Author: main-admin

ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಹಿನ್ನಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ದಕ್ಷಿಣ ಕನ್ನಡದ ಐದು ತಾಲೂಕುಗಳಲ್ಲಿ ಮದ್ಯ ಮಾರಾಟವನ್ನು ನಿಷೇಧಿಸಿ ಜಿಲ್ಲಾಧಿಕಾರಿ ಮು ಮುಗಿಲನ್ ಆದೇಶ ಹೊರಡಿಸಿದ್ದಾರೆ. ಬಂಟ್ವಾಳ, ಬೆಳ್ತಂಗಡಿ, ಪುತ್ತೂರು, ಕಡಬ ಹಾಗೂ ಸುಳ್ಯ ತಾಲೂಕಿನಾದ್ಯಂತ ತತಕ್ಷಣದಿಂದಲೇ ಮದ್ಯದಂಗಡಿಗಳನ್ನು ಮುಚ್ಚಲಾಗಿದ್ದು, ನಾಳೆ(ಮೇ3) ಬೆಳಗ್ಗೆ 6 ಗಂಟೆವರೆಗೆ ಮದ್ಯ ಮಾರಾಟ ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ.

Read More

ಮಂಗಳೂರಿನಲ್ಲಿ ಹಿಂದೂ ಕಾರ್ಯಕರ್ತ ಸುಹಾಸ್‌ ಶೆಟ್ಟಿ ಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಇದರ ಮಧ್ಯೆ ಉಡುಪಿ ತಾಲೂಕಿನ ಆತ್ರಾಡಿಯಲ್ಲಿ ಮುಸ್ಲಿಂ ಯುವಕನ ಕೊಲೆಗೆ ಯತ್ನಿಸಿರುವಂತಹ ಘಟನೆ ನಡೆದಿದೆ. ಅಟೋ ಚಾಲಕ ಅಬೂಬ್ಬಕರ್ ಮೇಲೆ ದಾಳಿ ಮಾಡಲಾಗಿರುವ ಕುರಿತು ವರದಿಯಾಗಿದೆ. ಆಟೋ ಅಡ್ಡಗಟ್ಟಿ ಚಾಲಕ ಅಬೂಬಕ್ಕರ್‌ ಕೊಲೆಗೆ ಯತ್ನ ಮಾಡಲಾಗಿದೆ. ಅಬೂಬಕ್ಕರನನ್ನು ಅಡ್ಡಗಟ್ಟಿ ಸುಶಾಂತ್‌, ಸಂದೇಶ್‌ ಪೂಜಾರಿ ಎಂಬುವವರು ಕೊಲೆಗೆ ಯತ್ನ ಮಾಡಿದ್ದಾರೆ ಎಂದು ವರದಿಯಾಗಿದೆ. ಹಿರಿಯಡ್ಕ ಪೊಲೀಸರು ಇಬ್ಬರನ್ನು ಬಂಧನ ಮಾಡಿದ್ದಾರೆ. ಪೊಲೀಸರ ವಿಚಾರಣೆ ಸಂದರ್ಭ ಸುಹಾಸ್‌ ಶೆಟ್ಟಿ ಹತ್ಯೆಗೆ ಪ್ರತೀಕಾರವಾಗಿ ಕೃತ್ಯ ಎಸಗಿರುವುದಾಗಿ ಇಬ್ಬರು ತಪ್ಪೊಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ಈ ಕುರಿತು ಹಿರಿಯಡ್ಕ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಮಂಗಳೂರು: ಇಲ್ಲಿನ ಬಜ್ಪೆಯಲ್ಲಿ ಹಿಂದುತ್ವ ಕಾರ್ಯಕರ್ತನರೊಬ್ಬರ ಕೊಲೆ ನಡೆದಿರುವ ಬೆನ್ನಿಗೇ ಅಡ್ಯಾರ್ ಕಣ್ಣೂರಿನಲ್ಲಿ ಮುಂಜಾನೆ ಯುವಕನೋರ್ವನ ಮೇಲೆ‌ ದುಷ್ಕರ್ಮಿಗಳು ಚೂರಿ ಇರಿತ ನಡೆಸಿದ್ದಾರೆ.ಚೂರಿ ಇರಿತಕ್ಕೊಳಗಾದವರನ್ನು ನೌಷಾದ್ ಎಂದು ಗುರುತಿಸಲಾಗಿದ್ದು, ನಗರ ಹೊರವಲಯದ ಅಡ್ಯಾರ್ ಕಣ್ಣೂರಿನಲ್ಲಿ ಈ ಘಟನೆ‌ ನಡೆದಿದೆ. ನೌಶಾದ್ ಅವರು ತೊಕ್ಕೊಟ್ಟು ಸಮೀಪದ ಕಲ್ಲಾಪಿನ ಮಾರ್ಕೆಟ್‌ಗೆ ಹೋಗಲು ಮುಂಜಾನೆ 3 ಗಂಟೆಗೆ ಅಡ್ಯಾರ್ ಕಣ್ಣೂರು ಹೆದ್ದಾರಿಯಲ್ಲಿ ನಿಂತಿದ್ದ ವೇಳೆ ಎರಡು ದ್ವಿಚಕ್ರ ವಾಹನದಲ್ಲಿ ಆಗಮಿಸಿದ ನಾಲ್ವರು ದುಷ್ಕರ್ಮಿಗಳು ನೌಷಾದ್‌ರ ಬೆನ್ನಿಗೆ ಚೂರಿಯಿಂದ ಇರಿದರು ಎನ್ನಲಾಗಿದೆ.ಚೂರಿ ಇರಿತವಾದ ತಕ್ಷಣ ದುಷ್ಕರ್ಮಿಗಳಿಂದ ತಪ್ಪಿಸಿಕೊಂಡು ನೌಷಾದ್ ಓಡಿ ಪರಾರಿಯಾಗಿದ್ದು, ಬಳಿಕ‌ ಸ್ಥಳೀಯರು ಆತನನ್ನು ನಗರದ ಆಸ್ಪತ್ರೆಗೆ ರವಾನಿಸಿದ್ದಾರೆ ಎಂದು ತಿಳಿದು ಬಂದಿದೆ.

