Author: main-admin

ಬೆಂಗಳೂರು: ರಾಜಸ್ಥಾನದಿಂದ ಬೆಂಗಳೂರಿಗೆ ಬಂದಿದ್ದ ಐಷಾರಾಮಿ ಕಾರುಗಳನ್ನು ಕಳವು ಮಾಡುತ್ತಿದ್ದ ಮೂವರು ಚಾಲಾಕಿ ಕಾರುಗಳ್ಳರನ್ನು ಬೆಂಗಳೂರಿನ ಅನ್ನಪೂರ್ಣೇಶ್ವರಿ ನಗರ ಪೊಲೀಸರು ಬಂಧಿಸಿದ್ದಾರೆ. ರಾಜಸ್ಥಾನದಿಂದ ಬೆಂಗಳೂರಿಗೆ ಬಂದು ಕಳ್ಳರು ಐಷಾರಾಮಿ ಕಾರುಗಳನ್ನೇ ಟಾರ್ಗೆಟ್‌ ಮಾಡುತ್ತಿದ್ದರು. ಚಾಲಾಕಿತನದಿಂದ ಸಾಫ್ಟ್‌ವೇರ್‌ ಮೂಲಕ ಹ್ಯಾಕ್‌ ಮಾಡಿ ಕಾರುಗಳ ಡೋರ್‌ ಓಪನ್‌ ಮಾಡುತ್ತಿದ್ದರು. ಇದರಿಂದ ಸುಲಭವಾಗಿ ಕಾರು ಕದ್ದು ಪರಾರಿಯಾಗುತ್ತಿದ್ದರು. ಸದ್ಯ ಮೂವರು ಆರೋಪಿಗಳು ಸಿಕ್ಕಿಬಿದ್ದಿದ್ದು ಪೊಲೀಸರ ಅತಿಥಿಯಾಗಿದ್ದಾರೆ.ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದಾಗ, ಬೆಂಗಳೂರು ಸೇರಿದಂತೆ ಹಲವು ಕಡೆಗಳಲ್ಲಿ ಕಾರು ಕಳವು ಮಾಡಿರುವುದು ಬೆಳಕಿಗೆ ಬಂದಿದೆ. ಪ್ರಕರಣದ ತನಿಖೆ ಮುಂದುವರಿದಿದೆ. ಮತ್ತಷ್ಟು ಮಾಹಿತಿ ಹೊರಬೀಳಲಿದೆ.

