Author: main-admin

ಬಂಟ್ವಾಳ: ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಗೆ ಹೊಂದಿಕೊಂಡಿದ್ದ ಮನೆ ಹಿಂಭಾಗ ಹಾಗೂ ಹಸುವಿನ ಕೊಟ್ಟಿಗೆಗೆ ತಡರಾತ್ರಿ ಸುಮಾರು 1 ಗಂಟೆಯ ವೇಳೆಗೆ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಸಂಪೂರ್ಣ ಸುಟ್ಟು ಭಸ್ಮವಾದ ಘಟನೆ ನಡೆದಿದೆ. ಬೆಂಕಿಯ ಜ್ವಾಲೆ ಕ್ಷಣಾರ್ಧದಲ್ಲೇ ವ್ಯಾಪಿಸಿದ ಪರಿಣಾಮ ಮನೆಯ ಹಿಂಭಾಗ ಹಾಗೂ ಹಸುವಿನ ಕೊಟ್ಟಿಗೆ ಸಂಪೂರ್ಣವಾಗಿ ಬೆಂಕಿಗಾಹುತಿಯಾಗಿದೆ. ಅದೃಷ್ಟವಶಾತ್ ಸ್ಥಳೀಯ ನಿವಾಸಿಗಳು ಸಮಯಪ್ರಜ್ಞೆ ಮೆರೆದು ಕೊಟ್ಟಿಗೆಯೊಳಗಿದ್ದ ದನಗಳನ್ನು ಸುರಕ್ಷಿತವಾಗಿ ಹೊರಗೆ ಕರೆತಂದಿದ್ದರಿಂದ ಯಾವುದೇ ಜಾನುವಾರುಗಳಿಗೆ ಅಪಾಯ ಸಂಭವಿಸಿಲ್ಲ. ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆಯೇ ಸ್ಥಳೀಯರು ಹಾಗೂ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಹಲವು ಗಂಟೆಗಳ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಿಯಂತ್ರಣಕ್ಕೆ ತಂದರು. ಇದರಿಂದ ಬೆಂಕಿ ಮತ್ತಷ್ಟು ವ್ಯಾಪಿಸುವುದನ್ನು ತಡೆಯಲು ಸಾಧ್ಯವಾಯಿತು. ಅಗ್ನಿ ಅವಘಡದಲ್ಲಿ ಸುಮಾರು ₹4 ಲಕ್ಷಕ್ಕೂ ಅಧಿಕ ನಷ್ಟ ಸಂಭವಿಸಿರುವುದಾಗಿ ಪ್ರಾಥಮಿಕ ಅಂದಾಜಿಸಲಾಗಿದೆ. ಘಟನಾ ಸ್ಥಳಕ್ಕೆ ಗ್ರಾಮ ಕರಣಿಕರ ಸಹಾಯಕರು ಹಾಗೂ ಮಾಜಿ ಪಂಚಾಯತ್ ಸದಸ್ಯರು ಭೇಟಿ ನೀಡಿ…

