Author: main-admin

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಪರಿಣಾಮಕಾರಿ ಪೊಲೀಸ್ ವ್ಯವಸ್ಥೆಗಾಗಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ 16ನೇ ಬಜೆಟ್‌ನಲ್ಲಿ ಪೊಲೀಸ್ ವಿಭಾಗಗಳ ಸಂಖ್ಯೆಯನ್ನು ಎಂಟರಿಂದ 11 ಕ್ಕೆ ಹೆಚ್ಚಿಸುವುದಾಗಿ ಶುಕ್ರವಾರ ಘೋಷಿಸಿದ್ದಾರೆ.ಪ್ರಸ್ತುತ ಬೆಂಗಳೂರು ಉತ್ತರ, ದಕ್ಷಿಣ, ಮಧ್ಯ, ಪೂರ್ವ, ಪಶ್ಚಿಮ, ಆಗ್ನೇಯ, ಈಶಾನ್ಯ ಮತ್ತು ವೈಟ್‌ಫೀಲ್ಡ್ ಸೇರಿ ಎಂಟು ಪೊಲೀಸ್ ವಿಭಾಗಗಳಿವೆ. ಇಂದು ವಿಧಾನಸಭೆಯಲ್ಲಿ 2025-26ನೇ ಸಾಲಿನ ಬಜೆಟ್ ಮಂಡಿಸಿದ ಸಿಎಂ ಸಿದ್ದರಾಮಯ್ಯ ಅವರು, ಬೆಂಗಳೂರಿನಲ್ಲಿ ಇನ್ನೂ ಮೂರು ಪೊಲೀಸ್ ವಿಭಾಗಗಳೊಂದಿಗೆ, ಪೊಲೀಸ್ ಠಾಣೆಗಳ ಸಂಖ್ಯೆಯನ್ನು ಹೆಚ್ಚಿಸಲಾಗುವುದು. ನಗರದಲ್ಲಿ ಇನ್ನೂ ಮೂವರು ಐಪಿಎಸ್ ಅಧಿಕಾರಿಗಳನ್ನು ಡಿಸಿಪಿಗಳಾಗಿ ನೇಮಿಸಲಾಗುವುದು. ಪ್ರತಿದಿನ ಹೆಚ್ಚಿನ ಸೈಬರ್ ಅಪರಾಧಗಳು ವರದಿಯಾಗುತ್ತಿರುವುದರಿಂದ ಐದು ಕೋಟಿ ರೂ. ಅನುದಾನದೊಂದಿಗೆ ಸೈಬರ್ ಅಪರಾಧ ವಿಭಾಗವನ್ನು ಸಹ ಬಲಪಡಿಸಲಾಗುವುದು ಎಂದರು. ಶೀಘ್ರದಲ್ಲೇ ಏಳು ಪೊಲೀಸ್ ಠಾಣೆ ಕಟ್ಟಡಗಳು ಪೂರ್ಣಗೊಳ್ಳಲಿವೆ. ಇದಲ್ಲದೆ, 30 ಕೋಟಿ ರೂ. ವೆಚ್ಚದಲ್ಲಿ 12 ಪೊಲೀಸ್ ಠಾಣೆಗಳು, ಒಂದು ಉಪವಿಭಾಗ ಕಚೇರಿ, ಎರಡು ವೃತ್ತ ಕಚೇರಿಗಳು ಮತ್ತು ಒಂದು ಪೊಲೀಸ್ ಔಟ್ ಪೋಸ್ಟ್…

