Author: main-admin

ಮಂಗಳೂರು: ಕುಡಿದ ಮತ್ತಿನಲ್ಲಿ ಲಾರಿ ಚಾಲಕನೋರ್ವ ಎರ್ರಾಬಿರ್ರಿಯಾಗಿ ವಾಹನ ಚಲಾಯಿಸಿದ ಘಟನೆ ಮಂಗಳೂರಿನ‌ ಪಂಪ್‌ವೆಲ್‌ನಲ್ಲಿ ನಡೆದಿದೆ. ಗ್ಯಾಸ್ ಸಿಲಿಂಡರ್ ಹೊತ್ತುಕೊಂಡು ಬರುತ್ತಿದ್ದ ಈ ಲಾರಿಯು ಚಾಲಕನ ನಿರ್ಲಕ್ಷ್ಯ ದಿಂದ ಹಲವು ವಾಹನಗಳಿಗೆ ಢಿಕ್ಕಿ ಹೊಡೆದಿದೆ ಎಂದು ತಿಳಿದು ಬಂದಿದೆ.ಈ ವೇಳೆ ಚಾಲಕನನ್ನು ಸಾರ್ವಜನಿಕರು ತರಾಟೆಗೆ ತೆಗೆದುಕೊಂಡಿದ್ದು, ಸಾರ್ವಜನಿಕರ ವಿರುದ್ಧ ಲಾರಿ ಚಾಲಕ ಎಗರಾಡಿದ್ದಾನೆಂದು ತಿಳಿದು ಬಂದಿದೆ.ಅಲ್ಲದೇ ಸಾರ್ವಜನಿಕರ ಎಚ್ಚರಿಕೆಯನ್ನು ನಿರ್ಲಕ್ಷಿಸಿ ಚಾಲಕ ಮತ್ತೆ ವಾಹನ ಚಲಾಯಿಸಿದ್ದಾನೆಂದು ತಿಳಿದು ಬಂದಿದೆ.

Read More

ಬೆಂಗಳೂರು: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸೋ ಸಲುವಾಗಿ ಮೇಜರ್ ಸರ್ಜರಿ ಮಾಡಿದೆ. 10 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶಿಸಿದೆ. ಈ ಸಂಬಂಧ ಅಧಿಸೂಚನೆ ಹೊರಡಿಸಿರುವಂತ ರಾಜ್ಯ ಸರ್ಕಾರವು, ಹುದ್ದೆಗಾಗಿ ಕಾಯುತ್ತಿರುವ ಗೋವಿಂದ ರೆಡ್ಡಿ, ಐಎಎಸ್ (ಕೆಎನ್: 2013) ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಮತ್ತು ಮುಂದಿನ ಆದೇಶದವರೆಗೆ ಸರ್ಕಾರದ ಜಂಟಿ ಕಾರ್ಯದರ್ಶಿ, ಮೂಲಸೌಕರ್ಯ ಅಭಿವೃದ್ಧಿ, ಬಂದರುಗಳು ಮತ್ತು ಒಳನಾಡಿನ ಜಲ ಸಾರಿಗೆ ಇಲಾಖೆ, ಬೆಂಗಳೂರು ಎಂದು ನೇಮಿಸಲಾಗಿದೆ. ಬೆಂಗಳೂರು ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ನಿರ್ದೇಶಕ ದರ್ಶನ್ ಎಚ್.ವಿ., ಐಎಎಸ್ (ಕೆಎನ್: 2016) ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾಯಿಸಲಾಗಿದೆ ಮತ್ತು ಮುಂದಿನ ಆದೇಶದವರೆಗೆ ಬೆಂಗಳೂರಿನ ವಾಣಿಜ್ಯ ತೆರಿಗೆಗಳ ಹೆಚ್ಚುವರಿ ಆಯುಕ್ತ (ಸೇವಾ ವಿಶ್ಲೇಷಣಾ ವಿಭಾಗ) ಆಗಿ ನೇಮಿಸಲಾಗಿದೆ. ಚಂದ್ರಶೇಖರ ನಾಯಕ ಎಲ್., ಐಎಎಸ್ ಅವರನ್ನು ಸಮಕಾಲೀನ ಹೊಣೆಗಾರಿಕೆಯಿಂದ ಬಿಡುಗಡೆ ಮಾಡಲಾಗಿದೆ. ಮೈಸೂರು ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಗಾಯಿತ್ರಿ ಕೆ.ಎಂ., ಐಎಎಸ್ (ಕೆಎನ್: 2016)…

