Author: main-admin

ಉಡುಪಿ : ಕಾರ್ಕಳದಲ್ಲಿ ನೆಲೆಸಿದ್ದ ಇನ್ನಿಬ್ಬರು ಅಕ್ರಮ ಬಾಂಗ್ಲಾ ವಲಸೆಗಾರರನ್ನು ಕಾರ್ಕಳ ಪೊಲೀಸರು ಬುಧವಾರ ವಶಕ್ಕೆ ತೆಗೆದುಕೊಂಡಿದ್ದಾರೆ. ಕಾರ್ಕಳ ಪೊಲೀಸರಿಂದ ಅವರ ವಿಚಾರಣೆ ನಡೆಯುತ್ತಿದ್ದು ಇಂದು ಅವರನ್ನು ಅಧಿಕೃತವಾಗಿ ಬಂಧಿಸುವ ಸಾಧ್ಯತೆ ಇದೆ. ಕಳೆದ ವಾರ ಮಲ್ಪೆ ಸಮೀಪದ ತೊನ್ನೆ ಗ್ರಾಮದಲ್ಲಿ 8 ಮಂದಿ ಬಾಂಗ್ಲಾ ದೇಶದಿಂದ ಅಕ್ರಮವಾಗಿ ಬಂದ 8 ಮಂದಿ ಯುವಕರನ್ನು ಬಂಧಿಸಲಾಗಿತ್ತು, ಇಲ್ಲಿ ಕಟ್ಟಡ ಕಾರ್ಮಿಕ ಸೋಗಿನಲ್ಲಿ ಬಾಡಿಗೆ ಮನೆಯಲ್ಲಿ ನೆಲೆಸಿದ್ದ ಅವರ ಬಳಿ ನಕಲಿ ಆಧಾರ್ ಕಾರ್ಡ್, ಅದರ ಆಧಾರದಲ್ಲಿ ಖರೀದಿಸಿದ ಮೊಬೈಲ್‌ಗಳು ಪತ್ತೆಯಾಗಿದ್ದವು. ಒಬ್ಬಾತನಿಂದ ನಕಲಿ ಪಾಸ್‌ಪೋರ್ಟ್‌ನ್ನು ಕೂಡ ವಶಪಡಿಸಿಕೊಳ್ಳಲಾಗಿತ್ತು. ಬಂಧಿತರಿಂದ ಜಿಲ್ಲೆಯಲ್ಲಿ ಇನ್ನೂ ಸಾಕಷ್ಟು ಮಂದಿ ಅಕ್ರಮ ವಲಸೆಗಾರರಿರುವುದು ಪತ್ತೆಯಾಗಿದ್ದು ಅದರಂತೆ ಕಾರ್ಕಳದಲ್ಲಿ ನೆಲೆಸಿದ್ದ ಇಬ್ಬರನ್ನು ವಿಚಾರಣೆಗೆ ಒಳಪಡಿಸಲಾಗಿದೆ ಮಹಜರು ನಡೆಸಿ ಬಂಧನಕ್ಕೊಳಪಡಿಸಲಾಗುತ್ತದೆ ಎಂದು ಎಸ್ಪಿ ಡಾ. ಅರುಣ್ ಕೆ. ತಿಳಿಸಿದ್ದಾರೆ.