Read More

ಬೆಂಗಳೂರು : ಇನ್ಮುಂದೆ ಮಚ್ಚು, ಲಾಂಗ್ ತೋರಿಸುವವರು, ಕಾನಾನು ಸುವ್ಯವಸ್ಥೆ ಹಾಳು ಮಾಡುವವರ ವಿರುದ್ಧ ಯಾವುದೇ ಮುಲಾಜಿಲ್ಲದೆ ಕಠಿಣ ಕ್ರಮ ಕೈಗೊಳ್ಳುವುದಾಗಿ ಗೃಹ ಸಚಿವ ಡಾ. ಜಿ ಪರಮೇಶ್ವರ್ ತಿಳಿಸಿದರು. ಜೆಡಿಎಸ್ ನಾಯಕ ಎಸ್.ಎಲ್.ಭೋಜೇಗೌಡ ಅವರ ಪ್ರಶ್ನೆಗೆ ಉತ್ತರಿಸಿದ ಗೃಹ ಸಚಿವ ಜಿ.ಪರಮೇಶ್ವರ್ ಅವರು, ಕಳೆದ 2-3 ವರ್ಷಗಳ ಅವಧಿಯಲ್ಲಿ ನಡೆದಿರುವ ವಿವಿಧ ಅಪರಾಧ ಪ್ರಕರಣಗಳು, ಕೈಗೊಂಡ ಕ್ರಮ, ಅಪರಾಧಿಗಳ ಬಂಧನ ಕುರಿತು ಅಂಕಿ ಅಂಶಗಳ ಸಹಿತ ವಿವರಿಸಿ, ಕಾನೂನು ಮತ್ತು ಸುವ್ಯವಸ್ಥೆ ಹದಗೆಡಲು ಅವಕಾಶ ನೀಡುವುದಿಲ್ಲ ಎಂದು ಹೇಳಿದರು. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿಲ್ಲ. ಸಮಾಜದ ಶಾಂತಿ ಹಾಳು ಮಾಡುವ ಉದ್ದೇಶದಿಂದ ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ ಹಬ್ಬಿಸಿ ಗಲಭೆ ಸೃಷ್ಟಿಸುವವರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತಿದೆ. ಗೂಂಡಾ ಕಾಯ್ದೆಯಡಿ ಮೂರು ವರ್ಷಗಳಲ್ಲಿ 139 ಗೂಂಡಾಗಳನ್ನು ಬಂಧಿಸಿ ಜೈಲಿಗಟ್ಟಲಾಗಿದೆ. ಪೊಲೀಸ್ ಠಾಣೆಗಳಲ್ಲಿ ಬೀಟ್ ವ್ಯವಸ್ಥೆ ಹೆಚ್ಚಿಸಲಾಗಿದೆ. ಹೊಯ್ಸಳ ಗಸ್ತು ಕರ್ತವ್ಯ ಬಲಪಡಿಸಲಾಗಿದೆ. ನಗರದ ಯಾವುದೇ ಸ್ಥಳದಿಂದ 112ಗೆ ಕರೆ ಮಾಡಿದರೆ ಸರಾಸರಿ…

