Author: main-admin

ಪುತ್ತೂರು: ಉಪ್ಪಿಂಗಡಿ ಸಮೀಪದ ಉರುವಾಲು ಗ್ರಾಮದ ಕುಪ್ಪೆಟ್ಟಿ ಎಂಬಲ್ಲಿ ಗೂಡ್ಸ್ ವಾಹನದಲ್ಲಿ ಅಕ್ರಮ ವಾಗಿ ಸಾಗಿಸುತ್ತಿದ್ದ ಜಾನವಾರುಗಳನ್ನು ಉಪ್ಪಿನಂಗಡಿ ಪೊಲೀಸರು ಪತ್ತೆ ಹಚ್ಚಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿ ವಾಹನ ಚಾಲಕ ಜಯಂತ್ ಗೌಡ ಎಂಬಾತನನ್ನು ಬಂಧಿಸಿದ್ದಾರೆ. ಬಂಧಿತ ಜಯಂತ್ ಗೌಡ ಕುಪ್ಪೆಟ್ಟಿಯ ಬದ್ರುದ್ದೀನ್ ಎಂಬಾತನಿಗೆ ಜಾನುವಾರುಗಳನ್ನು ಸಾಗಿಸುತ್ತಿದ್ದ ಎನ್ನಲಾಗಿದ್ದು, ಈ ಬಗ್ಗೆ ಮಾಹಿತಿ ಪಡೆದ ಪೊಲೀಸರು ಪರಿಶೀಲನೆ ನಡೆಸಿದಾಗ ಅದರಲ್ಲಿ ದಾಖಲೆ ಇಲ್ಲದೆ ಸಾಗಾಟ ಮಾಡಲಾಗುತ್ತಿದ್ದ ನಾಲ್ಕು ಜಾನುವಾರುಗಳು ಪತ್ತೆಯಾಗಿದ್ದು, ಘಟನೆಗೆ ಸಂಬಂಧಿಸಿ ಮೂವರ ವಿರುದ್ಧ ಕೇಸು ದಾಖಲಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

Read More

ಮಂಗಳೂರು: ಹಿಂದೂ ಕಾರ್ಯಕರ್ತ ಹಾಗೂ ರೌಡಿಶೀಟರ್‌ ಸುಹಾಸ್‌ ಶೆಟ್ಟಿ ಮೇ 1ರಂದು ಕೊಲೆಯಾಗಿದ್ದ. ಈ ಪ್ರಕರಣವನ್ನ ಬೇಧಿಸಿರುವ ಪೊಲೀಸರು ಇಬ್ಬರು ಹಿಂದೂಗಳು ಸೇರಿದಂತೆ 8 ಜನ ಆರೋಪಿಗಳನ್ನ ಬಂಧಿಸಿದ್ದಾರೆ. ಈಗಲೂ ಕರಾವಳಿ ಭಾಗದಲ್ಲಿ ಬೂದಿ ಮುಚ್ಚಿದ ಕೆಂಡದಂಥಾ ಸ್ಥಿತಿಯಿದೆ. ಈ ಮಧ್ಯೆ ಮಂಗಳೂರಿನಲ್ಲಿ ಹಿಂದೂ ಮುಖಂಡರಿಗೆ ಕಿಡಿಗೇಡಿಗಳಿಂದ ಜೀವ ಬೆದರಿಕೆ ಹಾಕಲಾಗುತ್ತಿದೆ. ಮುಂದಿನ ಟಾರ್ಗೆಟ್ ಶರಣ್​ ಪಂಪ್​ವೆಲ್​ ಮತ್ತು ಭರತ್ ಕುಮ್ಡೇಲ್​ ಎಂದು ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ವೈರಲ್ ಮಾಡಲಾಗಿದೆ. ಮೇ 5ರಂದು ರಾತ್ರಿ 9.30ಕ್ಕೆ ನಿನ್ನ ಸ್ಥಳದಲ್ಲೇ ಕೊಲ್ಲುವುದಾಗಿ ಕಿಡಿಗೇಡಿಗಳು ಹಿಂದೂ ಮುಖಂಡ ಭರತ್ ಕುಮ್ಡೇಲ್‌ಗೆ ಜೀವ ಬೆದರಿಕೆ ಹಾಕಿದ್ದು, ಪೋಸ್ಟ್ ವೈರಲ್ ಮಾಡಿದ್ದಾರೆ. ಭರತ್ ಕುಮ್ಡೇಲ್​​ ಎಸ್​​ಡಿಪಿಐ ಮುಖಂಡ ಅಶ್ರಫ್ ಹತ್ಯೆಯ ಪ್ರಮುಖ ಆರೋಪಿ. ಎಸ್​​ಡಿಪಿಐನಲ್ಲಿ ಮುಂಚೂಣಿಯಲ್ಲಿದ್ದ ಮುಖಂಡ ಅಶ್ರಫ್ ಕಲಾಯಿ ಅನ್ನು 2017ರ ಜೂನ್ 21ರಂದು ಬಂಟ್ವಾಳದ ಬೆಂಜನಪದವು ಎಂಬಲ್ಲಿ ಬರ್ಬರವಾಗಿ ಹತ್ಯೆಗೈದಿದ್ದರು. ಅಶ್ರಫ್ ಕೊಲೆ ಬಳಿಕ ಪ್ರತೀಕಾರವಾಗಿ ಶರತ್ ಮಡಿವಾಳ ಹತ್ಯೆಯಾಗಿತ್ತು. ಅಶ್ರಫ್ ಕೊಂದ ಭರತ್​​ ನನ್ನ…

Read More

ಮಂಗಳೂರು: ನಗರದಲ್ಲಿ ಮೂರು ಕಡೆ ಗುರುವಾರ ಮತ್ತು ಶುಕ್ರವಾರ ನಡೆದ ಚೂರಿ ಇರಿತ ಹಾಗೂ ಹಲ್ಲೆ ಪ್ರಕರಣ ಸಂಬಂಧ ಒಟ್ಟು 7 ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಮಂಗಳೂರು ಪೊಲೀಸ್ ಕಮಿಷನ‌ರ್ ಅನುಪಮ್ ಅಗ್ರವಾಲ್ ತಿಳಿಸಿದ್ದಾರೆ. ನಗರದ ಹೊರವಲಯದಲ್ಲಿ ಕಂಕನಾಡಿ ನಗರ ಪೊಲೀಸ್ ಠಾಣೆಯ ವ್ಯಾಪ್ತಿಯ ಕಣ್ಣೂರಿನಲ್ಲಿ ಶುಕ್ರವಾರ ನಸುಕಿನಲ್ಲಿ ನೌಷಾದ್ ಅಹ್ಮದ್ (39) ಎಂಬಾತನಿಗೆ ಚೂರಿ ಇರಿದ ಪ್ರಕರಣ ಸಂಬಂಧ ಮುಡಿಪುವಿನ ಲೋಹಿತಾಶ್ವ (32), ವೀರನಗರದ ಪುನೀತ್ (28), ಕುತ್ತಾರಿನ ಗಣೇಶ ಪ್ರಸಾದ್‌(23) ನನ್ನು ಬಂಧಿಸಲಾಗಿದೆ. ಕಣ್ಣೂರು ಬಸ್ ನಿಲ್ದಾಣದ ಬಳಿ ನಿಂತಿದ್ದ ನೌಷಾದ್ ಅಹ್ಮದ್ ಅವರ ಬಳಿ ‘ಮಂಗಳೂರಿಗೆ ಬಸ್ ಇದೆಯಾ’ ಎಂದು ವಿಚಾರಿಸುವ ನೆಪದಲ್ಲಿ ಆರೋಪಿಗಳು ಬೆನ್ನಿಗೆ ಚೂರಿಯಿಂದ ಇರಿದು ಪರಾರಿಯಾಗಿದ್ದರು. ಇವರ ವಿರುದ್ಧ ಎಫ್‌ಐಆರ್ ದಾಖಲಿಸಿಕೊಳ್ಳಲಾಗಿದೆ. ಅದೇ ರೀತಿ ಅಲೇಕಳ ನಿವಾಸಿ ಫೈಝಲ್ (40) ಎಂಬುವರಿಗೆ ಉಳ್ಳಾಲ ಠಾಣೆ ವ್ಯಾಪ್ತಿಯ ತೊಕ್ಕೊಟ್ಟಿನಲ್ಲಿ ಗುರುವಾರ ತಡರಾತ್ರಿ ಚೂರಿ ಇರಿದದ್ದು ನಾವೇ ಎಂದು ಇದೇ ಆರೋಪಿಗಳು ವಿಚಾರಣೆ ವೇಳೆ ಒಪ್ಪಿಕೊಂಡಿದ್ದಾರೆ. ಈ…

