Author: main-admin

ಮಂಗಳೂರು : ನಗರದ ಮರೋಳಿಯ ಕೆಂಬಾರ್‌ನ ಹೆದ್ದಾರಿ ಬದಿಯಲ್ಲಿ ಕಾಂಚನ ಟಿ.ವಿ.ಎಸ್. ಆಟೋ ರಿಕ್ಷಾ ವರ್ಕ್ ಶಾಪ್‌ನ ಲಾಕರ್ ನಲ್ಲಿದ್ದ 93,540 ರೂ. ಹಣವನ್ನು ಕಳ್ಳರು ಕಳವು ಮಾಡಿದ್ದಾರೆ. ಸಂಸ್ಥೆಯ ವರ್ಕ್ಸ್ ಮ್ಯಾನೇಜರ್ ನ. 19ರಂದು ವರ್ಕ್‌ ಶಾಪ್‌ನಲ್ಲಿ ಆ ದಿನ ಸಂಗ್ರಹವಾದ 93,540 ರೂ. ಹಣವನ್ನು ಆಟೋ ರಿಕ್ಷಾದ ಬಿಡಿಭಾಗಗಳನ್ನು ಇಡುವ ಕೋಣೆಯ ಟೇಬಲ್‌ನಲ್ಲಿರುವ ಮಿನಿ ಲಾಕರ್‌ನಲ್ಲಿ ಇಟ್ಟು ಡ್ರಾವರ್ ಲಾಕ್ ಮಾಡಿದ್ದಾರೆ. ನ. 20ರಂದು ಬೆಳಗ್ಗೆ 6.50ರ ವೇಳೆ ಸೆಕ್ಯೂರಿಟಿ ಗಾರ್ಡ್ ಮ್ಯಾನೇಜರ್ ಗೆ ಕರೆ ಮಾಡಿ ವರ್ಕ್ ಶಾಪ್‌ನಲ್ಲಿ ಕಳವಾಗಿರುವ ಬಗ್ಗೆ ತಿಳಿಸಿದ್ದಾರೆ. ಮ್ಯಾನೇಜರ್ ಕೂಡಲೇ ವರ್ಕ್ ಶಾಪ್‌ಗೆ ಬಂದು ನೋಡಿದಾಗ ಹಿಂಬಾಗಿಲನ್ನು ಯಾವುದೋ ಆಯುಧವನ್ನು ಬಳಸಿ ಜಖಂಗೊಳಿಸಿ ಕಳ್ಳರು ಒಳ ಪ್ರವೇಶಿಸಿರುವುದು ಕಂಡುಬಂದಿದೆ. ಅಲ್ಲಿಂದ ನೇರವಾಗಿ ಬಿಡಿ ಭಾಗಗಳ ಕೋಣೆಯ ಬಾಗಿಲನ್ನು ತೆರೆದು ಡಾವರ್‌ನ ಲಾಕರನ್ನು ಯಾವುದೋ ಆಯುಧವನ್ನು ಉಪಯೋಗಿಸಿ ಬಲವಂತದಿಂದ ತೆರೆದು ಅದರಲ್ಲಿದ್ದ ನಗದು 93,540 ರೂ. ಹಾಗೂ ಲಾಕರ್ ಅನ್ನು ಕಳ್ಳತನ ಮಾಡಿದ್ದಾರೆ.…