Read More

ಬೆಂಗಳೂರು ಮಾರ್ಚ್ 07: ಬೆಳ್ತಂಗಡಿಯಲ್ಲಿ ನಡೆದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಯೂಟ್ಯೂಬ್ ವಿಡಿಯೋ ಮಾಡಿದ್ದ ಯೂಟ್ಯೂಬರ್‌ ಸಮೀರ್‌ ಎಂಡಿ ಗೆ ವಿಚಾರಣೆಗೆ ಹಾಜರಾಗುವಂತೆ ಬಳ್ಳಾರಿ ಪೊಲೀಸರು ರಾತ್ರೊರಾತ್ರಿ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಅಲ್ಲದೆ ಪೊಲೀಸರ ಕ್ರಮವನ್ನು ಹೈಕೋರ್ಟ್ ಕಟುವಾಗಿ ಟೀಕಿಸಿದೆ. ಬಳ್ಳಾರಿ ಪೊಲೀಸರು ಮಾರ್ಚ್ 5ರ ರಾತ್ರಿ ನೋಟಿಸ್‌ ಜಾರಿಗೊಳಿಸಿ, ಗುರುವಾರ ಬೆಳಿಗ್ಗೆ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿ ಬಿಎನ್‌ಎಸ್‌ಎಸ್‌ ಸೆಕ್ಷನ್‌ 35(3) ಅಡಿ ನೋಟಿಸ್‌ ನೀಡಿರುವುದನ್ನು ವಜಾ ಮಾಡುವಂತೆ ಕೋರಿ ಬೆಂಗಳೂರಿನ ಸಮೀರ್‌ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ಏಕಸದಸ್ಯ ಪೀಠ ವಿಚಾರಣೆ ನಡೆಸಿತು.ವಾದ-ಪ್ರತಿವಾದ ಆಲಿಸಿದ ಪೀಠವು “ವಿಚಾರಣೆಗೆ ಹಾಜರಾಗುವಂತೆ ಬಿಎನ್‌ಎಸ್‌ಎಸ್‌ ಸೆಕ್ಷನ್‌ 35(3) ಅಡಿ ನೋಟಿಸ್‌ ಜಾರಿ ಮಾಡಿರುವುದನ್ನು ಸಮೀರ್‌ ಪ್ರಶ್ನಿಸಿದ್ದು, 30.12.2024ರಂದು ರಾಜ್ಯ ಸರ್ಕಾರ ಹೊರಡಿಸಿರುವ ಅಧಿಸೂಚನೆಗೆ ವಿರುದ್ಧವಾಗಿ ಬಳ್ಳಾರಿ ಪೊಲೀಸರು ನೋಟಿಸ್‌ ಜಾರಿ ಮಾಡಿದ್ದಾರೆ. ಸ್ಥಾಪಿತ ಕಾನೂನಿನ ಪ್ರಕಾರ ನೋಟಿಸ್‌ ಜೊತೆಗೆ ಎಫ್‌ಐಆರ್‌ ಪ್ರತಿ ಲಗತ್ತಿಸಬೇಕು. ಇದನ್ನು…

Read More

ಸುಬ್ರಹ್ಮಣ್ಯ: ಮಾಂಸ ಮಾಡುವವರಿಗೆ ಮಾರಾಟ ಮಾಡುವ ಉದ್ದೇಶದಿಂದ ಜಾನುವಾರುಗಳನ್ನು ಹಿಂಸಾತ್ಮಕವಾಗಿ ಸಾಗಾಟ ನಡೆಸುತ್ತಿದ್ದದನ್ನು ಪತ್ತೆ ಹಚ್ಚಿದ ಸುಬ್ರಹ್ಮಣ್ಯ ಪೊಲೀಸರು ಜಾನುವಾರು ಹಾಗೂ ವಾಹನವನ್ನು ವಶಕ್ಕೆ ಪಡೆದ ಘಟನೆ ಮಾ.5ರಂದು ಸುಬ್ರಹ್ಮಣ್ಯ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಹರಿಹರ ಪಳ್ಳತ್ತಡ್ಕದಿಂದ ಬಿಸಿಲೆ ಕಡೆಗೆ ಪಿಕಪ್‌ ವಾಹನದಲ್ಲಿ ಅಕ್ರಮ ಗೋ ಸಾಗಾಟ ಮಾಡುತ್ತಿರುವ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಸುಬ್ರಹ್ಮಣ್ಯ ಎಸೈ ಕಾರ್ತಿಕ್‌ ನೇತೃತ್ವದ ಸುಬ್ರಹ್ಮಣ್ಯ ಪೊಲೀಸರು, ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ-ಬಿಸಿಲೆ ರಸ್ತೆಯ ಕುಲ್ಕುಂದ ಎಂಬಲ್ಲಿ ಪಿಕಪ್‌ ವಾಹನವನ್ನು ತಡೆದು ಪರಿಶೀಲಿಸಿದ್ದು, ಪರಿಶೀಲನೆ ವೇಳೆ ಆರೋಪಿಗಳು ಮೂರು ಜಾನುವಾರುಗಳನ್ನು ಹಿಂಸಾತ್ಮಕವಾಗಿ ಕಟ್ಟಿ ಸಾಗಾಟ ನಡೆಸುತ್ತಿದ್ದು, ಯಾವುದೇ ಪರವಾನಗಿ ಹೊಂದಿರಲಿಲ್ಲ. ವಿಚಾರಣೆ ವೇಳೆ ಆರೋಪಿಗಳು, ಶನಿವಾರಸಂತೆ ಕಡೆಗೆ ಜಾನುವಾರುಗಳನ್ನು ಕಡಿದು ಮಾಂಸ ಮಾಡುವವರಿಗೆ ಮಾರಾಟ ಮಾಡಲು ಸಾಗಾಟ ನಡೆಸುತ್ತಿರುವುದಾಗಿ ತಿಳಿಸಿದ್ದಾರೆ. ಜಾನುವಾರುಗಳ ಸಾಗಾಟ ನಡೆಸಿದ ಪಿಕಪ್‌ ವಾಹನ ಸಹಿತ ಮೂರು ಜಾನುವಾರುಗಳನ್ನು ವಶಕ್ಕೆ ಪಡೆದ ಪೊಲೀಸರು ಕೃತ್ಯದಲ್ಲಿ ಭಾಗಿಯಾದ ಇಬ್ಬರು ಆರೋಪಿಗಳಾದ ಗಿರೀಶ್‌, ಸತೀಶ್‌ ಎಂಬವರನ್ನು…

