ವಿಟ್ಲ ಠಾಣಾ ವ್ಯಾಪ್ತಿಯ ಪೆರುವಾಯಿ ಸೊಸೈಟಿ ಆವರಣದಿಂದ ದನ ಕಳವುಗೈದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಉಳ್ಳಾಲ ಕೋಡಿ ನಿವಾಸಿ ಝಲ್ಫಾನ್ ಮಾಲಿಕ್ ಬಂಧಿತ ಆರೋಪಿ. 2025ರ ನ. 18ರಂದು ಗಣೇಶ್ ರೈ ಹಾಗೂ ನಾರಾಯಣ ನಾಯ್ಕ ಎಂಬವರ ಒಟ್ಟು ನಾಲ್ಕು ದನಗಳನ್ನು ಕಳ್ಳತನ ಮಾಡಲಾಗಿತ್ತು. ಈ ಬಗ್ಗೆ ಗಣೇಶ್ ರೈ ಅವರು ನೀಡಿದ ದೂರಿನಂತೆ ವಿಟ್ಲ ಪೊಲೀಸರು ಆರೋಪಿ ಝಲ್ಫಾನ್ ಮಾಲಿಕ್ ನನ್ನು ಬಂಧಿಸಿದ್ದಾರೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯದ ಆದೇಶದಂತೆ ಪೊಲೀಸ್ ಕಸ್ಟಡಿಗೆ ಪಡೆಯಲಾಗಿದೆ.
Author: main-admin
ವಿಟ್ಲ: ಹಲ್ಲೆ ಗಲಾಟೆ ದೊಂಬಿ ಹಾಗೂ ಡ್ರಗ್ಸ್ ಪ್ರಕರಣಗಳಲ್ಲಿ ಆರೋಪಿಯಾಗಿರುವ ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಅಬ್ದುಲ್ ಖಾದರ್@ ಶೌಕತ್ ವಿಟ್ಲ ಎಂಬಾತನನ್ನು ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ಪೊಲೀಸ್ ಠಾಣಾ ವ್ಯಾಪ್ತಿಗೆ ಗಡಿಪಾರು ಮಾಡಲಾಗಿದೆ. ಅಬ್ದುಲ್ ಖಾದರ್ ಮೇಲೆ ಹಲ್ಲೆ ದೊಂಬಿ, ನಿಷೇಧಿತ ಮಾದಕ ದ್ರವ್ಯ ಸೇವನೆ, ಏನ್ ಡಿ ಪಿ ಎಸ್ ಕಾಯ್ದೆಯಂತೆ 3 ಪ್ರಕರಣಗಳು ದಾಖಲಾಗಿದ್ದು ಈತನನ್ನು ವಿಟ್ಲ ಪೊಲೀಸ್ ಠಾಣೆಯ ಠಾಣಾಧಿಕಾರಿಗಳ ವರದಿಯಂತೆ ಸಹಾಯಕ ಆಯುಕ್ತರು ಹಾಗೂ ಉಪವಿಭಾಗಿಯ ದಂಡಾಧಿಕಾರಿ ಮಂಗಳೂರು ರವರು ದಕ್ಷಿಣ ಕನ್ನಡ ಜಿಲ್ಲೆಯಿಂದ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ಪೊಲೀಸ್ ಠಾಣಾ ವ್ಯಾಪ್ತಿಗೆ ಗಡಿಪಾರು ಮಾಡಿ ಆದೇಶ ಹೊರಡಿಸಿರುತ್ತಾರೆ. ಸದರಿ ಆದೇಶದಂತೆ ದಿನಾಂಕ 08-01-2026 ರಂದು ದಕ್ಷಿಣ ಕನ್ನಡ ಜಿಲ್ಲೆಯಿಂದ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ಪೊಲೀಸ್ ಠಾಣೆ ಗೆ ಸುರಕ್ಷಿತವಾಗಿ ಕಳುಹಿಸಲಾಗಿದೆ.