Read More

ಬೆಂಗಳೂರು: ಪೊಲೀಸ್ ವಶದಲ್ಲಿರುವ ಆರೋಪಿಗಳ ನಿತ್ಯದ ಆಹಾರ ಭತ್ಯೆೆಯನ್ನು 75 ರೂ.ನಿಂದ 150 ರೂ.ಗೆ ಏರಿಕೆ ಮಾಡಿ ಪೊಲೀಸ್ ಇಲಾಖೆ ಆದೇಶ ಹೊರಡಿಸಿದೆ. ಪೊಲೀಸರು ಕಳ್ಳತನ, ಸುಲಿಗೆ ಸೇರಿ ವಿವಿಧ ಅಪರಾಧ ಪ್ರಕರಣಗಳಲ್ಲಿ ಬಂಧಿಸುತ್ತಿದ್ದ ಆರೋಪಿಗಳನ್ನು ಕೋರ್ಟ್ ಅನುಮತಿ ಪಡೆದು ಪೊಲೀಸ್ ಕಸ್ಟಡಿ ಪಡೆಯುತ್ತಾರೆ. ಅಂತಹ ಆರೋಪಿಗಳ ಪ್ರತಿ ನಿತ್ಯದ ಆಹಾರ ಭತ್ಯೆೆಗೆ 75 ರೂ. ಅನ್ನು ಇಲಾಖೆ ನೀಡುತ್ತಿತ್ತು. ಆದರೆ, ಇತ್ತೀಚಿಗೆ ತರಕಾರಿ ಹಾಗೂ ಇತರೆ ಆಹಾರ ಪದಾರ್ಥಗಳ ದರಗಳು ದುಬಾರಿಯಾಗಿರುವ ಹಿನ್ನೆೆಲೆಯಲ್ಲಿ 75 ರೂ. ವೆಚ್ಚದಲ್ಲಿ ಆರೋಪಿಗಳಿಗೆ ಆಹಾರ ಒದಗಿಸುವುದು ಕಷ್ಟಕರವಾಗಿದೆ. ಠಾಣಾಧಿಕಾರಿಗಳೇ ತಮ್ಮ ಸ್ವಂತ ಹಣದಿಂದ ಈ ವೆಚ್ಚವನ್ನು ಭರಿಸುತ್ತಿದ್ದಾರೆ. ಜತೆಗೆ ಪ್ರಕರಣವನ್ನು ಪತ್ತೆೆ ಹಚ್ಚುವ ಕಾರ್ಯದಲ್ಲಿ ತೊಡಕು ಉಂಟಾಗಿರುವುದರಿಂದ ಪೊಲೀಸ್ ವಶದಲ್ಲಿರುವ ಆರೋಪಿಗಳಿಗೆ ಉತ್ತಮ ಆಹಾರವನ್ನು ಒದಗಿಸಬೇಕಾಗಿದೆ. ಹೀಗಾಗಿ 75 ರೂ.ನಿಂದ 300 ರೂ.ಗಳಿಗೆ ಹೆಚ್ಚಿಸಬೇಕೆಂದು ಕಳೆದ ವರ್ಷ ಸರ್ಕಾರಕ್ಕೆೆ ಪೊಲೀಸ್ ಇಲಾಖೆಯಿಂದ ಪತ್ರ ಬರೆಯಲಾಗಿತ್ತು. ಇದೀಗ ಸರ್ಕಾರದ ಸೂಚನೆ ಮೇರೆಗೆ 75 ರೂ.ನಿಂದ 150…

Read More

ಮಂಗಳೂರು: ನಗರದ ಸ್ಟೇಟ್‌ಬ್ಯಾಂಕ್ ಬಳಿಯ ಸರ್ವಿಸ್ ಬಸ್ ನಿಲ್ದಾಣದಲ್ಲಿ ಕಂಡೆಕ್ಟರ್ ಒಬ್ಬರು ತಲೆಗೆ ಗಂಭೀರವಾಗಿ ಯಾರೋ ಹೊಡೆದು ಕೊಲೆಗೈದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಈ ಬಗ್ಗೆ ಪಾಂಡೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಜ್ಪೆ ನಿವಾಸಿ ರಾಜೇಶ್ (31) ಮೃತಪಟ್ಟವರು. ರಾಜೇಶ್ ಸರ್ವಿಸ್ ಬಸ್ ನಿಲ್ದಾಣದಲ್ಲಿ ಬಸ್‌ ತೊಳೆಯುವುದು, ಕೆಲವೊಮ್ಮೆ ಕಂಡೆಕ್ಟರ್ ಆಗಿಯೂ ಕರ್ತವ್ಯ ನಿರ್ವಹಿಸುತ್ತಿದ್ದರು. ಇವರು ಬಸ್ ನಿಲ್ದಾಣದಲ್ಲಿಯೇ ಉಳಿದುಕೊಳ್ಳುತ್ತಿದ್ದರು ಎನ್ನಲಾಗಿದೆ. ಸೋಮವಾರ ರಾತ್ರಿ 8.30ರ ಸುಮಾರಿಗೆ ಬಸ್‌ ನಿಲ್ದಾಣದ ಬಳಿ ರಸ್ತೆ ಬದಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಮೃತದೇಹ ಕಿವಿಯಲ್ಲಿ ರಕ್ತ ಒಸರುತ್ತಿದ್ದು, ತಲೆಯ ಭಾಗಕ್ಕೆ ಹೊಡೆದಿರುವಂತೆ ಕಂಡುಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತಪಟ್ಟ ವ್ಯಕ್ತಿಯ ಸಹೋದರಿ ನೀಡಿರುವ ದೂರಿನಂತೆ ಪ್ರಕರಣ ದಾಖಲಾಗಿದೆ. ಸಾವಿನ ಬಗ್ಗೆ ದೂರಿನಲ್ಲಿ ಸಂಶಯ ವ್ಯಕ್ತಪಡಿಸಿದ್ದಾಗಿ ಪೊಲೀಸರು ತಿಳಿಸಿದ್ದಾರೆ.