Read More

ಮಂಗಳೂರು: ಸುಹಾಸ್ ಶೆಟ್ಟಿ ಹ*ತ್ಯೆ ಹಿನ್ನೆಲೆಯಲ್ಲಿ ಉದ್ವಿಗ್ನ ಸ್ಥಿತಿ ನಿರ್ಮಾಣವಾದ ಕಾರಣ ಮುಂಜಾಗೃತಾ ಕ್ರಮಕ್ಕಾಗಿ ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಹೇರಲಾಗಿದ್ದ ನಿಷೇಧಾಜ್ಞೆಯ ಕುರಿತು ಪರಿಷ್ಕೃತ ಆದೇಶ ಹೊರಡಿಸಲಾಗಿದೆ. 4 ರಂದು ಬೆಳಗ್ಗೆ6 ಗಂಟೆಗೆ ಮುಕ್ತಾಯವಾಗಲಿದೆ ಎಂದು ಪೊಲೀಸ್ ಕಮಿಷನ‌ರ್ ಅನುಪಮ್ ಅಗರ್ವಾಲ್ ಪರಿಷ್ಕೃತ ಆದೇಶ ಹೊರಡಿಸಿದ್ದಾರೆ. ಹತ್ಯೆಯ ಬಗ್ಗೆ ಕಮಿಷನರ್ ಮಾಹಿತಿ ಈ ಹಿಂದಿನ ಆದೇಶದಲ್ಲಿ ಮೇ 6 ರ ಬೆಳಗ್ಗೆ 6 ರವರೆಗೆ ಭಾರತೀಯ ನ್ಯಾಯ ಸುರಕ್ಷಾ ಸಂಹಿತಾ (ಬಿಎನ್‌ಎಸ್‌ಎಸ್) ಸೆಕ್ಷನ್ 163 ರ ಅಡಿಯಲ್ಲಿ ನಿಷೇಧಾಜ್ಞೆ ಹೊರಡಿಸಲಾಗಿತ್ತು. ಈಗಾಗಲೇ ಸುಹಾಸ್ ಶೆಟ್ಟಿ ಹ*ತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ 8 ಮಂದಿ ಆರೋಗಳನ್ನು ಬಂದಿಸಲಾಗಿದ್ದು, ಪ್ರಕರಣದ ತನಿಕೆಚುರುಕುಗೊಳಿಸಲಾಗಿದೆ. ಜಿಲ್ಲೆಯ ಸೂಕ್ಷ್ಮ ಸ್ಥಳಗಳಲ್ಲಿ ಪೊಲೀಸರು ಹದ್ದಿನ ಕಣ್ಣು ಇರಿಸಿದ್ದಾರೆ..

