ಮಂಜೇಶ್ವರ: ನಕಲಿ ಔಷಧಿ ತಯಾರಿಸುವುದರೊಂದಿಗೆ ಚಿಕಿತ್ಸೆಯನ್ನೂ ನೀಡುತ್ತಿದ್ದ ಆರೋಪ ಮೇಲೆ ನಕಲಿ ವೈದ್ಯನನ್ನು ಮಂಜೇಶ್ವರ ಪೊಲೀಸರು ಬಂಧಿಸಿದ್ದಾರೆ. ಬಂಧಿತ ನಕಲಿ ವೈದ್ಯನನ್ನು ಪಾಲಕ್ಕಾಡ್ ಮರ್ಣ್ಣಾಕಾಡ್ ಕಳರಿಕ್ಕಲ್ ನಿವಾಸಿ ಸಿ.ಎಂ. ಜಮಾಲುದ್ದೀನ್ (56) ಎಂದು ಗುರುತಿಸಲಾಗಿದೆ. ಇತನನ್ನು ಮಂಜೇಶ್ವರ ಎಸ್‌ಐ ಕೆ.ವಿ. ಸುಮೇಶ್‌ರಾಜ್ ಉಪ್ಪಳ ಪಚ್ಚಂಪಾರೆಯಿಂದ ಬಂಧಿಸಲಾಗಿದೆ. ಪಚ್ಲಂಪಾರೆಯಲ್ಲಿ ಫ್ರೆಂಡ್ಸ್ ಕ್ಲಬ್‌ನಲ್ಲಿ ಜಮಾಲುದ್ದೀನ್‌ನ ನೇತೃತ್ವದಲ್ಲಿ ಶಿಬಿರ ನಡೆಸಲಾಗಿತ್ತು. ಯಾವುದೇ ಅರ್ಹತೆಯೋ, ದಾಖಲೆ ಪತ್ರಗಳೂ ಇಲ್ಲದೆ ರೋಗಿಗಳನ್ನು ತಪಾಸಣೆ ನಡೆಸಿ ಔಷಧಿ ನೀಡಿದನೆಂಬ ಆರೋಪದಂತೆ ಈತನನ್ನು ಬಂಧಿಸಲಾಗಿದೆ. ನಕಲಿ ವೈದ್ಯ ವೈದ್ಯಕೀಯ ಶಿಬಿರ ನಡೆಸುತ್ತಿರುವ ಬಗ್ಗೆ ಜಿಲ್ಲಾ ಮೆಡಿಕಲ್ ಆಫೀಸರ್ ಕೆ. ಸಂತೋಷ್‌ರಿಗೆ ಮಾಹಿತಿ ಲಭಿಸಿತ್ತು. ಈ ಕುರಿತು ತನಿಖೆ ನಡೆಸಲು ಡೆಪ್ಯುಟಿ ಜಿಲ್ಲಾ ಮೆಡಿಕಲ್ ಆಫೀಸರ್‌ರಿಗೆ ಹೊಣೆಗಾರಿಕೆ ನೀಡಲಾಗಿದೆ. ಜಿಲ್ಲಾ ಮೆಡಿಕಲ್ ಆಫೀಸರ್ ಸ್ಥಳಕ್ಕೆ ಧಾವಿಸಿ ನಡೆಸಿದ ಪರಿಶೀಲನೆಯಲ್ಲಿ ಜಮಾಲುದ್ದೀನ್‌ಗೆ ಯಾವುದೇ ವೈದ್ಯಕೀಯ ಅರ್ಹತೆ ಇಲ್ಲದಿರುವುದು ದೃಢವಾಗಿದೆ. ಅನಂತರ ಡಿಎಂಓ ಮಂಜೇಶ್ವರ ಪೊಲೀಸರಿಗೆ ದೂರು ನೀಡಿದ್ದಾರೆ. ಜಮಾಲುದ್ದೀನ್ ವಿರುದ್ಧ ಬೇರೆಲ್ಲಾದರೂ ಕೇಸುಗಳಿವೆಯೇ ಎಂದು…
Author: main-admin
ಉಡುಪಿ: ಮಲ್ಪೆಯಲ್ಲಿ 7 ಮಂದಿ ಬಾಂಗ್ಲಾ ಅಕ್ರಮ ವಲಸಿಗರನ್ನು ಪೊಲೀಸರು ಬಂಧಿಸಿದ ಬಳಿಕ ಜಿಲ್ಲಾ ಪೊಲೀಸ್ ಇಲಾಖೆ, ಕರಾವಳಿ ಕಾವಲು ಪಡೆ ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿದೆ. ಜಿಲ್ಲೆಯ ವಿವಿಧ ಬಂದರು, ಕಟ್ಟಡ ನಿರ್ಮಾಣ ವಲಯ, ಫಿಶ್‌ಮೀಲ್ ಸಹಿತ ಹೊರ ರಾಜ್ಯದ ಕಾರ್ಮಿಕರು ಹೆಚ್ಚೆಚ್ಚು ಕಾರ್ಯನಿರ್ವಹಿಸುವ ಕಡೆಗಳಲ್ಲಿ ತೀವ್ರ ವಿಚಾರಣೆ ಹಾಗೂ ಮಾಹಿತಿ ಸಂಗ್ರಹ ಆರಂಭಿಸಿದ್ದಾರೆ. ತಮ್ಮ ವ್ಯಾಪ್ತಿಯ ಸಂಸ್ಥೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಹೊರ ರಾಜ್ಯದ ಕಾರ್ಮಿಕರ ವಿವರಗಳನ್ನು ತತ್‌ಕ್ಷಣವೇ ಸಲ್ಲಿಸಬೇಕು. ಎಷ್ಟು ಸಮಯದಿಂದ ಕಾರ್ಯನಿರ್ವಹಿಸುತ್ತಿದ್ದಾರೆ. ಯಾವ ರಾಜ್ಯದಿಂದ ಬಂದಿದ್ದಾರೆ. ಕರೆದುಕೊಂಡು ಬಂದಿರುವ ಏಜೆನ್ಸಿ ಹೀಗೆ ಹಲವು ಮಾಹಿತಿ ಸೇರಿದ ಗೂಗಲ್ ಫಾರ್ಮೆಟ್ ಭರ್ತಿ ಮಾಡಿ ಕಳುಹಿಸುವಂತೆ ಎಲ್ಲ ಸಂಸ್ಥೆಗಳಿಗೆ ಕರಾವಳಿ ಕಾವಲು ಪಡೆಯಿಂದ ಸಂದೇಶ ರವಾನಿಸಾಗಿದೆ ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ. ಹೊರ ರಾಜ್ಯದ ಕಾರ್ಮಿಕರು ಎಷ್ಟಿದ್ದಾರೆ ಎಂಬ ನಿಖರ ಮಾಹಿತಿ ಕಾರ್ಮಿಕ ಇಲಾಖೆಯಲ್ಲಿ ಇಲ್ಲ. ಕಾರ್ಮಿಕ ಇಲಾಖೆ ಕೂಡ ಈ ಬಗ್ಗೆ ಹೆಚ್ಚು ಗಂಭೀರವಾದಂತಿಲ್ಲ. ಕರ್ನಾಟಕ ಹಾಗೂ ಜಿಲ್ಲೆಯ…
ಬೆಂಗಳೂರು ನಗರದ ಕಾಮಾಕ್ಷಿಪಾಳ್ಯ ಠಾಣೆ ಕರ್ತವ್ಯ ನಿರತ ಪೊಲೀಸ್ ಅಧಿಕಾರಿಯೊಬ್ಬರು ಹೃದಯಾಘಾತದಿಂದ ಸಾವಿಗೀಡಾದ ಘಟನೆ ನಡೆದಿದೆ. ಮೃತಪಟ್ಟವರು ಕಾಮಾಕ್ಷಿಪಾಳ್ಯ ಠಾಣೆ ಎಎಸ್‌ಐ ಶಿವಶಂಕರ ಚಾರಿ (45) ಎಂದು ತಿಳಿದು ಬಂದಿದೆ. ಶಿವಶಂಕರ ಅವರು ಗುರುವಾರ ಬೆಳಿಗ್ಗೆ ಎಂದಿನಂತೆ ಕರ್ತವ್ಯಕ್ಕೆ ಹಾಜರಾಗಿದ್ದರು. ಆದರೆ ರೌಂಡ್ಸ್‌ಗೆ ಹೋದಾಗ ಉಸಿರಾಟ ತೊಂದರೆ ಕಾಣಿಸಿಕೊಂಡಿದೆ. ತಕ್ಷಣವೇ ಅವರನ್ನು ಸ್ಥಳೀಯ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಆದರೆ ಹೃದಯಾಘಾತದಿಂದ ಆಸ್ಪತ್ರೆಯಲ್ಲಿ ಪ್ರಾಣ ಬಿಟ್ಟಿದ್ದಾರೆ. ಶಿವಶಂಕರ ಚಾರಿ ಅವರು 1999ರಲ್ಲಿ ಪೊಲೀಸ್ ಇಲಾಖೆಗೆ ಸೇರಿದ್ದರು ಎಂದು ತಿಳಿದು ಬಂದಿದೆ. ಕಳೆದ ಒಂದೂವರೆ ವರ್ಷದಿಂದ ಕಾಮಾಕ್ಷಿಪಾಳ್ಯ ಠಾಣೆಯಲ್ಲಿ ಎಎಸ್‌ಐ ಆಗಿ ಕಾರ್ಯ ನಿರ್ವಹಿಸುತ್ತಿದ್ದರು.