Read More

ಬ್ರಹ್ಮಾವರ: ಹೆಚ್ಚಿನ ಲಾಭಾಂಶ ನೀಡುವುದಾಗಿ ನಂಬಿಸಿ ಆನ್‌ಲೈನ್ ಮೂಲಕ ಮಹಿಳೆಯೋರ್ವರಿಗೆ ಲಕ್ಷಾಂತರ ರೂ. ವಂಚಿಸಿರುವ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹಂದಾಡಿ ಗ್ರಾಮದ ನಿಶಾ ಮೇರಿ ರೋಚ್ ಎಂಬವರಿಗೆ ಅಪರಿಚಿತರು ಮೊಬೈಲ್‌ನಿಂದ ಸಂದೇಶ ಕಳುಹಿಸಿ, ಹಣ ಹೂಡಿಕೆ ಮಾಡಿದರೆ ಹೆಚ್ಚಿನ ಲಾಭಾಂಶ ನೀಡುವುದಾಗಿ ನಂಬಿಸಿದ್ದರು. ಹಾಗೆ ಇವರು ಜ.23 ಹಾಗೂ 27ರಂದು ಒಟ್ಟು 1,92,750 ರೂ. ಹಣವನ್ನು ಹೂಡಿಕೆ ಮಾಡಿದ್ದರು. ಆದರೆ ಆರೋಪಿಗಳು ಯಾವುದೇ ಲಾಭಾಂಶವಾಗಲೀ ಹೂಡಿಕೆ ಮಾಡಿದ ಹಣವನ್ನಾಗಲಿ ವಾಪಾಸ್ಸು ನೀಡದೇ ಮೋಸ ಮಾಡಿರುವುದಾಗಿ ದೂರಲಾಗಿದೆ.

Read More

ಉಪ್ಪಿನಂಗಡಿ: ತೆಂಗಿನ ಕಾಯಿ ಕೀಳುವ ವೇಳೆ ವಿದ್ಯುತ್ ತಂತಿ ತಗುಲಿ ಕೂಲಿ ಕಾರ್ಮಿಕ ಯುವಕ ಸಾವನಪ್ಪಿದ ಘಟನೆ ಉಪ್ಪಿನಂಗಡಿ ಸಮೀಪದ ಮಠ ಎಂಬಲ್ಲಿ ನಡೆದಿದೆ. ಮೃತಪಟ್ಟ ಯುವಕನನ್ನು ದಾವಣಗೆರೆ ಜಗಳೂರು ತಾಲೂಕು ಪಲ್ಲಗಟ್ಟೆ ನಿವಾಸಿ ವೀರಭದ್ರ (29) ಎಂದು ಗುರುತಿಸಲಾಗಿದೆ. ಕಬ್ಬಿಣದ ರಾಡ್ ನಲ್ಲಿ ತೆಂಗಿನಕಾಯಿ ಕೀಳುವ ಸಂದರ್ಭದಲ್ಲಿ ವಿದ್ಯುತ್ ತಂತಿಗೆ ರಾಡ್ ತಗುಲಿ ಕರೆಂಟ್ ಶಾಕ್ ಹೊಡೆದು ಕಾರ್ಮಿಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತ ವೀರಭದ್ರ ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ಪಲ್ಲಾಗಟ್ಟೆ ಮನೆ ನಿವಾಸಿ ಗುತ್ಯಪ್ಪ ಎಂಬವರ ಮಗನಾಗಿದ್ದು, ತೋಟದ ಕಾರ್ಮಿಕನಾಗಿ ಕುವೆಚ್ಚಾರ್‌ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರೆನ್ನಲಾಗಿದೆ