Read More

ನವದೆಹಲಿ : ಪಾಕಿಸ್ತಾನಿ ಯುವತಿಯನ್ನು ಮದುವೆಯಾಗಿದ್ದನ್ನು ಗೌಪ್ಯವಾಗಿಟ್ಟಿದ್ದ ಕೇಂದ್ರ ಮೀಸಲು ಪೊಲೀಸ್ ಪಡೆಯ (CRPF) ಯೋಧನನ್ನು ಇದೀಗ ಸೇನೆ ಸೇವೆಯಿಂದ ವಜಾಗೊಳಿಸಿದೆ. ಹೌದು ಕೇಂದ್ರ ಮೀಸಲು ಪೊಲೀಸ್ ಪಡೆಯ (CRPF) ಮುನಿರ್ ಅಹಮದ್ ಸೇವೆಯಿಂದ ವಜಾಗೊಂಡ ಯೋಧ ಎಂದು ತಿಳಿದುಬಂದಿದೆ. ಮುನೀರ್ ಅಹಮದ್ ಅರಿಶಿನ ಪಡೆದ 41ನೇ ಬೆಟಾಲಿಯನ್ ಗೆ ಸೇರಿದು ಅವರನ್ನು ಇದೀಗ ಸೇವೆಯಿಂದ ವಜಾಗೊಳಿಸಲಾಗಿದೆ. ಬಳಿಕ ಅವರನ್ನು ವಿಚಾರಣೆಗೆ ಒಳಪಡಿಸುತ್ತೇವೆ ಎಂದು ಸಿಆರ್‌ಪಿಎಫ್ ವಕ್ತಾರರೂ ಆದ ಡಿಐಜಿ ದಿನಕರನ್ ಮಾಹಿತಿ ನೀಡಿದ್ದಾರೆ. ತಾನು ವಿವಾಹವಾಗಿದ್ದು ಮತ್ತು ಯುವತಿ ಭಾರತದಲ್ಲಿ ವೀಸಾ ಅವಧಿ ಮೀರಿದ್ದರು ಇಲ್ಲಿಯೇ ನೆಲೆಸಿದ್ದನ್ನು ಯೋಧ ಅಹ್ಮದ್ ಗೋಪ್ಯವಾಗಿಟ್ಟಿದ್ದನ್ನು ಇಲಾಖೆ ಗಂಭೀರವಾಗಿ ಪರಿಗಣಿಸಿ ವಜಾಗೊಳಿಸಿ, ತನಿಖೆ ನಡೆಸುವ ಕ್ರಮ ಕೈಗೊಳ್ಳಲಾಗಿದೆ ಎಂದು ಎಂದು ಸಿಆರ್‌ಪಿಎಫ್ ವಕ್ತಾರರೂ ಆದ ಡಿಐಜಿ ದಿನಕರನ್ ಮಾಹಿತಿ ನೀಡಿದ್ದಾರೆ. ಏ. 22ರಂದು ಪಹಲ್ಲಾಮ್‌ನ ಭಯೋತ್ಪಾದಕರು ಅಮಾಯಕ ಪ್ರವಾಸಿಗರನ್ನು ಗುರಿಯಾಗಿಸಿ ದಾಳಿ ನಡೆಸಿದ್ದರು.ಘಟನೆಯಲ್ಲಿ ಒಟ್ಟು 26 ಜನ ಮೃತಪಟ್ಟರು. ಘಟನೆ ನಂತರ ಭಾರತ ಮತ್ತು…