Read More

SSLC Result 2025ನೇ ಸಾಲಿನ ಎಸ್ಎಸ್ಎಲ್ ಸಿ ಪರೀಕ್ಷೆಯ ಫಲಿತಾಂಶವನ್ನು ಇಂದು ಅಂದರೆ 02-05-2025 ರಂದು ಪ್ರಕಟಿಸಲಿದ್ದು, ನಿಮ್ಮ ಫಲಿತಾಂಶವನ್ನು ಪರಿಶೀಲಿಸಲು ಈ ಕೆಳಗೆ ನೇರವಾದ ಲಿಂಕ್ ನೀಡಲಾಗಿದೆ. ಎಸ್ಎಸ್ಎಲ್ ಸಿ ಪರೀಕ್ಷೆಯ ಫಲಿತಾಂಶ ಪ್ರಕಟ SSLC Result 2025 ಈ ಬಾರಿಯ 10ನೇ ತರಗತಿಯ ಪರೀಕ್ಷೆಯು 21 ಮಾರ್ಚ್ ಇಂದ 04 ಎಪ್ರಿಲ್ ತನಕ ನಡೆಸಲಾಗಿದ್ದು, ಈಗಾಗಲೇ ಎಲ್ಲಾ ಪತ್ರಿಕೆಗಳ ಮೌಲ್ಯಮಾಪನ ಮುಗಿಸಿ, ಅದರಂತೆ ಈಗ ಎಸ್ಎಸ್ಎಲ್ ಸಿ ಪರೀಕ್ಷೆ-1 ಫಲಿತಾಂಶವನ್ನು ಪ್ರಕಟಿಸಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ತೀರ್ಮಾನಿಸಿದ್ದು, ಅದರಂತೆ ಮಾನ್ಯ ಶಿಕ್ಷಣ ಸಚಿವರು, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯವರ ಅಧ್ಯಕ್ಷತೆಯಲ್ಲಿ ಬೆಳಿಗ್ಗೆ 11.30 ಕ್ಕೆ ಸುದ್ದಿಘೋಷ್ಠಿ ಕರೆಯಲಾಗಿದೆ. ಇನ್ನು ವಿದ್ಯಾರ್ಥಿಗಳು ತಮ್ಮ ಫಲಿತಾಂಶವನ್ನು ಮೇ 02 ರಂದು ಮಧ್ಯಾಹ್ನ 12.30 ರ ನಂತರ ಈ ಕೆಳಗಿನ ಸರ್ಕಾರದ ಅಧಿಕೃತ ವೆಬ್ಸೈಟ್ ನಲ್ಲಿ ಚೆಕ್ ಮಾಡಬಹುದಾಗಿದೆ. SSLC Result 2025 ನಿಮ್ಮ ರಿಸಲ್ಟ್ ಈ ಲಿಂಕ್…