Read More

ಉಡುಪಿ : ನಗರ ಠಾಣೆ ವ್ಯಾಪ್ತಿಯ ಮನೆಯೊಂದರಲ್ಲಿ ಹೋಂ ನರ್ಸ್ ಆಗಿ ಕೆಲಸ ಮಾಡಿಕೊಂಡಿದ್ದ ಕೊಪ್ಪಳ ತಾಲೂಕು ಕುಷ್ಟಗಿಯ ಸಿದ್ದಪ್ಪ ಕೆ. ಕೊಡ್ಲಿ ಎಂಬಾತ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳವು ಮಾಡಿದ್ದು, ಆತನನ್ನು ಮೂರೇ ದಿನದಲ್ಲಿ ಉಡುಪಿ ನಗರ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಮನೆಯ ಹಾಲ್‌ನ ಗಾಜಿನ ಬೀರುವಿನಲ್ಲಿ ಹಾಗೂ ಮಲಗುವ ಕೋಣೆಯಲ್ಲಿ ಇರಿಸಿದ್ದ ಕಪಾಟಿನ‌ಲ್ಲಿದ್ದ ಲಾಕರ್‌ನಲ್ಲಿ ಇರಿಸಿದ್ದ ಸುಮಾರು 427 ಗ್ರಾಂ ತೂಕದ 31,17,100 ರೂ. ಮೌಲ್ಯದ ಚಿನ್ನ ಹಾಗೂ ವಜ್ರಾಭರಣಗಳನ್ನು ಸಿದ್ದಪ್ಪ ಕಳವು ಮಾಡಿಕೊಂಡು ಹೋಗಿದ್ದ. ಈ ಬಗ್ಗೆ ಉಡುಪಿ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.ಆರೋಪಿಯನ್ನು ಬಂಧಿಸಿರುವ ಪೊಲೀಸರು ಆತ ಕಳವು ಮಾಡಿ ಅಡಗಿಸಿಟ್ಟಿದ್ದ ಸ್ಥಳದಿಂದ 30 ಲಕ್ಷ ರೂ. ಮೌಲ್ಯದ 374.45 ಗ್ರಾಂ ತೂಕದ ಚಿನ್ನ, ಬೆಳ್ಳಿ ಹಾಗೂ ವಜ್ರಾಭರಣಗಳನ್ನು ಸ್ವಾಧೀನಪಡಿಸಿಕೊಂಡಿದ್ದಾರೆ.

Read More

ಬೆಳ್ತಂಗಡಿ : ಶಾಲಾ ಮಕ್ಕಳನ್ನು ಬೈಕಿನಲ್ಲಿ ಕರೆದೊಯ್ಯುತ್ತಿದ್ದ ವೇಳೆ ರಸ್ತೆ ತಿರುವಿನಲ್ಲಿ ಕಾಡಾನೆ ಎದುರುಗೊಂಡ ಹಿನ್ನಲೆ ಅಪಾಯ ತಪ್ಪಿಸಲು ಹೋಗಿ ಮೂವರು ಗಾಯಗೊಂಡು ಮನೆ ಸೇರಿದ ಘಟನೆ ನ.21 ರ ಮುಂಜಾನೆ ಶಿಶಿಲ ಗ್ರಾಮದಿಂದ ವರದಿಯಾಗಿದೆ. ಕಳ್ಳಾಜೆ ನಿವಾಸಿ ವಸಂತ ಗೌಡ ಎಂಬವರು ತನ್ನ ಮಕ್ಕಳನ್ನು ಶಿಬಾಜೆ ಗ್ರಾಮದ ಪೆರ್ಲ ಶಾಲೆಗೆ ಬಿಡಲು ಹೋಗುತ್ತಿದ್ದಾಗ ಮಾರ್ಗ ತಿರುವಿನ ಮಧ್ಯೆ ಒಂಟಿ ಸಲಗವೊಂದು ಪ್ರತ್ಯಕ್ಷಗೊಂಡಿದೆ, ಭಯದಿಂದ ತನ್ನ ಬೈಕನ್ನು ನಿಲ್ಲಿಸಿದಾಗ ಬೈಕಿಂದ ಬಿದ್ದ ಸವಾರ ಮತ್ತು ಅವರ ಇಬ್ಬರು ಮಕ್ಕಳ ಮೊಣಕಾಲು ಮತ್ತು ಕೈ ಗಳಿಗೆ ಗಾಯಗಳಾಗಿವೆ.

