ಪುತ್ತೂರು: ಏಳು ತಿಂಗಳ ಹಿಂದೆ ನಾಪತ್ತೆಯಾಗಿರುವ ವ್ಯಕ್ತಿ ಇನ್ನೂ ಪತ್ತೆಯಾಗಿಲ್ಲ. ಕೆದಂಬಾಡಿ ಗ್ರಾಮದ ಬಾರಿಕೆ ನಿವಾಸಿ ಸಂಕಪ್ಪ ಪೂಜಾರಿ ಅವರ ಪುತ್ರ ದಿವಾಕರ (37) ನಾಪತ್ತೆಯಾಗಿರುವ ವ್ಯಕ್ತಿ. ಅವಿವಾಹಿತರಾಗಿರುವ ಅವರು ಕೂಲಿ ಕಾರ್ಮಿಕರಾಗಿದ್ದು ಎ.27ರಂದು ಬೆಳಗ್ಗೆ 6ಕ್ಕೆ ಮನೆಯಿಂದ ಹೊರ ಹೋಗಿದ್ದರು.ಕಾಣೆಯಾದ ಸಂದರ್ಭದಲ್ಲಿ ಕರೆ ಮಾಡಿದ್ದ ಅವರು, ‘ಕಾಡಿನೊಳಗಿದ್ದೇನೆ ದಾರಿ ಸಿಗುತ್ತಿಲ್ಲ’ ಎಂದು ತಿಳಿಸಿದ್ದು ಬಳಿಕ ಅವರ ಮೊಬೈಲ್ ಸ್ವಿಚ್ ಆಫ್ ಆಗಿತ್ತು. ಈ ನಡುವೆ ಸಂಪ್ಯ ಪೊಲೀಸರ 15 ಮಂದಿಯ ತಂಡ ಕಾಡಿನಲ್ಲಿ ಹುಡುಕಾಟವನ್ನೂ ನಡೆಸಿದ್ದರು.ದಿವಾಕರ ಅವರ ಗುರುತು ಪತ್ತೆಯಾದಲ್ಲಿ ಪುತ್ತೂರು ಗ್ರಾಮಾಂತರ ಪೊಲೀಸ್ ನಿರೀಕ್ಷಕರು, ಜಿಲ್ಲಾ ಕಂಟ್ರೋಲ್ ರೂಂಗೆ ಮಾಹಿತಿ ನೀಡುವಂತೆ ಗ್ರಾಮಾಂತರ ಪೊಲೀಸ್ ಠಾಣೆ ಪ್ರಕಟನೆ ತಿಳಿಸಿದೆ.
Author: main-admin
ಮಂಗಳೂರು: ಪಾರ್ಟ್‌ಟೈಮ್ ಜಾಬ್ ಆಫರ್ ನೀಡಿ ವ್ಯಕ್ತಿಯೊಬ್ಬರಿಂದ ಹಂತಹಂತವಾಗಿ 28,18,065 ರೂ ವಂಚನೆಗೈದ ಐವರು ಆರೋಪಿಗಳನ್ನು ಕೊಣಾಜೆ ಪೊಲೀಸರು ಬಂಧಿಸಿದ್ದಾರೆ. ಫಿರ್ಯಾದಿದಾರರ ವಾಟ್ಸ್ಆ್ಯಪ್‌ಗೆ ಜುಲೈ 21ರಂದು ಪಾರ್ಟ್‌ಟೈಮ್ ಜಾಬ್ ಆಫರ್ ಬಂದಿತ್ತು. ಅದರಲ್ಲಿ ಬಂದ ವೀಡಿಯೋದ ಸ್ಕ್ರೀನ್ ಶಾಟ್ ತೆಗೆದು ಹಾಕುವಂತೆ ಸೂಚಿಸಿದ್ದಂತೆ ಅವರು ಕಳುಹಿಸಿದ್ದರು. ಆ ತಕ್ಷಣ ಅವರ ಬ್ಯಾಂಕ್ ಖಾತೆಗೆ 130 ರೂ ಕ್ರೆಡಿಟ್ ಆಗಿದೆ. ಬಳಿಕ ಹಾಕಿರುವ ವೀಡಿಯೋ ತಪ್ಪಾಗಿದೆ ಎಂದು ಸೂಚನೆ ನೀಡಿದ ಪಾರ್ಟ್‌ಟೈಮ್ ಜಾಬ್ ಆಫರ್ ನೀಡಿದವರು ಟೆಲಿಗ್ರಾಂ ಲಿಂಕ್ ಅನ್ನು ಕಳುಹಿಸಿದ್ದಾರೆ. ಅದನ್ನು ಓಪನ್ ಮಾಡಿದಾಗ 1000 ರೂ ಹಾಕುವಂತೆ ಸೂಚಿಸಿದ್ದಾರೆ. ಬಳಿಕ ಹಂತಹಂತವಾಗಿ ಹಣ ಹಾಕಲು ಸೂಚಿಸುತ್ತಾ 28,18,065 ರೂ ಹಣವನ್ನು ತಮ್ಮ ಖಾತೆಗೆ ಹಾಕಲು ಹಾಕಿಸಿಕೊಂಡಿದ್ದಾರೆ. ತನಿಖೆ ಆರಂಭಿಸಿದ ಪೊಲೀಸರು ವರ್ಗಾವಣೆ ಆಗಿರುವ ಬ್ಯಾಂಕ್ ಖಾತೆ, ಇತರ ಹಣದ ಮಾಹಿತಿ ಆಧಾರದಲ್ಲಿ ಮೈಸೂರು ಉದಯಗಿರಿ ಮೂಲದ ನಾಲ್ವರು, ಬೆಂಗಳೂರು ನೀಲಸಂದ್ರದ ಓರ್ವ ಆರೋಪಿಯನ್ನು ಬಂಧಿಸಿದ್ದಾರೆ. ವಿಚಾರಣೆ ಮಾಡಿದಾಗ ಶೋಯೇಬ್ ಎಂಬಾತ…
ಮಂಗಳೂರು: ಪೊಲೀಸರ ಕೈಗೆ ಸಿಗದೆ ಕೋಟಿಗಟ್ಟಲೆ ಹಣವನ್ನು ಲೂಟಿ ಮಾಡುತ್ತಿರುವ ಸೈಬರ್ ವಂಚಕರೂ ಇದೀಗ ಪೊಲೀಸ್ ಬಲೆಗೆ ಬೀಳಲಾರಂಭಿಸಿದ್ದಾರೆ. ಮಂಗಳೂರಿನ ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಎರಡು ಸೈಬರ್ ಅಪರಾಧಗಳಿಗೆ ಸಂಬಂಧಿಸಿದಂತೆ ಮೂವರು ಅರೆಸ್ಟ್ ಆಗಿದ್ದಾರೆ. ಸಿಬಿಐ ಅಧಇಕಾರಿ ಎಂದು ಹೆದರಿಸಿ ವ್ಯಕ್ತಿಯೊಬ್ಬರಿಂದ ಬರೋಬ್ಬರಿ 68 ಲಕ್ಷ ಹಣವನ್ನು ಸುಲಿಗೆ ಮಾಡಿದ್ದ ಆರೋಪಿ ಕೇರಳದ ಎರ್ನಾಕುಲಂ ಜಿಲ್ಲೆಯ ಆಲುವಾ ತಾಲೂಕಿನ ನಿಸಾರ್ ಎಂಬಾತನನ್ನು ಬಂಧಿಸಲಾಗಿದೆ. ಅದಲ್ಲದೆ ಷೇರು ಮಾರುಕಟ್ಟೆಯಲ್ಲಿ ಹಣ ತೊಡಗಿಸಿದರೆ ಅಧಿಕ ಲಾಭಾಂಶ ಕೊಡುವುದಾಗಿ ನಂಬಿಸಿ ಸುಮಾರು 90 ಲಕ್ಷ ರೂ. ಹಣವನ್ನು ವಂಚನೆ ಮಾಡಿರುವ ಆರೋಪಿಗಳಾದ ಕೇರಳದ ಕೋಝಿಕೋಡ್‌ನ ಸಾಹಿಲ್ ಕೆ.ಪಿ ಮತ್ತು ನಶಾತ್ ಆರ್. ಎಂಬವರನ್ನು ಬಂಧಿಸಲಾಗಿದೆ. ಕಾರ್ಯಾಚರಣೆಯಲ್ಲಿ ಇನ್‌ಸ್ಪೆಕ್ಟರ್ ರಾಘವೇಂದ್ರ ಬೈಂದೂರು, ಎಸ್ಸೈ ಮಲ್ಲಿಕಾರ್ಜುನ ಬಿರಾದಾರ ಸಿಬ್ಬಂದಿಗಳಾದ ರಾಮಣ್ಣ ಶೆಟ್ಟಿ, ಭುವನೇಶ್ವರಿ, ರಾಜಪ್ಪಕಾಶಿಬಾಯಿ, ಪ್ರವೀಣ್ ಎನ್., ಮಾಲತೇಶ ಪಾಲ್ಗೊಂಡಿದ್ದರು.
ಬೆಂಗಳೂರು: ಎಲ್ಲಾ ವರ್ಗದ ವಾಹನಗಳಿಗೆ ಅತೀ ಸುರಕ್ಷಿತ ನೋಂದಣಿ ಫಲಕ ಅಳವಡಿಸಲು ನಿಗದಿಪಡಿಸಿರುವ ಕಾಲಮಿತಿಯನ್ನು ನವೆಂಬರ್ 30ರವರೆಗೆ ವಿಸ್ತರಿಸಿ ಸಾರಿಗೆ ಇಲಾಖೆ ಆದೇಶ ಹೊರಡಿಸಿದೆ. ಕಳೆದ 2019ರ ಏಪ್ರಿಲ್ ಒಂದಕ್ಕಿಂತ ಪೂರ್ವದಲ್ಲಿ ನೋಂದಣಿಯಾಗಿರುವ ಎಲ್ಲಾ ವರ್ಗದ ವಾಹನಗಳಿಗೆ ಅತೀ ಸುರಕ್ಷಿತ ನೋಂದಣಿ ಫಲಕ ಅಳವಡಿಸಬೇಕಾಗಿದೆ. ಈಗಾಗಲೇ ಈ ನೋಂದಣಿ ಫಲಕ ಅಳವಡಿಕೆಗೆ ನಿಗದಿಪಡಿಸಿದ್ದ ಅಂತಿಮ ಗಡುವನ್ನು ಸಾರಿಗೆ ಇಲಾಖೆ ಸುಮಾರು ನಾಲ್ಕು ಬಾರಿ ವಿಸ್ತರಣೆ ಮಾಡಿದೆ.