Read More

ಬಂಟ್ವಾಳ:ಸೂರಿಕುಮೇರ್ ಪೆಟ್ರೋಲ್ ಬಂಕ್ ಬಳಿ ಕಾರು ನಿಯಂತ್ರಣ ತಪ್ಪಿ ರಸ್ತೆ ಬದಿಯ ಚರಂಡಿಗೆ ಉರುಳಿದಾಗ, ವಿಟ್ಲ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ರಾಮಕೃಷ್ಣ ಮತ್ತು ಅವರ ಸಿಬ್ಬಂದಿ ಒಂದು ಮಗು ಸೇರಿದಂತೆ ಮೂವರನ್ನು ರಕ್ಷಿಸಿದ್ದಾರೆ. ಅಪಘಾತದ ನಂತರ ಕಾರಿನಲ್ಲಿ ಮಗು, ಮಹಿಳೆ ಮತ್ತು ಚಾಲಕ ವಾಹನದೊಳಗೆ ಸಿಲುಕಿಕೊಂಡಿದ್ದರು. ಎಸ್‌ಐ ರಾಮಕೃಷ್ಣ ಅವರು ಸಮಯಪ್ರಜ್ಞೆ ಮತ್ತು ಧೈರ್ಯ ಪ್ರದರ್ಶಿಸಿ ಅಳುತ್ತಿದ್ದ ಪುಟ್ಟ ಮಗುವನ್ನು ತಮ್ಮ ಕೈಯಲ್ಲಿ ಎತ್ತಿಕೊಂಡು ಸುರಕ್ಷಿತ ಸ್ಥಳಕ್ಕೆ ಕರೆತಂದ ದೃಶ್ಯ ಸಮೀಪದ ಸಿಸಿ ಟಿವಿಯಲ್ಲಿ ಸೆರೆಯಾಗಿದ್ದು, ಅದನ್ನು ಕಂಡ ಸಾರ್ವಜನಿಕರು ಪೊಲೀಸ್ ಅಧಿಕಾರಿಯ ಮಾನವೀಯತೆಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.ತಕ್ಷಣದ ರಕ್ಷಣಾ ಪ್ರಯತ್ನಗಳಿಂದಾಗಿ ಮೂವರು ಪ್ರಯಾಣಿಕರು ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ ಮತ್ತು ಅಪಾಯದಿಂದ ಪಾರಾಗಿದ್ದಾರೆ ಎಂದು ಸ್ಥಳೀಯ ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಸಿಸಿಟಿವಿ ದೃಶ್ಯಾವಳಿಗಳು ಈಗ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದ್ದು, ಇಂತಹ ಅಧಿಕಾರಿಗಳೇ ಪೊಲೀಸ್ ಇಲಾಖೆಯ ಹೆಮ್ಮೆ”, “ಕರ್ತವ್ಯಕ್ಕಿಂತ ಮಾನವೀಯತೆಯನ್ನು ಮೊದಲಿಗಾಗಿಟ್ಟ ಅಧಿಕಾರಿ”, “ಸಮಯೋಚಿತ ಕಾರ್ಯದಿಂದ ಅಮೂಲ್ಯ ಜೀವಗಳನ್ನು ಉಳಿಸಿದ ನಿಜವಾದ ಜನಸೇವಕ” ಎಂಬ…