Read More

ಬೆಳ್ತಂಗಡಿ : ಸುಮಾರು ಹತ್ತು ವರ್ಷಗಳ ಹಿಂದೆ ಬೆಳ್ತಂಗಡಿ ತಾಲೂಕಿನ ನೆರಿಯ ಗ್ರಾಮದ ಕಾಟಾಜೆ ಎಂಬಲ್ಲಿ ನಡೆದ ಕೊಲೆಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರಿನ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ನಾಲ್ಕು ಮಂದಿ ಆರೋಪಿಗಳಿಗೆ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ಶಿಕ್ಷೆಗೊಳಗಾದ ಆರೋಪಿಗಳನ್ನು ಬೆಳ್ತಂಗಡಿ ತಾಲೂಕಿನ ನೆರಿಯ ಗ್ರಾಮದ ಗೋಪಾಲ ಗೌಡ ಯಾನೆ ಗೋಪಾಲಕೃಷ್ಣ ಗೌಡ, ಮಂಗಳೂರಿನ ಕುಡುಪು ಪಾಲ್ಡನೆಯ ಎ.ದಮಯಂತಿ, ಬೆಳ್ತಂಗಡಿ ತಾಲೂಕಿನ ಬಂದಾರು ಗ್ರಾಮದ ವಸಂತ ಗೌಡ ಯಾನೆ ರಾಮಣ್ಣ ಗೌಡ, ನೆರಿಯ ಗ್ರಾಮದ ಪುಷ್ಪಲತಾ ಎಂದು ಗುರುತಿಸಲಾಗಿದೆ. ಆರೋಪಿ ಗೋಪಾಲ ಗೌಡನಿಗೆ 3 ವರ್ಷಗಳ ಕಾಲ ಕಠಿಣ ಸಜೆ ಮತ್ತು 1 ಲಕ್ಷ ರೂ. ದಂಡ ಹಾಗೂ ದಂಡ ತೆರಲು ವಿಫಲವಾದಲ್ಲಿ ಮತ್ತೆ 6 ತಿಂಗಳ ಸಾದಾ ಸಜೆ, ಆರೋಪಿಗಳಾದ ದಮಯಂತಿ, ವಸಂತ ಗೌಡ, ಪುಷ್ಪಲತಾರಿಗೆ 2 ವರ್ಷ ಗಳ ಶಿಕ್ಷೆ ಮತ್ತು ತಲಾ 15 ಸಾವಿರ ರೂ. ದಂಡ ಹಾಗೂ ದಂಡ ತೆರಲು ವಿಫಲವಾದಲ್ಲಿ…

Read More

ಪುತ್ತೂರು: ಆಟೋ ರಿಕ್ಷಾಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ರಿಕ್ಷಾ ಪಲ್ಟಿಯಾಗಿ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ಮೂವರು ಮಹಿಳೆಯರು ಗಾಯಗೊಂಡ ಘಟನೆ ಸರ್ವೆ ಗ್ರಾಮದ ಸೊರಕೆ ಕರ್ಮಿನಡ್ಕ ಎಂಬಲ್ಲಿ ನಡೆದಿದೆ. ಗಾಯಗೊಂಡ ಮಹಿಳೆಯರನ್ನು ಸರೋಜಿನಿ, ವೇದಾವತಿ ಹಾಗೂ ಮಾಲತಿ ಎಂದು ಗುರುತಿಸಲಾಗಿದೆ. ಸರ್ವೆ ಕಡೆಗೆ ಹೋಗುತ್ತಿದ್ದ ಲಾರಿ ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಆಟೋ ರಿಕ್ಷಾಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ರಿಕ್ಷಾ ಪಲ್ಟಿಯಾಗಿದೆ. ಅವಿನಾಶ್ ಎಂಬವರ ರಿಕ್ಷಾದಲ್ಲಿ ಮೂವರು ಮಹಿಳೆಯರು ಹೋಗುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ.ಗಾಯಾಳುಗಳನ್ನು ಪುತ್ತೂರು ಖಾಸಗಿ ಆಸ್ಪತ್ರೆಗೆ ದಾಖಲಾ ಗಿದ್ದು ಸರೋಜಿನಿ ಅವರು ಗಂಭೀರ ಗಾಯಗೊಂದಿರುವುದಾಗಿ ತಿಳಿದು ಬಂದಿದೆ. ರಿಕ್ಷಾ ಚಾಲಕ ಅವಿನಾಶ್ ಅವರಿಗೂ ಸಣ್ಣ ಪುಟ್ಟ ಗಾಯವಾಗಿದ್ದು ಚಿಕಿತ್ಸೆ ಪಡೆದುಕೊಂಡಿದ್ದಾರೆ.

