ಉಡುಪಿ: ಮಲ್ಪೆ ಪೋಲೀಸ್ ಠಾಣೆ ವ್ಯಾಪ್ತಿಯ ಲಕ್ಷ್ಮೀ ನಗರದ ಪಾಳೆಕಟ್ಟೆ ನಿವಾಸಿ ಪ್ರಸಾದ್ (40) ರವರ ಸಾವು ಹಲವು ಸಂಶಯಕ್ಕೆ ಎಡೆಮಾಡಿದ್ದು ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿ ತಕ್ಷಣ ಉನ್ನತ ಮಟ್ಟದ ತನಿಖೆ ನಡೆಸುವಂತೆ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಯ ರಾಜ್ಯ ಸಮಿತಿ ಸದಸ್ಯ ಜಯನ್ ಮಲ್ಪೆ ಆಗ್ರಹಿಸಿದ್ದಾರೆ. ನೀರಿನ ಡ್ರಮ್‌ನ ಒಳಗಿನಿಂದ ದೇಹದ ಕಾಲು ಇದ್ದು, ಮೇಲ್ಬಾಗದಲ್ಲಿ ಅರ್ಧ ತಲೆಕೆಳಗೆ ಹಾಕಿದ ರೀತಿಯಲ್ಲಿ ಮೃ*ತದೇಹ ಪತ್ತೆಯಾಗಿದ್ದು, ದೇಹದ ಹಲವು ಭಾಗಗಳಲ್ಲಿ ಗಾ*ಯಗಳಿದ್ದು ಸಂಶಯಕ್ಕೆ ಎಡೆಮಾಡಿದೆ. ಆತ್ಮಹತ್ಯೆ ಎಂದು ಬಿಂಬಿಸಿರುವ ಈ ಘಟನೆ ಹಲವು ಸಂಶಯಾಸ್ಪದ ರೀತಿಯಲ್ಲಿ ಮೃ*ತದೇಹ ಪತ್ತೆಯಾಗಿರುವುದರಿಂದ ಊರಿನ ಸುತ್ತುಮುತ್ತ ಭಯದ ವಾತಾವರಣ ನಿರ್ಮಾಣವಾಗಿದ್ದು, ಮೃ*ತನ ಮನೆಯವರನ್ನು ಸೂಕ್ತ ತನಿಖೆ ನಡೆಸಿ ನ್ಯಾಯ ನೀಡುವಂತೆ ಜಿಲ್ಲಾ ಪೋಲೀಸ್ ಆಧೀಕ್ಷಕರಿಗೆ ದಲಿತ ಮುಖಂಡರಾದ ವಾಸುದೇವ ಮುದ್ದೂರು, ಗಣೇಶ್ ನೆರ್ಗಿ, ಹರೀಶ್ ಸಲ್ಯಾನ್, ರವಿ ಲಕ್ಷ್ಮೀನಗರ ಆಗ್ರಹಿಸಿದ್ದಾರೆ.
Author: main-admin
ಬಂಟ್ವಾಳ: ನಿನ್ನೆ ಸಂಜೆ ಸುರಿದ ಭಾರಿ ಮಳೆಗೆ ಸಿಡಿಲು ಬಡಿದು ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ನಡೆದಿದೆ. ಮೃತ ವಿದ್ಯಾರ್ಥಿಯನ್ನು ಬಂಟ್ವಾಳ ತಾಲೂಕು ಕೆದಿಲ ಪೇರಮುಗೇರು ನಿವಾಸಿ ಶ್ರೀ ರಾಮ ಶಾಲೆಯ 8 ನೇ ತರಗತಿ ವಿದ್ಯಾರ್ಥಿ ಸುಬೋದ್ (13) ಎಂದು ಗುರುತಿಸಲಾಗಿದೆ. ಸಂಜೆ 5 ಗಂಟೆ ಸುಮಾರಿಗೆ ಸುರಿದ ಭಾರಿ ಮಳೆಯ ವೇಳೆ ಕೆದಿಲ ಗ್ರಾಮದ ಗಡಿಯಾರ ನಿವಾಸಿ, ವಿದ್ಯಾರ್ಥಿ ಸುಭೋದ್ ಮನೆಯಂಗಳದಲ್ಲಿ ನಿಂತಿದ್ದ ವೇಳೆ ಸಿಡಿಲು ಬಡಿದು ಗಂಭೀರ ಗಾಯಗೊಂಡಿದ್ದರು. ಕೂಡಲೇ ಅವರನ್ನು ಪುತ್ತೂರಿನ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಈ ವೇಳೆ ಚಿಕಿತ್ಸೆ ಫಲಕಾರಿಯಾಗದೆ ಮೃತ ಪಟ್ಟಿರುವ ಬಗ್ಗೆ ವರದಿಯಾಗಿದೆ.
ಉಳ್ಳಾಲ: ಈಜುಕೊಳದಲ್ಲಿ ಉಸಿರುಗಟ್ಟಿ ಮೂವರು ಯುವತಿಯರು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸೋಮೇಶ್ವರದ ವಾಝ್ಕೋ ಬೀಚ್ ರೆಸಾರ್ಟ್‌ಗೆ ಅಧಿಕಾರಿಗಳು ಬೀಗಮುದ್ರೆ ಜಡಿದಿದ್ದಾರೆ. ಅಲ್ಲದೆ ಈ ರೆಸಾರ್ಟ್‌ನ ಟ್ರೇಡ್ ಲೈಸನ್ಸ್ ಹಾಗೂ ಟೂರಿಸಂ ಪರವಾನಿಗೆಯನ್ನು ಅಮಾನತ್ತಿನಲ್ಲಿಡಲಾಗಿದೆ ಎಂದು ಮಂಗಳೂರು ಉಪವಿಭಾಗಾಧಿಕಾರಿಗಳು ತಿಳಿಸಿದ್ದಾರೆ. ಏನಿದು ಪ್ರಕರಣ: ಮೈಸೂರು ಕುರುಬರ ಹಳ್ಳಿ 4ನೇ ಕ್ರಾಸ್ ನಿವಾಸಿ ನಿಶಿತಾ ಎಂ.ಡಿ.(21), ಮೈಸೂರು ರಾಮಾನುಜ ರಸ್ತೆಯ ಕೆ.ಆರ್ ಮೊಹಲ್ಲಾ ನಿವಾಸಿ ಪಾರ್ವತಿ ಎಸ್.(20), ಮೈಸೂರು ವಿಜಯನಗರ ದೇವರಾಜ ಮೊಹಲ್ಲಾ ನಿವಾಸಿ ಕೀರ್ತನಾ ಎನ್(21) ಎಂಬ ಮೂವರು ಶನಿವಾರ ಬೆಳಗ್ಗೆ ವಾಝ್ಕೋ ಬೀಚ್ ರೆಸಾರ್ಟ್‌ಗೆ ಬಂದು ತಂಗಿದ್ದರು. ರವಿವಾರ ಬೆಳಗ್ಗೆ 10ಗಂಟೆ ಸುಮಾರಿಗೆ ಮೂವರೂ ರೆಸಾರ್ಟ್ ಮುಂಭಾಗದಲ್ಲಿ ಸ್ವಿಮ್ಮಿಂಗ್ ಪೂಲ್‌ಗೆ ಇಳಿದು ನೀರಾಟ ಆಡುತ್ತಿದ್ದರು. ಆದರೆ ಇವರಲ್ಲೊಬ್ಬಳು ಯುವತಿ ಈಜುಕೊಳದ ಮಧ್ಯದ ಆಳ ಇದ್ದ ಕಡೆ ಹೋಗಿ ಸಿಲುಕಿಕೊಂಡಿದ್ದಳು. ಆಕೆ ಒದ್ದಾಡುತ್ತಿರುವುದನ್ನು ಗಮನಿಸಿ ಮತ್ತಿಬ್ಬರು ರಕ್ಷಣೆಗೆ ಧಾವಿಸಿದ್ದರು. ಆದರೆ ಮೂವರಿಗೂ ಈಜು ಬಾರದ ಕಾರಣ ಈ ಸಾವು ಸಂಭವಿಸಿದೆ ಎನ್ನಲಾಗಿದೆ. ರೆಸಾರ್ಟ್…
