ಉಪ್ಪಿನಂಗಡಿ : ಇಲ್ಲಿಗೆ ಸಮೀಪದ ಕಜೆಕ್ಕಾರ್ ಗುಡ್ದ ಎಂಬಲ್ಲಿ ಹಣವನ್ನು ಪಣವಾಗಿಟ್ಟುಕೊಂಡು ಕೋಳಿಅಂಕ ನಡೆಸುತ್ತಿದ್ದ ಪ್ರದೇಶಕ್ಕೆ ಉಪ್ಪಿನಂಗಡಿ ಪೊಲೀಸರು ದಾಳಿ ನಡೆಸಿ ಮೂರು ಕೋಳಿ, ಮೂರು ದ್ವಿಚಕ್ರವಾಹನಗಳ ಸಹಿತ ಓರ್ವನನ್ನು ಬಂಧಿಸಿದ ಘಟನೆ ವರದಿಯಾಗಿದೆ. ಬಂಧಿತನನ್ನು ಉರುವಾಲು ಗ್ರಾಮದ ನೋಣಯ್ಯ ಮುಗೇರ ಎಂದು ಗುರುತಿಸಲಾಗಿದ್ದು, ಘಟನಾ ಸ್ಥಳದಿಂದ ಪೊಲೀಸ್ ದಾಳಿಯ ವೇಳೆ ಪರಾರಿಯಾದವರನ್ನು ವಿಜಯ ಕಜೆಕ್ಕಾರ್, ರವಿ ಕಜೆಕ್ಕಾರ್, ಉದಯ ಪೆರಿಯಡ್ಕ ಮತ್ತು ಇತರ ಇಬ್ಬರು ಎಂದು ಗುರುತಿಸಲಾಗಿದೆ. ಬಂಧಿತನಿಂದ ಕೋಳಿ ಅಂಕಕ್ಕೆ ಬಳಸಲಾಗುತ್ತಿರುವ ಸಲಕರಣೆಗಳನ್ನು ಜೂಜಿಗೆ ಬಳಸಲಾಗಿದ್ದ ನಗದು ಹಣವನ್ನು ವಶಪಡಿಸಿಕೊಂಡಿದ್ದು, ಪೊಲೀಸ್ ಉಪನಿರೀಕ್ಷಕ ಸುರೇಶ್ ಸಿ.ಟಿ ನೀಡಿದ ದೂರಿನಂತೆ ಪ್ರಕರಣ ದಾಖಲಿಸಿ ತನಿಖೆ ನಡೆಸಲಾಗುತ್ತಿದೆ.
Author: main-admin
ಉಡುಪಿ: ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಅಕ್ರಮವಾಗಿ ಮರಳು, ಶಿಲೆಕಲ್ಲು ಸಾಗಾಟ ಮಾಡುತ್ತಿದ್ದ ಆರೋಪದಲ್ಲಿ ನಾಲ್ವರನ್ನು ಬಂಧಿಸಿ, ಮೂರು ಲಾರಿಗಳನ್ನು ವಶಪಡಿಸಿಕೊಳ್ಳಲಾಗಿದೆ. ಕಾರ್ಕಳ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಕಾಬೆಟ್ಟು ಅತ್ತೂರು ಚರ್ಚ್ ದ್ವಾರದ ಬಳಿ ಜ.5ರಂದು ಅಕ್ರಮವಾಗಿ 3 ಯುನಿಟ್ ಮರಳು ಸಾಗಾಟ ಮಾಡುತ್ತಿದ್ದ ಲಾರಿಯನ್ನು ವಶಕ್ಕೆ ಪಡೆದ ಪೊಲೀಸರು, ಆರೋಪಿ ಚೇರ್ಕಾಡಿ ಪೇತ್ರಿಯ ವಿನ್ವೆಂಟ್ ಪ್ರಕಾಶ ಅಲೇಡಾ(54) ಹಾಗೂ ಚಾಲಕ ಮುಡಾರು ಗ್ರಾಮದ ದಿಡಿಂಬಿರಿಯ ಸಮೇಗ್ಸ್ ಜೈನ್(25) ಎಂಬವರನ್ನು ಬಂಧಿಸಿದ್ದಾರೆ. ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಕೋಟ ಪೊಲೀಸ್ ಠಾಣಾ ವ್ಯಾಪ್ತಿಯ ಮಣೂರು ಗ್ರಾಮದ ಬಾಳೆಬೆಟ್ಟು ಬಸ್ ನಿಲ್ದಾಣದ ಬಳಿ ಜ.5ರಂದು ಅಕ್ರಮವಾಗಿ ಚಪ್ಪಡಿ ಕಲ್ಲುಗಳನ್ನು ಸಾಗಿಸುತ್ತಿದ್ದ ಟಿಪ್ಪರನ್ನು ವಶಪಡಿಸಿಕೊಂಡ ಪೊಲೀಸರು, ಚಾಲಕನ ಶಿವಮೊಗ್ಗ ಹೊಸನಗರ ತಾಲೂಕಿನ ಸುರೇಶ(54) ಎಂಬಾತನನ್ನು ಬಂಧಿಸಿದ್ದಾರೆ. ಲಾರಿಯಲ್ಲಿದ್ದ 30 ಸಾವಿರ ರೂ. ಮೌಲ್ಯದ 12 ಟನ್ ಚಪ್ಪಡಿ ಶಿಲೆಕಲ್ಲುಗಳನ್ನು ವಶಪಡಿಸಿಕೊಳ್ಳಲಾಗಿದೆ. ಈ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹಿರಿಯಡ್ಕ ಪೊಲೀಸ್…
ಸುಳ್ಯ: ತಾಯಿ ಮತ್ತು ಮೂರು ವರ್ಷದ ಮಗುವಿನ ಮೃತದೇಹ ಮನೆ ಸಮೀಪದ ಕೆರೆಯಲ್ಲಿ ಪತ್ತೆಯಾಗಿರುವ ಘಟನೆ ಬೆಳ್ಳಾರೆ ಪೊಲೀಸ್ ಠಾಣಾ ವ್ಯಾಪ್ತಿಯ ಕೊಡಿಯಾಲ ಗ್ರಾಮದಲ್ಲಿ ರವಿವಾರ ನಡೆದಿದೆ. ಸುಳ್ಯ ತಾಲೂಕಿನ ಕೊಡಿಯಾಲ ಗ್ರಾಮದ ಆರ್ವಾರ ಹರೀಶ್ ಎಂಬವರ ಪತ್ನಿ ಮಧುಶ್ರೀ (34) ಹಾಗೂ ಅವರ ಮೂರು ವರ್ಷದ ಮಗು ಧನ್ವಿ ಮೃತರು. ಹರೀಶ್ ಅವರು ತನ್ನ ತಂದೆ, ತಾಯಿ, ಪತ್ನಿ, ಮಗುವಿನೊಂದಿಗ ಆರ್ವಾರ ಮನೆಯಲ್ಲಿ ವಾಸಿಸುತ್ತಿದ್ದು, ಶನಿವಾರ ರಾತ್ರಿ ಮಲಗಿದ್ದ ತಾಯಿ, ಮಗು ರವಿವಾರ ಬೆಳಗ್ಗೆ ಕಾಣದೇ ಇದ್ದ ಸಂದರ್ಭ ಹುಡುಕಾಡಿದಾಗ ಮನೆ ಸಮೀಪದ ಇನ್ನೊಬ್ಬರ ಜಾಗದ ಕೆರೆಯಲ್ಲಿ ತಾಯಿ ಹಾಗೂ ಮಗುವಿನ ಮೃತದೇಹ ಪತ್ತೆಯಾಗಿದೆ. ಮಧುಶ್ರೀ ಅವರು ಮಗುವನ್ನು ಬಟ್ಟೆಯಲ್ಲಿ ತನ್ನ ಸೊಂಟಕ್ಕೆ ಕಟ್ಟಿಕೊಂಡು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ದೂರಲಾಗಿದೆ. ಪುತ್ತೂರು ಬೆಟಗೇರಿಯವರಾದ ಮಧುಶ್ರೀ ಅವರು ನಾಲ್ಕು ವರ್ಷದ ಹಿಂದೆ ಹರೀಶ್ ಅವರನ್ನು ವಿವಾಹ ಆಗಿದ್ದರು. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಬೆಳ್ಳಾರೆ ಠಾಣಾ ಪೊಲೀಸರು ಘಟನಾ…