ಕಾರ್ಕಳ:ಅಣ್ಣನ ತಿಥಿಗೆ ಪೂರ್ವ ಸಿದ್ಧತೆ ಮಾಡುತ್ತಿದ್ದ ವೇಳೆ ತಂಗಿ ವಿದ್ಯುತ್ ಆಘಾತಕ್ಕೊಳಗಾಗಿ ಮೃತಪಟ್ಟ ಘಟನೆ ನಿಟ್ಟೆ ಪರಪ್ಪಾಡಿ ಎಂಬಲ್ಲಿ ನಡೆದಿದೆ. ಮೃತಪಟ್ಟ ಮಹಿಳೆ ಲಲಿತಾ ಬೋಂಡ್ರ ಎಂದು ಗುರುತಿಸಲಾಗಿದೆ. ನಿಟ್ಟೆ ಪರಪ್ಪಾಡಿಯ ರಾಘು ಬೋಂಡ್ರ ಎಂಬವರು ಕೆಲ ದಿನಳ ಹಿಂದೆ ಮೃತಪಟ್ಟಿದ್ದರು. ಅಣ್ಣನ ತಿಥಿಯ ಪೂರ್ವ ಸಿದ್ಧತೆಗಾಗಿ ಬಂದಿದ್ದ ತಂಗಿ ಲಲಿತಾ ಬೋಂಡ್ರ ಅವರು ಗುರುವಾರ ರಾತ್ರಿ ಅಡುಗೆ ಪಾತ್ರೆಗಳನ್ನು ತೊಳೆಯುತ್ತಿದ್ದರು. ಅದೇ ಸಂದರ್ಭದಲ್ಲಿ ಮನೆ ಹೊರಾಂಗಣದಲ್ಲಿ ಅಳವಡಿಸಲಾಗಿದ್ದ ಶಾಮಿಯಾನದ ಕಬ್ಬಿಣದ ಕಂಬವನ್ನು ಹಿಡಿಯುತ್ತಿದ್ದಂತೆ ಅವರು ವಿದ್ಯುತ್ ಅಘಾತಕ್ಕೊಳಗಾಗಿ ಘಟನಾ ಸ್ಥಳದಲ್ಲಿ ಕುಸಿದು ಬಿದ್ದು ದಾರುಣ ಅಂತ್ಯ ಕಂಡಿದ್ದಾರೆ. ಶಾಮೀಯನ ಅಳವಡಿಸಿದಾಗ ಅದರ ಕಬ್ಬಣದ ಕಂಬಕ್ಕೆ ಟ್ಯೂಬ್ ಲೈಟ್ ಅಳವಡಿಸಲಾಗಿ ಅದರ ಮೂಲ ವಿದ್ಯುತ್ ಸೋರಿಕೆಯಾಗಿ ಈ ಘಟನೆ ಸಂಭವಿಸಿಎಬಹುದೆಂಬ ಮಾಹಿತಿ ತಿಳಿದು ಬಂದಿದೆ.
ಬೆಂಗಳೂರು : 7 ಜನ ಐಪಿಎಸ್ ಅಧಿಕಾರಿಗಳನ್ನ ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಶುಕ್ರವಾರ ಆದೇಶಿಸಿದೆ. ಶಾಂತನು ಸಿನ್ಹಾ – ಡಿಐಜಿಪಿ ಸಿಐಡಿ ಜಿ.ಸಂಗೀತಾ – ಎಸ್.ಪಿ, ಸಿಐಡಿ ಅಬ್ದುಲ್ ಅಹದ್ – ನಿರ್ದೇಶಕರು, ಬಿಎಂಟಿಸಿ (ಭದ್ರತಾ & ವಿಚಕ್ಷಣೆ) ಲಕ್ಷ್ಮಣ್ ನಿಂಬರ್ಗಿ – ಎಸ್.ಪಿ, ವಿಜಯಪುರ ಚೆನ್ನಬಸವಣ್ಣ ಲಂಗೋಟಿ – ನಿರ್ದೇಶಕರು, ಕರ್ನಾಟಕ ಪೊಲೀಸ್ ಅಕಾಡೆಮಿ, ಮೈಸೂರು ಪೃಥ್ವಿಕ್ ಶಂಕರ್ – ಎಸ್.ಪಿ, ಯಾದಗಿರಿ ಶಿವಾಂಶು ರಜಪೂತ್ – ಎಸ್.ಪಿ – ರಾಜ್ಯ ಅಪರಾಧ ದಾಖಲೆಗಳ ವಿಭಾಗ