Read More

ಉಡುಪಿ: ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತುಗಳಾದ ಎಂಡಿಎಂಎ (MDMA) ಪೌಡರ್, ಹೈಡ್ರೋಗಾಂಜಾ ಹಾಗೂ ಎಂಡಿಎಂಎ ಟ್ಯಾಬ್ಲೆಟ್ಗಳನ್ನು ಮಾರಾಟ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಉಡುಪಿ ಪೊಲೀಸರು ಬಂಧಿಸಿದ್ದು, ₹3,31,500 ಮೌಲ್ಯದ ಮಾದಕ ವಸ್ತುಗಳು, ಕಾರು ಸೇರಿದಂತೆ ವಿವಿಧ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಉಡುಪಿ ಉಪವಿಭಾಗದ ಪೊಲೀಸ್ ಉಪಾಧೀಕ್ಷಕ ಬೆಳ್ಳಿಯಪ್ಪ ಕೆ.ಯು. ಅವರ ಮಾರ್ಗದರ್ಶನದಲ್ಲಿ, ಮಲ್ಪೆ ಪೊಲೀಸ್ ಠಾಣೆ ಪೊಲೀಸ್ ನಿರೀಕ್ಷಕ ರಾಮಚಂದ್ರ ನಾಯಕ್ ಅವರ ನೇತೃತ್ವದಲ್ಲಿ ಹಾಗೂ ಉಡುಪಿ ಸಂಚಾರ ಠಾಣೆಯ ಪಿಎಸ್ಐ ಮಹೇಶ್ ಟಿ.ಎಂ. ಅವರೊಂದಿಗೆ ಕಾರ್ಯಾಚರಣೆ ನಡೆಸಿದ ವಿಶೇಷ ತಂಡವು, ಉಡುಪಿ ತಾಲೂಕಿನ ಶಿವಳ್ಳಿ ಗ್ರಾಮದ ಬುಡ್ನಾರ್ ಸಾರ್ವಜನಿಕ ಸ್ಥಳದಲ್ಲಿ ಮೂವರು ಆರೋಪಿಗಳನ್ನು ಬಂಧಿಸಿದೆ. ಬಂಧಿತ ಆರೋಪಿಗಳನ್ನು, ಉದ್ಯಾವರ ಪಿತ್ರೋಡಿ ನಿವಾಸಿ ದಿ. ಸದಾಶಿವ ಅವರ ಪುತ್ರ ವಿಜಯ ಪೂಜಾರಿ (36), ಕುಕ್ಕಂದೂರು ನಿವಾಸಿ ಎಂ ಡಿ ಅಬ್ದುಲ್ ಜಬ್ಬಾರ್ ಅವರ ಪುತ್ರ ಪಿ.ಎ. ಮೊಹಮ್ಮದ್ ಸಮ್ಮಾಸ್ (24), ಮತ್ತು ಮಿಯಾರು ಕುಂಟಿಬೈಲು ನಿವಾಸಿ ದಿ. ರಘು ಶೆಟ್ಟಿ ಅವರ ಪುತ್ರ ಆಕಾಶ್…

Read More

ಮೂಡಬಿದ್ರೆ: ಇಲ್ಲಿನ ಸಾರ್ವಜನಿಕ ಬಸ್ ನಿಲ್ದಾಣದ ಸಂಕೀರ್ಣದಲ್ಲಿ ಶನಿವಾರ ಸಂಜೆ ಯುವಕನೊಬ್ಬ ತಲ್ವಾರ್ ಹಿಡಿದು ದಾಂಧಲೆ ನಡೆಸಿದ ಆತಂಕಕಾರಿ ಘಟನೆ ನಡೆದಿದೆ. ಸಾರ್ವಜನಿಕರು ಹಾಗೂ ಮೊಬೈಲ್ ಮಳಿಗೆಯ ಸಿಬ್ಬಂದಿ ಒಟ್ಟಾಗಿ ಆರೋಪಿಯನ್ನು ಹಿಡಿದು ಪೊಲೀಸರಿಗೊಪ್ಪಿಸಿದ್ದಾರೆ.ಶನಿವಾರ ಸಂಜೆ ಬಸ್ ನಿಲ್ದಾಣದ ಆವರಣಕ್ಕೆ ಬಂದ ಯುವಕ, ಸಾರ್ವಜನಿಕರು ಹಾಗೂ ಪ್ರಯಾಣಿಕರು ಓಡಾಡುವ ರಸ್ತೆಯಲ್ಲೇ ರಾಜಾರೋಷವಾಗಿ ಕೈಯಲ್ಲಿ ತಲ್ವಾರ್ ಹಿಡಿದು ನಡೆದುಕೊಂಡು ಬಂದಿದ್ದಾನೆ. ಸಾರ್ವಜನಿಕ ಸ್ಥಳದಲ್ಲಿ ಮಾರಕಾಸ್ತ್ರ ಪ್ರದರ್ಶಿಸುತ್ತಾ ಸಾಗಿದ ಆತನ ವರ್ತನೆಯಿಂದ ಪ್ರಯಾಣಿಕರು ಭೀತಿಯಿಂದ ದಿಕ್ಕಾಪಾಲಾಗಿ ಓಡಿದ್ದಾರೆ. ಯುವಕನ ಈ ಹಾವಳಿಯ ದೃಶ್ಯವನ್ನು ಸಾರ್ವಜನಿಕರು ಮೊಬೈಲ್‌ನಲ್ಲಿ ಸೆರೆಹಿಡಿದಿದ್ದಾರೆ.ಬಸ್ ನಿಲ್ದಾಣದ ಆವರಣದಲ್ಲೇ ಇದ್ದ ಮೊಬೈಲ್ ಅಂಗಡಿಯೊಳಗೆ ನುಗ್ಗಿದ ಆರೋಪಿ, ಗ್ರಾಹಕರು ವ್ಯಾಪಾರ ನಿರತರಾಗಿದ್ದ ಸಂದರ್ಭದಲ್ಲೇ ತನ್ನ ಜೀನ್ಸ್ ಪ್ಯಾಂಟ್‌ನ ಒಳಗಡೆಯಿಂದ ತಲ್ವಾರ್ ಹೊರತೆಗೆದಿದ್ದಾನೆ. ಕೌಂಟರ್‌ನಲ್ಲಿದ್ದ ಸಿಬ್ಬಂದಿಗೆ ಮಾರಕಾಸ್ತ್ರ ತೋರಿಸಿ ಹೆದರಿಸಿದ ಆತ, ತಕ್ಷಣವೇ ತನಗೆ ಮೊಬೈಲ್ ಕೊಡುವಂತೆ ಅಬ್ಬರಿಸಿದ್ದಾನೆ. ತಲ್ವಾರ್ ಬೀಸಿ ಜೀವ ಬೆದರಿಕೆ ಹಾಕಿದಾಗ ಗ್ರಾಹಕರು ಆತಂಕದಿಂದ ದೂರ ಸರಿದಿದ್ದಾರೆ.ಆರೋಪಿಯ ಅಬ್ಬರಕ್ಕೆ ಧೃತಿಗೆಡದ ಮಳಿಗೆಯ…