Read More

ಕಡಬ: ರಾಮಕುಂಜದ ಖಾಸಗಿ ಕಾಲೇಜಿನ ಉಪನ್ಯಾಸಕನೋರ್ವ ವಿದ್ಯಾರ್ಥಿಗಳಿಗೆ ಹಿಗ್ಗಾಮುಗ್ಗ ಥಳಿಸಿದ್ದು ಓರ್ವ ಕಡಬ ಸಮುದಾಯ ಆಸ್ಪತ್ರೆಗೆ ದಾಖಲಾದ ಘಟನೆ ನ.20 ರಂದು ನಡೆದಿದೆ. ವಿದ್ಯಾರ್ಥಿಗಳಿಬ್ಬರು ಕಾಲೇಜಿಗೆ ಬೈಕ್ ತಂದ ವಿಚಾರದಲ್ಲಿ ಉಪನ್ಯಾಸಕನೊಬ್ಬ ಪ್ರಶ್ನಿಸಿ ಬುಧವಾರ ದಿನ  ಮುಂಜಾನೆ ವೇಳೆ ಹೊಡೆದಿರುವುದಾಗಿ ಆರೋಪಿಸಲಾಗಿದೆ. ರಾಮಕುಂಜದ ದ್ವಿತೀಯ ಪಿಯುಸಿ ವಿದ್ಯಾರ್ಥಿ ಕವನ್ ಎಂಬವರು ಕಡಬ ಸಮುದಾಯ ಆಸ್ಪತ್ರೆಗೆ ದಾಖಲಾದ ವಿದ್ಯಾರ್ಥಿ. ವಿದ್ಯಾರ್ಥಿಯ ಹೇಳಿಕೆ ಪ್ರಕಾರ ಎಂಟು ವಿದ್ಯಾರ್ಥಿಗಳಿಗೆ ಹೊಡೆದಿರುವುದಾಗಿ ಆರೋಪ ವ್ಯಕ್ತಪಡಿಸಿದ್ದಾರೆ. ತಡ ರಾತ್ರಿ ಕಡಬ ಪೊಲೀಸರು ಆಸ್ಪತ್ರೆಗೆ ಭೇಟಿ ನೀಡಿ ಮಾಹಿತಿ ಪಡೆದುಕೊಳ್ಳುವ ಸಂದರ್ಭದಲ್ಲಿ ಉಪನ್ಯಾಸಕನೂ ಆಗಮಿಸಿದ್ದು , ಸ್ಥಳದಲ್ಲಿದ್ದ ಯುವಕರ ಗುಂಫು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಆಸ್ಪತ್ರೆಯೊಳಗೆ ಕೆಲ ಹೊತ್ತು ಭಾರಿ ಮಾತಿನ ಚಕಮಕಿ ನಡೆದಿತ್ತು.ಬಳಿಕ ಆಸ್ಪತ್ರೆ ಸಿಬ್ಬಂದಿಗಳು ಯುವಕರಿಗೆ ಆಸ್ಪತ್ರೆಯಿಂದ ಹೊರ ಹೋಗುವಂತೆ ಸೂಚಿಸಿದ್ದರು.

Read More

ಉಡುಪಿ: ಕೇವಲ ಒಂದೂವರೆ ತಿಂಗಳ ಹಿಂದೆಯಷ್ಟೆ ವಿವಾಹ ನಿಶ್ಚಿತಾರ್ಥ ಆಗಿದ್ದ ಯುವತಿಯೋರ್ವಳು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಪ್ರಯತ್ನಿಸಿದ್ದು, ಚಿಕಿತ್ಸೆ ಫಲಿಸದೆ ಮೃತಪಟ್ಟ ಘಟನೆ ಸಂಭವಿಸಿದೆ. ಉಡುಪಿ ತಾಲೂಕಿನ ದೆಂದೂರುಕಟ್ಟೆಯ ಇಂದ್ರಾಳಿ ನಿವಾಸಿ ಕೀರ್ತನಾ ಶೆಟ್ಟಿ (26) ಆತ್ಮಹತ್ಯೆ ಮಾಡಿಕೊಂಡ ಯುವತಿ. ಇವರು ಮನೆಯ ರೂಮ್‌ನಲ್ಲಿ ಕುತ್ತಿಗೆಗೆ ಶಾಲು ಬಿಗಿದುಕೊಂಡು ಆತ್ಮಹತ್ಯೆಗೆ ಪ್ರಯತ್ನಿಸಿದ್ದರು. ಬಳಿಕ ಮನೆಯವರು ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಿಸದೆ ಅವರು ನವೆಂಬರ್ 17ರಂದು ಕೊನೆಯುಸಿರೆಳೆದಿದ್ದಾರೆ. ಕೀರ್ತನಾ ಅವರು ಮಣಿಪುರದ ಬೆಳ್ಳೆ ವ್ಯವಸಾಯ ಸೇವಾ ಸಹಕಾರಿ ಸಂಘದಲ್ಲಿ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ. ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ.