Read More

ಉಪ್ಪಿನಂಗಡಿ: ಉಪ್ಪಿನಂಗಡಿಯ ಪೆರಿಯಡ್ಕ ಪ್ರದೇಶದಲ್ಲಿ ತಡರಾತ್ರಿ ಯುವಕನೋರ್ವನ ಕುಕೃತ್ಯ ಹೆಚ್ಚುತ್ತಲಿದ್ದು, ಆತನ ಕುಚೇಷ್ಟೆ, ಚಲನವಲನದ ಬಗ್ಗೆ ಸ್ಥಳೀಯ ಸಿಸಿ ಟಿವಿ ಕೆಮರಾದಲ್ಲಿ ದಾಖಲಾಗಿದೆ. ಕೆಲವು ಸಮಯಗಳ ಹಿಂದೆ ಮನೆಗೆ ನುಗ್ಗುವ ವ್ಯಕ್ತಿ ಮಹಿಳೆಯರು ಮಲಗುವ ಕೋಣೆಯನ್ನು ಪ್ರವೇಶಿಸಿರುವುದು, ಎಚ್ಚರಗೊಂಡಾಗ ಓಡಿ ತಪ್ಪಿಸಿಕೊಂಡಿರುವುದು, ಯುವತಿಯೋರ್ವಳು ಸ್ನಾನ ಮಾಡುತ್ತಿದ್ದ ವೇಳೆ ಕಿಟಕಿಯಿಂದ ಇಣುಕಲು ಯತ್ನಿಸಿದ್ದ ವ್ಯಕ್ತಿ, ಅನಂತರ ಆ ವ್ಯಕ್ತಿ ಸ್ಥಳೀಯ ವ್ಯಾಪಾರಿ ಅಬ್ದುಲ್‌ ರಹಿಮಾನ್‌ ಪೊಲೀಸರ ವಶವಾಗುತ್ತಾನೆ. ಬಳಿಕ ಇಲ್ಲಿನ ಜನ ನಿಟ್ಟುಸಿರು ಬಿಟ್ಟಿದ್ದರು. ಈ ಮಧ್ಯೆ ಮತ್ತೆ ಇಂತಹದ್ದೇ ಕೃತ್ಯಗಳು ಸಂಭವಿಸಲು ಪ್ರಾರಂಭವಾಗಿದ್ದು, ಯುವಕನೋರ್ವ ನಸುಕಿನ 3.30ರ ಸುಮಾರಿಗೆ ಪೆರಿಯಡ್ಕದ ಜನತಾ ಕಾಲನಿಯ ಮನೆಯೊಂದಕ್ಕೆ ನುಗ್ಗಲು ಯತ್ನಿಸಿದ ಪ್ರಕರಣದಲ್ಲಿ ಮನೆಯ ಮಂದಿ ಎಚ್ಚರಗೊಂಡಾಗ ಆತ ಬೇಲಿ ಹಾರಿ ಅಡಗಿ ಕುಳಿತುಕೊಳ್ಳುವುದು. ಬೆನ್ನಟ್ಟಿ ಬಂದ ವ್ಯಕ್ತಿಯಿಂದ ತಪ್ಪಿಸಿಕೊಳ್ಳಲು ನಾನಾ ಕಸರತ್ತುಗಳನ್ನು ಮಾಡುತ್ತಿರುವುದು ಸಮೀಪದ ಸಿಸಿ ಕೆಮರಾದಲ್ಲಿ ಸೆರೆಯಾಗಿದೆ. ಮೌಖೀಕ ದೂರು ಬಂದಿದೆಪ್ರಕರಣಕ್ಕೆ ಸಂಬಂಧಿಸಿ ಉಪ್ಪಿನಂಗಡಿ ಸಬ್‌ ಇನ್ಸ್‌ಪೆಕ್ಟರ್‌ ಅವಿನಾಶ್‌ ಅವರು ಮಾತನಾಡಿ, ಯಾರೂ ಅಧಿಕೃತ…