ಮಂಗಳೂರು: ಕೇರಳದ ಕಣ್ಣೂರು ಜಿಲ್ಲೆಯ ಕೆಳಕಂ ಪಂಚಾಯತ್ ವ್ಯಾಪ್ತಿಯ ಮಲಯಂಪಾಡಿ ಎಸ್ ತಿರುವಿನಲ್ಲಿ ಶುಕ್ರವಾರ ಮುಂಜಾನೆ ರಂಗಭೂಮಿ ಕಲಾವಿದರು ಸಂಚರಿಸುತ್ತಿದ್ದ ಮಿನಿ ಬನ್ನೊಂದು ರಬ್ಬರ್ ತೋಟಕ್ಕೆ ಮಗುಚಿ ಬಿದ್ದು ಇಬ್ಬರು ನಟಿಯರು ಸಾವಿಗೀಡಾಗಿ, 12 ಮಂದಿ ಗಾಯಗೊಂಡ ಘಟನೆ ನಡೆದಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಇಬ್ಬರ ಸ್ಥಿತಿ ಗಂಭೀರವಿದೆ. ಬಸ್‌ನ ಮುಂಭಾಗದಲ್ಲಿ ಕುಳಿತಿದ್ದ ಕಾಯಂಕುಳಂ ನಿವಾಸಿ ಅಂಜಲಿ (32) ಮತ್ತು ಕರುನಾಗಪಳ್ಳಿ ನಿವಾಸಿ ಜೆಸ್ಸಿ ಮೋಹನ್ (58) ಸಾವಿಗೀಡಾದರು. ಕೇಳಕಂ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಗೂಗಲ್ ಮ್ಯಾಪ್ ನೋಡಿಕೊಂಡು ಚಾಲಕ ಮಿನಿ ಬಸ್ ಚಲಾಯಿಸಿದ್ದಾರೆ. ಸಣ್ಣವಾಹನಗಳಿಗೆ ಮಾತ್ರ ಸುಗಮವಾಗಿ ಸಂಚರಿಸಲು ಸಾಧ್ಯವಿರುವ ಏರಿಳಿತದಿಂದ ಕೂಡಿದ ಈ ರಸ್ತೆಯಲ್ಲಿ ಸಾಗಿದ್ದರಿಂದ ಅಪಘಾತ ಸಂಭವಿಸಿದೆ ಎಂದು ಪೊಲೀಸರ ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ.