Read More

ಮಂಗಳೂರು: ಹಿಂದು ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಖಂಡಿಸಿ ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳ ಬಂದ್‌ಗೆ ಕರೆ ನೀಡಿದ್ದು ನಗರದಲ್ಲಿ ಅಂಗಡಿಗಳು ಮುಚ್ಚಿವೆ. ಬಸ್ ಸಂಚಾರ ಸ್ಥಗಿತಗೊಂಡಿದೆ. ಬೆಂಗಳೂರಿನಿಂದ ಬಂದ ನಾಲ್ಕು ಬಸ್‌ಗಳಿಗೆ ಕಿಡಿಗೇಡಿಗಳು ನಸುಕಿನಲ್ಲಿ ಕಲ್ಲೆಸೆದಿದ್ದಾರೆ. ಇದರ ಬೆನ್ನಲ್ಲೆ ಕೆಎಸ್ಆರ್‌ಟಿಸಿ ಬಸ್ ಸಂಚಾರವನ್ನು ಸ್ಥಗಿತಗೊಳಿಸಿದೆ. ಪಂಪ್‌ವೆಲ್‌ ಬಳಿ ನಾಲ್ಕು ಬಸ್‌ಗಳಿಗೆ ಕಲ್ಲು ತೂರಾಟ ನಡೆಸಲಾಗಿದೆ. ಪ್ರಯಾಣಿಕರಿಗೆ ತೊಂದರೆಯಾಗಿಲ್ಲ, ಬಸ್‌ಗಳ ಗಾಜು ಒಡೆದಿವೆ. ಹಾಗಾಗಿ ಬಸ್ ಸಂಚಾರ ಸ್ಥಗಿತಗೊಳಿಸಿದ್ದೇವೆ ಎಂದು ಕೆಎಸ್ಆರ್‌ಟಿಸಿ ಮಂಗಳೂರು ವಿಭಾಗದ ವಿಭಾಗೀಯ ನಿಯಂತ್ರಕ ರಾಜೇಶ್ ಶೆಟ್ಟಿ ತಿಳಿಸಿದರು. ಪಿ.ಯು. ಗಣಿತ ಪರೀಕ್ಷೆ- 2 ಶುಕ್ರವಾರ ನಿಗದಿಯಾಗಿತ್ತು. ಪರೀಕ್ಷಾ ಕೇಂದ್ರಗಳಿಗೆ ತಲುಪಲು ಸಾಧ್ಯವಾಗದೇ ವಿದ್ಯಾರ್ಥಿಗಳು ಸಮಸ್ಯೆ ಎದುರಿಸಿದರು. ಬಹುತೇಕ‌ ಅಂಗಡಿಗಳು ಮುಚ್ಚಿದ್ದು ನಗರದಲ್ಲಿ ಜನಸಂಚಾರ ವಿರಳವಾಗಿದೆ. ರಸ್ತೆಗಳು ಜನರಿಲ್ಲದೆ ಬಿಕೋ ಎನ್ನುತ್ತಿವೆ.