ಬಾಲ ಯೇಸುವಿನ ವಾರ್ಷಿಕ ಮಹೋತ್ಸವಕ್ಕೆ ಸಿದ್ಧತೆಯಾಗಿ ಜನವರಿ 3, 2026 ಶನಿವಾರ, ಕೊರ್ಡೆಲ್ ಚರ್ಚ್ ನಿಂದ ಬಿಕರ್ನಕಟ್ಟೆ ಬಾಲ ಯೇಸುವಿನ ಪುಣ್ಯಕ್ಷೇತ್ರದ ವರೆಗೆ ಭಕ್ತಿಭಾವಪೂರ್ಣ ಹೊರೆ ಕಾಣಿಕೆ ಮೆರವಣಿಗೆ ನಡೆಯಿತು. ಅನೇಕ ಭಕ್ತರು ಕೃತಜ್ಞತೆ, ನಂಬಿಕೆ ಮತ್ತು ಆಶಯದೊಂದಿಗೆ ಕಾಣಿಕೆಗಳನ್ನು ಸಮರ್ಪಿಸಿದರು. ವಂ. ವಿಜಯ್ ಮೊಂತೆರೋ, (ಸಹಾಯಕ ಧರ್ಮಗುರು , ಕೊರ್ಡೆಲ್ ಚರ್ಚ್) ಆಶೀರ್ವಾದ ನೀಡಿ, ಶ್ರೀಮತಿ ರೂತ್ ಕ್ಯಾಸ್ಟೆಲಿನೊ, (ಉಪಾಧ್ಯಕ್ಷೆ, ಕೊರ್ಡೆಲ್ ಚರ್ಚ್) ಮೆರವಣಿಗೆಗೆ ಧ್ವಜ ಹಾರಿಸಿ ಚಾಲನೆ ನೀಡಿದರು. ಈ ಸಂಧರ್ಭದಲ್ಲಿ ಸಾಮಾಜಿಕ ಸೌಹಾರ್ದತೆ ಯನ್ನು ಉತ್ತೇಜಿಸುವ “ಸಹಬಾಳ್ವೆ” ಕಾರ್ಯಕ್ರಮ ಪುಣ್ಯಕ್ಷೇತ್ರದ ಆಂಗಣದಲ್ಲಿ ನಡೆಯಿತು. ಮುನೀರ್ ಕಾಟಿಪಳ್ಳ (ಸಾಮಾಜಿಕ ಕಾರ್ಯಕರ್ತ ), ಶ್ರೀಮತಿ ಶಾಲೇಟ್ ಪಿಂಟೊ (ಕರ್ನಾಟಕ ಪರಿಸರ ಪ್ರವಾಸೋದ್ಯಮ ಅಭಿವೃದ್ಧಿ ಮಂಡಳಿಯ ಅಧ್ಯಕ್ಷೆ) ಹಾಗೂ ಶ್ರೀ ದಿನೇಶ್ ಹೆಗಡೆ, ಉಳೇಪಾಡಿ (ಮಾನವ ಹಕ್ಕುಗಳ ಹೋರಾಟಗಾರ, ವಕೀಲರು) ಭಾಗವಹಿಸಿದರು. ಸಮಾಜದಲ್ಲಿ ಸಹೋದರತ್ವ ಮತ್ತು ಏಕತೆಯ ಮಹತ್ವವನ್ನು ಅವರು ಒತ್ತಿ ಹೇಳಿದರು. ಕಾರ್ಯಕ್ರಮದಲ್ಲಿ ವಂ. ಪ್ರವೀಣ್ ಮಾರ್ಟಿಸ್ (ಉಪಕುಲಪತಿ, ಸಂತ…
ಬಿಹಾರದಿಂದ ಮಂಗಳೂರಿಗೆ ರೈಲಿನ ಮೂಲಕ ಗಾಂಜಾ ತಂದು ಮಾರಾಟಕ್ಕೆ ಯತ್ನಿಸುತ್ತಿದ್ದ ಇಬ್ಬರನ್ನು ಬಜ್ಪೆ ಪೊಲೀಸರು ಬಂಧಿಸಿದ್ದಾರೆ. ಮೂಲತಃ ಬಿಹಾರ ರಾಜ್ಯದ ನಿವಾಸಿಗಳಾದ ಕೃಷ್ಣಾಪುರದಲ್ಲಿ ವಾಸವಿರುವ ಸುನಿಲ್ ಕುಮಾರ್ ಮತ್ತು ಬ್ರಿಜೇಶ್ ಶ್ರೀವತ್ಸ ಬಂಧಿತ ಆರೋಪಿಗಳು. ಜ. 3ರಂದು ಬಜಪೆ ಪೊಲೀಸ್ ಠಾಣಾ ವ್ಯಾಪ್ತಿಯ ಶಾಂತಿಗುಡ್ಡೆ ಕ್ರಾಸ್ ಬಳಿ ರಸ್ತೆಯ ಬದಿಯಲ್ಲಿ ಸುಮಾರು 1 ಕೆಜಿ ತೂಕದ ಮಾದಕವಸ್ತು ಗಾಂಜಾವನ್ನು ಅಕ್ರಮವಾಗಿ ಮಾರಾಟ ಮಾಡಲು ಯತ್ನಿಸುತ್ತಿದ್ದ ಎಂಬ ಖಚಿತ ಮಾಹಿತಿ ಮೇರೆಗೆ ಬಜಪೆ ಪೊಲೀಸರು ದಾಳಿ ನಡೆಸಿದ್ದರೆ. ಈ ವೇಳೆ ಆರೋಪಿಗಳನ್ನು ಬಂಧಿಸಿದ್ದು, ಸುಮಾರು 1 ಕೆ.