ಮಂಗಳೂರು : ಖಾಸಗಿ ಬೀಚ್ ರೆಸಾರ್ಟ್ ನ ಈಜುಕೊಳದಲ್ಲಿ ಮುಳುಗಿ ಮೂವರು ಯುವತಿಯರು ಸಾವನಪ್ಪಿದ ಘಟನೆ ಮಂಗಳೂರು ಹೊರವಲಯದ ಸೋಮೇಶ್ವರ ಉಚ್ಚಿಲದ ವಾಝ್ಕೊ ಬೀಚ್ ರೆಸಾರ್ಟ್ ಈಜುಕೊಳದಲ್ಲಿ ನಡೆದಿದೆ. ಮೃತರನ್ನು ಮೈಸೂರು ಕುರುಬಾರಹಳ್ಳಿ ನಾಲ್ಕನೇ ಕ್ರಾಸ್ ನಿವಾಸಿ ನಿಶಿತ ಎಂ.ಡಿ. (21), ಮೈಸೂರು ರಾಮಾನುಜ ರಸ್ತೆ, ಕೆ.ಆರ್ ಮೊಹಲ್ಲಾ ನಿವಾಸಿ ಪಾರ್ವತಿ ಎಸ್ (20), ಮೈಸೂರು ವಿಜಯ ನಗರ ದೇವರಾಜ ಮೊಹಲ್ಲ ನಿವಾಸಿ ಕೀರ್ತನ ಎನ್(21) ಎಂದು ಗುರುತಿಸಲಾಗಿದೆ. ಮೂವರು ಗೆಳೆತಿಯರು ನಿನ್ನೆ ಬೆಳಗ್ಗೆ ಬೀಚ್ ರೆಸಾರ್ಟ್ ಗೆ ಆಗಮಿಸಿ ಕೊಠಡಿ ಪಡೆದಿದ್ದರು. ಇಂದು ಬೆಳಿಗ್ಗೆ 8.30ರ ಸುಮಾರಿಗೆ ಸ್ವಿಮ್ಮಿಂಗ್ ಫೂಲ್ ನಲ್ಲಿ ಈಜಲು ತೆರಳಿದ್ದರು, ಮೂವರೇ ಪೂಲ್ ನಲ್ಲಿ ಆಟವಾಡುತ್ತಿದ್ದ ವೇಳೆ ನಡೆದ ಘಟನೆ. ಸ್ವಿಮ್ಮಿಂಗ್ ಫೂಲ್ ನಲ್ಲಿ ಒಂದು ಬದಿ ಆರು ಅಡಿಯಷ್ಟು ಆಳವಿತ್ತು, ಈ ವೇಳೆ ಆಯಾತಪ್ಪಿ ಓರ್ವ ಯುವತಿ ಮುಳುಗಿರುವ ಸಾಧ್ಯತೆ ಇದೆ. ರ ಕ್ಷಣೆಗೆ ಮುಂದಾಗಿದ ಮತ್ತೊಬ್ಬಾಕೆಯೂ ಮುಳುಗಿದ್ದ ಕಾರಣ ಮೂರನೇ ಯುವತಿಯೂ ನೀರಿಗೆ…
ಉಡುಪಿ: ಅತೀ ವೇಗವಾಗಿ ಬಂದ ಥಾರ್ ಜೀಪ್ ವೊಂದು ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಸವಾರನೋರ್ವ ಗಂಭೀರವಾಗಿ ಗಾಯಗೊಂಡು, ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಕಾಪು ತಾಲೂಕಿನ ಬೆಳಪು ಮಿಲಿಟ್ರಿ ಕಾಲೋನಿ ಎಂಬಲ್ಲಿ ನಡೆದಿದೆ. ಮೃತರನ್ನು ಬೆಳಪು ನಿವಾಸಿ ಮಹಮ್ಮದ್ ಹುಸೇನ್ (39) ಎಂದು