Read More

ಮಂಗಳೂರು: ನಗರದ ಹೊರವಲಯದ ಫರಂಗಿಪೇಟೆ ನಿವಾಸಿ ಪಿಯುಸಿ ವಿದ್ಯಾರ್ಥಿ ದಿಗಂತ್‌ ನಾಪತ್ತೆಯಾಗಿ 10 ದಿನಗಳಾದರೂ ಆತನ ಇರುವಿಕೆಯ ಬಗ್ಗೆ ಯಾವ ಸುಳಿವೂ ಸಿಕ್ಕಿಲ್ಲ.ಆದ್ದರಿಂದ ದಿಗಂತ್‌ ಪೋಷಕರು ಸದ್ಯ ಹೈಕೋರ್ಟ್‌ ಮೊರೆ ಹೋಗಿದ್ದಾರೆ. ಪುತ್ರನನ್ನು ಶೀಘ್ರವಾಗಿ ಪತ್ತೆಹಚ್ಚಲು ಪೊಲೀಸರಿಗೆ ನಿರ್ದೇಶಿಸುವಂತೆ ಕೋರಿ. ದಿಗಂತ್‌ ತಂದೆ ಪದ್ಮನಾಭ್‌ ಅವರು ಹೈಕೋರ್ಟ್‌ಗೆ ಹೇಬಿಯಸ್‌ ಕಾರ್ಪಸ್‌ ಅರ್ಜಿ ಸಲ್ಲಿಸಿದ್ದರು. ಜಸ್ಟೀಸ್‌ ವಿ.ಕಾಮೇಶ್ವರ್‌ ರಾವ್‌, ಜಸ್ಟೀಸ್‌ ಟಿ.ಎಂ.ನಡಾಫ್‌ರಿಂದ ಹೈಕೋರ್ಟ್‌ ದ್ವಿಸದಸ್ಯ ವಿಭಾಗೀಯ ಪೀಠದಲ್ಲಿ ಅರ್ಜಿಯ ವಿಚಾರಣೆ ನಡೆದಿದೆ. ಮಾರ್ಚ್‌ 12ರೊಳಗೆ ತನಿಖಾ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಬೇಕೆಂದು ದ್ವಿಸದಸ್ಯ ವಿಭಾಗೀಯ ಪೀಠ ಪೊಲೀಸರಿಗೆ ಆದೇಶಿಸಿ ಮಾರ್ಚ್‌ 13ಕ್ಕೆ ವಿಚಾರಣೆ ಮುಂದೂಡಿದೆ.ಬಂಟ್ವಾಳದ ಫರಂಗಿಪೇಟೆ ಕಿದೆಬಿಟ್ಟು ನಿವಾಸಿ ದಿಗಂತ್‌, ಫೆ.25ರ ಸಂಜೆ ಫರಂಗಿಪೇಟೆ ಅಂಜನೇಯ ವ್ಯಾಯಾಮ ಶಾಲೆಗೆ ಹೋಗಿ ಬರುವುದಾಗಿ ಹೇಳಿ ಹೋಗಿದ್ದವನು, ದೇವಸ್ಥಾನಕ್ಕೂ ಹೋಗದೆ ಮನೆಗೂ ಬಾರದೆ ನಾಪತ್ತೆಯಾಗಿದ್ದ. ಆತ ಕಾಣದಿದ್ದಾಗ ಹುಡುಕಾಟ ನಡೆಸಿದಾಗ ಫರಂಗಿಪೇಟೆಯ ರೈಲ್ವೆ ಹಳಿಯಲ್ಲಿ ದಿಗಂತ್‌ ಚಪ್ಪಲಿ ಹಾಗೂ ಮೊಬೈಲ್‌ ಪತ್ತೆಯಾಗಿತ್ತು. ಒಂದು ಚಪ್ಪಲಿಯಲ್ಲಿ ರಕ್ತದ ಕಲೆ…