ಜಿ ಮಾದಕ ವಸ್ತು ಗಾಂಜಾವನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ. ಬಂಧಿತರು ಮಾದಕ ವಸ್ತು ಗಾಂಜಾವನ್ನು ಬಿಹಾರ ರಾಜ್ಯದಿಂದ ಖರೀದಿಸಿ ರೈಲಿನಲ್ಲಿ ಮಂಗಳೂರಿಗೆ ತಂದು ಉತ್ತರ ಭಾರತದ ಕೂಲಿ ಕಾರ್ಮಿಕರಿಗೆ ಮಾರಾಟ ಮಾಡುತ್ತಿರುವುದಾಗಿ ತಿಳಿದು ಬಂದಿದೆ. ಬಜಪೆ ಪೊಲೀಸರು ಎನ್.ಡಿ.ಪಿ.ಎಸ್ ಆಕ್ಟ್ ಅಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಉಡುಪಿ ಜಿಲ್ಲೆಯ ಕಾರ್ಕಳದಲ್ಲಿರುವ ಪರಶುರಾಮ ಥೀಮ್ ಪಾರ್ಕ್‌ನಲ್ಲಿ ಕಳ್ಳತನ ನಡೆದಿರುವ ಘಟನೆ ಬೆಳಕಿಗೆ ಬಂದಿದೆ. ಬಿಜೆಪಿ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ ಈ ಥೀಮ್ ಪಾರ್ಕ್, ಮಾಜಿ ಸಚಿವ ವಿ. ಸುನಿಲ್ ಕುಮಾರ್ ಅವರ ನೇತೃತ್ವದಲ್ಲಿ ನಿರ್ಮಾಣವಾಗಿತ್ತು ರಾಜಕೀಯ ಕೆಸರೆರಚಾಟದಿಂದ ನೆನೆಗುದಿಗೆ ಬಿದ್ದಿದ್ದ ಯೋಜನಾ ಪ್ರದೇಶವು ಇತ್ತೀಚಿನ ವರ್ಷಗಳಲ್ಲಿ ಪಾಳುಬಿದ್ದಿದ್ದು, ಈ ಸಂದರ್ಭ ದುಷ್ಕರ್ಮಿಗಳು ಬಾಗಿಲು ಮುರಿದು ಒಳನುಗ್ಗಿ ಮೇಲ್ಚಾವಣಿಗೆ ಅಳವಡಿಸಿದ್ದ ತಾಮ್ರದ ಹೊದಿಕೆಗಳನ್ನು ಕಿತ್ತು ಕಳ್ಳತನ ಮಾಡಿದ್ದಾರೆ ಎನ್ನಲಾಗಿದೆ. ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯಿಸಿರುವ ಸುನಿಲ್ ಕುಮಾರ್, ಕಾರ್ಕಳದ ಇತಿಹಾಸದಲ್ಲಿ ಇದೊಂದು ದುರ್ದಿನ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ. ಸ್ಥಳೀಯ ಕಾಂಗ್ರೆಸ್ ಮುಖಂಡರ ದ್ವೇಷ ಹಾಗೂ ಅಸೂಯೆಯಿಂದ ಈ ಸ್ಥಿತಿ ಬಂದಿದೆ ಎಂದು