Read More

ಮಂಗಳೂರು: ಅಪ್ರಾಪ್ತೆಯ ಗರ್ಭಪಾತ ಮಾಡಿರುವ ಆರೋಪ ಎದುರಿಸುತ್ತಿದ್ದ ಚಿಕ್ಕಮಗಳೂರಿನ ವೈದ್ಯ ಡಾ. ಚಂದ್ರಶೇಖರ್‌ ಅವರನ್ನು ಖುಲಾಸೆಗೊಳಿಸಿ ಮಂಗಳೂರಿನ ಎರಡನೇ ಪೋಕ್ಸೋ ನ್ಯಾಯಾಲಯ ತೀರ್ಪು ನೀಡಿದೆ. ಲೈಂಗಿಕ ದೌರ್ಜನ್ಯಕ್ಕೊಳಗಾದ 12ವರ್ಷ ವಯಸ್ಸಿನ ಬಾಲಕಿಯನ್ನು ಆರೋಪಿತ ಸುಧೀರ್‌ ಹಾಗೂ ಆತನ ಮನೆಯವರು ಗರ್ಭಪಾತ ಮಾಡಿಸಲು ಚಿಕ್ಕಮಗಳೂರಿನ ಡಾ| ಚಂದ್ರಶೇಖರ್‌ ಅವರ ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದರು. ವೈದ್ಯಾಧಿಕಾರಿಗಳು ಬಾಲಕಿಯನ್ನು ವಿಚಾರಿಸಿದಾಗ ಆಕೆಯ ಪ್ರಾಯ 18 ವರ್ಷ 3 ತಿಂಗಳೆಂದು ತಿಳಿಸಿದ್ದರು‌. ಈ ವೇಳೆ ಅಪ್ರಾಪ್ತೆಯು ಆರೋಪಿ ಸುಧೀರ್‌ ತನ್ನ ಪತಿ ಎಂದು ತಿಳಿಸಿದ್ದಳು. ಆಸ್ಪತ್ರೆಗೆ ಬರುವ ಮೊದಲು ಆಕೆಗೆ ಗರ್ಭಪಾತದ ಮಾತ್ರೆಗಳನ್ನು ನೀಡಿದ್ದ ಕಾರಣ ತೀವ್ರ ರಕ್ತಸ್ರಾವ ಆಗಿತ್ತು. ಆದ್ದರಿಂದ ವೈದ್ಯರು ಸಂತ್ರಸ್ತೆಯ ಪ್ರಾಣ ಉಳಿಸುವ ಉದ್ದೇಶದಿಂದ ಸಂತ್ರಸ್ತೆಯ ಪತಿಯೆಂದು ತಿಳಿಸಿದ್ದ ಆರೋಪಿ ಸುಧೀರ್‌ನಿಂದ ಕಾನೂನು ಪ್ರಕಾರ ಒಪ್ಪಿಗೆ ಪತ್ರ ಪಡೆದುಕೊಂಡು ತಕ್ಷಣ ಚಿಕಿತ್ಸೆ ನೀಡಿ ಗರ್ಭದಲ್ಲಿ ಉಳಿದಿದ್ದ ರಕ್ತ ಮಿಶ್ರಿತ ಕಣಗಳನ್ನು ತೆಗೆದಿದ್ದರು. ಬಳಿಕ ವೈದ್ಯರ ವಿರುದ್ಧ ಪ್ರಕರಣ ದಾಖಲಾಗಿತ್ತು. ತನಿಖೆಯ ವೇಳೆ ವೈದ್ಯರು…