Read More

ಕಡಬ : ಚಲಿಸುತ್ತಿದ್ದ ಸ್ಕೂಟರ್‌ಗೆ ಮರ ಬಿದ್ದ ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಶನಿವಾರ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ಪಂಜದ ಪುಳಿಕುಕ್ಕು ಎಂಬಲ್ಲಿ ನಡೆದಿದೆ. ಕಡಬದಿಂದ ಪಂಜ ಕಡೆಗೆ ತೆರಳುತ್ತಿದ್ದ ಸ್ಕೂಟಿ ಮೇಲೆ ಪುಳಿಕುಕ್ಕು ಸಮೀಪದ ತಿರುವಿನಲ್ಲಿ ಬೃಹತ್ ಗಾತ್ರದ ಮರ ಬಿದ್ದಿದೆ. ಪರಿಣಾಮ ಸ್ಕೂಟರ್ ಸವಾರ ಸ್ಥಳದಲ್ಲೇ ಪ್ರಾಣ ಕಳಕೊಂಡಿದ್ದಾರೆ. ಸುಬ್ಬಣ ಗೌಡ ಎಂಬವರ ಮಗ ಸೀತಾರಾಮ (58) ಮೃತಪಟ್ಟ ದುರ್ದೈವಿಯಾಗಿದ್ದಾರೆ. ಕೋಡಿಂಬಾಳ ಸಮೀಪದ ಪುಳಿಕುಕ್ಕುವಿನಲ್ಲಿ ಈ ದುರ್ಘಟನೆ ಸಂಭಸಿದ್ದು ಸೀತಾರಾಮ ಚಲಿಸುತಿದ್ದ ಸ್ಕ್ಯೂಟಿ ಗೆ ಬೃಹತ್ ಧೂಪದ ಮರ ಏಕಾಏಕಿ ಉರುಳಿದ್ದು, ಕ್ಷಣ ಮಾತ್ರದಲ್ಲಿ ಸೀತಾರಾಮರ ಪ್ರಾಣ ಪಕ್ಷಿ ಹಾರಿ ಹೋಗಿದೆ. ಅರಣ್ಯ ಇಲಾಖೆಯ ಅಸಡ್ಡೆ ವಿರುದ್ಧ ಸಾರ್ವಜನಿರು ಆಕ್ರೋಶ ವ್ಯಕ್ತಪಡಿಸಿದ್ದು ಈ ಮರದ ಬಗ್ಗೆ ಅನೇಕ ಸಲ ಗಮನಕ್ಕೆ ತಂದರೂ ಕಾರ್ಯ ಪ್ರವರ್ತರಾಗದ ಇಲಾಖೆ ಮೇಲೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದು ಇದೀಗ ಅಮಾಯಕರೊಬ್ಬರು ಪ್ರಾಣ ಕಳಕೊಳ್ಳಬೇಕಾತ್ತು ಎಂದಿದ್ದಾರೆ. ಸೀತಾರಾಮರು ಎಡಮಂಗಲ ಸೊಸೈಟಿಯ ಪಿಗ್ಮಿ ಕಲೆಕ್ಟರ್…

Read More

ಅಮರಾವತಿ: ಮೂರು ವರ್ಷದ ಬಾಲಕಿಯ ಮೇಲೆ ಆಕೆಯ ಸಂಬಂಧಿಯೇ ಅತ್ಯಾಚಾರವೆಸಗಿ ಹತ್ಯೆಗೈದ ಘಟನೆ ಆಂಧ್ರಪ್ರದೇಶದ (Andhra Pradesh) ತಿರುಪತಿ (Tirupati) ಜಿಲ್ಲೆಯಲ್ಲಿ ನಡೆದಿದೆ. ಬಾಲಕಿ ವಾಸವಿದ್ದ ಕಾಲೋನಿಯಲ್ಲೇ ವಾಸವಿದ್ದ 22ರ ಹರೆಯದ ಆರೋಪಿ ಶುಕ್ರವಾರ ಮಗುವಿಗೆ ಚಾಕೊಲೇಟ್ ಕೊಡಿಸಿ ಗದ್ದೆಗೆ ಕರೆದೊಯ್ದಿದ್ದ. ಬಳಿಕ ಆಕೆಯನ್ನು ಕೊಂದು ಶವವನ್ನು ಹೊಲದಲ್ಲಿ ಹೂತು ಹಾಕಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಬಾಲಕಿ ಮನೆಗೆ ಬಾರದೇ ಇದ್ದಾಗ ಆಕೆಯ ಪೋಷಕರು ಆಕೆಗಾಗಿ ಹುಡುಕಾಟ ಆರಂಭಿಸಿದ್ದು, ಕೊನೆಗೆ ಪೊಲೀಸರಿಗೆ ದೂರು ನೀಡಿದ್ದಾರೆ. ವಿಚಾರಣೆ ವೇಳೆ ಆರೋಪಿ ತನ್ನ ಅಪರಾಧವನ್ನು ಒಪ್ಪಿಕೊಂಡಿದ್ದು, ಆತನನ್ನು ಬಂಧಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಮೃತದೇಹವನ್ನು ಹೊಲದಿದಂದ ಹೊರತೆಗೆದು ಮರಣೋತ್ತರ ಪರೀಕ್ಷೆಗಾಗಿ ಪುತ್ತೂರು ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಆರೋಪಿಗಳಿಗೆ ಕಠಿಣ ಶಿಕ್ಷೆಯಾಗಬೇಕೆಂದು ನಗರಿ ಶಾಸಕ ಗಾಲಿ ಭಾನು ಪ್ರಕಾಶ್ ಆಗ್ರಹಿಸಿದ್ದಾರೆ.

