ಬೆಂಗಳೂರು : ಜಿಮ್‌ನಲ್ಲಿ ಸ್ನೇಹದ ಬಲೆಗೆ ಬೀಳಿಸಿಕೊಂಡು ಸಾಫ್ಟ್‌ವೇರ್ ಉದ್ಯೋಗಿಗೆ ಅಶ್ಲೀಲ ವಿಡಿಯೋ ಹಾಗೂ ಫೋಟೋಗಳಿವೆ ಎಂದು ಬೆದರಿಸಿ ಎರಡೂವರೆ ಕೋಟಿ ರುಪಾಯಿ ಸುಲಿಗೆ ಮಾಡಿದ್ದ ಅಣ್ಣ-ತಂಗಿ ಸೇರಿದಂತೆ ಮೂವರನ್ನು ಸಿಸಿಬಿ ಬಂಧಿಸಿದೆ. ಉಡುಪಿ ಜಿಲ್ಲೆಯ ತಬಸಂ ಬೇಗಂ, ಆಕೆಯ ಸೋದರ ಅಜೀಂ ಉದ್ದೀನ್ ಹಾಗೂ ಅಭಿಷೇಕ್ ಅಲಿಯಾಸ್ ಅವಿನಾಶ್ ಬಂಧಿತನಾಗಿದ್ದು, ಆರೋಪಿಗಳಿಂದ ಮೊಬೈಲ್‌ಗಳು ಹಾಗೂ ಲ್ಯಾಪ್‌ಟಾಪ್‌ಗಳನ್ನು ಜಪ್ತಿ ಮಾಡಲಾಗಿದೆ. ನಾಲ್ಕು ವರ್ಷಗಳ ಹಿಂದೆ ಆರ್.ಟಿ.ನಗರದಲ್ಲಿರುವ ತಬಸಂನ ಅಣ್ಣ ಅಜೀಂ ಒಡೆತನದ ಜಿಮ್‌ಗೆ ಟೆಕ್ಕಿ ತೆರಳುತ್ತಿದ್ದ. ಆ ವೇಳೆ ಫಿಟ್ನೆಸ್ ಮಾರ್ಗದರ್ಶಿಯಾಗಿದ್ದ ಆಕೆ, ಸಂತ್ರಸ್ತ ಟೆಕ್ಕಿ ಜತೆ ಸಲುಗೆ ಬೆಳೆಸಿಕೊಂಡು ಹನಿಟ್ರ್ಯಾಪ್ ಬಲೆಗೆ ಬೀಳಿಸಿಕೊಂಡಿದ್ದಳು. ಕೊನೆಗೆ ಬ್ಲ್ಯಾಕ್‌ಮೇಲ್ ಕಿರುಕುಳ ಸಹಿಸಲಾರದೆ ಪೊಲೀಸ್ ಆಯುಕ್ತರಿಗೆ ಸಂತ್ರಸ್ತ ನೀಡಿದ ದೂರು ಆಧರಿಸಿ ಸಿಸಿಬಿ ತನಿಖೆ ಕೈಗೆತ್ತಿಕೊಂಡಿತ್ತು. ದೂರು ದಾಖಲಾದ ಕೂಡಲೇ ನಗರ ತೊರೆದು ಉಡುಪಿ ಜಿಲ್ಲೆಯಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಮಗು ಇದೆ ಎಂದು ಬೆದರಿಸಿ ಬ್ಲ್ಯಾಕ್‌ಮೇಲ್:…
Author: main-admin
ಮಂಗಳೂರು: ಕುಖ್ಯಾತ ರೌಡಿ ಶೀಟರ್‌ನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದು, ಈ ವೇಳೆ ಆತ ಪೊಲೀಸ್ ಅಧಿಕಾರಿಗಳಿಗೇ ಮಚ್ಚಿನಿಂದ ಹಲ್ಲೆ ನಡೆಸಿದ್ದಾನೆಂದು ತಿಳಿದು ಬಂದಿದೆ. ಉಳ್ಳಾಲದ ಧರ್ಮನಗರ ನಿವಾಸಿ ದಾವೂದ್ (43) ಬಂಧಿತ ಕುಖ್ಯಾತ ರೌಡಿಶೀಟರ್. ರೌಡಿಶೀಟರ್ ದಾವೂದ್ ಹಲವಾರು ಗಂಭೀರ ಅಪರಾಧಗಳಲ್ಲಿ ತೊಡಗಿಸಿಕೊಂಡಿದ್ದಾನೆ. ಆರೋಪಿ ಮಂಗಳೂರಿನ ತಲಪಾಡಿ-ದೇವಿಪುರ ರಸ್ತೆಯ ಬಳಿ ಪ್ರತಿಸ್ಪರ್ಧಿ ಗ್ಯಾಂಗ್ ವಿರುದ್ಧ ಅಪರಾಧ ಎಸಗಲು ಸಂಚು ರೂಪಿಸುತ್ತಿದ್ದ ಎಂದು ತಿಳಿದು ಬಂದಿತ್ತು. ಖಚಿತ ಮಾಹಿತಿ ಮೇರೆಗೆ ಸಿಸಿಬಿ ಪಿಎಸ್ಐ ನರೇಂದ್ರ ನೇತೃತ್ವದ ತಂಡ ದಾವೂದ್‌ನನ್ನು ಬಂಧಿಸಲು ಮುಂದಾಗಿದೆ. ಕಾರ್ಯಾಚರಣೆ ವೇಳೆ ದಾವೂದ್ ಬಂಧನದಿಂದ ತಪ್ಪಿಸಿಕೊಳ್ಳುವ ಯತ್ನದಲ್ಲಿ ಅಧಿಕಾರಿಗಳ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಿದ್ದಾನೆ. ಇದರಿಂದ ಪಿಎಸ್ಐ ನರೇಂದ್ರ ಮತ್ತು ಇತರ ಸಿಬ್ಬಂದಿಗೆ ಗಾಯಗಳಾಗಿವೆ. ದಾಳಿಯ ನಡುವೆಯೂ ತಂಡ ಆತನನ್ನು ಸದೆಬಡಿದು ಮುಂದಿನ ಕ್ರಮಕ್ಕಾಗಿ ಉಳ್ಳಾಲ ಪೊಲೀಸ್ ಠಾಣೆಗೆ ಹಸ್ತಾಂತರಿಸಿದೆ. ದಾವೂದ್ ವಿರುದ್ಧ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಸಿಆರ್ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ದಾವೂದ್ ಕೊಲೆ ಸೇರಿದಂತೆ ಹಲವು ಘೋರ…
ಮಂಗಳೂರು: ಮಾನಸಿಕ ಕಿರುಕುಳ ನೀಡಿ ದೈಹಿಕವಾಗಿ ಹಲ್ಲೆ ನಡೆಸಿ ಪತ್ನಿಗೆ ತ್ರಿಪಲ್ ತಲಾಖ್ ನೀಡಿದ ಆರೋಪಿ ಪತಿಯನ್ನು ಮಂಗಳೂರಿನ ಮಹಿಳಾ ಠಾಣಾ ಪೊಲೀಸರು ಬಂಧಿಸಿದ್ದಾರೆ. ಉಳ್ಳಾಲ ಸಮ್ಮರ್ ಸ್ಯಾಂಡ್ ಹತ್ತಿರ ನಿವಾಸಿ ಮಹಮ್ಮದ್ ದಿಲ್ಫಾಜ್ ತ್ರಿವಳಿ ತಲಾಖ್ ನೀಡಿದ ಆರೋಪಿ. ಈತ ಉಳ್ಳಾಲ ಮಾಸ್ತಿಕಟ್ಟೆ ನಿವಾಸಿ ಹೀನಾ ಫಾತಿಮಾ ಎಂಬಾಕೆಯನ್ನು 2019ರಲ್ಲಿ ವಿವಾಹವಾಗಿದ್ದು, ಇಬ್ಬರು ಮಕ್ಕಳಿದ್ದಾರೆ. ಮದುವೆಯ ಸಂದರ್ಭ ಹೀನಾ ಫಾತಿಮಾ ಮನೆಯವರು ಆಕೆಗೆ 22 ಪವನ್ ಚಿನ್ನ ಹಾಕಿದ್ದು, ಮೊಹಮ್ಮದ್ ದಿಲ್ಫಾಜ್‌ಗೆ ವಾಚ್ ಖರೀದಿಸಲು 50,000 ರೂ. ನೀಡಿದ್ದರು. ಮದುವೆಯಾದ ಬಳಿಕ ಮೊಹಮ್ಮದ್ ದಿಲ್ಫಾಜ್ ಪತ್ನಿಯೊಂದಿಗೆ ಸಂತೋಷದಿಂದಿದ್ದು, ಬಳಿಕ ಬೇರೆ ಅನ್ಯ ಮಹಿಳೆಯರೊಂದಿಗೆ ಅನೈತಿಕ ಸಂಬಂಧ ಹೊಂದಲು ಆರಂಭಿಸಿದ್ದಾನೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಈ ಬಗ್ಗೆ, ಪತ್ನಿ ವಿಚಾರಿಸಿದಾಗ ದೈಹಿಕವಾಗಿ ಹಲ್ಲೆ ನಡೆಸಿದ್ದಾನೆ. ಪರಿಣಾಮ ಹೀನಾ ಫಾತಿಮಾ ಆಸ್ಪತ್ರೆ ದಾಖಲಾಗಿ ಚಿಕಿತ್ಸೆ ಪಡೆದಿದ್ದರು. ಬಳಿಕ ಕುಟುಂಬದ ಹಿರಿಯರು ಪಂಚಾಯಿತಿ ನಡೆಸಿ ಮೊಹಮ್ಮದ್ ದಿಲ್ಫಾಜ್‌ಗೆ ಬುದ್ಧಿ ಮಾತನ್ನು ಹೇಳಿದ್ದರು. ಆದರೂ ತನ್ನ…
ನೆಲ್ಯಾಡಿ: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಗುಂಡ್ಯ ಸಮೀಪದ ಅಡ್ಡಹೊಳೆ ಎಂಬಲ್ಲಿ ಶನಿವಾರದಂದು ನಸುಕಿನ ಜಾವ ಖಾಸಗಿ ಬಸ್ಸೊಂದು ಪಲ್ಟಿಯಾಗಿ ಕೆಎಸ್‌ಆರ್‌ಟಿಸಿ ಬಸ್ ಹಾಗೂ ಕಾರಿನ ನಡುವೆ ಸರಣಿ ಅಪಘಾತ ಸಂಭವಿಸಿದೆ. ಬೆಂಗಳೂರಿನ ಕಾಮಾಕ್ಷಿಪಾಳ್ಯದ ಸೈಂಟ್ ಲಾರೆನ್ಸ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಕುಂದಾಪುರಕ್ಕೆ ಪ್ರವಾಸಕ್ಕೆಂದು ತೆರಳಿ ಹಿಂತಿರುಗಿತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ಅಡ್ಡಹೊಳೆ ಎಂಬಲ್ಲಿ ಬಸ್ ರಸ್ತೆಗೆ ಪಲ್ಟಿಯಾದ ಪರಿಣಾಮ ಬೆಂಗಳೂರಿನಿಂದ ಬರುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದಿದೆ. ಇದೇ ವೇಳೆ ಹಿಂದಿಂದ ಬರುತ್ತಿದ್ದ ಕಾರೊಂದು ಕೆಎಸ್‌ಆರ್‌ಟಿಸಿ ಬಸ್ಸಿನ ಹಿಂಬದಿಗೆ ಡಿಕ್ಕಿ ಹೊಡೆದು ಸರಣಿ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಪ್ರವಾಸಕ್ಕೆ ತೆರಳಿದ್ದ 32ವಿದ್ಯಾರ್ಥಿಗಳು ಗಾಯಗೊಂಡಿದ್ದು. ಗಾಯಾಳುಗಳನ್ನು ನೆಲ್ಯಾಡಿ ಹಾಗೂ ಕಡಬದ ಖಾಸಗಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ. ಹೆಚ್ಚಿನ ಚಿಕಿತ್ಸೆಗಾಗಿ 15ಮಂದಿಯನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲೆಯಾಗಿದ್ದು, ಈ ಪೈಕಿ 6ಮಂದಿಗೆ ಹೆಚ್ಚಿನ ಗಾಯಗಳಾಗಿವೆ ಎಂದು ತಿಳಿದುಬಂದಿದೆ. ಸ್ಥಳಕ್ಕೆ ನೆಲ್ಯಾಡಿ ಹೊರಠಾಣೆಯ ಪೊಲೀಸರು ಭೇಟಿ ನೀಡಿದ್ದಾರೆ.