ಆರೋಪಿಸಿದ ಅವರು, ಕಳೆದ ಎರಡು ವರ್ಷಗಳಿಂದ ಯೋಜನೆಗೆ ಒಂದು ಬಿಡಿ ಕಾಸು ಕೂಡ ಬಿಡುಗಡೆ ಆಗಿಲ್ಲ ಎಂದು ಆಕ್ಷೇಪಿಸಿದ್ದಾರೆ. ಪ್ರವಾಸೋದ್ಯಮಕ್ಕೆ ಮಹತ್ವದ ಕೊಡುಗೆ ನೀಡಬೇಕಾಗಿದ್ದ ಪರಶುರಾಮ ಥೀಮ್ ಪಾರ್ಕ್ ಇಂದು ಅನುದಾನ ಕೊರತೆಯಿಂದ ಪಾಳುಬಿದ್ದು ಕಳ್ಳತನಕ್ಕೂ ಗುರಿಯಾಗಿರುವುದು…
ಮಂಗಳೂರು: ತುಳುನಾಡಿನ ಜಾತ್ರೆಗಳಲ್ಲಿ ಕೋಳಿ ಅಂಕ ನಡೆಸುವುದು ಒಂದು ಸಂಪ್ರದಾಯ. ಆದರೆ ಈ ಸಂದರ್ಭದಲ್ಲಿ ಬೆಟ್ಟಿಂಗ್, ಗ್ಯಾಂಬ್ಲಿಂಗ್ ನಡೆಯುತ್ತಿದ್ದರೆ ಅದರ ಮೇಲೆ ಕ್ರಮ ಕೈಗೊಳ್ಳಬೇಕು ಎಂಬುದನ್ನು ಸಂಘಟಕರೇ ಹೇಳುತ್ತಾರೆ. ಹಾಗಾಗಿ ಮುಂದಿನ ದಿನಗಳಲ್ಲಿ ಕೋಳಿ ಅಂಕವನ್ನು ನಿಯಮಿತವಾಗಿ ವ್ಯವಸ್ಥಿತವಾಗಿ ನಡೆಸುವ ಬಗ್ಗೆ ನಿಯಮಗಳನ್ನು ರೂಪಿಸುವ ಅಗತ್ಯವಿದೆ ಎಂದು ವಿಧಾನ ಸಭಾ ಸ್ಪೀಕರ್ ಯು.ಟಿ. ಖಾದರ್ ತಿಳಿಸಿದ್ದಾರೆ. ಮಂಗಳೂರಿನಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿ ಕೋಳಿ ಅಂಕಕ್ಕೆ ನಿಯಮಗಳನ್ನು ರೂಪಿಸುವ ಈ ಬಗ್ಗೆ ಕಾನೂನು ಸಚಿವರು, ಸಲಹಾ ಮಂಡಳಿ ಜತೆ ಮಾತನಾಡಿದ್ದೇನೆ. ಜಿಲ್ಲಾ ಉಸ್ತುವಾರಿ ಸಚಿವರ ಗಮನಕ್ಕೂ ತರಲಾಗಿದೆ ಎಂದರು.
ಮಂಗಳೂರು: ಬೋಂದೆಲ್‌ನ ಸೇಂಟ್ ಲಾರೆನ್ಸ್ ದೇಗುಲ ಮತ್ತು ಚರ್ಚ್‌ನ ಪ್ಯಾರಿಷ್ ಧರ್ಮಗುರು ಫಾದರ್ ಆಂಡ್ರ್ಯೂ ಲಿಯೋ ಡಿ’ಸೋಜಾ ಅವರು ಜನವರಿ 1 ರಂದು ಕಾರು ಅಪಘಾತಕ್ಕೀಡಾಗಿದ್ದರೂ ಪವಾಡ ಸದೃಶವಾಗಿ ಪಾರಾಗಿದ್ದಾರೆ. ಫಾದರ್ ಡಿ’ಸೋಜಾ ಅವರು ತಮ್ಮ ನಿವಾಸದಲ್ಲಿ ನಡೆದ ಹೊಸ ವರ್ಷದ ಕೂಟದಲ್ಲಿ ಭಾಗವಹಿಸಿದ ನಂತರ ತಮ್ಮ ಹುಟ್ಟೂರು ನೀರುಡೆಯಿಂದ ಬೊಂದೆಲ್ ಚರ್ಚ್‌ಗೆ ಪ್ರಯಾಣಿಸುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಮರಕಡ ಮೂಲಕ ಹಾದುಹೋಗುವಾಗ ಅವರ ಕಾರಿನ ಒಂದು ಟೈರ್ ಸ್ಫೋಟಗೊಂಡು ವಾಹನ ನಿಯಂತ್ರಣ ತಪ್ಪಿದೆ ಎಂದು ವರದಿಯಾಗಿದೆ. ಘಟನೆಯ ಸಿಸಿಟಿವಿ ದೃಶ್ಯಾವಳಿಯಲ್ಲಿ ಕಾರು ರಸ್ತೆಯಿಂದ ಹೊರಟು ರಸ್ತೆಯ ಪಕ್ಕದಲ್ಲಿರುವ ಮನೆಯ ಅಂಗಳದಲ್ಲಿ ಪಕ್ಕಕ್ಕೆ ಬಿದ್ದಿದೆ. ಅಪಘಾತದಲ್ಲಿ ಫಾದರ್ ಡಿ’ಸೋಜಾ ಗಂಭೀರ ಗಾಯಗಳಿಲ್ಲದೆ ಪಾರಾಗಿದ್ದಾರೆ. ಅಪಘಾತವನ್ನು ಕಂಡ ಅನೇಕ ಪ್ರೇಕ್ಷಕರು ತಕ್ಷಣ ಸ್ಥಳಕ್ಕೆ ಧಾವಿಸಿ ಕಾರನ್ನು ಮೇಲೆತ್ತಲು ಸಹಾಯ ಮಾಡಿದರು ಮತ್ತು ಫಾದರ್ ಡಿಸೋಜಾ ಅವರನ್ನು ವಾಹನದಿಂದ ಸುರಕ್ಷಿತವಾಗಿ ಹೊರಬರಲು ಸಹಾಯ ಮಾಡಿದರು. ಘಟನೆಯ ನಂತರ ಮಾತನಾಡಿದ ಫಾದರ್ ಡಿ’ಸೋಜಾ, ದೇವರ ದಯೆಯಿಂದ ಇಂತಹ…
ಮೂಲ್ಕಿ ಕಂಬಳದಲ್ಲಿ ಬಹುಮಾನ ಗೆದ್ದ ಕೋಣಗಳ ಮಾಲಕರಿಗೆ ಹಣಕ್ಕಾಗಿ ಪೀಡಿಸುತ್ತಿದ್ದ ಮೂವರು ಆರೋಪಿಗಳನ್ನು ಮೂಲ್ಕಿ ಪೊಲೀಸರು ಬಂಧಿಸಿದ್ದಾರೆ. ಶ್ಯಾಮ ಸುಂದರ್ ಶೆಟ್ಟಿ, ಅಕ್ಷಯ್ ಪೂಜಾರಿ ಹಾಗೂ ಸುವಿನ್ ಕಾಂಚನ್ ಬಂಧಿತರು. ಅಂಗಾರಕಟ್ಟೆ ಕೆಂಚನಕೆರೆ ನಿವಾಸಿ ಸಂಶುದ್ದೀನ್ ಅವರಿಗೆ ಈ ಮೂವರು ಆರೋಪಿಗಳು ಹಣಕ್ಕಾಗಿ ಬೇಡಿಕೆ ಇಟ್ಟಿರುವುದಾಗಿ ತಿಳಿದು ಬಂದಿದೆ. ಸಂಶುದ್ದೀನ್ ಅವರು ಮುಂಬೈಯಲ್ಲಿ ನೆಲೆಸಿರುವ ಉದ್ಯಮಿಯೊಬ್ಬರಿಗೆ ಸೇರಿದ ಗದ್ದೆ, ತೋಟ ಹಾಗೂ ಮನೆಯನ್ನು ನೋಡಿಕೊಳ್ಳುತ್ತಿದ್ದರು. ಮೂಲ್ಕಿ ಅರಸು ಕಂಬಳದಲ್ಲಿ ಸಂಶುದ್ದೀನ್ ತಂದಿದ್ದ ಕೋಣಗಳಿಗೆ ಬಹುಮಾನ ಲಭಿಸಿದ್ದು, ಅದರಲ್ಲಿ ದೊರೆತ ಬಂಗಾರದ ಸರ ಹಾಗೂ ಹಣವನ್ನು ನೀಡುವಂತೆ ಆರೋಪಿಗಳು ಬೆದರಿಕೆಯೊಡ್ಡಿದ್ದಾರೆ. ಅಲ್ಲದೇ ನೀನು ದನಗಳನ್ನು ಕಡಿಯಲು ಕಸಾಯಿಖಾನೆಗೆ ಕೊಡುತ್ತೀಯಲ್ಲ ಎಂದು ಬೆದರಿಕೆಯೊಡ್ಡಿದ್ದಾರೆ ಎಂದು ಆರೋಪಿಸಲಾಗಿದೆ. ತನಿಖೆ ನಡೆಸಿದ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.