Read More

ಮಂಗಳೂರು: ಮಂಗಳೂರಲ್ಲಿ ಗುಂಪಿನಿಂದ ಕೇರಳ ಮೂಲದ ವ್ಯಕ್ತಿಯೊಬ್ಬನ ಮೇಲೆ ದಾಳಿ ಮಾಡಿ ಕೊಲೆ ಪ್ರಕರಣ ಸಂಬಂಧ ಕರ್ತವ್ಯ ನಿರ್ಲಕ್ಷ್ಯ ತೋರಿದ ಮೂವರು ಪೊಲೀಸರನ್ನು ಅಮಾನತುಗೊಳಿಸಿ ಆದೇಶಿಸಲಾಗಿದೆ. ಈ ಬಗ್ಗೆ ಮಂಗಳೂರು ಕಮೀಷನರ್ ಅನುಪಮ್ ಅಗರ್ವಾಲ್ ಮಾಹಿತಿ ನೀಡಿದ್ದು, ಮಂಗಳೂರಲ್ಲಿ ಕೇರಳ ಮೂಲದ ವ್ಯಕ್ತಿಯ ಕೊಲೆ ಪ್ರಕರಣ ಸಂಬಂಧ ಕರ್ತವ್ಯ ನಿರ್ಲಕ್ಷ್ಯ ತೋರಿದಂತ ಮೂವರು ಪೊಲೀಸರನ್ನು ಅಮಾನತುಗೊಳಿಸಿರುವುದಾಗಿ ತಿಳಿಸಿದ್ದಾರೆ. ಕರ್ತವ್ಯ ಲೋಪದ ಆರೋಪದಡಿ ಮಂಗಳೂರು ಗ್ರಾಮಾಂತರ ಠಾಣೆಯ ಇನ್ಸ್ ಪೆಕ್ಟರ್ ಶಿವಕುಮಾರ್, ಹೆಡ್ ಕಾನ್ಸ್ ಟೇಬಲ್ ಪಿ.ಚಂದ್ರ ಹಾಗೂ ಪೊಲೀಸ್ ಕಾನ್ಸ್ ಸ್ಟೇಬಲ್ ಯಲ್ಲಾಲಿಂಗ ಅವರನ್ನು ಅಮಾನತುಗೊಳಿಸಿರುವುದಾಗಿ ತಿಳಿಸಿದ್ದಾರೆ. ಕೇರಳ ಮೂಲದ ವ್ಯಕ್ತಿ ಕೊಲೆ ಪ್ರಕರಣ ಸಂಬಂಧ 20 ಜನರನ್ನು ಬಂಧಿಸಲಾಗಿದೆ. ತಲೆಮರೆಸಿಕೊಂಡಿರುವಂತ ಇತರೆ ಆರೋಪಿಗಳಿಗಾಗಿ ಹುಡುಕಾಟ ಮಾಡಲಾಗುತ್ತಿದೆ. ಈಗಾಗಲೇ ಘಟನಾ ಸ್ಥಳದಲ್ಲಿದ್ದಂತ 15 ಜನರಿಗೆ ನೋಟಿಸ್ ಜಾರಿ ಮಾಡಿದ್ದೇವೆ. ಘಟನಾ ಸ್ಥಳದಲ್ಲಿ ಇರುವಂತ ಸಿಸಿಟಿವಿಗಳನ್ನು ಪರಿಶೀಲನೆ ಮಾಡಲಾಗುತ್ತಿದೆ ಎಂದರು.