Read More

ಬೆಂಗಳೂರು : ಬೆಲೆ ಏರಿಕೆಯಿಂದ ತತ್ತರಿಸಿರುವ ರಾಜ್ಯದ ಜನರಿಗೆ ಮತ್ತೊಂದು ಶಾಕ್ ಎದುರಾಗಿದೆ. ಶೀಘ್ರವೇ ನಂದಿನಿ ಹಾಲಿನ ದರ ಏರಿಕೆಗೆ ಕೆಎಂಎಫ್ ಪ್ರಸ್ತಾವನೆ ಸಲ್ಲಿಸಿದ್ದು, ಬೆಲೆ ಏರಿಕೆಯ ಅಂತಿಮ ನಿರ್ಧಾರ ಸಿಎಂ ಅಂಗಳದಲ್ಲಿದೆ.ಪ್ರತಿ ಲೀಟರ್ ಹಾಲಿಗೆ 5 ರೂ ಏರಿಕೆ ಮಾಡುವಂತೆ ಸಿಎಂ ಸಿದ್ದರಾಮಯ್ಯಗೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಈಗಾಗಲೇ ಕೆಎಸ್‌ಆರ್‌ಟಿಸಿ, ಬಿಎಂಟಿಸಿ ಬಸ್ ದರ ಹೆಚ್ಚಳ, ಬೆಂಗಳೂರು ಮೆಟ್ರೋ ಟಿಕೆಟ್ ದರ ಏರಿಕೆಯ ಬರೆ ಕಾಯುತ್ತಿರುವ ಸಂದರ್ಭದಲ್ಲೇ ಹಾಲಿನ ದರ ಏರಿಕೆ ವಿಚಾರ ಗಮನಸೆಳೆದಿದೆ. ಕರ್ನಾಟಕ ಹಾಲು ಉತ್ಪಾದಕರ ಮಹಾಮಂಡಳ (ಕೆಎಂಎಫ್‌) ಹಾಲಿನ ದರ ಲೀಟರ್‌ಗೆ 5 ರೂಪಾಯಿ ಏರಿಸುವುದಕ್ಕೆ ಸಿದ್ಧತೆ ನಡೆಸಿದೆ ಎಂದು ಕೆಎಂಎಫ್ ಮೂಲಗಳು ತಿಳಿಸಿವೆ. ಜೂನ್ 2024ರಲ್ಲಿ ಪ್ರತಿ ಪ್ಯಾಕೇಟ್‌ಗೆ 50 ಮಿಲಿ ಲೀ. ಹಾಲು ಹೆಚ್ಚುವರಿಯಾಗಿ ಕೊಟ್ಟು ಮತ್ತೆ 2 ರು.ಏರಿಕೆ ಮಾಡಲಾಗಿತ್ತು. ಇದೀಗ ರಾಜ್ಯದ 16 ಹಾಲು ಒಕ್ಕೂಟಗಳಿಂದ ಹಾಲಿನ ದರವನ್ನು ಪ್ರತಿ ಲೀಟರ್‌ಗೆ 5 ರು.ನಂತೆ ಏರಿಕೆ ಮಾಡಲು ಒತ್ತಡ ಹೆಚ್ಚುತ್ತಿದೆ. ಹೀಗಾಗಿ…