Read More

ಚಿತ್ರದುರ್ಗ: ನಟ ದರ್ಶನ್ ಅಂಡ್ ಗ್ಯಾಂಗ್ ನಿಂದ ಬರ್ಬರವಾಗಿ ಹತ್ಯೆಯಾಗಿದ್ದ ಚಿತ್ರದುರ್ಗದ ರೇಣುಕಾಸ್ವಾಮಿಗೆ ಗಂಡು ಮಗು ಜನನವಾಗಿದೆ. ನಗರದ ಕೀರ್ತಿ ಆಸ್ಪತ್ರೆಯಲ್ಲಿ ರೇಣುಕಾಸ್ವಾಮಿ ಪತ್ನಿ ಸಹನ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ರೇಣುಕಾಸ್ವಾಮಿ ಕೊಲೆಯಾದ ಸಂಧರ್ಭದಲ್ಲಿ ಪತ್ನಿ ಸಹನ ಗರ್ಭಿಣಿಯಾಗಿದ್ದರು. ತಡರಾತ್ರಿ ಆಸ್ಪತ್ರೆಗೆ ದಾಖಲಾಗಿದ್ದ ಪತ್ನಿಸಹನಾ ಅವರಿಗೆ ಅ. 16 ರಂದು ಬುಧವಾರ ಬೆಳಗಿನ ಜಾವ 5 ಗಂಟೆಗೆ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ತಾಯಿ -ಮಗು ಆರೋಗ್ಯವಾಗಿದ್ದಾರೆ ಅಲ್ಲದೆ ಕೀರ್ತಿ ಆಸ್ಪತ್ರೆಯಿಂದ ಡಾ.ಮಲ್ಲಿಕಾರ್ಜುನ್ ಸಂಪೂರ್ಣ ಉಚಿತ ಚಿಕಿತ್ಸೆ ನೀಡಿದ್ದಾರೆ ಎಂದು ಕುಟುಂಬಸ್ಥರು ಮಾಹಿತಿ ನೀಡಿದ್ದಾರೆ.

Read More

ಬೆಳ್ತಂಗಡಿ : ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಆಳದಲ್ಲಿರುವ ಅಡಿಕೆ ತೋಟಕ್ಕೆ ಬಿದ್ದು ಮಹಿಳೆ ಮೃತಪಟ್ಟ ಘಟನೆ ಬಿ.ಸಿ.ರೋಡು-ಬೆಳ್ತಂಗಡಿ ರಾಷ್ಟ್ರೀಯ ಹೆದ್ದಾರಿಯ ಕಾವಳಪಡೂರು ಗ್ರಾಮದ ಬಾಂಬಿಲ ಬಳಿ ನಡೆದಿದ್ದು ಘಟನೆಯಲ್ಲಿ ಕಾರು ಚಾಲಕ ಗಂಭೀರವಾಗಿ ಗಾಯಗೊಂಡು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಾರಿನಲ್ಲಿ ಪುಟ್ಟಮಗು ಸಹಿತ ನಾಲ್ಕು ಮಂದಿ ಪ್ರಯಾಣಿಸುತ್ತಿದ್ದು, ಮೃತಪಟ್ಟ ಮಹಿಳೆಯನ್ನು ಮಂಗಳೂರು ಕೊಡಿಯಾಲ್ ಬೈಲ್ ನಿವಾಸಿ ಭಾಗೀರಥಿ (58) ಎಂದು ಗುರುತಿಸಲಾಗಿದೆ. ಚಾಲಕ ರೂಪೇಶ್ (39) ಅವರಿಗೆ ಗಂಭೀರ ಸ್ವರೂಪದ ಗಾಯವಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ರೂಪೇಶ್ ಅವರ ಪತ್ನಿ ಸುಚಿತ್ರಾ (33) ಅವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಪುಂಜಾಲಕಟ್ಟೆ ಕಡೆಯಿಂದ ಬರುತ್ತಿದ್ದ ಕಾರು ಮುಂಜಾನೆ ಸುಮಾರು 4.30ರ ಸುಮಾರಿಗೆ ಬಾಂಬಿಲ ಮಸೀದಿ ಮುಂಭಾಗದ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಅಡಿಕೆ ತೋಟಕ್ಕೆ ಉರುಳಿ ಬಿದ್ದಿದೆ. ಮಂಗಳೂರು ಕೊಡಿಯಾಲ್‌ ಬೈಲು ನಿವಾಸಿಯಾದ ಭಾಗೀರಥಿ ಅವರ ಪುತ್ರಿ ಸುಚಿತ್ರಾ ಅವರ ಪತಿ ರೂಪೇಶ್ ಅವರು ತುಮಕೂರು ಜಿಲ್ಲೆಯವರಾಗಿದ್ದು, ಭಾಗೀರಥಿ ದಸರಾ ರಜೆಯಲ್ಲಿ…