ಉಪ್ಪಿನಂಗಡಿ: ನಾಲ್ಕು ದಿನಗಳ ಹಿಂದೆ ನೆಲ್ಯಾಡಿ ಗ್ರಾಮದ ಕಟ್ಟೆಮಜಲು ಎಂಬಲ್ಲಿ ಅಪ್ರಾಪ್ತ ಬಾಲಕಿಯ ಮಾನಭಂಗ ಮಾಡಲು ಯತ್ನಿಸಿದ ಆರೋಪಿಯನ್ನು ಉಪ್ಪಿನಂಗಡಿ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಬಾಲಕಿ ಕುಟುಂಬದವರೊಂದಿಗೆ ಜ.3ರಂದು ರಾತ್ರಿ ನೆಲ್ಯಾಡಿ ಗ್ರಾಮದ ಕಟ್ಟೆಮಜಲು ಎಂಬಲ್ಲಿ ನಡೆದ ನೇಮೋತ್ಸವಕ್ಕೆ ತೆರಳಿದ್ದು, ಅಲ್ಲಿ ನೇಮೋತ್ಸವವನ್ನು ವೀಕ್ಷಿಸುತ್ತಿದ್ದರು. ಜ.4ರಂದು ಬೆಳಗಿನ ಜಾವ 3 ಗಂಟೆ ಸುಮಾರಿಗೆ ಬಹಿರ್ದೇಶೆಗೆ ತೆರಳುತ್ತಿದ್ದ ವೇಳೆ, ಸ್ಥಳೀಯ ನಿವಾಸಿ ಚಂದ್ರಶೇಖರ ಕಟ್ಟೆಮಜಲು ಎಂಬಾತ ಬಾಲಕಿಯ ಕೈ ಹಿಡಿದು ಎಳೆದಾಡಿ ಮಾನಭಂಗ ಮಾಡಲು ಯತ್ನಿಸಿದ್ದಾನೆ ಎಂದು ಆರೋಪಿಸಲಾಗಿದೆ.ಈ ಬಗ್ಗೆ ಬಾಲಕಿಯ ತಂದೆ ನೀಡಿದ ದೂರಿನಂತೆ ಉಪ್ಪಿನಂಗಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದರು. ಇದೀಗ ಪೊಲೀಸರು ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದೆ.
ಉಡುಪಿ: ಜಿಲ್ಲೆಯಲ್ಲಿ ಗಣಿಗಾರಿಕೆ ಸಂಬಂಧಿತ ಸಲಕರಣೆಗಳನ್ನು ಸಾಗಾಟ ಮಾಡುವ ವಾಹನಗಳು ಅತೀವೇಗದಿಂದ ಚಲಾಯಿಸಿಕೊಂಡು ಅಪಘಾತಕ್ಕೆ ಕಾರಣವಾಗುತ್ತಿರುವ ಹಿನ್ನೆಲೆಯಲ್ಲಿ ಆ ವಾಹನಗಳಿಗೆ 60 ಕಿ.ಮೀ. ವೇಗ ಮಿತಿಯ ಸ್ಪೀಡ್ ಗವರ್ನರ್(ವೇಗನಿಯಂತ್ರಕ ಕಡ್ಡಾಯವಾಗಿ ಅಳವಡಿಸುವ ಕುರಿತು ಉಡುಪಿ ಜಿಲ್ಲಾ ರಸ್ತೆ ಸುರಕ್ಷತಾ ಪ್ರಾಧಿಕಾರ ನಿರ್ಧಾರ ಕೈಗೊಂಡಿದೆ ಎಂದು ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಂ ಶಂಕರ್ ತಿಳಿಸಿದ್ದಾರೆ. ಜಿಲ್ಲೆಯಲ್ಲಿ ಗಣಿಗಾರಿಕೆ ಸಂಬಂಧಿಸಿ ಮರಳು, ಮಣ್ಣು ಕಲ್ಲು ಸೇರಿದಂತೆ ಖನಿಜಗಳನ್ನು ಸಾಗಿಸುವ ಎಲ್ಲಾ 6 ಚಕ್ರ ಮತ್ತು ಅದಕ್ಕಿಂತ ಮೇಲ್ಪಟ್ಟ ವಾಹನಗಳಿಗೆ ಗರಿಷ್ಠ 60 ಕಿ.