Author: main-admin

ಮಂಗಳೂರು: ಪೊಲೀಸರ ಮೇಲೆ ಹಲ್ಲೆ ಮಾಡಿ ತಪ್ಪಿಸಿಕೊಳ್ಳಲು ಯತ್ನಿಸಿದ ಮಂಗಳೂರಿನ ಇಬ್ಬರು ಕುಖ್ಯಾತ ದರೋಡೆಕೋರರ ಕಾಲಿಗೆ ಸಿಸಿಬಿ ಪೊಲೀಸರು ಗುಂಡಿಕ್ಕಿದ ಘಟನೆ ಹುಬ್ಬಳ್ಳಿ ಸಮೀಪ ಭಾನುವಾರ ಸಂಭವಿಸಿದೆ.ಮಂಗಳೂರಿನ ಕುರ್ತಾ ಅಲಿಯಾಸ್ ಭರತ್ ಕುಮಾರ್ ಹಾಗೂ ಫಾರೂಕ್ ಅಲಿಯಾಸ್ ಟೊಮೆಟೊ ಫಾರೂಕ್ ಕಾಲಿಗೆ ಗುಂಡೇಟು ತಗುಲಿದೆ. ಭರತ್ ಮತ್ತು ಫಾರೂಕ್ ಕಾರು ಅಡ್ಡಗಟ್ಟಿ ದರೋಡೆ ಮಾಡುತ್ತಿದ್ದರು. ಇವರ ಗ್ಯಾಂಗ್‌ನಲ್ಲಿ 15 ಜನರಿದ್ದಾರೆ. ಹುಬ್ಬಳ್ಳಿಯ ರೈಲ್ವೆ ನಿಲ್ದಾಣದ ಹತ್ತಿರ ಮಹಾರಾಷ್ಟ್ರದ ಸಾಂಗ್ಲಿಯ ರಾಹುಲ್ ಸುರ್ವೆ ಎಂಬವರ ಕಾರು ಅಡ್ಡಗಟ್ಟಿ ದರೋಡೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಭರತ್‌ ಕುಮಾರ್‌ ಮತ್ತು ಫಾರೂಕ್‌ನನ್ನು ಹುಬ್ಬಳ್ಳಿಯ ಸಿಸಿಬಿ ಪೊಲೀಸರು ಮಂಗಳೂರಿನಿಂದ ಬಂಧಿಸಿ ಕರೆದುಕೊಂಡು ಹೋಗಿದ್ದರು. ನವೆಂಬರ್ 8ರಂದು ಕಾರು ಅಡ್ಡಗಟ್ಟಿ ಚಾಲಕನಿಗೆ ಬೆದರಿಕೆಯೊಡ್ಡಿ ಫಾರೂಕ್ ಹಾಗೂ ಭರತ್ ಗ್ಯಾಂಗ್ ದರೋಡೆ ಮಾಡಿತ್ತು.ಭಾನುವಾರ ಸ್ಥಳ ಮಹಜರು ಮಾಡುವ ವೇಳೆ ದರೋಡೆಕೋರರು ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿ ಪರಾರಿಯಾಗಲು ಯತ್ನಿಸಿದ್ದರು. ಈ ವೇಳೆ ಆರೋಪಿಗಳ ಕಾಲಿಗೆ ಸಿಸಿಬಿ ಪೊಲೀಸರು ಗುಂಡು ಹಾರಿಸಿದ್ದಾರೆ.…