Read More

ಮಂಗಳೂರು: ನ್ಯಾಯಾಲಯದಿಂದ ಜಾಮೀನು ಪಡೆದು ಬಿಡುಗಡೆಗೊಂಡು ವಿಚಾರಣೆಗೆ ಹಾಜರಾಗದೆ ಸುಮಾರು 17 ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿಯನ್ನು ಪಾಂಡೆಶ್ವರ ಪೋಲಿಸರು ಕಾರ್ಯಚರಣೆ ಮೂಲಕ ಯಶಸ್ವಿಯಾಗಿ ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಉಡುಪಿ ಮಲ್ಪೆ ಕಿದಿಯೂರು ನಿವಾಸಿ ವಿಜಯ್ ಕುಮಾರ್ ಪ್ರಾಯ 40 ವರ್ಷ. ಈತನ ಮೇಲೆ ದಕ್ಷಿಣ ಪೊಲೀಸ್ ಠಾಣಾ ಆ ಕ್ರ ನಂ 92/2007 ಕಲಂ 381 IPC ರಂತೆ ಪ್ರಕರಣ ದಾಖಲಾಗಿ ಆರೋಪಿಯು ಮಾನ್ಯ ನ್ಯಾಯಾಲಯದಿಂದ ಜಾಮೀನು ಪಡೆದು ಬಿಡುಗಡೆಗೊಂಡು ವಿಚಾರಣೆಗೆ ಹಾಜರಾಗದೆ ಸುಮಾರು 17 ವರ್ಷ ತಲೆಮರಿಸಿಕೊಂಡಿದ್ದ ಕಾರಣ ಸದರಿ ಪ್ರಕರಣವನ್ನು ಮಾನ್ಯ ನ್ಯಾಯಾಲಯವು LPC ಪ್ರಕರಣವಾಗಿ ಪರಿಗಣಿಸಿ ನ್ಯಾಯಾಲಯವು ಆರೋಪಿಯ ಮೇಲೆ LPC ವಾರೆಂಟ್ ಹೊರಡಿಸಿತ್ತು.ಸದರಿ ಆರೋಪಿಯನ್ನು ಪತ್ತೆಮಾಡಿ ಇಂದು ದಿನಾಂಕ 20/11/2024 ರಂದು ಕುಂದಾಪುರ HC ಪುಟ್ಟರಾಮ PC ಅಂಜನಯ್ಯ PC ಮಲ್ಲಿಕ್ ಜಾನ್ ರವರು ಆರೋಪಿಯನ್ನ ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ಆರೋಪಿಗೆ ದಿನಾಂಕ 03/12/2024 ರ ವರೆಗೆ ನ್ಯಾಯಾಂಗ ಬಂಧನ ವಿಧಿಸಿದೆ. ಪ್ರಕರಣದ ಸಾರಾಂಶದಿನಾಂಕ…

Read More

ಉಡುಪಿ : ಕಾರ್ಕಳ ತಾಲೂಕಿನ ಹೆಬ್ರಿ ಕಬ್ಬಿನಾಲೆಯ ಪೀಠ ಬಯಲುವಿನಲ್ಲಿ ಸೋಮವಾರ ರಾತ್ರಿ ನಡುವೆ ನಡೆದ ಗುಂಡಿನ ಕಾಳಗದಲ್ಲಿ ನಕ್ಸಲ್ ಮುಖಂಡ ವಿಕ್ರಂ ಕೂಡ ಬಲಿಯಾಗಿದ್ದ ಇದೀಗ ನಕ್ಸಲ್ ವಿಕ್ರಂಗೌಡನ ಶವ ಸಾಗಿಸುತ್ತಿದ್ದ ಅಂಬುಲೆನ್ಸ್ ಪಲ್ಟಿಯಾಗಿದೆ. ಹೌದು ಮರಣೋತ್ತರ ಪರೀಕ್ಷೆ ಬಳಿಕ ವಿಕ್ರಂ ಗೌಡನ ಶಬವನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಲಾಯಿತು. ಗ್ರಾಮಕ್ಕೆ ವಿಕ್ರಂ ಗೌಡನ ಶವ ತೆಗೆದುಕೊಂಡು ಹೋಗುತ್ತಿದ್ದರು. ಈ ವೇಳೆ ರಾಷ್ಟ್ರೀಯ ಹೆದ್ದಾರಿ 169 A ನಲ್ಲಿ ಶವ ಸಾಗಣೆ ವೇಳೆ ಆಂಬುಲೆನ್ಸ್ ಪಲ್ಟಿಯಾಗಿದೆ. ವೇಗವಾಗಿ ಹೋಗುತ್ತಿದ್ದ ಆಯಂಬುಲೆನ್ಸ್​​ ಚಾಲಕನ ನಿಯಂತ್ರಣ ತಪ್ಪಿ, ರಸ್ತೆ ಬದಿಗೆ ಹೋಗಿದೆ. ರಸ್ತೆ ಬದಿಯಲ್ಲಿದ್ದ ಗುಡಿಯೊಳೊಗೆ ವಾಲಿಕೊಂಡು ನಿಂತಿದೆ. ಕೂಡಲೆ ಸ್ಥಳದಲ್ಲಿದ್ದ ಜನರು ಧಾವಿಸಿ, ಆಯಂಬುಲೆನ್ಸ್​ ಅನ್ನು ಮೇಲಕ್ಕೆ ಎತ್ತಿದ್ದಾರೆ. ಬಳಿಕ, ಆಯಂಬುಲೆನ್ಸ್​ ವಿಕ್ರಂಗೌಡ ಮೃತದೇಹ ಹೊತ್ತು ಸಾಗಿದೆ. ಮೋಸ್ಟ ವಾಂಟೆಡ್ ವಿಕ್ರಂ ಗೌಡ ಅಂಡ್ ಕೌಂಟರ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಕುಟುಂಬಸ್ಥರಿಗೆ ವಿಕ್ರಂ ಗೌಡನ ಮೃತ ದೇಹವನ್ನು ತೆಗೆದುಕೊಂಡು ಹೆಬ್ರಿಕೋಡ್ಲು ಗ್ರಾಮಕ್ಕೆ ಕುಟುಂಬಸ್ಥರು ತೆರಳಿದ್ದಾರೆ.…