Read More

ವಿದ್ಯಾರ್ಥಿಗಳ ಭವಿಷ್ಯ ರೂಪಿಸಲಿದೆ ಎಐ ಕಾರ್ಡ್ ; ನೋಂದಾಯಿಸಿದ ವಿದ್ಯಾರ್ಥಿಗೆ AI ತರಬೇತಿ, ಸ್ಕಾಲರ್ ಶಿಪ್, AI ಶಿಕ್ಷಕ್ , AI COMPETENCY ಸರ್ಟಿಫಿಕೇಟ್, ನೋಂದಾಯಿಸಲು ಇದೇ ಅ.31 ಕೊನೆ ದಿನ. ತಂತ್ರಜ್ಞಾನ ಜಗತ್ತು ಎಷ್ಟರಮಟ್ಟಿಗೆ ಬದಲಾಗುತ್ತಿದೆ ಎಂದರೆ, ಎಐ ಟೆಕ್ನಾಲಜಿ ತಿಳಿದುಕೊಳ್ಳದಿದ್ದರೆ ವಿದ್ಯಾರ್ಥಿಗಳು ಭವಿಷ್ಯದಲ್ಲಿ ದೊಡ್ಡ ಮಟ್ಟದ ಪರಿಣಾಮ ಎದುರಿಸಬೇಕಾಗುತ್ತದೆ. ಹೀಗಾಗಿ ಎಐ ತಂತ್ರಜ್ಞಾನವನ್ನು ಪ್ರಾಥಮಿಕ, ಹೈಸ್ಕೂಲ್, ಪಿಯು, ಪದವಿ, ಇಂಜಿನಿಯರಿಂಗ್, ಮೆಡಿಕಲ್ ಹೀಗೆ ಎಲ್ಲಾ ಕ್ಷೇತ್ರದ ವಿದ್ಯಾರ್ಥಿಗಳು ತಮ್ಮ ಕಲಿಕಾ ಹಂತದಲ್ಲೇ ಬಳಸಿಕೊಂಡು ನೈಪುಣ್ಯತೆಯನ್ನು ಪಡೆಯುವುದು ಅನಿವಾರ್ಯ ವಾಗಿದೆ. ಏನಿದು AI ಕಾರ್ಡ್?ಈ AI ಕಾರ್ಡ್ ಪ್ರತಿ ವಿದ್ಯಾರ್ಥಿಯ ಕಲಿಕೆಯ ವೇಗ ಮತ್ತು ಶೈಲಿಗೆ ಅನುಗುಣವಾಗಿ ಕಲಿಕೆಗೆ ಹೆಚ್ಚಿನ ಸಮಯವನ್ನು ಮೀಸಲಿಡಲು ಸಹಾಯ ಮಾಡುತ್ತದೆ, ಇದರಿಂದಾಗಿ ಕಲಿಕೆಯನ್ನು ಎಲ್ಲರಿಗೂ ಕೈಗೆಟುಕುವಂತೆ ಮಾಡುತ್ತದೆ ಜೊತೆಗೆ ಶಿಕ್ಷಣದ ಗುಣಮಟ್ಟ ವನ್ನು ಹೆಚ್ಚಿಸುತ್ತದೆ. ಯಾವುದೇ ವಿಷಯವನ್ನು ಪರಿಣಾಮಕಾರಿಯಾಗಿ ಅರ್ಥಮಾಡಿಕೊಳ್ಳಲು ಮತ್ತು ದಿನನಿತ್ಯದ ಬದುಕಿನಲ್ಲಿ ಸೃಜನಶೀಲ ಚಿಂತನೆಗೆ ಈ AI ಕಾರ್ಡ್ ಸಹಾಯಕವಾಗಿದೆ. ಕನ್ನಡ…