ಗುರುತಿಸಲಾಗಿದೆ. ಕಾಂಗ್ರೆಸ್ ಮುಖಂಡ, ಸಹಕಾರಿ ಧುರೀಣ ಬೆಳಪು ದೇವಿಪ್ರಸಾದ್ ಶೆಟ್ಟಿ ಅವರ ಪುತ್ರ ಪ್ರಜ್ವಲ್ ಶೆಟ್ಟಿ ಎಂಬಾತ ನ.11ರಂದು ಮುಂಜಾನೆ 5 ಗಂಟೆಗೆ ಹಿಟ್ ಆಯಂಡ್ ರನ್ ನಡೆಸಿ ಪರಾರಿಯಾಗಿದ್ದನು. ಜೀಪ್ ಡಿಕ್ಕಿ ಹೊಡೆದ ತೀವ್ರತೆಗೆ ಮಹಮ್ಮದ್ ಹುಸೇನ್ ಗಂಭೀರವಾಗಿ ಗಾಯಗೊಂಡಿದ್ದು, ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ. ಅಪಘಾತದ ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಪ್ರಕರಣ ನಡೆದ ಬೆನ್ನಲ್ಲೇ ಪ್ರಜ್ವಲ್ ಶೆಟ್ಟಿ ತಲೆಮರೆಸಿಕೊಂಡಿದ್ದನು. ಇದೀಗ ಆರೋಪಿಯನ್ನ ಶಿರ್ವ ಪೊಲೀಸರು ಬಂಧಿಸಿದ್ದಾರೆ. ಶಿರ್ವ ಪೊಲೀಸರು ಹಿಟ್ ಆಯಂಡ್ ರನ್ ಕೇಸ್ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಶಬರಿಮಲೆ ಯಾತ್ರಿರ್ಥಿಗಳಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ನೈಋತ್ಯ ರೈಲ್ವೆ ಹುಬ್ಬಳ್ಳಿ-ಕೊಟ್ಟಾಯಂ ನಡುವೆ ವಿಶೇಷ ರೈಲು ಸೇವೆ ಪ್ರಾರಂಭಿಸಲಿದೆ. ನವೆಂಬರ್ 19 ರಿಂದ ಜನವರಿ 15ರವರೆಗೆ ಈ ರೈಲು ಸಂಚರಿಸಲಿದೆ ಇದರ ಜೊತೆಗೆ ವಾರಕ್ಕೊಮ್ಮೆ ಹೆಚ್ಚುವರಿ ರೈಲು ಸಹ ಸಂಚರಿಸಲಿದೆ. ಹುಬ್ಬಳ್ಳಿ ಹಾಗೂ ಕೇರಳದ ಕೊಟ್ಟಾಯಂ ನಿಲ್ದಾಣಗಳ ನಡುವೆ ಒಂಬತ್ತು ಟ್ರಿಪ್ ವಿಶೇಷ ಎಕ್ಸ್ಪ್ರೆಸ್ ರೈಲು ಸೇವೆ ಒದಗಿಸಲು ನೈಋತ್ಯ ರೈಲ್ವೆ ನಿರ್ಧರಿಸಿದೆ.ರೈಲು ಸಂಖ್ಯೆ 07371 ಎಸ್ಎಸ್ಎಸ್ ಹುಬ್ಬಳ್ಳಿ-ಕೊಟ್ಟಾಯಂ ವಿಶೇಷ ಎಕ್ಸ್ಪ್ರೆಸ್ ರೈಲು ನವೆಂಬರ್ 19 ರಿಂದ 2025ರ ಜನವರಿ 14ರವರೆಗೆ ಸಂಚರಿಸಲಿದೆ.