Read More

ಬಂಟ್ವಾಳ : ತುಂಬೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ 1.25 ಲಕ್ಷ ರೂಪಾಯಿ ಮೌಲ್ಯದ ಬೆಳ್ಳಿ ಆಭರಣಗಳನ್ನು ಕಳವು ಮಾಡಿದ್ದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳಿಂದ ಕಳ್ಳತನ ಮಾಡಿದ ಆಭರಣಗಳು ಮತ್ತು ಕೃತ್ಯಕ್ಕೆ ಬಳಸಿದ್ದ ಕಾರನ್ನು ವಶಪಡಿಸಿಕೊಳ್ಳಲಾಗಿದೆ. ಬಂಧಿತ ಆರೋಪಿಗಳು ಕೇರಳ ಮೂಲದ ಕೊಲ್ಲಂ ಜಿಲ್ಲೆಯ ಆಲಪ್ಪಾಡ್‌ನ ಪ್ರಕಾಶ್ ಬಾಬು ಅಲಿಯಾಸ್ ಮೊಹಮ್ಮದ್ ನಿಯಾಜ್ (46), ಕಾಸರಗೋಡು ಜಿಲ್ಲೆಯ ಕೋಟಂಕರ ಮೂಲದ ಬಶೀರ್ ಕೆ ಪಿ ಅಲಿಯಾಸ್ ಆಕ್ರಿ ಬಶೀರ್ (44); ಮತ್ತು ಪುದು ಗ್ರಾಮದ ಎಫ್ ಜೆ ಮೊಹಮ್ಮದ್ ಇಸ್ಮಾಯಿಲ್ ಎಂದು ಗುರುತಿಸಲಾಗಿದೆ. ಆರೋಪಿಗಳು ನವೆಂಬರ್ 4 ರಂದು ದೇವಸ್ಥಾನದ ಮುಂಬಾಗಿಲು ಮುರಿದು ಆಭರಣಗಳ ಜೊತೆಗೆ ಕ್ಯಾಮೆರಾದ ಡಿವಿಆರ್ ಅನ್ನು ಕದ್ದೊಯ್ದಿದ್ದರು. ದಕ್ಷಿಣ ಕನ್ನಡ ಜಿಲ್ಲೆಯ ಎಸ್ಪಿ ಯತೀಶ್ ಎನ್ ನಿರ್ದೇಶನದಲ್ಲಿ ಬಂಟ್ವಾಳ ಡಿವೈಎಸ್ಪಿ ವಿಜಯಪ್ರಸಾದ್ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಬಂಟ್ವಾಳ ಗ್ರಾಮಾಂತರ ಠಾಣಾ ಇನ್ಸ್‌ಪೆಕ್ಟರ್ ಶಿವಕುಮಾರ್, ಪಿಎಸ್‌ಐಗಳಾದ ನಂದಕುಮಾರ್, ಹರೀಶ್, ಲೋಲಾಕ್ಷ, ಇತರ ಸಿಬ್ಬಂದಿಗಳು ಪಾಲ್ಗೊಂಡಿದ್ದರು.

Read More

ಮುಲ್ಕಿ : ಡಿಜಿಟಲ್ ಅರೆಸ್ಟ್ ಎಂದು ನಂಬಿಸಿ ಲಕ್ಷಾಂತರ ರೂಪಾಯಿ ಹಣವನ್ನು ತಮ್ಮ ಖಾತೆಗೆ ವರ್ಗಾಹಿಸಿಕೊಂಡ ಪ್ರಕರಣದಲ್ಲಿ ಭಾಗಿಯಾದ ಅಂತರ್ ರಾಜ್ಯ ಸೈಬರ್ ಕ್ರೈಂ ಆರೋಪಿಯನ್ನು ತಾಂತ್ರಿಕ ಮಾಹಿತಿ ಮತ್ತು ದಾಖಲಾತಿಗಳ ಆಧಾರದಲ್ಲಿ ಮುಲ್ಕಿ ಪೊಲೀಸರು ಯಶಸ್ವಿಯಾಗಿದ್ದಾರೆ. ಆರೋಪಿಯನ್ನು ಕೇರಳ ರಾಜ್ಯದ ಅಲಪುಝು,ಪಝವೀಡು,ವಾಸುಪುತ್ತೇಚಿರ, ಪಲ್ಲತುರುತಿ ನಿವಾಸಿ ಮುಹಮ್ಮದ್ ಜುನೈತ್ ಆರ್(26) ಎಂದು ಗುರುತಿಸಲಾಗಿದೆ. ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯ ಐಕಳ ಗ್ರಾಮದ ಆಶಿಕ್ ಟಿ.ಹೆಚ್. ಎಂಬವರನ್ನು ಮೇ 6 ರಿಂದ7 ರವರೆಗೆ ಯಾರೋ ವಂಚಕರು ಮೊಬೈಲ್ ನಲ್ಲಿ ವಿಡಿಯೋ ಕರೆ ಮೂಲಕ ಡಿಜಿಟಲ್ ಅರೆಸ್ಟ್ ಎಂದು ನಂಬಿಸಿ Fedex ಫೆಡೆಕ್ಸ್ ಕಂಪನಿಯವರಿಗೆ ತನ್ನ ಹೆಸರಿನಲ್ಲಿ ಕಳುಹಿಸಿದ ಪಾರ್ಸಲ್ ನಲ್ಲಿ ಮಾದಕ ವಸ್ತುಗಳು ಮತ್ತು ಇತರ ಸೊತ್ತುಗಳು ಇದೆ ತಿಳಿಸಿ ಈ ಬಗ್ಗೆ ಮುಂಬೈ ಕ್ರೈಂ ಬ್ರಾಂಚ್ ನವರು ತನಿಖೆ ನಡೆಸುವುದಾಗಿ ಹೇಳಿ ಡಿಜಿಟಲ್ ಅರೆಸ್ಟ್ ಮಾಡಿ ಬ್ಯಾಂಕ್ ಅಕೌಂಟ್ ಗಳ ಮಾಹಿತಿ ಪಡೆದು ಆಶಿಕ್ ಟಿ.ಹೆಚ್.ರವರಬ್ಯಾಂಕ್ ಅಕೌಂಟ್ ನಿಂದ 2,19,972 ರೂ…

