Author: main-admin

ಕಾರ್ಕಳ: ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಸಾಣೂರು ಗ್ರಾಮದ ಪೊರ್ಲೊಟ್ಟುಗುತ್ತು ಕುಬೇರ ಕೋಳಿ ಫಾರ್ಮ್ ಸಮೀಪದ ಸರ್ಕಾರಿ ಹಾಡಿ ಪ್ರದೇಶದಲ್ಲಿ ಅಕ್ರಮವಾಗಿ ಕೋಳಿ ಕಾಳಗ ನಡೆಸಿ ಜೂಜಾಟ ಆಡುತ್ತಿದ್ದ ಸ್ಥಳದ ಮೇಲೆ ಕಾರ್ಕಳ ನಗರ ಪೊಲೀಸ್ ಠಾಣೆಯ ಪೊಲೀಸರು ದಾಳಿ ನಡೆಸಿದ್ದಾರೆ. ಪೊಲೀಸ್ ಉಪನಿರೀಕ್ಷಕ (ತನಿಖೆ) ಶಿವಕುಮಾರ್ ಅವರಿಗೆ ದೊರೆತ ಖಚಿತ ಮಾಹಿತಿಯ ಮೇರೆಗೆ ಸಂಜೆ 5.45ರ ಸುಮಾರಿಗೆ ದಾಳಿ ನಡೆಸಿದ ವೇಳೆ ರಕ್ಷಿತ್ ಶೆಟ್ಟಿ, ಪ್ರವೀಣ ದೇವಾಡಿಗ ಹಾಗೂ ಇತರರು ಕೋಳಿಗಳ ಕಾಲಿಗೆ ಹರಿತವಾದ ಚೂರಿಗಳನ್ನು ಕಟ್ಟಿ, ಅವುಗಳ ಮೇಲೆ ಹಣವನ್ನು ಪಣವಾಗಿಟ್ಟು ಜೂಜಾಟ ನಡೆಸುತ್ತಿರುವುದು ಪತ್ತೆಯಾಗಿದೆ. ದಾಳಿ ವೇಳೆ ಸುಮಾರು ₹12,000 ಮೌಲ್ಯದ ಐದು ಜೀವಂತ ಕೋಳಿಗಳು, ಕೋಳಿಗಳನ್ನು ಕಟ್ಟಲು ಬಳಸಿದ್ದ ಐದು ಹಗ್ಗಗಳು ಹಾಗೂ ₹4,370 ನಗದುವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಈ ಸಂಬಂಧ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 100/2026ರಡಿ ಭಾರತೀಯ ನ್ಯಾಯ ಸಂಹಿತೆ (BNS) ಕಲಂ 112(1), ಕರ್ನಾಟಕ ಪೊಲೀಸ್ ಕಾಯ್ದೆ ಕಲಂ 87, 93 ಹಾಗೂ ಪ್ರಾಣಿಗಳ ಮೇಲಿನ ಕ್ರೌರ್ಯ…

Read More

ಬಂಟ್ವಾಳ : ಬಿಸಿರೋಡಿನ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದಲ್ಲಿ ಯುವತಿ ಲಾವಣ್ಯ ಅವರನ್ನು ಭೀಕರವಾಗಿ ಹತ್ಯೆಗೈದು ಪರಾರಿಯಾಗಿದ್ದ ಬೆಳ್ತಂಗಡಿ ತಾಲೂಕಿನ ಓಡಿಲ್ನಾಳ ನಿವಾಸಿ ಚೇತನ್‌‌ನನ್ನು ಬಂಟ್ವಾಳ ಪೊಲೀಸರು ಬಂಧಿಸಿರುವ ಮಾಹಿತಿ ಲಭ್ಯವಾಗಿದೆ. ಆರೋಪಿಯ ಪತ್ತೆಗಾಗಿ ವಿಶೇಷ ತಂಡಗಳನ್ನು ರಚಿಸಿದ್ದ ಪೊಲೀಸರು ತ್ವರಿತ ಕಾರ್ಯಾಚರಣೆ ನಡೆಸಿ ಇಂದು ಬೆಳಗ್ಗೆ ಮಂಗಳೂರಿನ ವಾಮಾಂಜೂರಿನ ಪಚ್ಚನಾಡಿಯಲ್ಲಿ ಆರೋಪಿ ಚೇತನ್ ನನ್ನು ಬಂಟ್ವಾಳ ಪೊಲೀಸರು ಬಂಧಿಸಿದ್ದಾರೆ.

