ಶ್ರೀನಗರ :ಪಾಕಿಸ್ತಾನದಿಂದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಗೆ ಪ್ರತಿಯಾಗಿ ಭಾರತ ಸರ್ಕಾರ ‘ಆಪರೇಷನ್ ಸಿಂಧೂರ್’ ಅನ್ನು ಪ್ರಾರಂಭಿಸಿದೆ. ಈ ಕಾರ್ಯಾಚರಣೆಯಡಿಯಲ್ಲಿ, ಭಾರತೀಯ ಸೇನೆಯು ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಕಾಶ್ಮೀರ (ಪಿಒಕೆ) ನಲ್ಲಿರುವ 9 ಭಯೋತ್ಪಾದಕ ಅಡಗುತಾಣಗಳ ಮೇಲೆ ನಿಖರವಾದ ದಾಳಿ ನಡೆಸಿದೆ. ಸರ್ಕಾರಿ ಮೂಲಗಳ ಪ್ರಕಾರ, ಈ ದಾಳಿಗಳಲ್ಲಿ ಸುಮಾರು 100 ಭಯೋತ್ಪಾದಕರು ಸಾವನ್ನಪ್ಪಿದ್ದಾರೆ ಮತ್ತು 55 ಮಂದಿ ಗಾಯಗೊಂಡಿದ್ದಾರೆ. ಆಪರೇಷನ್ ಸಿಂಧೂರ್ ಅಡಿಯಲ್ಲಿ, ಫ್ರಾನ್ಸ್‌ನಿಂದ ಆಮದು ಮಾಡಿಕೊಂಡ ರಫೇಲ್ ಯುದ್ಧ ವಿಮಾನವನ್ನು ಬಳಸಲಾಯಿತು. ಭಾರತದ ಮೇಲೆ ಭಯೋತ್ಪಾದಕ ದಾಳಿಗಳನ್ನು ಯೋಜಿಸಿ ಕಾರ್ಯಗತಗೊಳಿಸಲಾಗುತ್ತಿದ್ದ ಸ್ಥಳಗಳು ಇವುಗಳೇ. ಪಾಕಿಸ್ತಾನದ ಸ್ಥಳೀಯ ವರದಿಗಳ ಪ್ರಕಾರ, ಬಹಾವಲ್ಪುರದಲ್ಲಿ ನಡೆದ ವಾಯುದಾಳಿಯ ನಂತರ 30 ಜನರು ಸಾವನ್ನಪ್ಪಿದ್ದಾರೆ. ಲಷ್ಕರ್ ಮತ್ತು ಜೈಶ್‌ನ ಪ್ರಧಾನ ಕಚೇರಿಗಳು ನಾಶವಾಗಿವೆ. ಪಾಕಿಸ್ತಾನದ ಅಂತರ ಸೇವೆಗಳ ಸಾರ್ವಜನಿಕ ಸಂಪರ್ಕ (ISPR) ನಿರ್ದೇಶಕ ಲೆಫ್ಟಿನೆಂಟ್ ಜನರಲ್ ಅಹ್ಮದ್ ಷರೀಫ್ ಚೌಧರಿ, ಭಾರತ 24 ಕ್ಷಿಪಣಿಗಳನ್ನು ಹಾರಿಸಿದೆ ಎಂದು ಹೇಳಿದರು. ದಾಳಿಯ ನಂತರ, ರಾಷ್ಟ್ರೀಯ…
Author: main-admin
ಮಂಗಳೂರು: ಕಳೆದ ಐದು ದಿನಗಳ ಹಿಂದೆ ಮಂಗಳೂರು ಹೊರವಲಯದ ಬಜ್ಪೆಯಲ್ಲಿ ನಡೆದ ಹತ್ಯೆ ಪ್ರಕರಣ ಕರಾವಳಿಯನ್ನು ಬೆಚ್ಚಿಬೀಳಿಸಿತ್ತು. ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ವಾರ್ ಗಳು ಒಮ್ಮೆಲೆ ಪೊಲೀಸರನ್ನು ದಿಗ್ಭ್ರಮೆಗೊಳಿಸಿತ್ತು. ರಾತ್ರಿ ಒಂಭತ್ತು ಮೂವತ್ತಕ್ಕೆ ಭರತ್ ಕುಮ್ಡೇಲ್ ಕೊಲ್ಲುತ್ತೇವೆ ಎಂದು ಸಂದೇಶ ಬಂದಿರುವ ಕಾರಣ ಮಂಗಳೂರು ನಗರದಾದ್ಯಂತ ಪೊಲೀಸರು ಹೈ ಅಲರ್ಟ್ ಆಗಿದ್ದಾರೆ. ಜಿಲ್ಲೆಯಲ್ಲಿ ನಿನ್ನೆಯವರೆಗೆ ನಿಷೇಧಾಜ್ಞೆ ಜಾರಿಯಲ್ಲಿದ್ದು 9.30 ರೊಳಗೆ ಎಲ್ಲಾ ಅಂಗಡಿ-ಮುಂಗಟ್ಟುಗಳನ್ನು ಬಂದ್ ಮಾಡಿಸಲಾಗಿತ್ತು. ಇನ್ನೂ ಕೆಲವು ದಿನ ಇದೇ ಕ್ರಮ ಮುಂದುವರೆಯಲಿದ್ದು ಒಂಭತ್ತು ಮೂವತ್ತರ ಒಳಗೆ ಎಲ್ಲವೂ ಬಂದ್ ಆಗಲಿದೆ. ಜನರ ಹಿತದೃಷ್ಟಿಯಿಂದ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಈ ಕ್ರಮ ಅನುಷ್ಠಾನಕ್ಕೆ ತರಲಾಗಿದೆ. ಭದ್ರತೆ ನಿರ್ವಹಿಸಲು ಜಿಲ್ಲೆಯ ಕೆಲವು ಸೂಕ್ಷ್ಮ ಪ್ರದೇಶಗಳಲ್ಲಿ ಪೊಲೀಸರು ಕರ್ತವ್ಯ ನಿರ್ವಹಿಸುತ್ತಿದ್ದಾರೆ.
ಮೈಸೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಟೀಕಿಸಿ, ಬಾಯಿಗೆ ಬಂದಂತೆ ನಿಂದಿಸಿ ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಹರಿಬಿಟ್ಟಿದ್ದ ಕೇಂದ್ರ ಕಾರಾಗೃಹ ವೀಕ್ಷಣೆಗಾರನನ್ನು ಅಮನತುಗೊಳಿಸಿ ಆದೇಶ ಹೊರಡಿಸಲಾಗಿದೆ. ಕೇಂದ್ರ ಕಾರಾಗೃಹ ವೀಕ್ಷಣೆಗಾರ ಎಚ್.ಎನ್.ಮಧು ಕುಮಾರ್ ಅವರನ್ನು ಸೇವೆಯಿಂದ ಅಮಾನತುಗೊಳಿಸಿ ಕಾರಾಗೃಹದ ಮುಖ್ಯ ಅಧೀಕ್ಷಕ ಪಿ.ಎಸ್.ರಮೇಶ್ ಆದೇಶಿಸಿದ್ದಾರೆ. ಬೆಳಗಾವಿಯಲ್ಲಿ ಪೊಲೀಸ್ ಅಧಿಕಾರಿ ವಿರುದ್ಧ ಕೈ ಎತ್ತಿದ ಬಗ್ಗೆ ಏ.28 ರಂದು ಎಚ್.ಎನ್.ಮಧು ಕುಮಾರ್ ವಿಡಿಯೊ ಮಾಡಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು.ಆ ವಿಡಿಯೊ ಸೋಮವಾರ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹರಿದಾಡಿದ್ದು, ತಕ್ಷಣ ಅವರನ್ನು ಅಮಾನತುಗೊಳಿಸಲಾಗಿದೆ. ಜತೆಗೆ ಇಲಾಖಾ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದಾರೆ ಎಂದು ರಮೇಶ್ ತಿಳಿಸಿದರು. ಅಲ್ಲದೆ ನಿನ್ನೆ ತಾನೆ ಉಡುಪಿಯಲ್ಲಿ ಹೋಂ ಗಾರ್ಡ್ ಆಗಿ ಕಾರ್ಯ ನಿರ್ವಹಿಸುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಈತ ಸಮಾಜಕ ಜಾಲತಾಣದಲ್ಲಿ ಸಿಎಂ ಸಿದ್ದರಾಮಯ್ಯನನ್ನು ಕೊಂದರೆ ಮಾತ್ರ ಹಿಂದೂಗಳಿಗೆ ನೆಮ್ಮದಿ ಎಂದು ಪೋಸ್ಟ್ ಒಂದಕ್ಕೆ ಕಮೆಂಟ ಹಾಕಿದ್ದ. ಈ ಒಂದು ಕಮೆಂಟ್ ಆಧರಿಸಿ ಕಾರ್ಕಳ ಪೊಲೀಸರು…
ಉಡುಪಿ: ರಾಜ್ಯ ಸರ್ಕಾರದ ಕಾನೂನು ವ್ಯವಸ್ಥೆ ಸಂಪೂರ್ಣ ವಿಫಲವಾಗಿದೆ. ಪಾಕಿಸ್ತಾನ ಜಿಂದಾಬಾದ್ ಎನ್ನುವವರ ವಿರುದ್ಧ ಪ್ರಕರಣ ದಾಖಲಾಗುವುದಿಲ್ಲ. ಗೃಹ ಸಚಿವರಿಗೆ ಬೆದರಿಕೆ ಹಾಕಿದವರಿಗೂ ಏನೂ ಮಾಡಲ್ಲ. ಹೀಗಾಗಿ ಕಾಶ್ಮೀರದ ಭಯೋತ್ಪಾದನಾ ಚಟುವಟಿಕೆಗೂ ಮಂಗಳೂರಿನಲ್ಲಿ ನಡೆದ ದುಷ್ಕೃತ್ಯಕ್ಕೂ ವ್ಯತ್ಯಾಸವಿಲ್ಲ. ಜನರ ರಕ್ಷಣೆಯಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಪಲವಾಗಿದೆ ಎಂದು ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಆರೋಪಿಸಿದರು. ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಅವರು ಸಿಎಂ ಸಿದ್ಧರಾಮಯ್ಯನವರ ಆಡಳಿತ ಇದ್ದಾಗಲೂ ಹಿಂದೂಗಳ ಸರಣಿ ಕೊಲೆ ನಡೆಯುತ್ತಿದೆ. ಮುಸ್ಲಿಂ ಸಮುದಾಯದಿಂದ ಸಭೆಯಲ್ಲಿ ಗಲಾಟೆ ಮಾಡಿದವರ ಮೇಲೆ ಏನು ಕ್ರಮ ವಹಿಸಿಕೊಂಡಿದ್ದಾರೆ ಎಂದು ಪ್ರಶ್ನಿಸಿದರು. ಕಾಂಗ್ರೆಸ್ ನಾಯಕರಿಗೆ ಸುಹಾಸ್ ಮನೆಗೆ ಹೋಗಲು ತಡೆಯೊಡ್ಡಿದ್ದಾರೆ. ಮುಸ್ಲಿಂ ಮುಖಂಡರು ಸಾಮೂಹಿಕ ರಾಜೀನಾಮೆಯ ಎಚ್ಚರಿಕೆ ಕೂಡಾ ನೀಡಿದ್ದಾರೆ. ಒಟ್ಟಿನಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಇದೆಯೋ, ಸತ್ತಿದೆಯೋ ತಿಳಿಯುತ್ತಿಲ್ಲ ಎಂದು ಕಿಡಿಕಾರಿದರು.