Read More

ಪುತ್ತೂರು: ಸಾಲ್ಮರ ಕೆರೆಮೂಲೆಯಲ್ಲಿ ಕೂಲಿ ಕಾರ್ಮಿಕನ ಮೃತದೇಹವನ್ನು ರಸ್ತೆಬದಿಯಲ್ಲಿ ಇರಿಸಿ ಹೋಗಿರುವ ಪ್ರಕರಣಕ್ಕೆ ಸಂಬಂಧಿಸಿದ ಪ್ರಮುಖ ಆರೋಪಿ ಹೆನ್ರಿತಾವೋ ಸಹಿತ ಮೂವರನ್ನು ಪುತ್ತೂರು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳ ವಿರುದ್ಧ ದಲಿತ ದೌರ್ಜನ್ಯ ಪ್ರಕರಣ ದಾಖಲಾಗಿತ್ತು. ಓರ್ವಆರೋಪಿಯನ್ನು ಈ ಹಿಂದೆಯೇ ಬಂದಿಸಿದ್ದರು. ತನ್ನೊಂದಿಗೆ ಕೆಲಸಕ್ಕೆ ಬಂದಿದ್ದ ಕೂಲಿ ಕಾರ್ಮಿಕ ಶಿವಪ್ಪ ಅವರ ಮೃತದೇಹವನ್ನು ಪಿಕಪ್ ವಾಹನದಲ್ಲಿ ತಂದು ಅವರ ಮನೆಯ ಮುಂದಿನ ರಸ್ತೆ ಸಮೀಪ ಇರಿಸಿಹೋದ ಘಟನೆ ನ.16ರಂದು ಸಾಲ್ಮರ ಕೆರೆಮೂಲೆಯಲ್ಲಿ ನಡೆದಿತ್ತು. ಈ ಹಿನ್ನೆಲೆಯಲ್ಲಿ ಶಿವಪ್ಪ ಅವರು ಕೆಲಸ ಮಾಡುತ್ತಿದ್ದ ಸಂಸ್ಥೆಯ ಮಾಲಕಹೆನ್ರಿ ತಾವೋ ಅವರ ಸಹಿತ ಮೂವರ ವಿರುದ್ಧ ಪ್ರಕರಣ ದಾಖಲಾಗಿತ್ತು. ತನಿಖೆ ನಡೆಸಿದ ಪೊಲೀಸರು ಸ್ಪ್ಯಾನಿ ಮೇಸ್ತ್ರಿ ಎಂಬವರನ್ನು ಆರಂಭದಲ್ಲಿಬಂಧಿಸಿದ್ದರು. ಈ ನಡುವೆ ಪ್ರಕರಣಕ್ಕೆ ಸಂಬಂಧಿಸಿ ಹೆನ್ರಿ ತಾವೋ ಅವರ ಪುತ್ರನವಿರುದ್ಧವೂ ಆದಿ ದ್ರಾವಿಡ ಸಂಘಟನೆ ಪೊಲೀಸರಿಗೆ ದೂರು ನೀಡಿತ್ತು. ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ಇದೀಗ ಹೆನ್ರಿ ತಾವೋ, ಅವರ ಪುತ್ರಕಿರಣ್ ಮತ್ತು ಸಹಾಯಕ ಪ್ರಕಾಶ್ ಎಂಬವರನ್ನು ಬಂಧಿಸಿದ್ದಾರೆ.