Read More

ಶಾಲೆಗೆ ಹೋಗುವ ಮಕ್ಕಳ ಕೈಗೆ ಮೊಬೈಲ್ ಕೊಡಬೇಡಿ ಎಂದು ಹತ್ತು ಹಲವು ಸಲ ಬೊಬ್ಬೆ ಹಾಕಿದರೂ ಏನೂ ಪ್ರಯೋಜನ ಆಗುತ್ತಿಲ್ಲ. ಅವರು ಮೊಬೈಲ್ ನಲ್ಲಿ ಏನು ಚಟುವಟಿಕೆ ಮಾಡುತ್ತಿದ್ದಾರೆ ಅನ್ನುವುದೇ ಗೊತ್ತಾಗುವುದಿಲ್ಲ. ಇದಕ್ಕೆ ಸಾಕ್ಷಿ ಎಂಬತೆ ಸುಳ್ಯದ ಕಾಲೇಜೊಂದರ ಪ್ರಥಮ ಪಿಯುಸಿ ವಿದ್ಯಾರ್ಥಿಯೊಬ್ಬ ಎಲಿಮಲೆಯ ಹತ್ತನೇ ತರಗತಿ ಅಪ್ರಾಪ್ತ ಹಿಂದೂ ಹುಡುಗಿ ಜೊತೆ ಮೊಬೈಲ್ ನಲ್ಲಿ ಚಾಟ್ ಮಾಡಿ ಸಿಕ್ಕಿಬಿದ್ದಿದ್ದಾನೆ. ಈ ಚಾಟ್ ಕೆಲವರ ಗಮನಕ್ಕೆ ಬಂದಿದೆ. ಇದರಿಂದ ಪಿತ್ತ ನೆತ್ತಿಗೇರಿಸಿಕೊಂಡ ಕೆಲವು ಯುವಕರು ಆತನನ್ನು ನಿನ್ನೆ ರಾತ್ರಿ ಕರೆದು ವಿಚಾರಿಸಿದ್ದಾರೆ. ಆತ ನಾನವನಲ್ಲ ಎಂದು ಹೇಳಿ ಎಸ್ಕೇಪ್ ಆಗಲು ಪ್ರಯತ್ನಿಸಿದ್ದಾನೆ. ಈ ವೇಳೆ ಆತನಿಗೆ ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಪೆಟ್ಟು ತಿಂದ ಯುವಕ ಇದೀಗ ಸುಳ್ಯದ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾನೆ, ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.

Read More

ಕಲಬುರಗಿ: ಮಹಿಳೆಯೊಬ್ಬಳನ್ನು ದುಷ್ಕರ್ಮಿಗಳು ಕೊಲೆ ಮಾಡಿ ಬಳಿಕ  ಪೆಟ್ರೋಲ್ ಸುರಿದು ಸುಟ್ಟು ಹಾಕಿರುವ ಘಟನೆ ಕಲಬುರಗಿ ತಾಲೂಕಿನ ಇಟಗಾ ಗ್ರಾಮದ ಬಳಿ ನಡೆದಿದೆ. ಕಲಬುರಗಿ ನಗರದ ಸಂಗಮೇಶ್ವರ ಕಾಲೋನಿ ನಿವಾಸಿ ಜ್ಯೋತಿ (29) ಹತ್ಯೆಯಾದ ಮಹಿಳೆ. ಕಳೆದ 10 ವರ್ಷದ ಹಿಂದೆ ಮದುವೆ ಆಗಿದ್ದ ಈಕೆ 5 ವರ್ಷದಿಂದ ಗಂಡನ ಮನೆ ಬಿಟ್ಟು ತವರು ಮನೆಯಲ್ಲಿ ವಾಸಿಸುತ್ತಿದ್ದಳು ಎನ್ನಲಾಗಿದೆ. ಗುರುವಾರ ಬೆಳಗ್ಗೆ ಮನೆಯಿಂದ ಹೊರ ಹೋಗಿದ್ದ ಜ್ಯೋತಿ‌, ಮಧ್ಯಾಹ್ನ ಸುಟ್ಟ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಪೊಲೀಸರು ಕೌಟುಂಬಿಕ ಕಲಹದ ಹಿನ್ನಲೆ ಕೊಲೆಯಾಗಿರುವ ಶಂಕೆ ವ್ಯಕ್ತಪಡಿಸಿದ್ದಾರೆ. ಈ ಕುರಿತು ಫರಹತಾಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ಮುಂದುವರೆದಿದೆ.

Read More

ಮಣಿಪಾಲ: ಐ.ಟಿ. ಅಧಿಕಾರಿಗಳು ದಾಳಿ ನಡೆಸುತ್ತಾರೆ ಎಂದು ನಂಬಿಸಿ ಮನೆ ಯಜಮಾನಿಯ 7.50 ಲಕ್ಷ ರೂ. ನಗದು ಹಾಗೂ 3 ಲಕ್ಷ ಬೆಲೆಬಾಳುವ ಡೈಮಂಡ್ ಸರವನ್ನು ಕೆಲಸದಾಕೆ ತೆಗೆದುಕೊಂಡು ಹೋಗಿ ಮೋಸ ಮಾಡಿರುವ ಘಟನೆ ಮಣಿಪಾಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಶಿವಳ್ಳಿ ಗ್ರಾಮದ ನಿವಾಸಿ ಪೆರಂಪಳ್ಳಿ ರಸ್ತೆಯ ಜ್ಯೂಲಿಯಟ್ ಅವರು 4 ತಿಂಗಳಿನಿಂದ ಪೆರಂಪಳ್ಳಿಯ ಸುನೀತಾ ಅವರನ್ನು ಮನೆ ಕೆಲಸಕ್ಕೆ ಸೇರಿಸಿಕೊಂಡಿದ್ದರು. ಕೆಲಸದಾಕೆ ಸುನಿತಾ ಬಳಿ ಮನೆಯ ಯಜಮಾನಿ ತನ್ನ ಮತ್ತು ಗಂಡನ ನಡುವೆ ಇದ್ದ ಮನಸ್ತಾಪದ ಬಗ್ಗೆ ಹೇಳಿಕೊಂಡಿದ್ದರು. ಅದಕ್ಕೆ ಸುನೀತಾ ಗಂಡನಿಗೆ ವಿಚ್ಛೇದನ ನೀಡುವಂತೆ ಜೂಲಿಯೆಟ್ ಅವರಿಗೆ ಸಲಹೆ ನೀಡಿದ್ದರು. ಬೇಸರಗೊಂಡ ಜ್ಯೂಲಿಯೆಟ್ ಮನೆ ಬಿಟ್ಟು ಹೋಗಲು ತೀರ್ಮಾನಿಸಿದ್ದರು. ತಾಯಿಯನ್ನು ಮನೆಗೆ ಬರಲು ಹೇಳಿ ಅ. 10ರಂದು ತಾಯಿಗೆ ಬಟ್ಟೆಬರೆ ಹಾಗೂ ಸ್ವಲ್ಪ ಚಿನ್ನ ಹಾಗೂ ಗಂಡನ ಮನೆಯ ಲಾಕರ್‌ನಲ್ಲಿಟ್ಟಿದ್ದ 10 ಲಕ್ಷ ರೂಪಾಯಿಯಲ್ಲಿ 1 ಲಕ್ಷ ರೂ. ಹಣವನ್ನು ನೀಡಿದ್ದರು.ಅ. 29ರಂದು ಬೆಳಗ್ಗೆ ಜ್ಯೂಲಿಯೆಟ್ ಮನೆಯಲ್ಲಿ ಇದ್ದ…