ಮಂಗಳೂರು: ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೆ ಸರಕಾರ ಸಮವಸ್ತ್ರವಾಗಿ ನೀಡಿದ ಸೀರೆ ಹದಿನೈದು ದಿನಗಳಲ್ಲೇ ನೂಲು ಬಿಟ್ಟಿದ್ದು, ಇದು ತೀರಾ ಕಳಪೆಯಾಗಿದೆ ಎಂಬ ದೂರು ಕೇಳಿ ಬರುತ್ತಿದೆ. ರಾಜ್ಯದ ಎಲ್ಲ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೆ “ಸಮಗ್ರ ಶಿಶು ಅಭಿವೃದ್ಧಿ ಯೋಜನೆ’ಯಡಿ (ಐಸಿಡಿಎಸ್) 2024-25ನೇ ಸಾಲಿನಲ್ಲಿ ಸಮವಸ್ತ್ರವಾಗಿ ಸೀರೆ ವಿತರಿಸಿತ್ತು. ಹದಿನೈದು ದಿನವಾದದಷ್ಟೇ ಒಂದು ಅಂಗನವಾಡಿಯ ಕಾರ್ಯಕರ್ತೆ ಹಾಗೂ ಸಹಾಯಕಿಯರಿಗೆ ತಲಾ ಎರಡರಂತೆ ಒಟ್ಟು ನಾಲ್ಕು ಸೀರೆಗಳನ್ನು ವಿತರಿಸಲಾಗಿದೆ. ಮುಂದಿನ ಒಂದು ವರ್ಷದ ತನಕ ದಿನಂಪ್ರತಿ ಈ ಸೀರೆಯನ್ನು ಸಮವಸ್ತ್ರವನ್ನಾಗಿ ಬಳಸಲು ಸೂಚಿಸಲಾಗಿತ್ತು. ಸೆ.15ರಂದು ಸೀರೆ ಬಂದಿದ್ದು, ಅ.2ರಿಂದ ಉಡುವಂತೆ ಸೂಚಿಸಲಾಗಿತ್ತು. ಸೀರೆ ಉಡಲು ಆರಂಭಿಸಿದ ಹದಿನೈದು ದಿನದಲ್ಲೇ ಸೀರೆಯ ಒಂದು ಭಾಗದಲ್ಲಿ ನೂಲು ಬಿಡಲು ಆರಂಭಿಸಿದೆ. ಕೆಲವು ಸೀರೆಗಳಲ್ಲಿ ಕಪ್ಪು ಕಲೆಗಳೂ ಕಂಡು ಬಂದಿವೆ ಎಂದು ದೂರಲಾಗಿದೆ. ಸೀರೆಯ ಬೆಲೆ 400 ರೂಪಾಯಿರಾಜ್ಯದ 69,919 ಅಂಗನವಾಡಿ ಕೇಂದ್ರಗಳಲ್ಲಿ ಕಾರ್ಯನಿರ್ವಹಿಸುತ್ತಿರುವ 1,37,509 ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿರಿಗೆ ಸರಕಾರವೇ ನೇರವಾಗಿ ಸೀರೆ…
ಮಂಗಳೂರು: ನಗರದ ಹೊಸಬೆಟ್ಟು ಬೀಚ್ ರಸ್ತೆಯಲ್ಲಿ ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ಬಿಹಾರ ಮೂಲದ ಅಸಾಮಿಯನ್ನು ಸುರತ್ಕಲ್ ಪೊಲೀಸರು ಬಂಧಿಸಿದ್ದಾರೆ. ಬಿಹಾರ್ ರಾಜ್ಯದ ನಿವಾಸಿ ಸೋನಿ ಕುಮಾರ್(27) ಬಂಧಿತ ಆರೋಪಿ. ಸುರತ್ಕಲ್ ಠಾಣಾ ಪೊಲೀಸರು ಹೊಸಬೆಟ್ಟು ಬಳಿ ಬೀಚ್ ರಸ್ತೆಯಲ್ಲಿ ಗಸ್ತು ತಿರುಗಾಡುತ್ತಿದ್ದರು. ಈ ವೇಳೆ ಹೆಗಲಿನಲ್ಲಿ ಬ್ಯಾಗ್ ಹಾಕಿಕೊಂಡು ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಯುವಕನೋರ್ವನು ಪೊಲಿಸ್ ಜೀಪ್ ಅನ್ನು ಕಂಡ ತಕ್ಷಣ ಓಡಲು ಯತ್ನಿಸಿದ್ದಾನೆ. ಆತನನ್ನು ಪೊಲೀಸರು ಹಿಡಿದು ವಿಚಾರಿಸಿದರೆ, ಆತನು ಹಿಂದಿ ಭಾಷೆಯಲ್ಲಿ ಮಾತನಾಡಿದ್ದಾನೆ. ಓಡಿ ಹೋಗಲು ಕಾರಣವೇನು ಕೇಳಿದಾಗ ಮಾಹಿತಿ ನೀಡಲು ತಡವರಿಸಿದ್ದಾನೆ. ತಕ್ಷಣ ಕೂಲಂಕುಶವಾಗಿ ವಿಚಾರಿಸಿದಾಗ ತನ್ನ ಬ್ಯಾಗ್‌ನಲ್ಲಿ ಗಾಂಜಾ ಇರುವುದಾಗಿ ತಿಳಿಸಿದ್ದಾನೆ. ತಾನು ಬಿಹಾರ ರಾಜ್ಯದಿಂದ ಗಾಂಜಾವನ್ನು ಯಾವುದೇ ಪರವಾನಿಗೆ ಇಲ್ಲದೆ ಅಕ್ರಮವಾಗಿ ಮಾರಾಟ ಮಾಡಲು ತಂದಿರುವುದಾಗಿ ತಿಳಿಸಿದ್ದಾನೆ. ತಕ್ಷಣ ಆತನನ್ನು ವಶಕ್ಕೆ ತೆಗೆದುಕೊಂಡ ಸುರತ್ಕಲ್ ಪೊಲೀಸರು ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಆರೋಪಿಯಿಂದ ಕೃತ್ಯಕ್ಕೆ ಉಪಯೋಗಿಸಿದ 30,000 ರೂ. ಮೌಲ್ಯದ ಸುಮಾರು 1.5 ಕೆಜಿ ಗಾಂಜಾ, 15,000…
ಉಡುಪಿ: ಕೆಮ್ಮಣ್ಣು ಪಡುತೋನ್ಸೆಯ ಕುದುರು ನೆಕ್ಸ್ಟ್ ಹೊಳೆಯಲ್ಲಿ ವ್ಯಕ್ತಿಯ ಶವ ಪತ್ತೆಯಾಗಿದೆ. ಮೃತ ವ್ಯಕ್ತಿಯನ್ನು ಆತ್ರಾಡಿ ನಿವಾಸಿ ಬಾಲು ನಾಯ್ಕ್ ಎಂದು ಗುರುತಿಸಲಾಗಿದೆ. ಹೊಳೆಯಿಂದ ಶವವನ್ನು ಮೇಲೆತ್ತಲು ಅಲ್ವಿನ್, ಹರಿದಾಸ್, ನಿಖಿಲ್ ಹಾಗೂ ಸತ್ಯ ಅವರು ಸಹಕರಿಸಿದರು. ಮಲ್ಪೆ ಪೊಲೀಸ್ ಠಾಣೆಯ ಎ ಎಸ್ ಐ ವಿಶ್ವನಾಥ್, ನಾಗರಾಜ್ ಸ್ಥಳಕ್ಕೆ ಬಂದು ಮಹಜರು ಪ್ರಕ್ರಿಯೆ ನಡೆಸಿದರು. ಸಮಾಜ ಸೇವಕ ನಿತ್ಯಾನಂದ ಒಳಕಾಡು ಅವರು ಶವವನ್ನು ಜಿಲ್ಲಾಸ್ಪತ್ರೆಗೆ ಸಾಗಿಸುವಲ್ಲಿ ಇಲಾಖೆಗೆ ನೆರವಾದರು.