ಬೆಂಗಳೂರು : ಅಬಕಾರಿ ಇಲಾಖೆಯಲ್ಲಿನ ಭ್ರಷ್ಟಾಚಾರ ನಿಯಂತ್ರಿಸಬೇಕು ಎಂಬುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಸ್ವಚ್ಛ ಅಬಕಾರಿ ಅಭಿಯಾನದಡಿ ನ. 20ರಂದು ರಾಜ್ಯಾದ್ಯಂತ ಮದ್ಯ ಮಾರಾಟ ಬಂದ್‌ಗೆ ಫೆಡರೇಶನ್ ಆಫ್ ವೈನ್ ಮರ್ಚಂಟ್ಸ್ ಅಸೋಸಿಯೇಶನ್ ಕರ್ನಾಟಕ ಕರೆ ನೀಡಿದೆ. ಗುರುವಾರ ಸುದ್ದಿಗೋಷ್ಠಿ ಯಲ್ಲಿ ಈ ವಿಷಯ ತಿಳಿಸಿದ ಅಸೋಶಿ ಯೇಶನ್ ಪ್ರಧಾನ ಕಾರ್ಯದರ್ಶಿ ಬಿ. ಗೋವಿಂದರಾಜ್ ಹೆಗ್ಡೆ, ಅಬಕಾರಿ ಇಲಾಖೆ ಯನ್ನು ಆರ್ಥಿಕ ಸಚಿವರೇನಿರ್ವಹಿಸಬೇಕು. ಈ ಬಗ್ಗೆ ಮುಖ್ಯಮಂತ್ರಿ ನೇತೃತ್ವದಲ್ಲಿ ಸಭೆ ನಡೆಸಬೇಕು. ವ್ಯಾಪಾರಿಗಳು ಪರವಾನಗಿ ಪಡೆಯುವಾಗ ಹಾಗೂ ಮರು ನೋಂದಣಿ ಮಾಡಿಕೊಳ್ಳುವಾಗ ಅಧಿಕಾರಿಗಳು ಲಂಚ ಕೇಳುತ್ತಿರುವ ಬಗ್ಗೆ ಸೂಕ್ತ ತನಿಖೆ ನಡೆಸಬೇಕು ಎಂದು ಆಗ್ರಹಿಸಿದರು. ಅಬಕಾರಿ ಕಾಯ್ದೆಯ ಕಲಂ 29 ಪುನರ್ ವಿಮರ್ಶಿಸಿ, ತಿದ್ದುಪಡಿ ಮಾಡಬೇಕು. ಚಿಲ್ಲರೆ ಲದೆ ಮಾರಾಟದ ಮೇಲೆ ಮದ್ಯ ಕನಿಷ್ಠ ಶೇ 20 ರಷ್ಟು ಲಾಭಾಂಶ ನೀಡಬೇಕು. ನಕಲಿ ಮದ್ಯ ತಯಾರಕರ ಮೇಲೆ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು. ಮದ್ಯದ ಪಾರ್ಸಲ್‌ಗೆ ಸಂಬಂಧಿಸಿದಂತೆ ಕಾನೂನು…
ವಿಟ್ಲ : ಇಲ್ಲಿನ ಕಂದಾಯ ನಿರೀಕ್ಷಕರ ಕಚೇರಿಯಲ್ಲಿ ದಾಂಧಲೆ ನಡೆಸಿದ ಆರೋಪದಲ್ಲಿ ಇಬ್ಬರ ವಿರುದ್ಧ ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವೀರಕಂಬ ಗ್ರಾಮದ ನಿವಾಸಿ ಹರೀಶ್ ರೈ ಕಲ್ಮಲೆ, ಧನಂಜಯ ವಿರುದ್ಧ ಪ್ರಕರಣ ದಾಖಲಾಗಿದೆ. ವೀರಕಂಬ ಗ್ರಾಮದ ನೆಕ್ಕಿಲಾರು ನಿವಾಸಿ ಶೇಖ್ ಸುಬಾನ್ ಅವರ 94ಸಿ ಮನೆ ನಿವೇಶನದ ಮಂಜೂರಾತಿಗೆ ಸಂಬಂಧಿಸಿ ಮಾತುಕತೆ ನಡೆಸಲು ಆರ್.