Read More

ಉಡುಪಿ: ನೆಲಮಂಗಲ ಪೊಲೀಸರಿಗೆ ದರೋಡೆ ಪ್ರಕರಣವೊಂದರಲ್ಲಿ ಬೇಕಾಗಿದ್ದ ಕುಖ್ಯಾತ ಗರುಡ ಗ್ಯಾಂಗ್‌ ಸದಸ್ಯ ಇಸಾಕ್‌ ಬಂಧಿಸಲು ನಡೆದಿದ್ದ ಪೊಲೀಸರ ಚೇಸಿಂಗ್ ಬಳಿಕ ಆರೋಪಿ ಹಲವು ವಾಹನಗಳಿಗೆ ಢಿಕ್ಕಿ ಹೊಡೆದು ತನ್ನ ಕಾರನ್ನು ಬಿಟ್ಟು ಪರಾರಿಯಾಗಿದ್ದು, ಕಾರಿನಲ್ಲಿದ್ದ ಆತನ ಗೆಳತಿ ಸುಜೈನ್‌ (25) ಳನ್ನು ಬಂಧಿಸಿ ಬುಧವಾರ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಆಕೆಯನ್ನು ಪೊಲೀಸರಿಗೆ ಒಪ್ಪಿಸಲಾಗಿದೆ. ಬಂಧಿತೆ ಇಸಾಕ್ ನ ಗೆಳತಿ ಸುಜೈನ್ ಎಂದು ಗುರುತಿಸಲಾಗಿದೆ. ಕೇರಳ ಮೂಲಜ ಸುಜೈನ್ ಹಲವು ವರ್ಷಗಳಿಂದ ಉಡುಪಿ ಯಲ್ಲೇ ನೆಲೆಸಿದ್ದಳು. ಆಕೆಯ ಖರ್ಚು ವೆಚ್ಚಗಳನ್ನು ಆರೋಪಿಯೇ ನೋಡಿಕೊಳ್ಳುತ್ತಿದ್ದ ಎನ್ನ ಲಾಗಿದೆ. ನೆಲಮಂಗಲ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ದಾಖಲಾದ ದರೋಡೆ ಪ್ರಕರಣದ 2 ನೇ ಆರೋಪಿ ಇಸಾಕ್‌ ಪತ್ತೆಗಾಗಿ ಬೆಂಗಳೂರಿನ ಮಾದನಾಯಕನ ಹಳ್ಳಿ ಪೊಲೀಸ್‌ ಠಾಣೆಯ ಉಪನಿರೀಕ್ಷಕ ಸೋಮಶೇಖರ್‌ ಅವರು ಮಣಿ ಪಾಲಕ್ಕೆ ಆಗಮಿಸಿದ್ದರು. ಜಿಲ್ಲಾಧಿಕಾರಿ ಕಚೇರಿ ರಸ್ತೆ ಬಳಿಯ ಅಪಾರ್ಟ್‌ ಮೆಂಟ್‌ ನಲ್ಲಿ ವಾಸವಿರುವ ಗೆಳತಿ ಸುಜೈನ್‌ ಮನೆಗೆ ಆರೋಪಿ ಬಂದಿರುವ ಬಗ್ಗೆ ಸುಳಿವು ಸಿಕ್ಕಿತ್ತು. ಸೋಮಶೇಖರ್‌…