ಮೀ ವೇಗ ಮಿತಿಯ ಸ್ಪೀಡ್ ಗವರ್ನರ್ ಅಳವಡಿಕೆ ಕಡ್ಡಾಯ ಮಾಡಲಾಗಿದೆ. ಈ ವಾಹನಗಳು ಅತೀಯಾದ ವೇಗ ಹಾಗೂ ನಿರ್ಲಕ್ಷತನದ ಚಾಲನೆಯಿಂದ ನಿರಂತರ ವಾಗಿ ಅಪಘಾತಗಳು ಸಂಭವಿಸುತ್ತಿದ್ದು ಆದುದರಿಂದ ಇತ್ತೀಚೆಗೆ ನಡೆದ ರಸ್ತೆ ಸುರಕ್ಷತಾ ಪ್ರಾಧಿಕಾರದ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ. ಈ ನಿಯಮ ಪಾಲನೆಗಾಗಿ ಎಲ್ಲಾ ಲಾರಿ ಚಾಲಕ ಮಾಲಕರಿಗೆ 10 ದಿನಗಳ ಕಾಲಾವಕಾಶ ನೀಡಲಾಗಿದೆ. ಈ ವಿಚಾರವಾಗಿ ಚಾಲಕರಿಗೆ…
ಚಿಕ್ಕಮಗಳೂರು: ಹಣಕ್ಕಾಗಿ ತಂದೆಯೇ ಮಗಳನ್ನೇ ವೇಶ್ಯಾವಾಟಿಕೆ ದಂಧೆಗೆ ದೂಡಿದ ಘಟನೆ ಬಿರೂರು ಹೋಬಳಿಯ ಗ್ರಾಮವೊಂದರಲ್ಲಿ ನಡೆದಿದೆ. ಆರೋಪಿ ತಂದೆ ಗಿರೀಶ್ ಮತ್ತು ಆರೋಪಿ ಅಜ್ಜಿ ನಾಗರತ್ನ ಸೇರಿ ತಾಯಿ ಇಲ್ಲದ ಬಾಲಕಿಯನ್ನು ವೇಶ್ಯಾವಾಟಿಕೆ ದಂಧೆಗೆ ದೂಡಿರುವುದಾಗಿದೆ. ಆರೋಪಿಗಳು ಭರತ್ ಎಂಬಾತನ ಜೊತೆ ಸೇರಿ 16 ವರ್ಷದ ಬಾಲಕಿಯನ್ನು ಮಂಗಳೂರಿಗೆ ಕರೆದೊಯ್ದು ಸುಮಾರು ಆರು ದಿನಗಳ ಕಾಲ 10 ಕ್ಕೂ ಹೆಚ್ಚು ಕಾಮಾಂಧರಿಂದ ಲೈಂಗಿಕ ದೌರ್ಜನ್ಯಕ್ಕೆ ಒಳಪಡಿಸಿದ್ದಾರೆ. ಆಕೆ ಋತುಮತಿ ಎಂಬುದನ್ನೂ ಪರಿಗಣಿಸದೆ ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವುದಾಗಿದೆ. ಆಕೆ ಮಂಗಳೂರಿನಿಂದ ಮರಳಿ ತನ್ನೂರಿಗೆ ಬಂದು ಈ ವಿಚಾರವನ್ನು ಧೈರ್ಯದಿಂದ ತನ್ನ ಚಿಕ್ಕಪ್ಪ ಮತ್ತು ಅತ್ತೆೆಗೆ ತಿಳಿಸಿದ್ದಾಳೆ. ಅವರ ಮೂಲಕ ಬಿರೂರು ಪೊಲೀಸರಿಗೆ ದೂರು ನೀಡಿದ್ದು, ಪೊಲೀಸರು ಆರೋಪಿಗಳನ್ನು ಹೆಡೆಮುರಿ ಕಟ್ಟಿದ್ದಾರೆ.