ಮಂಗಳೂರು: ಮೂರು ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪದಲ್ಲಿ ಕಾಮುಕ ವೃದ್ಧನನ್ನು ಉಳ್ಳಾಲ ಠಾಣಾ ಪೊಲೀಸರು ಬಂಧಿಸಿದ್ದಾರೆ. ನಗರದ ಹೊರವಲಯದ ಉಳ್ಳಾಲ ತಾಲೂಕಿನ ಬಾಳೆಪುಣಿ ಗ್ರಾಮದಲ್ಲಿನ ಮೂರು ವರ್ಷದ ಬಾಲಕಿ ಅಡಿಕೆ ಅಂಗಡಿಯೊಂದರ ಬಳಿ ಆಟವಾಡುತ್ತಿತ್ತು. ಈ ವೇಳೆ ಅಂಗಡಿಯ ಮಾಲಕ ಕಾಮುಕ ವೃದ್ಧ ಅಬ್ದುಲ್ಲಾ ಬಾಲಕಿಯೊಂದಿಗೆ ಅನುಚಿತವಾಗಿ ವರ್ತಿಸಿ ಲೈಂಗಿಕ ಕಿರುಕುಳ ನೀಡಿದ್ದಾನೆ. ಮಗು ಅಸ್ವಸ್ಥವಾಗಿರುವುದನ್ನು ಗಮನಿಸಿದ ಬಾಲಕಿಯ ತಾಯಿ ತಕ್ಷಣ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಬಳಿಕ ಬಾಲಕಿಯ ತಾಯಿ ನೀಡಿರುವ ದೂರಿನ ಮೇರೆಗೆ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪೊಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ತಕ್ಷಣ ಪೊಲೀಸರು ಕಾಮುಕನನ್ನು ಬಂಧಿಸಿ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದಾರೆ. ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಿದೆ. ತನಿಖೆ ನಡೆಯುತ್ತಿದೆ.
ಕಾಸರಗೋಡು : ಪೊಲೀಸ್ ಇಲಾಖೆಯಲ್ಲಿ ಕೆಲಸ ನಿರ್ವಹಿಸುತ್ತಿರುವ ಪತ್ನಿಯನ್ನು ಪತಿ ತಲವಾರ್ ನಿಂದ ಹಲ್ಲೆ ಮಾಡಿ ಕೊಲೆಗೈದ ಘಟನೆ ಕಾಸರಗೋಡಿನಲ್ಲಿ ಕಣ್ಣೂರಿನ ಕರಿವೆಳ್ಳೂರಿನಲ್ಲಿ ಗುರುವಾರ ಸಂಜೆಯ ವೇಳೆ ಘಟನೆ ನಡೆದಿದೆ. ಮೃತರನ್ನು ಕಾಸರಗೋಡು ಚಂದೇರ ಪೊಲೀಸ್ ಠಾಣೆಯ ಮಹಿಳಾ ಪೊಲೀಸ್ ಸಿಬ್ಬಂದಿ ದಿವ್ಯಶ್ರೀ ಎಂದು ಗುರುತಿಸಲಾಗಿದೆ. ಕೊಲೆ ಮಾಡಿ ಪರಾರಿಯಾಗಿದ್ದ ಪತಿ ರಾಜೇಶ್ ನನ್ನ ಪೊಲೀಸರು ಅರೆಸ್ಟ್ ಮಾಡಿದ್ದಾರೆ.ದಿವ್ಯಶ್ರೀ ಹಾಗೂ ರಾಜೇಶ್ ನಡುವೆ ದಾಂಪತ್ಯ ಸಮಸ್ಯೆ ಉಂಟಾಗಿತ್ತು .