Read More

ಮಂಗಳೂರು: ಮಾದಕ ವಸ್ತು ಹೈಡ್ರೋವೀಡ್ ಗಾಂಜಾ ಸಹಿತ ಆರೋಪಿಯೋರ್ವನನ್ನು ಮಂಗಳೂರು ಸಿಸಿಬಿ ಪೊಲೀಸರು ಶುಕ್ರವಾರ ನಡೆಸಿದ ಕಾರ್ಯಾಚರಣೆಯಲ್ಲಿ ವಶಕ್ಕೆ ಪಡೆದುಕೊಂಡಿದ್ದಾರೆ. ಪುತ್ತೂರು ಹಾರಾಡಿಯವನಾಗಿದ್ದು, ಪ್ರಸ್ತುತ ತೊಕ್ಕೊಟ್ಟು ಚೊಂಬುಗುಡ್ಡೆ ಮಸೀದಿ ಹತ್ತಿರದ ನಿವಾಸಿ ಎಚ್. ಮೊಹಮ್ಮದ್ ಹಫೀಜ್ (23) ಬಂಧಿತ ಆರೋಪಿ. ಬಂಧಿತನಿಂದ 30 ಲಕ್ಷ ರೂ. ಮೌಲ್ಯದ ಹೈಡ್ರೋವೀಡ್ ಗಾಂಜಾ, 2.5 ಕೆಜಿ ಗಾಂಜಾ ಹಾಗೂ ಇತರ ಸೊತ್ತುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಖಚಿತ ಮಾಹಿತಿ ಮೇರೆಗೆ ಮಂಗಳೂರು ಸಿಸಿಬಿ ಪೊಲೀಸರು ನಗರದ ಕುದ್ರೋಳಿ ಪರಿಸರದಲ್ಲಿ ಹೈಡ್ರೋವೀಡ್ ಗಾಂಜಾ ಮತ್ತು ಗಾಂಜಾವನ್ನು ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿದ್ದ ಆರೋಪಿಗಳನ್ನು ಬಂಧಿಸಿದ್ದಾರೆ. ಆರೋಪಿಯ ವಶದಿಂದ 30 ಲಕ್ಷ ರೂಪಾಯಿ ಮೌಲ್ಯದ 300 ಗ್ರಾಂ ಹೈಡ್ರೋವೀಡ್ ಗಾಂಜಾ ಹಾಗೂ 75,000 ರೂ.ಮೌಲ್ಯದ ೨.೫ ಕೆಜಿ ಗಾಂಜಾ, ಮೊಬೈಲ್ ಫೋನ್, ಡಿಜಿಟಲ್ ತೂಕ ಮಾಪಕವನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿಯಿಂದ ಅಂದಾಜು 30,85,500 ರೂ. ಮೌಲ್ಯದ ಸೊತ್ತುಗಳನ್ನು ವಶಕ್ಕೆ ಪಡೆಯಲಾಗಿದೆ. ಮಂಗಳೂರು ಉತ್ತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಮಂಗಳೂರು: ಪಾತ್ರೆಯಲ್ಲಿದ್ದ ಬಿಸಿ ಟೀ ಮೈಮೇಲೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ 2 ವರ್ಷದ ಮಗು ಚಿಕಿತ್ಸೆ ಫಲಕಾರಿಯಾಗದೇ ಸಾವನಪ್ಪಿದ ಘಟನೆ ಮಂಗಳೂರಿನ ಆಸ್ಪತ್ರೆಯಲ್ಲಿ ನಡೆದಿದೆ.ಮೃತ ಮಗುವನ್ನು ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಹಿರೀಮನೆ ಗ್ರಾಮದ ರಾಜೇಶ್ ಹಾಗೂ ಅಶ್ವಿನಿ ದಂಪತಿ ಪುತ್ರ ಅಥರ್ವ (2) ಎಂದು ಗುರುತಿಸಲಾಗಿದೆ. ರಾಜೇಶ್ ಅವರ ನೆರೆಮನೆ ನಿವಾಸಿ ಕಳೆದ ವಾರ ಮೃತಪಟ್ಟಿದ್ದರು. ಅವರ ಅಂತಿಮ ದರ್ಶನ ಪಡೆಯಲು ಬಂದಿದ್ದ ಸಂಬಂಧಿಕರಿಗೆ ಅಶ್ವಿನಿ ಟೀ ಮಾಡಿಟ್ಟಿದ್ದರು. ಟೀ ಇರುವ ಪಾತ್ರೆಯನ್ನು ಮಗು ತನ್ನ ಮೈಮೇಲೆ ಬೀಳಿಸಿಕೊಂಡು ಗಾಯವಾಗಿತ್ತು. ಕಳೆದೊಂದು ವಾರದಿಂದ ಮಂಗಳೂರಿನ ಆಸ್ಪತ್ರೆಯಲ್ಲಿ ಮಗುವಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಚಿಕಿತ್ಸೆ ಫಲಕಾರಿಯಾಗದೇ ಇಂದು ಮುಂಜಾನೆ ಆಸ್ಪತ್ರೆಯಲ್ಲಿ ಮಗು ಸಾವನ್ನಪ್ಪಿದೆ. ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ

Read More

ಮಂಗಳೂರಿನ ಸಂತ ಆಗ್ನೆಸ್ ಸಮೂಹ ವಿದ್ಯಾಸಂಸ್ಥೆಗಳಿಂದ – ಸುವರ್ಣ ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ಶಿಕ್ಷಕ-ಶಿಕ್ಷಕೇತರ ಸಿಬ್ಬಂದಿಗಳು ಮತ್ತು ವಿದ್ಯಾರ್ಥಿಗಳು, ವಿದ್ಯಾರ್ಥಿನಿಯರುಗಳ ಕೂಡುವಿಕೆಯೊಂದಿಗೆ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.ಮೊದಲಿಗೆ ಸ್ವಾಗತ, ಧ್ವಜಾರೋಹಣ, ನಾಡಗೀತೆಯ ಪ್ರಾರ್ಥನೆ ಯೊಂದಿಗೆ ಪ್ರಾರಂಭವಾದ ಕಾರ್ಯಕ್ರಮದಲ್ಲಿ,ಉದಯವಾಗಲಿ ನಮ್ಮ ಚೆಲುವ ಕನ್ನಡ ನಾಡು, ಬಾರಿಸು ಕನ್ನಡ ಡಿಂಡಿಮವ, ಹಚ್ಚೇವು ಕನ್ನಡದ ದೀಪ, ವಿಶ್ವ ವಿನೂತನ ವಿದ್ಯಾಚೇತನ ಮತ್ತು ಹುಟ್ಟಿದರೆ ಕನ್ನಡ ನಾಡಲಿ ಹುಟ್ಟಬೇಕು …ಮುಂತಾದ ಹಾಡುಗಳನ್ನು ವಿದ್ಯಾರ್ಥಿಗಳು ಹಾಡಿದರು. ಈ ಸಂದರ್ಭದಲ್ಲಿ ಸೇರಿದ್ದ ಸರ್ವರ ಸಮ್ಮುಖದಲ್ಲಿ ಕನ್ನಡ ಭಾಷೆಯನ್ನು ಉಳಿಸುವ,ಬೆಳೆಸುವ ಮತ್ತು ಪಸರಿಸುವ ಸಂಕಲ್ಪವನ್ನು ಮಾಡಲಾಯಿತು. ಪ್ರೌಢಶಾಲಾ ಮುಖ್ಯೋಪಾಧ್ಯಾಯಿನಿ ಸಿಸ್ಟರ್ ಎಂ ಗ್ಲೋರಿಯಾ ಎ ಸಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಕನ್ನಡದ ಮಹತ್ವವನ್ನು ವಿವರಿಸಿದರು.ಕಾರ್ಯಕ್ರಮದಲ್ಲಿ ಸಂತ ಆಗ್ನೆಸ್ ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಸಿಸ್ಟರ್ ವೆನಿಸ್ಸಾ ಎ ಸಿ, ಪದವಿಪೂರ್ವ ಪ್ರಾಂಶುಪಾಲರಾದ ಸಿಸ್ಟರ್ ನೊರೀನ್, ಮಾಧ್ಯಮಿಕ ಶಾಲಾ ಮುಖ್ಯೋಪಾಧ್ಯಾಯಿನಿ ಸಿಸ್ಟರ್ ಜೋತ್ನ್ಸಾ, ವಿವಿಧ ವಿಭಾಗದ ಡೀನ್ ಗಳು, ಪ್ರಾಧ್ಯಾಪಕರು, ಶಿಕ್ಷಕರು, ಶಿಕ್ಷಕೇತರರು ಮತ್ತು…