ಬಳ್ಳಾರಿ ಬ್ಯಾನರ್ ಗಲಾಟೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕಾಂಗ್ರೆಸ್ ಕಾರ್ಯಕರ್ತ ಫೈರಿಂಗ್ ವೇಳೆ ಸಾವನಪ್ಪಿದ್ದ ಇದೀಗ ಈ ಒಂದು ಘಟನೆಗೆ ಸಂಬಂಧಿಸಿದಂತೆ ಮತ್ತೊಬ್ಬ ಅಧಿಕಾರಿ ವರ್ಗಾವಣೆಯಾಗಿದ್ದು ಡಿಐಜಿಬಿ ವರ್ತಿಕ ಕಟಿಯಾರ್ ಅವರನ್ನು ವರ್ಗಾವಣೆಗೊಳಿಸಿ ಸರ್ಕಾರ ಆದೇಶಿಸಿದೆ. ಹೌದು ಬಳ್ಳಾರಿ ಡಿಐಜಿಪಿ ಆಗಿರುವ ವರ್ತಿಕ ಕಟಿಯಾರ್ ಅನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಬಳ್ಳಾರಿ ಡಿಐಜಿಪಿ ವರ್ತಿಕ ಕಟಿಆರ್ ವರ್ಗಾವಣೆಯಾಗಿದ್ದು ಬಳ್ಳಾರಿಯಲ್ಲಿ ಬ್ಯಾನರ್ ಗಲಾಟೆಗೆ ಕಾಂಗ್ರೆಸ್ ಕಾರ್ಯಕರ್ತ ಬಲಿ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ರಾಜ್ಯ ಸರ್ಕಾರ ವರ್ತಿಕ ಕಟಿಯಾರ್ ಅವರನ್ನು ವರ್ಗಾವಣೆ ಮಾಡಿದೆ. ಸಿವಿಲ್ ರೈಟ್ಸ್ ಮತ್ತು ಎನ್ ಫೋರ್ಸ್ಮೆಂಟ್ ವಿಭಾಗಕ್ಕೆ ವರ್ಗಾವಣೆ ಮಾಡಿದ್ದು ಇನ್ನು ನೂತನ ಐಜಿಪಿಯಾಗಿ ಡಾ. ಬಿ ಎಸ್ ಹರ್ಷ ಅವರನ್ನು ಸರ್ಕಾರ ನೇಮಕ ಮಾಡಿದೆ. ಇದೇ ಪ್ರಕರಣದಲ್ಲಿ ಈ ಹಿಂದೆ ಎಸ್‌ಪಿ ಪವನ್ ನಜೂರ್ ಅವರನ್ನು ಸರ್ಕಾರ ಅಮಾನತುಗೊಳಿಸಿತ್ತು. ಬಳಿಕ ಅವರು ತಮ್ಮ ಸ್ನೇಹಿತನ ಫಾರ್ಮ್ ಹೌಸ್ ನಲ್ಲಿ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು ಎಂದು…
ಕಾರ್ಕಳ ಪೊಲೀಸ್ ಉಪ ವಿಭಾಗದ ನೂತನ ಡಿವೈಎಸ್ಪಿ ಆಗಿ ಬೆಳ್ಳಿಯಪ್ಪ ಕೆ.ಯು ಅವರನ್ನು ನೇಮಕಾತಿ ಮಾಡಲಾಗಿದೆ. ಇವರು ಈ ಹಿಂದೆ ಮಂಗಳೂರಿನ ಐ.ಜಿ.ಪಿ ಪಶ್ಚಿಮ ವಲಯ ಕಛೇರಿಯಲ್ಲಿ ಡಿವೈಎಸ್ಪಿ ಆಗಿದ್ದರು. ಕಾರ್ಕಳ ಉಪವಿಭಾಗದಲ್ಲಿ ಹೆಚ್ಚುವರಿ ಸಹಾಯಕ ಆಯುಕ್ತರಾಗಿದ್ದ ಡಾ. ಹರ್ಷ ಪ್ರಿಯಂವದ ಅವರ ವರ್ಗಾವಣೆಯಿಂದಾಗಿ ಈ ನೇಮಕಾತಿ ನಡೆದಿದೆ.