Read More

ಮಂಗಳೂರು: ಮಾದಕ ವಸ್ತುವನ್ನು ಸೇವನೆ ಮಾಡಿದ ಆರೋಪದಡಿ ಎರಡು ಪ್ರತ್ಯೇಕ ಪ್ರಕರಣದಲ್ಲಿ ಮೂವರನ್ನು ಬಂಧಿಸಿದ್ದಾರೆ. ಮೊದಲ ಪ್ರಕರಣದಲ್ಲಿ ಪಣಂಬೂರಿನ ಕುದುರೆಮುಖ ಜಂಕ್ಷನ್ ಬಳಿ ಕೋಟೆಕಾರು ಸಮೀಪದ ಮಡ್ಯಾರು ನಿವಾಸಿ ಶ್ರೀಜಿತ್ ಶೆಟ್ಟಿ(24) ಎಂಬಾತನನ್ನು ಪಣಂಬೂರು ಪೊಲೀಸರು ಬಂಧಿಸಿದ್ದಾರೆ. ಎರಡನೇ ಪ್ರಕರಣದಲ್ಲಿ ನಗರದ ರಾವ್ ಆ್ಯಂಡ್ ರಾವ್ ವೃತ್ತದ ಬಳಿಯ ಕಟ್ಟಡವೊಂದರ ಬಳಿ ಮಾದಕ ವಸ್ತು ಸೇವೆನೆ ಮಾಡಿದ್ದ ಕೇರಳದ ಕಣ್ಣೂರಿನ ಅಭಿಜಿತ್ ಅಜಯ್ (20) ಮತ್ತು ಎರ್ನಾಕುಲಂನ ಬೆನ್ ಎಲಿಯಾಸ್ (21) ಎಂಬವರನ್ನು ಪಾಂಡೇಶ್ವರ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಮೂವರನ್ನೂ ವೈದ್ಯಕೀಯ ಪರೀಕ್ಷೆಗೊಳಪಡಿಸಿದಾಗ ಮಾದಕ ವಸ್ತು ಸೇವನೆ ಮಾಡಿರುವುದು ದೃಢಪಟ್ಟಿದೆ. ಈ ಕುರಿತು ಮೂವರ ವಿರುದ್ಧ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Read More