Read More

ಉಡುಪಿ: ನಗರದಲ್ಲಿ 20 ವರ್ಷಗಳ ಹಳೆ ಪ್ರಕರಣದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮಲ್ಪೆ ಠಾಣಾ ಪೊಲೀರು ಬಂಧಿಸಿದ ಘಟನೆ ಸಂಭವಿಸಿದೆ. ಬಂಧಿಂತ ಆರೋಪಿಯನ್ನು ತಮಿಳುನಾಡಿನ ಶಾಂತಿ ಯೋಗರಾಜ್ ಎಂದು ಗುರುತಿಸಲಾಗಿದೆ. ಮಲ್ಪೆ ಬಂದರಿನಲ್ಲಿ ಎರಡು ಬೊಟುಗಳಲ್ಲಿ ನಡೆದ ಹೊಡೆದಾಟಕ್ಕೆ ಸಂಬ0ಧಿಸಿದ ಪ್ರಕರಣದಲ್ಲಿ ಕಳೆದ 20ವರ್ಷಗಳಿಂದ ತಲೆಮರೆಸಿಕೊಂಡಿದ್ದ. ಈ ಪ್ರಕರಣದಲ್ಲಿ ಉಡುಪಿ ನ್ಯಾಯಾಲಯಕ್ಕೆ ಸುಮಾರು 20 ವರ್ಷಗಳಿಂದ ಹಾಜರಾಗದೆ ತಲೆಮರಿಸಿಕೊಂಡಿದ್ದ ಆರೋಪಿಯನ್ನು ಮಲ್ಪೆಪೊಲೀಸ್ ಠಾಣಾ ಸಿಬ್ಬಂದಿ ಹೆಡ್‌ಕಾನ್ಸ್ಟೇಬಲ್ ಸುರೇಶ್ ಕುಮಾರ್ ಮತ್ತು ವಿಶ್ವನಾಥ ಎಚ್. ತಮಿಳುನಾಡಿನ ತಿರುನನ್ವೆಲ್ ಜಿಲ್ಲೆಯ ಇಡಂದಕರೈ ಎಂಬಲ್ಲಿ ಪತ್ತೆ ಹಚ್ಚಿ ಬಂಧಿಸಿದ್ದಾರೆ. ಆರೋಪಿಯನ್ನು ಉಡುಪಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು ನ್ಯಾಯಾಲಯವು ಆರೋಪಿಗೆ ದಂಡ ವಿಧಿಸಿದೆ ಎಂದು ಮಾಹಿತಿ ತಿಳಿದು ಬಂದಿದೆ.

Read More

ಕಾರವಾರ : ದಾಂಡೇಲಿಯ ಲೆನಿನ್ ರಸ್ತೆಯಲ್ಲಿ ವೈದ್ಯಕೀಯ ವೃತ್ತಿಯಲ್ಲಿ ತೊಡಗಿದ ವ್ಯಕ್ತಿಯನ್ನು ಹುಬ್ಬಳ್ಳಿ ಮೂಲದ ನಕಲಿ ಪತ್ರಕರ್ತರು ಬ್ಲಾಕ್ ಮೇಲ್ ಮಾಡಿ ಹಣ ವಸೂಲಿಗೆ ಬೇಡಿಕೆ ಇಟ್ಟ ಘಟನೆಗೆ ಸoಬಂಧಿಸಿದಂತೆ ಮೂವರನ್ನು ದಾಂಡೇಲಿ ಪೋಲಿಸರು ಬಂಧಿಸಿದ್ದಾರೆ. ಈ ಪ್ರಕರಣದಲ್ಲಿ ಹುಬ್ಬಳ್ಳಿಯ ವಿಜಯಶಂಕರ ಮೇತ್ರಾಣಿ , ಧರ್ಮರಾಜ ನಾರಾಯಣ ಕಠಾರೆ, ಸತೀಶ ಭಾಗವನ್ ಕೇದಾರಿ ಹಣದ ಬೇಡಿಕೆಯಿಟ್ಟ ಆರೋಪಿತರಾಗಿದ್ದಾರೆ. ಆರೋಪಿತರು ಲೆನಿನ್ ರಸ್ತೆಯ ಅಶೋಕ ಶಂಬು ಪರಬ್ ಎನ್ನುವವರ ಕ್ಲಿನಿಕ್ ಗೆ ಬಂದು ನೀನು ನಕಲಿ ವೈದ್ಯನಿದ್ದು ನಿನ್ನ ಮೇಲೆ ಸಾಕಷ್ಟು ದೂರುಗಳಿವೆ. ನಾವು ವಿಜಯ – 9 ಎನ್ನುವ ಯು ಟ್ಯೂಬ್ ಚಾನಲ್ ನವರಿದ್ದು, ಈಗ ಚಿಕ್ಕದಾಗಿ ವರದಿ ಮಾಡಿದ್ದೆವೆ. ಉಳಿದ ದೊಡ್ದ ದೊಡ್ಡ ಚಾನಲ್ ಗಳ ಮೂಲಕ ಸುದ್ಧಿ ಪ್ರಸಾರ ಮಾಡಿಸುತ್ತೇವೆ. ಡಿಎಚ್ ಒ ಗೆ ಮಾಹಿತಿ ನೀಡಿ ಕ್ಲಿನಿಕ್ ಬಂದ್ ಮಾಡಿಸುವೆವು. ನಕಲಿ ವೈದ್ಯ ವೃತ್ತಿ ಮಾಡುತ್ತಿರುವ ನಿನ್ನ ಮೇಲೆ ಕ್ರಮ ಜರುಗಿಸುತ್ತೇವೆ ಎಂದು ಹೆದರಿಸಿದ್ದಾರೆ. ನಂತರ 2.5…