Read More

ಸುಬ್ರಹ್ಮಣ್ಯ: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಮೋಕ್ಷಿತ್ ಎಂಬ ವ್ಯಕ್ತಿಯ ವಿರುದ್ಧ ಸುಬ್ರಹ್ಮಣ್ಯ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಸಂತ್ರಸ್ತೆಯ ತಾಯಿ ದೂರು ನೀಡಿದ ನಂತರ ಈ ಘಟನೆ ಬೆಳಕಿಗೆ ಬಂದಿದೆ. ಭಾರತೀಯ ನ್ಯಾಯ ಸಂಹಿತಾ (ಬಿಎನ್‌ಎಸ್) ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಪೊಲೀಸ್ ದೂರಿನ ಪ್ರಕಾರ, 15 ವರ್ಷದ ಸಂತ್ರಸ್ತೆ ಜುಲೈ 7 ರಂದು ಕಡಬ ಏನೆಕಲ್ಲುವಿನಲ್ಲಿರುವ ತನ್ನ ಸ್ನೇಹಿತನ ಮನೆಗೆ ಹೋಗಿದ್ದಳು. ಜುಲೈ 8 ರ ಮಧ್ಯಾಹ್ನ ಆಕೆ ಮನೆಯಲ್ಲಿದ್ದಾಗ, ಆರೋಪಿ ಮೋಕ್ಷಿತ್ ಆಕೆಯನ್ನು ಮನೆಯ ಸಮೀಪವಿರುವ ಸ್ಥಳಕ್ಕೆ ಕರೆಸಿ ಬಲವಂತವಾಗಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ವರದಿಯಾಗಿದೆ. ಆರೋಪಿಸಂತ್ರಸ್ತೆಗೆ ಕೊಲೆ ಬೆದರಿಕೆಯನ್ನೂ ಹಾಕಿದ್ದಾರೆ ಎಂದು ಆರೋಪಿಸಲಾಗಿದೆ. ಜುಲೈ 9 ರಂದು ಸಂತ್ರಸ್ತೆ ಮನೆಗೆ ಮರಳಿದ ಬಳಿಕ ಆಕೆಯ ತಾಯಿ ಪೊಲೀಸರಿಗೆ ಔಪಚಾರಿಕ ದೂರು ದಾಖಲಿಸಿದರು. ದೂರಿನ ಆಧಾರದ ಮೇಲೆ, ಸುಬ್ರಹ್ಮಣ್ಯ ಪೊಲೀಸರು ಅಪರಾಧ ಸಂಖ್ಯೆ 29/2026 ರ ಅಡಿಯಲ್ಲಿ…