ಐ.ಕಚೇರಿಗೆ ಇವರಿಬ್ಬರೂ ರಾಜಕಾರಣಿಯೊಂದಿಗೆ ಆಗಮಿಸಿದ್ದರು. ಈ ಸಂಬಂಧ ಮಾತಿಗೆ ಮಾತು ಬೆಳೆದು ದಾಂಧಲೆ ನಡೆಸಿದ್ದು, ಆರೋಪಿಗಳ ವಿರುದ್ಧ ಅವಾಚ್ಯವಾಗಿ ನಿಂದಿನೆ, ಜೀವ ಬೆದರಿಕೆ ಹಾಕಿ, ಸರಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ ಹೊರಿಸಲಾಗಿದೆ. ಕಚೇರಿಯ ಮೇಜಿನ ಮೇಲಿದ್ದ ಗಾಜನ್ನು ಒಡೆದ ಕಾರಣ 7 ಸಾ. ರೂ. ನಷ್ಟ ಉಂಟಾಗಿರುವುದಾಗಿ ಕಂದಾಯ ನಿರೀಕ್ಷಕ ಎ. ಪ್ರಶಾಂತ ಶೆಟ್ಟಿ ದೂರಿನಲ್ಲಿ ತಿಳಿಸಿದ್ದಾರೆ.
ಕಾರ್ಕಳ: ಬೋಳ ಗ್ರಾಮದ ಎರಡು ಮನೆಗಳಲ್ಲಿ ಗೋವಾ ರಾಜ್ಯದ ಭಾರಿ ಪ್ರಮಾಣದಲ್ಲಿ ಅಕ್ರಮವಾಗಿ ದಾಸ್ತಾನಿರಿಸಿದ್ದ ಮದ್ಯದ ಬಾಕ್ಸ್ ಗಳನ್ನು ಅಬಕಾರಿ ಇಲಾಖೆ ದಾಳಿ ನಡೆಸಿ ವಶಕ್ಕೆ ಪಡೆದುಕೊಂಡಿರುವ ಘಟನೆ ಇಂದು ನಡೆದಿದೆ. ಅಬಕಾರಿ ಉಪ ಆಯುಕ್ತೆ ಬಿಂದು ಅವರ ನೇತೃತ್ವದಲ್ಲಿ ಬೋಳದ ಅವಿನಾಶ್ ಮಲ್ಲಿ ಎಂಬುವವರ ಎರಡು ಮನೆಗೆ ದಾಳಿ ನಡೆಸಿದ್ದು, ದುಬಾರಿ ಮೌಲ್ಯದ ಮದ್ಯದ ಬಾಟಲಿಗಳು ಬಾಕ್ಸ್‌ಗಳು ಕೂಡ ಪತ್ತೆಯಾಗಿದೆ. 200 ಕ್ಕೂ ಅಧಿಕ ಬಾಕ್ಸ್ ಗಳನ್ನು ವಶಕ್ಕೆ ಪಡೆದಿದ್ದು, ಇವು ನಕಲಿ ಮದ್ಯವೋ, ಅಸಲಿ ಮದ್ಯವೋ ಎಂಬ ನಿಟ್ಟಿನಲ್ಲಿ ತನಿಖೆ ಮುಂದುವರಿದಿದೆ. ಗ್ರಾಮೀಣ ಭಾಗದಲ್ಲಿ ಇಷ್ಟೊಂದು ದೊಡ್ಡ ಪ್ರಮಾಣದಲ್ಲಿ ಮದ್ಯ ದಾಸ್ತಾನು ಮಾಡಿರುವ ಬಗ್ಗೆ ಅಧಿಕಾರಿಗಳು ದಂಗಾಗಿದ್ದಾರೆ. ಈ ಬಗ್ಗೆ ವಿಚಾರಣೆ ನಡೆಸುತ್ತಿದ್ದಾರೆ. ಸದ್ಯಕ್ಕೆ ಪರಿಶೀಲನೆ ನಡೆಯುತ್ತಿದ್ದು, ತನಿಖೆ ನಡೆಸಲಾಗುತ್ತಿದೆ. ಶೀಘ್ರ ವಿವರವಾದ ಮಾಹಿತಿ ನೀಡಲಾಗುವುದು ಎಂದು ಅಬಕಾರಿ ಡಿಸಿ ಬಿಂದು ತಿಳಿಸಿದ್ದಾರೆ.