Read More

ಮಂಗಳೂರು: ಮಂಗಳೂರಿನಲ್ಲಿ ನಡೆದಿದ್ದ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಪ್ರಕರಣದ ಕುರಿತಂತೆ ಮಂಗಳೂರು ಪೊಲೀಸ್ ಆಯುಕ್ತರು ಮಹತ್ವದ ಹೇಳಿಕೆ ನೀಡಿದ್ದಾರೆ. ಗೃಹ ಸಚಿವ ಪರಮೇಶ್ವರ್ ಜೊತೆ ಸಭೆ ನಡೆಸಿದ ನಂತರ ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಸುದ್ಧಿಗಾರ ಜತೆ ಮಾತನಾಡಿ, ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಎಂಟು ಮಂದಿಯನ್ನು ಬಂಧಿಸಲಾಗಿದೆ. ಈ ಹಿಂದೆ ಕೊಲೆಯಾಗಿದ್ದ ಫಾಜಿಲ್ ಸಹೋದರ ಆದಿಲ್ ಎಂಬಾತ ಸುಹಾಸ್ ಕೊಲೆಗೆ ಸಂಚು ಹೂಡಿದ್ದು, 5 ಲಕ್ಷ ಸುಪಾರಿ ನೀಡಿದ್ದಾಗಿ ತಿಳಿಸಿದ್ದಾರೆ. ಇದರೊಂದಿಗೆ, ಅಣ್ಣ ಫಾಝಿಲ್ ಹತ್ಯೆ ಪ್ರತೀಕಾರಕ್ಕಾಗಿ ಆದಿಲ್ ಸುಹಾಸ್ ಶೆಟ್ಟಿ ಕೊಲೆಗೆ ಇಬ್ಬರು ಹಿಂದೂ ಯುವಕರನ್ನು ಬಳಸಿಕೊಂಡು ಪ್ರಕರಣವನ್ನು ತಿರುಚಲು ಖತರ್ನಾಕ್ ಪ್ಲಾನ್ ಮಾಡಿದ್ದಾನೆ ಎನ್ನಲಾಗಿದೆ. ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ 8 ಆರೋಪಿಗಳಲ್ಲಿ ಅಬ್ದುಲ್ ಸಫ್ವಾನ್ ಪ್ರಮುಖ ಆರೋಪಿಯಾಗಿದ್ದು,ಕಳೆದ 2023ರಲ್ಲಿ ಅಬ್ದುಲ್ ಸಫ್ವಾನ್ ಮೇಲೆ ಮಾರಣಾಂತಿಕ ಹಲ್ಲೆ ಆಗಿತ್ತು.ಇತ್ತ ಸಫ್ವಾನ್‌ಗೆ ತನ್ನನ್ನು ಸುಹಾಸ್ ಶೆಟ್ಟಿ ಕೊಲೆ ಮಾಡುವ ಭಯ ಕಾಡುತ್ತಿತ್ತು ಈ ಹಿನ್ನೆಲೆಯಲ್ಲಿ ಸುಹಾಸ್ ಶೆಟ್ಟಿಯನ್ನು…