Read More

ಮಂಗಳೂರು: ಆಟೊರಿಕ್ಷಾವೊಂದರಲ್ಲಿ ನಿಷೇಧಿತ ಮಾದಕ ವಸ್ತುವಾದ ಎಂಡಿಎಂಎ ಸಾಗಾಟ ಮತ್ತು ಮಾರಾಟ ಮಾಡುತ್ತಿದ್ದ ರಿಕ್ಷಾ ಚಾಲಕನನ್ನು ಪತ್ತೆ ಹಚ್ಚಿ 75 ಗ್ರಾಂ ಎಂಡಿಎಂಎ ವಶಪಡಿಸಿಕೊಳ್ಳುವಲ್ಲಿ ಮಂಗಳೂರು ಸಿಸಿಬಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬೆಂಗಳೂರಿನಿಂದ ನಿಷೇಧಿತ ಮಾದಕ ವಸ್ತು ಎಂಡಿಎಂಎ ಪಾರ್ಸೆಲ್ ಮೂಲಕ ನಗರಕ್ಕೆ ತಂದು ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಆಟೊರಿಕ್ಷಾದಲ್ಲಿ ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಪೊಲೀಸರು ಮಂಗಳವಾರ ಬಂದರ್ ಠಾಣಾ ವ್ಯಾಪ್ತಿಯಲ್ಲಿ ಆರೋಪಿ ಕಸಬಾ ಬೆಂಗರೆಯ ಮುಹಮ್ಮದ್ ಅಬ್ದುಲ್ ಜಲೀಲ್ (32) ಎಂಬಾತನನ್ನು ಬಂಧಿಸಿ 3,75,000 ರೂ. ಮೌಲ್ಯದ 75 ಗ್ರಾಂ ನಿಷೇಧಿತ ಮಾದಕ ವಸ್ತು ಎಂಡಿಎಂಎ, ಮೊಬೈಲ್ ಫೋನ್, ಆಟೊ ರಿಕ್ಷಾವನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ. ಇವುಗಳ ಸೊತ್ತಿನ ಒಟ್ಟು ಮೌಲ್ಯ 5 ಲಕ್ಷ ರೂ. ಆಗಬಹುದು ಎಂದು ಅಂದಾಜಿಸಲಾಗಿದೆ. ಈ ಬಗ್ಗೆ ಬಂದರ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಿಸಿಬಿ ಘಟಕದ ಎಸಿಪಿ ಮನೋಜ್ ಕುಮಾರ್ ನಾಯ್ಕ್‌ರ ಮಾರ್ಗದರ್ಶನದಲ್ಲಿ ಪೊಲೀಸ್ ನಿರೀಕ್ಷಕ ರಫೀಕ್ ಕೆ.ಎಂ.ನೇತೃತ್ವದಲ್ಲಿ ಎಸ್ಸೈ ಸುದೀಪ್…