Read More

ನವದೆಹಲಿ: ದೀಪಾವಳಿ ಲಕ್ಷ್ಮಿ ಪೂಜೆಯ ದಿನದಂದು ಭಾರತೀಯ ತೈಲ ಮಾರುಕಟ್ಟೆ ಕಂಪನಿಗಳು ವಾಣಿಜ್ಯ ಬಳಕೆಯ 19 ಕೆಜಿ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯನ್ನು 61 ರಿಂದ 62 ರೂ.ನಷ್ಟು ಹೆಚ್ಚಿಸಿವೆ. ಹೊಸ ದರಗಳು ನವೆಂಬರ್ 1, 2024 ರಿಂದ ಜಾರಿಗೆ ಬಂದಿವೆ. ಇಡೀ ತಿಂಗಳು ದರ ಮುಂದುವರಿಯುತ್ತದೆ. LPG ಬೆಲೆಗಳನ್ನು ಮಾಸಿಕ ಆಧಾರದ ಮೇಲೆ ಪರಿಷ್ಕರಿಸಲಾಗುತ್ತದೆ. ಗೃಹಬಳಕೆಯ 14.2 ಕೆಜಿ ಸಿಲಿಂಡರ್‌ಗಳ LPG ಬೆಲೆಗಳು ಆಗಸ್ಟ್ 2024 ರಿಂದ ಬದಲಾಗದೆ ಉಳಿದಿವೆ. ಇದರ ಹೊರತಾಗಿ, ಪ್ರಮುಖ OMC ತನ್ನ ಜೆಟ್ ಇಂಧನ ಬೆಲೆಗಳನ್ನು ಪರಿಷ್ಕರಿಸಿದೆ. ಅತಿ ದೊಡ್ಡ OMC ಇಂಡಿಯನ್ ಆಯಿಲ್ ಕಾರ್ಪೊರೇಷನ್ 19ಕೆಜಿ LPG ಸಿಲಿಂಡರ್ ದರವನ್ನು ಹೆಚ್ಚಿಸಿದೆ. ಮುಂಬೈ ಮತ್ತು ದೆಹಲಿಯಲ್ಲಿ ಹೆಚ್ಚಿನ ಏರಿಕೆ ಕಂಡುಬಂದಿದೆ. ಚೆನ್ನೈ ಮತ್ತು ಕೋಲ್ಕತ್ತಾದಲ್ಲೂ ದರ ಹೆಚ್ಚಾಗಿದೆ. ಕೋಲ್ಕತ್ತಾದಲ್ಲಿ ಎಲ್‌ಪಿಜಿ ದರ 19 ಕೆಜಿ ಸಿಲಿಂಡರ್‌ಗೆ 1,900 ರೂ. ದಾಟಿದೆ. ದೆಹಲಿಯಲ್ಲಿ ನವೆಂಬರ್ 1 ರಿಂದ 19 ಕೆಜಿ ಸಿಲಿಂಡರ್‌ಗೆ ಎಲ್‌ಪಿಜಿ ಬೆಲೆ 62…

Read More