Read More

ಉಳ್ಳಾಲ: ಆಟೋ ರಿಕ್ಷಾ ಒಂದು ನಿಯಂತ್ರಣ ತಪ್ಪಿ ಮರಕ್ಕೆ ಢಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಮಂಗಳೂರು ಹೊರವಲಯದ ಉಳ್ಳಾಲ ಕೊಣಾಜೆ ಪುಳಿಂಚಾಡಿ ಇಳಿಜಾರು ಪ್ರದೇಶದಲ್ಲಿ ಭಾನುವಾರ ಸಂಜೆ ಸಂಭವಿಸಿದೆ. ಆಟೋದಲ್ಲಿದ್ದ ಮತ್ತಿಬ್ಬರು ಗಂಭೀರಗಾಯಗೊಂಡಿದ್ದಾರೆ. ಕುಂಬಳೆ ಮಂಜತ್ತಡ್ಕ ನಿವಾಸಿ ನಾರಾಯಣ ಗಟ್ಟಿ (50) ಮೃತ ದುರ್ದೈವಿಯಾಗಿದ್ದಾರೆ. ಸಂಬಂಧಿಕರೊಬ್ಬರ ಆರೋಗ್ಯ ವಿಚಾರಿಸಲೆಂದು ಕೊಣಾಜೆ ಪುಳಿಂಚಾಡಿಯ ಕಲ್ಕಾರ್ ಎಂಬಲ್ಲಿಗೆ ನಾರಾಯಣ ಗಟ್ಟಿ ಅವರು ಆಟೋ ಒಂದರಲ್ಲಿ ತೆರಳಿದ್ದರು. ಅಲ್ಲಿ ಇಳಿಜಾರು ಪ್ರದೇಶದಲ್ಲಿ ಆಟೋ ಇಳಿಯುತ್ತಿದ್ದಂತೆ ಬ್ರೇಕ್ ವೈಫಲ್ಯಕ್ಕೀಡಾಗಿ ಮರವೊಂದಕ್ಕೆ ಢಿಕ್ಕಿ ಹೊಡೆದಿದೆ. ಈ ವೇಳೆ ಗಂಭೀರ ಗಾಯಗೊಂಡ ನಾರಾಯಣ ಗಟ್ಟಿ ಅವರುಸ್ಥಳದಲ್ಲೇ ಮೃತಪಟ್ಟಿದ್ದಾರೆ. ಆಟೋದಲ್ಲಿದ್ದ ಸಂಬಂಧಿ ಮಹಿಳೆ, ಅವರ ಪುತ್ರ ಹಾಗೂ ಇನ್ನೋರ್ವರಿಗೆ ಗಾಯಗಳಾಗಿವೆ. ನಾರಾಯಣ ಗಟ್ಟಿ ಅವರು ಪತ್ನಿ ಹಾಗೂ ಇಬ್ಬರು ಪುತ್ರರನ್ನು ಅಗಲಿದ್ದಾರೆ. ಮಂಗಳೂರು ದಕ್ಷಿಣ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಕಾರ್ಕಳ: ಶಿರ್ಲಾಲು ನಿಡ್ಡೆಪಾದೆ ಬಳಿ ಕಾರೊಂದು ಅಪಘಾತಕ್ಕೀಡಾದ ಘಟನೆ ಸಂಭವಿಸಿದೆ. ಗದಗದಿಂದ ಧರ್ಮಸ್ಥಳದ ಕಡೆಗೆ ಸಾಗುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಕಾರು ಮರಕ್ಕೆ ಡಿಕ್ಕಿ ಹೊಡೆದಿದೆ ಎಂದು ತಿಳಿದು ಬಂದಿದೆ. ಕಾರಿನಲ್ಲಿ 2 ಮಹಿಳೆಯರು ಹಾಗೂ 2 ಪುರುಷರು ಪ್ರಯಾಣಿಸುತ್ತಿದ್ದರು. ಅಪಘಾತದ ಪರಿಣಾಮ ಕಾರು ಪಲ್ಟಿಯಾಗಿ ನಜ್ಜುಗುಜ್ಜಾಗಿದೆ. ಓರ್ವರಿಗೆ ಗಾಜ್ರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಗಂಭೀರ ಗಾಯಗೊಂಡಿದ್ದ ಇನ್ನೋರ್ವರನ್ನು ಮಣಿಪಾಲದ ಕೆಎಂಸಿ ಆಸ್ಪತ್ರೆಯಲ್ಲಿ ದಾಖಲಿಸಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.