ಮಂಗಳೂರು : ಹಿಂದೂ ಧರ್ಮದಲ್ಲಿ ಒಂದು ಸಮುದಾಯದಲ್ಲಿ 1 ಲಕ್ಷಕ್ಕೂ ಹೆಚ್ಚು ಜನ ಹೆಣ್ಣು ಮಕ್ಕಳು ವೇಶ್ಯೆಯರಿದ್ದಾರೆ ಎಂದು ದಕ್ಷಿಣ ಕನ್ನಡ ಜಿಲ್ಲೆಯ ಪಂಜ ಉಪವಲಯ ಅರಣ್ಯಾಧಿಕಾರಿ ಸಂಜೀವ ಪೂಜಾರಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಹಿಂದೂ ಸಂಘಟನೆಯ ಕಾರ್ಯಕರ್ತ ಸುರೇಶ್ ಎಂಬುವರ ಜೊತೆ ಪಂಜ ಉಪವಲಯ ಅರಣ್ಯಾಧಿಕಾರಿ ಸಂಜೀವ ಪೂಜಾರಿ ದೂರವಾಣಿ ಮುಖಾಂತರ ಮಾತನಾಡುವಾಗ ಈ ಒಂದು ಹೇಳಿಕೆ ನೀಡಿದ್ದು ಅಧಿಕಾರಿಯ ಈ ಹೇಳಿಕೆಗೆ ಹಿಂದೂಪರ ಸಂಘಟನೆಗಳು ತೀವ್ರ ಆಕ್ರೋಶ ಹೊರಹಾಕಿವೆ. ದೂರವಾಣಿಯಲ್ಲಿ ಮಾತನಾಡುವಾಗ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಂದು ಸಮಾಜಕ್ಕೆ ಸೇರಿದ ಒಂದು ಲಕ್ಷ ಹುಡುಗಿಯರು ವೇಶ್ಯೆಯಾಗಿದ್ದಾರೆ. ಇದಕ್ಕೆ ನನ್ನ ಬಳಿ 10,000 ದಾಖಲೆಗಳಿವೆ. ಹಿಂದುತ್ವದ ಹುಡುಗರು ವೇಶ್ಯೆಯರನ್ನಾಗಿ ಮಾಡಿದ್ದಾರೆ. ಒಂದು ಸಮಾಜದ ಒಂದು ಲಕ್ಷ ಹುಡುಗಿಯರು ವೇಶ್ಯೆಯರಾಗಲು ಹಿಂದೂ ಸಂಘಟನೆಯ ಯುವಕರು ಕಾರಣರಾಗಿದ್ದಾರೆ. ಭಜನೆ ಮಾಡಿದ ಹಿಂದೂ ಹುಡುಗಿಯರನ್ನು ಮರದ ಅಡಿಯಲ್ಲಿ ಮಲಗಿಸಿದವರು ಹಿಂದೂ ಹುಡುಗರು ಎಂದು ಅಶ್ಲೀಲವಾಗಿ ಮಾತನಾಡಿದ್ದಾರೆ. ಹಿಂದೂ ಹೆಣ್ಣುಮಕ್ಕಳ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದಾನೆ. ಈತನ…
ಬೆಂಗಳೂರು : ರಾಜ್ಯ ಸರ್ಕಾರವು ಯಜಮಾನಿಯರಿಗೆ ಸಿಹಿಸುದ್ದಿ ನೀಡಿದ್ದು, ಗೃಹಲಕ್ಷ್ಮಿ ಯೋಜನೆಯಡಿ ಮಹಿಳೆಯರ ಖಾತೆಗೆ ಎರಡು ತಿಂಗಳ ಹಣ ವರ್ಗಾವಣೆಯಾಗಿದೆ. ಈ ಮೂರು ತಿಂಗಳ ಬಳಿಕ ಗೃಹಲಕ್ಷ್ಮಿ ಹಣ ಫಲಾನುಭವಿಗಳ ಖಾತೆ ಸೇರಿದೆ. ಜುಲೈ, ಆಗಸ್ಟ್ ತಿಂಗಳ ಗೃಹಲಕ್ಷ್ಮೀ ಯೋಜನೆಯ ಹಣವು ತಾಂತ್ರಿಕ ಕಾರಣದಿಂದ ಯಜಮಾನಿಯರ ಖಾತೆಗೆ ಜಮಾ ಆಗಿರಲಿಲ್ಲ. ಯಜಮಾನಿಯರಿಗೆ ಇದೀಗ ಎರಡು ಕಂತುಗಳ ಗೃಹಲಕ್ಷ್ಮಿ ಹಣ ಫಲಾನುಭವಿಗಳ ಖಾತೆಗೆ ಜಮಾ ಆಗಿದೆ. ರಾಜ್ಯ ಸರ್ಕಾರವು ಗೃಹಲಕ್ಷ್ಮಿ ಯೋಜನೆಯಡಿ ಜುಲೈ, ಆಗಸ್ಟ್ ತಿಂಗಳ 2000 ರೂ. ವರ್ಗಾವಣೆ ಆಗಿದ್ದು, ಸದ್ಯ ಬಾಕಿ ಇರುವ ಸೆಪ್ಟೆಂಬರ್ ತಿಂಗಳ ಹಣ ಶೀಘ್ರದಲ್ಲೇ ಬಿಡುಗಡೆ ಆಗಲಿದೆ ಎನ್ನಲಾಗಿದೆ. ಗೃಹಲಕ್ಷ್ಮಿ ಹಣ ಸ್ಟೇಟಸ್ ತಿಳಿದುಕೊಳ್ಳುವ ವಿಧಾನ ಹೀಗಿದೆ ನೋಡಿ ಮೊದಲನೆಯದಾಗಿ ನಿಮ್ಮ ಮೊಬೈಲ್ ನಲ್ಲಿ ಪ್ಲೇ ಸ್ಟೋರ್ ಓಪನ್ ಮಾಡಿಕೊಳ್ಳಿಪ್ಲೇ ಸ್ಟೋರ್ ನಲ್ಲಿ DBT Karnataka ಅಪ್ಲಿಕೇಶನ್ ಡೌನ್ಲೋಡ್ ಮಾಡಿಕೊಳ್ಳಿಡೌನ್ಲೋಡ್ ಮಾಡಿದ ಅಪ್ಲಿಕೇಶನ್ ಓಪನ್ ಮಾಡಿಕೊಳ್ಳಿನಂತರ ನಿಮ್ಮ ಆಧಾರ್ ಕಾರ್ಡ್ ನಂಬರ್ ಮತ್ತು ಮೊಬೈಲ್ ನಂಬರ್…
ಕಾರ್ಕಳ: ಕಾರ್ಕಳದಲ್ಲಿ ನೆಲೆಸಿದ್ದ ಇನ್ನಿಬ್ಬರು ಅಕ್ರಮ ಬಾಂಗ್ಲಾ ವಲಸೆಗಾರರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ. ಅವರನ್ನು ಕಾರ್ಕಳ ಪೊಲೀಸರು ತೀವ್ರ ವಿಚಾರಣೆ ನಡೆಯುತ್ತಿದ್ದು, ಗುರುವಾರ ಅಧಿಕೃತವಾಗಿ ಬಂಧಿಸುವ ಸಾಧ್ಯತೆ ಇದೆ. ಕಳೆದ ವಾರ ಮಲ್ಪೆ ಸಮೀಪದ ತೋನ್ಸೆ ಗ್ರಾಮದಲ್ಲಿ ಅಕ್ರಮವಾಗಿ ನೆಲೆಸಿದ್ದ 7 ಮಂದಿ ಬಾಂಗ್ಲಾ ವಲಸಿಗರನ್ನು ಬಂಧಿಸಲಾಗಿತ್ತು. ಓರ್ವನನ್ನು ಮಂಗಳೂರಿನ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿತ್ತು. ಜಿಲ್ಲೆಯಲ್ಲಿ ಇನ್ನೂ ಸಾಕಷ್ಟು ಮಂದಿ ಅಕ್ರಮ ವಲಸೆಗಾರರಿರುವ ಮಾಹಿತಿ ಬಂಧಿತರಿಂದ ಸಿಕ್ಕಿದ್ದು, ಅದರಂತೆ ತೀವ್ರ ವಿಚಾರಣೆ ನಡೆಯುತ್ತಿದೆ. ಕಾರ್ಕಳದಲ್ಲಿ ವಶಕ್ಕೆ ಪಡೆದವರನ್ನು ಗುರುವಾರ ಮಹಜರು ನಡೆಸಿ ಬಂಧಿಸಲಾಗುವುದು ಎಂದು ಎಸ್ಪಿ ಡಾ। ಅರುಣ್ ಕೆ.ತಿಳಿಸಿದ್ದಾರೆ.