ಉಪ್ಪಿನಂಗಡಿ: ಇಲ್ಲಿನ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪೆರ್ನೆ ಎಂಬಲ್ಲಿನ ಬ್ಯಾಂಕ್ ಆಫ್ ಬರೋಡಾ ಶಾಖೆಯ ಉಪಶಾಖಾ ಪ್ರಬಂಧಕನಾಗಿ ಕಾರ್ಯನಿರ್ವಹಿಸುತ್ತಿದ್ದ ಪುಲುಗುಜ್ಜು ಸುಬ್ರಹ್ಮಣ್ಯಂ (30) ನಾಪತ್ತೆ ಪ್ರಕರಣವು ಮಹತ್ವದ ತಿರುವು ಪಡೆದುಕೊಂಡಿದೆ.ನಾಪತ್ತೆಯಾಗಿರುವ ಬ್ಯಾಂಕ್ ಉದ್ಯೋಗಿ ತಾನು ಕರ್ತವ್ಯ ನಿರ್ವಹಿಸುತ್ತಿದ್ದ ಬ್ಯಾಂಕಿಗೆ 71.41 ಲಕ್ಷ ರೂ. ವಂಚನೆ ನಡೆಸಿರುವ ಬಗ್ಗೆ ಬ್ಯಾಂಕ್ ಅಧಿಕಾರಿಗಳು ಪೊಲೀಸರಿಗೆ ದೂರು ನೀಡಿದ್ದಾರೆ. ಬಿ.ಸಿ.ರೋಡಿನಲ್ಲಿ ವಿಷ್ಣು ಎಂಬವರ ಜೊತೆ ರೂಮೊಂದರಲ್ಲಿ ವಾಸ್ತವ್ಯ ಹೊಂದಿದ್ದ ಸುಬ್ರಹ್ಮಣ್ಯಂ ಡಿ.17ರಂದು ತನ್ನ ತಮ್ಮನಿಗೆ ಹುಷಾರಿಲ್ಲ, ರೂಮಿಗೆ ಹೋಗುತ್ತೇನೆಂದು ಬ್ಯಾಂಕಿನಲ್ಲಿ ಹೇಳಿ ಹೋದವ ಬಳಿಕ ನಾಪತ್ತೆಯಾಗಿದ್ದ. ತನ್ನ ರೂಂನಲ್ಲಿ ಜೊತೆಯಾಗಿ ವಾಸ್ತವ್ಯ ಹೊಂದಿದ್ದ ವಿಷ್ಣುವಿನಲ್ಲಿ ತಾನು ಊರಿಗೆ ಹೋಗುವುದಾಗಿ ತಿಳಿಸಿ ಹೋಗಿದ್ದಾನೆನ್ನಲಾಗಿದ್ದು, ಊರಿಗೂ ಹೋಗದೆ ಎಲ್ಲಿಯೂ ಕಾಣಿಸದೆ ನಾಪತ್ತೆ ಯಾಗಿರುವುದಾಗಿ ದೂರಲಾಗಿತ್ತು. ಈ ಸಂಬಂಧ ಸುಬ್ರಹ್ಮಣ್ಯಂನ ಸಹೋದರ ಪುಲುಗುಜ್ಜು ನಾಗಫಣೀಂದ್ರ ಉಪ್ಪಿನಂಗಡಿ ಠಾಣೆಗೆ ದೂರು ನೀಡಿದ್ದಾರೆ. ಈ ಮಧ್ಯೆ ಬ್ಯಾಂಕ್ ಆಫ್ ಬರೋಡಾದ ಮಂಗಳೂರು ಪ್ರಾದೇಶಿಕ ವ್ಯವಸ್ಥಾಪಕ ಸಿ.ವಿ.ಎಸ್. ಚಂದ್ರಶೇಖರ್ ಉಪ್ಪಿನಂಗಡಿ ಪೊಲೀಸರಿಗೆ ದೂರು ನೀಡಿದ್ದು,…