ಮಂಗಳೂರು: ಸುಹಾಸ್ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಆರೋಪಿಗಳು ಕೃತ್ಯ ಎಸಗಿ ಕಾರಿನಲ್ಲಿ ಪರಾರಿಯಾಗುತ್ತಿದ್ದಾಗ ಸ್ಥಳದಲ್ಲಿದ್ದ ಇಬ್ಬರು ಬುರ್ಖಾ ಧರಿಸಿದ ಮಹಿಳೆಯರನ್ನು ಪೊಲೀಸರು ವಿಚಾರಣೆ ನಡೆಸಿದ್ದಾರೆ. ಈ ಮಹಿಳೆಯರು ಘಟನೆಯಲ್ಲಿ ನೇರವಾಗಿ ಭಾಗಿಯಿಲ್ಲ ಎಂದು ಪ್ರಾಥಮಿಕ ವಿಚಾರಣೆಯಲ್ಲಿ ತಿಳಿದುಬಂದಿದೆ. ಅವರನ್ನು ಪ್ರಕರಣದ ಎರಡನೇ ಆರೋಪಿ ನಿಯಾಜ್‌ನ ಚಿಕ್ಕಮ್ಮ ಮತ್ತು ಸೋದರ ಸಂಬಂಧಿ ಎಂದು ಗುರುತಿಸಲಾಗಿದೆ.ಪೊಲೀಸರ ಪ್ರಕಾರ, ಈ ಮಹಿಳೆಯರು ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಸಂಬಂಧಿಯೊಬ್ಬರನ್ನು ಭೇಟಿ ಮಾಡಲು ಬಜ್ಪೆಯ ಫ್ಲಾಟ್‌ಗೆ ಬಂದಿದ್ದರು. ಮನೆಗೆ ಹಿಂತಿರುಗುವಾಗ, ಅವರು ಘಟನಾ ಸ್ಥಳದ ಸಮೀಪದ ಹೋಟೆಲ್‌ನಿಂದ ಊಟದ ಪಾರ್ಸೆಲ್ ಅನ್ನು ತೆಗೆದುಕೊಂಡಿದ್ದಾರೆ. ಆಗ ಅವರು ನಿಯಾಜ್ ರಸ್ತೆಯಲ್ಲಿ ಓಡುತ್ತಿರುವುದನ್ನು ಗಮನಿಸಿದ್ದಾರೆ. ಸ್ಥಳದಲ್ಲಿ ಅಪಘಾತವಾದಂತೆ ಕಂಡುಬಂದ ಕಾರಣ ನಿಯಾಜ್‌ನನ್ನು ಸಂಪರ್ಕಿಸಿದ್ದಾಗಿ ವಿಚಾರಣೆ ವೇಳೆ ಮಹಿಳೆಯರು ಪೊಲೀಸರಿಗೆ ತಿಳಿಸಿದ್ದಾರೆ.ಇನ್ನು ಈ ಬಗ್ಗೆ ತನಿಖೆ ಮುಂದುವರೆದಿದೆ.
ಮಂಗಳೂರು: ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆಯಲ್ಲಿ ಪೊಲೀಸರು ನೇರವಾಗಿ ಭಾಗಿಯಾಗಿದ್ದಾರೆ ಎಂದು ಮೂಡಬಿದಿರೆ ಶಾಸಕ ಉಮಾನಾಥ ಕೊಟ್ಯಾನ್ ಗಂಭೀರ ಆರೋಪ ಮಾಡಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಆಯುಧ ಇಟ್ಟುಕೊಳ್ಳುವುದು ತಪ್ಪು, ಆದರೆ ಸುಹಾಸ್ ಆತ್ಮರಕ್ಷಣೆಗಾಗಿ ವಾಹನದಲ್ಲಿ ಇಟ್ಟುಕೊಂಡಿದ್ದ ಆಯುಧವನ್ನು ಪೊಲೀಸರು ಒತ್ತಾಯದಿಂದ ಖಾಲಿ ಮಾಡಿಸಿದ್ದರು. ಪೊಲೀಸರ ಸಹಕಾರದಲ್ಲಿ ಈ ಕೊಲೆ ನಡೆದಿದೆ. ಆರೋಪಿಗಳೇ ಪೊಲೀಸರಿಗೆ ಶರಣಾಗಿದ್ದಾರೆ. ಬಂಧನವಾದ ಬಳಿಕ ಪೊಲೀಸರು ಆರೋಪಿಗಳ ಮೈಮುಟ್ಟಿಲ್ಲ. ಸುಹಾಸ್ ಹತ್ಯೆ ನಡೆಯುವ ವೇಳೆ ಆರೋಪಿಗಳಿಗೆ ರಕ್ಷಣೆ ಕೊಡುವ ರೀತಿಯಲ್ಲಿ 25 ಜನರು ಸುತ್ತ ಕೋಟೆ ನಿರ್ಮಿಸಿದ್ದರು. ಸ್ಥಳೀಯ ಕೆಲವರ ಸಹಕಾರದಲ್ಲಿ ಈ ಹತ್ಯೆ ನಡೆದಿದೆ. ಹತ್ಯೆಗೂ ಮುನ್ನ ಪೊಲೀಸರು ಮತ್ತು ಆರೋಪಿಗಳ ನಡುವೆ ಒಡಂಬಡಿಕೆ ನಡೆದಿರುವ ಸಾಧ್ಯತೆ ಇದೆ. ಹೀಗಾಗಿ, ಪೊಲೀಸ್ ವಾಹನ ಸ್ಥಳಕ್ಕೆ ಬಂದರೂ, ಸುಹಾಸ್ ರಕ್ಷಣೆ ಮಾಡಿಲ್ಲ. ಸ್ಥಳೀಯರು ಆತನನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ’ ಎಂದರು. ಬಜಪೆ, ಸುರತ್ಕಲ್, ಪಣಂಬೂರು ಪೊಲೀಸ್ ಠಾಣೆಯ ಕೆಲ ಪೊಲೀಸರ ಮೊಬೈಲ್ ಫೋನ್ ಕರೆಗಳನ್ನು ಪರಿಶೀಲಿಸಿದರೆ ಎಲ್ಲ…