ಮೂಡಬಿದಿರೆ: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೂಡಬಿದರೆಯ ಮಿಜಾರು ಕೊಪ್ಪದಕುಮೇರಿಯಲ್ಲಿ ನಿನ್ನೆ(ಜು.17) ಸಂಜೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಮಹಿಳೆಯನ್ನು ಅರ್ಚಕ ಗುರು ಭಟ್ ಅವರ ಪತ್ನಿ ಸ್ನೇಹಾ ಎಂದು ಗುರುತಿಸಲಾಗಿದೆ.ಆತ್ಮಹತ್ಯೆಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಘಟನಾ ಸ್ಥಳಕ್ಕೆ ಮೂಡುಬಿದಿರೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತರಿಗೆ ಇಬ್ಬರು ಹೆಣ್ಣು ಮಕ್ಕಳು ಇದ್ದಾರೆ ಎಂದು ತಿಳಿದುಬಂದಿದೆ.

Read More

ಉಡುಪಿ: ಸೈಬರ್ ಕ್ರೈಮ್, ಜಾರಿ ನಿರ್ದೇಶನಾಲಯ (ಇ.ಡಿ.) ಹಾಗೂ ಸಿಬಿಐ ಅಧಿಕಾರಿಗಳ ಹೆಸರಿನಲ್ಲಿ ಕರೆ ಮಾಡಿ ಬೆದರಿಕೆ ಹಾಕಿದ ವಂಚಕರು, ಉಡುಪಿ ತಾಲೂಕಿನ ನಿವೃತ್ತ ಬ್ಯಾಂಕ್ ಉದ್ಯೋಗಿಯೊಬ್ಬರಿಂದ 22 ಲಕ್ಷ ರೂ. ಹಣ ವರ್ಗಾಯಿಸಿಕೊಂಡು ವಂಚಿಸಿರುವ ಘಟನೆ ನಡೆದಿದೆ. ಉಡುಪಿ ತಾಲೂಕಿನ ನಿವಾಸಿ ಹಾಗೂ ನಿವೃತ್ತ ಬ್ಯಾಂಕ್ ಉದ್ಯೋಗಿ ಜಯಕರ ಕಾಮತ್ ಪಿ. (76) ಅವರು ನೀಡಿದ ದೂರಿನ ಪ್ರಕಾರ, ಜುಲೈ 10ರಂದು ಮಧ್ಯಾಹ್ನ ಸುಮಾರು 3 ಗಂಟೆಗೆ ಅವರ ಮೊಬೈಲ್‌ಗೆ ಅಪರಿಚಿತ ಸಂಖ್ಯೆಯಿಂದ ವಾಟ್ಸಾಪ್ ವಿಡಿಯೊ ಕರೆ ಬಂದಿದೆ. ಕರೆ ಸ್ವೀಕರಿಸಿದ ವೇಳೆ ಪೊಲೀಸ್ ಸಮವಸ್ತ್ರ ಧರಿಸಿದ್ದ ವ್ಯಕ್ತಿಯೊಬ್ಬ, ತಾನು ಮುಂಬೈನ ಕೊಲಾಬಾ ಸೈಬರ್ ಕ್ರೈಮ್ ವಿಭಾಗದ ಅಧಿಕಾರಿಯೆಂದು ಪರಿಚಯಿಸಿಕೊಂಡಿದ್ದಾನೆ. ಬಳಿಕ, ಜಯಕರ ಕಾಮತ್ ಅವರ ಹೆಸರಿನಲ್ಲಿ ಮುಂಬೈನ ಕೆನರಾ ಬ್ಯಾಂಕ್‌ನಲ್ಲಿ ಖಾತೆಯಿದ್ದು, ಆ ಖಾತೆಯ ಮೂಲಕ ನೂರಾರು ಕೋಟಿ ರೂಪಾಯಿ ಅಕ್ರಮ ಹಣ ವರ್ಗಾವಣೆಯಾಗಿರುವುದಾಗಿ ಹೇಳಿ, ಬ್ಯಾಂಕ್ ಖಾತೆ ಹಾಗೂ ಎಟಿಎಂ ಕಾರ್ಡ್ ವಿವರಗಳನ್ನು ಕೇಳಿದ್ದಾನೆ. ಜುಲೈ 11ರಿಂದ…