Read More

ಉಳ್ಳಾಲ: ಇಲ್ಲಿನ ಸೋಮೇಶ್ವರದ ರುದ್ರಬಂಡೆಯಿಂದ ವಿದ್ಯಾರ್ಥಿನಿಯೋರ್ವಳು ಸಮುದ್ರಕ್ಕೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ. ಮಂಗಳೂರಿನ ಕಾರ್‌ಸ್ಟ್ರೀಟ್ ಕಾಲೇಜಿನಲ್ಲಿ ಪದವಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿ, ಉಳ್ಳಾಲದ ಮಾಡೂರು ಎಂಬಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದಳು. ರವಿವಾರ ಈಕೆ ಸೋಮೇಶ್ವರದ ರುದ್ರಬಂಡೆಯ ಮೇಲಿನಿಂದ ಸಮುದ್ರಕ್ಕೆ ಹಾರಿದ್ದಾಳೆ. ತಕ್ಷಣ ಅಲ್ಲಿಯೇ ಇದ್ದ ಸ್ಥಳೀಯ ವೀನುಗಾರರೋರ್ವರು ಸಮುದ್ರಕ್ಕೆ ಹಾರಿ ಆಕೆಯನ್ನ ರಕ್ಷಿಸಿದ್ದಾರೆ. ಬಳಿಕ ಟಯರ್ ಟ್ಯೂಬ್‌ ಮೂಲಕ ಬಂದ ಮತ್ತೋರ್ವ ಮೀನುಗಾರ ಆಕೆಯನ್ನು ಮೇಲಕ್ಕೆತ್ತಿ ರಕ್ಷಿಸಿದ್ದಾರೆ. ಯುವತಿ ಪ್ರಾಣಾಪಾಯದಿಂದ ಪಾರಾಗಿದ್ದು, ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ. ಈ ಬಗ್ಗೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಕಾರ್ಕಳ:  ಜೇಸಿಸ್ ವಿದ್ಯಾ ಸಂಸ್ಥೆಯ ಬಸ್ ಮತ್ತು ಬೈಕ್ ನಡುವೆ ಇಂದು ಬೆಳಿಗ್ಗೆ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟಿದ್ದಾನೆ ಎನ್ನಲಾಗಿದೆ.  ಶಾಲಾ ಬಸ್ ಬಜಗೋಳಿಯಿಂದ ಕಾರ್ಕಳಕ್ಕೆ ತೆರಳುತ್ತಿದ್ದ ಸಂದರ್ಭ ಜೋಡುಕಟ್ಟೆಯ ಬಳಿ ಅಪಘಾತ ಸಂಭವಿಸಿದ್ದು, ಅಪಘಾತದಲ್ಲಿ ಬೈಕ್ ಸವಾರ ಅಜಿತ್ (24) ಮೃತಪಟ್ಟಿದ್ದಾನೆ. ಮಕ್ಕಳಿಗೆ ಯಾವುದೇ ಪ್ರಾಣಾಪಾಯವಾಗಿಲ್ಲ‌.ಘಟನೆ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Read More