ಇದರಿಂದ ಕೆಲ ದಿನಗಳಿಂದ ಇಬ್ಬರೂ ಬೇರ್ಪಟ್ಟು ವಾಸವಾಗಿದ್ದರು ಎನ್ನಲಾಗಿದೆ. ಸಂಜೆಯ ವೇಳೆ ತಲವಾರು ಹಿಡಿದುಕೊಂಡು ಬಂದ ರಾಜೇಶ್ ದಿವ್ಯಶ್ರೀ ಮೇಲೆ ಹಲ್ಲೆ ನಡೆಸಿದ್ದು, ಇದರಿಂದ ಮುಖ ಹಾಗೂ ಕುತ್ತಿಗೆಗೆ ಗಂಭೀರ ಗಾಯವಾಗಿತ್ತು. ಈ ವೇಳೆ ತಡೆಯಲು ಬಂದ ತಂದೆಗೂ ಗಾಯ ಗಳಾಗಿವೆ. ಬೊಬ್ಬೆ ಕೇಳಿ ಪರಿಸರ ವಾಸಿಗಳು ಬಂದಿದ್ದು, ಈ ವೇಳೆ ರಾಜೇಶ್ ಪರಾರಿಯಾಗಿರುವುದಾಗಿ ತಿಳಿದುಬಂದಿದೆ. ಗಂಭೀರ ಗಾಯಗೊಂಡ ದಿವ್ಯಶ್ರೀ ಅವರನ್ನು ಪಯ್ಯನ್ನೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿದರೂ ಜೀವ ಉಳಿಸಲಾಗಲಿಲ್ಲ ಎಂದು ವೈದ್ಯರು…
ಮೂಡುಬಿದಿರೆ: ಆಳ್ವಾಸ್ ಕಾಲೇಜಿನ ವಿದ್ಯಾರ್ಥಿಯಯೋರ್ವ ವಸತಿ ನಿಲಯದ ಕಿಟಕಿಗಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೂಡಬಿದಿರೆ ತಾಲೂಕಿನ ಆಳ್ವಾಸ್ ಕಾಲೇಜಿನಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ ಬೆಂಗಳೂರು ಸಮೀಪದ ಹೊಸೂರು ನಿವಾಸಿ ಶಶಾಂಕ್ (20) ಎಂದು ಗುರುತಿಸಲಾಗಿದೆ. ಶಶಾಂಕ್ ಆಳ್ವಾಸ್ ಕಾಲೇಜಿನಲ್ಲಿ ತೃತೀಯ ವರ್ಷದ ಬಿಬಿಎಂ ವಿದ್ಯಾರ್ಥಿಯಾಗಿದ್ದನು. ಈತ ಕಾಲೇಜಿನ ಯಮುನಾ ಬಾಲಕರ ವಸತಿ ನಿಲಯದಲ್ಲಿ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದನೆ ಎನ್ನಲಾಗಿದೆ. ಘಟನಾ ಸ್ಥಳಕ್ಕೆ ಮೂಡುಬಿದಿರೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಡೆತ್ ನೋಟನ್ನು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಮೃತದೇಹವನ್ನು ಮೂಡುಬಿದಿರೆ ಸರಕಾರಿ ಆಸ್ಪತ್ರೆಯಲ್ಲಿ ಮರಣೋತ್ತರ ನಡೆಸಿ ಶುಕ್ರವಾರ ಬೆಳಗ್ಗೆ ಹೆತ್ತವರಿಗೆ ಹಸ್ತಾಂತರಿಸಲಾಗಿದೆ. ಘಟನೆಗೆ ಸಂಬಂಧಿಸಿ ಪ್ರಕರಣ ದಾಖಲಿಸಿಕೊಂಡಿರುವ ಮೂಡುಬಿದಿರೆ ಪೊಲೀಸರು, ತನಿಖೆ ಮುಂದುವರಿಸಿದ್ದಾರೆ.