Read More

ಮಂಗಳೂರು : ನಗರದ ಮನೆಯೊಂದರಲ್ಲಿ ನಡೆದಿದ್ದ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ನೇಪಾಳ ಮೂಲದ ಕುಖ್ಯಾತ ಅಂತರ್ ರಾಷ್ಟ್ರ ಮನೆಗಳ್ಳರನ್ನು ಪೊಲೀಸರು ಬಂಧಿಸಿದ್ದು, 10 ಲಕ್ಷ ಮೌಲ್ಯದ ಚಿನ್ನ ಹಾಗೂ ಬೆಳ್ಳಿ ಆಭರಣಗಳನ್ನು ವಶಪಡಿಸಿಕೊಂಡಿದ್ದಾರೆ. ನೇಪಾಳದ ಚೈನ್ಪೂರು ಜಿಲ್ಲೆ ನಿವಾಸಿ ತಿಲಕ್ ಕುಮಾರ್ ಖಡ್ಕ ಯಾನೆ ತಿಲಕ್ ಖಡ್ಕ(36), ನೇಪಾಳದ ಬಜಂಗ್ ಜಿಲ್ಲೆ ನಿವಾಸಿ ಅಶೋಕ್ ರಾಜ್ ಯಾನೆ ಅಶೋಕ್ ಸಿಂಗ್ ಯಾನೆ ಅಶೋಕ್ ಸಿಂಗ್ ಠಾಕುರಿ(33), ನೇಪಾಳದ ಕೈಲಾಲಿ ಜಿಲ್ಲೆ ನಿವಾಸಿ ದಿಪೆಂದರ್ ರಸೈಲಿ(25) ಬಂಧಿತ ಆರೋಪಿಗಳು.ಮಂಗಳೂರು ನಗರದ, ಉರ್ವ ಮಾರ್ಕೆಟ್ ಬಳಿ ಮಠದಕಣಿಯ ಮನೆಯೊಂದರಲ್ಲಿ ಜು.11 ರಂದು ಸಂಜೆ ಮನೆಯವರು ಮನೆಗೆ ಲಾಕ್ ಮಾಡಿಕೊಂಡು ಬಂಟ್ವಾಳ ತಾಲೂಕಿನ, ವಿಟ್ಲ ಕಡಂಬು ಎಂಬಲ್ಲಿರುವ ಅವರ ಸಂಬಂಧಿಕರ ಮನೆಗೆ ತೆರಳಿದ್ದರು. ಜು.12ರಂದು ಬೆಳಗ್ಗೆ ಹಿಂದಿರುಗಿ ನೋಡಿದಾಗ ಮನೆಯ ಹಿಂಭಾಗದ ಬಾಗಿಲು ಒಡೆದು ಯಾರೋ ಕಳ್ಳರು ಮನೆಗೆ ನುಗ್ಗಿರುವುದು ಬೆಳಕಿಗೆ ಬಂದಿದೆ.ಕಳ್ಳರು ಮನೆಯಲ್ಲಿದ್ದ ಸುಮಾರು 64 ಗ್ರಾಮ್ ತೂಕದ ಚಿನ್ನಾಭರಣ ಹಾಗೂ ರೂ 25,000 ರೂ. ಸೇರಿದಂತೆ…