ವೀಳ್ಯದೆಲೆಯು ವಿಟಮಿನ್ ಸಿ , ಥಯಾಮಿನ್, ನಿಯಾಸಿನ್, ರೈಬೋಫ್ಲಾವಿನ್, ಕ್ಯಾರೋಟಿನ್ ಮತ್ತು ಕ್ಯಾಲ್ಸಿಯಂನ ಉತ್ತಮ ಮೂಲವಾಗಿದ್ದು, ಭೋಜನದ ಬಳಿಕ ವೀಳ್ಯದೆಲೆ ತಿನ್ನುವುದರಿಂದ ಆರೋಗ್ಯಕ್ಕೆ ಹಲವು ಅದ್ಭುತ ಪ್ರಯೋಜನಗಳಿವೆ. ಆದರೆ ವೀಳ್ಯದೆಲೆಯನ್ನು ಸಣ್ಣದೊಂದಿಗೆ ತಿನ್ನುವುದಕ್ಕಿಂತ ಲವಂಗದ ಜೊತೆ ಸೇವಿಸಿದರೆ ಎಷ್ಟೊಂದು ಆರೋಗ್ಯ ಪ್ರಯೋಜನಗಳಿವೆ ಗೊತ್ತಾ.? ಹೊಟ್ಟೆಯ ಹುಣ್ಣು :ಗ್ಯಾಸ್ಟ್ರಿಕ್ ಲೋಳೆಯ ಉತ್ಪಾದನೆ ಹೆಚ್ಚಾದಾಗ ಹೊಟ್ಟೆಯ ಹುಣ್ಣು ಗುಣವಾಗಲು ಸಹಾಯ ಮಾಡುತ್ತದೆ. ವೀಳ್ಯದೆಲೆ ಮತ್ತು ಲವಂಗವನ್ನು ಸೇವಿಸಿದಾಗ ಗ್ಯಾಸ್ಟಿಕ್ ಲೋಳೆಯ ಪ್ರಮಾಣ ಹೆಚ್ಚಾಗುತ್ತದೆ. ಇದು ಹೊಟ್ಟೆ ಹುಣ್ಣಿನಿಂದ ಉಮಶಮನ ನೀಡಬಹುದು. ತಲೆನೋವಿಗೆ ಮನೆಮದ್ದು :ತಜ್ಞರ ಪ್ರಕಾರ ವೀಳ್ಯದೆಲೆ ತಲೆನೋವಿಗೆ ಮನೆಮದ್ದಾಗಿದೆ. ಇದನ್ನು ಲವಂಗದ ಜೊತೆಗೆ ತಿನ್ನುವುದರಿಂದ ಮೈಗ್ರೇನ್‌ನಿಂದ ಸ್ವಲ್ಪ ಮಟ್ಟಿಗೆ ಉಪಶಮನ ದೊರೆಯಬಹುದು. ಉಸಿರಾಟದ ತೊಂದರೆ :ಲವಂಗ ಮತ್ತು ವೀಳ್ಯದೆಲೆ ಉಸಿರಾಟದ ತೊಂದರೆಯನ್ನು ಕಡಿಮೆ ಮಾಡುತ್ತವೆ. ಇದರ ಆಂಟಿಮೈಕ್ರೋಬಿಯಲ್ ಗುಣಲಕ್ಷಣಗಳು ಕೆಮ್ಮು, ಆಸ್ತಮಾ ಮತ್ತು ಬ್ರಾಂಕೈಟಿಸ್‌ನಂತಹ ಉಸಿರಾಟದ ತೊಂದರೆಗಳಿಂದ ಪರಿಹಾರ ನೀಡಲು ನೆರವಾಗುತ್ತದೆ. ಸಮೃದ್ಧ ಆಂಟಿಆಕ್ಸಿಡೆಂಟ್‌ಗಳು :ಆಂಟಿಆಕ್ಸಿಡೆಂಟ್‌ಗಳಲ್ಲಿ ಸಮೃದ್ಧವಾಗಿರುವ ವೀಳ್ಯದೆಲೆ ಮತ್ತು ಲವಂಗ ಒಟ್ಟಿಗೆ…