ವಾಹನಗಳಿಗೆ ಅತಿ ಸುರಕ್ಷಿತ ನೋಂದಣಿ ಫಲಕ (HSRP) ಅಳವಡಿಸುವ ಬಗ್ಗೆ ಕರ್ನಾಟಕ ಹೈಕೋರ್ಟ್ ಮತ್ತೊಂದು ಡೆಡ್‌ಲೈನ್ ನೀಡಿದೆ. ಕರ್ನಾಟಕ ಹೈಕೋರ್ಟ್‌ನ ನ್ಯಾ. ಕೆ. ಕಾಮೇಶ್ವರ ರಾವ್ ಮತ್ತು ಕೆ. ರಾಜೇಶ್ ರೈ ಅವರಿದ್ದ ನ್ಯಾಯಪೀಠ, HSRP ನಂಬರ್ ಪ್ಲೇಟ್ ಅಳವಡಿಕೆಗೆ ಡಿಸೆಂಬರ್ 5ರ ರಿಯಾಯಿತಿ ನೀಡಿ ಮತ್ತೊಂದು ಡೆಡ್‌ಲೈನ್ ನೀಡಿದೆ. ನಿರ್ದಿಷ್ಟ ಉತ್ಪಾದಕರು ಮಾತ್ರ ಪೂರೈಸಬೇಕು ಮತ್ತು ನಿರ್ದಿಷ್ಟ ಡೀಲರ್‌ಗಳು ಮಾತ್ರ ಅಳವಡಿಸಬೇಕು ಎಂಬ ವಿಚಾರಕ್ಕೆ ಆಕ್ಷೇಪ ವ್ಯಕ್ತಪಡಿಸಿ ಸಲ್ಲಿಸಿದ್ದ ಮೇಲ್ಮನವಿಗಳ ವಿಚಾರಣೆಯನ್ನು ಇದೇ ವೇಳೆ ಮುಂದೂಡಲಾಗಿದೆ. ವಾಹನ ತಯಾರಿಸುವ ಮೂಲ ಸಾಧನಗಳ ಉತ್ಪಾದಕರು ಅನುಮತಿಸಿರುವ ಲೈಸನ್ಸ್ ಹೊಂದಿರುವ ಅತಿ ಸುರಕ್ಷಿತ ನಂಬರ್ ಪ್ಲೇಟ್‌ಗಳನ್ನು ಉತ್ಪಾದಕರು ಮಾತ್ರ ಎಚ್‌ಎಸ್‌ಆರ್ ಪ್ಲೇಟ್‌ಗಳನ್ನು ಹಳೆಯ ವಾಹನಗಳಿಗೆ ಪೂರೈಸಬೇಕು. ಈ ಫಲಕಗಳನ್ನು ವಾಹನ ಉತ್ಪಾದಕರು ಅನುಮತಿ ನೀಡುವ ಡೀಲರ್‌ಗಳು ಮಾತ್ರ ಅಳವಡಿಸಬೇಕು ಎಂಬ ನಿಯಮ ರೂಪಿಸಲಾಗಿತ್ತು. ಹಳೆಯ ವಾಹನಗಳಿಗೆ ಆಗಸ್ಟ್, 2024ರ ಒಳಗೆ ನೂತನ ನಂಬರ್ ಪ್ಲೇಟ್ ಅಳವಡಿಸಬೇಕು ಎಂಬ ಸಾರಿಗೆ ಇಲಾಖೆ ಹೊರಡಿಸಿರುವ ಸುತ್ತೋಲೆ…
ಮಂಗಳೂರು : ಕಳೆದ ಕೆಲ ದಿನದಿಂದ ಡ್ರೀಮ್ ಡೀಲ್ಸ್ ಗ್ರೂಪ್ನ ಸಿಬ್ಬಂದಿಗಳು ಬಿಡುಗಡೆ ಮಾಡುತ್ತಿರುವ ಲಕ್ಕಿ ಡ್ರಾ ವೇಳೆ ಹಿಂಬದಿ ಇರುವ ಸಿಬ್ಬಂದಿ ತನ್ನ ಕಿಸೆಯಿಂದ ತಮಗೆ ಬೇಕಾದ ಲಕ್ಕಿ ಡ್ರಾ ಕಾಯಿನ್ ಅನ್ನು ಕಣ್ಣಿಗೆ ಬಟ್ಟೆಕಟ್ಟಿದ ವ್ಯಕ್ತಿಗೆ ಕೊಡುವ ಚಿತ್ರಣ ವೈರಲ್ ಆಗಿದ್ದು ಈ ಬಗ್ಗೆ ಡ್ರೀಮ್ ಡೀಲ್ ಗ್ರೂಪ್ ನ ಆಡಳಿತ ವರ್ಗ ಸ್ಪಷ್ಟನೆ ನೀಡಿದೆ. ಈ ಬಗ್ಗೆ ಪತ್ರಿಕಾಗೋಷ್ಠಿ ಕರೆದಿದ್ದು ಈ ಕೃತ್ಯದಲ್ಲಿ ಕಾಣದ ಕೈಗಳ ಕೈವಾಡವಿದೆ ಈ ಬಗ್ಗೆ ಪೊಲೀಸ್ ಠಾಣೆಯಲ್ಲಿ ದೂರುದಾಖಲಾಗಿದ್ದು ಈ ಕೃತ್ಯದಲ್ಲಿ ಭಾಗಿಯಾದವರ ತನಿಖೆ ನಡೆಯುತ್ತಿದೆ ಎಂದು ತಿಳಿಸಿದ್ದಾರೆ.