Read More

ಬಂಟ್ವಾಳ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಯುವತಿಯೊಬ್ಬರನ್ನು ಮಾರಕವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ ಘಟನೆ ಗುರುವಾರ ವರದಿಯಾಗಿದೆ. ಮೃತ ಯುವತಿಯನ್ನು ಕಕ್ಯಪದವು ನಿವಾಸಿ ಲಾವಣ್ಯ ಎಂದು ಗುರುತಿಸಲಾಗಿದೆ. ಅವರು ಕಲ್ಲಡ್ಕದ ಖಾಸಗಿ ನರ್ಸಿಂಗ್ ಹೋಮ್‌ನಲ್ಲಿ ಕೆಲಸ ಮಾಡುತ್ತಿದ್ದರು ಎಂದು ತಿಳಿದುಬಂದಿದೆ. ಲಭ್ಯವಿರುವ ಪ್ರಾಥಮಿಕ ಮಾಹಿತಿಯ ಪ್ರಕಾರ, ಲಾವಣ್ಯ ಅವರು ಕಕ್ಯಪದವು ಕಡೆಗೆ ತೆರಳಲು ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಕುಳಿತಿದ್ದರು ಎನ್ನಲಾಗಿದೆ. ಈ ವೇಳೆ ಅವರು ತಮ್ಮ ಸಂಬಂಧಿಕರೊಬ್ಬರಿಗೆ ದೂರವಾಣಿ ಕರೆ ಮಾಡಿ, “ತನ್ನ ಪಕ್ಕದಲ್ಲಿ ಓರ್ವ ಯುವಕ ಕುಳಿತಿದ್ದಾನೆ” ಎಂದು ತಿಳಿಸಿದ್ದು, ಬಳಿಕ ಕರೆ ಸಂಪರ್ಕ ಕಡಿತಗೊಂಡಿದೆ ಎಂದು ಹೇಳಲಾಗಿದೆ. ಬಸ್‌ನಲ್ಲಿದ್ದ ಪ್ರಯಾಣಿಕರ ಮಾಹಿತಿ ಪ್ರಕಾರ, ಬಳಿಕ ಯುವತಿ ಬಸ್‌ನಿಂದ ಕೆಳಗಿಳಿದಿದ್ದಾರೆ. ಅವರು ಇಳಿದ ತಕ್ಷಣ ಯುವಕ ಆಕೆಯನ್ನು ಬೆನ್ನಟ್ಟಿದನು ಎನ್ನಲಾಗಿದ್ದು, ತನ್ನ ಬ್ಯಾಗ್‌ನಿಂದ ಹರಿತವಾದ ಆಯುಧವನ್ನು ಹೊರತೆಗೆದಾಗ ಯುವತಿ ಓಡಿ ತಪ್ಪಿಸಿಕೊಳ್ಳಲು ಪ್ರಯತ್ನಿಸಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಈ ವೇಳೆ ಯುವತಿಯ ಮೇಲೆ ಮಾರಕ ಹಲ್ಲೆ ನಡೆಸಿ, ಆರೋಪಿ ಸ್ಥಳದಿಂದ ಪರಾರಿಯಾಗಿದ್ದಾನೆ…

Read More

ಉಪ್ಪಿನಂಗಡಿ: ಬೆಳ್ತಂಗಡಿ ತಾಲೂಕಿನ ಕಣಿಯೂರು ಗ್ರಾಮದ ಅಡೆಂಜದಲ್ಲಿರುವ ಕಟ್ಟಡವೊಂದರಲ್ಲಿ ಎಲೆಕ್ಟ್ರಾನಿಕ್ ಉಪಕರಣಗಳನ್ನು ಬಳಸಿ ಭಾರತೀಯ ಖೋಟಾ ಕರೆನ್ಸಿ ನೋಟುಗಳನ್ನು ಮುದ್ರಿಸುತ್ತಿದ್ದ ಜಾಲವನ್ನು ಉಪ್ಪಿನಂಗಡಿ ಪೊಲೀಸರು ಭೇದಿಸಿ, 7 ಆರೋಪಿಗಳನ್ನು ಬಂಧಿಸಿದ್ದಾರೆ. ಉಪ್ಪಿನಂಗಡಿ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕ ಸುತೇಶ್ ಕೆ.ಪಿ. ಅವರಿಗೆ ದೊರೆತ ಖಚಿತ ಮಾಹಿತಿಯ ಮೇರೆಗೆ ಸಿಬ್ಬಂದಿಗಳೊಂದಿಗೆ ದಾಳಿ ನಡೆಸಿದ ವೇಳೆ ಇಬ್ರಾಹಿಂ (60), ಶರೀಪ್(51), ಸಂದೀಪ ಪುಂಡಲಿಕ ಶೋಳಂಬಿ(30), ಮಹಮ್ಮದ್ ನಬಾಸ್(37), ಸಲ್ಮಾನ್ ಫಾರೀಸ್(25), ಸಿರಾಜುದ್ದೀನ್(34) ಹಾಗೂ ಇರ್ಷಾದ್(31) ಅವರನ್ನು ವಶಕ್ಕೆ ಪಡೆಯಲಾಗಿದೆ. ದಾಳಿ ವೇಳೆ ₹500 ಮುಖಬೆಲೆಯ ಒಂದು ನೋಟು, ₹500 ನೋಟಿನ ಮಾದರಿಯಂತೆ ಮುದ್ರಿಸಲಾದ A-4 ಗಾತ್ರದ 21 ಹಾಳೆಗಳು, ಕಂಪ್ಯೂಟರ್, ಜೆರಾಕ್ಸ್ ಯಂತ್ರ, ಸೀಲ್‌ಗಳು ಸೇರಿದಂತೆ ಖೋಟಾ ನೋಟು ಮುದ್ರಣಕ್ಕೆ ಬಳಸಲಾಗುತ್ತಿದ್ದ ವಿವಿಧ ಉಪಕರಣಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ ಈ ಸಂಬಂಧ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 103/2026ರಡಿ ಭಾರತೀಯ ನ್ಯಾಯ ಸಂಹಿತೆ (BNS)-2023ರ ಕಲಂ 178ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಲಾಗಿದೆ. ಪ್ರಕರಣವನ್ನು…

Read More

ಮಂಗಳೂರು: “ಡ್ರಗ್ಸ್ ಫ್ರಿ ಮಂಗಳೂರು” ಮಾಡುವ ನಿಟ್ಟಿನಲ್ಲಿ ಮಂಗಳೂರು ಸಿಸಿಬಿ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ರಾಜಧಾನಿ ದೆಹಲಿಯಿಂದ ಎಂಡಿಎಂಎ ಮಾದಕವಸ್ತುವನ್ನು ಖರೀದಿಸಿಕೊಂಡು ಬೆಂಗಳೂರಿಗೆ ಸಾಗಾಟ ಮಾಡುತ್ತಿರುವಾಗ ಬೆಳ್ತಂಗಡಿ ಮೂಲದ ಇಬ್ಬರನ್ನು ಬಾಗಲಕೋಟೆ ಜಿಲ್ಲೆಯಲ್ಲಿ ಬಂಧನ ಮಾಡಿ ಅವರಿಂದ ಬೃಹತ್ ಪ್ರಮಾಣದ 5 ಕೆಜಿ 196 ಗ್ರಾಂ ಎಂಡಿಎಂಎ ಮಾದಕವಸ್ತುವನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿರುತ್ತಾರೆ. ಮಂಗಳೂರು ನಗರದ ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಕುಳಾಯಿಗುಡ್ಡೆ ವಾಟರ್ ಟ್ಯಾಂಕ್ ಸಮೀಪದ ಮನೆಯಲ್ಲಿ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಪ್ರಕರಣದ ತನಿಖೆಯನ್ನು ಮುಂದುವರಿಸಿದ್ದ ಮಂಗಳೂರು ನಗರ ಸಿಸಿಬಿ ಪೊಲೀಸರು, ಮತ್ತೊಂದು ಮಹತ್ವದ ಕಾರ್ಯಾಚರಣೆಯಲ್ಲಿ ₹5.20 ಕೋಟಿ ಮೌಲ್ಯದ 5 ಕೆಜಿ 196 ಗ್ರಾಂ ಎಂಡಿಎಂಎ ವಶಪಡಿಸಿಕೊಂಡು ಇಬ್ಬರು ಡ್ರಗ್ ಪೆಡ್ಲರ್‌ಗಳನ್ನು ಬಂಧಿಸಿದ್ದಾರೆ. ಈ ಪ್ರಕರಣದ ಹಿನ್ನೆಲೆ ದಿನಾಂಕ 25-06-2026ರಂದು ಕುಳಾಯಿಗುಡ್ಡೆ ವಾಟರ್ ಟ್ಯಾಂಕ್ ಸಮೀಪದ ಮನೆಯಲ್ಲಿ ಮಾದಕ ವಸ್ತು ಹೊಂದಿ ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ್ದ ಸಿಸಿಬಿ ಪೊಲೀಸರು, ಅಣ್ಣಪ್ಪ…

