಿಯಲ್ಲಿರುವ ಜಗನ್ನಾಥ ಅವರ ಅಂಗಡಿ ಹಾಗೂ ಅದರ ಹಿಂಬದಿಯಲ್ಲಿರುವ ಮೋಹನ ಅವರ ಮಾಲಕತ್ವದ ಶ್ರೀರಾಮ್ ಹೋಟೆಲಿಗೆ ಕಳ್ಳರು ನುಗ್ಗಿದ್ದು, ನಗದು ಹಣ ಕಳವುಗೈದಿರುವುದಾಗಿ ತಿಳಿದುಬಂದಿದೆ .ಬೆಳಿಗ್ಗೆ ಹೋಟೆಲ್ ಮಾಲಕ ಮೋಹನ ಹಾಗೂ ಜಗನ್ನಾಥ ಅವರು ಬಂದಾಗ ಘಟನೆ ಬೆಳಕಿಗೆ ಬಂದಿದೆ.

Read More

ಮಂಗಳೂರು: ನ್ಯಾಯಾಲಯವು ಹೊರಡಿಸಿದ ತಾತ್ಕಾಲಿಕ ನಿರ್ಬಂಧಕಾಜ್ಞೆಯ ಆದೇಶವನ್ನು ಉದ್ದೇಶಪೂರ್ವಕವಾಗಿ ಉಲ್ಲಂಘನೆ ಮಾಡಿರುವ ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ವಿಚಾರಣೆ ನಡೆಸಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಮಂಗಳೂರಿನ ಸಿವಿಲ್ ನ್ಯಾಯಾಧೀಶ ರಾಮಲಿಂಗಪ್ಪ ಅವರು ತಪ್ಪಿತಸ್ಥ ಸಾಮಾಜಿಕ ಕಾರ್ಯಕರ್ತ ಹನುಮಂತ ಕಾಮತ್‌ರಿಗೆ 90ದಿನಗಳ ಕಾರಾಗೃಹ ಶಿಕ್ಷೆ ವಿಧಿಸಿ ಆದೇಶ ಹೊರಡಿಸಿದ್ದಾರೆ. ಮಂಗಳೂರಿನ ವಿ.ಟಿ.ರಸ್ತೆಯಲ್ಲಿರುವ ಶ್ರೀವಿಠೋಬ ರುಕುಮಾಯಿ ದೇವರ ಭಂಡಾರದ ದಿನನಿತ್ಯದ ಆಡಳಿತಾತ್ಮಕ ವ್ಯವಹಾರದಲ್ಲಿ ಹಸ್ತಕ್ಷೇಪಮಾಡಬಾರದು. ಟ್ರಸ್ಟಿ ಎಂದು ತನ್ನನ್ನು ತಾನು ಪ್ರತಿಪಾದಿಸಬಾರದು ಎಂದು ಹನುಮಂತ ಕಾಮತ್ ಎಂಬವರ ವಿರುದ್ಧ ತಾತ್ಕಾಲಿಕ ನಿರ್ಬಂಧಕಾಜ್ಞೆ ಕೋರಿ ದೇವರ ಭಂಡಾರದ ಟ್ರಸ್ಟಿ ಎಂ ವರದಾಯ ಪ್ರಭು ಅರ್ಜಿ ಸಲ್ಲಿಸಿದ್ದರು. ಇದನ್ನು ಪುರಸ್ಕರಿಸಿದ ನ್ಯಾಯಾಲಯವು ಹನುಮಂತ ಕಾಮತ್ ವಿರುದ್ಧ ತಾತ್ಕಾಲಿಕ ನಿರ್ಬಂಧಕಾಜ್ಞೆಯ ಆದೇಶವನ್ನು ಹೊರಡಿಸಿತ್ತು. ಸದರಿ ಆದೇಶದ ವಿರುದ್ಧ ಹನುಮಂತ ಕಾಮತ್ ಸಲ್ಲಿಸಿದ ಮೇಲ್ಮನವಿ ತಿರಸ್ಕೃತವಾಗಿತ್ತು. ಬಳಿಕ ಉಚ್ಚ ನ್ಯಾಯಾಲಯದಲ್ಲಿ ಸಲ್ಲಿಸಿದ ರಿಟ್ ಅರ್ಜಿಯಲ್ಲಿ ಯಾವುದೇ ತಡೆಯಾಜ್ಞೆಯನ್ನು ಹೈಕೋರ್ಟ್ ನೀಡಿಲ್ಲ. ಆದರೆ ಹನುಮಂತ ಕಾಮತ್ ನ್ಯಾಯಾಲಯದ ಆದೇಶ ಉಲ್ಲಂಘಿಸಿ ತಾನೇ ಭಂಡಾರದ…

Read More