Read More

ರಾಷ್ಟ್ರವ್ಯಾಪಿ “ಡಿಜಿಟಲ್ ಬಂಧನ” ದಂಧೆ ನಡೆಸುತ್ತಿದ್ದ ಆರೋಪದ ಮೇಲೆ ತೈವಾನ್ ಮೂಲದ ನಾಲ್ವರು ಸೇರಿದಂತೆ ಹದಿನೇಳು ಜನರನ್ನು ಅಹಮದಾಬಾದ್ ಸೈಬರ್ ಕ್ರೈಂ ಬ್ರಾಂಚ್ ಬಂಧಿಸಿದೆ ಎಂದು ಗುಜರಾತ್ ಪೊಲೀಸ್ ಅಧಿಕಾರಿಯೊಬ್ಬರು ಸೋಮವಾರ ತಿಳಿಸಿದ್ದಾರೆ. ಡಿಜಿಟಲ್ ಅರೆಸ್ಟ್ ಎಂದರೇನು? ಡಿಜಿಟಲ್ ಬಂಧನವು ಒಂದು ರೀತಿಯ ಸೈಬರ್ ಕ್ರೈಮ್ ಆಗಿದ್ದು, ಇದರಲ್ಲಿ ಬಲಿಪಶು ಹಣ ವರ್ಗಾವಣೆ, ಮಾದಕವಸ್ತು ಕಳ್ಳಸಾಗಣೆ ಇತ್ಯಾದಿಗಳಿಗಾಗಿ ಅಧಿಕಾರಿಗಳಿಂದ ತನಿಖೆಯಲ್ಲಿದ್ದಾರೆ ಎಂದು ನಂಬುವಂತೆ ಮಾಡಲಾಗುತ್ತದೆ. ಬಲಿಪಶುವನ್ನು ವೀಡಿಯೊ ಕರೆ ಮತ್ತು ಇತರ ಮೂಲಕ ವಂಚಕರಿಗೆ ಪ್ರವೇಶಿಸುವಾಗ ಬಂಧನದಲ್ಲಿರಲು ಕೇಳಲಾಗುತ್ತದೆ. ಆನ್‌ಲೈನ್ ಪರಿಕರಗಳು, ಆದ್ದರಿಂದ ಡಿಜಿಟಲ್ ಬಂಧನ ಎಂಬ ಪದ. ನಂತರ ಬಲಿಪಶುವನ್ನು ಬಿಟ್ಟುಬಿಡಲು ಆರೋಪಿಗಳಿಂದ ದೊಡ್ಡ ಮೊತ್ತದ ಹಣವನ್ನು ವಿವಿಧ ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸಲು ಒತ್ತಾಯಿಸಲಾಗುತ್ತದೆ. ಗ್ಯಾಂಗ್ 10 ದಿನಗಳ ಕಾಲ ಹಿರಿಯ ನಾಗರಿಕರನ್ನು “ಡಿಜಿಟಲ್‌ನಲ್ಲಿ ಬಂಧಿಸಿದೆ”, ವೀಡಿಯೊ ಕರೆಗಳ ಮೂಲಕ ಅವನ ಮೇಲೆ ನಿಗಾ ಇರಿಸಿದೆ ಮತ್ತು “ಆರ್‌ಬಿಐ ಸಮಸ್ಯೆಯನ್ನು” ಪರಿಹರಿಸಲು “ಮರುಪಾವತಿಸಬಹುದಾದ” ಸಂಸ್ಕರಣಾ ಶುಲ್ಕವಾಗಿ 79.34 ಲಕ್ಷ ರೂಪಾಯಿಗಳನ್ನು…

Read More

ಮಂಗಳೂರು: ನಗರದ ಮಂಗಳಾದೇವಿ ದೇವಸ್ಥಾನದಲ್ಲಿ ನಡೆಯುತ್ತಿದ್ದ ನವರಾತ್ರಿ ಉತ್ಸವಕ್ಕೆ ತೆರಳಿದ್ದ ಮೂವರು ಮಹಿಳೆಯರ ಚಿನ್ನದ ಸರ ಕಳವಾದ ಬಗ್ಗೆ ಪಾಂಡೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಲೀಲಾ ಎಂಬವರು ಮಂಗಳಾದೇವಿ ದೇವಸ್ಥಾನದಲ್ಲಿ ನಡೆಯುವ ನವರಾತ್ರಿ ಉತ್ಸವದ ಪ್ರಯುಕ್ತ ನಡೆಯುವ ದೇವರ ದರ್ಶಕ್ಕೆ ಅ.11ರಂದು ಹೋದ ವೇಳೆ ಅವರ 6 ಪವನ್ ತೂಕದ ಸರವನ್ನು ಕಳವುಗೈಯಲಾಗಿದೆ. ಅದೇ ವೇಳೆ ಕಮಲಾಕ್ಷಿ ಎಂಬವರ 3 ಪವನ್ ಮತ್ತು ಮೀನಾಕ್ಷಿ ಎಂಬವರ 4 ಪವನ್ ತೂಕದ ಚಿನ್ನದ ಸರ ಕೂಡಾ ಕಳವಾ ಗಿದೆ. ಇವುಗಳ ಒಟ್ಟು ಮೌಲ್ಯ 4 ಲಕ್ಷ ರೂ. ಎಂದು ಅಂದಾಜಿಸಲಾಗಿದೆ. ಈ ಬಗ್ಗೆ ಸ್ಮಿತಾ ಎಂಬವರು ನೀಡಿದ ದೂರಿನಂತೆ ಪಾಂಡೇಶ್ವರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Read More

ಬೆಳ್ತಂಗಡಿ: ವಿವಿಧ ಪ್ರಕರಣಗಳಲ್ಲಿ ವಾರಂಟ್ ಆರೋಪಿಯನ್ನು ತಲೆಮರೆಸಿಕೊಂಡಿದ್ದ ಅಕ್ಟೋಬರ್ 13ರಂದು ಬೆಳ್ತಂಗಡಿ ಪೊಲೀಸರು ಬಂಧಿಸಿದ್ದಾರೆ. ಆರೋಪಿ ಹಮೀದ್ ಯಾನೆ ಜಫಾರ್ ಹಮೀದ್ ಹಾನೆ ಕುಂಹಿಮೋನು ಎಂಬಾತನನ್ನು ಬೆಳ್ತಂಗಡಿ ಪೊಲೀಸರು ಪಡಂಗಡಿಯಿಂದ ದಸ್ತಗಿರಿ ಮಾಡಿದ್ದಾರೆ. ಆರೋಪಿ ಮೇಲೆ ದ.ಕ. ಜಿಲ್ಲೆಯ ಬಂಟ್ವಾಳ, ಉಪ್ಪಿನಂಗಡಿ, ಕಡಬ, ಪುತ್ತೂರು, ವೇಣೂರು, ಧರ್ಮಸ್ಥಳ, ಪುಂಜಾಲಕಟ್ಟೆ, ಮಂಗಳೂರು ನಗರ, ಬಂದರು ಠಾಣೆ, ಹೊರ ಜಿಲ್ಲೆಗಳಾದ ಹಾಸನದ ಬೇಲೂರು ಚಿಕ್ಕಮಂಗಳೂರು ಜಿಲ್ಲೆ ಕೊಪ್ಪ ಹರಿಹರಪುರ, ಚಿಕ್ಕಮಗಳೂರು, ಮೂಡಿಗೆರೆ, ಉಡುಪಿ ಜಿಲ್ಲೆ ಪಡುಬಿದ್ರಿ, ಮಡಿಕೇರಿ ಹಾಗೂ ಕೇರಳದಲ್ಲಿ ಸುಮಾರು 34 ಕಳ್ಳತನಾದ ಪ್ರಕರಣಗಳು ದಾಖಲಾಗಿದ್ದವು.

Read More