Read More

ಮಂಗಳೂರು: ಮಂಗಳೂರಿನಲ್ಲಿ ಸುಹಾಸ್ ಶೆಟ್ಟಿ ಕೊಲೆ ಕೋಮು ಉದ್ವಿಗ್ನತೆ ಹೆಚ್ಚಾಗಿದ್ದು, ಗೃಹ ಸಚಿವ ಡಾ. ಜಿ ಪರಮೇಶ್ವರ್ ಇಂದು ಮಂಗಳೂರಿಗೆ ಭೇಟಿ ನೀಡಿ ಪೊಲೀಸ್ ಅಧಿಕಾರಿಗಳ ಜೊತೆ ಸಭೆ ನಡೆಸಿದರು. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹಾಗೂ ಪೊಲೀಸ್ ಅಧಿಕಾರಿಗಳ ಜೊತೆ ಮಂಗಳೂರಿನ ಸರ್ಕ್ಯೂಟ್ ಹೌಸ್ ನಲ್ಲಿ ಸಭೆ ನಡೆಸಿದ ಬಳಿಕ ಮಾತನಾಡಿದ ಅವರು, ದಕ್ಷಿಣ ಕನ್ನಡ ಜಿಲ್ಲೆ ಮತ್ತು ಉಡುಪಿ ಜಿಲ್ಲೆಗೆ ಸೀಮಿತವಾಗಿ ಪ್ರತ್ಯೇಕವಾಗಿ ಆ್ಯಂಟಿ ಕಮ್ಯೂನಲ್ ಟಾಸ್ಕ್ ಫೋರ್ಸ್ ಆರಂಭಿಸಲಾಗುವುದು ಎಂದರು. ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಸಂಬAಧಪಟ್ಟAತೆ ಈಗಾಗಲೇ ಪೊಲೀಸರು 8 ಮಂದಿಯನ್ನು ಬಂಧಿಸಿದ್ದಾರೆ.ಕರಾವಳಿ ಜಿಲ್ಲೆಗಳಲ್ಲಿ ಕೋಮುಗಲಭೆ ನಡೆಯುವ ನಿಟ್ಟಿನಲ್ಲಿ ಐಜಿ ಮಟ್ಟದ ಅಧಿಕಾರಿಗಳ ನೇತೃತ್ವದಲ್ಲಿ  ಆ್ಯಂಟಿ  ಕಮ್ಯೂನಲ್ ಟಾಸ್ಕ್ ಫೋರ್ಸ್ ಮಂದಿರ ಎರಡು ವಾರಗಳಲ್ಲಿ ಆರಂಭವಾಗಲಿದೆ. ಈ ಟಾಸ್ಕ್ ಫೋರ್ಸ್ ಪೊಲೀಸರ ಜೊತೆಗೂಡಿ ಕಾರ್ಯನಿರ್ವಹಿಸಲಿದೆ ಎಂದು ತಿಳಿಸಿದರು. ಕೋಮು ಗಲಭೆಗೆ ಕಾರಣವಾಗುವ ಪ್ರಚೋದನಾಕಾರಿ ಹೇಳಿಕೆ ನೀಡುವವರ ವಿರುದ್ಧ ಕೂಡ ಕಠಿಣ ಕ್ರಮ ಕೈಗೊಳ್ಳಲಾಗುವುದು. ಕೇರಳ…

Read More

ಮಂಗಳೂರು : ಬಜ್ಪೆ ಕಿನ್ನಿಪದವಿನಲ್ಲಿ ನಡೆದ ಹಿಂದೂ ಕಾರ್ಯಕರ್ತರ ಸುಹಾಸ್ ಶೆಟ್ಟಿ ಹತ್ಯೆಯ ಬಳಿಕ ಸಾಮಾಜಿಕ ಜಾಲತಾಣದಲ್ಲಿ ಕೋಮುಭಾವನೆ ಕೆರಳಿಸುವಂತಹ ಪೋಸ್ಟ್ ಹಾಕಿದ್ದ ವ್ಯಕ್ತಿಗಳು ಮತ್ತು ಗುಂಪುಗಳ ವಿರುದ್ಧ ನಗರ ಪೊಲೀಸ್ ಕಮಿಷನರೇಟ್‌ನ ವಿವಿಧ ಠಾಣೆಗಳಲ್ಲಿ ಒಟ್ಟು 12 ಪ್ರಕರಣಗಳು ದಾಖಲಾಗಿವೆ. ಮೂಲ್ಕಿ, ಕಾವೂರು ಮತ್ತು ಮಂಗಳೂರು ದಕ್ಷಿಣ ಠಾಣೆಗಳಲ್ಲಿ ತಲಾ ಎರಡು, ಮಂಗಳೂರು ಉತ್ತರ, ಪೂರ್ವ, ಉರ್ವ, ಬರ್ಕೆ, ಮೂಡುಬಿದಿರೆ ಮತ್ತು ಕಂಕನಾಡಿ ಠಾಣೆಗಳಲ್ಲಿ ತಲಾ ಒಂದೊಂದು ಪ್ರಕರಣ ದಾಖಲಾಗಿದೆ. ಶಾಂತಿ ಮತ್ತು ಸೌಹಾರ್ದಕ್ಕೆ ಧಕ್ಕೆ ತರುವ ಉದ್ದೇಶದಿಂದ ಪೋಸ್ಟ್ ಹಾಕಲಾಗಿದ್ದು ಭಾರತೀಯ ನ್ಯಾಯಸಂಹಿತೆಯಡಿ ಪ್ರಕರಣಗಳನ್ನು ದಾಖಲಿಸಲಾಗಿದೆ ಎಂದು ಪೊಲೀಸ್ ಕಮಿಷನ‌ರ್ ತಿಳಿಸಿದ್ದಾರೆ.