ರೈಲು ಸಂಖ್ಯೆ 07372 ಎಸ್ಎಸ್ಎಸ್ ಹುಬ್ಬಳ್ಳಿ-ಕೊಟ್ಟಾಯಂ ವಿಶೇಷ ಎಕ್ಸ್ಪ್ರೆಸ್ ರೈಲು ನವೆಂಬರ್ 20 ರಿಂದ 2025ರ ಜನವರಿ 15ರವರೆಗೆ ಸಂಚರಿಸಲಿದೆ.2 ಎಸಿ ಟು ಟೈರ್ , 2 ಎಸಿ ತ್ರಿ ಟೈಯರ್, 6 ಸ್ಲೀಪರ್ ಕ್ಲಾಸ್, 6 ಜನರಲ್ ಸೆಕೆಂಡ್ ಕ್ಲಾಸ್ ಮತ್ತು 2 ಎಸ್ಎಲ್ಆರ್ಡಿ ಸೇರಿದಂತೆ 18 ಬೋಗಿಗಳನ್ನು ಹೊಂದಿರಲಿದೆ. ಇನ್ನು ಹೆಚ್ಚುವರಿಯಾಗಿ ಹುಬ್ಬಳ್ಳಿ-ಕೊಟ್ಟಾಯಂ ನಡುವೆ ವಾರಕ್ಕೋಮ್ಮೆ ಒಂದು…
ಮಂಗಳೂರು: ಮಳಲಿ ಮಸೀದಿಯ ಜಮೀನಿನ ವಿವಾದಕ್ಕೆ ಸಂಬಂಧಿಸಿ ವಿಹಿಂಪ ಪರವಾಗಿ ಸಲ್ಲಿಸಿದ ಅರ್ಜಿಯೊಂದನ್ನು ಮಂಗಳೂರಿನ ಸಹಾಯಕ ಆಯುಕ್ತರ ನ್ಯಾಯಾಲಯ ತಿರಸ್ಕರಿಸಿದೆ. ಈ ಹಿಂದೆ ಮಸೀದಿ ಇರುವ ಜಾಗದ ಆರ್‌ಟಿಸಿಯ ಕಾಲಂ 9ರಲ್ಲಿ ಕಂದಾಯ ಭೂಮಿ ಎಂದು ಉಲ್ಲೇಖೀಸಲಾಗಿತ್ತು. ಆದರೆ ಇತ್ತೀಚೆಗೆ ರಾಜ್ಯದ ಹಲವೆಡೆ ಉಂಟಾಗಿರುವ ವಕ್ಫ್ ವಿವಾದ ಹಿನ್ನೆಲೆಯಲ್ಲಿ ಅನುಮಾನ ವ್ಯಕ್ತವಾಗಿ ಮಳಲಿ ಮಸೀದಿ ಬಗ್ಗೆಯೂ ಅರ್ಜಿ ಸಲ್ಲಿಸಲಾಗಿತ್ತು. ಈ ಹಿಂದಿನ ದಾಖಲೆ ಬದಲಾಯಿಸಬಾರದು. ಈ ಬಗ್ಗೆ ಸಿವಿಲ್ ನ್ಯಾಯಾಲಯದಲ್ಲಿರುವ ವ್ಯಾಜ್ಯ ತೀರ್ಮಾನ ಆಗುವವರೆಗೂ ಯಾವುದೇ ಪ್ರಕ್ರಿಯೆ ನಡೆಸಬಾರದು ಎಂದು ವಿಹಿಂಪ ಪರ ವಕೀಲರು ಅರ್ಜಿ ಸಲ್ಲಿಸಿದ್ದರು. ನಾವು ಸಲ್ಲಿಸಿರುವ ಅರ್ಜಿಯನ್ನು ಸಹಾಯಕ ಆಯುಕ್ತರು ತಿರಸ್ಕರಿಸಿದ್ದಾರೆ. ಹಾಗಾಗಿ ನಾವು ಹೈಕೋರ್ಟ್ ಮೆಟ್ಟಿಲೇರಿದ್ದೇವೆ ಎಂದು ವಿಹಿಂಪ ಪ್ರಾಂತ ಸಹ ಕಾರ್ಯದರ್ಶಿ ಶರಣ್ ಪಂಪ್‌ವೆಲ್ ತಿಳಿಸಿದ್ದಾರೆ.