Read More

ಇದೀಗ ಸಾಮಾಜಿಕ ಜಾಲತಾಣದಲ್ಲಿ ಭಾರಿ ವೈರಲ್ ಆಗುತ್ತಿರೋದು, ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಕೇಸ್. ಕನ್ನಡ ಯೂಟ್ಯೂಬ್ ಜಗತ್ತಿನಲ್ಲೊಂದು ಸಂಚಲನ ಸೃಷ್ಟಿಯಾಗಿದೆ. ಈವರೆಗೆ ಇಂಗ್ಲೀಷ್ , ಹಿಂದಿ ಯೂಟ್ಯೂಬ್ ಚಾನಲ್ ಗಳಲ್ಲಿ ಮಾತ್ರ ಕಾಣಲು ಸಿಗುತ್ತಿದ್ದ ಕೋಟಿಗಟ್ಟಲೆ ವೀಕ್ಷಣೆ, ಲಕ್ಷಗಟ್ಟಲೆ ಲೈಕ್ಸ್, ಸಾವಿರ ಸಾವಿರ ಕಮೆಂಟುಗಳು ಕನ್ನಡ ಯೂಟ್ಯೂಬ್ ಚಾನಲ್ ಒಂದರ ವಿಡಿಯೋಗೆ ಸಿಕ್ಕಿವೆ ಹೌದು ದಕ್ಷಿಣ ಕನ್ನಡ ಸೌಜನ್ಯ ಪ್ರಕರಣದ ಕುರಿತು ವಿಡಿಯೋ ಮಾಡಿದ್ದ ಸಮೀರ್ ಎಂಡಿ ಎಂಬವರಿಗೆ ಪೊಲೀಸರು ನೋಟಿಸ್ ನೀಡಿದ್ದಾರೆ. ಸಮೀರ್ ನನ್ನು ಬಂಧಿಸಲು ಪೊಲೀಸರು ಬಳ್ಳಾರಿಗೆ ತೆರಳಿದ್ದಾಗ ಈ ವೇಳೆ ಸಮೀರ್ ನಾನು ವಿಚಾರಣೆಗೆ ಹಾಜರಾಗುತ್ತೇನೆ ಎಂದು ಹೇಳಿದ ಮೇಲೆ ಆತನಿಗೆ ನೋಟಿಸ್ ನೀಡಿ ಪೊಲೀಸರು ಹಿಂತಿರುಗಿದ್ದಾರೆ ಎಂದು ತಿಳಿದುಬಂದಿದೆ. ದಕ್ಷಿಣ ಕನ್ನಡ ಸೌಜನ್ಯ ಪ್ರಕರಣದ ಕುರಿತು ವಿಡಿಯೋ ಮಾಡಿದ್ದ ಸಮೀರ್ ಎಂಡಿ, ನನಗೆ ಜೀವ ಬೆದರಿಕೆ ಬರುತ್ತಿರುವ ಹಿನ್ನೆಲೆ ಸೌಜನ್ಯ ಪ್ರಕರಣದ ಮತ್ತೋರ್ವ ಹೋರಾಟಗಾರ ಗಿರಿಶ್ ಮಟ್ಟನವರ್ ಅವರನ್ನು ಮನೆಗೆ ಬರುವಂತೆ ಹೇಳುವಂತೆ…