Read More

ಮಂಗಳೂರಿನಲ್ಲಿ ಹಿಂದೂ ಸಂಘಟನೆ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇದೀಗ 8 ಆರೋಪಿಗಳನ್ನು ಬಂಧಿಸಿದ್ದಾರೆ. ಮಂಗಳೂರಿನಲ್ಲಿ ಸುಹಾಸ್ ಶೆಟ್ಟಿ ಕೊಲೆ ಮಾಡಿದ ಬಳಿಕ ಪರಾರಿಯಾಗಿದ್ದ ಹಂತಕರು ಮಂಗಳೂರಿನಲ್ಲಿಯೇ ಅವಿತುಕೊಂಡಿದ್ದ ಬಗ್ಗೆ ಮಾಹಿತಿ ಪಡೆದ ಪೊಲೀಸರು 8 ಆರೋಪಿಗಳನ್ನು ವಶಕ್ಕೆ ಪಡೆದು ತೀವ್ರ ವಿಚಾರಣೆ ನಡೆಸಿದ್ದಾರೆ ಎನ್ನಲಾಗಿದೆ. ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಭೀಕರ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ, ಇಂದು ಮಂಗಳೂರಿಗೆ ಗೃಹ ಸಚಿವ ಜಿ.ಪರಮೇಶ್ವರ್ ಭೇಟಿ ನೀಡಲಿದ್ದಾರೆ. ಇಂದು ಬೆಳಿಗ್ಗೆ ಕಮಿಷನರ್ ಕಚೇರಿಯಲ್ಲಿ 11 ಗಂಟೆಗೆ ಅಧಿಕಾರಿಗಳ ಜೊತೆಗೆ ಸಭೆ ನಡೆಸಲಿದ್ದಾರೆ. ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ಕುರಿತಂತೆ ಪೊಲೀಸರ ಜೊತೆಗೆ ಜಿ ಪರಮೇಶ್ವರ್ ಅವರು ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆಗೆ ಸಭೆ ನಡೆಸಲಿದ್ದಾರೆ ಎಂದು ತಿಳಿದುಬಂದಿದೆ. ಮಂಗಳೂರು ಪೊಲೀಸ್ ಕಮಿಷನರ್ ಕಚೇರಿಯಲ್ಲಿ ಬೆಳಿಗ್ಗೆ 11 ಗಂಟೆಗೆ ಪರಮೇಶ್ವರ್ ಸಭೆ ನಡೆಸಲಿದ್ದು, ಗೃಹ ಸಚಿವ ಜಿ ಪರಮೇಶ್ವರ್ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಜಂಟಿಯಾಗಿ ಸಭೆ…

Read More

ಉಡುಪಿ: ನಿವೃತ್ತ ಪಿಎಸ್ಐ ರಾಜಗೋಪಾಲ್ ಕಟ್ಪಾಡಿ ಬೆಂಗಳೂರು ನಾರಾಯಣ ಹೃದಯಾಲಯದಲ್ಲಿ ನಿಧನ ಹೊಂದಿದ್ದಾರೆ. ಮಣಿಪಾಲ, ಉಡುಪಿ, ಕೋಟ, ಕಟಪಾಡಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸಿದ್ದಾರೆ. ಇವರು ಅನಾರೋಗ್ಯದಿಂದ ನಾರಾಯಣ ಹೃದಯಾಲಯದಲ್ಲಿ ಒಳರೋಗಿಯಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಮೃತರು ಹೆಂಡತಿ ಮತ್ತು ಕುಟುಂಬದವರನ್ನು ಅಗಲಿದ್ದಾರೆ‌.

Read More