Read More

ಬೆಳ್ತಂಗಡಿ : ಕುವೆಟ್ಟು ಗ್ರಾಮದ ಶಕ್ತಿನಗರದ ಎಸ್‌.ಎಲ್.ವಿ ಇ- ಪವರ್ ಪ್ರೈವೇಟ್ ಲಿಮಿಟೆಡ್ ರಿಸೀವಿಂಗ್ ಸ್ಟೇಷನ್‌ನಲ್ಲಿ ಜು.೧ ರಂದು ನಡೆದ ಕಳ್ಳತನ ಪ್ರಕರಣ ಸಂಬಂಧ ಸಾವನ್ನಪ್ಪಿದ ಮುಸ್ತಾಕ್ ಜೊತೆಯಲ್ಲಿದ್ದ ಆರೋಪಿಯೊಬ್ಬನನ್ನು ಬಂಧಿಸುವಲ್ಲಿ ಬೆಳ್ತಂಗಡಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬೆಳ್ತಂಗಡಿ ತಾಲೂಕಿನ ಕಾಶಿಪಟ್ಟ ಗ್ರಾಮದ ನಿವಾಸಿ ಇಸುಬು ಎಂಬವರ ಪುತ್ರ ಇಬ್ರಾಹಿಂ ಲತೀಫ್(೩೬ವ) ಎಂಬಾತನನ್ನು ಬೆಳ್ತಂಗಡಿ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಆನಂದ್.ಎಮ್ ನೇತೃತ್ವದ ತಂಡ ಕಾಶಿಪಟ್ಟದಲ್ಲಿ ಜು.೧೪ ರಂದು ಸಂಜೆ ೩ ಗಂಟೆಗೆ ಬಂಧಿಸಿ ವಿಚಾರಣೆ ನಡೆಸಿ ಜು.೧೫ ರಂದು ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು. ನ್ಯಾಯಾಲಯ ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ. ಪ್ರಕರಣದ ವಿವರ: ಕುವೆಟ್ಟು ಗ್ರಾಮದ ಶಕ್ತಿನಗರ ಎಂಬಲ್ಲಿರುವ ಎಸ್.ಎಲ್.ವಿ ಇ ಪವರ್ ಪ್ರೈವೇಟ್ ಲಿಮಿಟೆಡ್ ರಿಸೀವಿಂಗ್ ಸ್ಟೇಷನ್‌ ನಲ್ಲಿ ಜು.೧ ರಂದು ರಿಸೀವಿಂಗ್ ಸ್ಟೇಷನ್‌ ಕಂಪೌಂಡ್‌ನ ಒಳಗೆ ತೊಂಡೆಕಾಯಿ ಬೆಳೆಯಲು ಚಪ್ಪರಕ್ಕೆ ಹಾಕಿದ್ದ ಜಿಐ ಸ್ಟೀಲ್ ವಯರ್ ಗೆ ಅಪರಿಚಿತ ಗಂಡಸು ಕುತ್ತಿಗೆಗೆ ವಯ‌ರ್ ಸಿಕ್ಕಿಕೊಂಡು ಅಥವಾ ಇನ್ನಾವುದೋ ಕಾರಣದಿಂದ ಮೃತಪಟ್ಟ…

Read More

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯ ಹಕ್ಕಿಪಿಕ್ಕಿ ಕಾಲೋನಿಯ ಯುವತಿಯೊಬ್ಬಳನ್ನು ಹಣಕ್ಕಾಗಿ ಪೋಷಕರೇ ಪಶ್ಚಿಮ ಆಫ್ರಿಕಾದ ಸೆನೆಗಲ್ ದೇಶದಲ್ಲಿ ವೇಶ್ಯಾವಾಟಿಕೆ ದಂಧೆಗೆ ಮಾರಾಟ ಮಾಡಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಈ ಸಂಬಂಧ ಕರ್ನಾಟಕ ಹಕ್ಕಿಪಿಕ್ಕಿ ಬುಡಕಟ್ಟು ಸಂಘವು ಚಿಕ್ಕಮಗಳೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ದೂರು ಸಲ್ಲಿಸಿ, ಆರೋಪಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದೆ. ಚಿಕ್ಕಮಗಳೂರು ತಾಲೂಕಿನ ಮಲ್ಲೇನಹಳ್ಳಿ ಸಮೀಪದ ಹಕ್ಕಿಪಿಕ್ಕಿ ಕಾಲೋನಿಯ ನಿವಾಸಿಗಳಾದ ಕ್ರಾಂತಿ ಹಾಗೂ ರಾಜಶೇಖರ್ ಅವರ ಪುತ್ರಿ ನಂದಿತಾ (20) ನಾಲ್ಕು ತಿಂಗಳ ಹಿಂದೆ ಕುಟುಂಬದೊಂದಿಗೆ ಗಿಡಮೂಲಿಕೆ ವ್ಯಾಪಾರದ ನೆಪದಲ್ಲಿ ಪಶ್ಚಿಮ ಆಫ್ರಿಕಾದ ಸೆನೆಗಲ್ ದೇಶಕ್ಕೆ ತೆರಳಿದ್ದರು. 7 ಲಕ್ಷ ರೂ.ಗೆ ವೇಶ್ಯಾವಾಟಿಕೆ ದಂಧೆಗೆ ಮಾರಾಟ! ಸುಮಾರು 10 ದಿನಗಳ ಹಿಂದೆ ನಂದಿತಾಳನ್ನು 7 ಲಕ್ಷ ರೂಪಾಯಿಗೆ ವೇಶ್ಯಾವಾಟಿಕೆ ದಂಧೆಗೆ ಮಾರಾಟ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಬಳಿಕ ನಂದಿತಾ ಕಷ್ಟಪಟ್ಟು ಪರಿಚಯದವರನ್ನು ಸಂಪರ್ಕಿಸಿ, ತನ್ನನ್ನು ಪೋಷಕರೇ ಹಣಕ್ಕಾಗಿ ಮಾರಾಟ ಮಾಡಿದ್ದಾರೆ ಎಂದು ಮಾಹಿತಿ ನೀಡಿದ್ದಳು ಎನ್ನಲಾಗಿದೆ. ನಡೆದಿರುವ ಅನ್ಯಾಯವನ್ನು…