Read More

ಮಂಗಳೂರು: ಮಂಗಳೂರಿನ ಪೆಟ್ರೋಲ್ ಪಂಪ್ ನಿಂದ ಸಾಲದ ರೂಪದಲ್ಲಿ ಪೆಟ್ರೋಲ್ ಪಡೆದು ಲಕ್ಷಾಂತರ ರೂಪಾಯಿ ವಂಚಿಸಿದ ಬಸ್ ಮಾಲಕಿಯೊಬ್ಬರಿಗೆ ಚೆಕ್ ಅಮಾನ್ಯ ಪ್ರಕರಣದಲ್ಲಿ 5ನೇ ಜೆಎಂಎಫ್.ಸಿ ನ್ಯಾಯಾಲಯ ಜೈಲು ಶಿಕ್ಷೆ ಪ್ರಕಟಿಸಿದೆ. ಮಂಗಳೂರಿನ ಶೇಡಿಗುಡ್ಡೆ ಪಿವಿಎಸ್ ವೃತ್ತದಲ್ಲಿ ಸಿಟಿ ಪ್ಲಾಜಾ ಕಟ್ಟಡದಲ್ಲಿ ಆರೆಂಜ್ ಟೂರ್ಸ್ ಆಂಡ್ ಟ್ರಾವೆಲ್ಸ್ ಮತ್ತು ಕೆನರಾ ಬಸ್ ಎಂಬ ಹೆಸರಿನಲ್ಲಿ ಉದ್ಯಮ ನಡೆಸುತ್ತಿದ್ದ ಲೋಕೇಶ್ ಶೆಟ್ಟಿ ಅವರ ಪತ್ನಿ ಸುಕನ್ಯಾ ಶೆಟ್ಟಿ ಶಿಕ್ಷೆಗೊಳಗಾದ ಬಸ್ ಮಾಲಕಿಯಾಗಿದ್ದಾರೆ. ಅವರು ಮಂಗಳೂರಿನ ಪ್ರತಿಷ್ಠಿತ ಪೆಟ್ರೋಲ್ ಪಂಪ್ ನಿಂದ ಇಂಧನವನ್ನು ಸಾಲದ ರೂಪದಲ್ಲಿ ಪಡೆದುಕೊಳ್ಳುತ್ತಿದ್ದರು. 2020ರ ಫೆಬ್ರವರಿ ತಿಂಗಳಿನಲ್ಲಿ ಸಾಲ ಪಡೆದುಕೊಂಡಿದ್ದ ಬಿಲ್ ಪಾವತಿಸದೆ ಚೆಕ್ ನೀಡಿ ಅಮಾನ್ಯಗೊಳಿಸಿ ಪೆಟ್ರೋಲ್ ಪಂಪ್ ಮಾಲಕರನ್ನು ವಂಚಿಸಿದ್ದರು. ಸುಕನ್ಯಾ ಶೆಟ್ಟಿ ಅವರು ನೀಡಿದ ಎರಡು ಚೆಕ್ ಅಮಾನ್ಯಗೊಂಡಿದ್ದ ಹಿನ್ನೆಲೆಯಲ್ಲಿ ಪೆಟ್ರೋಲ್ ಬಂಕ್ ಮಾಲಕರು ಮಂಗಳೂರಿನ 5ನೇ ಜೆಎಂಎಫ್.ಸಿ ನ್ಯಾಯಾಲಯದಲ್ಲಿ ದೂರು ದಾಖಲಿಸಿದ್ದರು.ಈ ದೂರನ್ನು ವಿಚಾರಣೆಗೆ ಕೈಗೆತ್ತಿಕೊಂಡ ಜೆಎಂಎಫ್ ಸಿ ನ್ಯಾಯಾಲಯದ ಗೌರವಾನ್ವಿತ ನ್ಯಾಯಾಧೀಶರಾದ ಚಿರಾಗ್…

Read More

ಮಂಗಳೂರು : ನಗರದಲ್ಲಿ 4 ಪ್ರಕರಣಗಳಲ್ಲಿ ಭಾಗಿಯಾಗಿ ನ್ಯಾಯಾಲಯಕ್ಕೆ ವಿಚಾರಣೆ ಸಮಯ ಹಾಜರಾಗದೇ ಸುಮಾರು ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ಆರೋಪಿ ಮುನೀರ್ @ ಅಣ್ಣ ಮುನೀರ್(48), ಕಸಬಾ ಬೆಂಗರೆ, ಮಂಗಳೂರು. ಎಂಬಾತನನ್ನು ಮಂಗಳೂರು ಸಿಸಿಬಿ ಪೊಲೀಸರು ವಶಕ್ಕೆ ಪಡೆದುಕೊಂಡು ಮುಂದಿನ ಕ್ರಮಕ್ಕಾಗಿ ಕಾವೂರು ಪೊಲೀಸ್ ಠಾಣೆಗೆ ಹಸ್ತಾಂತರಿಸಿರುತ್ತಾರೆ. ಈತನು ಈ ಹಿಂದೆ ಮಂಗಳೂರು ನಗರದ ಕಾವೂರು, ಮಂಗಳೂರು ಗ್ರಾಮಾಂತರ, ಪಣಂಬೂರು ಹಾಗೂ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಕಳವು, ಕೊಲೆಗೆ ಯತ್ನ, ದರೋಡೆಗೆ ಯತ್ನ ವಂಚನೆ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಈತನು ನ್ಯಾಯಾಲಯದಿಂದ ಜಾಮೀನಿನಲ್ಲಿ ಬಿಡುಗಡೆಗೊಂಡ ಬಳಿಕ ನ್ಯಾಯಾಲಯಕ್ಕೆ ವಿಚಾರಣೆ ಸಮಯ ಹಾಜರಾಗದೇ ತಲೆಮರೆಸಿಕೊಂಡಿದ್ದನು.

Read More