Read More

ಕಾಸರಗೋಡು: ರಾಷ್ಟ್ರೀಯ ಹೆದ್ದಾರಿಯ ಕಾಸರಗೋಡಿನ ಉಪ್ಪಳ ಗೇಟ್ ಸಮೀಪ ಕಾರು ಮತ್ತು ಆಟೋ ರಿಕ್ಷಾ ನಡುವೆ ಅಪಘಾತದಲ್ಲಿ ಓರ್ವ ಮೃತಪಟ್ಟ ಘಟನೆ ಬುಧವಾರ ಸಂಜೆ ನಡೆದಿದೆ. ಆಟೋ ಚಾಲಕ ಕಾಞಾಂಗಾಡ್ ನ ಮೋಹನ್ ಮೃತಪಟ್ಟವರು. ಮೋಹನ್ ಚಲಾಯಿಸುತ್ತಿದ್ದ ಆಟೋ ರಿಕ್ಷಾ ಮತ್ತು ಕಾರು ನಡುವೆ ಅಪಘಾತ ನಡೆದಿದೆ. ಕಾರು ಮತ್ತು ಆಟೋ ರಿಕ್ಷಾ ನಜ್ಜುಗುಜ್ಜಾಗಿದೆ. ಕಾರಲ್ಲಿದ್ದವರು ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. ಮಂಜೇಶ್ವರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿ ಕೊಂಡಿದ್ದಾರೆ. ನಜ್ಜುಗುಜ್ಜಾದ ಆಟೋ ರಿಕ್ಷಾದೊಳಗೆ ಸಿಲುಕಿದ್ದ ಚಾಲಕನನ್ನು ಪೊಲೀಸರು ಹಾಗೂ ನಾಗರಿಕರು ಹೊರತೆಗೆದು ಆಸ್ಪತ್ರೆಗೆ ತಲಪಿದರೂ ಜೀವ ಉಳಿಸಲಾಗಲಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

Read More

ಮಂಗಳೂರು: ಶೈಕ್ಷಣಿಕ ಸೇವಾಸಕ್ತ, ಸಮಾಜ ಸೇವಕ ಮತ್ತು ಉದ್ಯಮಿ ಬೊಂಡಾಲ ಸಚ್ಚಿದಾನಂದ ಶೆಟ್ಟಿ ಅವರು ಸುವರ್ಣ ಸಂಭ್ರಮದ ಅಂತಾರಾಷ್ಟ್ರೀಯ ಆರ್ಯಭಟ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಬೆಂಗಳೂರಿನ ಆರ್ಯಭಟ ಸಾಂಸ್ಕೃತಿಕ ಸಂಸ್ಥೆಯು ತನ್ನ 50ನೇ ವರ್ಷಾಚರಣೆ ಸಂದರ್ಭದಲ್ಲಿ 2024 – 25 ನೇ ಸಾಲಿಗೆ ರಾಜ್ಯ, ರಾಷ್ಟ್ರ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಿದ ಭಾರತೀಯ ಪ್ರಜೆಗಳಿಗೆ ಈ ಪ್ರತಿಷ್ಠಿತ ಪ್ರಶಸ್ತಿಯನ್ನು ನೀಡುತ್ತಿದೆ.ಬೊಂಡಾಲ ಸಚ್ಚಿದಾನಂದ ಶೆಟ್ಟಿ:ಬಂಟ್ವಾಳ ತಾಲೂಕು ಶಂಭೂರು ಗ್ರಾಮದ ಬೊಂಡಾಲದಲ್ಲಿ 1961 ಸಪ್ಟೆಂಬರ್ 25 ರಂದು ಜನಿಸಿದ ಸಚ್ಚಿದಾನಂದ ಶೆಟ್ಟರು ನರಿಕೊಂಬು ಸರಕಾರಿ ಪ್ರಾಥಮಿಕ ಶಾಲೆ ಮತ್ತು ಪಾಣೆಮಂಗಳೂರು ಶಾರದಾ ಪ್ರೌಢಶಾಲೆಗಳಲ್ಲಿ ವ್ಯಾಸಂಗ ಮಾಡಿ, ಬಂಟ್ವಾಳದ ಎಸ್‌.ವಿ.ಎಸ್ ಕಾಲೇಜಿನಲ್ಲಿ ಪದವಿ ಶಿಕ್ಷಣ ಪೂರೈಸಿದರು. ಮುಂಬೈ ಮಹಾನಗರದಲ್ಲಿ ವೃತ್ತಿಜೀವನ ಆರಂಭಿಸಿದ ಅವರು ಭಾರತೀಯ ವಿಮಾನಯಾನ ಹಾಗೂ ವಿವಿಧ ಕಂಪನಿಗಳ ಲೆಕ್ಕಪತ್ರ ವಿಭಾಗದಲ್ಲಿ ಸುಮಾರು 14 ವರ್ಷ ಸೇವೆ ಸಲ್ಲಿಸಿದ್ದಾರೆ. ಬಳಿಕ ಊರಿಗೆ ಹಿಂತಿರುಗಿ ದುರ್ಗಾ ಫೆಸಿಲಿಟೀಸ್ ಮ್ಯಾನೇಜ್ಮೆಂಟ್ ಸರ್ವಿಸಸ್ ಪ್ರೈ. ಲಿ. ಎಂಬ ಸಂಸ್ಥೆಯನ್ನು…