ಪುತ್ತೂರು: ಚಿಕ್ಕಮುಟ್ನೂರು ಗ್ರಾಮದ ಸಾಲ್ಮರ ಎಂಬಲ್ಲಿ ಮಾದಕದ್ರವ್ಯ ಸೇವಿಸಿ ಅನುಚಿತವಾಗಿ ವರ್ತಿಸುತ್ತಿದ್ದ ಇಬ್ಬರನ್ನು ಪುತ್ತೂರು ನಗರ ಪೊಲೀಸರು ವಶಕ್ಕೆ ಪಡೆದು ಪ್ರಕರಣ ದಾಖಲಿಸಿದ್ದಾರೆ. ಮಹಮ್ಮದ್‌ ಇಬಾಶ್‌ (19) ಮತ್ತು ಅಹಮ್ಮದ್‌ ಇಝಾಜ್ (27)ಬಂಧಿತ ಆರೋಪಿಗಳು. ಪುತ್ತೂರು ನಗರ ಪೊಲೀಸರು ರೌಂಡ್ಸ್ ಕರ್ತವ್ಯದಲ್ಲಿದ್ದಾಗ ಸಾರ್ವಜನಿಕರ ಮಾಹಿತಿ ಆಧರಿಸಿ ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ. ಬಳಿಕ ಅವರನ್ನು ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ಪರೀಕ್ಷೆಗೊಳಪಡಿಸಲಾಯಿತು. ಈ ವೇಳೆ ಅವರು ಮಾದಕದ್ರವ್ಯ ಸೇವಿಸಿರುವುದು ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

Read More

ಮಂಗಳೂರು: ನಗರದಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಕೂಗು ಕೇಳಿ ಬಂದಿದ್ದು, ಈಗಾಗಲೇ ಮಂಗಳೂರು ಹೈಕೋರ್ಟ್ ಪೀಠ ಹೋರಾಟ ಸಮಿತಿ ಆರಂಭವಾಗಿದೆ. ಶನಿವಾರ ಈ ಹೋರಾಟ ಸಮಿತಿಯಿಂದ ಮಂಗಳೂರು ವಕೀಲರ ಸಂಘದ ಟಿವಿ ಹಾಲ್‌ನಲ್ಲಿ ಸಭೆ ನಡೆದಿದೆ. ಮಂಗಳೂರು ವಕೀಲರ ಸಂಘದ ವತಿಯಿಂದ ಎಂಎಲ್‌ಸಿ ಐವನ್ ಡಿಸೋಜ ಅವರ ಸಂಚಾಲಕತ್ವದಲ್ಲಿ ಹಿರಿಯ ವಕೀಲರ ಮಾರ್ಗದರ್ಶನದಲ್ಲಿ ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಹೋರಾಟ ಸಮಿತಿ ಈಗಾಗಲೇ ಪ್ರಾರಂಭವಾಗಿದೆ‌. ಈ ಹೋರಾಟ ನಿರಂತರವಾಗಿ ನಡೆಯಬೇಕು, ಸರ್ಕಾರಕ್ಕೆ ಕೂಗು ಕೇಳಬೇಕೆಂಬ ಉದ್ದೇಶದಿಂದ ಈ ಸಮಿತಿಯನ್ನು ವಿಸ್ತರಿಸಿ ನಮ್ಮ ಹೋರಾಟಕ್ಕೆ ಹೆಚ್ಚಿನ ಶಕ್ತಿಯನ್ನು ತುಂಬಬೇಕೆಂಬು ಉದ್ದೇಶದಿಂದ ಇಂದು ಸಭೆ ನಡೆಯಿತು. ಈಗಾಗಲೇ ಹಲವಾರು ಹಿರಿಯ ವಕೀಲರ ನೇತೃತ್ವದಲ್ಲಿ ಸಭೆಗಳನ್ನು ಮಾಡಲಾಗಿದೆ. ಜಿಲ್ಲೆಯ ಹಲವಾರು ತಾಲೂಕು ವಕೀಲರ ಸಂಘಗಳಿಗೆ ಭೇಟಿ ನೀಡಿ ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆ ಆಗಬೇಕೆಂಬ ಪುತ್ತೂರು, ಬೆಳ್ತಂಗಡಿ, ಬಂಟ್ವಾಳ, ಸುಳ್ಯ ಮತ್ತು ಮೂಡುಬಿದಿರೆ ವಕೀಲರ ಸಂಘದ ಪದಾಧಿಕಾರಿಗಳು ಈ ಹೋರಾಟ ಸಮಿತಿಯೊಂದಿಗೆ ಕೈಜೋಡಿಸಿದೆ. ಗ್ರಾಮಾಂತರ ಪ್ರದೇಶಗಳಲ್ಲೂ ಕೂಡ…

Read More