Read More

ಹೈದರಾಬಾದ್: ಹೈದರಾಬಾದ್‌ನ ಸೈಫಾಬಾದ್ ಜಂಕ್ಷನ್-ಲಕ್ಡಿಕಾಪುಲ್ ಮಾರ್ಗದಲ್ಲಿ ದ್ವಿಚಕ್ರ ವಾಹನ ಚಲಾಯಿಸುತ್ತಲೇ ಮದ್ಯಪಾನ ಮಾಡುತ್ತಿದ್ದ ಬೈಕ್ ಸವಾರನ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಬೆನ್ನಲ್ಲೇ ಪೊಲೀಸರು ತ್ವರಿತ ಕ್ರಮ ಕೈಗೊಂಡಿದ್ದಾರೆ. ವೈರಲ್ ಆಗಿದ್ದ ವೀಡಿಯೊದಲ್ಲಿ ಸವಾರನು ಚಲಿಸುತ್ತಿದ್ದ ಬೈಕ್‌ನಲ್ಲೇ ಮದ್ಯ ಸೇವಿಸುತ್ತಿರುವುದು ಕಂಡುಬಂದಿತ್ತು. ಈ ದೃಶ್ಯ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದ್ದು, ರಸ್ತೆ ಸುರಕ್ಷತೆ ಕುರಿತು ಗಂಭೀರ ಆತಂಕ ವ್ಯಕ್ತವಾಗಿತ್ತು. ವೀಡಿಯೊ ವೈರಲ್ ಆದ ಬಳಿಕ ಸೈಫಾಬಾದ್ ಪೊಲೀಸ್ ಠಾಣೆ ಹಾಗೂ ಖೈರತಾಬಾದ್ ಪೊಲೀಸರ ಸಂಯುಕ್ತ ತಂಡ ಪ್ರಕರಣವನ್ನು ಪರಿಶೀಲಿಸಿ, ಸಂಬಂಧಿತ ಸವಾರನನ್ನು ಶೀಘ್ರದಲ್ಲೇ ಪತ್ತೆಹಚ್ಚಿದೆ.ಪೊಲೀಸರು ಆರೋಪಿಯ ವಿರುದ್ಧ ಮದ್ಯಪಾನ ಮಾಡಿ ವಾಹನ ಚಲಾಯಿಸಿದ ಹಾಗೂ ಸಂಚಾರ ನಿಯಮ ಉಲ್ಲಂಘಿಸಿದ ಆರೋಪದಡಿ ಕಾನೂನು ಕ್ರಮ ಕೈಗೊಂಡಿದ್ದಾರೆ. ಈ ಪ್ರಕರಣದ ಮೂಲಕ ಸಾರ್ವಜನಿಕರ ಸುರಕ್ಷತೆಗೆ ಧಕ್ಕೆ ತರುವವರ ವಿರುದ್ಧ ಕಠಿಣ ಕ್ರಮ ಮುಂದುವರಿಯಲಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇದೇ ವೇಳೆ, ಮದ್ಯಪಾನ ಮಾಡಿ ವಾಹನ ಚಲಾಯಿಸುವುದು ಜೀವಕ್ಕೆ ಅಪಾಯಕಾರಿಯಾಗಿದ್ದು, ಸಂಚಾರ ನಿಯಮಗಳನ್ನು ಪಾಲಿಸುವಂತೆ ಸಾರ್ವಜನಿಕರಿಗೆ ಪೊಲೀಸರು ಮನವಿ…

Read More