Read More

ಬಿ.ಸಿ ರೋಡಿನಲ್ಲಿ ಗುರುವಾರ ನಡೆದ ಯುವತಿಯೊಬ್ಬಳ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಯನ್ನು ಶುಕ್ರವಾರ ಬೆಳಗ್ಗೆ ಮಂಗಳೂರಿನಲ್ಲಿ ವಶಕ್ಕೆ ಪಡೆಯಲಾಗಿದೆ ಎಂದು ಎಸ್ಪಿ ಡಾ. ಅರುಣ್ ಕುಮಾರ್ ತಿಳಿಸಿದ್ದಾರೆ.  ಗುರುವಾರ ಸಂಜೆ ಬಂಟ್ವಾಳ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ 21 ವರ್ಷದ ಲಾವಣ್ಯ ಎಂಬ ಯುವತಿಯೊಬ್ಬಳನ್ನು ಯುವಕನೊಬ್ಬ ತಲವಾರು ಮೂಲಕ ದಾಳಿ ನಡೆಸಿ ಕೊಲೆ ಮಾಡಿರುವ ಬಗ್ಗೆ ದೂರು ಬಂದಿದೆ. ಈ ಬಗ್ಗೆ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವಿಶೇಷ ಪೊಲೀಸ್ ತಂಡ ರಚಿಸುವ ಮೂಲಕ ಆರೋಪಿಯನ್ನು ಪತ್ತೆ ಹಚ್ಚಲಾಗಿದೆ ಎಂದು ಮಾಹಿತಿ ನೀಡಿದ್ದಾರೆ. ವಿಚಾರಣೆ ವೇಳೆ ಆತ ಇಲಿಪಾಷಾಣ ಸೇವಿಸಿರುವುದಾಗಿ ಹೇಳಿದ್ದು, ಆತನನ್ನು ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮುಂದೆ ಅಗತ್ಯ ಕಾನೂನು ಕ್ರಮ ವಹಿಸಲಾಗುವುದು ಎಂದು ತಿಳಿಸಿದ್ದಾರೆ.

Read More

ಮಂಗಳೂರು: ಸಮುದ್ರದ ಅಲೆಗಳ ಹೊಡೆತಕ್ಕೆ ಮೀನುಗಾರಿಕಾ ದೋಣಿ ಪಲ್ಟಿಯಾದ ಪರಿಣಾಮ ದೋಣಿಯಲ್ಲಿದ್ದ 6 ಮಂದಿ ಮೀನುಗಾರರನ್ನು ರಕ್ಷಿಸಿರುವ ಘಟನೆ ಮಂಗಳೂರು ಹೊರವಲಯದ ಸುರತ್ಕಲ್ ಬಳಿ ನಡೆದಿದೆ. ದೋಣಿ ಉಡುಪಿಯ ಮಲ್ಪೆ ಬಂದರಿನಿಂದ ಮೀನುಗಾರಿಕೆಗೆ ಹೊರಟಿತ್ತು. ದೋಣಿಯಲ್ಲಿ ಆಂಧ್ರಪ್ರದೇಶ ಮೂಲದ 6 ಮಂದಿ ಮೀನುಗಾರರಿದ್ದರು. ಮೀನುಗಾರಿಕೆ ವೇಳೆ ಸಮುದ್ರದ ಅಲೆಗಳ ಹೊಡೆತಕ್ಕೆ ದೋಣಿ ಪಲ್ಟಿಯಾಗಿದೆ. ದೋಣಿ ಪಲ್ಟಿಯಾದ ರಭಸಕ್ಕೆ ಮೀನುಗಾರರು ಸಮುದ್ರಕ್ಕೆ ಬಿದ್ದಿದ್ದಾರೆ. ಈ ವೇಳೆ ಸ್ಥಳೀಯ ಮೀನುಗಾರರು ಅಪಾಯದಲ್ಲಿದ್ದ ಮೀನುಗಾರರನ್ನು ರಕ್ಷಣೆ ಮಾಡಿದ್ದಾರೆ.

Read More