Read More

ಅಪ್ರಾಪ್ತ ವಯಸ್ಸಿನ ಮಕ್ಕಳಿಗೆ ವಾಹನ ಚಲಾಯಿಸಲು ಅವಕಾಶ ಕೊಡುವ ಪೋಷಕರ ವಿರುದ್ಧ ಟ್ರಾಫಿಕ್ ಪೊಲೀಸರು ಕಠಿಣ ಕ್ರಮ ಕೈಗೊಳ್ಳುತ್ತಿದ್ದಾರೆ. ಅಪ್ರಾಪ್ತರು ವಾಹನ ಚಲಾಯಿಸಿ ಅಪಘಾಗಳಾಗುವ ಸಾಧ್ಯತೆಯನ್ನು ತಡೆಯುವುದಕ್ಕಾಗಿ ಸಾರಿಗೆ ಇಲಾಖೆಯೂ ಕಠಿಣ ನಿಯಮಗಳನ್ನು ರೂಪಿಸಿದೆ. ಆದಾಗ್ಯೂ, ಅಂಥ ಪ್ರಕರಣಗಳು ವರದಿಯಾಗುತ್ತಿರುತ್ತವೆ. ಇದೀಗ ದಾವಣಗೆರೆಯಲ್ಲಿ, ಮಗಳಿಗೆ ಆಕ್ಟಿವ್ ಹೋಂಡಾ ಚಾಲನೆಗೆ ಅವಕಾಶ ಮಾಡಿಕೊಟ್ಟ ತಾಯಿಗೆ ಸಂಚಾರ ಪೊಲೀಸರು 25 ಸಾವಿರ ರೂ. ದಂಡ ವಿಧಿಸಿದ್ದಾರೆ. ದಾವಣಗೆರೆ ನಗರದ ಗಡಿಯಾರ ಕಂಬದ ಬಳಿ ಅಪ್ರಾಪ್ತ ಬಾಲಕಿಯೊಬ್ಬಳು ಆಕ್ಟಿವ್ ಹೊಂಡಾ ಚಲಾಯಿಸುತ್ತಿದ್ದಳು. ಅದನ್ನು ತಡೆದ ಟ್ರಾಫಿಕ್ ಪೊಲೀಸರು ದಾಖಲೆ ಪರಿಶೀಲನೆ ಮಾಡಿದ್ದಾರೆ. ಇದೇ ವೇಳೆ, ಅದನ್ನು ಚಲಾಯಿಸುತ್ತಿರುವುದು ಅಪ್ರಾಪ್ತ ಬಾಲಕಿ ಎಂಬುದು ದೃಢವಾಗೊದೆ. ನಂತರ ಪೊಲೀಸರು ಆಕೆಯ ತಾಯಿಗೆ 25 ಸಾವಿರ ರೂ. ದಂಡ ವಿಧಿಸಿದ್ದಾರೆ. ದಾವಣಗೆರೆ ದಕ್ಷಿಣ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಸಂಚಾರ ನಿಯಮಗಳಲ್ಲಿ ಏನಿದೆ? ಕರ್ನಾಟಕದಲ್ಲಿ, ಸಣ್ಣ ಮಕ್ಕಳಿಗೆ ವಾಹನ ಚಲಾಯಿಸಲು ಅವಕಾಶ ನೀಡುವುದು ಅಪರಾಧವಾಗಿದೆ. ಅಂಥ ಪೋಷಕರು ಅಥವಾ…

Read More