ಮಲ್ಪೆ : ಡ್ರಗ್ಸ್ ಪಾರ್ಸೆಲ್ ಕಳುಹಿಸಿರುವುದಾಗಿ ಬೆದರಿಸಿ ವ್ಯಕ್ತಿಯೊಬ್ಬರಿಂದ 20.ಲಕ್ಷ ರೂ. ಖಾತೆಗೆ ವರ್ಗಾಯಿಸಿ ವಂಚನೆ ಎಸಗಿರುವ ಬಗ್ಗೆ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನ.7ರಂದು ಅಪರಿಚಿತ ವ್ಯಕ್ತಿ ಕೋರಿಯರ್ ಕಂಪನಿಯಿಂದ ಕರೆ ಮಾಡಿರುವುದಾಗಿ ಹೇಳಿ, ನೀವು ಕಳಿಸಿರುವ ಪಾರ್ಸೆಲ್‌ನಲ್ಲಿ ಬಟ್ಟೆ, ಪಾಸ್‌ಪೋರ್ಟ್, ಡೆಬಿಟ್ ಕಾರ್ಡ್, ಲ್ಯಾಪ್‌ಟಾಪ್, ಎಂಡಿಎಂಎ ಡ್ರಗ್ಸ್ ಇದ್ದು ಆ ಪಾರ್ಸೆಲ್ ಮುಂಬೈಯ ಎನ್ ಸಿಬಿ ಅವರ ಬಳಿ ಇದೆ. ನೀವು ಅರ್ಮನ್ ಅಲಿಗೆ ಪಾರ್ಸೆಲ್ ಕಳುಹಿಸಿರುವುದಾಗಿ ತಿಳಿಸಿದರು. ಇದಕ್ಕೆ ಪೊಲೀಸ್ ಕ್ಲಿಯರೆನ್ಸ್ ಪಡೆಯಲು ವಿಡಿಯೋ ಕಾಲ್ ಗೆ ಬರುವಂತೆ ತಿಳಿಸಿದರು. ಎಲ್ಲಾ ದಾಖಲೆಗಳನ್ನು ಪರಿಶೀಲಿಸುವುದಾಗಿ ತಿಳಿಸಿ , ವ್ಯಕ್ತಿಯ ಬ್ಯಾಂಕ್ ನ ಖಾತೆಯ ಅಪ್ಲಿಕೇಶನ್ ಲಾಗಿನ್ ಆಗಲು ಸೂಚಿಸಿ ಪರ್ಸನಲ್ ಲೋನ್ ಸೆಕ್ಷನ್‌ನಲ್ಲಿ 20 ಲಕ್ಷ ವಂಚನೆಯ ಹಣ ಇದ್ದು 20 ಲಕ್ಷ ಹಣವನ್ನು ತಮ್ಮ ಖಾತೆಗೆ ಜಮಾವಣೆ ಮಾಡಿಕೊಳ್ಳುವಂತೆ ಸೂಚಿಸಿದರು. ಅದನ್ನು ನಂಬಿ 20 ಲಕ್ಷ ರೂ. ಹಣವನ್ನು ವರ್ಗಾವಣೆ ಮಾಡಿ ವಂಚನೆಗೆ ಒಳಗಾಗಿರುವುದಾಗಿ…