Read More

ಮಂಗಳೂರು : ನಗರದ ಹೊರವಲಯ ಕುಡುಪು ಸಮೀಪ ಏ.27ರಂದು ದುಷ್ಕರ್ಮಿಗಳ ಗುಂಪೊಂದು ಥಳಿಸಿ ಹತ್ಯೆಗೈದ ವ್ಯಕ್ತಿಯ ಗುರುತುಪತ್ತೆಯಾಗಿದ್ದು, ಕೇರಳದ ವಯನಾಡಿನಿಂದ ಆಗಮಿಸಿದ ಆತನ ಮನೆಮಂದಿ ಮೃತದೇಹವನ್ನು ಇಂದು ಬೆಳಗ್ಗಿನ ಜಾವ ಕೊಂಡೊಯ್ದಿದ್ದಾರೆ.   ಕೇರಳದ ವಯನಾಡ್ ಜಿಲ್ಲೆಯ ಪುಲ್ಪಳ್ಳಿ ನಿವಾಸಿ ಕುಂಞಾಯಿ ಎಂಬವರ ಪುತ್ರ ಅಶ್ರಫ್ ಕೊಲೆಯಾದ ವ್ಯಕ್ತಿ. ಈ ಬಗ್ಗೆ ಮಾಹಿತಿ ಪಡೆದಿದ್ದ ಅಶ್ರಫ್ ಕುಟುಂಬಸ್ಥರು ಮಂಗಳವಾರ ತಡರಾತ್ರಿ 12:30ರ ಸುಮಾರಿಗೆ ಮಂಗಳೂರಿಗೆ ಆಗಮಿಸಿದ್ದರು. ಅಶ್ರಫ್ ಅವರ ಸಹೋದರ ಸೇರಿದಂತೆ ಆಗಮಿಸಿದ್ದ ಮೂವರು ವೆನ್ಲಾಕ್ ಶವಾಗಾರದಲ್ಲಿರಿಸಿದ್ದ ಮೃತದೇಹ ಅಶ್ರಫ್ ಅವರದ್ದೆಂದು ಗುರುತಿಸಿದರು. ಈ ಹಿನ್ನೆಲೆಯಲ್ಲಿ ಕಾನೂನು ಪ್ರಕ್ರಿಯೆಯನ್ನು ಮುಗಿಸಿ ಮೃತದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಲಾಯಿತು.ಬಳಿಕ ಮೃತದೇಹವನ್ನು ಬಂದರ್ ನ ಝೀನತ್ ಭಕ್ಷ್ ಕೇಂದ್ರ ಜುಮಾ ಮಸೀದಿಗೆ ಕೊಂಡೊಯ್ಯಲಾಯಿತು. ಅಲ್ಲಿ ಅಂತಿಮ ವಿಧಿವಿಧಾನಗಳನ್ನು ನೆರವೇರಿಸಿ ಮಯ್ಯಿತ್ ನಮಾಝ್ ನಿರ್ವಹಿಸಿದ ಬಳಿಕ ಮುಂಜಾನೆ 4:30ರ ಸುಮಾರಿಗೆ ಮೃತದೇಹವನ್ನು ಆಂಬುಲೆನ್ಸ್ ಮೂಲಕ ವಯನಾಡಿಗೆ ಕೊಂಡೊಯ್ಯಲಾಯಿತು.ಈ ಸಂದರ್ಭ ಮಾಜಿ ಮೇಯರ್ ಕೆ.ಅಶ್ರಫ್, ಸುಹೈಲ್ ಕಂದಕ್, ಕೆ.ಕೆ.ಶಾಹುಲ್ ಹಮೀದ್, ಬಿ.ಕೆ.ಇಮ್ತಿಯಾಝ್, ಸಂತೋಷ್ ಬಜಾಲ್,…