ಮಂಗಳೂರು: “ದೇಶದ ಅತ್ಯಂತ ವೈವಿಧ್ಯಮಯ ಕ್ರೀಡಾ, ಅಥ್ಲೆಟಿಕ್ ಮತ್ತು ಸಾಂಸ್ಕೃತಿಕ ಉತ್ಸವಗಳಲ್ಲೊಂದಾದ 4ನೇ ಆವೃತ್ತಿಯ ಮಂಗಳೂರು ಟ್ರಯಾಥ್ಲಾನ್, ಮಂಗಳೂರು ಬೀಚ್ ಮ್ಯಾರಥಾನ್ ಮತ್ತು ಅಲ್ ಕಾರ್ಗೋ ಮಂಗಳೂರು ಬೀಚ್ ಫೆಸ್ಟಿವಲ್ ಜನವರಿ 9ರಿಂದ ಜನವರಿ 11ರವರೆಗೆ ನಡೆಯಲಿದೆ ಎಂದು ತಪಸ್ಯಾ ಫೌಂಡೇಶನ್ ಸಂಸ್ಥಾಪಕಿ ಸಬಿತಾ ಆರ್. ಶೆಟ್ಟಿ ಪತ್ರಿಕಾಗೋಷ್ಟಿಯಲ್ಲಿ ಮಾಹಿತಿ ನೀಡಿದರು. ಮಂಗಳೂರು ಟ್ರಯಾಥ್ಲಾನ್ ಮತ್ತು ಅಲ್ ಕಾರ್ಗೋ ಮಂಗಳೂರು ಬೀಚ್ ಫೆಸ್ಟಿವಲ್ 2026 ಅತ್ಯಂತ ಪ್ರಭಾವಶಾಲಿ ಅಂತಾರಾಷ್ಟ್ರೀಯ ಕಾರ್ಯಕ್ರಮವಾಗಿ ರೂಪುಗೊಳ್ಳುತ್ತಿದೆ. ಈ ಬಾರಿ ದೇಶ ವಿದೇಶಗಳಿಂದ 5000ಕ್ಕಿಂತ ಹೆಚ್ಚು ಅಥ್ಲೀಟ್ ಗಳ ಆಗಮನ ನಿರೀಕ್ಷಿಸಲಾಗಿದೆ. ಭಾರತೀಯ ಸೈನ್ಯದ 150ಕ್ಕೂ ಹೆಚ್ಚು ಅಥ್ಲೀಟ್ ಗಳು ಪಾಲ್ಗೊಳ್ಳಲಿದ್ದು ನೌಕಾದಳದ ಒಂದು ಸ್ಟಾಲ್ ತೆರೆದು ಅದರ ಮೂಲಕ ಮಕ್ಕಳಿಗೆ ದೇಶದ ನೌಕಾದಳದ ಕುರಿತು ಮಾಹಿತಿ ಮತ್ತು ಸೈನ್ಯಕ್ಕೆ ಸೇರಲು ಉತ್ತೇಜಿಸಲಾಗುವುದು. ಮಕ್ಕಳು ಮತ್ತವರ ಪೋಷಕರು ಮೂರು ದಿನಗಳ ಕಾಲ ನಡೆಯಲಿರುವ ಈ ಫೆಸ್ಟಿವಲ್ ನಲ್ಲಿ ಪಾಲ್ಗೊಳ್ಳುವ ಮೂಲಕ ಆಟೋಟ ಸ್ಪರ್ಧೆಗಳ ಜೊತೆಗೆ ಶಿಕ್ಷಣ ಪಡೆಯಲು…
ಸೌಜನ್ಯಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಒಂದು ವರ್ಷಗಳ ಕಾಲ ರಾಯಚೂರಿಗೆ ಗಡಿಪಾರು ಮಾಡಿರುವ ದಕ್ಷಿಣಕನ್ನಡ ಜಿಲ್ಲಾಡಳಿತದ ಆದೇಶದ ವಿರುದ್ದ ಮಹೇಶ್ ಶೆಟ್ಟಿ ತಿಮರೋಡಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಂತಿ ಸುವ್ಯವಸ್ಥೆಗೆ ಧಕ್ಕೆ ತರುತ್ತಿರುವ ಆರೋಪದಡಿ ತಿಮರೋಡಿ ಅವರನ್ನು 2025ರ ಸೆಪ್ಟೆಂಬರ್ 18ರಂದು ಗಡಿಪಾರು ಮಾಡಿ ಆದೇಶಿಸಲಾಗಿತ್ತು. ಆ ಆದೇಶವನ್ನು ಹೈಕೋರ್ಟ್ 2025ರ ನವೆಂಬರ್ 17ರಂದು ರದ್ದುಪಡಿಸಿತ್ತು. ಅಂತೆಯೇ, ಪ್ರಕರಣವನ್ನು ಪುತ್ತೂರು ಉಪ ವಿಭಾಗಾಧಿಕಾರಿಗೆ ಹಿಂದಿರುಗಿಸಿದ್ದ ನ್ಯಾಯಪೀಠ, ‘ತಿಮರೋಡಿ ವಿವರಣೆ ಪಡೆದು ನಂತರ ಹೊಸದಾಗಿ ಆದೇಶ ಮಾಡಬೇಕು ಎಂದು ಉಪ ವಿಭಾಗಾಧಿಕಾರಿಗೆ ಆದೇಶಿಸಿತ್ತು. ತಿಮರೋಡಿ ಅಹವಾಲು ಆಲಿಸಿದ ಉಪ ವಿಭಾಗಾಧಿಕಾರಿ, ತಿಮರೋಡಿ ಅವರನ್ನು 2025ರ ಡಿಸೆಂಬರ್ 16ರಿಂದ 2026ರ ಸೆಪ್ಟೆಂಬರ್ 16ರವರೆಗೆ ದಕ್ಷಿಣ ಕನ್ನಡ ಜಿಲ್ಲೆಯಿಂದ ರಾಯಚೂರು ಜಿಲ್ಲೆಯ ಮಾನ್ವಿ ಪೊಲೀಸ್ ಠಾಣೆ ಸರಹದ್ದಿಗೆ ಒಳಪಟ್ಟಂತೆ ಗಡಿಪಾರು ಮಾಡಿ ಡಿಸೆಂಬರ್ 16ರಂದು ಆದೇಶಿಸಿದ್ದರು. ಈ ಅರ್ಜಿ ಇನ್ನಷ್ಟೇ ವಿಚಾರಣೆಗೆ ಬರಬೇಕಿದ್ದು, ಗೃಹ ಇಲಾಖೆ ಕಾರ್ಯದರ್ಶಿ, ಪುತ್ತೂರು ಉಪ…
ಮಂಗಳೂರು : ಮಹಿಳೆಗೆ ಕಿರುಕುಳ ನೀಡಿದ ಆರೋಪದ ಹಿನ್ನೆಲೆ ಮತ್ತು ಮಾಹಿತಿ ನೀಡದೆ ಅನಧಿಕೃತವಾಗಿ ಕರ್ತವ್ಯಕ್ಕೆ ಗೈರು ಹಾಜರಾದ ಕಾರಣ ಉಳ್ಳಾಲ ಠಾಣೆಯ ಹೆಡ್‌ಕಾನ್‌ಸ್ಟೇಬಲ್ ಸಂತೋಷ್ ಸಿ.ಜೆ. ಎಂಬವರನ್ನು ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಕರ್ತವ್ಯದಿಂದ ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ. 2023ರಲ್ಲಿ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಕಾವೂರು ಠಾಣೆಗೆ ದೂರು ನೀಡಲು ಹೋದ ಮಹಿಳೆಗೆ ಸಂತೋಷ್‌ರ ಪರಿಚಯ ಆಗಿತ್ತು. ಬಳಿಕ ಸಂತೋಷ್‌ನ ನಡವಳಿಕೆ ಬಗ್ಗೆ ಅಸಮಾಧಾನಗೊಂಡ ಮಹಿಳೆ ಕಮಿಷನರ್‌ಗೆ ದೂರು ನೀಡಿದ್ದರು. ಆ ಬಗ್ಗೆ ಕ್ಷಮೆ ಕೇಳಿದ ಹಿನ್ನೆಲೆಯಲ್ಲಿ ಮಹಿಳೆಯು ದೂರನ್ನು ಹಿಂಪಡೆದಿದ್ದರು. ಆದರೆ ನಂತರ ಸುಮ್ಮನಿರದೆ ನಿರಂತರವಾಗಿ ಕಿರುಕುಳ ನೀಡಲು ಆರಂಭಿಸಿದ ಕಾರಣ ಮಹಿಳೆ ಮತ್ತೆ ಮೇಲಾಧಿಕಾರಿಗೆ ಮಾಹಿತಿ ನೀಡಿ ಸಂತೋಷ್ ವಿರುದ್ಧ ಡಿ.17ರಂದು ಕಾವೂರು ಠಾಣೆಗೆ ದೂರು ನೀಡಿದ್ದರು. ಇದನ್ನು ತಿಳಿದ ಸಂತೋಷ್ ಡಿ.18ರಿಂದ ಮೇಲಾಧಿಕಾರಿ ಅಥವಾ ಠಾಣೆಗೆ ಯಾವುದೇ ಮಾಹಿತಿ ನೀಡದೆ ಕರ್ತವ್ಯಕ್ಕೆ ಗೈರು ಹಾಜರಾಗಿದ್ದ. ಈ ಪ್ರಕರಣದಲ್ಲಿ ವಿಚಾರಣೆಯ ಆವಶ್ಯಕತೆ ಇದ್ದ ಕಾರಣ ಇಲಾಖಾ…