Read More

ಉಡುಪಿ: ಉಡುಪಿ ಗುಂಡಿಬೈಲಿನ ಫ್ಲ್ಯಾಟ್ ಒಂದರಲ್ಲಿ ವಾಸವಿದ್ದ ಮೋನಿಕಾ ಬಿ.ಎಸ್ (24) ಎಂಬ ಯುವತಿಯು ನವೆಂಬರ್ 14 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ.5 ಅಡಿ ಎತ್ತರ, ಸಾಧಾರಣ ಮೈಕಟ್ಟು, ಎಣ್ಣೆಕಪ್ಪು ಮೈಬಣ್ಣ ಹೊಂದಿದ್ದು, ಕನ್ನಡ ಹಾಗೂ ಇಂಗ್ಲೀಷ್ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್ ಠಾಣಾಧಿಕಾರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

Read More

ಬಂಟ್ವಾಳ: ಮನೆಯ ಹಿಂಬದಿ ಬಾಗಿಲು ಮುರಿದು ಕಳ್ಳರು ಮನೆಯ ಕಪಾಟಿನಲ್ಲಿದ್ದ ಲಕ್ಷಾಂತರ ಮೌಲ್ಯದ ಚಿನ್ನ ದೋಚಿದ ಘಟನೆ ವಿಟ್ಲದ ಮಂಕುಡೆ ಎಂಬಲ್ಲಿ ಮಂಗಳವಾರ ಹಗಲು ಹೊತ್ತಿನಲ್ಲಿ ನಡೆದಿದೆ. ವಿಟ್ಲದ ಮಂಕುಡೆ ಕಲ್ಕಾಜೆ ನಿವಾಸಿ ಗಣೇಶ್‌ ಶೆಟ್ಟಿ ಎಂಬವರ ಮನೆಯಲ್ಲಿ ಈ ಕಳ್ಳತನ ನಡೆದಿದೆ. ಗಣೇಶ್ ಶೆಟ್ಟಿಯವರ ಪತ್ನಿ ಪೇಟೆಗೆ ಹೋಗಿದ್ದ ಸಂದರ್ಭ ಕಳ್ಳರು ಹಿಂಬದಿ ಬಾಗಿಲನ್ನು ಮುರಿದು ಮನೆಯ ಒಳಗೆ ನುಗ್ಗಿದ್ದಾರೆ. ಮನೆಯೊಳಗೆ ನುಗ್ಗಿದ ಕಳ್ಳರು ಕೋಣೆಯೊಳಗಿದ್ದ ಕಪಾಟಿನಲ್ಲಿರಿಸಿದ್ದ ಲಕ್ಷಾಂತರ ಮೌಲ್ಯದ ಚಿನ್ನಾಭರಣಗಳನ್ನು ಕದ್ದು ಪರಾರಿಯಾಗಿದ್ದಾರೆ. ಸ್ಥಳಕ್ಕೆ ವಿಟ್ಲ ಪೊಲೀಸರು ಆಗಮಿಸಿದ್ದು ಪರಿಶೀಲನೆ ನಡೆಸಿದರು.

Read More