Read More

ಉಡುಪಿ ಜಿಲ್ಲೆಯ ಕುಂದಾಪುರ ಸಮೀಪ ಪ್ರಕರಣವೊಂದರಲ್ಲಿ ನ್ಯಾಯಾಲಯಕ್ಕೆ ಹಾಜರಾಗದೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಕುಂದಾಪುರ ಪೊಲೀಸರು ಇಂದು ಗೋವಾ ವಿಮಾನ ನಿಲ್ದಾಣದಲ್ಲಿ ಬಂಧಿಸಿದ್ದಾರೆ ಎಂದು ಮಾಹಿತಿ ತಿಳಿದು ಬಂದಿದೆ. ಬಂಧಿತ ಆರೋಪಿ ಕಂಡ್ಲೂರು ಕಾವ್ರಾಡಿ ನಿವಾಸಿ ಮುಸೀನ್ ಸಾಹೇಬ್(29) ಎಂದು ಗುರುತಿಸಲಾಗಿದೆ. ಈತನ ವಿರುದ್ಧ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಈತ 2017ರಲ್ಲಿ ಕುಂದಾಪುರ ನ್ಯಾಯಾಲಯ ದಿಂದ ಜಾಮೀನು ಪಡೆದುಕೊಂಡಿದ್ದನು. ಆ ಬಳಿಕ ಆತ ಪ್ರಕರಣದ ವಿಚಾರಣೆಗೆ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದನು. ಈ ಸಂಬಂಧ ಈತನ ವಿರುದ್ಧ ಒಟ್ಟು 13 ಬಾರಿ ದಸ್ತಗಿರಿ ವಾರೆಂಟನ್ನು ಹೊರಡಿಸಲಾಗಿತ್ತು. ಈತ ಹೊರದೇಶಕ್ಕೆ ಹೋಗಿರಬಹುದೆಂಬ ಸಂಶಯದಲ್ಲಿ ಆತನ ವಿರುದ್ದ ಎಲ್.ಓ.ಸಿ.ಯನ್ನು ತೆರೆಸಲಾಗಿತ್ತು. ಅದರಂತೆ ಮುಸೀನ್ ಗೋವಾ ರಾಜ್ಯದ ದಾಬೋಲಿಮ್ ಏರ್ ಪೋರ್ಟ್‌ಗೆ ಬಂದಿಳಿರುವ ಮಾಹಿತಿ ಬಂದಿದ್ದು, ಅದರಂತೆ ಆತನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಈ ಬಗ್ಗೆ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆ ನಡೆಸಿದ್ದಾರೆ.

Read More