ನಿನ್ನೆ ಲಕ್ಕಿ ಡ್ರಾ ಸಂದರ್ಭದಲ್ಲಿ ಉಬೈದ್ ಮತ್ತು ಹರ್ಷಿತ್ ಅನ್ನುವ ನಮ್ಮ ಕೆಲಸದವರು ಸಂಸ್ಥೆಗೆ ಮೋಸ ಮಾಡಿದ್ದಾರೆ. ಇದು ಗಮನಕ್ಕೆ ಬಂದ ತಕ್ಷಣವೇ ಮರು ಡ್ರಾ ಮಾಡಿದ್ದೇವೆ. ಬಳಿಕ ಅವರ ವಿರುದ್ಧ ಕಂಕನಾಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದೇವೆ. ಅವರು ತಮ್ಮ ತಪ್ಪನ್ನು ಒಪ್ಪಿಕೊಂಡಿದ್ದಾರೆ. ಕಂಪೆನಿ ಮುಂದೆಯೂ ಜನರ ವಿಶ್ವಾಸಕ್ಕೆ ಬದ್ಧವಾಗಿದೆ. ಪೊಲೀಸ್…
ಮಂಗಳೂರು: ಭಾರತೀಯ ದೂರಸಂಪರ್ಕ ನಿಯಂತ್ರಣ ಪ್ರಾಧಿಕಾರ (ಟ್ರಾಯ್) ನಿಂದ ಕರೆ ಮಾಡಿರುವುದಾಗಿ ತಿಳಿಸಿ, ಮೊಬೈಲ್ ಸಿಮ್ ಖರೀದಿ ಮಾಡಿ ಕಾನೂನು ಬಾಹಿರ ಚಟುವಟಿಕೆ ನಡೆಸುತ್ತಿರುವ ಬಗ್ಗೆ ಆರೋಪಿಸಿ 1.71 ಕೋ.ರೂ. ವಂಚಿಸಿರುವ ಬಗ್ಗೆ ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನ. 11ರಂದು ದೂರುದಾರರಿಗೆ ಅಪರಿಚಿತ ವ್ಯಕ್ತಿಯೋರ್ವ ಟ್ರಾಯ್ ಪ್ರತಿನಿಧಿ ಎಂದು ಕರೆ ಮಾಡಿದ್ದು, ನಿಮ್ಮ ಹೆಸರಿನಲ್ಲಿ ಇನ್ನೊಂದು ಮೊಬೈಲ್ ನಂಬರ್ ರಿಜಿಸ್ಟರ್ ಆಗಿದೆ. ಮುಂಬೈನ ಅಂಧೇರಿ (ಪೂ)ದಲ್ಲಿ ಅದರ ಮೂಲಕ ಹಲವು ಕಾನೂನು ಬಾಹಿರ ಚಟುವಟಿಕೆ ನಡೆದಿವೆ. ಮಾರ್ಕೆಟಿಂಗ್ ನೆಪದಲ್ಲಿ ಆ ಮೊಬೈಲ್ ನಂಬರ್‌ನಿಂದ ಕರೆ ಮಾಡಿ ಕಿರುಕುಳ ನೀಡುತ್ತಿರುವ ಬಗ್ಗೆ ಎಫ್‌ಐಆರ್ ದಾಖಲಾಗಿದೆ. ಕೂಡಲೇ ಅಂಧೇರಿ ಪೂರ್ವ ಠಾಣೆಯನ್ನು ಸಂಪರ್ಕಿಸಬೇಕು. ಇಲ್ಲವಾದಲ್ಲಿ ನಿಮ್ಮ ಮೊಬೈಲ್ ಸೇವೆಯನ್ನು 2 ಗಂಟೆಗಳಲ್ಲಿ ಕೊನೆಗೊಳಿಸಲಾಗುವುದು ಎಂದು ಎಚ್ಚರಿಸಿದ್ದ. ಬಳಿಕ ದೂರುದಾರರು ಅಪರಿಚತ ವ್ಯಕ್ತಿ ಪ್ರದೀಪ್ ಸಾವಂತ್ ಎಂಬಾತನಲ್ಲಿ ಮಾತನಾಡಿದ್ದು, ನರೇಶ್ ಗೋಯೆಲ್ ವಂಚನೆ ಪ್ರಕರಣವನ್ನು ಒಳಗೊಂಡಿರುವ ಮನಿ ಲ್ಯಾಂಡರಿಂಗ್ ಯೋಜನೆಯಲ್ಲಿ ಭಾಗಿಯಾಗಿರುವುದರಿಂದ ಇನ್ನೊಂದು ಎಫ್‌ಐಆರ್ ದಾಖಲಾಗಿದೆ.…