ಮಂಗಳೂರು: ಮಂಗಳೂರಿನ ಪಣಂಬೂರಿನಲ್ಲಿ ಮೂರು ವರ್ಷ ಪ್ರಾಯದ ಮಗುವಿನ ಮೇಲೆ 50ರ ಹರೆಯದ ವ್ಯಕ್ತಿ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪ ಕೇಳಿಬಂದಿದೆ. ಉತ್ತರ ಭಾರತದ ದಂಪತಿಯ 3 ವರ್ಷ ಪ್ರಾಯದ ಮಗುವಿನ ಮೇಲೆ ಅಶೋಕ್ ಖಾರ್ವಿ (50) ಎಂಬಾತ ಲೈಂಗಿಕ ದೌರ್ಜನ್ಯ ಎಸಗಿರುವ ಕುರಿತು ಎಫ್‌ಐಆರ್ ದಾಖಲಾಗಿದೆ. ಪಣಂಬೂರಿನ ಬೆಂಗ್ರೆಯಲ್ಲಿ ಘಟನೆ ನಡೆದಿದ್ದು, ಭಾನುವಾರ ದಂಪತಿ ಮನೆಯಲ್ಲಿ ಇಲ್ಲದ ವೇಳೆ ಅರೋಪಿ ಮಗುವನ್ನು ತನ್ನ ಮನೆಗೆ ಕರೆದುಕೊಂಡು ದೌರ್ಜನ್ಯ ಎಸಗಿದ್ದಾನೆ ಎನ್ನಲಾಗಿದೆ. ದಂಪತಿ ಸಂಜೆ ಮನೆಗೆ ಹಿಂದಿರುಗಿದ ವೇಳೆ ಮಗು ಕಾಣಿಸಿಲ್ಲ. ಹುಡುಕಾಡಿದಾಗ ಪಕ್ಕದ ಅಶೋಕ್ ಖಾರ್ವಿ ಮನೆಯಲ್ಲಿ ಮಗು ಅಳುತ್ತಿರುವುದು ಕಂಡುಬಂದಿದೆ. ದಂಪತಿ ನೀಡಿದ ದೂರಿನ ಪ್ರಕಾರ ಪೊಲೀಸರು ರಕ್ತದ ಮಾದರಿಯನ್ನು ವಿಧಿವಿಜ್ಞಾನ ಪರೀಕ್ಷೆಗೆ ಕಳುಹಿಸಿದ್ದಾರೆ. ಲೈಂಗಿಕ ದೌರ್ಜನ್ಯ ದೃಢಪಟ್ಟರೆ ಪೋಕ್ಸೊ ಕೇಸ್ ದಾಖಲಾಗಲಿದೆ.
ಮಂಗಳೂರು: ರೌಡಿ ಶೀಟರ್, ಹಿಂದೂ ಸಂಘಟನೆ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು 8 ಆರೋಪಿಗಳನ್ನು ಬಂಧಿಸಿದ್ದು, ಮೇ.9 ರವರೆಗೆ ಕಸ್ಟಡಿಗೆ ಪಡೆದುಕೊಂಡಿದ್ದಾರೆ. ರೌಡಿಶೀಟರ್, ಹಿಂದೂ ಸಂಘಟನೆ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ 8 ಮಂದಿ ಆರೋಪಿಗಳನ್ನು ಮೇ 9 ರವರೆಗೆ ಪೊಲೀಸ್ ಕಸ್ಟಡಿಗೆ ನೀಡಿ ಜಿಲ್ಲಾ ಸತ್ರ ನ್ಯಾಯಾಲಯ ಆದೇಶಿಸಿದೆ. ಪೊಲೀಸರು ಆರೋಪಿಗಳನ್ನು ಕರೆತಂದು ಮಹಜರು ಪ್ರಕ್ರಿಯೆ ನಡೆಸಿದ್ದಾರೆ. ತಲೆಮರೆಸಿಕೊಂಡಿರುವ ಇಬ್ಬರು ಆರೋಪಿಗಳಿಗೆ ಶೋಧ ನಡೆಸುತ್ತಿದ್ದಾರೆ. ಮಂಗಳೂರಿನಲ್ಲಿ ಸುಹಾಸ್ ಶೆಟ್ಟಿ ಕೊಲೆ ಮಾಡಿದ ಬಳಿಕ ಪರಾರಿಯಾಗಿದ್ದ ಹಂತಕರು ಮಂಗಳೂರಿನಲ್ಲಿಯೇ ಅವಿತುಕೊಂಡಿದ್ದ ಬಗ್ಗೆ ಮಾಹಿತಿ ಪಡೆದ ಪೊಲೀಸರು 8 ಆರೋಪಿಗಳನ್ನು ಬಂಧಿಸಿದ್ದರು.
ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದ ಜೋಡುಸ್ಥಾನ ನಿವಾಸಿ ಒಂಭತ್ತನೇ ತರಗತಿ ಮುಗಿಸಿ ಹತ್ತನೇ ತರಗತಿ ಹೋಗಬೇಕಾದ ವಿದ್ಯಾರ್ಥಿಯೊಬ್ಬ ಹೃದಯಾಘಾತಕ್ಕೆ ಒಳಗಾಗಿ ಮೃತಪಟ್ಟ ಘಟನೆ ಮೇ 4ರಂದು ಸಂಭವಿಸಿದೆ. ಧರ್ಮಸ್ಥಳದ ಖಾಸಗಿ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿರುವ ಗೋವಿಂದ ಗೌಡರ ಪುತ್ರ ಪ್ರಥಮ್ (16) ಮೃತ ಬಾಲಕ. ಮೇ 4ರಂದು ಮಧ್ಯಾಹ್ನ ಮನೆಯ ಸಮೀಪ ಆಟವಾಡುತ್ತಿದ್ದ ವೇಳೆ ಎದೆನೋವು ಕಾಣಿಸಿಕೊಂಡಿತ್ತು. ಕೂಡಲೇ ಬಾಲಕನನ್ನು ಉಜಿರೆ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋದರೂ, ಫಲಕಾರಿಯಾಗಿಲ್ಲ. ಈ ಬಗ್ಗೆ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಂಗಳೂರು: ಸಾಮಾಜಿಕ ಜಾಲತಾಣದಲ್ಲಿ ವಿಶ್ವ ಹಿಂದೂ ಪರಿಷದ್ ಮುಖಂಡ ಶರಣ್ ಪಂಪ್ವೆಲ್ ಅವರಿಗೆ ಬೆದರಿಕೆ ಹಾಕಿರುವ ಕುರಿತು ಪ್ರಕರಣ ದಾಖಲಾಗಿದೆ. ದಿನಾಂಕ:02-05-2025 ರಂದು ಸಾಮಾಜಿಕ ಜಾಲತಾಣದಲಿ.. TV5 ಕನ್ನಡ ಫೆಸ್ ಬುಕ್ ಖಾತೆಯಲ್ಲಿ “SuhasShettycase: ಫಾಝಿಲ್ ಹತ್ಯೆಗೆ ಪ್ರತೀಕಾರವಾಗಿ ಸುಹಾಸ್ ಶೆಟ್ಟಿ ಕೋ…?’ ಎಂಬ ಶಿರ್ಷಿಕೆಯಲ್ಲಿ ಪ್ರಸಾರವಾಗುತ್ತಿದ್ದ ನ್ಯೂಸ್ ನಲ್ಲಿ ಯಾವುದೋ ನಕಲಿ ಖಾತೆಯ ಮುಖಾಂತರ “Next Target Sharanpumpwell. Sharan b ready to die” ಎಂಬುದಾಗಿ ಶರಣ್ ಪಂಪ್ವೆಲ್ ಕುರಿತು ಸಂದೇಶ ಹಾಕಿದ್ದು, ಶರಣ್ ಅವರು ಕದ್ರಿ ಪೊಲೀಸ್ ಠಾಣೆಗೆ ದೂರು ನೀಡಿದ್ಧಾರೆ. ಶರಣ್ ಪಂಪ್ವೆಲ್ ಅವರ ದೂರಿನಂತೆ ಕದ್ರಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.