ಬೈಂದೂರು: ಮೀನು ಸಾಗಿಸುವ ಇನ್ಸುಲೇಟರ್ ವಾಹನವೊಂದು ಪಲ್ಟಿಯಾಗಿ ಅದರ ಒಳಗೆ ಮೀನು ಬಾಕ್ಸ್‌ಗಳ ಜೊತೆಗೆ ಜಾನುವಾರುಗಳನ್ನು ಸಾಗಿಸುತ್ತಿದ್ದ ಘಟನೆ ಶಿರೂರು ಕರಿಕಟ್ಟೆ ಬಳಿ ಪತ್ತೆಯಾಗಿದೆ. ವಾಹನದಲ್ಲಿ ಮೀನಿನ ಬದಲು ಜಾನುವಾರುಗಳನ್ನು ಸಾಗಿಸುತ್ತಿರುವುದು ಪತ್ತೆಯಾಗಿದ್ದು ಆರೋಪಿ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. ರಾತ್ರಿ ಹೊತ್ತು ಮಿನಿ ಇನ್ಸುಲೇಟರ್ ವಾಹನದೊಳಗೆ ಮೀನು ತುಂಬಿರುವ ಟ್ರೇಗಳನ್ನು ಇರಿಸಿಕೊಂಡು ಮದ್ಯದಲ್ಲಿ ಎತ್ತುಗಳನ್ನು ಸಾಗಿಸಲಾಗುತ್ತಿತ್ತು. ವಾಹನವು ಭಟ್ಕಳದಿಂದ ಬೈಂದೂರು ಕಡೆಗೆ ಸಾಗುತ್ತಿದ್ದಾಗ ಕರಿಕಟ್ಟೆ ದುರ್ಗಾಂಬಿಕಾ ಹಾಲ್ ಹತ್ತಿರ ಅತಿ ಪಲ್ಟಿಯಾಗಿದೆ. ಕೂಡಲೇ ಚಾಲಕ ಸ್ಥಳದಿಂದ ಪರಾರಿಯಾಗಿದ್ದು ಬೈಂದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪುತ್ತೂರು: ಏಳು ತಿಂಗಳ ಹಿಂದೆ ನಾಪತ್ತೆಯಾಗಿರುವ ವ್ಯಕ್ತಿ ಇನ್ನೂ ಪತ್ತೆಯಾಗಿಲ್ಲ. ಕೆದಂಬಾಡಿ ಗ್ರಾಮದ ಬಾರಿಕೆ ನಿವಾಸಿ ಸಂಕಪ್ಪ ಪೂಜಾರಿ ಅವರ ಪುತ್ರ ದಿವಾಕರ (37) ನಾಪತ್ತೆಯಾಗಿರುವ ವ್ಯಕ್ತಿ. ಅವಿವಾಹಿತರಾಗಿರುವ ಅವರು ಕೂಲಿ ಕಾರ್ಮಿಕರಾಗಿದ್ದು ಎ.27ರಂದು ಬೆಳಗ್ಗೆ 6ಕ್ಕೆ ಮನೆಯಿಂದ ಹೊರ ಹೋಗಿದ್ದರು.ಕಾಣೆಯಾದ ಸಂದರ್ಭದಲ್ಲಿ ಕರೆ ಮಾಡಿದ್ದ ಅವರು, ‘ಕಾಡಿನೊಳಗಿದ್ದೇನೆ ದಾರಿ ಸಿಗುತ್ತಿಲ್ಲ’ ಎಂದು ತಿಳಿಸಿದ್ದು ಬಳಿಕ ಅವರ ಮೊಬೈಲ್ ಸ್ವಿಚ್ ಆಫ್ ಆಗಿತ್ತು. ಈ ನಡುವೆ ಸಂಪ್ಯ ಪೊಲೀಸರ 15 ಮಂದಿಯ ತಂಡ ಕಾಡಿನಲ್ಲಿ ಹುಡುಕಾಟವನ್ನೂ ನಡೆಸಿದ್ದರು.ದಿವಾಕರ ಅವರ ಗುರುತು ಪತ್ತೆಯಾದಲ್ಲಿ ಪುತ್ತೂರು ಗ್ರಾಮಾಂತರ ಪೊಲೀಸ್ ನಿರೀಕ್ಷಕರು, ಜಿಲ್ಲಾ ಕಂಟ್ರೋಲ್ ರೂಂಗೆ ಮಾಹಿತಿ ನೀಡುವಂತೆ ಗ್ರಾಮಾಂತರ ಪೊಲೀಸ್ ಠಾಣೆ ಪ್ರಕಟನೆ ತಿಳಿಸಿದೆ.










